ಸಾವಿರದ ಸಾಧನೆ ಮಾಡಿದ ಕೆಜಿಎಫ್ - Vistara News

ಸಿನಿಮಾ

ಸಾವಿರದ ಸಾಧನೆ ಮಾಡಿದ ಕೆಜಿಎಫ್

ಯಶ್ ಎಂಬ ಅನಾಥ ಬಡತನದಿಂದ ಚಿನ್ನದ ಗಣಿಯ ರಾಜನಾಗುವ ಕಥೆಯನ್ನು ಅನುಸರಿಸುತ್ತದೆ. ಅವಧಿಯ ಆಕ್ಷನ್ ಡ್ರಾಮಾದಲ್ಲಿ ಸಂಜಯ್ ಅಧೀರಾ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿನಿಮಾ ಜಗತ್ತೇ ತಿರುಗಿ ನೋಡುವಂತೆ ಮಾಡಿರುವ ಕೆಜಿಎಫ್‌-2 ಇದೀಗ ಬಾಕ್ಸಾಫೀಸ್‌ ನಲ್ಲಿ 1100 ಕೋಟಿ ರೂ. ಸಂಗ್ರಹಿಸುವ ಮೂಲಕ ಮತ್ತೊಮ್ಮೆ ಸದ್ದು ಮಾಡಿದೆ.

ರಾಕಿಂಗ್‌ ಸ್ಟಾರ್‌ ಯಶ್ ನಾಯಕನಾಗಿ ನಟಿಸಿರುವ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವು ʻಸಾವಿರದʼ ಸಾಧನೆ ಮಾಡಿದ 4 ನೇ ಭಾರತೀಯ ಸಿನಿಮಾವಾಗಿ ದಾಖಲಾಗಿದೆ. ಆರ್‌ ಆರ್‌ ಆರ್‌, ದಂಗಲ್ ಮತ್ತು ಬಾಹುಬಲಿ: ದಿ ಕನ್‌ಕ್ಲೂಷನ್ ಸಾವಿರ ಕೋಟಿಗೂ ಅಧಿಕ ಬಾಕ್ಸಾಫೀಸ್‌ ಕಲೆಕ್ಷನ್‌ ಪಡೆದ ಇತರ ಭಾರತೀಯ ಚಿತ್ರಗಳು.

ಸಂಜಯ್‌ ದತ್‌, ಪ್ರಕಾಶ್‌ ರಾಜ್‌, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಅವರೂ ತಾರಾಗಣದಲ್ಲಿರುವ ಕೆಜಿಎಫ್‌ ಕಳೆದ ಏಪ್ರಿಲ್‌ 14ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಮೊದಲ ದಿನವೇ ₹134.50 ಕೋಟಿ ದೇಶೀಯ ಕಲೆಕ್ಷನ್ ದಾಖಲಿಸಿ ಸಾಧನೆ ಮಾಡಿತ್ತು. ಅನಾಥ ಬಡತನದಿಂದ ಚಿನ್ನದ ಗಣಿಯ ರಾಜನಾಗುವ ಕಥೆಯನ್ನು ಹೊಂದಿರುವ ಚಿತ್ರ ತನ್ನ ಅದ್ಭುತವಾದ ಮೇಕಿಂಗ್‌ ಮೂಲಕ ಗಮನ ಸೆಳೆದಿದೆ.

ಚಿತ್ರದ ಹೀರೋ ಕೂಲ್‌ ಮತ್ತು ಅಷ್ಟೇ ಪವರ್ ಫುಲ್, ಸ್ಪೂರ್ತಿಯುತ ಹೋರಾಟಗಾರ! ಅವನ ಲುಕ್‌, ನಟನೆ ಮತ್ತು ಡಯಲಾಗ್‌ ಗಳಿಗೆ ಜನ ಫಿದಾ ಆಗಿದ್ದಾರೆ.

ಇದನ್ನೂ ಓದಿ: ಕೆಜಿಎಫ್‌ ಸ್ಟಾರ್‌ ಯಶ್‌ ಲಕ್ಷುರಿ ಲೈಫ್‌ಸ್ಟೈಲ್‌ ಹೇಗಿದೆ ನಿಮಗೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Saiyami Kher: ಜರ್ಮನಿಯ ಫೇಮಸ್‌ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಖ್ಯಾತ ನಟಿ!

Saiyami Kher: ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

VISTARANEWS.COM


on

Saiyami Kher to participate in Ironman Triathlon in Germany
Koo

ಬೆಂಗಳೂರು: ನಟಿ ಸಯ್ಯಾಮಿ ಖೇರ್ (Saiyami Kher ) ಸೆಪ್ಟೆಂಬರ್ 15ರಂದು ಜರ್ಮನಿಯಲ್ಲಿ ನಡೆಯಲಿರುವ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ನಟಿ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ನಟಿ ಈಜು, ಸೈಕ್ಲಿಂಗ್ ಮತ್ತು ಜಿಮ್‌ನಲ್ಲಿ ತರಬೇತಿ ಪಡೆಯುವ ವಿಡಿಯೊ ಇದರಲ್ಲಿದೆ.

ನಟಿ ಪೋಸ್ಟ್‌ನಲ್ಲಿ ʻʻಕೊರೊನಾ ಆದ ಬಳಿಕ ಸಮಯ ಹೇಗೆ ಸಾಗಿತು ಗೊತ್ತಾಗಿಲ್ಲ. ಶೂಟಿಂಗ್‌ ಸೆಟ್‌ನಲ್ಲಿ ಪ್ರತಿದಿನ ಆನಂದಿಸುತ್ತಿದ್ದೆ. ಜೀವನ ರೋಲರ್ ಕೋಸ್ಟರ್ ಆಗಿತ್ತು. ಕಳೆದ ವರ್ಷ ಬೈಕ್ ಅಪಘಾತ ಕೂಡ ಆಯ್ತು. ಎಂಟು ತಿಂಗಳ ಕಾಲ ವ್ಯಾಯಾಮ ಏನೂ ಇಲ್ಲದೆ ಹಾಗೇ ಇದ್ದೆ. ಇದಾದ ಬಳಿಕ , ಟ್ರಯಥ್ಲಾನ್ ಈವೆಂಟ್‌ಗೆ ತರಬೇತಿ ಪಡೆಯುವುದು ಅತ್ಯಂತ ಕಠಿಣವಾಗಿತ್ತು. ಟ್ರಯಥ್ಲಾನ್ ಈವೆಂಟ್‌ಗಾಗಿ ಎರಡು ತಿಂಗಳ ತರಬೇತಿಯನ್ನು ಪಡೆದ ನಂತ ಇಂದು ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗಿಯಾಗಲು ಸಿದ್ಧನಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಸಿನಿಮಾ ವಿಚಾರಕ್ಕೆ ಬಂದರೆ, ಸಯ್ಯಾಮಿ ʻಅಗ್ನಿʼ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ದಿವ್ಯೆಂದು ಶರ್ಮಾ ಅವರೊಂದಿಗೆ ನಟಿಸಲಿದ್ದಾರೆ. ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ಬೆಂಬಲದೊಂದಿಗೆ ರಾಹುಲ್ ಧೋಲಾಕಿಯಾ ನಿರ್ದೇಶನವಿದೆ.

ಮರಾಠಿಯ ಖ್ಯಾತ ನಟಿ ಉಷಾ ಕಿರಣ್ ಅವರ ಮೊಮ್ಮಗಳು ಮತ್ತು ಪ್ರಮುಖ ಬಾಲಿವುಡ್ ನಟಿ ತನ್ವಿ ಅಜ್ಮಿ ಅವರ ಸೊಸೆ. ರಾಕೇಶ್ ಓಂಪ್ರಕಾಶ್ ಮೆಹ್ರಾ ನಿರ್ದೇಶಿಸಿದ ಮತ್ತು 2016 ರಲ್ಲಿ ಬಿಡುಗಡೆಯಾದ “ಮಿರ್ಜ್ಯಾ” ಚಿತ್ರದಲ್ಲಿನ ಅಭಿನಯಕ್ಕಾಗಿ ಸೈಯಾಮಿ ಖೇರ್ ಮನ್ನಣೆ ಗಳಿಸಿದರು.

Continue Reading

ಸ್ಯಾಂಡಲ್ ವುಡ್

Sanjana Anand: ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಸಂಜನಾ ಆನಂದ್!

Sanjana Anand: ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ (Sanjana Anand) ನಾಯಕಿ ಎಂದು ಹೇಳಲಾಗುತ್ತಿತ್ತು.

VISTARANEWS.COM


on

Sanjana Anand Hot Photoshoot
Koo

ʻಕೆಮೆಸ್ಟ್ರಿ ಆಫ್ ಕರಿಯಪ್ಪʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಸಂಜನಾ ಆನಂದ್ (Sanjana Anand) ಸಖತ್‌ ಹಾಟ್ ಆಗಿದ್ದಾರೆ. ಮಾಡರ್ನ್ ಡ್ರೆಸ್‌ನಲ್ಲಿ ಪೋಸ್ ನೀಡುತ್ತಿದ್ದಾರೆ.

ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ. 

ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ (Sanjana Anand) ನಾಯಕಿ ಎಂದು ಹೇಳಲಾಗುತ್ತಿತ್ತು.

ದುನಿಯಾ ವಿಜಯ್ ನಟನೆಯ `ಸಲಗ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ನಟಿ ಸಂಜನಾ ಆನಂದ್‌ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇದೀಗ ಮುಧೋಳ್ ಚಿತ್ರಕ್ಕೂ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Continue Reading

ಒಟಿಟಿ

Bujji and Bhairava: ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ; ಹೆಚ್ಚಾಯ್ತು ‘ಕಲ್ಕಿ 2898 ಎಡಿ’ ನಿರೀಕ್ಷೆ!

Bujji and Bhairava: ‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ.

VISTARANEWS.COM


on

Bujji and Bhairava Prabhas animated show raises
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. . ಪ್ರಭಾಸ್ ಮತ್ತು ನಾಗ್ ಅಶ್ವಿನ್ ಅವರ ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಜೋಡಿಯ (Bujji and Bhairava) ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕಲ್ಕಿ 2898 ಎಡಿ’ (Kalki 2989 ad) ತಂಡ, ಸಿನಿಮಾದ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮುನ್ನವೇ ಅದರ ಅನಿಮೇಟೆಡ್ ಸರಣಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದ್ದು ಪ್ರೇಕ್ಷಕರು ಸಖತ್‌ ಖುಷ್‌ ಆಗಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ.

ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading

ಬಾಲಿವುಡ್

Malaika Arora: 38ರ ಅರ್ಜುನ್‌ ಕಪೂರ್‌ಗೆ 50ರ ಮಲೈಕಾ ಅರೋರಾ ಸಹವಾಸ ಸಾಕಾಯ್ತಾ?!

Malaika Arora: ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

VISTARANEWS.COM


on

Malaika Arora respectfully part ways Here what we know
Koo

ಬೆಂಗಳೂರು: ಮಲೈಕಾ ಅರೋರಾ (Malaika Arora) ಮತ್ತು ಅರ್ಜುನ್ ಕಪೂರ್(Arjun Kapoor) ಆಗಾಗ ವಕೇಶನ್‌ ಮೂಡ್‌ನಲ್ಲಿರುವ ಫೋಟೊವನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಜತೆಗೆ ಅದೆಷ್ಟೋ ಬಾರಿ ಸಾರ್ವಜನಿಕವಾಗಿ ಕಾಣಿಸಿದ್ದುಂಟು. ಆದರೀಗ ಜೋಡಿ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪರಸ್ಪರರ ಭವಿಷ್ಯದ ಒಳಿತಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಮಲೈಕಾ ಮತ್ತು ಅರ್ಜುನ್ ʼವಿಶೇಷವಾದ ಸಂಬಂಧʼವನ್ನು ಹೊಂದಿದ್ದರು. ಇಬ್ಬರೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಜೋಡಿ ಬೇರೆಯಾಗಬೇಕು ಎಂದು ನಿರ್ಧರಿಸಿದೆ. ಇಷ್ಟೂ ವರ್ಷಗಳಲ್ಲಿ, ಅವರು ತಮ್ಮ ಸಂಬಂಧಕ್ಕೆ ಗೌರವವನ್ನು ನೀಡಿದ್ದಾರೆ. ಒಂದು ವೇಳೆ ಬೇರೆಯಾಗಲು ನಿರ್ಧರಿಸಿದರೂ ಪರಸ್ಪರ ಅದೇ ಗೌರವವನ್ನು ಕಾಪಾಡಿಕೊಂಡು ಹೋಗುತ್ತಾರೆ ಎಂದು ವರದಿಯಾಗಿದೆ.

ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

ಇತ್ತೀಚಿನ ವರದಿಗಳ ಪ್ರಕಾರ ಇಬ್ಬರ ನಡುವೆ ಬಿರುಕು ಮೂಡಿದೆ ಎನ್ನಲಾಗಿದೆ. ಅರ್ಜುನ್‌ ಕಪೂರ್ ಕುಟುಂಬದವರನ್ನು ಅನ್​ಫಾಲೋ ಮಾಡಿದ್ದಾರೆ ಮಲೈಕಾ ಅರೋರಾ. ಅಷ್ಟೇ ಅಲ್ಲದೇ ಅರ್ಜುನ್ ಕಪೂರ್ ಈಗ ನಟಿ ಕುಶಾ ಕಪಿಲಾ (Kusha Kapila) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂತಲೂ ವರದಿಗಳಿವೆ.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಈ ಮೊದಲು ಮಲೈಕಾ ಅವರು ಅರ್ಜುನ್ ಕಪೂರ್ ತಂದೆ ಬೋನಿ ಕಪೂರ್, ಕುಟುಂಬದ ಇತರ ಸದಸ್ಯರಾದ ಅನಿಲ್ ಕಪೂರ್, ಜಾನ್ವಿ ಕಪೂರ್, ಖುಷಿ ಕಪೂರ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಇವರುಗಳನ್ನು ಮಲೈಕಾ ಅನ್​ಫಾಲೋ ಮಾಡಿದ್ದಾರೆ. ಆದರೆ, ಅರ್ಜುನ್ ಕಪೂರ್ ಅವರನ್ನು ಈಗಲೂ ಅವರು ಫಾಲೋ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿರುವ ಕರಣ್ ಜೋಹರ್ ಅವರ ಮನೆಯಲ್ಲಿ ಅರ್ಜುನ್ ಮತ್ತು ಕುಶಾ ಒಟ್ಟಿಗೆ ಪಾರ್ಟಿ ಮಾಡಿದ್ದಾಗಿನಿಂದಲೂ ಸಂಬಂಧದ ವದಂತಿಗಳು ಪ್ರಾರಂಭವಾದವು.

ಮಲೈಕಾ ಈ ಹಿಂದೆ ನಟ, ನಿರ್ಮಾಪಕ ಅರ್ಬಾಜ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು 2016ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಅವರಿಗೆ ಅರ್ಹಾನ್ ಖಾನ್ ಹೆಸರಿನ ಮಗನಿದ್ದಾನೆ. ಮಲೈಕಾ ಮತ್ತು ಅರ್ಜುನ್ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದು, 2019ರಲ್ಲಿ ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಅರ್ಜುನ್‌ ಕಪೂರ್‌ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ʼಸಿಂಗಮ್ ಅಗೇನ್ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅವರು ಅಜಯ್‌ ದೇವಗನ್‌ಗೆ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಮತ್ತು ಕರೀನಾ ಕಪೂರ್ ಖಾನ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Continue Reading
Advertisement
Anti Islam Rally
ವಿದೇಶ5 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ5 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು7 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ7 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ8 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ8 hours ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ8 hours ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ8 hours ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Exit Polls
Lok Sabha Election 20248 hours ago

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Heart Attack
ದೇಶ8 hours ago

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌