Year Ender 2023: ಈ ವರ್ಷ ಪರಭಾಷೆಯಲ್ಲೂ ಕನ್ನಡದ ಕಂಪು ಬೀರಿದ ಕಲಾವಿದರಿವರು - Vistara News

ಸಿನಿಮಾ

Year Ender 2023: ಈ ವರ್ಷ ಪರಭಾಷೆಯಲ್ಲೂ ಕನ್ನಡದ ಕಂಪು ಬೀರಿದ ಕಲಾವಿದರಿವರು

Year Ender 2023: ಪರಭಾಷೆಯ ಚಿತ್ರರಂಗಕ್ಕೆ ಈ ವರ್ಷ ಕಾಲಿಟ್ಟು ಮಿಂಚಿದ ಕನ್ನಡ ಕಲಾವಿದರ ಪಟ್ಟಿ ಇಲ್ಲಿದೆ.

VISTARANEWS.COM


on

year ender
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ವರ್ಷ ಸ್ಯಾಂಡಲ್‌ವುಡ್‌ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಚಿತ್ರಗಳನ್ನು ನೀಡಿತ್ತು. ‘ಕೆಜಿಎಫ್‌ 2’, ‘ಕಾಂತಾರ’ದಂತಹ ದೇಶದವೇ ತಿರುಗಿ ನೋಡುವ ಚಿತ್ರ ಮೂಡಿಬಂದಿತ್ತು. ಅದೇ ನಿರೀಕ್ಷೆಯೊಂದಿಗೆ ಈ ವರ್ಷವನ್ನೂ ಕನ್ನಡ ಚಿತ್ರರಂಗ ಬರಮಾಡಿಕೊಂಡಿತ್ತು. ಆದರೆ ಕಳೆದ ವರ್ಷದ ಯಶಸ್ಸು ಮುಂದುವರಿಯಲಿಲ್ಲ ಎನ್ನುವುದು ಬೇಸರದ ವಿಷಯ. ಆದರೂ ಕನ್ನಡ ಕಲಾವಿದರು ವಿವಿಧ ಚಿತ್ರರಂಗಗಳಲ್ಲಿ ಮಿಂಚು ಹರಿಸಿದ್ದಾರೆ. 2023ರಲ್ಲಿ ಮೊದಲ ಪ್ರಯತ್ನದಲ್ಲೇ ಪರಭಾಷೆಯಲ್ಲಿ ಗಮನ ಸೆಳೆದ ಕನ್ನಡ ಕಲಾವಿದರ ಪರಿಚಯ ಇಲ್ಲಿದೆ (Year Ender 2023).

ಶಿವರಾಜ್‌ ಕುಮಾರ್‌

ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಮೊದಲ ಬಾರಿಗೆ ಅಭಿನಯಿಸಿದ ತಮಿಳು ಚಿತ್ರ ʼಜೈಲರ್‌ʼ. ರಜನಿಕಾಂತ್‌ ಅಭಿನಯದ ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಂಡಿತ್ತು. ಈ ಸಿನಿಮಾದಲ್ಲಿ ರಜನಿಕಾಂತ್‌ ಜತೆಗೆ ಶಿವ ರಾಜ್‌ಕುಮಾರ್‌ ಕೂಡ ಮಿಂಚಿದ್ದಾರೆ. ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೂ ತಮಿಳು ಪ್ರೇಕ್ಷಕರು ಶಿವಣ್ಣನ ಅಭಿನಯಕ್ಕೆ ಫಿದಾ ಆಗಿದ್ದರು. ನೆಲ್ಸನ್‌ ದಿಲೀಪ್‌ ಕುಮಾರ್‌ ನಿರ್ದೇಶನದ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಸುಮಾರು 650 ಕೋಟಿ ರೂ. ಗಳಿಸಿದೆ. ಸದ್ಯ ಶಿವಣ್ಣ ತಮಿಳಿನ ʼಕ್ಯಾಪ್ಟನ್‌ ಮಿಲ್ಲರ್‌ʼ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ದುನಿಯಾ ವಿಜಯ್‌

ಕನ್ನಡದ ಪ್ರತಿಭಾವಂತ ನಟರ ಪೈಕಿ ದುನಿಯಾ ವಿಜಯ್‌ ಕೂಡ ಒಬ್ಬರು. ಸಹಜ ಅಭಿನಯದಿಂದಲೇ ಗಮನ ಸೆಳೆದಿರುವ ಅವರು ಇದೀಗ ನಟನೆಯ ಜತೆಗೆ ನಿರ್ದೇಶನದಲ್ಲೂ ಮಿಂಚುತ್ತಿದ್ದಾರೆ. ಇದರ ಜತೆಗೆ ಪರಭಾಷೆಯಲ್ಲಿಯೂ ಗಮನ ಸೆಳೆದಿದ್ದಾರೆ. ಈ ವರ್ಷ ತೆರೆಕಂಡ ತೆಲುಗಿನ ʼವೀರ ಸಿಂಹ ರೆಡ್ಡಿʼ ಚಿತ್ರದಲ್ಲಿ ವಿಜಯ್‌ ಖಳ ನಟನಾಗಿ ಅಬ್ಬರಿಸಿದ್ದಾರೆ. ನಂದಮೂರಿ ಬಾಲಕೃಷ್ಣ ಅವರಿಗೆ ಸರಿ ಸಮಾನವಾಗಿ ತೆರೆ ಮೇಲೆ ಮಿಂಚಿ ಟಾಲಿವುಡ್‌ನಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. ಗೋಪಿಚಂದ್‌ ಮಲಿನೇನಿ ನಿರ್ದೇಶನದ ʼವೀರ ಸಿಂಹ ರೆಡ್ಡಿʼ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಸುಮಾರು 134 ಕೋಟಿ ರೂ. ಕಲೆಕ್ಷನ್‌ ಮಾಡಿದೆ.

ಪೃಥ್ವಿ ಅಂಬಾರ್‌

2020ರಲ್ಲಿ ತೆರೆಕಂಡ ಕನ್ನಡ ಚಿತ್ರ ‘ದಿಯಾ’ ಮೂಲಕ ಮೋಡಿ ಮಾಡಿದವರು ಪೃಥ್ವಿ ಅಂಬಾರ್‌. ಈ ಚಿತ್ರ ಒಟಿಟಿಯಲ್ಲಿಯೂ ತೆರೆಕಂಡು ಪರಭಾಷಿಕರ ಗಮನ ಸೆಳೆದಿತ್ತು. ಬಳಿಕ ಹಿಂದಿ ಚಿತ್ರರಂಗಕ್ಕೂ ಕಾಲಿಟ್ಟಿದ್ದ ಪೃಥ್ವಿ ಅಂಬಾರ್‌ ಈ ವರ್ಷ ‘ಸರಿ’ ಚಿತ್ರದ ಮೂಲಕ ಮರಾಠಿ ಸಿನಿಮಾ ಕ್ಷೇತ್ರಕ್ಕೆ ಪಾದರ್ಪಣೆ ಮಾಡಿದ್ದಾರೆ. ಕೆ.ಎಸ್‌.ಅಶೋಕ್‌ ನಿರ್ದೇಶನದ ಈ ಚಿತ್ರ ಕನ್ನಡದ ʼದಿಯಾʼ ಸಿನಿಮಾದ ರಿಮೇಕ್‌. ಇಲ್ಲೂ ಆದಿ ಪಾತ್ರದ ಮೂಲಕ ಪೃಥ್ವಿ ಅಂಬಾರ್ ಮರಾಠಿಗರ ಗಮನ ಸೆಳೆದಿದ್ದಾರೆ.

ಆಶಿಕಾ ರಂಗನಾಥ್‌

ಸ್ಯಾಂಡಲ್‌ವುಡ್‌ನ ‘ಚುಟು ಚುಟು’ ಬೆಡಗಿ ಆಶಿಕಾ ರಂಗನಾಥ್‌ ಈ ವರ್ಷ ‘ಅಮಿಗೋಸ್‌’ ಚಿತ್ರದ ಮೂಲಕ ಟಾಲಿವುಡ್‌ಗೆ ಕಾಲಿಟ್ಟಿದ್ದಾರೆ. ಕಳೆದ ವರ್ಷ ʼಪಟ್ಟಥು ಅರಸನ್‌ʼ ಸಿನಿಮಾ ಮೂಲಕ ತಮಿಳು ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದ ಆಶಿಕಾ ರಂಗನಾಥ್‌ ಈ ವರ್ಷ ತೆಲುಗು ಚಿತ್ರದೊಂದಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ ʼಅಮಿಗೋಸ್‌ʼ ನಿರೀಕ್ಷಿತ ಮಟ್ಟದಲ್ಲಿ ಗೆಲುವು ದಾಖಲಿಸಲಿಲ್ಲ. ರಾಜೇಂದ್ರ ರೆಡ್ಡಿ ಆ್ಯಕ್ಷನ್‌ ಕಟ್‌ ಹೇಳಿರುವ ಈ ಚಿತ್ರದಲ್ಲಿ ನಂದಮೂರಿ ಕಲ್ಯಾಣ್‌ ರಾಮ್‌ ನಾಯಕನಾಗಿ ನಟಿಸಿದ್ದರು. ಚಿತ್ರ ಸೋತರೂ ಆಶಿಕಾ ತೆಲುಗು ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಸದ್ಯ ಅವರು ಟಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರುವತ್ತ ಸೂಚನೆ ನೀಡಿದ್ದಾರೆ. ನಾಗಾರ್ಜುನ ನಾಯಕನಾಗಿ ಕಾಣಿಸಿಕೊಂಡಿರುವ ತೆಲುಗಿನ ಬಹು ನಿರೀಕ್ಷಿತ ಚಿತ್ರ ʼನಾ ಸಾಮಿ ರಂಗʼ ಚಿತ್ರಕ್ಕೆ ಆಶಿಕಾ ನಾಯಕಿ. ಮುಂದಿನ ವರ್ಷ ಇದು ತೆರೆಗೆ ಬರಲಿದೆ.

ಸಪ್ತಮಿ ಗೌಡ

ಕಳೆದ ವರ್ಷ ತೆರೆಕಂಡ ರಿಷಬ್‌ ಶೆಟ್ಟಿ ನಿರ್ದೇಶಿಸಿ, ನಾಯಕನಾಗಿ ಕಾಣಿಸಿಕೊಂಡ ʼಕಾಂತಾರʼ ಚಿತ್ರದ ಮೂಲಕ ದೇಶದ ಗಮನ ಸೆಳೆದವರು ಸಪ್ತಮಿ ಗೌಡ. ಲೀಲಾ ಪಾತ್ರದಲ್ಲಿ ಅವರು ಮೋಡಿ ಮಾಡಿದ್ದರು. ಈ ವರ್ಷ ಸಪ್ತಮಿ ಗೌಡ ನಟನೆಯ ಕನ್ನಡ ಚಿತ್ರ ತೆರೆಗೆ ಬರದಿದ್ದರೂ ಬಾಲಿವುಡ್‌ಗೆ ಕಾಲಿಟ್ಟಿದ್ದಾರೆ. ಬಾಲಿವುಡ್‌ನ ಜನಪ್ರಿಯ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಆ್ಯಕ್ಷನ್‌ ಕಟ್‌ ಹೇಳಿದ ʼದಿ ವ್ಯಾಕ್ಸಿನ್‌ ವಾರ್‌ʼ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಸಪ್ತಮಿ ಗೌಡ ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ. ಚಿತ್ರ ಹಿಟ್‌ ಆಗದಿದ್ದರೂ ನಾನಾ ಪಾಟೇಕರ್‌, ಪಲ್ಲವಿ ಜೋಷಿ, ಅನುಪಮ್‌ ಖೇರ್‌ ಮುಂತಾದ ಮೇರು ಕಲಾವಿದರೊಂದಿಗೆ ತೆರೆ ಹಂಚಿಕೊಳ್ಳುವ ಅವಕಾಶ ಅವರಿಗೆ ಲಭಿಸಿತ್ತು. ಡಾ. ಶ್ರೀಲಕ್ಷ್ಮೀ ಮೋಹನ್‌ದಾಸ್‌ ಎನ್ನುವ ವಿಜ್ಞಾನಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಸದ್ಯ ಅವರು ತೆಲುಗು ಚಿತ್ರವನ್ನೂ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Year Ender 2023: ಈ ವರ್ಷ ಸುದ್ದಿಯಲ್ಲಿದ್ದ ಟಿವಿ ಸ್ಟಾರ್‌ಗಳಿವರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

KMH CUP: ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಆಯೋಜಿಸಲಾಗಿರುವ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ ಲೋಗೋ ಬಿಡುಗಡೆ ಸಮಾರಂಭ ಈಚೆಗೆ ನಡೆಯಿತು.

VISTARANEWS.COM


on

Actress Bhavana Ramanna is the ambassador for KMH Cup
Koo

ಬೆಂಗಳೂರು: ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಆಯೋಜಿಸಲಾಗಿರುವ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ (KMH CUP) ಲೋಗೋ ಬಿಡುಗಡೆ ಸಮಾರಂಭ ಈಚೆಗೆ ನಡೆಯಿತು.

ಈ ಟೂರ್ನಿಯ ರಾಯಭಾರಿ ಆಗಿರುವ ನಟಿ ಭಾವನ ರಾಮಣ್ಣ ಲೋಗೊ ಬಿಡುಗಡೆ ಮಾಡಿದರು. ಕಾಂಗ್ರೆಸ್ ಮುಖಂಡ ದಿನೇಶ್, ಸಂಘದ ಅಧ್ಯಕ್ಷ ಎಸ್. ಬಾಬು ಧರ್ಮೇಂದ್ರ ಹಾಗೂ ಕಾರ್ಯದರ್ಶಿ ದಿನೇಶ್ ಆಚಾರ್ ಈ ವೇಳೆ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘಕ್ಕೆ ಮೂವತ್ತೈದು ವರ್ಷಗಳ ಇತಿಹಾಸವಿದೆ. ಅನೇಕ ಹಿರಿಯರು ಈ ಸಂಘವನ್ನು ಕಟ್ಟಿ ಬೆಳೆಸಿದ್ದಾರೆ. ಇದೇ ಮೊದಲ ಬಾರಿಗೆ ನಮ್ಮ ಸಂಘದ ವತಿಯಿಂದ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಸದಾ ನಮ್ಮ ಸಂಘದ ಜತೆಯಿರುವ ನಟಿ ಭಾವನ ರಾಮಣ್ಣ ಈ ಟೂರ್ನಿಯ ರಾಯಭಾರಿಯಾಗಿದ್ದಾರೆ.

ಇದನ್ನೂ ಓದಿ: Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

ಜುಲೈ 20 ಹಾಗೂ 21 ಶನಿವಾರ ಹಾಗೂ ಭಾನುವಾರ ವಿಜಯನಗರದ ಬಿ.ಜಿ.ಎಸ್. ಮೈದಾನದಲ್ಲಿ ಈ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಬೆಳಿಗ್ಗೆ 8 ರಿಂದ ರಾತ್ರಿ 8 ವರೆಗೂ ಪಂದ್ಯಗಳು ನಡೆಯುತ್ತದೆ. ನಾಕೌಟ್ ಪಂದ್ಯಗಳು ಆರು ಓವರ್ ಇರುತ್ತದೆ. ಫೈನಲ್ ಪಂದ್ಯ ಎಂಟು ಓವರ್ ನದಾಗಿರುತ್ತದೆ. ಗೆದ್ದ ಮೊದಲ ತಂಡಕ್ಕೆ 49,999 ರೂಪಾಯಿ ಹಾಗೂ ರನ್ನರ್ ತಂಡಕ್ಕೆ 24, 999 ರೂಪಾಯಿ ಬಹುಮಾನ ನೀಡಲಾಗುವುದು.

ಟೂರ್ನಿಯಲ್ಲಿ ಭಾಗವಹಿಸುವ ತಂಡಕ್ಕೆ ಹತ್ತು ಸಾವಿರ ಪ್ರವೇಶ ದರ ವಿರುತ್ತದೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಒಳಪಡುವ ಹನ್ನೆರಡು ಸಂಘಗಳು ಹಾಗೂ ಮಾಧ್ಯಮದ ಮಿತ್ರರು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಹದಿನಾಲ್ಕು ತಂಡಗಳು ಟೂರ್ನಿಯಲ್ಲಿ ಭಾಗಿಯಾಗಲಿದೆ ಎಂದು ಸಂಘದ ಅಧ್ಯಕ್ಷ ಬಾಬು ಧರ್ಮೇಂದ್ರ ತಿಳಿಸಿದರು.

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

ತಮ್ಮ ಮೊದಲ ಚಿತ್ರಕ್ಕೆ ಮೇಕಪ್ ಮಾಡಿದ ವೆಂಕಟೇಶ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ನಟಿ ಭಾವನ ರಾಮಣ್ಣ, ನಾನು ನಟಿಸುವ ಎಲ್ಲಾ ಚಿತ್ರಗಳ ನಿರ್ಮಾಪಕರಿಗೆ ಹೇಳುವುದು ಮೇಕಪ್ ಹಾಗೂ ಕೇಶಾಲಂಕಾರಕ್ಕೆ ಈ ಸಂಘದ ಸದಸ್ಯರೇ ಇರಲಿ ಎಂದು. ಈಗ ಸಾಕಷ್ಟು ಜನ‌ರು ಸಾಮಾಜಿಕ ಜಾಲತಾಣಗಳಲ್ಲಿ ಮೇಕಪ್ ಕುರಿತು ಪ್ರಮೋಷನ್ ಮಾಡಿಕೊಳ್ಳುತ್ತಾರೆ. ಅದರಿಂದ ಇವರಿಗೆ ಸ್ವಲ್ಪ ತೊಂದರೆಯಾಗುತ್ತಿದೆ‌. ಇನ್ನು ಈ ಟೂರ್ನಿಯ ಬಗ್ಗೆ ಹೇಳಬೇಕೆಂದರೆ, ಹೆಚ್ಚಾಗಿ ಕಲಾವಿದರು ಕ್ರಿಕೆಟ್ ಆಡುತ್ತೇವೆ‌. ತಂತ್ರಜ್ಞರು ಆಡುವುದು ಕಡಿಮೆ. ಕಾರ್ಮಿಕರು ಹಾಗೂ ತಂತ್ರಜ್ಞರಿಗಾಗಿ ಆಯೋಜಿಸಿರುವ ಈ ಕ್ರಿಕೆಟ್ ಟೂರ್ನಿಯ ರಾಯಭಾರಿಯಾಗಿದ್ದು ಖುಷಿಯಾಗಿದೆ. ಟೂರ್ನಿ ಯಶಸ್ವಿಯಾಗಲಿ ಎಂದು ತಿಳಿಸಿದರು.

Continue Reading

ಕರ್ನಾಟಕ

Kannada New Movie: ಮೊದಲ ಹಂತದ ಶೂಟಿಂಗ್ ಮುಗಿಸಿದ ʼಹೇ ಪ್ರಭುʼ ಚಿತ್ರ

Kannada New Movie: ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರ 13ನೇ ಹೊಸ ಚಿತ್ರ “ಹೇ ಪ್ರಭು” ಸದ್ದಿಲ್ಲದೆ ಮೊದಲ ಹಂತದ ಶೂಟಿಂಗ್ ಮುಗಿಸಿದೆ. “ಹೇ ಪ್ರಭು ” ಈ ಹೆಸರು ಕೇಳಿದ ತಕ್ಷಣ ನೀವು ದೇವರು ಇರಬಹುದ ಅಧವಾ “ಪ್ರಭು” ಅಂದರೇ ನಮ್ಮ ನಾಡ ಪ್ರಭು ಕೆಂಪೇಗೌಡರಿರಬಹುದಾ ಎಂಬ ಕುತೂಹಲ ಮೂಡಿಸುತ್ತದೆ . ಸದ್ಯಕ್ಕೆ ಚಿತ್ರ ತಂಡ ಶೀರ್ಷಿಕೆ ವಿನ್ಯಾಸ (ಟೈಟಲ್ ಲೋಗೋ) ಅನಾವರಣಗೊಳಿಸಿದೆ, ಇದರಲ್ಲಿ ಕೆಂಪೇಗೌಡರ ಚಿತ್ರವಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Hey Prabhu film has completed its first phase of shooting
Koo

ಬೆಂಗಳೂರು: ವಿನೂತನ ಶೀರ್ಷಿಕೆ ಮತ್ತು ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರ 13ನೇ ಹೊಸ ಚಿತ್ರ “ಹೇ ಪ್ರಭು” ಸದ್ದಿಲ್ಲದೆ ಮೊದಲ ಹಂತದ ಶೂಟಿಂಗ್ ಮುಗಿಸಿದೆ. “ಹೇ ಪ್ರಭು” ಈ ಹೆಸರು ಕೇಳಿದ ತಕ್ಷಣ ನೀವು ದೇವರು ಇರಬಹುದಾ ಅಥವಾ “ಪ್ರಭು” ಅಂದರೆ ನಮ್ಮ ನಾಡಪ್ರಭು ಕೆಂಪೇಗೌಡರಿರಬಹುದಾ ಎಂಬ ಕುತೂಹಲ ಮೂಡಿಸುತ್ತದೆ. ಸದ್ಯಕ್ಕೆ ಚಿತ್ರತಂಡ ಶೀರ್ಷಿಕೆ ವಿನ್ಯಾಸ (ಟೈಟಲ್ ಲೋಗೋ) ಅನಾವರಣಗೊಳಿಸಿದೆ. ಇದರಲ್ಲಿ ಕೆಂಪೇಗೌಡರ ಚಿತ್ರವಿರುವುದು (Kannada New Movie) ಸ್ವಲ್ಪ ಕುತೂಹಲ ಮೂಡಿಸಿದೆ.

ಇನ್ನು 5 ದಿನಗಳ ಶೂಟಿಂಗ್ ಮುಗಿದರೆ ಚಿತ್ರೀಕರಣ ಮುಕ್ತಾಯವಾಗುತ್ತದೆ ಎಂದು ತಂಡ ಹೇಳಿಕೊಂಡಿದೆ. ಜೊತೆಜೊತೆಯಾಗಿ ಸಂಕಲನ ಕಾರ್ಯ ಕೂಡ ಪ್ರಗತಿಯಲ್ಲಿದ್ದು, ನಿರ್ದೇಶಕರು ಮೊದಲ ಪ್ರತಿಯನ್ನು ಶೀಘ್ರದಲ್ಲಿ ತರುವುದಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

ಪ್ರಮೋದ್ ಭಾರತೀಯ ಛಾಯಾಗ್ರಹಣ, ಡ್ಯಾನ್ನಿ ಆಂಡರ್ಸನ್, ಸಂಗೀತ, ಚಂದನ್ ಪಿ., ಶಮೀಕ್ ಭಾರದ್ವಾಜ್ ಮತ್ತು ಲಾರೆನ್ಸ್ ಪ್ರೀತಮ್ ತಾಂತ್ರಿಕ ಕೆಲಸದಲ್ಲಿ ಕಾರ್ಯವಹಿಸುತ್ತಿದ್ದಾರೆ. ಮಹೇಶ್ ಮತ್ತು ಪ್ರವೀಣ್ ಅವರ ಸಂಭಾಷಣೆ, ಅರಸು ಅಂತಾರೆ ಮತ್ತು ಮನೋಜ್ ರಾವ್ ಅವರ ಸಾಹಿತ್ಯ ಚಿತ್ರಕ್ಕಿದೆ. 24 Reels ಮತ್ತು Amrutha Film Center ನಿರ್ಮಾಣ, ಕಥೆ ಚಿತ್ರಕಥೆ ವೆಂಕಟ್ ಭಾರದ್ವಾಜ್ ಅವರದ್ದಾಗಿದೆ.

ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಸನ್ ಜೈಪಾಲ್ ಅವರ ಪುತ್ರ ಡ್ಯಾನ್ನಿ ಆಂಡರ್ಸನ್ ಅವರನ್ನು ಚಿತ್ರರಂಗಕ್ಕೆ ಸಂಗೀತ ನಿರ್ದೇಶಕರಾಗಿ ಚಿತ್ರರಂಗಕ್ಕೆ ವೆಂಕಟ್ ಭಾರದ್ವಾಜ್ ಪರಿಚಯಿಸುತ್ತಿದ್ದಾರೆ.

ತಾರಾಬಳಗದಲ್ಲಿ ಜಯ್, ಸೂರ್ಯ ರಾಜ್, ಲಕ್ಷ್ಮಣ್ ಶಿವಶಂಕರ್ (ಕೆಂಪಿರ್ವೇ ಖ್ಯಾತಿ), ಸಂಹಿತ ವಿನ್ಯಾಸ, ಗಜಾನನ ಹೆಗಡೆ, ನಿರಂಜನ್ ಪ್ರಸಾದ್, ಹರಿ ಧನಂಜಯ , ಪ್ರಮೋದ್ ರಾಜ್ , ದಿಲೀಪ್ ದೇವ್, ನೇತ್ರ ಗೋಪಾಲ್, ಸುಚಿತ್ರ ದಿನೇಶ್, ಸಾಧನ ಭಟ್, ಮನೋಹರ್, ಶಶಿರ್ ರಾಜು , ಹಾಗೂ ಇತರರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಖರೀದಿಗೆ ಇದು ಗೋಲ್ಡನ್‌ ಟೈಮ್‌; ಇಳಿದ ಚಿನ್ನದ ದರ

ಶೀಘ್ರದಲ್ಲಿ ತಂಡ “ಹೇ ಪ್ರಭು ” ಮೊದಲ ನೋಟ (First Look) ಬಿಡುಗಡೆ ಮಾಡಲಿದೆ. ಸದ್ಯಕ್ಕೆ ವೆಂಕಟ್ ಭಾರದ್ವಾಜ್ ಅವರ ಹೈನ ಮತ್ತು ಆಹತ ಎರಡು ಚಿತ್ರ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Kalki 2898 AD: ಕ್ಯೂ ನಿಂತು ಟಿಕೆಟ್‌ ಖರೀದಿಸಿ ʼಕಲ್ಕಿʼ ವೀಕ್ಷಿಸಿದ ಸ್ಟಾರ್‌ ನಿರ್ದೇಶಕ! ವೈರಲ್‌ ಫೋಟೊ ಇಲ್ಲಿದೆ

Kalki 2898 AD: ಈ ವರ್ಷದ ಬಹು ನಿರೀಕ್ಷಿತ, ಅತ್ಯಂತ ದುಬಾರಿ ಚಿತ್ರ ʼಕಲ್ಕಿ 2898 ಎಡಿʼ ಸಿನಿಮಾ ತರೆಕಂಡಿದ್ದು, ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪೌರಾಣಿಕ ಕಥೆಯನ್ನು ಆಧುನಿಕ ಜಗತ್ತಿನೊಂದಿಗೆ ಬೆರೆಸಿದ ಈ ಸೈನ್ಸ್‌ ಫಿಕ್ಷನ್‌ಗೆ ಪ್ರೇಕ್ಷಕರು ಜೈ ಎಂದಿದ್ದಾರೆ. ಎಲ್ಲ ಶೋಗಳು ಹೌಸ್‌ಫುಲ್‌ ಆಗಿವೆ. ಈ ಮಧ್ಯೆ ಟಾಲಿವುಡ್‌ನ ಸೂಪರ್‌ ಹಿಟ್‌ ಚಿತ್ರಗಳ ಜನಪ್ರಿಯ ನಿರ್ದೇಶಕ ಎಸ್‌.ಎಸ್‌.ರಾಜಮೌಳಿ ಇಂದು ಮುಂಜಾನೆಯೇ ʼಕಲ್ಕಿʼ ಸಿನಿಮಾವನ್ನು ವೀಕ್ಷಿಸಿದ್ದು, ಅವರು ಥಿಯೇಟರ್‌ನಲ್ಲಿ ನಿಂತಿರುವ ಫೋಟೊ ವೈರಲ್‌ ಆಗಿದೆ.

VISTARANEWS.COM


on

Kalki 2898 AD
Koo

ಮುಂಬೈ: ಈ ವರ್ಷದ ಬಹು ನಿರೀಕ್ಷಿತ, ಅತ್ಯಂತ ದುಬಾರಿ ಚಿತ್ರ ʼಕಲ್ಕಿ 2898 ಎಡಿʼ (Kalki 2898 AD) ವಿವಿಧ ಭಾಷೆಗಳಲ್ಲಿ ಇಂದು (ಜೂನ್‌ 27) ವಿಶ್ವಾದ್ಯಂತ ತೆರೆಕಂಡು ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಟಾಲಿವುಡ್‌ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ (Nag Ashwin) ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾದಲ್ಲಿ ಟಾಲಿವುಡ್‌ ಸೂಪರ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮತ್ತಿತರರು ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಕಮಲ್‌ ಹಾಸನ್‌ ಮತ್ತು ಶೋಭನಾ ಕಾಣಿಸಿಕೊಂಡಿದ್ದಾರೆ. ಪೌರಾಣಿಕ ಕಥೆಯನ್ನು ಆಧುನಿಕ ಜಗತ್ತಿನೊಂದಿಗೆ ಬೆರೆಸಿದ ಈ ಸೈನ್ಸ್‌ ಫಿಕ್ಷನ್‌ಗೆ ಪ್ರೇಕ್ಷಕರು ಜೈ ಎಂದಿದ್ದಾರೆ. ಎಲ್ಲ ಶೋಗಳು ಹೌಸ್‌ಫುಲ್‌ ಆಗಿವೆ. ಈ ಮಧ್ಯೆ ಟಾಲಿವುಡ್‌ನ ಸೂಪರ್‌ ಹಿಟ್‌ ಚಿತ್ರಗಳ ಜನಪ್ರಿಯ ನಿರ್ದೇಶಕ ಎಸ್‌.ಎಸ್‌.ರಾಜಮೌಳಿ (S.S. Rajamouli) ಇಂದು ಮುಂಜಾನೆಯೇ ʼಕಲ್ಕಿʼ ಸಿನಿಮಾವನ್ನು ವೀಕ್ಷಿಸಿದ್ದು, ಅವರು ಥಿಯೇಟರ್‌ನಲ್ಲಿ ನಿಂತಿರುವ ಫೋಟೊ ವೈರಲ್‌ ಆಗಿದೆ.

ರಾಜಮೌಳಿ, ಅವರ ಪತ್ನಿ ರಮಾ ಮತ್ತು ಆಸ್ಕರ್‌ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಥಿಯೇಟರ್‌ ಮುಂದೆ ನಿಂತಿರುವ ಫೋಟೊ ಇದಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ‌ʼʼಎಲ್ಲ ಕಡೆ ಶೋ ಹೌಸ್‌ಫುಲ್‌ ಆಗಿದೆ. ರಾಜಮೌಳಿ, ಕೀರವಾಣಿ ಅವರೂ ಚಿತ್ರದ ಟಿಕೆಟ್‌ಗಾಗಿ ಕಾಯುವಂತಾಗಿದೆʼʼ ಎಂದು ಕ್ಯಾಪ್ಶನ್‌ ಬರೆದು ಫೋಟೊ ಹಂಚಿಕೊಳ್ಳಲಾಗಿದೆ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ರಾಜಮೌಳಿ ʼಕಲ್ಕಿʼ ಚಿತ್ರತಂಡಕ್ಕೆ ಮೆಚ್ಚುಗೆ ಸೂಚಿಸಿದ್ದರು. ಟ್ರೈಲರ್‌ ವೀಕ್ಷಿಸಿ, ʼʼಅದ್ಭುತ ಟ್ರೈಲರ್‌. ಅಮಿತಾಭ್‌, ಪ್ರಭಾಸ್‌, ದೀಪಿಕಾ ಪಡುಕೋಣೆ ಪಾತ್ರಗಳು ಮನ ಮುಟ್ಟುವಂತಿದೆ. ಕಮಲ್‌ ಹಾಸನ್‌ ಅವರ ಲುಕ್‌ ಅಂತೂ ಅಮೋಘವಾಗಿದೆʼʼ ಎಂದು ಬರೆದುಕೊಂಡಿದ್ದರು. ತೆರೆಮೇಲೆ ಮ್ಯಾಜಿಕ್‌ ಸೃಷ್ಟಿಸುವ ರಾಜಮೌಳಿ ಅವರಂತಹ ನಿರ್ದೇಶಕರೇ ಶ್ಲಾಘಿಸಿರುವುದು ಚಿತ್ರತಂಡದ ಆತ್ಮವಿಶ್ವಾಸ ವೃದ್ಧಿಸಿತ್ತು.

ಮನಸೋತ ಪ್ರೇಕ್ಷಕರು

ತೆರೆಮೇಲೆ ಬೇರೆಯದೇ ಲೋಕ ತೆರೆದಿಟ್ಟ ನಿರ್ದೇಶಕರ ಶ್ರಮವನ್ನು ಚಿತ್ರ ನೋಡಿದ ಪ್ರತಿಯೊಬ್ಬರೂ ಶ್ಲಾಘಿಸುತ್ತಿದ್ದಾರೆ. ಹಾಲಿವುಡ್‌ ಚಿತ್ರದ ಮಾದರಿಯಲ್ಲಿ ಕಟ್ಟಿಕೊಡಲಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಅದ್ಭುತ ವಿಷುವಲ್ಸ್‌, ನಟನೆ, ಕಥೆ, ನಿರ್ದೇಶನ ಹೀಗೆ ಹಲವು ಕಾರಣಗಳಿಂದ ಸಿನಿಮಾ ವೀಕ್ಷಕರ ಮನಗೆದ್ದಿದೆ. ಸಂಗೀತ, ಡಬ್ಬಿಂಗ್‌, ಎಡಿಟಿಂಗ್‌ ಇನ್ನೂ ಉತ್ತಮಪಡಿಸಬಹುದಾಗಿತ್ತು ಎಂದೂ ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ನಿರ್ದೇಶಕರೇ ಹೇಳಿರುವಂತೆ ಇದು ಸುಮಾರು 6,000 ವರ್ಷಗಳಲ್ಲಿ ನಡೆಯುವ ಕಥೆ. ಕುರುಕ್ಷೇತ್ರ ಯುದ್ಧದ ಅಂತ್ಯದ ಮೂಲಕ ಚಿತ್ರ ಆರಂಭವಾಗುತ್ತದೆ. ಬಳಿಕ ಕಥೆ 6,000 ವರ್ಷಗಳ ನಂತರಕ್ಕೆ ಬದಲಾಗುತ್ತದೆ. ಅದು ಕಲಿಯುಗದ ಅಂತ್ಯದ ಸಮಯ. ಆಗ ಅರಾಜಕತೆ ತಾಂಡವವಾಡುತ್ತಿರುತ್ತದೆ. ಒಳಿತಿನ ವಿರೋಧಿ ಯಾಸ್ಕಿನ್, ಕಾಂಪ್ಲೆಕ್ಸ್ ಹೆಸರಿನ ಭವ್ಯ ಪ್ರಪಂಚವನ್ನೇ ಕಟ್ಟಿಕೊಂಡು ಅಮರತ್ವ ಪಡೆಯುವ ಹಪಾಹಪಿಯಲ್ಲಿರುತ್ತಾನೆ. ಆತನ ಅಟ್ಟಹಾಸ ಹೇಗೆ ಮತ್ತು ಯಾರು ಮಟ್ಟ ಹಾಕುತ್ತಾರೆ ಎನ್ನುವುದೇ ಸಿನಿಮಾದ ಒಟ್ಟು ಸಾರಾಂಶ. ಭೈರವನಾಗಿ ಪ್ರಭಾಸ್‌, ಸುಮತಿಯಾಗಿ ದೀಪಿಕಾ, ಅಶ್ವತ್ಥಾಮನಾಗಿ ಅಮಿತಾಭ್‌ ಬಚ್ಚನ್‌, ಯಾಸ್ಕಿನ್ ಆಗಿ ಕಮಲ್‌ ಹಾಸನ್‌ ಕಮಾಲ್‌ ಮಾಡಿದ್ದಾರೆ. ವೈಜಯಂತಿ ಮೂವೀಸ್‌ ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ಚಿತ್ರ ನಿರ್ಮಿಸಿದ್ದು, ಯಾವೆಲ್ಲ ದಾಖಲೆ ಉಡೀಸ್‌ ಮಾಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Kalki 2898 AD Review: ʼಕಲ್ಕಿʼ ಚಿತ್ರರಂಗದ ಇತಿಹಾಸದಲ್ಲೇ ಮೈಲಿಗಲ್ಲು ಎಂದ ಪ್ರೇಕ್ಷಕರು; ಹೀಗಿದೆ ನೋಡುಗರ ಪ್ರತಿಕ್ರಿಯೆ

Continue Reading

ಸಿನಿಮಾ

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

Actor Darshan : ದರ್ಶನ್‌‌‌ ನೋಡ್ಬೇಕೆಂದು ಜೈಲಿನ ಹೊರಗೆ ವಿಶೇಷಚೇತನ ಯುವತಿಯೊಬ್ಬಳು ಗೋಳಾಡಿದ್ದಾಳೆ. ದರ್ಶನ್‌ ಜೈಲುಪಾಲಾದ ದಿನದಿಂದ ಯುವತಿ ಊಟ ಬಿಟ್ಟು ಹಠ ಮಾಡುತ್ತಿದ್ದಾಳೆ.

VISTARANEWS.COM


on

By

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. ಗುರುವಾರವೂ ದರ್ಶನ್ ಭೇಟಿಗೆ ವಿಶೇಷ ಚೇತನ ಯುವತಿ ಆಗಮಿಸಿದ್ದಳು.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್‌ನ ನಿವಾಸಿ ಸೌಮ್ಯ ತನ್ನ ನೆಚ್ಚಿನ ನಟನನ್ನು ನೋಡಬೇಕೆಂದು ಹಠ ಹಿಡಿದಿದ್ದಳು. ದರ್ಶನ್‌ನನ್ನು ನೋಡುವ ತನಕ ಊಟ ಮಾಡುವುದಿಲ್ಲ ಎಂದಿದ್ದಾಳೆ. ಹೀಗಾಗಿ ಸೌಮ್ಯಳ ಪೋಷಕರು ಪರಪ್ಪನ ಅಗ್ರಹಾರಕ್ಕೆ ಭೇಟಿ ನಿಡಿದ್ದರು. ನಟ ದರ್ಶನ್‌ನ ಅಪ್ಪಟ ಅಭಿಮಾನಿಯಾಗಿರುವ ಸೌಮ್ಯ, ದರ್ಶನ್‌ ಜೈಲಿಗೆ ಹೋದ ದಿನದಿಂದ ಸರಿಯಾಗಿ ಊಟ ಮಾಡಿಲ್ಲ. ಜೈಲಿನಲ್ಲಿರುವ ದರ್ಶನ್ ಅವರನ್ನು ಭೇಟಿಯಾಗಬೇಕೆಂದು ಹಠ ಹಿಡಿದಿದ್ದಾಳೆ.

ಯುವತಿ ಪೋಷಣೆಗೆ ಆಟೋ ಕೊಡಿಸಿದ್ದ ದರ್ಶನ್‌

2016 ರಲ್ಲಿ ಈ ಬಡ ಕುಟುಂಬಕ್ಕೆ ನಟ ದರ್ಶನ್‌ ಆಟೋವೊಂದನ್ನು ಕೊಡಿಸಿದ್ದರು. ಲಕ್ಷ್ಮೀ ಹಾಗೂ ರಂಗಸ್ವಾಮಿ ದಂಪತಿಯ ಪುತ್ರಿ ಸೌಮ್ಯಳನ್ನು ಪೋಷಣೆಗಾಗಿ ನಟ ದರ್ಶನ್‌ ಖುದ್ದು ಆಟೋ ಕೊಡಿಸಿದ್ದರು. ಹೀಗಾಗಿ ಇದೇ ಆಟೋದಲ್ಲಿ ಜೈಲಿಗೆ ಬಂದು ದರ್ಶನ್‌ ಭೇಟಿಗಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇಂದು ದರ್ಶನ್ ಭೇಟಿಗೆ ಅವರ ಕುಟುಂಬದವರು ಬರುತ್ತಿದ್ದು, ವಿಶೇಷ ಚೇತನ ಯುವತಿ ಭೇಟಿಗೆ ಅವಕಾಶವನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ, ಪಟ್ಟಣಗೆರೆಯ ವಾಹನ ಶೆಡ್‌ (Pattanagere Shed) ಕಡೆ ಸುಳಿದಾಡಲು ವಾಹನ ಮಾಲಿಕರು ಅಂಜುತ್ತಿದ್ದಾರೆ. ಇಲ್ಲಿ ಸಾಲ ಬಾಕಿ (Loan default) ಉಳಿಸಿಕೊಂಡಿರುವವರ ವಾಹನಗಳನ್ನು ಸೀಜ್‌ (Seize) ಮಾಡಿ ತಂದಿಡಲಾಗುತ್ತಿದೆ. ಈಗ ಈ ವಾಹನಗಳನ್ನು ಬಿಡಿಸಿಕೊಳ್ಳಲು ಕೂಡ ಯಾರೂ ಈ ಶೆಡ್‌ ಕಡೆ ತಲೆ ಹಾಕುತ್ತಿಲ್ಲ.

ಸಾಲ ಬಾಕಿ ಉಳಿಸಿಕೊಂಡ ಪರಿಣಾಮ ಪಟ್ಟಣಗೆರೆ ಶೆಡ್‌ ಪಾಲಾಗಿರುವ ವಾಹನಗಳ ಮಾಲೀಕರಿಗೆ ಈಗ ಪಟ್ಟಣಗೆರೆಯ ಶೆಡ್ ಭಯವೇ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೊಲೆಯ ನಡೆದ ತಾಣ ಹಾಗೂ ಅದರ ಬರ್ಬರತೆ ಇವರ ಕೈಕಾಲು ನಡುಗುವಂತೆ ಮಾಡಿದೆ. ʼನೋ ಆರ್ಗ್ಯುಮೆಂಟ್, ಓನ್ಲಿ ಸೆಟಲ್‌ಮೆಂಟ್‌ʼ ಎನ್ನುತ್ತ ಗಪ್‌ಚುಪ್‌ ಆಗಿ ಹಣ ಕಟ್ಟಿ ಬಿಡಿಸಿಕೊಂಡು ಬರುತ್ತಿದ್ದಾರೆ. ಇದರ ಆಸುಪಾಸಿನಲ್ಲಿ ಓಡಾಡುವವರು ಸಹ, ʼಇದೇ ಆ ಶೆಡ್‌ʼ ಎಂದು ಮಾತಾಡಿಕೊಳ್ಳುತ್ತ ಶೆಡ್ಡನ್ನು ನೋಡುತ್ತ ಬಿರಬಿರನೆ ಸಾಗುತ್ತಾರೆ!

ಪಟ್ಟಣಗೆರೆ ಶೆಡ್‌ಗೆ ಹೋಗಿ ವಾಹನ ಬಿಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಮಾಲೀಕರು ಕೆಲವೆಡೆ ಬ್ಯಾಂಕ್‌ಗೆ ಹೋಗಿ ಹಣ ಕಟ್ಟಿ, ʼನೀವೇ ವಾಹನ ತಂದುಕೊಡಿʼ ಎಂದೂ ಬ್ಯಾಂಕ್‌ನವರಿಗೆ ಮನವಿ ಮಾಡುತ್ತಿದ್ದಾರಂತೆ. ನಾವು ಶೆಡ್‌ಗೆ ಹೋಗಲ್ಲ‌ ಸರ್, ನೀವೆ ಹೋಗಿ ಎಂದು ದುಂಬಾಲು ಬೀಳುತ್ತಿದ್ದಾರೆ! ʼʼಕ್ರೂರವಾಗಿ ಸತ್ತವರು ದೆವ್ವಗಳಾಗುತ್ತಾರಂತೆ. ಅವರ ಆತ್ಮಗಳು ಅಲ್ಲೇ ಸುಳಿದಾಡ್ತಾ ಇರುತ್ತಾವಂತೆ, ನಮಗ್ಯಾಕೆ ಬೇಕು ಸಾರ್‌ ಇಲ್ಲದ ಉಪದ್ವ್ಯಾಪʼʼ ಎಂದು ಕೂಡ ಕೆಲವು ಮಾಲೀಕರು ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಯನ್ನು ಕೂಡಿಹಾಕಿ ದರ್ಶನ್‌ ಮತ್ತು ಗ್ಯಾಂಗ್‌ ಭೀಕರವಾಗಿ ಹಲ್ಲೆ ನಡೆಸಿತ್ತು. ವಾಹನಗಳಿಗೆ ರೇಣುಕಾ ಸ್ವಾಮಿಯ ತಲೆ ಜಪ್ಪಿ, ದೊಣ್ಣೆಗಳಿಂದ ಥಳಿಸಿ, ಮರ್ಮಾಂಗಕ್ಕೆ ಒದ್ದು ಹಿಂಸಿಸಿತ್ತು. ಈ ಪೀಡನೆಯನ್ನು ತಾಳಲಾರದೆ ರೇಣುಕಾ ಸ್ವಾಮಿ ಜೀವ ಶೆಡ್‌ನಲ್ಲಿಯೇ ಹೋಗಿತ್ತು. ಕೆಲಕಾಲ ಶವವನ್ನು ಶೆಡ್‌ನಲ್ಲೇ ಇಟ್ಟಿದ್ದ ಡಿ ಗ್ಯಾಂಗ್‌, ನಂತರ ಅದನ್ನು ಸುಮನಹಳ್ಳಿ ರಾಜಕಾಲುವೆಗೆ ಎಸೆದಿತ್ತು.

ದರ್ಶನ್‌ ಗ್ಯಾಂಗ್‌ನ ನಾಲ್ವರು ತುಮಕೂರು ಜೈಲಿಗೆ ಶಿಫ್ಟ್

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್‌ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paris Olympics 2024
ಕ್ರೀಡೆ20 mins ago

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

Viral Video
ವೈರಲ್ ನ್ಯೂಸ್25 mins ago

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Jio Tariffs
ದೇಶ25 mins ago

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Internet Addiction
ಆರೋಗ್ಯ35 mins ago

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Paris Olympics 2024
ಕ್ರೀಡೆ39 mins ago

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Illegal ganja storage in Ballari Arrest of two accused Rs 19 10 lakh Valuable ganja seized
ಕರ್ನಾಟಕ1 hour ago

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Arvind Kejriwal
ದೇಶ1 hour ago

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Railway New Rules
Latest1 hour ago

Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

Ashada Sale 2024
ಫ್ಯಾಷನ್1 hour ago

Ashada Sale 2024: ಆಷಾಢ ಸೇಲ್‌ನಲ್ಲಿ ಶಾಪಿಂಗ್‌ ಮಾಡುವಾಗ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌