ಪ್ರಮುಖ ಸುದ್ದಿ
Apply for ration card : ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?
Apply for ration card ಹೊಸ ರೇಷನ್ ಕಾರ್ಡ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಉಪಯುಕ್ತ ಮಾಹಿತಿ ಇಲ್ಲಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಲು ಇದೂ ಒಂದು ದಾಖಲೆಯಾಗಿದೆ. ಗುರುತಿನ ಚೀಟಿಯಾಗಿಯೂ ಬಳಸಬಹುದು.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ 5 ಬಗೆಯ ಗ್ಯಾರಂಟಿ ಸ್ಕೀಮ್‌ಗಳನ್ನು ನೀಡಲು ಪ್ರಕ್ರಿಯೆ ಆರಂಭಿಸಿದೆ. ಗೃಹಲಕ್ಷ್ಮಿ, ಯುವನಿಧಿ, ಶಕ್ತಿ, ಅನ್ನ ಭಾಗ್ಯ ಮತ್ತು ಗೃಹಜ್ಯೋತಿ ಎಂಬ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯಲು ಜನತೆ ಕಾಯುತ್ತಿದ್ದಾರೆ. (Apply for ration card ) ಈ ಯೋಜನೆಗಳ ಲಾಭ ಪಡೆಯಲು ಬೇಕಿರುವ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಹೀಗಾಗಿ ಎಪಿಎಲ್/ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅನೇಕ ಮಂದಿ ಆಸಕ್ತಿ ವಹಿಸಿದ್ದಾರೆ.
ಎಪಿಎಲ್ ಕಾರ್ಡ್ ಇರುವವರಿಗೂ ಕೆಲ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ಇತ್ತೀಚಿಗೆ ಹೊಸ ಷರತ್ತುಗಳು, ಗೊಂದಲಗಳು ಸೃಷ್ಟಿಯಾಗಿದ್ದರೂ, ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಜನ ಕಾತರರಾಗಿದ್ದಾರೆ. ಮಾತ್ರವಲ್ಲದೆ ಗುರುತಿನ ಚೀಟಿಯಾಗಿಯೂ ರೇಷನ್ ಕಾರ್ಡ್ ಬಳಕೆಯಾಗುತ್ತದೆ. ( Department of Food, Civil Supplies and Consumers Affairs ) ಹೀಗಾಗಿ ರೇಷನ್ ಕಾರ್ಡ್ ಒಂದು ಬಹೂಪಯೋಗಿ ದಾಖಲೆ.
ಹಾಗಾದರೆ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಆನ್‌ಲೈನ್ ವಿಧಾನದಲ್ಲಿ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ನೀವು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇಲಾಖೆಯ ವೆಬ್‌ಸೈಟ್ ವಿಳಾಸ ಹೀಗಿದೆ: https://ahara.kar.nic.in ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಮಾಹಿತಿಯನ್ನು ಮಾತ್ರ ಇಲ್ಲಿ ನೋಡೋಣ.
ಸಾರ್ವಜನಿಕರು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು https://ahara.kar.nic.in ವೆಬ್‌ಸೈಟ್‌ನಲ್ಲಿ ಇ- ಸರ್ವೀಸ್ (e-service) ಮೆನುವನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಲಿಂಕ್ ಇದೆ. ಆದರೆ ಸದ್ಯಕ್ಕೆ ಆ ಲಿಂಕ್ ಒತ್ತಿದರೆ Service Unavailable ಎಂಬ ಸಂದೇಶ ಬರುತ್ತಿದೆ.
ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಅರ್ಜಿ ಸಲ್ಲಿಸಬಹುದು. ಗ್ರಾಹಕರು ಬೇಕಾದ ಲಾಂಗ್ವೇಜ್ ಅನ್ನು ಆಯ್ಕೆ ಮಾಡಬಹುದು.
ಬಳಕೆದಾರರು Non – Priority Household (NPHH) ಆಯ್ಕೆ ಮಾಡಿ NPHH ರೇಷನ್ ಕಾರ್ಡ್‌ಗೂ ಅರ್ಜಿ ಸಲ್ಲಿಸಬಹುದು. ಎನ್‌ಪಿಎಚ್‌ಎಚ್ ರೇಷನ್ ಕಾರ್ಡ್‌ನಲ್ಲಿ ಸಬ್ಸಿಡಿ ದರದ ಅಕ್ಕಿ, ಬೇಳೆಕಾಳು ಸಿಗುವುದಿಲ್ಲ. ಆದರೆ ರೇಷನ್ ಕಾರ್ಡ್ ಸಿಗುತ್ತದೆ. ಇದನ್ನು ಗುರುತಿನ ಚೀಟಿಯಾಗಿ ಬಳಸಬಹುದು.
ಬಳಕೆದಾರರು ಆಧಾರ್ ನಂಬರ್ ಮತ್ತು ಆಧಾರ್ ಜತೆಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ನಮೂದಿಸಬೇಕು. ಆಧಾರ್ ಆಧರಿತ ಅಥೆಂಟಿಕೇಶನ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದಕ್ಕಾಗಿ One time password to mobile number registered with the aadhar ಆಯ್ಕೆ ಕ್ಲಿಕ್ಕಿಸಬೇಕು. ನಿಮ್ಮ ಮೊಬೈಲ್ ನಂಬರಿಗೆ OTP ಸಿಗುತ್ತದೆ. ಒಟಿಪಿ ಮತ್ತು captcha ಪ್ರಕ್ರಿಯೆ ಪೂರ್ಣಗೊಳಿಸಿ. ಬಳಿಕ ಹೆಸರು, ಜನ್ಮ ದಿನಾಂಕ, ಲಿಂಗ ಇತ್ಯಾದಿ ಮಾಹಿತಿ ಭರ್ತಿಗೊಳಿಸಿ. ಆಧಾರ್‌ನಲ್ಲಿ ಇರುವಂತ ಇರಲಿ. ಬಳಿಕ finger print verification ಪ್ರಕ್ರಿಯೆ ಪೂರ್ಣಗೊಳಿಸಿ. ಈಗಾಗಲೇ ರೇಷನ್ ಕಾರ್ಡ್‌ನಲ್ಲಿ ನಿಮ್ಮ ಹೆಸರಿದ್ದರೆ ಅದನ್ನು ಡಿಲೀಟ್ ಮಾಡಿ ಹೊಸತಾಗಿ ಅರ್ಜಿ ಸಲ್ಲಿಸಬಹುದು. ಈಗಿನ ರೇಷನ್ ಕಾರ್ಡ್ ನಲ್ಲಿ ಹೆಸರು ಡಿಲೀಟ್ ಮಾಡದೆಯೇ ಹೊಸತಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
ಕುಟುಂಬದ ಎಲ್ಲ ಸದಸ್ಯರ ವಿವರಗಳನ್ನು ನಮೂದಿಸಿದ ಬಳಿಕ ಅರ್ಜಿಯ ಸಂಖ್ಯೆ ಸಿಗುತ್ತದೆ. ಅದನ್ನು ಬಳಸಿ ಎಡಿಟ್ ಮಾಡಬಹುದು. ಬಳಿಕ ರೇಷನ್ ಕಾರ್ಡ್ ಅಡ್ರೆಸ್ ಸಿಲೆಕ್ಟ್ ಮಾಡಬೇಕು. ಪಿನ್ ಕೋಡ್ ಆಧರಿಸಿ ನ್ಯಾಯ ಬೆಲೆ ಅಂಗಡಿ (Fair price shop) ಮತ್ತು ಏರಿಯಾ ಆಟೊ ಸಿಲೆಕ್ಟ್ ಆಗುತ್ತದೆ. ನಗರ, ವಾರ್ಡ್ ನಂಬರ್ ಅನ್ನು ಸಿಲೆಕ್ಟ್ ಮಾಡಬಹುದು. ಗ್ರಾಮೀಣ ಪ್ರದೇಶವಾಗಿದ್ದರೆ ಪಂಚಾಯತ್ ಸಿಲೆಕ್ಟ್ ಮಾಡಬೇಕು. ಇತರ ಎಲ್ಲ ವಿವರಗಳನ್ನು ಭರ್ತಿಗೊಳಿಸಿದ ಬಳಿಕ ಸರಿ ಎನ್ನಿಸಿದ್ದರೆ Generate RC ಬಟನ್ ಕ್ಲಿಕ್ಕಿಸಿ. ರೇಷನ್ ಕಾರ್ಡ್ ಪ್ರತಿಯ ಪ್ರಿಂಟ್ ಔಟ್ ಅನ್ನು print ಬಟನ್ ಕ್ಲಿಕ್ಕಿಸಿ ತೆಗೆದುಕೊಳ್ಳಬಹುದು.
ಆಸಕ್ತರು ಆನ್‌ಲೈನ್/ ಬೆಂಗಳೂರು ಒನ್/ ಕರ್ನಾಟಕ ಒನ್/ private franchises/ ಜನಸ್ನೇಹಿ ಕೇಂದ್ರ/ ಗ್ರಾಮಪಂಚಾಯತ್/ POS ಶಾಪ್‌ಗಳಲ್ಲಿ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. 70 ರೂ. ಶುಲ್ಕದಲ್ಲಿ ರೇಷನ್ ಕಾರ್ಡ್ ಅನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆಗೆ ತರಿಸಿಕೊಳ್ಳಬಹುದು.
ಪ್ರಮುಖ ಸುದ್ದಿ
Bed Bugs: ಪ್ಯಾರಿಸ್‌ನಲ್ಲಿ ಸಿಕ್ಕಾಪಟ್ಟೆ ತಿಗಣೆ ಕಾಟ! ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಎಂಟ್ರಿ ಕೊಟ್ಟ ಫ್ರಾನ್ಸ್ ಸರ್ಕಾರ
Bed Bugs: ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಗರದಲ್ಲಿ ತಿಗಣೆ ಕಾಟ ವಿಪರೀತವಾಗಿದ್ದು, ಈ ಕುರಿತಾದ ಫೋಟೋ, ವಿಡಿಯೋಗಳನ್ನು ಜನರು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡುತ್ತಿದ್ದಾರೆ.
ಪ್ಯಾರಿಸ್: ಫ್ರಾನ್ಸ್ (France) ರಾಜಧಾನಿ ಪ್ಯಾರಿಸ್ (Paris City) ತನ್ನ ಐಫೆಲ್ ಟವರ್, ಚಾಂಪ್ಸ್-ಎಲಿಸೀಸ್ ಮತ್ತು ಲೌವ್ರೆ ಮ್ಯೂಸಿಯಂ ಸೇರಿದಂತೆ ಇನ್ನ ಅನೇಕ ಐತಿಹಾಸಿಕ ಹೆಗ್ಗುರುತಗಳಿಗಾಗಿ ಪ್ರಸಿದ್ಧಿಯಾಗಿದೆ. ಆದರೆ, ಕಳೆದ ಕೆಲವು ದಿನಗಳಿಂದ ಪ್ಯಾರಿಸ್ ಬೇರೆ ಕಾರಣಕ್ಕೆ ಸುದ್ದಿಯಲ್ಲಿದೆ. ಈ ನಗರದಲ್ಲಿ ಎಲ್ಲೆಂದರಲ್ಲಿ ಕಂಡು ಬರುತ್ತಿರುವ ತಿಗಣೆಗಳಿಂದ (Bed Bugs) ಜನರು ಭಾರೀ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ, ತಿಗಣೆಗಳ ನಿರ್ಮೂಲನಕ್ಕಾಗಿ ಫ್ರಾನ್ಸ್ ಸರ್ಕಾರವು (France Government) ಸಮರವನ್ನೇ ಸಾರಿದೆ(Viral News).
ಹೈಸ್ಪೀಡ್ ರೈಲುಗಳು, ಬಸ್‌ಗಳು, ಸಿನಿಮಾ ಥಿಯೇಟರ್‌ಗಳು, ಚಾರ್ಲ್ಸ್ ಡೇ ಗೌಲ್ ವಿಮಾನ ನಿಲ್ದಾಣ ಸೇರಿದಂತೆ ನಗರದ ಬಹುತೇಕ ತಿಗಣೆ ಕಾಟದ ಫೋಟೋಗಳು ಮತ್ತು ವಿಡಿಯೋಗಳನ್ನು ಪ್ಯಾರಿಸ್ ಜನರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಫ್ರಾನ್ಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Bed bugs seen crawling over seats on Paris trains and buses as France battles a bed bug invasion. pic.twitter.com/XnwcrQgVax
— Project TABS (@ProjectTabs) October 2, 2023
ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಫ್ರಾನ್ಸ್ ಸರ್ಕಾರ ಈಗ ತಿಗಣೆ ಸಂಹಾರಕ್ಕೆ ಮುಂದಾಗಿದೆ. ಫ್ರಾನ್ಸ್ ಸಾರಿಗೆ ಸಚಿವ ಕ್ಲೆಮೆಂಟ್ ಬ್ಯೂನ್ ಅವರು, ಸಾರ್ವಜನಿಕ ಸಾರಿಗೆ ಕಂಪನಿಗಳ ಪ್ರತಿನಿಧಿಗಳ ಸಭೆ ನಡೆಸಲಿದ್ದೇನೆ. ಈ ವೇಳೆ, ತಿಗಣೆಗಳ ಸಮಸ್ಯೆಯನ್ನು ಬಗೆಹರಿಸುವ ಕುರಿತು ಚರ್ಚಿಸಲಾಗುವುದು. ಅಲ್ಲದೇ, ಪ್ರಯಾಣಿಕರಿಗೆ ತಿಗಣೆ ಕಾಟದಿಂದ ತಪ್ಪಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಫ್ರಾನ್ಸ್ ಸರ್ಕಾರ ಕೈಗೊಳ್ಳಲಿದೆ ಎಂಬ ಭರವಸೆ ನೀಡಿದ್ದಾರೆ ಎಂದು ಫ್ರಾನ್ಸ್ 24 ವರದಿ ಮಾಡಿದೆ.
ತಿಗಣೆ ಸಂವಹಾರ ಮಾಡುವುದಕ್ಕಾಗಿಯೇ ಮೀಸಲಾದ ಕಾರ್ಯಪಡೆಯನ್ನು ರಚಿಸುವ ಮೂಲಕ ಜನರ ನೆರವಿಗೆ ಧಾವಿಸಬೇಕು ಎಂದು ಪ್ಯಾರಿಸ್ ಸಿಟಿ ಹಾಲ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಒತ್ತಾಯಿಸಿದೆ. ಫ್ರೆಂಚ್ ಸಾರಿಗೆ ಪೂರೈಕೆದಾರರು ಇತ್ತೀಚೆಗೆ ಈ ತಿಗಣೆಗಳು ಕಂಡು ಬಂದಿಲ್ಲ ವಾಸ್ತವದ ನಡುವೆಯೂ ಅವುಗಳ ಬಗ್ಗೆ ಎಚ್ಚರಿಕೆ ವಹಿಸುವುದಾಗಿ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Viral News: 163 ಇಲಿ ಹಿಡಿಯಲು 69 ಲಕ್ಷ ರೂ. ವೆಚ್ಚ ಮಾಡಿದ ರೈಲ್ವೆ ಇಲಾಖೆ! ಭ್ರಷ್ಟಾಚಾರ ಎಂದು ಕಿಡಿಕಾರಿದ ಕಾಂಗ್ರೆಸ್
ಪ್ಯಾರಿಸ್ ಮೆಟ್ರೋ ಕಾರ್ಯನಿರ್ವಹಣೆ ಮಾಡುವ ಆರ್‌ಎಟಿಪಿ, ಪ್ರತಿಯೊಂದು ಅಂಶವನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಆದರೆ, ಕಳೆದ ಕೆಲವು ದಿನಗಳಿಂದ ನಮ್ಮ ಉಪಕರಣಗಳಲ್ಲಿ ತಿಗಣೆಗಳ ಕುರಿತಾದ ಯಾವುದೇ ಸಾಬೀತಾದ ಪ್ರಕರಣಗಳು ದಾಖಲಾಗಿಲ್ಲ ಎಂದು ಸಿಎನ್ಎನ್‌ಗೆ ತಿಳಿಸಿದೆ.
ಮನೆಗಳಲ್ಲಿ ತಿಗಣೆ ಹೆಚ್ಚಾಗುವ ಸಂಭವಗಳಿವೆ. ತ್ವರಿತಗತಿಯಲ್ಲಿ ತಿಗಣೆಗಳು ಹೆಚ್ಚಾಗುತ್ತಿರುವ ಕುರಿತು ಅಗತ್ಯವಿರುವ ಎಲ್ಲ ಸಂಗತಿಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಪ್ರಯಾಣ, ಹಂಚಿಕೊಳ್ಳುವ ವಸತಿ ವ್ಯವಸ್ಥೆ ಸೇರಿದಂತೆ ಕೆಲವು ಸಂಗತಿಗಳು ತಿಗಣೆಗಳ ಸಮಸ್ಯೆ ಕಾರಣವಾಗಿರಬಹುದು ಎಂದು ANSESನ ಸಾಮಾಜಿಕ ವಿಜ್ಞಾನ, ಅರ್ಥಶಾಸ್ತ್ರ ಮತ್ತು ಸಮಾಜ ವಿಭಾಗದ ಉಪ ನಿರ್ದೇಶಕರಾದ ಕರೀನ್ ಫಿಯೋರ್ ಅವರು ತಿಳಿಸಿದ್ದಾರೆ.
ಕ್ರೀಡೆ
Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್
ಪಾರುಲ್ ಅವರ ಚಿನ್ದದ ಪದಕದೊಂದಿಗೆ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಹ್ಯಾಂಗ್ಜೌ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ (Asian Games) ಸೋಮವಾರ ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಪಾರುಲ್ ಚೌಧರಿ, ಮಂಗಳವಾರ ನಡೆದ ಮಹಿಳೆಯರ 5000 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಓಟದ ಅಂತಿಮ ಕ್ಷಣದಲ್ಲಿ ವೇಗ ಹೆಚ್ಚಿಸಿದ ಅವರು ಅವರು 15:14.75 ಸೆಕೆಂಡುಗಳಲ್ಲಿ ಗುರಿ ತಲುಪಿ ಜಪಾನ್ ನ ರಿರಿಕಾ ಹಿರೊನಾಕಾ ಅವರನ್ನು ಹಿಂದಿಕ್ಕಿದರು. ಈ ಮೂಲಕ ಭಾರತದ ಒಟ್ಟು ಚಿನ್ನದ ಪದಕಗಳ ಸಂಕೆಯ 14ಕ್ಕೆ ಏರಿಕೆಯಾಗಿದೆ ಹಾಗೂ ಒಟ್ಟಾರೆಯಾಗಿ 65 ಪದಕಗಳನ್ನು ಗೆದ್ದುಕೊಂಡಿದೆ.
Powerhouse Parul grabs a #GloriousGold🥇in Women's 5000m 🥳
— SAI Media (@Media_SAI) October 3, 2023
Second time around, she proves that charm and determination pay off, securing her remarkable second medal at #AsianGames2022.
Clocking 15:14.75, Parul's performance is absolutely 🔥!
Heartiest congratulations champ!… pic.twitter.com/NRfxSBJXwH
ಮಹಿಳೆಯರ 400 ಮೀಟರ್ ಓಟದ ಫೈನಲ್ನಲ್ಲಿ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದರು. ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಶತಕ (100), ರಿಂಕು ಸಿಂಗ್ ಅವರ ಅದ್ಭುತ ಶತಕ (37*) ಮತ್ತು ಬೌಲರ್ಗಳ ಅಬ್ಬರದಿಂದಾಗಿ ಭಾರತ ಕ್ರಿಕೆಟ್ ತಂಡವು ತಂಡವು ನೇಪಾಳ ವಿರುದ್ಧ 23 ರನ್ಗಳ ವಿಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಭಾರತ ಪುರುಷರ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ.
ಭಾರತ ಪುರುಷರ ಕಬಡ್ಡಿ ತಂಡವು ಪಂದ್ಯಾವಳಿಯಲ್ಲಿ 55-18 ಅಂಕಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದರೆ, ಮಹಿಳಾ ಹಾಕಿ ತಂಡವು ಹಾಂಗ್ ಕಾಂಗ್ ವಿರುದ್ಧ 13-0 ಅಂತರದಿಂದ ಗೆಲುವು ಸಾಧಿಸಿತು. ಅರ್ಚರಿಯಲ್ಲಿ ಭಾರತೀಯರು ಪ್ರಾಬಲ್ಯ ಮೆರೆದಿದ್ದು, ಪುರುಷರ ವಿಭಾಗದಲ್ಲಿ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಶರ್ಮಾ ಅಖಿಲ ಭಾರತ ಫೈನಲ್ ತಲುಪಿದರೆ, ಜ್ಯೋತಿ ಸುರೇಖಾ ವೆನ್ನಮ್ ಕೂಡ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.
ಬ್ಯಾಡ್ಮಿಂಟರ್ನಲ್ಲಿ ಭಾರತದ ಎಚ್.ಎಸ್.ಪ್ರಣಯ್, ಪಿ.ವಿ.ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ 16ನೇ ಸುತ್ತಿಗೆ ತಲುಪಿದ್ದಾರೆ. ಮಹಿಳೆಯರ 800 ಮೀಟರ್ ಓಟದಲ್ಲಿ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್ ಅಂತಿಮ ಸ್ಥಾನಗಳನ್ನು ಗಳಿಸಿದರೆ. ಭಾರತವು 4×400 ಮೀಟರ್ ತಂಡ ಪುರುಷರ ಸ್ಪರ್ಧೆಯಲ್ಲಿ ಫೈನಲ್ಗೆ ಅರ್ಹತೆ ಪಡೆಯಿತು.
ಪುರುಷರ ಡೆಕಾಥ್ಲಾನ್ನಲ್ಲಿ ಅಗ್ರ ಸ್ಥಾನವನ್ನು ಗಳಿಸುವ ಗುರಿಯನ್ನು ತೇಜಸ್ವಿನ್ ಶಂಕರ್ ಹೊಂದಿದ್ದಾರೆ. 2014ರ ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದಿದ್ದ ಮಹಿಳಾ ಜಾವೆಲಿನ್ ಸ್ಪರ್ಧಿ ಅನ್ನು ರಾಣಿ ಇನ್ನೊಂದು ಪದಕದ ಮೇಲೆ ಗುರಿಯಿಟ್ಟಿದ್ದಾರೆ.
ಭಾರತದ ಪದಕಗಳ ಪಟ್ಟಿ-
- ಚಿನ್ನ: 14
- ಬೆಳ್ಳಿ: 24
- ಕಂಚು: 26
10ನೇ ದಿನದಲ್ಲಿ ಭಾರತದ ಫಲಿತಾಂಶಗಳು
ಮಹಿಳೆಯರ 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಪದಕ ಗೆದ್ದಿದ್ದಾರೆ.
ಮಹಿಳೆಯರ 400 ಮೀಟರ್ ಹರ್ಡಲ್ಸ್ನಲ್ಲಿ ವಿಥ್ಯಾ ರಾಮ್ರಾಜ್ ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳೆಯರ 54 ಕೆಜಿ ಬಾಕ್ಸಿಂಗ್ನಲ್ಲಿ ಪ್ರೀತಿ ಪವಾರ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಕ್ಯಾನೋ ಡಬಲ್ 1000 ಮೀಟರ್ನಲ್ಲಿ ಅರ್ಜುನ್ ಸಿಂಗ್ ಮತ್ತು ಸುನಿಲ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಕ್ರಿಕೆಟ್: ನೇಪಾಳವನ್ನು 23 ರನ್ ಗಳಿಂದ ಮಣಿಸಿದ ಭಾರತ ಸೆಮಿಫೈನಲ್ ಗೆ
ಕಬಡ್ಡಿ: ಭಾರತ ಪುರುಷರ ತಂಡ ಬಾಂಗ್ಲಾದೇಶ ವಿರುದ್ಧ 55-18, ಮಹಿಳಾ ತಂಡ ದಕ್ಷಿಣ ಕೊರಿಯಾ ವಿರುದ್ಧ 56-23 ಅಂತರದಲ್ಲಿ ಜಯ ಸಾಧಿಸಿತು.
ಇದನ್ನೂ ಓದಿ : Asian Games 2023: ಸೆಮಿಯಲ್ಲಿ ಸೋತು ಕಂಚಿಗೆ ತೃಪ್ತಿಪಟ್ಟ ಪ್ರೀತಿ ಪವಾರ್
ಮಹಿಳಾ ಹಾಕಿ: ಹಾಂಕಾಂಗ್ ವಿರುದ್ಧ ಭಾರತಕ್ಕೆ 13-0 ಅಂತರದ ಗೆಲುವು
ಆರ್ಚರಿ (ಕಾಂಪೌಂಡ್): ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಅಖಿಲ ಭಾರತ ಅಂತಿಮ ವೈಯಕ್ತಿಕ ಪುರುಷರ ಸ್ಪರ್ಧೆಯನ್ನು (ಅಕ್ಟೋಬರ್ 7 ರಂದು ಫೈನಲ್) ಸ್ಥಾಪಿಸಿದರು; ಮಹಿಳಾ ಫೈನಲ್ನಲ್ಲಿ ಜ್ಯೋತಿ ಸುರೇಖಾ ವೆನ್ನಮ್, ಕಂಚಿನ ಪದಕಕ್ಕಾಗಿ ಅದಿತಿ ಸೆಣಸಲಿದ್ದಾರೆ (ಇಬ್ಬರೂ ಅಕ್ಟೋಬರ್ 7 ರಂದು)
ಆರ್ಚರಿ (ರಿಕರ್ವ್): ಅತನು ದಾಸ್ ಮತ್ತು ಧೀರಜ್ ಬೊಮ್ಮದೇವರ ಕ್ವಾರ್ಟರ್ ಫೈನಲ್ನಲ್ಲಿ ನಿರ್ಗಮನ.
ಬ್ಯಾಡ್ಮಿಂಟನ್: ಪಿ.ವಿ.ಸಿಂಧು, ಎಚ್.ಎಸ್.ಪ್ರಣಯ್, ಕಿಡಂಬಿ ಶ್ರೀಕಾಂತ್ ಕ್ರಮವಾಗಿ ಮಹಿಳಾ ಮತ್ತು ಪುರುಷರ ಸಿಂಗಲ್ಸ್ನಲ್ಲಿ 16ನೇ ಸುತ್ತಿಗೆ ಪ್ರವೇಶಿಸಿದ್ದಾರೆ.
ಮಹಿಳೆಯರ 800 ಮೀಟರ್ ಓಟ: ಫೈನಲ್ಗೆ ಅರ್ಹತೆ ಪಡೆದ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್
ಪುರುಷರ 4*400 ಮೀಟರ್: ಫೈನಲ್ಸ್ ಅರ್ಹತೆ ಪಡೆದ ಭಾರತ
ಸ್ಕ್ವಾಷ್: ಪುರುಷರ ಸಿಂಗಲ್ಸ್ನಲ್ಲಿ ಸೌರವ್ ಘೋಷಾಲ್, ಮಿಶ್ರ ಡಬಲ್ಸ್ನಲ್ಲಿ ಅಭಯ್-ಅನಾಹತ್ ಮತ್ತು ದೀಪಿಕಾ-ಹರಿಂದರ್ಪಾಲ್ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಕರ್ನಾಟಕ
Kuruba Conference: ಬೆಳಗಾವಿಯಲ್ಲಿ ಬೃಹತ್ ಕುರುಬ ಸಮಾವೇಶದ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಶಕ್ತಿ ಪ್ರದರ್ಶನ
Kuruba Conference: ಬೆಳಗಾವಿಯಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶ ಮಂಗಳವಾರ ನಡೆಯಿತು. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕುರುಬ ನಾಯಕರು, ಸ್ವಾಮೀಜಿಗಳು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.
ಬೆಳಗಾವಿ: ಕಾಂಗ್ರೆಸ್‌ನಲ್ಲಿ ಲಿಂಗಾಯತ ಸಿಎಂ ಮತ್ತು ಮೂವರು ಡಿಸಿಎಂಗಳನ್ನು ಮಾಡಬೇಕು ಎಂಬ ಕೂಗು ಎದ್ದಿರುವ ಹೊತ್ತಿನಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲಿ ಬೃಹತ್ ಕುರುಬ ಸಮಾವೇಶ (Kuruba Conference) ನಡೆಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಪಕ್ಷದಲ್ಲಿ ಒಳಬೇಗುದಿಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರಮುಖ ಕುರುಬ ನಾಯಕರಾಗಿರುವ ಸಿದ್ದರಾಮಯ್ಯ ಅವರ ರಾಜಕೀಯ ವಿರೋಧಿಗಳಿಗೆ ನೇರ ಸಂದೇಶ ರವಾನಿಸುವ ರೀತಿಯಲ್ಲಿ ಇಲ್ಲಿನ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಮಂಗಳವಾರ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶ ಆಯೋಜಿಸಲಾಗಿತ್ತು. ಇದರಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕುರುಬ ನಾಯಕರು, ಸ್ವಾಮೀಜಿಗಳು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಗಣ್ಯರು ಸನ್ಮಾನ ಮಾಡಿದರು.
ಕುರುಬ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಹೆಚ್ಚಳದ ಬೇಡಿಕೆ ಸಮಾವೇಶದ ಪ್ರಮುಖ ಉದ್ದೇಶವಾಗಿತ್ತು. ಇನ್ನು ಸಮಾವೇಶದಲ್ಲಿ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರು ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ | Caste Census Report : ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಲಿ ಎಂದ ಬಿ.ಕೆ. ಹರಿಪ್ರಸಾದ್
ಸಭೆಯಲ್ಲಿ ಸರ್ಕಾರಕ್ಕೆ 7 ಬೇಡಿಕೆಗಳು
1) ಜಾತಿವಾರು ಜನಗಣತಿ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು.
2) ರಾಷ್ಟ್ರ ಮಟ್ಟದಲ್ಲಿ ಕುರುಬರ ಆರ್ಥಿಕ, ಸಮಾಜಿಕ ಸಮೀಕ್ಷೆ ನಡೆಸಬೇಕು.
3) ರಾಷ್ಟ್ರದಲ್ಲಿ ಇರುವ ಎಲ್ಲಾ ಕುರುಬರನ್ನು ಎಸ್‌ಟಿ ಸಮಾಜಕ್ಕೆ ಸೇರಿಸಬೇಕು.
4) ಕೇಂದ್ರ ಮಹಿಳಾ ಮೀಸಲಾತಿಗೆ ಸ್ವಾಗತ. ಹಿಂದುಳಿದ ಮಹಿಳೆಯರಿಗೆ ಒಳ ಮೀಸಲಾತಿ ನೀಡಬೇಕು.
5) ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ನಂದಗಡ ಗ್ರಾಮವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡಬೇಕು.
6) ಕುರಿ ಮೇಯಿಸಲು ಕಂದಾಯ ಭೂಮಿಯನ್ನು ಕಾಯ್ದಿರಿಸಬೇಕು. ಸಂಚಾರಿ ಆಸ್ಪತ್ರೆ, ಸಂಚಾರಿ ಶಾಲೆಗಳನ್ನು ಆರಂಭಿಸಬೇಕು. ಹಾನಿಗೆ ಒಳಗಾದ ಕುರಿಗಳಿಗೆ ಪರಿಹಾರ ನೀಡಬೇಕು.
7) ಕುರಿ, ಮೇಕೆ ಮಹಾಮಂಡಳಕ್ಕೆ 100 ಕೋಟಿ ರೂಪಾಯಿ ಕೊಡಬೇಕು.
ಜಾತಿ ರಾಜಕಾರಣ ಮಾಡಲ್ಲ, ಸಾಮಾಜಿಕ ನ್ಯಾಯ ನನ್ನ ಉಸಿರು: ಸಿದ್ದರಾಮಯ್ಯ
ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಬೇಕು. ನಾನು ಯಾವತ್ತೂ ಜಾತಿ ಮಾಡುವವನಲ್ಲ. ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಸಮಾವೇಶ ನಡೆಸುವುದು ತಪ್ಪಲ್ಲ ಎಂದು ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಹೇಳಿದ್ದರು. ಅದರಂತೆ ಈ ಸಮಾವೇಷ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಾನು ಈ ಜಾತಿ ವ್ಯವಸ್ಥೆಗೆ ಯಾವತ್ತಿದ್ದರೂ ವಿರುದ್ಧ. ಆದರೆ, ಅಶಕ್ತ ಜನ ಸಮುದಾಯಗಳು ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವುದು ತಪ್ಪಲ್ಲ ಎಂದು ನಂಬಿದ್ದೇನೆ. ಅಶಕ್ತ ಸಮುದಾಯಗಳು ಸಂಘಟಿತರಾಗದೇ ಇರುವುದರಿಂದ ಮತ್ತು ತಮ್ಮಲ್ಲಿ ನಾಯಕತ್ವ ಬೆಳೆಸಿಕೊಳ್ಳದೇ ಇರುವುದರಿಂದ ಅವರ ಪಾಲಿನ ಹಕ್ಕುಗಳು ಮತ್ತು ರಾಜಕೀಯ ಅಧಿಕಾರದಿಂದ ವಂಚಿತವಾಗಿವೆ ಎಂದು ವಿವರಿಸಿದರು.
ನಮ್ಮ ಸಮುದಾಯಕ್ಕೆ ರಾಜಕೀಯ ಇತಿಹಾಸ ಇದೆ. ಸಾಂಸ್ಕೃತಿಕ ಭವ್ಯತೆ ಇದೆ. ಹಕ್ಕ ಬುಕ್ಕರಿಂದ ಹಿಡಿದು ಅಹಲ್ಯಾಬಾಯಿ ಹೋಳ್ಕರ್‌ವರೆಗೂ ನಮಗೊಂದು ಚರಿತ್ರೆ ಇದೆ. ಆದರೆ, ಸಂಘಟನೆ ಇಲ್ಲದಿದ್ದರಿಂದ ನಮಗೆ ಸಲ್ಲಬೇಕಾಗಿದ್ದು ಸಲ್ಲುತ್ತಿರಲಿಲ್ಲ. ಸಂಘಟನೆ ಇಲ್ಲದಿದ್ದರೆ ಕಾಗಿನೆಲೆ ಗುರುಪೀಠ, ಸಂಸ್ಥಾನ ಆಗುತ್ತಿರಲಿಲ್ಲ. ಕಾಗಿನೆಲೆ ಪೀಠ ಒಂದು ಜಾತಿಯ ಮಠ ಅಲ್ಲ. ಎಲ್ಲಾ ಶೋಷಿತ ಸಮುದಾಯಗಳಿಗೆ ಸೇರಿದ್ದು ಕಾಗಿನೆಲೆ ಪೀಠ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ | Karnataka Politics : ಬಿಜೆಪಿಗೆ ಚಿಲುಮೆ ತಂದ ಸಂಕಟ! ರಾಜ್ಯ ಸರ್ಕಾರದಿಂದ ಮತ್ತೊಂದು ತನಿಖಾಸ್ತ್ರ
ಪ್ರತಿ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆದರೆ ಮಾತ್ರ ಸಮಸಮಾಜದ ನಿರ್ಮಾಣ ಸಾಧ್ಯ. ಎಲ್ಲರಿಗೂ ಅವರವರ ಪಾಲಿನ ಅಧಿಕಾರ, ಅವಕಾಶ ಸಿಗಬೇಕು. ಈ ಸಾಮಾನ್ಯ ಜ್ಞಾನ ನಮ್ಮನ್ನು ಟೀಕಿಸುವವರಿಗೆ ಇಲ್ಲವಾಗಿದೆ ಎಂದರು.
ನಮ್ಮದು ಹೇಳಿ ಕೇಳಿ ಜಾತಿ ಮತ್ತು ತಾರತಮ್ಯದಿಂದ ಕೂಡಿರುವ ಸಮಾಜ. ಹೀಗಾಗಿ ಅವಕಾಶಗಳ ಹಂಚಿಕೆಯಲ್ಲೂ ತಾರತಮ್ಯ ಇರುತ್ತದೆ. ಇವನ್ನೆಲ್ಲಾ ಸರಿದೂಗಿಸಬೇಕಾದರೆ ಸಂಘಟನೆ, ಸಮಾವೇಶಗಳು ಅಗತ್ಯ ಎಂದ ಅವರು, ನಾನು ರೂಪಿಸಿದ ಐದು ಗ್ಯಾರಂಟಿ ಯೋಜನೆಗಳು ಒಂದು ಸಮಾಜಕ್ಕೆ, ಒಂದು ಧರ್ಮಕ್ಕೆ, ಒಂದು ಜಾತಿಗೆ ಸೀಮಿತವಾದವುಗಳಲ್ಲ. ಸರ್ವ ಜಾತಿ ಜನಗಳ ಬದುಕಿಗೆ ಅನುಕೂಲ ಕಲ್ಪಿಸುತ್ತಿವೆ ಎಂದು ಮುಖ್ಯಮಂತ್ರಿಗಳು ಉದಾಹರಿಸಿದರು.
ಕಾಗಿನೆಲೆ ಕನಕ ಗುರು ಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ ಹಾಗೂ ಅರ್ಜುನಾಭಾಯಿಪುರಿ ಸ್ವಾಮೀಜಿಯವರುಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.
ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಮಾವೇಷ ಉದ್ಘಾಟಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್‌ನ ಅಧ್ಯಕ್ಷ ಮಾಜಿ ಮಂತ್ರಿ ಎಚ್.ವಿಶ್ವನಾಥ್ ಅವರು ವಹಿಸಿದ್ದರು.
ಇದನ್ನೂ ಓದಿ | Lingayat CM : ರಾಜ್ಯದಲ್ಲಿ 3 ಲಿಂಗಾಯತ ಡಿಸಿ, 7 ಎಸ್ಪಿ ಇದಾರೆ; ಶಾಮನೂರು ಹೇಳಿಕೆ 100% ತಪ್ಪು ಎಂದ ರಾಯರೆಡ್ಡಿ
ಮುಖ್ಯ ಅತಿಥಿಗಳಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿಯ ರಾಜ್ಯ ಸಚಿವ ಫಗ್ಗಾನ್ ಸಿಂಗ್ ಕುಲಾಸ್ತೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗೋವಾ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಚಂದ್ರಕಾಂತ್ ಬಾಬು ಕಾವಲೇಕರ್, ಮಹಾರಾಷ್ಟ್ರ ರಾಜ್ಯದ ಮಾಜಿ ಸಚಿವ ಮಹದೇವ್ ಜನಕಾರ್, ದತ್ತಾತ್ರೇಯ ಭರ್ನೆ, ರಾಮ ಶಂಕರ್ ಶಿಂದೆ, ಶೆಫರ್ಡ್ ಇಂಟರ್ ನ್ಯಾಷನಲ್ ಉಪಾಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಆಂಧ್ರ. ಪ್ರದೇಶ ರಾಜ್ಯದ ಸಚಿವೆ ಕೆ.ವಿ.ಉಷಾಶ್ರೀ ಚರಣ್, ಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರ ಮೊಮ್ಮಗ ಭೂಷಣ್ ರಾಜೆ ಹೋಳ್ಕರ್, ಗುಜರಾತ್ ರಾಜ್ಯದ ಮುಖಂಡರಾದ ಸಾಗರ್ ರಾಯ್ಕ ಸೇರಿ 60ಕ್ಕೂ ಹೆಚ್ಚು ಮಂದಿ ನಾನಾ ರಾಜ್ಯಗಳ ಕುರುಬ ಮತ್ತು ಗೋಪಾಲಕ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು.
.
ಕರ್ನಾಟಕ
Shivamogga Violence : ಎನ್‌ಕೌಂಟರ್ ಸುದ್ದಿ ಸುಳ್ಳು, ಮುಸ್ಲಿಮರು ಬಳಸಿದ್ದು ಆಟಿಕೆ ತಲವಾರ್ ಎಂದ ಎಸ್ಪಿ
Shivamogga Violence : ಶಿವಮೊಗ್ಗದಲ್ಲಿ ಪೊಲೀಸ್ ಎನ್‌ಕೌಂಟರ್ ನಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಆರೋಪಿ ಮೇಲೆ ಪೊಲೀಸರು ಎಫ್‌ಐಆರ್ ಹಾಕಿದ್ದಾರೆ. ಜತೆಗೆ ಈದ್ ಮಿಲಾದ್ ಮೆರವಣಿಗೆಯಲ್ಲಿ ಬಳಸಿದ್ದು ಒರಿಜಿನಲ್ ತಲವಾರು ಅಲ್ಲ ಎಂದಿದ್ದಾರೆ.
ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸರು ಎನ್‌ಕೌಂಟರ್ (Police Encounter) ಮಾಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು (Fake News) ಹರಡಿಸಲಾಗುತ್ತಿದೆ. ನಮ್ಮಲ್ಲಿ ಯಾವುದೇ ಎನ್‌ಕೌಂಟರ್ ನಡೆದಿಲ್ಲ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ (Shivamogga SP Mithun Kumar) ಸ್ಪಷ್ಟಪಡಿಸಿದ್ದಾರೆ. ಈ ರೀತಿಯಾದ ಸುಳ್ಳು ಸುದ್ದಿಯನ್ನು ಫಾರ್ವರ್ಡ್ ಮಾಡಿ ಸಮಾಜದಲ್ಲಿ ಅಶಾಂತಿ ಹರಡಿಸುವ ಪ್ರಯತ್ನ ನಡೆಸಿದ ಅಜ್ಗರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ತಿಳಿಸಿದರು. ಇದೇ ವೇಳೆ ಮುಸ್ಲಿಮರ ಮೆರವಣಿಗೆಯಲ್ಲಿ (Muslims Procession) ಬಳಸಿದ್ದು ಆಟಿಕೆಯ ತಲವಾರ್ (Toy Talwar) ಎಂದು ಅವರು ಸ್ಪಷ್ಟಪಡಿಸಿದರು.
ಶಿವಮೊಗ್ಗ ಪೊಲಿಸರು ಒಬ್ಬ ಆರೋಪಿಯನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಹೇಳುವ ಚಿತ್ರ, ವರದಿ, ವಿಡಿಯೊಗಳು ಬೆಳಗ್ಗಿನಿಂದ ಹರಿದಾಡುತ್ತಿದ್ದವು. ಇದು ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ಸದ್ದು ಮಾಡಿತ್ತು. ಕೂಡಲೇ ಎಚ್ಚೆತ್ತುಕೊಂಡ ಶಿವಮೊಗ್ಗ ಪೊಲೀಸರು ಶಿವಮೊಗ್ಗದಲ್ಲಿ ಈ ಫೋಟೊ ಮತ್ತು ಸುದ್ದಿ ಹರಡಲು ಯಾರು ಕಾರಣ ಎಂದು ಹುಡುಕಾಡಿದರು. ಕೊನೆಗೆ ಈ ಚಿತ್ರ ಮತ್ತು ವರದಿಯನ್ನು ಫಾರ್ವರ್ಡ್ ಮಾಡಿದ್ದು ಅಜ್ಗರ್ ಎಂಬಾತ ಎಂದು ತಿಳಿದುಬಂತು. ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಇಷ್ಟು ಮಾತ್ರವಲ್ಲ, ಯಾರೆಲ್ಲ ಈ ಸುಳ್ಳು ಸುದ್ದಿಯನ್ನು ಫಾರ್ವರ್ಡ್ ಮಾಡಿದ್ದಾರೋ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದರು. ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯಾರೂ ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎಸ್ಪಿ
ʻʻಶಿವಮೊಗ್ಗದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದೆ. ಸಹಜ ಸ್ಥಿತಿ ಮರುಕಳಿಸಿದೆ. ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ 24 ಕೇಸು ದಾಖಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಎಲ್ಲೆಡೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಯಾರೂ ಕೂಡ ವದಂತಿಗೆ ಕಿವಿಗೊಡಬೇಡಿ. ಸಾರ್ವಜನಿಕರು ಸುಳ್ಳು ಸುದ್ದಿ ನಂಬಬೇಡಿʼʼ ಎಂದು ವಿನಂತಿಸಿರುವ ಎಸ್‌ಪಿ ಮಿಥುನ್ ಕುಮಾರ್ ಅವರು, ಇನ್ನೂ ಹಲವರನ್ನು ಬಂಧಿಸಲಿದ್ದೇವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆ ಇಲ್ಲ. ಹೊರಗಿನಿಂದ ಬಂದವರ ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿವೆ. ಯಾರು ಕಾರಣಕರ್ತರಿದ್ದಾರೆ ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆʼʼ ಎಂದು ವಿವರಿಸಿದ್ದಾರೆ.
ಇದನ್ನೂ ಓದಿ: Shivamogga Violence : ಶಿವಮೊಗ್ಗ ಗಲಭೆ ವೇಳೆ ಕಾಣಿಸಿಕೊಂಡ ಹೊರ ಜಿಲ್ಲೆ ಕಾರುಗಳ ರಹಸ್ಯ ಬಯಲು
ಮೆರವಣಿಗೆಯಲ್ಲಿ ಜಳಪಿಸಿದ ಕತ್ತಿ ಒರಿಜಿನಲ್ ಅಲ್ಲ, ಆಟಿಕೆ
ಮಚ್ಚು, ಲಾಂಗ್ ತೋರಿಸಿದವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು, ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದು ಬಂದಿದೆ. ಆಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ತಿಳಿಸುತ್ತೇನೆ. ಆದರೆ, ಯಾವುದೇ ಸುಳ್ಳು ಸುದ್ದಿ ವಿಡಿಯೋಗಳನ್ನು ನಂಬಬೇಡಿ ಎಂದು ಅವರು ಹೇಳಿದರು.
ʻʻರಾಗಿಗುಡ್ಡದಲ್ಲಿ ಮೆರವಣಿಗೆ ದಿನ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗುವುದುʼʼ ಎಂದು ಕೂಡಾ ಎಚ್ಚರಿಕೆ ನೀಡಿದರು.
-
ದೇಶ19 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ದೇಶ22 hours ago
Plane Crash: ಜಿಂಬಾಬ್ವೆಯಲ್ಲಿ ವಿಮಾನ ಪತನ, ಭಾರತದ ಉದ್ಯಮಿ ಹಾಗೂ ಅವರ ಪುತ್ರ ದುರ್ಮರಣ
-
ಪ್ರಮುಖ ಸುದ್ದಿ14 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್21 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ20 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್22 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ9 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
South Cinema24 hours ago
Ragini Dwivedi: ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ಸಾಂಗ್ಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!