ಪ್ರಮುಖ ಸುದ್ದಿ
Bank credit : ಸಾಲ ತೆಗೆದುಕೊಳ್ಳಲು ಬ್ಯಾಂಕ್‌ಗಳಿಗೆ ಜನರ ಲಗ್ಗೆ, ಕಾರಣವೇನು?
Bank credit ಬ್ಯಾಂಕ್‌ಗಳಲ್ಲಿ ಸಾಲದ ವಿತರಣೆ ಕಳೆದ ಜೂನ್‌ನಲ್ಲಿ 16.3% ಹೆಚ್ಚಳವಾಗಿದೆ. ಈ ಕುತೂಹಲಕರ ಬೆಳವಣಿಗೆ ಬಗ್ಗೆ ಆರ್‌ಬಿಐ ಬುಲೆಟಿನ್ ಏನು ಹೇಳಿದೆ? ಇಲ್ಲಿದೆ ವರದಿ.
ನವ ದೆಹಲಿ: ಕಳೆದ ಜೂನ್‌ನಲ್ಲಿ ಬ್ಯಾಂಕ್‌ಗಳಲ್ಲಿ ಸಾಲದ ವಿತರಣೆ ಗಣನೀಯವಾಗಿ ಹೆಚ್ಚಳವಾಗಿದೆ. ನಿಖರವಾಗಿ ಹೇಳುವುದಿದ್ದರೆ ಕಳೆದ ವರ್ಷದ ಜೂನ್‌ಗೆ ಹೋಲಿಸಿದರೆ ಈ ಸಲ 16.3% ಏರಿಕೆಯಾಗಿದೆ. ಸೇವೆ, ರಿಟೇಲ್ ಮತ್ತು ಕೃಷಿ ಹಾಗೂ ಸಂಬಂಧಿತ ಚಟುವಟಿಕೆಗಳಲ್ಲಿ ಸಾಲ ಪಡೆಯುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. (Bank credit)
ಸೇವಾ ಕ್ಷೇತ್ರದಲ್ಲಿ ಸಾಲದ ವಿತರಣೆ 26.7% ಏರಿಕೆಯಾಗಿದೆ. ವರ್ಷದ ಹಿಂದೆ ಅದು 12.8% ಇತ್ತು. ಬ್ಯಾಂಕೇತರ ಹಣಕಾಸು ಸಂಸ್ಥೆಗಳಲ್ಲಿ (non-banking financial companies -NBFCs) ಕೂಡ ಸಾಲದ ವಿತರಣೆ ಚುರುಕಾಗಿದೆ ಎಂದು ಆರ್‌ಬಿಐ ಅಂಕಿ ಅಂಶಗಳು ತಿಳಿಸಿದೆ.
ವೈಯಕ್ತಿಕ ಸಾಲಗಳ ವಿತರಣೆಯಲ್ಲಿ 2023ರ ಜೂನ್‌ನಲ್ಲಿ 20.9% ಏರಿಕೆಯಾಗಿದೆ. ಮುಖ್ಯವಾಗಿ ಹೌಸಿಂಗ್ (ವಸತಿ) ಮತ್ತು ವಾಹನ ಸಾಲಗಳ ವಿತರಣೆಯಲ್ಲಿ ಗಣನೀಯ ಹೆಚ್ಚಳವಾಗಿದೆ ಎಂದು ಆರ್‌ಬಿಐ ತಿಳಿಸಿದೆ. (RBI Statement) ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಸಾಲ ವಿತರಣೆಯ ಪ್ರಮಾಣದಲ್ಲಿ 19.7 % ಹೆಚ್ಚಳವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 12.9% ವಿತರಣೆಯಾಗಿತ್ತು.
ಇದನ್ನೂ ಓದಿ: ITR Filing : ವಿಳಂಬಿತ ಐಟಿಆರ್ ಫೈಲಿಂಗ್‌ಗೆ ಕೊನೆಯ ದಿನ ಯಾವಾಗ?
2023ರ ಜೂನ್‌ನಲ್ಲಿ ಕೈಗಾರಿಕಾ ವಲಯಲ್ಲಿ ಸಾಲ ವಿತರಣೆ ಕಳೆದ ವರ್ಷಕ್ಕೆ ಹೋಲಿಸಿದರೆ 8.1%ಕ್ಕೆ ಇಳಿಕೆಯಾಗಿದೆ. 2022ರ ಜೂನ್‌ನಲ್ಲಿ 9.5% ವಿತರಣೆಯಾಗಿತ್ತು. ಹೀಗಿದ್ದರೂ ಭಾರಿ ಕೈಗಾರಿಕೆಗಳಿಗೆ ಸಾಲದ ವಿತರಣೆಯಲ್ಲಿ 6.4% ಹೆಚ್ಚಳವಾಗಿದೆ. ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಿಗೆ ಸಾಲ ವಿತರಣೆ ಇಳಿಕೆಯಾಗಿದೆ. ವೈಯಕ್ತಿಕ ಸಾಲದ ವ್ಯಾಪಕ ಬೆಳವಣಿಗೆಯಿಂದ ಒಟ್ಟಾರೆ ಸಾಲ ವಿತರಣೆ ಹೆಚ್ಚಳವಾಗಿದೆ ಎಂದು ಆರ್‌ಬಿಐ ಬುಲೆಟಿನ್ ತಿಳಿಸಿದೆ.
ಉತ್ಪಾದನೆ ಮತ್ತು ಹೂಡಿಕೆಯ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಮಂದಗತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಹಲವು ಕಡೆ ಮಳೆಯ ಕೊರತೆಯೂ ಕಂಡು ಬಂದಿದೆ. ಹೀಗಿದ್ದರೂ ದೇಶದಲ್ಲಿ ಒಟ್ಟಾರೆಯಾಗಿ ಪರಿಸ್ಥಿತಿ ಸುಧಾರಿಸಿದೆ. ಸರ್ಕಾರದ ಸಾರ್ವಜನಿಕ ವೆಚ್ಚದ ಗುಣಮಟ್ಟ ಹೆಚ್ಚಳವಾಗಿದೆ. ಭಾರತ ಅಭಿವೃದ್ಧಿ ಹೊಂದಿದ ಎಕಾನಮಿಯಾಗಲು ಮುಂದಿನ 25 ವರ್ಷಗಳ ಕಾಲ ವಾರ್ಷಿಕ ಸರಾಸರಿ ಜಿಡಿಪಿ 7.6% ಇರಬೇಕು ಎಂದು ಆರ್‌ಬಿಐ ಬುಲೆಟಿನ್ ತಿಳಿಸಿದೆ.
Live News
ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ
ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಸಾಧನೆ ಮಾಡುವ ಅವಕಾಶವಿದೆ.
ರಾಜ್ಕೋಟ್: ಇಲ್ಲಿನ ಎಸ್ಸಿ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಭಾರತ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ (ind vs Aus) ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಐದು ಬದಲಾವಣೆಗಳನ್ನು ಮಾಡಿವೆ.
A look at our Playing XI for the final ODI 👌👌
— BCCI (@BCCI) September 27, 2023
Follow the Match ▶️ https://t.co/H0AW9UXI5Y#INDvAUS | @IDFCFIRSTBank pic.twitter.com/KpYibJpfSo
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಪುನರಾಗಮನ ಮಾಡಿದರೆ, ತನ್ವೀರ್ ಸಂಗಾ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ರೋಹಿತ್ ಶರ್ಮಾ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದಂತೆ ಭಾರತದಲ್ಲೂ ಬದಲಾವಣೆಗಳು ಸಾಕಷ್ಟಾಗಿವೆ. ನಾಯಕ ಮತ್ತು ವಿರಾಟ್ ಕೊಹ್ಲಿ ಮರಳಿದ್ದಾರೆ ಆದರೆ ಶುಭ್ಮನ್ ಗಿಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಭಾರತವು ವಾಷಿಂಗ್ಟನ್ ಸುಂದರ್ ಅವರಿಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿದೆ. ರಾಜ್ಯದ ನಾಲ್ವರು ಸ್ಥಳೀಯ ಆಟಗಾರರಾದ ಧರ್ಮೇಂದ್ರ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹರ್ವಿಕ್ ದೇಸಾಯಿ ಪಂದ್ಯದುದ್ದಕ್ಕೂ ಡ್ರಿಂಕ್ಸ್ ಮತ್ತು ಫೀಲ್ಡಿಂಗ್ಗಾಗಿ ತಂಡದ ಜತೆಗೆ ಇರಲಿದ್ದಾರೆ.
ಕ್ರೈಂ
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ. ಆಕೆ ಮನೆ ಮನೆಗೆ ತೆರಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಸಹಾಯ ಮಾಡದಿರುವುದು ಕೂಡ ಅಮಾನವೀಯ ಎನಿಸಿದೆ.
ಭೋಪಾಲ್: ದೇಶದಲ್ಲಿ ಬಾಲಕಿಯರು ಸೇರಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು, ಅತ್ಯಾಚಾರ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಎಷ್ಟೇ ಕಠಿಣ ಕ್ರಮ ಜಾರಿಗೆ ತಂದರೂ ಕ್ರೂರ ಜನ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ.
ಉಜ್ಜಯಿನಿಯ ಬದ್ನಗರದ ಬಳಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದಾದ ಬಳಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಅರೆಬೆತ್ತಲೆಯಾಗಿ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದಾಳೆ. ನನಗೆ ಸಹಾಯ ಮಾಡಿ ಎಂದು ಮನೆ ಮನೆಗೆ ತೆರಳಿ ಅಂಗಲಾಚಿದರೂ ಯಾರೋಬ್ಬರು ಕೂಡ ಬಾಲಕಿಗೆ ಸಹಾಯ ಮಾಡಿಲ್ಲ. ಬಾಲಕಿಯ ದುಸ್ಥಿತಿಯನ್ನು ನೋಡಿಕೊಂಡು ಸುಮ್ಮನಿದ್ದರೇ ಹೊರತು, ಏನಾಯ್ತಮ್ಮ ಎಂದು ಕೇಳಿಲ್ಲ, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡಿಲ್ಲ. ಇಂತಹ ಭೀಕರ ದೃಶ್ಯಗಳಿರುವ ವಿಡಿಯೊ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಆಸ್ಪತ್ರೆಗೆ ಸಾಗಿಸಿದ ಸಂತ
ಗೋಳಾಡುತ್ತ ಗೋಳಾಡುತ್ತ ಬಾಲಕಿಯು ಆಶ್ರಮವೊಂದನ್ನು ಪ್ರವೇಶಿಸಿದ್ದಾಳೆ. ಅಲ್ಲಿರುವ ಸಂತರೊಬ್ಬರು ಬಾಲಕಿಗೆ ಟವೆಲ್ ಹೊದಿಸಿ, ಆಕೆಯನ್ನು ಉಜ್ಜಯಿನಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ನಿಜ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಗೊತ್ತಾಗಿದೆ. ರಕ್ತಸ್ರಾವ, ಮೈತುಂಬ ಗಾಯಗಳಾದ ಕಾರಣ ಬಾಲಕಿಯನ್ನು ಇಂದೋರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ದೂರು ನೀಡಲು ಹೋದ ದಲಿತ ಮಹಿಳೆ ಮೇಲೆಯೇ ಅತ್ಯಾಚಾರ ಎಸಗಿದ ಪಿಎಸ್‌ಐ; ಇದೆಂಥಾ ಅನಾಚಾರ!
ಬಾಲಕಿ ಮೇಲೆ ಯಾರು ಅತ್ಯಾಚಾರ ಎಸಗಿದ್ದಾರೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಬಾಲಕಿಯಂತೂ ಪೊಲೀಸರ ಒಂದು ಪ್ರಶ್ನೆಗೂ ಉತ್ತರಿಸಲು ಆಗದಷ್ಟು ಕುಗ್ಗಿಹೋಗಿದ್ದಾಳೆ. ಅಪರಿಚಿತರ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಹಾಗೆಯೇ, ಆರೋಪಿಗಳ ಕುರಿತು ಸುಳಿವು ಸಿಕ್ಕರೆ ಮಾಹಿತಿ ಕೊಡಿ ಎಂಬುದಾಗಿಯೂ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ
CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ
CM Siddaramaiah: ಮತ್ತೆ 18 ದಿನ 3000 ಕ್ಯುಸೆಕ್ ನೀರು ಬಿಡಬೇಕು ಎಂಬ ಆದೇಶವನ್ನು ಪ್ರಶ್ನೆ ಮಾಡಲಾಗುವುದು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.
ಚಾಮರಾಜನಗರ (ಹನೂರು): ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery water regulation Committee) ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು (3000 Cusec water) ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ (Male mahadeshwara betta) ಬಳಿ ಮಾಧ್ಯಮದವರಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯು ಮಂಗಳವಾರ ನೀಡಿದ ಆದೇಶದಲ್ಲಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನವೂ 3000 ಕ್ಯೂಸೆಕ್ ನೀರು ಬಿಡಲು ಆದೇಶ ನೀಡಿತ್ತು. ಇದನ್ನು ಪ್ರಾಧಿಕಾರದ ಮುಂದೆ ಪ್ರಶ್ನಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.
ಸಿಎಂ ಮತ್ತು ಡಿಸಿಎಂ ಇಬ್ಬರೂ ನಮ್ಮಲ್ಲಿ ನೀರು ಇಲ್ಲ ಎಂದು ಹೇಳುತ್ತಲೇ ಪ್ರಾಧಿಕಾರ ಹೇಳಿದಷ್ಟು ನೀರು ಬಿಡುಗಡೆ ಮಾಡಿದ್ದೇ ಸಮಿತಿಗೆ ಸರಾಗ ಆದೇಶ ನೀಡಲು ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಸೆ. 29ರಂದು ಇದರ ವಿರುದ್ಧ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥನೆ
ಮಳೆ ಕೈಕೊಟ್ಟು 195 ತಾಲ್ಲೂಕು ಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.
ಬಂದ್‌ನಿಂದ ಯಾರಿಗೂ ತೊಂದರೆಯಾಗಬಾರದು
ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.
ಇದನ್ನೂ ಓದಿ: CM Siddaramaiah: ಕೃಷಿಗೆ ಸಾಲ ಮಾಡಿ ಮದುವೆ ಛಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ
ಕರ್ನಾಟಕ
BJP JDS alliance : ವಿಜಯದಶಮಿ ನಂತರ ಜೆಡಿಎಸ್ ಸೀಟು ಹಂಚಿಕೆ ಅಂತಿಮ ಮಾತುಕತೆ!
BJP JDS alliance : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಸೀಟು ಹಂಚಿಕೆ ಯಾವಾಗ ಎಂಬ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ವಿಜಯದಶಮಿ ನಂತರ ಈ ಬಗ್ಗೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ಬಿಜೆಪಿ ಜತೆ ಕೈಜೋಡಿಸಿರುವ ಜೆಡಿಎಸ್ ರಾಜ್ಯದಲ್ಲಿ ಹಲವಾರು ರಾಜಕೀಯ ತಂತ್ರಗಳನ್ನು (Political Strategy) ಹೆಣೆಯುತ್ತಿದೆ. ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಅವರು ಬುಧವಾರ (ಸೆಪ್ಟೆಂಬರ್ 27) ಸುದ್ದಿಗೋಷ್ಠಿ ನಡೆಸಿ ತಾವು ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರ ಜತೆ ಮೈತ್ರಿ (BJP JDS alliance) ಕುರಿತಾಗಿ ಮೊದಲು ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಬಳಿ ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಸೀಟು ಹಂಚಿಕೆ ಬಗ್ಗೆ ಪ್ರಶ್ನೆ ಕೇಳಿದಾಗ ವಿಜಯದಶಮಿ ಹಬ್ಬದ (Vijayadashami Festival) ಬಳಿಕ ಬಿಜೆಪಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ. ಇದರ ಜತೆಗೆ ಆ ಸನ್ನಿವೇಶ ಬಂದಾಗ ಚರ್ಚೆ ಮಾಡುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಮೈತ್ರಿ ಸೀಟು ಹಂಚಿಕೆ ಸಂಬಂಧ ವಿಜಯದಶಮಿ ಮುಗಿದ ಬಳಿಕ ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಸಹ ಧನಿಗೂಡಿಸಿದ್ದು, ಆ ಸನ್ನಿವೇಶ ಬರಲಿ, ಆಗ ಚರ್ಚೆ ಮಾಡುತ್ತೇವೆ ಎಂದು ಸೂಚ್ಯವಾಗಿ ಉತ್ತರಿಸಿದ್ದಾರೆ.
ಮೈತ್ರಿಕೂಟ ಸೇರಿದ್ದಷ್ಟೇ
ಈಚೆಗೆ ನವದೆಹಲಿಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆ ಪ್ರಾಥಮಿಕ ಹಂತದ ಮಾತುಕತೆಯನ್ನು ನಡೆಸಿದ್ದರು. ಇದರ ಭಾಗವಾಗಿ ಅಂದೇ ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿತ್ತು. ಎನ್‌ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಆದರೆ, ಇದರ ನಂತರ ಸೀಟು ಹಂಚಿಕೆ ಸಂಬಂಧ ಯಾವುದೇ ರೀತಿಯ ಅಂತಿಮ ಹಂತದ ಚರ್ಚೆ ಆಗಿಲ್ಲ ಎಂದು ಹೇಳಲಾಗಿದೆ.
ಐದು ಕ್ಷೇತ್ರ ಕೇಳಿರುವ ಜೆಡಿಎಸ್
ಮೂಲಗಳ ಪ್ರಕಾರ ಜೆಡಿಎಸ್ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ರಾಯಚೂರು ಸೇರಿದಂತೆ ಇತ್ತ ಮಂಡ್ಯ, ಹಾಸನ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಕೇಳಿತ್ತು. ಆದರೆ, ಈ ಸಂಬಂಧ ಬಿಜೆಪಿ ನಾಯಕರಲ್ಲಿ ಒಮ್ಮತ ಮೂಡಿಲ್ಲ.
ಇದನ್ನೂ ಓದಿ: BJP JDS alliance : ಜೆಡಿಎಸ್‌ಗೆ ಕಾಂಗ್ರೆಸ್ ಮಾಡಿದ ಮೋಸದ ಬಗ್ಗೆ 100 ಕಾರಣ ಹೇಳುವೆ: ಗುಡುಗಿದ ದೇವೇಗೌಡ
ಬಿಜೆಪಿ ನಾಯಕರ ವಿರೋಧ
ಜೆಡಿಎಸ್‌ಗೆ ಯಾವುದೇ ಕಾರಣಕ್ಕೂ ಐದು ಸೀಟನ್ನು ಬಿಟ್ಟುಕೊಡುವುದು ಬೇಡ. ಮೂರು ಕ್ಷೇತ್ರವನ್ನು ಬಿಟ್ಟುಕೊಟ್ಟರೆ ಸಾಕು. ಉಳಿದ ಕಡೆ ಅವರಿಗೆ ಕೊಟ್ಟರೆ ಸೋಲು ನಿಶ್ಚಿತ. ಇದು ಬಿಜೆಪಿಗೆ ನಷ್ಟವನ್ನುಂಟು ಮಾಡುತ್ತದೆ ಎಂದು ರಾಜ್ಯದ ಕೆಲವು ನಾಯಕರು ಈಗಾಗಲೇ ವರದಿ ಒಪ್ಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಜಯ ದಶಮಿ ನಂತರ ನಡೆಯುವ ಮಾತುಕತೆ ಕುತೂಹಲ ಮೂಡಿಸಿದೆ.
-
ದೇಶ14 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ21 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್21 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ21 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್