Yuva Rajkumar celebrates his birthday with fans Homable Films Poster Yuva Rajkumar: `ಯುವ' ಬರ್ತ್‌ಡೇಗೆ ಹೊಂಬಾಳೆಯಿಂದ ಹೊಸ ಪೋಸ್ಟರ್‌: AK 47 ಅಲ್ಲ, ಕ್ಷಿಪಣಿ ಅಂದಿದ್ಯಾಕೆ ರವಿಶಂಕರ್‌? - Vistara News

South Cinema

Yuva Rajkumar: `ಯುವ’ ಬರ್ತ್‌ಡೇಗೆ ಹೊಂಬಾಳೆಯಿಂದ ಹೊಸ ಪೋಸ್ಟರ್‌: AK 47 ಅಲ್ಲ, ಕ್ಷಿಪಣಿ ಅಂದಿದ್ಯಾಕೆ ರವಿಶಂಕರ್‌?

ಯುವರಾಜ್‌ಕುಮಾರ್‌ (Yuva Rajkumar) ಅವರ ಚೊಚ್ಚಲ ʻಯುವʼ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡುತ್ತಿದೆ. ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ‘ಹೊಂಬಾಳೆ ಫಿಲ್ಮ್ಸ್​’ ಯುವ ರಾಜ್​ಕುಮಾರ್​ಗೆ ಶುಭಾಶಯ ಕೋರಿದೆ.

VISTARANEWS.COM


on

Yuva Rajkumar celebrates his birthday with fans Homable Films Poster
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಯ ಮಗ ಯೂತ್ ಸ್ಟಾರ್ ಯುವ ರಾಜ್‌ಕುಮಾರ್ (Yuva Rajkumar) ಏಪ್ರಿಲ್ 23ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಜನುಮದಿನಕ್ಕೆ ಸಿನಿ ಗಣ್ಯರು ಸೇರಿದಂತೆ ಯುವ ಅಭಿಮಾನಿಗಳು ಶುಭಾಶಯ ತಿಳಿಸಿಸುತ್ತಿದ್ದಾರೆ. ಯುವರಾಜ್‌ಕುಮಾರ್‌ ಅವರ ಚೊಚ್ಚಲ ʻಯುವʼ ಸಿನಿಮಾ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡುತ್ತಿದೆ. ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ‘ಹೊಂಬಾಳೆ ಫಿಲ್ಮ್ಸ್​’ ಯುವ ರಾಜ್​ಕುಮಾರ್​ಗೆ ಶುಭಾಶಯ ಕೋರಿದೆ.

ಯುವ ರಾಜ್‌ಕುಮಾರ್‌ ಅವರ ಜನುಮದಿನ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ. ಕೇಕ್ ಕಟ್ ಮಾಡುವುದರಿಂದ ಹಿಡಿದು ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ. ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಣೆ, ಪರಿಸರ ಸಂರಕ್ಷಣೆ ಹಿನ್ನೆಲೆಯಲ್ಲಿ ಸಸಿಯನ್ನು ವಿತರಣೆ ಮಾಡಲಿದ್ದಾರೆ.

ಹೊಂಬಾಳೆ ಫಿಲ್ಮ್ಸ್‌ ಪೋಸ್ಟರ್‌

ಸಂತೋಷ್ ಆನಂದ್ ರಾಮ್- ಯುವ ಕಾಂಬಿನೇಷನ್ ವಿಶೇಷವಾಗಿದೆ. ಡಿಸೆಂಬರ್ 22ರಂದು ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಅಜನೀಶ್ ಲೋಕನಾಥ್ ಸಂಗೀತ, ಶ್ರೀಶ ಕುದುವಳ್ಳಿ ಛಾಯಾಗ್ರಹಣ ‘ಯುವ’ ಚಿತ್ರಕ್ಕಿದೆ.

ಇದನ್ನೂ ಓದಿ: Kannnada New Film: ಯುವ ಪ್ರತಿಭೆಗಳಿಗೆ ನಾಗತಿಹಳ್ಳಿ ಚಂದ್ರಶೇಖರ್‌ ಸಾಥ್;‌ ಬನ್‌ ಟೀ ಸಿನಿಮಾದ ಟ್ರೈಲರ್‌ ರಿಲೀಸ್‌

AK 47 ಅಲ್ಲ, ಕ್ಷಿಪಣಿ ಎಂದ ರವಿಶಂಕರ್‌

ರವಿಶಂಕರ್ ಗೌಡ ‘ಯುವ’ ಸೆಟ್‌ಗೆ ಭೇಟಿ ಕೊಟ್ಟಿದ್ದರು. ಅಲ್ಲಿ ಯುವ ರಾಜ್‌ಕುಮಾರ್ ಆ್ಯಕ್ಷನ್ ನೋಡಿ ಬೆರಗಾಗಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ. ʻʻಶೂಟಿಂಗ್‌ ಸೆಟ್‌ಗೆ ಹೋಗಿದ್ದೆ. ಫೈಟಿಂಗ್‌ ಸೀಕ್ವೆನ್ಸ್‌ ನೋಡಿದೆ. ನಿರೀಕ್ಷೆ , ನಂಬಿಕೆ ಸುಳ್ಳಾಗಲಿಲ್ಲ. ಉತ್ತರಾಧಿಕಾರಿಯ ಪಟ್ಟಾಭಿಷೇಕಕ್ಕೆ ಅಣಿ ಮಾಡಿಕೊಳ್ಳಿ. ನೀವು ಅಂದುಕೊಂಡಿರುವ ಹಾಗೆ ಇದು AK 47 ಅಲ್ಲ, ಕ್ಷಿಪಣಿ. ಜನುಮ ದಿನದ ಶುಭಾಶಯಗಳು ಪ್ರೀತಿಯ ಯುವ ರಾಜʼʼ ಎಂದು ಬರೆದುಕೊಂಡಿದ್ದಾರೆ.

ಅಪ್ಪು ದಾರಿಯಲ್ಲೇ…

20 ವರ್ಷಗಳ ಹಿಂದೆ ಪುನೀತ್ ರಾಜ್‌ಕುಮಾರ್ ‘ಅಪ್ಪು’ ಆಗಿ ಚಿತ್ರರಂಗದಲ್ಲಿ ಖ್ಯಾತಿ ಪಡೆದರು. ಮನೆಯಲ್ಲಿ ಎಲ್ಲರೂ ಪುನೀತ್ ರಾಜ್‌ಕುಮಾರ್ ಅವರನ್ನು ಅಪ್ಪು ಎಂದೇ ಕರೆಯುತ್ತಿದ್ದರು. ಹಾಗಾಗಿ ತಮ್ಮದೇ ಹೆಸರಿನ ಟೈಟಲ್ ಸಿನಿಮಾದಲ್ಲಿ ನಟಿಸಿ ಪುನೀತ್ ಗೆದ್ದರು. ಈಗ ಯುವ ಕೂಡ ತಮ್ಮದೇ ಹೆಸರಿನ ಟೈಟಲ್ ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅವರಿಗೆ ಯಶಸ್ಸು ಖಚಿತ ಅನ್ನುತ್ತಿದ್ದಾರೆ ಅಭಿಮಾನಿಗಳು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

ಸ್ಯಾಂಡಲ್ ವುಡ್

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Rakshit Shetty: ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Rakshit Shetty Ekam web series release date announce
Koo

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಈ ವೆಬ್‌ ಸಿರೀಸ್‌ ಜುಲೈ 13ರಂದು ರಿಲೀಸ್‌ ಆಗುತ್ತಿದೆ. ಈ ಬಗ್ಗೆ ರಕ್ಷಿತ್‌ ಶೆಟ್ಟಿ ಪೋಸ್ಟ್‌ ಮಾಡಿದ್ದು ಹೀಗೆ.  

ʻʻ2020 ಜನವರಿ. ಅಥವಾ ಫೆಬ್ರವರಿಯೇ? ನೆನಪು ಮಬ್ಬಾಗಿದೆ! ಇರಲಿ. ಪರಂವಃ ಹಾಗು ಜರ್ನಿಮ್ಯಾನ್‌
ಫಿಲಂಸ್‌ ಒಟ್ಟಿಗೆ “ಏಕಂ” ಮಾಡಲು ಹೊರಟಿದ್ದು ಅಂದು. ಏನೋ ಹೊಸತೊಂದನ್ನು ಮಾಡುವ
ಉತ್ಸಾಹ ನಮ್ಮಲ್ಲಿ. ಕನ್ನಡದಲ್ಲೊಂದು ವೆಬ್‌ ಸೀರೀಸ್‌ ಹೊರ ಬರಲು ಇದೆ ಸೂಕ್ತ ಸಮಯ
ಎಂದೆನಿಸಿತ್ತು. ಆದರೆ ಅದೇ ಸಮಯಕ್ಕೆ ಕೋವಿಡ್‌ ವಕ್ಕರಿಸಿತು! ಜಗತ್ತೇ ತಲೆ ಕೆಳಗಾದ ಸಮಯ.
ನಮ್ಮಲ್ಲೂ ಆತಂಕ, ಅನಿಶ್ಚಿತತೆ. ಆದರೂ ಹಿಂದೆ ಸರಿಯದೆ ಮುನ್ನುಗ್ಗಿದೆವು.

ಅಕ್ಟೋಬರ್‌ 2021. “ಏಕಂ”ನ ಫೈನಲ್‌ ಕಟ್‌ ನೋಡಿದೆ. ಖುಷಿ ಆಯಿತು. ಹೆಮ್ಮೆ ಎನಿಸಿತು.
ಇದನ್ನ ಜಗತ್ತಿಗೆ ತೋರಿಸಬೇಕೆನಿಸಿತು. ಅದಾಗಿ ಇಂದಿಗೆ ಬರೋಬ್ಬರಿ ಎರಡೂವರೆ ವರ್ಷಗಳು! “ಏಕಂ”
ಅನ್ನು ಹೊರ ತರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ! ಎಲ್ಲೆಡೆ ನಿರಾಸೆ. ಅದೇ ನೆಪ. ಅದೇ ಸಬೂಬು| ಯಾವುದೇ
ಕೃತಿಯ ಅರ್ಹತೆಯನ್ನ ನಿರ್ಧರಿಸುವ ಅವಕಾಶ, ಹಾಗು ಹಕ್ಕು. ಪ್ರೇಕ್ಷಕರಿಗಿರಬೇಕು ಎ೦ದು ನಾನು
ಭಾವಿಸುತ್ತೇನೆ.

ಇದನ್ನೂ ಓದಿ: Rakshit Shetty: ಸಿಂಪಲ್‌ ಸ್ಟಾರ್‌ಗೆ ಇಂದು ಜನುಮದಿನದ ಸಂಭ್ರಮ; ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

ಹಾಗಾಗಿ, “ಏಕಂ” ಅನ್ನು ನಾವು ನಮ್ಮದೇ ಆದ ವೇದಿಕೆಯಲ್ಲಿ ನಿಮ್ಮ ಮುಂದೆ ತರಲು ನಿಶ್ಚಯಿಸಿದ್ದೇವೆ.
‘ಏಕಂ” ನಿಮಗೆ ಇಷ್ಟವಾಗಬಹುದು. ಇಷ್ಟವಾಗದೇ ಇರಬಹುದು. ಆದರೆ ಈ ಪ್ರಯತ್ನವನ್ನು
ನಿರ್ಲಕ್ಷಿಸುವಂತಿಲ್ಲ ಎ೦ಬುದನ್ನು ನಾನು ಬಲವಾಗಿ. ನಂಬಿದ್ದೇನೆ. “ಏಕಂ” ಒಂದು ಶ್ಲಾಘನೀಯ ಪ್ರಯತ್ನ.
ಇದನ್ನು ನಾವು ಎಷ್ಟು ಪ್ರೀತಿಯಿಂದ ಮಾಡಿದ್ದೇವೋ, ಅಷ್ಟೇ ಪ್ರೀತಿಯಿಂದ ನೀವು ನಮ್ಮ ಈ ಪ್ರಯತ್ನವನ್ನ
ಸ್ವೀಕರಿಸುತ್ತೀರಿ ಎಂದು ಆಶಿಸುತ್ತೇನೆʼʼಎಂದು ರಕ್ಷಿತ್‌ ಶೆಟ್ಟಿ ಹೇಳಿಕೊಂಡಿದ್ದಾರೆ. ಇನ್ನು ಪೋಸ್ಟರ್‌ ಮಾಹಿತಿ ಪ್ರಕಾರ ಈ ಸಿರೀಸ್‌ ಜುಲೈ 13ರಂದು www.ekamtheseries.comನಲ್ಲಿ ರಿಲೀಸ್‌ ಆಗಲಿದೆ.

ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Kannada New Movie: ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

VISTARANEWS.COM


on

Kannada New Movie RAMARASA Hero Introduction By Kiccha Sudeepa
Koo

ಬೆಂಗಳೂರು: ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ “ಜಿ ಅಕಾಡೆಮಿ”ಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳೊಂದಿಗೆ ಖ್ಯಾತ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಈಗ “ರಾಮರಸ” ಚಿತ್ರಕ್ಕೆ ನಾಯಕನ‌ ಆಯ್ಕೆಯಾಗಿದೆ. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್‍, ‘ನಾನು ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಎಷ್ಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇನೆ. ಆದರೆ, ಪ್ರತಿ ಸೀಸನ್‍ನಲ್ಲೂ ಒಬ್ಬ ಹೊಸ ಹೀರೋ ಹುಟ್ಟಿಕೊಳ್ಳುತ್ತಿದ್ದಾನೆ. ‘ಬಿಗ್‍ ಬಾಸ್‍’ ಗೆಲ್ಲುವುದು ಅಷ್ಟು ಸುಲಭವಲ್ಲ. ಕಾರ್ತಿಕ್‍ ಅವರಿಗಂತೂ ಬಹಳಷ್ಟು ಸ್ಪರ್ಧಿಗಳಿದ್ದರು. ಅದು ಅವರಿಗೆ ಗೊತ್ತು. “ಬಿಗ್ ಬಾಸ್” ಗೆದ್ದ ಮೇಲೆ ಕಾರ್ತಿಕ್ ಅವರಿಗೆ ಒಳ್ಳೆಯ ಅವಕಾಶಗಳು ಬರುತ್ತಿದೆ‌. ಕಾರ್ತಿಕ್ ಸರಿಯಾದ ಹಾದಿಯಲ್ಲಿದ್ದಾರೆ. ಪ್ಯಾಷನೇಟ್‍ ಜನರು ಅವರ ಜೊತೆಯಾಗಿದ್ದಾರೆ. ಈ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ’ ಎಂದು ಹಾರೈಸಿದರು. ನಿರ್ಮಾಪಕ ಗುರು ದೇಶಪಾಂಡೆ ನಿರ್ಮಾಣದ ಶೈಲಿ ಹಾಗೂ ನಿರ್ದೇಶಕ ಗಿರಿರಾಜ್ ಅವರ ಕಾರ್ಯವೈಖರಿಯನ್ನು ಸುದೀಪ್ ಶ್ಲಾಘಿಸಿದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ನಾಯಕ ಕಾರ್ತಿಕ್‍ ಮಹೇಶ್‍ ಮಾತನಾಡಿ, ʻʻಮೊದಲಿನಿಂದಲೂ ನನಗೆ ಸುದೀಪ್ ಸರ್ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಅವರಿಗೆ ಹಾಗೂ ಈ ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ, ನಿರ್ದೇಶಕರಿಗೆ ಧನ್ಯವಾದಗಳು. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ. ಸುದೀಪ್ ಅವರ ಮೇಲೆ ನನಗೆ ವಿಶೇಷ ಪ್ರೀತಿ ಹಾಗೂ ಗೌರವ. ಹಾಗಾಗಿ “ಬಿಗ್ ಬಾಸ್” ಫಿನಾಲೆಯಲ್ಲಿ ಅವರು ಕೊಟ್ಟಿದ್ದ ಡ್ರೆಸ್ ಅನ್ನು ಇಂದು ಹಾಕಿಕೊಂಡು ಬಂದಿದ್ದೇನೆʼʼ ಎಂದರು.

ʻʻಪ್ರತಿಯೊಬ್ಬ ನಿರ್ದೇಶಕನಿಗೂ ಗುರು ದೇಶಪಾಂಡೆ ಅವರಂತಹ‌ ನಿರ್ಮಾಪಕರು ಸಿಗಬೇಕು.‌ ಅವರಿಗೆ ಸಿನಿಮಾ ಮೇಲೆ ತುಂಬಾ ಪ್ರೀತಿ. ಅದ್ದೂರಿಯಾಗಿ ಮೂಡಿಬಂದಿರುವ ನಾಯಕನ ಪರಿಚಯದ ವಿಶೇಷ ವಿಡಿಯೋ ಅದಕ್ಕೆ ಸಾಕ್ಷಿ. ಕಾರ್ತಿಕ್ ಮಹೇಶ್ ಅವರು ಈ ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಸುದೀಪ್ ಅವರು ನಾಯಕನನ್ನು ಪರಿಚಯಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆʼʼ ಎಂದರು ನಿರ್ದೇಶಕ ಗಿರಿರಾಜ್.

ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಅವರೊಂದಿಗೆ ಜನಪ್ರಿಯ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ನಾನು ಮೊದಲು ತಿಳಿಸಿದೆ. “ರಾಮರಸ” ಚಿತ್ರಕ್ಕೆ ಕಾರ್ತಿಕ್ ಮಹೇಶ್ ನಾಯಕನಾಗಿದ್ದಾರೆ. ನಮ್ಮ ಚಿತ್ರದ ನಾಯಕನನ್ನು ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ಅನಂತ ಧನ್ಯವಾದಗಳು ಎಂದರು ನಿರ್ಮಾಪಕ ಗುರು ದೇಶಪಾಂಡೆ.

‘ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ, ಎ.ವಿ. ಕೃಷ್ಣಕುಮಾರ್, ಅರ್ಜುನ್‍ ಕಿಟ್ಟು ಸಂಕಲನವಿದೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆಯಿರುವ ಈ‌ ಚಿತ್ರದ ಕಾರ್ಯಕಾರಿ ನಿರ್ಮಾಪಕರು‌ ಸುನೀಲ್ ಹೆಚ್ ಸಿ ಗೌಡ.

Continue Reading

ಕ್ರೈಂ

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Actor Darshan: ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

VISTARANEWS.COM


on

Actor Darshan tagadu word umapathy counter now
Koo

ಬೆಂಗಳೂರು: ʻಕಾಟೇರʼ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ದರ್ಶನ್‌ (Actor Darshan) ʻರಾಬರ್ಟ್ʼ ಸಿನಿಮಾದ ನಿರ್ಮಾಪಕ ಉಮಾಪತಿಗೆ ‘ತಗಡು’ ಇನ್ನಿತರೆ ಕಠು ಪದಗಳನ್ನು ಬಳಸಿ ನಿಂದಿಸಿದ್ದರು. ಇದಾದ ಬಳಿಕ ನಿರ್ಮಾಪಕ ಉಮಾಪತಿ ಕೂಡ ಬೇಸರದಲ್ಲಿಯೇ ಪ್ರತಿಕ್ರಿಯೆ ನೀಡಿದ್ದರು. ಇದೀಗ ದರ್ಶನ್‌ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಅಂದು ʻತಗಡುʼ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಪರೋಕ್ಷವಾಗಿ ಪೋಸ್ಟ್‌ ಮೂಲಕ ತಿರುಗೇಟು ಕೊಟ್ಟಿದ್ದಾರೆ. “ತಾಳ್ಮೆ ಕೆಲವೊಮ್ಮೆ ಶಕ್ತಿ” ಎಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ ಉಮಾಪತಿ.

ತಗಡು ಯಾರು ಗೊತಾಯ್ತಾ? ಎಂದು ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ ಉಮಾಪತಿ. ಉಮಾಪತಿ ಪರವಾಗಿ ಹಲವು ಮೀಮ್ಸ್ ವೈರಲ್ ಆಗಿದ್ದವು. ಇವುಗಳನ್ನು ರಿಪೋಸ್ಟ್‌ ಮಾಡಿಕೊಳ್ಳುತ್ತಿದ್ದಾರೆ ಉಮಾಪತಿ.

ದರ್ಶನ್‌ ಉಮಾಪತಿಗೆ ವಾರ್ನಿಂಗ್‌ ನೀಡಿದ್ದೇನು?

ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು

ನಟ ದರ್ಶನ್ ಬಳಸಿದ ಪದ ಬಳಕೆ ಬಗ್ಗೆ ಬಳಿಕ ಉಮಾಪತಿ ಮಾತನಾಡಿ ʻʻಅದು ತಪ್ಪು ಸರ್, ಸಮಸ್ಯೆಗಳು ಎಲ್ಲ ಕಡೆ ಬರುತ್ತದೆ. ಆದರೆ ಅದನ್ನು ಹ್ಯಾಂಡಲ್ ಮಾಡುವ ರೀತಿ ಗೊತ್ತಿರಬೇಕು. ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ನಡೆದುಕೊಳ್ಳಬೇಕು. ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು. ನಾನು ತಪ್ಪು ಮಾಡಿದರೂ ತಪ್ಪೆ. ಬೇರೆ ಯಾರಾದರೂ ತಪ್ಪು ಮಾಡಿದರೆ ತಪ್ಪೇ. ನಾವೆಲ್ಲ ಸಿನಿಮಾ ಮುಖಾಂತರ ಮೆಸೆಜ್ ಕೊಡಬೇಕು. ಈ ವಿವಾದಿಂದ ಸಂದೇಶ ಕೊಡುವಂತದ್ದು ಏನಿಲ್ಲʼʼಎಂದಿದ್ದರು.

Continue Reading
Advertisement
Sidhartha Mallya
ಸಿನಿಮಾ2 mins ago

Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

murder case
ಕ್ರೈಂ18 mins ago

Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

How Much Salt Is Too Much
ಆರೋಗ್ಯ35 mins ago

How Much Salt Is Too Much: ಉಪ್ಪು ಅತಿಯಾಗದಿರಲಿ; ದಿನಕ್ಕೆ ನಾವೆಷ್ಟು ಉಪ್ಪು ತಿನ್ನುತ್ತಿದ್ದೇವೆ ಗೊತ್ತಿರಲಿ

T20 World Cup 2024
ಕ್ರೀಡೆ37 mins ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

Narendra Modi
ದೇಶ49 mins ago

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Team India Coach
ಕ್ರೀಡೆ1 hour ago

Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

pattanagere shed actor darshan renuka swamy murder
ಕ್ರೈಂ2 hours ago

Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ?

Beer Side Effect
ಆರೋಗ್ಯ2 hours ago

Beer Side Effect: ಬಿಯರ್‌ ಕುಡಿದರೆ ತೂಕ ಹೆಚ್ಚುತ್ತದೆ ಎನ್ನುವುದು ನಿಜವೇ?

Nuclear Weapon
ದೇಶ2 hours ago

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು22 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು23 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌