KL Rahul- Athiya Shetty Wedding: ಕೆ.ಎಲ್​. ರಾಹುಲ್​-ಅಥಿಯಾ ಶೆಟ್ಟಿ ಮದುವೆ ಸಮಾರಂಭದ ವಿಶೇಷತೆಗಳೇನು? - Vistara News

ಬಾಲಿವುಡ್

KL Rahul- Athiya Shetty Wedding: ಕೆ.ಎಲ್​. ರಾಹುಲ್​-ಅಥಿಯಾ ಶೆಟ್ಟಿ ಮದುವೆ ಸಮಾರಂಭದ ವಿಶೇಷತೆಗಳೇನು?

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರು (KL Rahul- Athiya Shetty Wedding) ಕೆಲವು ಸಮಯದಿಂದ ಡೇಟಿಂಗ್ ಮಾಡುತ್ತಿದ್ದಾರೆ. ಜನವರಿ 23 ರಂದು ಸುನೀಲ್ ಶೆಟ್ಟಿ ಅವರ ಖಂಡಾಲಾ ಫಾರ್ಮ್‌ಹೌಸ್‌ನಲ್ಲಿ ವಿವಾಹ ಜರುಗಲಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮದುವೆಯಲ್ಲಿ ಸುಮಾರು 100 ಗೆಸ್ಟ್‌ಗಳು ಇರಲಿದ್ದಾರೆ.

VISTARANEWS.COM


on

K.L. What are the special features of Rahul-Athiya Shetty marriage ceremony
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಟಿ ಅಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆ ಎಲ್ ರಾಹುಲ್‌ (KL Rahul- Athiya Shetty Wedding) ನಾಲ್ಕು ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಪ್ರೇಮ ಪಕ್ಷಿಗಳು ಜನವರಿ 23ರಂದು ಸುನೀಲ್‌ ಶೆಟ್ಟಿ ಅವರ ಖಂಡಾಲ ಫಾರ್ಮ್‌ಹೌಸ್‌ನಲ್ಲಿ ಮದುವೆಯಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಅವರ ಮದುವೆಯ ಸಿದ್ಧತೆಗಳು ಜನವರಿ 21 ರಿಂದ ಪ್ರಾರಂಭವಾಗಿದ್ದು, ವರದಿಗಳ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಅವರ ಮದುವೆಗೆ ಸಲ್ಮಾನ್ ಖಾನ್ ಮತ್ತು ಎಂಎಸ್ ಧೋನಿ ಸೇರಿದಂತೆ ಕೇವಲ 100 ಅತಿಥಿಗಳು ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಅಥಿಯಾ, ಕೆಎಲ್ ರಾಹುಲ್ ಅವರ ಮದುವೆಗೆ ಕೇವಲ 100 ಅತಿಥಿಗಳು

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರು ಕೆಲವು ಸಮಯದಿಂದ ಡೇಟಿಂಗ್ ಮಾಡುತ್ತಿದ್ದಾರೆ. ಜನವರಿ 23 ರಂದು ಸುನೀಲ್ ಶೆಟ್ಟಿ ಅವರ ಖಂಡಾಲಾ ಫಾರ್ಮ್‌ಹೌಸ್‌ನಲ್ಲಿ (kl rahul athiya Shetty marriage venue) ವಿವಾಹ ಜರುಗಲಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮದುವೆಯಲ್ಲಿ ಸುಮಾರು 100 ಗೆಸ್ಟ್‌ಗಳು (Athiya kl rahul marriage) ಇರಲಿದ್ದಾರೆ. ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರ ವಿವಾಹದ ನಿಯಮಗಳಂತೆ ಮೊಬೈಲ್ ಫೋನ್‌ ಸಮಾರಂಭದಲ್ಲಿ ನಿಷೇಧಿಸಲಾಗಿದೆ. ಅತಿಥಿಗಳ ಪಟ್ಟಿಯಲ್ಲಿ ಜಾಕಿ ಶ್ರಾಫ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Rahul And Athiya: ಜ. 23ಕ್ಕೆ ಮದುವೆ: ಅಥಿಯಾ ಜತೆಗಿನ ಸಂಬಂಧದ ಬಗ್ಗೆ ಕೆ.ಎಲ್‌. ರಾಹುಲ್‌ ಹೇಳಿಕೊಂಡ ಮೊದಲ ಪೋಸ್ಟ್‌ ಈಗ ವೈರಲ್‌

K.L. What are the special features of KL Rahul- Athiya Shetty Wedding

ಟೈಗರ್ ಶ್ರಾಫ್ ಅವರ ಸಹೋದರಿ ಕೃಷ್ಣ ಶ್ರಾಫ್ ಮತ್ತು ಬಾಲಿವುಡ್ ಛಾಯಾಗ್ರಾಹಕ ರೋಹನ್ ಶ್ರೇಷ್ಠ ಭಾಗಿಯಾಗಲಿದ್ದಾರೆ (Athiya Shetty KL Rahul wedding guest list) ಎನ್ನಲಾಗಿದೆ. ಅಥಿಯಾ ಮತ್ತು ಕೆಎಲ್ ರಾಹುಲ್ ಸೋಮವಾರ ಜನವರಿ 23ರಂದು ಸಂಜೆ 4 ಗಂಟೆಗೆ ತಮ್ಮ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಿ ವಿಧಾನಗಳನ್ನು ಅನುಸರಿಸಿ, ಅವರು ಸಂಜೆ 6:30 ಕ್ಕೆ ಪಾಪರಾಜಿಗಳಿಗೆ ಪೋಸ್ ನೀಡಲಿದ್ದಾರೆ.

ಪ್ರೀ ವೆಡ್ಡಿಂಗ್‌ ಫಂಕ್ಷನ್‌

ಜನವರಿ 21 ರ ಸಂಜೆ ಆತ್ಮೀಯ ಕಾಕ್‌ಟೈಲ್ ಪಾರ್ಟಿಯೊಂದಿಗೆ (kl rahul athiya Shetty latest news) ಮದುವೆಯ ಪ್ರಿ ವೆಡ್ಡಿಂಗ್‌ ಕಾರ್ಯಗಳು ಪ್ರಾರಂಭವಾದವು ಎಂದು ವರದಿಯಾಗಿದೆ. ಇದರ ನಂತರ ಜನವರಿ 22 ರಂದು ಮೆಹಂದಿ ಮತ್ತು ಹಳದಿ ಕಾರ್ಯಕ್ರಮವು ಸುನೀಲ್‌ ಶೆಟ್ಟಿ ಅವರ ಖಂಡಾಲಾ ಮನೆಯಲ್ಲಿ ನಡೆದಿದೆ. ಎರಡೂ ಕುಟುಂಬಗಳು ಮತ್ತು ಜೋಡಿ ಮುಂಬೈ ಮತ್ತು ಬೆಂಗಳೂರಿನಲ್ಲಿ ತಮ್ಮ ಸ್ನೇಹಿತರಿಗೆ ಹಾಗೂ ಆತ್ಮೀಯರಿಗಾಗಿ ಆರತಕ್ಷತೆಯನ್ನು ಆಯೋಜಿಸಲಿದೆ ಎಂದು ವರದಿಯಾಗಿದೆ. ಆದರೆ ಮದುವೆ ಬಗ್ಗೆ ರಾಹುಲ್ ಹಾಗೂ ​ಅಥಿಯಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: Rahul And Athiya: ಜನವರಿ 23ಕ್ಕೆ ವಿವಾಹವಾಗಲಿದ್ದಾರೆ ಕೆ.ಎಲ್​ ರಾಹುಲ್, ಅಥಿಯಾ ಶೆಟ್ಟಿ; ವರದಿ

ಅಥಿಯಾ ಶೆಟ್ಟಿ ಕೊನೆಯದಾಗಿ 2019ರ ಚಲನಚಿತ್ರ ʻಮೋತಿಚೂರ್ ಚಕ್ನಾಚೂರ್‌ʼನಲ್ಲಿ ಕಾಣಿಸಿಕೊಂಡರು. ಅವರು ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಜತೆ ಕಾಣಿಸಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Noor Malabika Das: ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇನ್‌ಸ್ಟಾಗ್ರಾಂನಲ್ಲೂ ಅವರು ಸಕ್ರಿಯರಾಗಿದ್ದರು. ಆದರೆ, ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

VISTARANEWS.COM


on

Noor Malabika Das
Koo

ಮುಂಬೈ: ಬಾಲಿವುಡ್‌ ನಟಿ ಕಾಜೋಲ್‌ ಅಭಿನಯದ ದಿ ಟ್ರಯಲ್‌ (The Trial) ವೆಬ್‌ ಸಿರೀಸ್‌ ಖ್ಯಾತಿ ನಟಿ ನೂರ್‌ ಮಾಳವಿಕಾ ದಾಸ್‌ (Noor Malabika Das) ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಲೋಖಂಡ್‌ವಾಲಾದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ 32 ವರ್ಷದ ಬಾಲಿವುಡ್‌ ನಟಿಯು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್‌ 6ರಂದೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜೂನ್‌ 6ರಂದೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ ಹಾಗೂ ಅಕ್ಕಪಕ್ಕದ ಮನೆಯವರಿಗೂ ವಿಷಯ ಗೊತ್ತಾಗಿಲ್ಲ. ಕೆಲ ದಿನಗಳ ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ದುರ್ವಾಸನೆ ಕಂಡುಬಂದಿದ್ದು, ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಫ್ಲ್ಯಾಟ್‌ ಬಾಗಿಲು ತೆಗೆದಾಗ ನಟಿಯ ಶವವು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಅಂಧೇರಿಯ ಓಶ್ವಿವಾರ ಪ್ರದೇಶದಲ್ಲಿರುವ ಫ್ಲ್ಯಾಟ್‌ನಲ್ಲಿ ನಟಿಯು ವಾಸವಿದ್ದರು.

ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಅದರಲ್ಲೂ, ದಿ ಟ್ರಯಲ್‌ ವೆಬ್‌ಸಿರೀಸ್‌ ಅವರಿಗೆ ಹೆಚ್ಚು ಹೆಸರು ತಂದುಕೊಂಡಿತ್ತು. ಕಾಜೋಲ್‌ ಜತೆ ಅವರು ತೆರೆ ಹಂಚಿಕೊಂಡಿದ್ದರು. ಅವರು ನಟಿಸಿದ ಕೆಲ ಸಿನಿಮಾಗಳು ಬಿಡುಗಡೆಗೆ ಬಾಕಿ ಇವೆ ಎಂದು ತಿಳಿದುಬಂದಿದೆ.

ಅಸ್ಸಾಂ ಮೂಲದವರಾದ ನೂರ್‌ ಮಾಳವಿಕಾ ದಾಸ್‌ ಅವರು ನಟನೆಗೆ ಕಾಲಿಡುವ ಮೊದಲು ಕತಾರ್‌ ಏರ್‌ವೇಸ್‌ನಲ್ಲಿ ಗಗನಸಖಿಯಾಗಿದ್ದರು. ಇನ್‌ಸ್ಟಾಗ್ರಾಂನಲ್ಲಿ 1.63 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ನಟಿಯು ಆಗಾಗ ಫೋಟೊ ಹಾಗೂ ವಿಡಿಯೊಗಳನ್ನು ಪೋಸ್ಟ್‌ ಮಾಡುತ್ತ ಸಕ್ರಿಯರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಟಿಯು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಕೂಡ ಮಾಡಿದ್ದರು. ಇಷ್ಟೆಲ್ಲ ಸಕ್ರಿಯರಾಗಿದ್ದ ನಟಿಯು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಇದನ್ನೂ ಓದಿ: ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Continue Reading

ಬಾಲಿವುಡ್

Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Sonakshi Sinha: ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರುಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು. .

VISTARANEWS.COM


on

Sonakshi Sinha to marry boyfriend Zaheer Iqbal on June 23
Koo

ಬೆಂಗಳೂರು: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ಬಾಯ್‌ಫ್ರೆಂಡ್‌ ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಸೋನಾಕ್ಷಿ ಮತ್ತು ಜಹೀರ್ ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.

ಮುಂಬೈನ ಬಾಸ್ಟಿಯನ್​ನಲ್ಲಿ ವಿವಾಹ ನಡೆಯಲಿದೆ ಎನ್ನಲಾಗಿದೆ. ಜಹೀರ್ ಅವರನ್ನು ಸೋನಾಕ್ಷಿ ಭೇಟಿ ಮಾಡಿದ್ದು ಸಲ್ಮಾನ್ ಖಾನ್ ಮೂಲಕ. ಸಲ್ಲು ಹಾಗೂ ಜಹೀರ್ ಗೆಳೆಯರು. ಭೇಟಿ ಬಳಿಕ ಸೋನಾಕ್ಷಿ ಹಾಗೂ ಜಹೀರ್ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಅದು ಪ್ರೀತಿಗೆ ತಿರುಗಿತು ಎನ್ನಲಾಗಿದೆ.

ಕಳೆದ ವಾರ ಸೋನಾಕ್ಷಿ ಅವರ ಹುಟ್ಟುಹಬ್ಬದಂದು, ಜಹೀರ್ ಹಲವು ಫೋಟೊಗಳನ್ನು ಹಂಚಿಕೊಂಡಿದ್ದರು. ಮೊದಲ ಚಿತ್ರದಲ್ಲಿ ಸೋನಾಕ್ಷಿ ಅವರನ್ನು ಜಹೀರ್ ಬಿಗಿಯಾಗಿ ಅಪ್ಪಿಕೊಳ್ಳುವುದು ಇದೆ. “ಜನ್ಮದಿನದ ಶುಭಾಶಯಗಳು ಸೋನಾʼʼಎಂದು ಶೀರ್ಷಿಕೆ ನೀಡಿದ್ದರು.

ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು.

ಇದನ್ನೂ ಓದಿ: Sonakshi Sinha : ಪ್ರೀತಿಯಲ್ಲಿ ಬಿದ್ದ ಸೋನಾಕ್ಷಿ, ಲವ್‌ ಯು ಎಂದು ಪೋಸ್ಟ್‌ ಹಾಕಿದ ಬಾಯ್‌ಫ್ರೆಂಡ್‌ ಯಾರು ನೋಡಿ!

ಸೋನಾಕ್ಷಿ ಕೊನೆಯದಾಗಿ ಸಂಜಯ್ ಲೀಲಾ ಬನ್ಸಾಲಿಯವರ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Kangana Ranaut: ಪ್ರಮಾಣ ವಚನ ಸಮಾರಂಭದಲ್ಲಿ ಬಿಳಿ ಸೀರೆಯಲ್ಲಿ ಮಿಂಚಿದ ಕಂಗನಾ!

ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು.

VISTARANEWS.COM


on

Kangana Ranaut Looks Gorgeous In A White Saree
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಕಂಗನಾ ಭಾಗಿಯಾಗಿದ್ದರು. ಕಂಗನಾ ಪ್ರಮಾಣ ವಚನ ಸಮಾರಂಭದಲ್ಲಿ ಸೀರೆಯಲ್ಲಿ ಮಿಂಚಿದ್ದಾರೆ. ಬಿಳಿ ಸೀರೆಯಲ್ಲಿ ನಟಿ ಕಂಗೊಳಿಸಿದ್ದಾರೆ. ಶಾರುಖ್ ಖಾನ್, ಅಕ್ಷಯ್ ಕುಮಾರ್, ವಿಕ್ರಾಂತ್ ಮಾಸ್ಸೆ, ಮತ್ತು ಅನುಪಮ್ ಖೇರ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಮಾರಂಭದ ಕೇಂದ್ರ ಬಿಂದುವಿನಂತೆ ಬಿಟೌನ್‌ ಕ್ವೀನ್‌ ಕಂಗೊಳಿಸುತ್ತಿದ್ದರು. ಬಿಳಿ ಬಣ್ಣದ ಸೀರೆಯಲ್ಲಿ, ಮುತ್ತಿನ ನೆಕ್ಲೇಸ್‌ ಧರಿಸಿ ಕಂಗನಾ ಕಾಂತಿಯುತವಾಗಿ ಕಾಣಿಸಿಕೊಂಡಿದ್ದಾರೆ. ನಟಿಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ..ಸ್ವತಃ ವಿಡಿಯೊ ಹಂಚಿಕೊಂಡಿರುವ ಕಂಗನಾ ‘ಪ್ರಮಾಣ ದಿನದಂದು ನನ್ನ ನೋಟ’ ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

ಇದನ್ನೂ ಓದಿ: Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು. 2020 ರಲ್ಲಿ, ಕಂಗನಾ ರಣಾವತ್‌ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

Continue Reading

ಬಾಲಿವುಡ್

Poonam Pandey: ಪೂನಂ ಪಾಂಡೆಯ ರೆಸಿಪಿಗಿಂತ ಏಪ್ರನ್ ಮೇಲೆ ನೆಟ್ಟಿಗರ ಕಣ್ಣು; ರಸಿಕರ ಕಣ್ಣರಳಿಸಿದ ಹಾಟ್‌ ಬೆಡಗಿ!

ಪೂನಂ ಪಾಂಡೆ (Poonam Pandey) ಅವರು ಗರ್ಭಕಂಠ ಕ್ಯಾನ್ಸರ್‌ನಿಂದ (Cervical Cancer) ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಡಿ, ಮರುದಿನ ‘ಇಲ್ಲ ನಾನು ಸತ್ತಿಲ್ಲ’ ಎಂದು ನಟಿ ನೀಡಿದ ಸ್ಪಷ್ಟನೆ ಕೂಡ ಭಾರಿ ಸುದ್ದಿಯಾಗಿತ್ತು. ಇದೀಗ ಪೂನಂ ಪಾಂಡೆ (Poonam Pandey) ಬಿಳಿ ಬಣ್ಣದ ಏಪ್ರನ್ ಧರಿಸಿ, ತಲೆಗೊಂಡು ಚೆಫ್ ಟೋಪಿ ಹಾಕಿ ಕೇಕ್ ತಯಾರಿಸುವುದು ಹೇಗೆ ಎಂದು ಹೇಳಿದ್ದಾರೆ.

VISTARANEWS.COM


on

Poonam Pandey making cake with ice cream with hot look
Koo

ನಟಿ ಪೂನಂ ಪಾಂಡೆ (Poonam Pandey) ಟಾಪ್‌ಲೆಸ್‌ ಅವತಾರಗಳು ಹೊಸದಲ್ಲ . ಆಗಾಗ ತನ್ನ ಮೈಮಾಟವನ್ನು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಪ್ರದರ್ಶನಕ್ಕೀಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ.

ಇದೀಗ ಪೂನಂ ಬಿಳಿ ಬಣ್ಣದ ಏಪ್ರನ್ ಧರಿಸಿ, ತಲೆಗೊಂಡು ಚೆಫ್ ಟೋಪಿ ಹಾಕಿ ಕೇಕ್ ತಯಾರಿಸುವುದು ಹೇಗೆ ಎಂದು ಹೇಳಿದ್ದಾರೆ.

ಈ ಬಾರಿ ಪೂನಂ ಪಾಂಡೆ ಹಾಟ್ ಆಗಿ ಕಾಣಿಸಿಕೊಂಡು ಕೇಕ್ ವಿಥ್ ಐಸ್‌ಕ್ರೀಂ ರೆಸಿಪಿ ಟಿಪ್ಸ್ ನೀಡಿದ್ದಾರೆ. ಆದರೆ ಅಭಿಮಾನಿಗಳ ಕಣ್ಣು ಪೂನಂ ಪಾಂಡೆ ಧರಿಸಿದ ಏಪ್ರನ್ ಮೇಲೆ ಇತ್ತು. ಪೂನಂ ಫ್ಯಾನ್ಸ್‌ ಕಮೆಂಟ್‌ ಮೂಲಕ ಏಪ್ರನ್ ಕುರಿತಾಗಿಯೇ ಮಾತನಾಡಿದ್ದಾರೆ.

ಇದನ್ನೂ ಓದಿ: Radhika Merchant: ಪ್ರಿವೆಡ್ಡಿಂಗ್‌ಗೆ ಅಂಬಾನಿ ಸೊಸೆ ಧರಿಸಿದ್ದು 65 ವರ್ಷ ಹಳೆಯ ಸ್ಕರ್ಟ್‌! ಇದರ ಬೆಲೆ?

ಚಾಕ್ಲೆಟ್ ಕೇಕ್ ತಯಾರಿಸಿದ್ದಾರೆ ಪೂನಂ. ಚಾಕ್ಲೆಟ್ ಕೇಕ್ ಜತೆಗೆ ಐಸ್‌ಕ್ರೀಮ್ ಹಾಕಿ ಸವಿದಿದ್ದಾರೆ. ತಮ್ಮ ಈ ಐಸ್‌ ಕ್ರೀಮ್ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಕೂಡ ಪೂನಂ ಪಾಂಡೆ ಹಂಚಿಕೊಂಡಿದ್ದಾರೆ. ಕೆಲವರು ನಿಮ್ಮ ರೆಸಿಪಿ ಮತ್ತು ನೀವು ಎರಡು ಅದ್ಭುತ ಎನ್ನುತ್ತಿದ್ದಾರೆ. ಪೂನಂ ಪಾಂಡೆಯ ಸೌಂದರ್ಯವನ್ನೂ ಹಾಡಿ ಹೊಗಳುತ್ತಿದ್ದಾರೆ.

Continue Reading
Advertisement
Karnataka Weather Forecast
ಮಳೆ14 mins ago

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Rakshit Shetty Richard Anthony Produce By Hombale
ಆರೋಗ್ಯ14 mins ago

Menopause: ಮಹಿಳೆಯರೇ, ಈ ಸಮಸ್ಯೆಗಳು ಕಾಣಿಸುತ್ತಿವೆಯೇ?; ಹಾಗಿದ್ದರೆ ನಿಮ್ಮ ಮೆನೋಪಾಸ್‌ ಸಮೀಪದಲ್ಲಿದೆ ಎಂದರ್ಥ!

Yuva Rajkumar
ಕರ್ನಾಟಕ16 mins ago

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Cervical Cancer
ಆರೋಗ್ಯ1 hour ago

Cervical Cancer: ಮಹಿಳೆಯರ ಗರ್ಭಕಂಠದ ಕ್ಯಾನ್ಸರ್‌; ಪುರುಷರಿಗೂ ಇದೆ ಅಪಾಯ!

Dina Bhavishya
ಭವಿಷ್ಯ2 hours ago

Dina Bhavishya : ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ!

Yuva Rajkumar
ಕರ್ನಾಟಕ7 hours ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ8 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ8 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು8 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ8 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌