ನವ ದೆಹಲಿ: ಕೇಂದ್ರ ಬಜೆಟ್ ಜನ ಸಾಮಾನ್ಯ ಆಶೋತ್ತರಗಳನ್ನು ಈಡೇರಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನಕ್ಕೆ (Budget 2023) ಮುನ್ನ ಮಾಧ್ಯಮವನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, ಇಡೀ ವಿಶ್ವ ಈಗ ಭಾರತದ ಕಡೆಗೆ ಸಕಾರಾತ್ಮಕ ದೃಷ್ಟಿಕೋನದಿಂದ ಎದುರು ನೋಡುತ್ತಿದೆ. ವಿಶ್ವ ಸಮುದಾಯದಲ್ಲಿ ಭಾರತ ವಿಶ್ವಾಸಾರ್ಹ ತಾಣವಾಗಿದೆ ಎಂದು ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿರುವುದು ದೇಶಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು 2023-24 ಸಾಲಿನ ಕೇಂದ್ರ ಮುಂಗಡಪತ್ರವನ್ನು ಮಂಡಿಸಲಿದ್ದಾರೆ. ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಇವತ್ತಿನಿಂದ ಆರಂಭವಾಗಿದೆ. ಆರ್ಥಿಕ ಸಮೀಕ್ಷೆಗೆ ಮುನ್ನ ಸೆನ್ಸೆಕ್ಸ್ 325 ಅಂಕ ಕುಸಿದಿದೆ.