Site icon Vistara News

Yuva Rajkumar: ಹೆಣ್ಣು ಹೆತ್ತವರು ಏನ್‌ ಮಾಡೋದು ಹೇಳಿ; ಡಿವೋರ್ಸ್‌ ನೋಟಿಸ್‌ಗೆ ಶ್ರೀದೇವಿ ತಂದೆ ಭೈರಪ್ಪ ಬೇಸರ

Yuva Rajkumar

Yuva Rajkumar Wife Has Extra Marital Affair: Says Actor's Lawyer

ಬೆಂಗಳೂರು: ಡಾ.ರಾಜ್‌ಕುಮಾರ್‌ ಅವರ ಕುಟುಂಬದ ಕುಡಿ, ರಾಘವೇಂದ್ರ ರಾಜ್‌ಕುಮಾರ್‌ (Raghavendra Rajkumar) ಅವರ ಮೊಮ್ಮಗ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ವಿಚ್ಛೇದನದ ಬೆನ್ನಲ್ಲೇ ದೊಡ್ಮನೆಯ ಕುಡಿಯೂ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿರುವುದು ಭಾರಿ ಸುದ್ದಿಯಾಗಿದೆ. ಇದರ ಮಧ್ಯೆಯೇ, ಶ್ರೀದೇವಿ ಅವರ ತಂದೆ ಬಿ. ಭೈರಪ್ಪ ಅವರು ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ್ದು, “ವಿಚ್ಛೇದನದ ವಿಚಾರ ನಮಗೆ ಮೊದಲೇ ಗೊತ್ತಿತ್ತು” ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಬಿ. ಭೈರಪ್ಪ ಅವರು ವಿಸ್ತಾರ ನ್ಯೂಸ್‌ ಜತೆ ಮಾತನಾಡಿದರು. “ಯುವ ರಾಜ್‌ಕುಮಾರ್‌ ಹಾಗೂ ಶ್ರೀದೇವಿ ಪ್ರೀತಿಸಿ ಮದುವೆಯಾಗಿದ್ದರು. ನನ್ನ ಮಗಳನ್ನು ಅವರೇ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಕಳುಹಿಸಿದ್ದರು. ವಿದ್ಯಾಭ್ಯಾಸ ಮುಗಿಸಿ ಬಂದ ಬಳಿಕ ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆ. ವಿಚ್ಛೇದನದ ಬಗ್ಗೆ ನಮಗೆ ಮೊದಲೇ ಗೊತ್ತಿತ್ತು” ಎಂಬುದಾಗಿ ಯುವ ರಾಜ್‌ಕುಮಾರ್‌ ಅವರ ಮಾವ ಬಿ.ಭೈರಪ್ಪ ತಿಳಿಸಿದ್ದಾರೆ.

“ಯುವ ರಾಜ್‌ಕುಮಾರ್‌ ಮೈಸೂರಿಗೆ ಬಂದಿದ್ದ. ಆದರೆ, ಇದರ ಬಗ್ಗೆ ಆತ ಯಾವುದೇ ಮಾತನಾಡಿರಲಿಲ್ಲ. ಶ್ರೀದೇವಿ, ವಿಚ್ಛೇದನದ ಕುರಿತು ಮಾತನಾಡಿರಲಿಲ್ಲ. ಈಗ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾನೆ. ನಾವು ಕೂಡ ಕಾನೂನಿನ ಮೂಲಕ ಉತ್ತರ ನೀಡುತ್ತೇವೆ. ಹೆಣ್ಣು ಹೆತ್ತವರು ಏನ್‌ ಮಾಡ್ಬೇಕು ಹೇಳಿ. ಯಾರೂ ದುಡುಕಬಾರದು. ನನ್ನ ಮಗಳಿಂದ ಯಾವುದೇ ಕಿರುಕುಳ ಆಗಿಲ್ಲ.” ಎಂದು ಭೈರಪ್ಪ ಹೇಳಿದ್ದಾರೆ.

ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌ ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್​ 6ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಹೆಂಡತಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಎದುರಿಸುತ್ತಿದ್ದೆ ಎಂದು ಯುವ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಯುವ ಕೇಸ್ ಕೂಡ ದಾಖಲು ಮಾಡಿದ್ದಾರೆ. ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯವು ಜುಲೈ 4ಕ್ಕೆ ವಿಚಾರಣೆ ಮುಂದೂಡಿದೆ.

ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇತ್ತು ಎಂದು ಮೂಲ ತಿಳಿಸಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇದ್ದರೂ, ಪುನೀತ್‌ ರಾಜ್ ಕುಮಾರ್ ಮುಂದೆ ನಿಂತು ಮದುವೆ ಮಾಡಿಸಿದ್ದರು ಎನ್ನಲಾಗಿದೆ. 2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕಳೆದ ಆರೇಳು ತಿಂಗಳಿಂದ ದೊಡ್ಮನೆಯಿಂದ ಶ್ರೀದೇವಿ ಭೈರಪ್ಪ ದೂರವಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

Exit mobile version