ನವ ದೆಹಲಿ: ದೇಶವನ್ನು ಕಾಡುತ್ತಿರುವ ಬೆಲೆ ಏರಿಕೆ ಬಗ್ಗೆ ಲೋಕಸಭೆಯಲ್ಲಿ ಆಗಸ್ಟ್ ೧ರ ಸೋಮವಾರ ಚರ್ಚೆ ನಿಗದಿಯಾಗಿದೆ.
ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಬೆಲೆ ಏರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿದ್ದು, ಸರ್ಕಾರ ಸ್ಪಂದಿಸಿದೆ. ಚರ್ಚೆಗೆ ಸಿದ್ಧ ಎಂದು ತಿಳಿಸಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಕಳೆದ ಬುಧವಾರ ಬೆಲೆ ಏರಿಕೆ ಬಗ್ಗೆ ಚರ್ಚೆಗೆ ಒತ್ತಾಯಿಸಿ ಗದ್ದಲ ಎಬ್ಬಿಸಿದ್ದವು. ರಾಜ್ಯಸಭೆ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಗುರುವಾರ ಈ ಸಂಬಂಧ ಪ್ರತಿಪಕ್ಷ ನಾಯಕರ ಜತೆ ಸಮಾಲೋಚನೆ ನಡೆಸಿದ್ದರು.
ಕೋವಿಡ್-೧೯ನಿಂದ ಚೇತರಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ವಾರ ಚರ್ಚೆಗೆ ಸಿದ್ಧರಿದ್ದು, ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ನಾಯ್ಡು ಭರವಸೆ ನೀಡಿದ್ದರು.
ಭಾರತದಲ್ಲಿ ಚಿಲ್ಲರೆ ಹಣದುಬ್ಬರ ಟ್ರೆಂಡ್
ಜನವರಿ | 6.1% |
ಫೆಬ್ರವರಿ | 6.07% |
ಮಾರ್ಚ್ | 6.95% |
ಏಪ್ರಿಲ್ | 7.79% |
ಮೇ | 7.04% |
ಜೂನ್ | 7.01 |