Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ - Vistara News

ವಾಣಿಜ್ಯ

Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ

Anil Ambani: ಭಾರತದ ಖ್ಯಾತ ಉದ್ಯಮಿ ಅನಿಲ್‌ ಅಂಬಾನಿ ಅವರಿಗೆ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಬಹುದೊಡ್ಡ ಶಾಕ್‌ ನೀಡಿದೆ. ಅನಿಲ್‌ ಅಂಬಾನಿ ಮತ್ತು ಅವರಿಗೆ ಸೇರಿದ 24 ಘಟಕಗಳಿಗೆ ಭಾರೀ ಮೊತ್ತದ ದಂಡ ವಿಧಿಸಿದೆ. ಜತೆಗೆ ಐದು ವರ್ಷಗಳ ಕಾಲ ಸೆಕ್ಯೂರಿಟೀಸ್‌ ಮಾರುಕಟ್ಟೆ (ಷೇರುಪೇಟೆ)ಯಿಂದ ನಿಷೇಧ ಹೇರಿದೆ. ಅನಿಲ್‌ ಅಂಬಾನಿ ಒಡೆತನದ ರಿಲಯನ್ಸ್‌ ಹೋಮ್‌ ಫೈನಾನ್ಸ್‌ ಕಂಪನಿಯಿಂದ ಹಣವನ್ನು ಬೇರೆಡೆಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣದಲ್ಲಿ ಸೆಬಿ ಈ ಮಹತ್ವದ ಆದೇಶ ನೀಡಿದೆ.

VISTARANEWS.COM


on

Anil Ambani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬೈ: ಭಾರತದ ಖ್ಯಾತ ಉದ್ಯಮಿ ಅನಿಲ್‌ ಅಂಬಾನಿ (Anil Ambani) ಅವರಿಗೆ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಬಹುದೊಡ್ಡ ಶಾಕ್‌ ನೀಡಿದೆ. ಅನಿಲ್‌ ಅಂಬಾನಿ ಮತ್ತು ಅವರಿಗೆ ಸೇರಿದ 24 ಘಟಕಗಳಿಗೆ ಭಾರೀ ಮೊತ್ತದ ದಂಡ ವಿಧಿಸಿದೆ. ಜತೆಗೆ ಐದು ವರ್ಷಗಳ ಕಾಲ ಸೆಕ್ಯೂರಿಟೀಸ್‌ ಮಾರುಕಟ್ಟೆ (ಷೇರುಪೇಟೆ)ಯಿಂದ ನಿಷೇಧ ಹೇರಿದೆ.

ಅನಿಲ್‌ ಅಂಬಾನಿ ಒಡೆತನದ ರಿಲಯನ್ಸ್‌ ಹೋಮ್‌ ಫೈನಾನ್ಸ್‌ (Reliance Home Finance Limited-RHFL) ಕಂಪನಿಯಿಂದ ಹಣವನ್ನು ಬೇರೆಡೆಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣದಲ್ಲಿ ಸೆಬಿ ಈ ಮಹತ್ವದ ಆದೇಶ ನೀಡಿದೆ. ಅನಿಲ್‌ ಅಂಬಾನಿಗೆ 25 ಕೋಟಿ ರೂ. ದಂಡ ವಿಧಿಸಲಾಗಿದ್ದು, ಉಳಿದವರಿಗೂ ಭಾರೀ ಮೊತ್ತದ ದಂಡ ಹಾಕಲಾಗಿದೆ. ಕ್ರಮ ಎದುರಿಸಿದವರಲ್ಲಿ ರಿಲಯನ್ಸ್‌ ಹೋಮ್‌ನ ಮಾಜಿ ಅಧಿಕಾರಿಗಳೂ ಸೇರಿದ್ದಾರೆ.

ಸೆಬಿ ಹೇಳಿದ್ದೇನು?

ಅನಿಲ್‌ ಅಂಬಾನಿ 5 ವರ್ಷಗಳ ಕಾಲ ಸೆಕ್ಯುರಿಟೀಸ್ ಮಾರುಕಟ್ಟೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಬಾರದು ಎಂದು ಸೂಚಿಸಿರುವ ಸೆಬಿ, ಯಾವುದೇ ಪಟ್ಟಿ ಮಾಡಲಾದ ಕಂಪನಿಯ ನಿರ್ದೇಶಕ ಅಥವಾ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿ ಹುದ್ದೆ ಹೊಂದುವುದಾಗಲಿ ಅಥವಾ ಸೆಬಿಯಲ್ಲಿ ನೋಂದಾಯಿಸಲಾದ ಯಾವುದೇ ಮಧ್ಯವರ್ತಿ ಜತೆ ಸಂಪರ್ಕ ಸಾಧಿಸುವುದಾಗಲಿ ಮಾಡಬಾರದು ಎಂದು ಹೇಳಿದೆ. ಜತೆಗೆ ರಿಲಯನ್ಸ್‌ ಹೋಮ್‌ ಫೈನಾನ್ಸ್‌ ಅನ್ನೂ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ 6 ತಿಂಗಳ ಕಾಲ ನಿರ್ಬಂಧಿಸಲಾಗಿದ್ದು, 6 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಘಟಕಗಳು ಹಣವನ್ನು ದುರುಪಯೋಗಪಡಿಸಿಕೊಳ್ಳುವ ವಂಚನೆಯಲ್ಲಿ ಭಾಗಿಯಾಗಿವೆ. ಇದು ಸೆಕ್ಯುರಿಟೀಸ್ ಕಾನೂನುಗಳ ಉಲ್ಲಂಘನೆ ಮತ್ತು ಹೂಡಿಕೆದಾರರ ನಂಬಿಕೆಯ ಉಲ್ಲಂಘನೆಗೆ ಕಾರಣವಾಗುತ್ತದೆ ಎಂದು ಸೆಮಿ ತೀರ್ಮಾನಿಸಿ ಈ ನಿರ್ಧಾರ ಪ್ರಕಟಿಸಿದೆ.

222 ಪುಟಗಳ ಅಂತಿಮ ಆದೇಶದಲ್ಲಿ ಸೆಬಿಯು, ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿ ಸಹಾಯದಿಂದ ಅನಿಲ್ ಅಂಬಾನಿಯು ಆರ್‌ಎಚ್‌ಎಫ್‌ಎಲ್‌ನಿಂದ ಹಣವನ್ನು ಬೇರೆಡೆಗೆ ವರ್ಗಾಯಿಸುವ ವಂಚನೆಯ ಯೋಜನೆ ರೂಪಿಸಿದ್ದರು. ಸಾಲ ಎಂದು ಹೇಳಿ ಅವರು ತಮಗೆ ಸಂಬಂಧಿಸಿದ ಕಂಪನಿಗಳಿಗೆ ಹಣ ವರ್ಗಾಯಿಸಿಕೊಂಡಿದ್ದರು ಎಂದು ಹೇಳಿದೆ.

ಆರ್‌ಎಚ್‌ಎಫ್‌ಎಲ್‌ನ ನಿರ್ದೇಶಕರ ಮಂಡಳಿ ಸಾಲ ನೀಡುವ ಅಭ್ಯಾಸಗಳನ್ನು ತಕ್ಷಣವೇ ನಿಲ್ಲಿಸುವಂತೆ ಹೇಳಿದ್ದಲ್ಲದೆ, ಕಾರ್ಪೊರೇಟ್ ಸಾಲಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ತಿಳಿಸಿತ್ತು. ಆದರೆ ಕಂಪನಿಯ ಆಡಳಿತ ಈ ಆದೇಶಗಳನ್ನೆಲ್ಲ ನಿರ್ಲಕ್ಷಿಸಿತ್ತು. ಇದಲ್ಲದೆ ರಿಲಯನ್ಸ್ ಯೂನಿಕಾರ್ನ್ ಎಂಟರ್‌ಪ್ರೈಸಸ್, ರಿಲಯನ್ಸ್ ಎಕ್ಸ್‌ಚೇಂಜ್ ನೆಕ್ಸ್ಟ್ ಲಿಮಿಟೆಡ್, ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್, ರಿಲಯನ್ಸ್ ಕ್ಲೀನನ್ ಲಿಮಿಟೆಡ್, ರಿಲಯನ್ಸ್ ಬ್ಯುಸಿನೆಸ್ ಬ್ರಾಡ್‌ಕಾಸ್ಟ್ ನ್ಯೂಸ್ ಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಬಿಗ್ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 21 ಘಟಕಗಳಿಗೆ ತಲಾ 25 ಕೋಟಿ ರೂ. ದಂಡ ವಿಧಿಸಲಾಗಿದೆ.

ಇದನ್ನೂ ಓದಿ: SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

2022ರ ಫೆಬ್ರವರಿಯಲ್ಲಿ ಸೆಬಿ ಮಧ್ಯಂತರ ಆದೇಶವನ್ನು ಹೊರಡಿಸಿ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್, ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ಅಮಿತ್ ಬಾಪ್ನಾ, ರವೀಂದ್ರ ಸುಧಾಕರ್ ಮತ್ತು ಪಿಂಕೇಶ್ ಆರ್. ಶಾ ಅವರನ್ನು ಮುಂದಿನ ಆದೇಶದವರೆಗೆ ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ನಿರ್ಬಂಧಿಸಿತ್ತು. ಇದೀಗ ಇದೀಗ ಅಂತಿಮ ಆದೇಶ ಹೊರಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

VISTARANEWS.COM


on

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್

ವಾಷಿಂಗ್ಟನ್: ಅಮೆರಿಕದಲ್ಲಿ H-1B ವೀಸಾ ಹೊಂದಿರುವ ವಿದೇಶಿ ಉದ್ಯೋಗಿಗಳಿಗೆ ಹೆಚ್ಚುವರಿ ಶುಲ್ಕ ವಿಧಿಸುವ ಟ್ರಂಪ್ ಆಡಳಿತದ ನಿರ್ಧಾರಕ್ಕೆ ಕೋರ್ಟ್‌ ಬ್ರೇಕ್‌ ಹಾಕಿದೆ. ಫೆಡರಲ್ ನ್ಯಾಯಾಧೀಶ ಲಿಯೋ ಸೊರೊಕಿನ್ ಮಹತ್ವದ ತೀರ್ಪು ನೀಡಿದ್ದು, H-1Bಯ ವೀಸಾ ಅರ್ಜಿಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ಅಸಿಂಧು ಎಂದು ಘೋಷಿಸಿದ್ದಾರೆ.

ಈ ತೀರ್ಪಿನಿಂದ ಅಮೆರಿಕದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಭಾರತೀಯ ಐಟಿ ಉದ್ಯೋಗಿಗಳಿಗೆ ಉದ್ಯೋಗಿಗಳು ನಿರಾಳರಾಗುವಂತೆ ಮಾಡಿದೆ. ವಿದೇಶಿ ಪರಿಣತ ಉದ್ಯೋಗಿಗಳನ್ನು ಅವಲಂಬಿಸಿರುವ ಅಮೆರಿಕದ ಕಂಪನಿಗಳು ಹಾಗೂ ವಿಶ್ವವಿದ್ಯಾಲಯಗಳಿಗೂ ಇದು ಅನುಕೂಲಕರ ಬೆಳವಣಿಗೆಯಾಗಿದೆ.

ಡೊನಾಲ್ಡ್ ಟ್ರಂಪ್ ಸರ್ಕಾರ, ಸ್ಥಳೀಯ ಅಮೆರಿಕನ್ನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಲಸೆ ನೀತಿಗಳನ್ನು ಕಠಿಣಗೊಳಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಟ್ರಂಪ್‌ ಹೊಸ H-1Bಯ ವೀಸಾ ಅರ್ಜಿಗಳಿಗೆ ಒಂದು ಲಕ್ಷ ಡಾಲರ್‌ ಶುಲ್ಕವನ್ನು ಪಾವತಿಸುವ ಘೋಷಣೆಗೆ ಸಹಿ ಹಾಕಿದ್ದರು.

ಆದರೆ ನ್ಯಾಯಾಲಯವು ಸರ್ಕಾರದ ಈ ಕ್ರಮವು ಕಾನೂನುಬದ್ಧ ಅಧಿಕಾರದ ವ್ಯಾಪ್ತಿಯನ್ನು ಮೀರಿ ಜಾರಿಗೊಳಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಶುಲ್ಕ ವಿಧಿಸುವ ನಿಯಮವನ್ನು ರದ್ದುಗೊಳಿಸಿದೆ. ಇದರಿಂದ ವಿದೇಶಿ ಪರಿಣತ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಸಂಸ್ಥೆಗಳಿಗೆ ಆರ್ಥಿಕ ಭಾರ ಕಡಿಮೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ, ಟ್ರಂಪ್ ಆಡಳಿತದ ವಲಸೆ ನೀತಿಗೆ ಇದು ಪ್ರಮುಖ ಹಿನ್ನಡೆಯಾಗಿ ಪರಿಗಣಿಸಲಾಗುತ್ತಿದೆ. ಸರ್ಕಾರವು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವುದಾಗಿ ವರದಿಯಾಗಿದೆ.

ನ್ಯಾಯಾಲಯದ ತೀರ್ಪನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಉದ್ಯೋಗಿಗಳು ಹಾಗೂ ಉದ್ಯಮ ವಲಯ ಸ್ವಾಗತಿಸಿದ್ದು, H-1B ವೀಸಾ ವ್ಯವಸ್ಥೆಯ ಮೇಲಿನ ಅನಿಶ್ಚಿತತೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

Also Read: ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

VISTARANEWS.COM


on

ಪಿಂಕ್ ಲೈನ್ ಮೆಟ್ರೋ

ದಕ್ಷಿಣ ಬೆಂಗಳೂರಿನ ಜನರಿಗೆ ಬಹುಕಾಲದ ನಿರೀಕ್ಷೆಯಾಗಿದ್ದ ಪಿಂಕ್ ಲೈನ್ ಮೆಟ್ರೋ ಸೇವೆ ಆಗಸ್ಟ್ 15ರಂದು ಆರಂಭವಾಗುವ ಸಾಧ್ಯತೆ ಇದೆ. ಈ ಹೊಸ ಮಾರ್ಗ ಕಾರ್ಯಾರಂಭ ಮಾಡಿದರೆ ಪ್ರಮುಖ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ವೇಗವಾದ ಹಾಗೂ ಸುಗಮ ಸಂಚಾರ ಸೌಲಭ್ಯ ದೊರೆಯಲಿದೆ.

ಪಿಂಕ್ ಲೈನ್ ಮೆಟ್ರೋ:

ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೊದಲ ಹಂತದ ಸಂಚಾರ ಆಗಸ್ಟ್ 15 ರಂದು ಸಾರ್ವಜನಿಕರಿಗೆ ಮುಕ್ತವಾಗುವ ಸಾಧ್ಯತೆ ಇದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ನಿರ್ಮಾಣಗೊಂಡಿರುವ 7.5 ಕಿಲೋಮೀಟರ್ ಉದ್ದದ ಎಲಿವೇಟೆಡ್ ಮಾರ್ಗದ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದೆ.

ಪಿಂಕ್ ಲೈನ್ ಮೆಟ್ರೋನಲ್ಲಿ ಸಂಚರಿಸಲಿರುವ ಮೆಟ್ರೋ ರೈಲುಗಳಿಗೆ ರೈಲು ವಿನ್ಯಾಸ ಮತ್ತು ಮಾನದಂಡಗಳ ಸಂಸ್ಥೆ (RDSO) ಯಿಂದ ಗಂಟೆಗೆ 90 ಕಿಲೋಮೀಟರ್ ವೇಗದಲ್ಲಿ ಸಂಚರಿಸಲು ಅಗತ್ಯ ಪ್ರಮಾಣ ಪತ್ರ ದೊರೆತಿದೆ. ಇದರಿಂದ ಮಾರ್ಗ ಉದ್ಘಾಟನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಮತ್ತಷ್ಟು ವೇಗ ಪಡೆದಿವೆ.

ಮೊದಲ ಹಂತದಲ್ಲಿ ಕಾಳೇನ ಅಗ್ರಹಾರ, ಗೊಟ್ಟಿಗೆರೆ, ಹುಳಿಮಾವು, ಐಐಎಂಬಿ, ಜೆಪಿ ನಗರ 4ನೇ ಹಂತ ಹಾಗೂ ತಾವರೆಕೆರೆ ಸೇರಿದಂತೆ ಒಟ್ಟು ಆರು ಮೆಟ್ರೋ ನಿಲ್ದಾಣಗಳು ಪ್ರಯಾಣಿಕರ ಸೇವೆಗೆ ಲಭ್ಯವಾಗಲಿವೆ. ಈ ಮಾರ್ಗ ಆರಂಭವಾದರೆ ದಕ್ಷಿಣ ಬೆಂಗಳೂರಿನ ಸಾವಿರಾರು ಪ್ರಯಾಣಿಕರಿಗೆ ವೇಗದ ಮತ್ತು ಸುಗಮ ಸಂಚಾರ ವ್ಯವಸ್ಥೆ ದೊರೆಯಲಿದೆ.

ಸಂಪೂರ್ಣ ಪಿಂಕ್ ಲೈನ್ ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ 21.25 ಕಿಲೋಮೀಟರ್ ಉದ್ದ ಹೊಂದಿದ್ದು, ಒಟ್ಟು 18 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 12 ಅಂಡರ್‌ಗ್ರೌಂಡ್ ಹಾಗೂ 6 ಎಲಿವೇಟೆಡ್ ನಿಲ್ದಾಣಗಳು ನಿರ್ಮಾಣವಾಗುತ್ತಿವೆ.

ಪಿಂಕ್ ಲೈನ್‌ನ ಪ್ರಮುಖ ಆಕರ್ಷಣೆಯಾಗಿ ಜಯದೇವ ಆಸ್ಪತ್ರೆ ಇಂಟರ್‌ಚೇಂಜ್ ನಿಲ್ದಾಣವಿರಲಿದೆ. ಈ ನಿಲ್ದಾಣದ ಮೂಲಕ ಪ್ರಯಾಣಿಕರು ಒಂದು ಮೆಟ್ರೋ ಮಾರ್ಗದಿಂದ ಮತ್ತೊಂದು ಮಾರ್ಗಕ್ಕೆ ಸುಲಭವಾಗಿ ಬದಲಾಯಿಸಬಹುದಾಗಿದ್ದು, ನಗರದ ವಿವಿಧ ಭಾಗಗಳಿಗೆ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ.

ಪಿಂಕ್ ಲೈನ್ ಸಂಪೂರ್ಣ ಕಾರ್ಯಾರಂಭ ಮಾಡಿದ ಬಳಿಕ ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ನಡುವಿನ ಸಂಪರ್ಕ ಬಲವಾಗಲಿದ್ದು, ರಸ್ತೆ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ. ಲಕ್ಷಾಂತರ ಪ್ರಯಾಣಿಕರಿಗೆ ಇದರ ನೇರ ಪ್ರಯೋಜನ ದೊರೆಯಲಿದ್ದು, ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಇದು ಮಹತ್ವದ ಸೇರ್ಪಡೆಯಾಗಲಿದೆ.

Also Read: ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ವಾಣಿಜ್ಯ LPG ಸಿಲಿಂಡರ್ ಬೆಲೆ ಮತ್ತೆ ಏರಿಕೆ

VISTARANEWS.COM


on

ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ತೈಲ ಸರಬರಾಜಿಗೆ ಅಡ್ಡಿಆತಂಕಗಳು ಉಂಟಾಗಿದ್ದು, ಇದೀಗ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ದೇಶಾದ್ಯಂತ ವಾಣಿಜ್ಯ ಬಳಕೆಯ ಸಿಲಿಂಡರ್‌ ರೂ.42 ರಿಂದ ರೂ.53ಕ್ಕೆ ಏರಿಕೆಯಾಗಿದೆ.
ಈ ಬೆಲೆ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಬೇಕರಿ ಹಾಗೂ ಇತರೆ ವಾಣಿಜ್ಯ ವಲಯಗಳ ಮೇಲೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ.
ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹42 ಹೆಚ್ಚಳ ಮಾಡಲಾಗಿದೆ. ಇದೇ ವೇಳೆ ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್‌ ದರ ₹46 ಏರಿಕೆಯಾಗಿದ್ದು, ಹೊಸ ಬೆಲೆ ₹3,113.50ಕ್ಕೆ ತಲುಪಿದೆ.
ಇದರ ಜೊತೆಗೆ 5 ಕೆಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ ಬೆಲೆಯಲ್ಲೂ ₹11 ಹೆಚ್ಚಳವಾಗಿದೆ. ಪರಿಣಾಮವಾಗಿ 5 ಕೆಜಿ ಸಿಲಿಂಡರ್‌ನ ಹೊಸ ದರ ₹821.50 ಆಗಿದೆ.
ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಏರಿಕೆಯಿಂದ ಆಹಾರೋದ್ಯಮ ಸೇರಿದಂತೆ ವಿವಿಧ ಸೇವಾ ಕ್ಷೇತ್ರಗಳ ನಿರ್ವಹಣಾ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕೆಲವು ವಲಯಗಳಲ್ಲಿ ಉತ್ಪನ್ನ ಮತ್ತು ಸೇವೆಗಳ ದರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading
Advertisement
Latest3 hours ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest7 hours ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ1 day ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest1 day ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest1 day ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest1 day ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest2 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest2 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

ಪಿಂಕ್ ಲೈನ್ ಮೆಟ್ರೋ
Latest2 days ago

ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

ಮುಂದಿನ ಐದು ದಿನ ಭಾರೀ ಮಳೆ
Latest2 days ago

ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌