ಗೋಧಿ ರಫ್ತು ನಿಷೇಧಕ್ಕೆ ಜರ್ಮನಿ ಟೀಕೆ - Vistara News

ವಾಣಿಜ್ಯ

ಗೋಧಿ ರಫ್ತು ನಿಷೇಧಕ್ಕೆ ಜರ್ಮನಿ ಟೀಕೆ

ಭಾರತ ಬೆಲೆ ಏರಿಕೆಯ ನಿಯಂತ್ರಣ ಮತ್ತು ರಫ್ತು ವ್ಯವಸ್ಥೆಯ ಸುಧಾರಣೆಗೋಸ್ಕರ ಗೋಧಿ ರಫ್ತಿನ ನಿಷೇಧ ನಿರ್ಧಾರ ಕೈಗೊಂಡಿದೆ. ಆದರೆ ಶ್ರೀಮಂತ ಜಿ 7 ರಾಷ್ಟ್ರಗಳ ಒಕ್ಕೂಟ ಇದಕ್ಕೆ ಅಪಸ್ವರ ಹೊರಡಿಸಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಭಾರತ ಗೋಧಿ ರಫ್ತಿಗೆ ನಿಷೇಧಿಸಿದ್ದು, ಸರಕಾರದ ಅನುಮತಿ ಇಲ್ಲದೆ ರಫ್ತು ಮಾಡುವಂತಿಲ್ಲ. ಕಳೆದ ಮಾರ್ಚ್‌ ನಲ್ಲಿ ಬಿಸಿಗಾಳಿಗೆ ಗೋಧಿ ಉತ್ಪಾದನೆಗೆ ಹೊಡೆತ ಬಿದ್ದಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಗೆ ಕೊರತೆ ಆಗಬಾರದು ಎಂಬ ಕಾರಣಕ್ಕೆ ರಫ್ತಿಗೆ ಸರಕಾರ ನಿರ್ಬಂಧ ಹೇರಿದೆ. ಆದರೆ ಜಿ 7 ರಾಷ್ಟ್ರಗಳ ಒಕ್ಕೂಟ ( ಕೆನಡಾ, ಫ್ರಾನ್ಸ್‌, ಜರ್ಮನಿ, ಇಟಲಿ, ಜಪಾನ್‌, ಬ್ರಿಟನ್‌ ಮತ್ತು ಅಮೆರಿಕ) ಇದಕ್ಕೆ ಅಪಸ್ವರ ಹೊರಡಿಸಿದೆ.

ರಷ್ಯಾ ಮತ್ತು ಉಕ್ರೇನ್‌ ಸಮರದ ತರುವಾಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೋಧಿಯ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಭಾರತದ ಗೋಧಿಗೆ ಬೇಡಿಕೆ ಉಂಟಾಗಿತ್ತು.


ಜರ್ಮನಿಯಲ್ಲಿ ನಡೆದ ಜಿ 7 ರಾಷ್ಟ್ರಗಳ ಕೃಷಿ ಸಚಿವರುಗಳ ಸಭೆಯಲ್ಲಿ ಜರ್ಮನಿಯ ಕೃಷಿ ಸಚಿವ‌ ಸೆಮ್‌ ಒಜ್ಡೆಮಿರ್, ” ಎಲ್ಲ ರಾಷ್ಟ್ರಗಳೂ ಹೀಗೆ ಆಮದು-ರಫ್ತಿಗೆ ನಿರ್ಬಂಧ ಹೇರಿದರೆ ಪರಿಸ್ಥಿತಿ ಬಿಗಡಾಯಿಸಲಿದೆʼ ಎಂದು ಹೇಳಿದ್ದಾರೆ.

ಇದನ್ನೂ ಓದಿ Explainer: ಬೆಲೆ ಏರಿಕೆ ಬಿಸಿ ಹೆಚ್ಚಿಸುತ್ತಿರುವ ಆಮದು!

ಗೋಧಿ ಪೂರೈಕೆಗೆ ಯಾವುದೇ ಕೊರತೆ ಉಂಟಾಗಿಲ್ಲ. ಸಂಕಷ್ಟದಲ್ಲಿರುವ ದೇಶಗಳಿಗೆ ಗೋಧಿ ರಫ್ತು ಮುಂದುವರಿಯಲಿದೆ. ಆದರೆ ರಫ್ತನ್ನು ಸರಿಯಾದ ವ್ಯವಸ್ಥೆಯನ್ನು ನಡೆಸಲು ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.ಉತ್ತರ ಭಾರತದ ಗೋಧಿ ಬೆಳೆಯುವ ರಾಜ್ಯಗಳಲ್ಲಿ ಮಾರ್ಚ್‌ ನಲ್ಲಿ ಭಾರಿ ತಾಪಮಾನ ಏರಿಕೆಯ ಸಮಸ್ಯೆಯಾಗಿತ್ತು. ಇದರಿಂದ ಫಸಲಿಗೆ ಧಕ್ಕೆಯಾಗಿತ್ತು. ಭಾರತದಲ್ಲಿ ಗೋಧಿ ಬಳಕೆ ಕೂಡ ವ್ಯಾಪಕವಾಗಿರುವುದರಿಂದ ಪೂರೈಕೆಯಲ್ಲಿ ಸ್ವಲ್ಪ ಅಡಚಣೆ ಅಥವಾ ಕೊರತೆ ಉಂಟಾದರೂ, ಸಮಸ್ಯೆಯಾಗುವ ಆತಂಕ ಇತ್ತು.

ಇದನ್ನೂ ಓದಿ: Wheat export ban: ಭಾರತದಿಂದ ಗೋಧಿ ರಫ್ತಿಗೆ ನಿಷೇಧ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮನಿ-ಗೈಡ್

Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Money Guide: ಭಾರತೀಯರಿಗೆ ಚಿನ್ನಾಭರಣ ಎಂದರೆ ಬಹು ಪ್ರಿಯ. ಪ್ರಪಂಚದಲ್ಲಿ ಅತೀ ಹೆಚ್ಚು ಚಿನ್ನ ಬಳಸುವ ದೇಶಗಳ ಪೈಕಿ ಭಾರತವೂ ಒಂದು. ನಾವು ಮನೆಯಲ್ಲಿ ದಾಖಲೆ ಇಲ್ಲದೆ ಎಷ್ಟು ಬೇಕಾದರೂ ಚಿನ್ನವನ್ನು ಸಂಗ್ರಹಿಸಿ ಇಡಬಹುದಾ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾನೂನು ಪ್ರಕಾರ ನಾವು ಇಟ್ಟುಕೊಳ್ಳಬಹುದಾದ ಚಿನ್ನಕ್ಕೆ ಮಿತಿ ಇದೆ. ಮಿತಿಗಿಂತ ಹೆಚ್ಚು ಚಿನ್ನವನ್ನು ಇಟ್ಟುಕೊಳ್ಳುವುದಿದ್ದರೆ ಅದರ ಲೆಕ್ಕವನ್ನು ನಾವು ಆದಾಯ ಇಲಾಖೆಗೆ ನೀಡಬೇಕಾಗುತ್ತದೆ. ಈ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತೀಯರಿಗೆ ಚಿನ್ನಾಭರಣ ಎಂದರೆ ಬಹು ಪ್ರಿಯ. ಪ್ರಪಂಚದಲ್ಲಿ ಅತೀ ಹೆಚ್ಚು ಚಿನ್ನ ಬಳಸುವ ದೇಶಗಳ ಪೈಕಿ ಭಾರತವೂ ಒಂದು. 2,000 ರೂ. ಮುಖಬೆಲೆಯ ನೋಟುಗಳನ್ನು ಆರ್‌ಬಿಐ ನಿಷೇಧಿಸಿದ ಬಳಿಕವಂತೂ ಚಿನ್ನದ ಆಭರಣಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಈ ಮಧ್ಯೆ ನಾವು ಮನೆಯಲ್ಲಿ ದಾಖಲೆ ಇಲ್ಲದೆ ಎಷ್ಟು ಬೇಕಾದರೂ ಚಿನ್ನವನ್ನು ಸಂಗ್ರಹಿಸಿ ಇಡಬಹುದಾ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾನೂನು ಪ್ರಕಾರ ನಾವು ಇಟ್ಟುಕೊಳ್ಳಬಹುದಾದ ಚಿನ್ನಕ್ಕೆ ಮಿತಿ ಇದೆ. ಮಿತಿಗಿಂತ ಹೆಚ್ಚು ಚಿನ್ನವನ್ನು ಇಟ್ಟುಕೊಳ್ಳುವುದಿದ್ದರೆ ಅದರ ಲೆಕ್ಕವನ್ನು ನಾವು ಆದಾಯ ಇಲಾಖೆಗೆ ನೀಡಬೇಕಾಗುತ್ತದೆ. ಹಾಗಾದರೆ ಚಿನ್ನದ ಕುರಿತಾದ ಕಾನೂನು (Gold Tax) ಏನು ಹೇಳುತ್ತದೆ? ಎಷ್ಟು ಪ್ರಮಾಣದ ಚಿನ್ನ ಸಂಗ್ರಹಿಸಿ ಇಡಬಹುದು? ನಿಮ್ಮ ಎಲ್ಲ ಪ್ರಶ್ನೆಗಳಿಗೆ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ನಿಯಮ ಏನು ಹೇಳುತ್ತದೆ?

ಆದಾಯ ತೆರಿಗೆ ಇಲಾಖೆಯ ತನಿಖೆಯ ಸಂದರ್ಭದಲ್ಲಿ ಖರೀದಿಸಲು ಅಥವಾ ಹೂಡಿಕೆ ಮಾಡಲು ನಿಮಗೆ ಅನುಮತಿಸಿದ ಆದಾಯದ ಮೂಲವನ್ನು ನೀವು ಹಾಜರುಪಡಿಸುವುದಾದರೆ ಮನೆಯಲ್ಲಿ ಎಷ್ಟು ಚಿನ್ನದ ಆಭರಣಗಳನ್ನು ಬೇಕಾದರೂ ಇಟ್ಟುಕೊಳ್ಳಬಹುದು. ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ (CBDT) ನಿಯಮಗಳ ಪ್ರಕಾರ, ಮನೆಯಲ್ಲಿರುವ ಚಿನ್ನವು ನಿಗದಿತ ಮಿತಿಯಲ್ಲಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು ಹುಡುಕಾಟದ ಸಮಯದಲ್ಲಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಂತಿಲ್ಲ (ಚಿನ್ನದ ಆಭರಣ ಸಂಗ್ರಹ ನಿಯಮ). ಆದರೆ ಮಿತಿಯನ್ನು ಮೀರಿದರೆ ಅದಕ್ಕೆ ದಾಖಲೆ ಒದಗಿಸಬೇಕು. ಹಾಗಾದರೆ ಮಿತಿಯ ಪ್ರಮಾಣವೆಷ್ಟು?

  • ಅವಿವಾಹಿತ ಮಹಿಳೆ: 250 ಗ್ರಾಂ. ಚಿನ್ನ.
  • ವಿವಾಹಿತ ಮಹಿಳೆ: 500 ಗ್ರಾಂ. ಚಿನ್ನ.
  • ವಿವಾಹಿತ / ಅವಿವಾಹಿತ ಪುರುಷ: 100 ಗ್ರಾಂ. ಚಿನ್ನ.

ʼʼವೈಯಕ್ತಿಕ ಬಳಕೆಗಾಗಿ ಅಥವಾ ಹೂಡಿಕೆಗಾಗಿ ಚಿನ್ನವು ಅತ್ಯಂತ ಜನಪ್ರಿಯ ಮತ್ತು ಬೇಡಿಕೆಯ ಲೋಹವಾಗಿ ಉಳಿದಿದೆ. ಚಿನ್ನ ಖರೀದಿಸುವಾಗ ಬೆಲೆಗಳ ಏರಿಳಿತವನ್ನು ನೋಡುವ ಜತೆಗೆ ತೆರಿಗೆಯನ್ನೂ ಗಮನಿಸಬೇಕು. ಹೂಡಿಕೆಯ ಆಯ್ಕೆಯಾಗಿ ಪರಿಗಣಿಸುವವರು ಚಿನ್ನವನ್ನು ನಾಣ್ಯಗಳು, ಆಭರಣಗಳಂತಹ ಭೌತಿಕ ರೂಪಗಳಲ್ಲಿ, ಚಿನ್ನದ ವಿನಿಮಯ-ವಹಿವಾಟು ನಿಧಿಗಳು (ಗೋಲ್ಡ್ ಇಟಿಎಫ್‌ಗಳು), ಭಾರತೀಯ ರಿಸರ್ವ್ ಬ್ಯಾಂಕ್ ನೀಡುವ ಸವರಿನ್ ಗೋಲ್ಡ್ ಬಾಂಡ್‌ಗಳು (ಎಸ್‌ಜಿಬಿ) ಮತ್ತು ಕಾಗದದ ರೂಪಗಳಲ್ಲಿ ಖರೀದಿಸಬಹುದುʼʼ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ.

ಚಿನ್ನ ಖರೀದಿಗೆ ಯಾವುದೇ ನೇರ ತೆರಿಗೆ ಇಲ್ಲ. ಆದಾಗ್ಯೂ ಪರೋಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಇದು ಚಿನ್ನದ ಪ್ರಕಾರ ಮತ್ತು ಸಂಬಂಧಿತ ಸೇವೆಯನ್ನು ಅವಲಂಬಿಸಿ ಬದಲಾಗುತ್ತದೆ. ಉದಾಹರಣೆಗೆ ಚಿನ್ನದ ಗಟ್ಟಿಗಳು, ನಾಣ್ಯಗಳು ಮತ್ತು ಆಭರಣಗಳ ಖರೀದಿಯ ಮೇಲೆ ಶೇ. 3ರಷ್ಟು ಜಿಎಸ್‌ಟಿ ಪಾವತಿಸಬೇಕಾಗುತ್ತದೆ. ಇನ್ನು ಆಭರಣ ಮತ್ತು ಅಕ್ಕಸಾಲಿಗ ಸೇವೆಗಳ ಜಿಎಸ್‌ಟಿ ದರವು ಶೇ. 5ರಷ್ಟಿರುತ್ತದೆ. ಇದಲ್ಲದೆ ಚಿನ್ನವನ್ನು ಆಮದು ಮಾಡಿಕೊಳ್ಳುವಾಗ ಕಸ್ಟಮ್ಸ್ ಸುಂಕ, ಕೃಷಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಮತ್ತು ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ʼʼಚಿನ್ನಾಭರಣ ಖರೀದಿಗೆ ಸಂಬಂಧಿಸಿ ನೇರ ತೆರಿಗೆಗಳಿಲ್ಲ. ಆದರೆ ಚಿನ್ನ ಖರೀದಿಯ ವಿವರಗಳನ್ನು ನೀವು ಒದಗಿಸುವ ಪ್ಯಾನ್ ಕಾರ್ಡ್‌ನ ಮೂಲಕ ಅಧಿಕಾರಿಗಳು ಸಂಗ್ರಹಿಸುತ್ತಾರೆ. ಆದ್ದರಿಂದ ಚಿನ್ನವನ್ನು ಭಾರಿ ಪ್ರಮಾಣದಲ್ಲಿ ಖರೀದಿಸುವಾಗ ಅದಕ್ಕೆ ತಕ್ಕದಾದ ಆದಾಯದ ಮೂಲಗಳನ್ನು ಹೊಂದಿರುವುದು ಅಗತ್ಯ. ಇನ್ನು ತೆರಿಗೆದಾರರು ಒಟ್ಟು 50 ಲಕ್ಷ ರೂ.ಗಿಂತ ಹೆಚ್ಚಿನ ಆದಾಯವನ್ನು ಹೊಂದಿದ್ದರೆ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ ಹೊಂದಿರುವ ದೇಶೀಯ ಸ್ವತ್ತುಗಳ ಭಾಗವಾಗಿ ಚಿನ್ನದ ಪ್ರಮಾಣವನ್ನು ಬಹಿರಂಗಪಡಿಸಬೇಕಾಗುತ್ತದೆ.

ಮಾರಾಟ ಮಾಡುವಾಗ…

ಒಂದು ವೇಳೆ ಖರೀದಿ ಮಾಡಿದ ಬಳಿಕ ಮೂರು ವರ್ಷದ ಒಳಗೆ ಚಿನ್ನವನ್ನು ಮಾರಾಟ ಮಾಡುವುದಿದ್ದರೆ ಅದರಿಂದ ಪಡೆದ ಆದಾಯವನ್ನು ವೈಯಕ್ತಿಕ ಆದಾಯ ಎಂದು ಪರಿಗಣಿಸಲಾಗುತ್ತಿದೆ. ವೈಯಕ್ತಿಕ ಆದಾಯಕ್ಕೆ ನೀಡಬೇಕಿರುವ ತೆರಿಗೆಯೇ ಇದಕ್ಕೂ ಅನ್ವಯವಾಗುತ್ತದೆ. ಮೂರು ವರ್ಷಗಳ ನಂತರ ಚಿನ್ನವನ್ನು ಮಾರಾಟ ಮಾಡಿದರೆ, ದೀರ್ಘಾವಧಿಯ ಕ್ಯಾಪಿಟಲ್ ಗೇನ್ ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎನ್ನುವುದು ತಿಳಿದಿರಲಿ.

ಇದನ್ನೂ ಓದಿ: Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಪ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Continue Reading

ಮನಿ-ಗೈಡ್

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Money Guide: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ ಮುಖ್ಯ. ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಹಾಗಾದರೆ ಹಾಗಾದರೆ ಸಿಬಿಲ್ ಸ್ಕೋರ್‌ ಪರಿಶೀಲಿಸುವುದು ಹೇಗೆ? ಸಿಬಿಲ್‌ ಸ್ಕೋರ್‌ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ಒಂದು ಪ್ಯಾನ್‌ ಕಾರ್ಡ್‌ ಇಲ್ಲದಿದ್ದರೆ ಏನು ಮಾಡಬೇಕು? ಚಿಂತಿಸಬೇಡಿ. ನಿಮ್ಮೆಲ್ಲ ಗೊಂದಲಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ (ಕ್ರೆಡಿಟ್ ಇನ್ಫರ್ಮೇಷನ್ ಬ್ಯೂರೋ (ಇಂಡಿಯಾ) ಲಿಮಿಟೆಡ್-CIBIL) ಮುಖ್ಯವಾಗುತ್ತದೆ. ಅಂದರೆ ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಸಿಬಿಲ್ ಸ್ಕೋರ್ ಇಲ್ಲದಿದ್ದರೆ ನಿಮ್ಮ ಸಾಲದ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆಯೂ ಇದೆ. 300ರಿಂದ 900ರ ನಡುವೆ ಇರುವ ಸಿಬಿಲ್ ಸ್ಕೋರ್ ಹೆಚ್ಚಾದಷ್ಟೂ ಒಳ್ಳೆಯದು. ಹಾಗಾದರೆ ಸಿಬಿಲ್ ಸ್ಕೋರ್‌ ಪರಿಶೀಲಿಸುವುದು ಹೇಗೆ? ಸಿಬಿಲ್‌ ಸ್ಕೋರ್‌ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ನಿಮ್ಮ ಬಳಿ ಪ್ಯಾನ್ ಕಾರ್ಡ್ ಲಭ್ಯವಿಲ್ಲದಿದ್ದರೆ ಸಿಬಿಲ್ ಸ್ಕೋರ್ ಪಡೆಯುವುದು ಬಹುದೊಡ್ಡ ಸವಾಲು. ಹೀಗಾಗಿ ಸುಲಭವಾಗಿ, ಪ್ಯಾನ್ ಕಾರ್ಡ್ ಇಲ್ಲದೆ ನಿಮ್ಮ ಸಿಬಿಲ್ ಸ್ಕೋರ್ ಅನ್ನು ಹೇಗೆ ಪರಿಶೀಲಿಸಬಹುದು ಎನ್ನುವುದರ ಹಂತ ಹಂತದ ಮಾಹಿತಿ ಇಲ್ಲಿದೆ.

  • ಅಧಿಕೃತ ಸಿಬಿಲ್ ವೆಬ್‌ಸೈಟ್‌ https://www.cibil.com/ಗೆ ಭೇಟಿ ನೀಡಿ.
  • ‘Personal CIBIL Score’ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಬಳಿಕ ‘Get Your Free CIBIL Score’ ಆಪ್ಶನ್‌ ಆಯ್ಕೆ ಮಾಡಿ ಸೂಚನೆಗಳನ್ನು ಅನುಸರಿಸಿ ಕೇಳಿದ ಮಾಹಿತಿಗಳನ್ನು ಭರ್ತಿ ಮಾಡಿ.
  • ಒಂದು ವೇಳೆ ನಿಮ್ಮ ಬಳಿ ಪ್ಯಾನ್‌ ಕಾರ್ಡ್‌ ಇಲ್ಲ ಎಂದಾದರೆ ಪರ್ಯಾಯ ಡಾಕ್ಯುಮೆಂಟ್‌ಗಳಾದ ಪಾಸ್‌ಪೋರ್ಟ್‌, ವೋಟರ್‌ ಐಡಿ, ಡ್ರೈವಿಂಗ್‌ ಲೈಸನ್ಸ್‌ ಅಥವಾ ರೇಷನ್‌ ಕಾರ್ಡ್‌ ಅನ್ನು ಆಯ್ಕೆ ಮಾಡಬಹುದು. ನೀವು ಆಯ್ಕೆ ಮಾಡಿಕೊಂಡ ಡಾಕ್ಯುಮೆಂಟ್‌ನ ನಂಬರ್‌ ಅನ್ನು ಇಲ್ಲಿ ನಮೂದಿಸಿ.
  • ಈಗ ನಿಮ್ಮ ಡೇಟ್‌ ಆಫ್‌ ಬರ್ತ್‌, ಪಿನ್‌ ಕೋಡ್‌ ಮತ್ತು ರಾಜ್ಯವನ್ನು ನಮೂದಿಸಿ. ಜತೆಗೆ ಮೊಬೈಲ್‌ ನಂಬರ್‌ ಎಂಟ್ರಿ ಮಾಡಿ ‘Accept and Continueʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಮೊಬೈಲ್‌ಗೆ ಬಂದ ಒಟಿಪಿಯನ್ನು ನಮೂದಿಸಿ ‘Continueʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ‘Yes’ ಅಥವಾ ‘No’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಈಗ ನಿಮ್ಮ ಹೆಸರು ಯಶಸ್ವಿಯಾಗಿ ನೋಂದಣಿಯಾಗಿರುವ ಸಂದೇಶ ಪರದೆ ಮೇಲೆ ಮೂಡುತ್ತದೆ.
  • ಈಗ ‘Go to Dashboard’ ಆಯ್ಕೆಯನ್ನು ಕ್ಲಿಕ್‌ ಮಾಡಿದರೆ ನಿಮ್ಮ ಸಿಬಿಲ್‌ ಸ್ಕೋರ್‌ ಅನ್ನು ವೀಕ್ಷಿಸಬಹುದು.

ಗೂಗಲ್‌ ಪೇಯಲ್ಲಿ ಹೀಗೆ ಚೆಕ್‌ ಮಾಡಿ

  • ಮೊಬೈಲ್‌ ಫೋನ್‌ನಲ್ಲಿ ಗೂಗಲ್‌ ಪೇ ಅಪ್ಲಿಕೇಷನ್‌ ಓಪನ್‌ ಮಾಡಿ.
  • Manage your money ಆಯ್ಕೆಯನ್ನು ಕೆಳಗಡೆ ಕಾಣಿಸುವ ʼCheck your CIBIL score for freeʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ಪ್ಯಾನ್‌ ಕಾರ್ಡ್‌ನಲ್ಲಿ ಇರುವಂತೆ ನಿಮ್ಮ ಹೆಸರು ನಮೂದಿಸಿ.
  • ನಿಮ್ಮ ಗುರುತನ್ನು ಅಂಗಿಕರಿಸಿದರೆ ಪರದೆ ಮೇಲೆ ಸಿಬಿಲ್‌ ಸ್ಕೋರ್‌ ಕಂಡು ಬರುತ್ತದೆ.

ಫೋನ್‌ ಪೇ, ಪೇಟಿಎಂ ಅಪ್ಲಿಕೇಷನ್‌ನಲ್ಲಿಯೂ ಇದೇ ರೀತಿ ವೀಕ್ಷಿಸಬಹುದು.

ಸ್ಕೋರ್‌ ಹೆಚ್ಚಿಸುವುದು ಹೇಗೆ?

  • ನಿಮ್ಮ ಸಿಬಿಲ್ ಸ್ಕೋರ್ ಅನ್ನು ಆಗಾಗ ಪರಿಶೀಲಿಸಿ. ಇದರಿಂದ ನೀವು ಯಾವ ಮಟ್ಟದಲ್ಲಿದ್ದೀರಿ ಎಂಬುದು ತಿಳಿಯುತ್ತದೆ.
  • ನಿಮ್ಮ ಇಎಂಐಗಳು ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನು ನಿಯಮಿತವಾಗಿ ಪಾವತಿಸಿ; ಯಾವುದೇ ಕಾರಣಕ್ಕೂ ತಪ್ಪಿಸಬೇಡಿ ಮತ್ತು ವಿಳಂಬ ಮಾಡಬೇಡಿ.
  • ನಿಮ್ಮ ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚು ಬಳಸಬೇಡಿ ಮತ್ತು ನಿಮ್ಮ ಕ್ರೆಡಿಟ್ ಬಳಕೆಯ ಅನುಪಾತವನ್ನು (ಸಿಯುಆರ್ ) 30% ಒಳಗೆ ಇರಿಸಿಕೊಳ್ಳಲು ಪ್ರಯತ್ನಿಸಿ.
  • ಕಡಿಮೆ ಅವಧಿಯಲ್ಲಿ ಬೇರೆ ಬೇರೆ ಸಾಲಗಳು ಅಥವಾ ಕ್ರೆಡಿಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬೇಡಿ
  • ಅನಿವಾರ್ಯ ಆಗಿರದಿದ್ದರೆ, ನಿಮ್ಮ ಹಳೆಯ ಕ್ರೆಡಿಟ್ ಕಾರ್ಡ್‌ಗಳನ್ನು ರದ್ದುಗೊಳಿಸಬೇಡಿ
  • ಚೆಕ್‌ ಬೌನ್ಸ್‌ ಆಗದಂತೆ ನೋಡಿಕೊಳ್ಳಿ

ಪ್ರಯೋಜನಗಳೇನು?

ಹೆಚ್ಚಿನ ಸಿಬಿಲ್‌ ಸ್ಕೋರ್‌ ಇದ್ದರೆ ಪಡೆಯಬಹುದಾದ ಪ್ರಯೋಜನಗಳು:

  • ಸಾಲಗಳ ಮೇಲಿನ ಕಡಿಮೆ ಬಡ್ಡಿ ದರಗಳು
  • ಹೆಚ್ಚಿನ ಸಾಲದ ಮೊತ್ತಗಳು
  • ದೀರ್ಘ ಅಥವಾ ಹೆಚ್ಚು ಹೊಂದಿಕೊಳ್ಳುವ ಮರುಪಾವತಿ ಅವಧಿಯಂತಹ ನಿಯಮಗಳು
  • ತ್ವರಿತ ಸಾಲ ಮಂಜೂರಾತಿ ಪ್ರಕ್ರಿಯೆ
  • ಸಾಲ ನೀಡುವ ಸಂಸ್ಥೆಗಳ ಹೆಚ್ಚಿನ ಆಯ್ಕೆ

ಇದನ್ನೂ ಓದಿ: Money Guide: ಸಿಬಿಲ್‌ ಸ್ಕೋರ್‌ ಕಡಿಮೆ ಇದ್ದರೆ ಚಿಂತೆ ಬೇಡ; ಈ ಟಿಪ್ಸ್‌ ಫಾಲೋ ಮಾಡಿ ಹೆಚ್ಚಿಸಿಕೊಳ್ಳಿ

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ಅಕ್ಷಯ ತದಿಗೆಯ ಬಳಿಕ ಚಿನ್ನದ ಮಾರುಕಟ್ಟೆಯಲ್ಲಿ ದಿನೇ ದಿನೆ ಏರಿಳಿಕೆ ಸಾಮಾನ್ಯವಾಗಿದೆ. ನಿನ್ನೆ ದರ ಏರಿಕೆ ಆಗಿತ್ತು. ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ನಿನ್ನೆ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹80 ಹಾಗೂ ₹87 ಏರಿಕೆಯಾಗಿತ್ತು. ಇಂದು ನಿನ್ನೆಯಷ್ಟೇ ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹89, ಎಂಟು ಗ್ರಾಂ ₹712 ಮತ್ತು 10 ಗ್ರಾಂ ₹890ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,900 ಮತ್ತು 1 ಕಿಲೋಗ್ರಾಂಗೆ ₹89,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,55074,770
ಮುಂಬಯಿ68,40074,620
ಬೆಂಗಳೂರು68,40074,620
ಚೆನ್ನೈ68,50074,730

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಮನಿ-ಗೈಡ್

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Money Guide: ಪಡಿತರ ಚೀಟಿ ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಡಿತರ ಚೀಟಿ (Ration Card) ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಜತೆಗೆ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪ್ಯಾನ್ ಕಾರ್ಡ್‌, ಚಾಲಕರ ಪರವಾನಗಿ ಇತ್ಯಾದಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಇದನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ‌ ವಿತರಿಸುತ್ತದೆ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ (Money Guide).

ಅಗತ್ಯ ದಾಖಲೆಗಳು

ಗ್ರಾಮಾಂತರ ಪ್ರದೇಶ

  • ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
  • ಈಗ ವಾಸ ಮಾಡುತ್ತಿರುವ ಮನೆ ವಿಳಾಸ
  • ಮನೆಯ ಆಸ್ತಿ ಸಂಖ್ಯೆ ವಿವರ
  • ಮನೆಯ ವಿದ್ಯುತ್‌ ಸಂಪರ್ಕದ ಬಿಲ್‌ ಪ್ರತಿ
  • ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.

ನಗರ / ಪಟ್ಟಣ ಪ್ರದೇಶ

  • ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
  • ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ (ಇದನ್ನು ಸುಲಭವಾಗಿ ತಿಳಿಯಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯವರನ್ನು ಸಂಪರ್ಕಿಸಿ, ಇಲ್ಲವೇ ನಿಮ್ಮ ನೆರೆಹೊರೆಯವರಲ್ಲಿ ಈಗಾಗಲೇ ಲಭ್ಯವಿರುವ ಪಡಿತರ ಚೀಟಿಯನ್ನು ನೋಡಿ ತಿಳಿಯಿರಿ)
  • ನಿಮ್ಮ ಮನೆಯ ವಿದ್ಯುತ್ ಬಿಲ್
  • ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್‌ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ
  • ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
  • ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
  • ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ
  • ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ

ಅರ್ಜಿ ಸಲ್ಲಿಸುವುದು ಹೇಗೆ?

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಇ-ಸರ್ವಿಸ್‌ (ಇ-ಸೇವೆ) ಮೇಲೆ ಕ್ಲಿಕ್‌ ಮಾಡಬೇಕು. ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ. ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್‌ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ. ಅಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.

ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

Continue Reading
Advertisement
RCB IPL Records
ಕ್ರೀಡೆ4 mins ago

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

Emirates Flight
ದೇಶ4 mins ago

Emirates Flight: ವಿಮಾನ ಡಿಕ್ಕಿ ಹೊಡೆದು 36 ಫ್ಲೆಮಿಂಗೊ ಪಕ್ಷಿಗಳಿಗೆ ದಾರುಣ ಅಂತ್ಯ

Actress Nayanthara twin sons on auto ride
ಕಾಲಿವುಡ್19 mins ago

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Mallikarjuna Kharge siddaramaiah
ಪ್ರಮುಖ ಸುದ್ದಿ21 mins ago

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

murder Case in Vijayapura
ವಿಜಯಪುರ30 mins ago

Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

Jayant Sinha
ದೇಶ30 mins ago

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Katrina Kaif And Vicky Kaushal Together In London
ಸಿನಿಮಾ38 mins ago

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

gold rate today sruthi hassan
ಚಿನ್ನದ ದರ49 mins ago

Gold Rate Today: ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಗ್ರಾಹಕರಿಗೆ ತುಸು ನಿರಾಳ

India Head Coach
ಕ್ರೀಡೆ56 mins ago

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

Viral Video
ವೈರಲ್ ನ್ಯೂಸ್1 hour ago

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌