ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ ಉದ್ಯೋಗಿಗಳು ಜೂನ್ 27ರ ಸೋಮವಾರ ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.
ಪಿಂಚಣಿಗೆ ಸಂಬಂಧಿಸಿ ಮತ್ತು ವಾರಕ್ಕೆ 5 ದಿನಗಳ ಕೆಲಸದ ಅವಧಿಯ ಬೇಡಿಕೆ ಮುಂದಿಟ್ಟು ಸಾರ್ವಜನಿಕ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.
ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ (UFBU), 9 ಬ್ಯಾಂಕ್ ಯೂನಿಯನ್‌ಗಳ ಒಕ್ಕೂಟ ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಕಾನ್ಫಡರೇಷನ್ (AIBEA) ಮತ್ತು ನ್ಯಾಷನಲ್ ಆರ್ಗನೈಸೇಷನ್ ಆಫ್ ಬ್ಯಾಂಕ್ ವರ್ಕರ್ಸ್ ಮುಷ್ಕರಕ್ಕೆ ಕರೆ ನೀಡಿವೆ. ಒಟ್ಟು 7 ಲಕ್ಷ ಉದೈೋಗಿಗಳು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯ ದತ್ತ ತಿಳಿಸಿದ್ದಾರೆ.
ಪ್ರಮುಖ ಬೇಡಿಕೆ ಏನು?
- ಎಲ್ಲ ಪಿಂಚಣಿದಾರರಿಗೆ ಪಿಂಚಣಿ ಪರಿಷ್ಕರಣೆ
- ಎನ್ಪಿಎಸ್ ಬದಲಿಗೆ ಹಳೆಯ ಪಿಂಚಣಿ ಯೋಜನೆ ಜಾರಿ
ಇದನ್ನೂ ಓದಿ IDBI Privatisation: ಖಾಸಗಿ ಬ್ಯಾಂಕ್ ಜತೆ ಐಡಿಬಿಐ ಬ್ಯಾಂಕ್ ವಿಲೀನಕ್ಕೆ ಶೀಘ್ರದಲ್ಲೇ ಅನುಮತಿ ನಿರೀಕ್ಷೆ