Yogi Babu | ಪ್ಯಾನ್‌ ಇಂಡಿಯಾ ಸಿನಿಮಾಗೆ ತಮಿಳು ನಟ ಯೋಗಿ ಬಾಬು ಜತೆ ಕನ್ನಡಿಗ ಪ್ರಮೋದ್ ಶೆಟ್ಟಿ - Vistara News

ಸಿನಿಮಾ

Yogi Babu | ಪ್ಯಾನ್‌ ಇಂಡಿಯಾ ಸಿನಿಮಾಗೆ ತಮಿಳು ನಟ ಯೋಗಿ ಬಾಬು ಜತೆ ಕನ್ನಡಿಗ ಪ್ರಮೋದ್ ಶೆಟ್ಟಿ

ಚಿತ್ರಕ್ಕೆ ‘ಸನ್ನಿದಾನ ಪಿ.ಒ’ ಎಂದು ಶೀರ್ಷಿಕೆ ಇಡಲಾಗಿದ್ದು ಜನವರಿ 14 ಸಂಕ್ರಾಂತಿಯಂದು ಸಿನಿಮಾ ಶಬರಿ ಮಲೆಯ ಸನ್ನಿದಾನದಲ್ಲಿ ಸೆಟ್ಟೇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

VISTARANEWS.COM


on

Yogi Babu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ‘ತೂತು ಮಡಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಗುರುತಿಸಿಕೊಂಡಿರುವ ನಿರ್ಮಾಪಕ ಮಧುಸೂದನ್ ರಾವ್ ಬಿಗ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಚಿತ್ರಕ್ಕೆ ‘ಸನ್ನಿಧಾನ ಪಿ.ಒ’ ಎಂದು ಶೀರ್ಷಿಕೆ ಇಡಲಾಗಿದ್ದು ಜನವರಿ 14 ಸಂಕ್ರಾಂತಿಯಂದು ಸಿನಿಮಾ ಶಬರಿ ಮಲೆಯ ಸನ್ನಿಧಾನದಲ್ಲಿ ಸೆಟ್ಟೇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.ತಮಿಳಿನ ಖ್ಯಾತ ನಟ ಯೋಗಿ ಬಾಬು (Yogi Babu) ಚಿತ್ರದಲ್ಲಿದ್ದಾರೆ.

‘ಸನ್ನಿಧಾನ ಪಿ.ಒ’ ಚಿತ್ರವನ್ನು ಮಲಯಾಳಂ ನಿರ್ದೇಶಕ ರಾಜೀವ್ ವೈದ್ಯ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಜನವರಿ 14ರಂದು ಸಿನಿಮಾ ಸೆಟ್ಟೇರಲಿದೆ. ತಮಿಳಿನ ಖ್ಯಾತ ನಟ ಯೋಗಿ ಬಾಬು, ಸ್ಯಾಂಡಲ್ ವುಡ್ ಪ್ರತಿಭಾವಂತ ಕಲಾವಿದ ಪ್ರಮೋದ್ ಶೆಟ್ಟಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರದ ತಾರಾ ಬಳಗ, ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ಹಂಚಿಕೊಳ್ಳುವುದಾಗಿ ನಿರ್ಮಾಪಕ ಮಧುಸುಧನ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Thala-Thalapathy Fans War | ತುನಿವು- ವಾರಿಸು ಸಿನಿಮಾಗಳ ಮೊದಲ ದಿನದ ಕಲೆಕ್ಷನ್‌ ಎಷ್ಟು?

ಸರ್ವತ ಸಿನಿ ಗ್ಯಾರೇಜ್, ಶಿಮೊಗ್ಗ ಕ್ರಿಯೇಷನ್ಸ್ ಬ್ಯಾನರ್ ಜತೆಗೂಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಮಧುಸುಧನ್ ರಾವ್ ಹಾಗೂ ಶಬೀರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವಿನೋದ್‌ ಭಾರತಿ ಛಾಯಾಗ್ರಹಣ ಚಿತ್ರಕ್ಕಿದೆ.

ಇದನ್ನೂ ಓದಿ | Thala-Thalapathy Fans War | ತುನಿವು- ವಾರಿಸು ಸಿನಿಮಾಗಳ ಮೊದಲ ದಿನದ ಕಲೆಕ್ಷನ್‌ ಎಷ್ಟು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actress Sunaina: ಸದ್ದಿಲ್ಲದೇ ಎಂಗೇಜ್‌ ಆದ ‘ಗಂಗೆ ಬಾರೆ ತುಂಗೆ ಬಾರೆ’ ನಾಯಕಿ!

Actress Sunaina: ಸುನೈನಾ ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ‘ರೆಜಿನಾ’ ಅನ್ನೋ ತಮಿಳು ಸಿನಿಮಾದಲ್ಲಿ ನಟಿಸಿದ್ದರು. ‘ಕುಮಾರ್ Vs ಕುಮಾರಿ’ ಅನ್ನೋ ತೆಲುಗು ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.

VISTARANEWS.COM


on

Actress Sunaina To Get Married Soon
Koo

ಪ್ರಜ್ವಲ್‌ ದೇವರಾಜ್‌ (Prajwal Devaraj) ನಟನೆಯ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾ ನಟಿ ಸುನೈನಾ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಇದೀಗ ಸುನೈನಾ ಸದ್ದಿಲ್ಲದೇ ಎಂಗೇಜ್‌ ಆಗಿದ್ದಾರೆ.

ಸುನೈನಾ ಈಗ ಮದುವೆಗೆ ಸಿದ್ಧರಾಗಿದ್ದಾರೆ. ಕದ್ದು ಮುಚ್ಚಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ನಟಿ ಸುನೈನಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಫ್ಯಾನ್ಸ್‌ಗೆ ಆತಂಕ ಆಗಿತ್ತು.

ಸುನೈನಾ ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ‘ರೆಜಿನಾ’ ಅನ್ನೋ ತಮಿಳು ಸಿನಿಮಾದಲ್ಲಿ ನಟಿಸಿದ್ದರು. ‘ಕುಮಾರ್ Vs ಕುಮಾರಿ’ ಅನ್ನೋ ತೆಲುಗು ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.

ಇದನ್ನೂ ಓದಿ: Kotee Movie Kannada: ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​!

2008ರಲ್ಲಿ ಪ್ರಜ್ವಲ್ ದೇವರಾಜ್ ನಟಿಸಿದ್ದ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾದಲ್ಲಿ ಗಂಗೆಯ ಪಾತ್ರದಲ್ಲಿ ಮಿಂಚಿದ್ದರು. ಇದೇ ಅವರ ಕೊನೆಯ ಕನ್ನಡ ಸಿನಿಮಾ.

Continue Reading

ಸ್ಯಾಂಡಲ್ ವುಡ್

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

Niveditha Gowda: ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಕೆಲವರು ಕಮೆಂಟ್‌ನಲ್ಲಿ ಇವರ ಡಿವೋರ್ಸ್‌ಗೆ ಸೃಜನ್‌ ಲೋಕೇಶ್‌ ಕಾರಣ ಎನ್ನುತ್ತಿದ್ದಾರೆ. ‘

VISTARANEWS.COM


on

Niveditha Gowda reason behind srujan lokesh name
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ  ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅವರಿಬ್ಬರೂ ಒಂದೇ ಕಾರಿನಲ್ಲಿ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಕೈಕೈ ಹಿಡಿದುಕೊಂಡು ವಾಪಸ್‌ ಹೊರಟಿದ್ದರು. ಸೋಶಿಯಲ್ ಮೀಡಿಯಾಗಳಲ್ಲಿ ಜನಪ್ರಿಯರಾಗಿದ್ದ ಈ ಜೋಡಿಯು ಬೇರ್ಪಡುವುದು ಅವರ ಫಾಲೋವರ್ಸ್​ಗಳಿಗೆ ಅಚ್ಚರಿಯ ವಿಷಯ. ಇನ್ನು ಚಂದನ್- ನಿವೇದಿತಾ ಡಿವೋರ್ಸ್ ವಿಚಾರದಲ್ಲಿ ಕೆಲವರು ನಟ ಸೃಜನ್ ಲೋಕೇಶ್ ಹೆಸರು ಎಳೆದುತಂದು ಟ್ರೋಲ್ ಮಾಡುತ್ತಿದ್ದಾರೆ.

ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಕೆಲವರು ಕಮೆಂಟ್‌ನಲ್ಲಿ ಇವರ ಡಿವೋರ್ಸ್‌ಗೆ ಸೃಜನ್‌ ಲೋಕೇಶ್‌ ಕಾರಣ ಎನ್ನುತ್ತಿದ್ದಾರೆ. ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ನಿವೇದಿತಾ ಕಾಣಿಸಿಕೊಂಡಿದ್ದರು. ಇನ್ನು ಬಳಿಕ ಬಂದ ‘ರಾಜಾ ರಾಣಿ’ ಚಂದನ್- ನಿವೇದಿತಾ ಭಾಗಿ ಆಗಿದ್ದರು. ಎರಡರಲ್ಲಿಯೂ ಸೃಜನ್‌ ಲೋಕೇಶ್‌ ತೀರ್ಪುಗಾರರಾಗಿದ್ದರು. ಹಾಗಾಗಿ ಸೃಜನ್ ಹಾಗೂ ನಿವೇದಿತಾ ನಡುವೆ ಒಳ್ಳೆ ಬಾಂಧವ್ಯ ಇತ್ತು, ಪ್ರೇಮಕ್ಕೆ ಹೊರತಾದ ಬಾಂಧವ್ಯ ಇರಬಹುದು ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ನಿವೇದಿತಾ ಹುಟ್ಟು ಹಬ್ಬಕ್ಕೆ ಚಂದನ್‌ ಕೂಡ ವಿಶ್‌ ಮಾಡಿದ್ದರು. ಸೃಜನ್‌ ಕೂಡ ನಿವೇದಿತಾಗೆ ವಿಶ್‌ ಮಾಡಿ ವಿಡಿಯೊ ಹಂಚಿಕೊಂಡಿದ್ದರು. ಸೃಜನ್ ಲೋಕೇಶ್ ಹಂಚಿಕೊಂಡಿದ್ದ ವೀಡಿಯೋದ ಹಿನ್ನೆಲೆಯಲ್ಲಿ ಬರುವ ಹಾಡಿನ ಬಗ್ಗೆಯೂ ಕೆಲವರು ಕಮೆಂಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕೆಟ್ಟದ್ದಾಗಿ ಕಮೆಂಟ್‌ ಮಾಡುವರನ್ನು ತರಾಟೆಗೂ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Kotee Movie Kannada: ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​!

ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ-ಚಂದನ್‌

ʻʻಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾಧ್ಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

Continue Reading

ಬಾಲಿವುಡ್

Aamir Khan: ವಡೋದರಾದಲ್ಲಿ ‘ಸಿತಾರೆ ಜಮೀನ್ ಪರ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆಮೀರ್‌ ಖಾನ್‌!

Aamir Khan: ಸಿತಾರೆ ಜಮೀನ್ ಪರ್ ಚಿತ್ರದ ಬ್ಯಾಕ್-ಟು-ಬ್ಯಾಕ್ ಚಿತ್ರೀಕರಣದಲ್ಲಿ ಆಮೀರ್ ಖಾನ್ ನಿರತರಾಗಿದ್ದಾರೆ. ದೆಹಲಿಯಲ್ಲಿ ಚಿತ್ರೀಕರಣ ಮುಗಿಸಿದ ನಂತರ, ಅವರು ಈಗ ಬರೋಡದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸೂಪರ್‌ಸ್ಟಾರ್ ಬಿಸಿಲಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ.” ಸಿತಾರೆ ಜಮೀನ್ ಪರ್ ಚಿತ್ರವನ್ನು ಆರ್ ಎಸ್ ಪ್ರಸನ್ನ ಅವರು ನಿರ್ದೇಶಿಸಲಿದ್ದಾರೆ. ಚಿತ್ರದಲ್ಲಿ ಜೆನಿಲಿಯಾ ಡಿಸೋಜಾ ಮತ್ತು ದರ್ಶೀಲ್ ಸಫಾರಿ ಕೂಡ ನಟಿಸಿದ್ದಾರೆ.

VISTARANEWS.COM


on

Aamir Khan shooting for Sitaare Zameen Par in Vadodara
Koo

ಬೆಂಗಳೂರು: `ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸೋತ ಬಳಿಕ ಆಮೀರ್‌ ಖಾನ್‌ (Aamir Khan) ಮುಂದಿನ ಪ್ರಾಜೆಕ್ಟ್‌ ಘೋಷಿಸಿದ್ದರು. ಅದುವೇ ‘ಸಿತಾರೆ ಜಮೀನ್ ಪರ್’. 2007ರಲ್ಲಿ ದರ್ಶೀಲ್ ಸಫಾರಿ ಮತ್ತು ಆಮೀರ್ ಖಾನ್ (Aamir Khan) ನಟನೆಯ ‘ತಾರೆ ಜಮೀನ್ ಪರ್’ (Taare Zameen Par) ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಆಮೀರ್ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ಡಿಸ್ಲೆಕ್ಸಿಯಾದಿಂದ ಬಳಲುತ್ತಿರುವ ಚಿಕ್ಕ ಹುಡುಗನ ಕುರಿತಾಗಿ ಈ ಸಿನಿಮಾ ಇತ್ತು. ಅಮೋಲ್ ಗುಪ್ತೆ ಬರೆದ ಈ ಚಿತ್ರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯಿತು. ಇದೀಗ ಆಮೀರ್ ಖಾನ್ ದೆಹಲಿಯಲ್ಲಿ ಚಿತ್ರೀಕರಣದ ನಂತರ, ಗುಜರಾತ್‌ನ ವಡೋದರದಲ್ಲಿ ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿತಾರೆ ಜಮೀನ್ ಪರ್ ಚಿತ್ರದ ಬ್ಯಾಕ್-ಟು-ಬ್ಯಾಕ್ ಚಿತ್ರೀಕರಣದಲ್ಲಿ ಆಮೀರ್ ಖಾನ್ ನಿರತರಾಗಿದ್ದಾರೆ. ದೆಹಲಿಯಲ್ಲಿ ಚಿತ್ರೀಕರಣ ಮುಗಿಸಿದ ನಂತರ, ಅವರು ಈಗ ಬರೋಡದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸೂಪರ್‌ಸ್ಟಾರ್ ಬಿಸಿಲಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ.” ಸಿತಾರೆ ಜಮೀನ್ ಪರ್ ಚಿತ್ರವನ್ನು ಆರ್ ಎಸ್ ಪ್ರಸನ್ನ ಅವರು ನಿರ್ದೇಶಿಸಲಿದ್ದಾರೆ. ಚಿತ್ರದಲ್ಲಿ ಜೆನಿಲಿಯಾ ಡಿಸೋಜಾ ಮತ್ತು ದರ್ಶೀಲ್ ಸಫಾರಿ ಕೂಡ ನಟಿಸಿದ್ದಾರೆ.

ಮಾಧ್ಯಮವೊಂದರ ಸಂವಾದದ ಸಮಯದಲ್ಲಿ, ನಟ ಆಮೀರ್ ಖಾನ್ ಮಾತನಾಡಿ, “ನಾಯಕ ನಟನಾಗಿ ನನ್ನ ಮುಂದಿನ ಚಿತ್ರ ‘ಸಿತಾರೆ ಜಮೀನ್ ಪರ್’. ನಾವು ಇದನ್ನು ಈ ವರ್ಷದ ಕೊನೆಯಲ್ಲಿ ಕ್ರಿಸ್ಮಸ್ ಸಂದರ್ಭದಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ. ಇದು ಮನರಂಜನಾ ಚಿತ್ರ. ಶೂಟಿಂಗ್‌ ಈಗಾಗಲೇ ಶುರುವಾಗಿದೆʼʼಎಂದು ಹೇಳಿಕೊಂಡಿದ್ದಾರೆ. ಜತೆಗೆ ಈ ಚಿತ್ರದಲ್ಲಿ ಆಮೀರ್‌ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆಮೀರ್‌ ಅವರು ‘ಅತೀ ಸುಂದರ್’ (‘Aati Sundar’) ಚಿತ್ರದಲ್ಲಿ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. 

ಇದನ್ನೂ ಓದಿ: Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

ತಾರೆ ಜಮೀನ್ ಪರ್ ಸಿನಿಮಾ ಹೇಗಿರಲಿದೆ?

ಈ ಮುಂಚೆ ಆಮೀರ್‌ ಈ ಸಿನಿಮಾ ಕುರಿತು ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದರು. ʻʻಈ ಚಿತ್ರದ ಹೆಸರು ‘ಸಿತಾರೆ ಜಮೀನ್ ಪರ್’ ಏಕೆಂದರೆ ನಾವು ಅದೇ ಥೀಮ್‌ನೊಂದಿಗೆ ಮುಂದೆ ಹೋಗುತ್ತಿದ್ದೇವೆ. ‘ತಾರೆ ಜಮೀನ್ ಪರ್’ ಭಾವನಾತ್ಮಕ ಚಿತ್ರವಾಗಿತ್ತು. ಈ ಚಿತ್ರ ನಿಮ್ಮನ್ನು ನಗಿಸುತ್ತದೆ. ಆ ಚಿತ್ರವು ನಿಮ್ಮನ್ನು ಅಳುವಂತೆ ಮಾಡಿತು, ಇದು ನಿಮಗೆ ಮನರಂಜನೆ ನೀಡುತ್ತದೆʼಎಂದು ಮಾಹಿತಿ ಹಂಚಿಕೊಂಡಿದ್ದರು.

ನಟ ಮಾತು ಮುಂದುವರಿಸಿʻʻ ಆದರೆ ಸಿನಿಮಾ ಥೀಮ್ ಒಂದೇ ಆಗಿರುತ್ತದೆ. ಅದಕ್ಕಾಗಿಯೇ ನಾವು ಈ ಹೆಸರನ್ನು ಬಹಳ ಯೋಚನೆ ಮಾಡಿ ಇಟ್ಟುಕೊಂಡಿದ್ದೇವೆ. ನಮ್ಮೆಲ್ಲರಲ್ಲೂ ನ್ಯೂನತೆ ಹಾಗೂ ದೌರ್ಬಲ್ಯಗಳು ಇರುತ್ತವೆ. ಜತೆಗೆ ನಮ್ಮೆಲ್ಲರಿಗೂ ಏನಾದರೂ ವಿಶೇಷತೆಯೂ ಇರುತ್ತದೆ. ಆ ಚಿತ್ರದಲ್ಲಿ ವಿಶೇಷ ಮಗು ಇಶಾನ್ ಪಾತ್ರವಾಗಿತ್ತು. ನನ್ನ ಪಾತ್ರವು ‘ತಾರೆ ಜಮೀನ್ ಪರ್’ನಲ್ಲಿ ಆ ಪಾತ್ರಕ್ಕೆ ಸಹಾಯ ಮಾಡಿತ್ತು. ‘ಸಿತಾರೆ ಜಮೀನ್ ಪರ್’ನಲ್ಲಿ, ತಮ್ಮದೇ ಆದ ಸಮಸ್ಯೆಗಳನ್ನು ಹೊಂದಿರುವ ಆ ಒಂಬತ್ತು ಹುಡುಗರು ನನಗೆ ಸಹಾಯ ಮಾಡುತ್ತಾರೆ, ಹಾಗಾಗಿ ಕಥೆ ವಿರುದ್ಧವಾಗಿರಲಿದೆʼʼ ಎಂದಿದ್ದರು.

ತಾರೆ ಜಮೀನ್ ಪರ್’ ಸಿನಿಮಾದಲ್ಲಿ ಹುಡುಗನ ಸಮಸ್ಯೆಯನ್ನು ಅರ್ಥಮಾಡಿಕೊಳ್ಳದ ಹೆತ್ತವರು ಅವನನ್ನು ಬೋರ್ಡಿಂಗ್ ಶಾಲೆಗೆ ಸೇರಿಸುತ್ತಾರೆ. ಶಿಕ್ಷಕ ಆಮೀರ್‌ ಖಾನ್ ಭೇಟಿಯಾಗುತ್ತಾರೆ. ಈ ಸಿನಿಮಾದಲ್ಲಿ ದರ್ಶೀಲ್ ನಟನೆಗೆ ಮೆಚ್ಚುಗೆ ಸಿಕ್ಕಿತ್ತು. ‘ತಾರೆ ಜಮೀನ್ ಪರ್’ 21 ಡಿಸೆಂಬರ್ 2007 ರಂದು ಬಿಡುಗಡೆಯಾಗಿತ್ತು.

Continue Reading

ಸ್ಯಾಂಡಲ್ ವುಡ್

Kotee Movie Kannada: ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​!

Kotee Movie Kannada: ಈಗಾಗಲೇ ‘ಕೋಟಿ’ ಚಿತ್ರದ ಟ್ರೈಲರ್‌ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

VISTARANEWS.COM


on

Kotee Movie Kannada Team Gives First Ticket To Kichcha Sudeep
Koo

ಬೆಂಗಳೂರು: ಡಾಲಿ‌ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ (Kotee Movie Kannada) ಮೊದಲ‌ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ಧೂರಿಯಾಗಿ ನಡೆದ ʻಕೋಟಿʼ ಸಿನಿಮಾದ ವಿಶೇಷ ಪ್ರೀ ರಿಲೀಸ್ ಟಿವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ನೆರೆದಿದ್ದ ಜನರ ರಂಜಿಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ʻಕೋಟಿʼಯ ಮೊದಲ ಟಿಕೇಟ್ ನೀಡಿತು. ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ನಾಯಕನಟ ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು‌ ಸಿಗಲಿ ಎಂದು ಶುಭ ಕೋರಿದರು.

ಈಗಾಗಲೇ ‘ಕೋಟಿ’ ಚಿತ್ರದ ಟ್ರೈಲರ್‌ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ.

ಇದನ್ನೂ ಓದಿ: Swara Bhasker: ತೂಕ ಹೆಚ್ಚಾಗಿದ್ದರಿಂದ ಸಿನಿಮಾಗಳಲ್ಲಿ ಕೆಲಸ ಸಿಗುತ್ತಿಲ್ಲ; ಬಾಡಿ ಶೇಮ್‌ ಮಾಡಿದಕ್ಕೆ ಸ್ವರಾ ಭಾಸ್ಕರ್ ಗರಂ!

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading
Advertisement
Actress Sunaina To Get Married Soon
ಸ್ಯಾಂಡಲ್ ವುಡ್8 mins ago

Actress Sunaina: ಸದ್ದಿಲ್ಲದೇ ಎಂಗೇಜ್‌ ಆದ ‘ಗಂಗೆ ಬಾರೆ ತುಂಗೆ ಬಾರೆ’ ನಾಯಕಿ!

Bhavani Revanna
ಕರ್ನಾಟಕ45 mins ago

Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

Niveditha Gowda reason behind srujan lokesh name
ಸ್ಯಾಂಡಲ್ ವುಡ್1 hour ago

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

Valmiki Corporation Scam
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ; ನಿಗಮ, ಮಂಡಳಿಗಳಿಗೆ ಪತ್ರ ಬರೆದ ಹಣಕಾಸು ಇಲಾಖೆ

Prashant Kishor
ದೇಶ2 hours ago

Prashant Kishor: “ಇನ್ನೆಂದೂ ಚುನಾವಣಾ ಭವಿಷ್ಯ ನುಡಿಯಲ್ಲ”; ಫಲಿತಾಂಶದ ಬಳಿಕ ಪ್ರಶಾಂತ್‌ ಕಿಶೋರ್‌ ಫಸ್ಟ್‌ ರಿಯಾಕ್ಷನ್‌

Fire Accident
ಕರ್ನಾಟಕ2 hours ago

Fire Accident: ಹಾವೇರಿಯಲ್ಲಿ ಧಗಧಗಿಸಿದ ಬೆಂಕಿ; ಸುಟ್ಟು ಭಸ್ಮವಾಯ್ತು 5 ಅಂಗಡಿ

Aamir Khan shooting for Sitaare Zameen Par in Vadodara
ಬಾಲಿವುಡ್2 hours ago

Aamir Khan: ವಡೋದರಾದಲ್ಲಿ ‘ಸಿತಾರೆ ಜಮೀನ್ ಪರ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆಮೀರ್‌ ಖಾನ್‌!

CWC Meeting
ದೇಶ2 hours ago

CWC Meeting: ಇಂದು ದೆಹಲಿಯಲ್ಲಿ CWC ಸಭೆ; ಇಂದೇ ನಿರ್ಧಾರ ಆಗುತ್ತಾ ವಿಪಕ್ಷ ನಾಯಕ ಸ್ಥಾನ?

NDA 3.0
ಕರ್ನಾಟಕ2 hours ago

NDA 3.0: ರಾಜ್ಯಕ್ಕೆ ಸಿಗಲಿದ್ಯಾ 2+1 ಸಚಿವ ಸ್ಥಾನ? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

Lok Sabha Election 2024
ರಾಜಕೀಯ3 hours ago

Lok Sabha Election 2024: ಈ ಬಾರಿ 74 ಮಹಿಳಾ ಸಂಸದರು, ಯಾವ ಪಕ್ಷದಲ್ಲಿ ಎಷ್ಟು ಮಂದಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ16 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ18 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌