ಪ್ರಮುಖ ಸುದ್ದಿ
Credit card dues : ಕ್ರೆಡಿಟ್ ಕಾರ್ಡ್ ಬಾಕಿ 2 ಲಕ್ಷ ಕೋಟಿ ರೂ.ಗೆ ಏರಿಕೆ, ಕಾರಣವೇನು?
Credit card dues ಕ್ರೆಡಿಟ್ ಕಾರ್ಡ್ ಬಾಕಿ 2 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಇದಕ್ಕೆ ಕಾರಣವೇನು? ಹಾಗೂ ಕ್ರೆಡಿಟ್ ಕಾರ್ಡ್ ಕುರಿತ ಸಾಮಾನ್ಯ ಶುಲ್ಕಗಳ ವಿವರ ಇಲ್ಲಿದೆ.
ದೇಶದಲ್ಲಿ ಮೊದಲ ಬಾರಿಗೆ ಕ್ರೆಡಿಟ್ ಕಾರ್ಡ್‌ಗಳಲ್ಲಿ ಮರು ಪಾವತಿಯಾಗದಿರುವ ಸಾಲದ ಬಾಕಿಯ ಮೊತ್ತ ಏಪ್ರಿಲ್‌ನಲ್ಲಿ 2 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ( Credit card dues ) ಬ್ಯಾಂಕ್‌ಗಳು ದೇಶದಲ್ಲಿ ವಿತರಿಸಿರುವ ಒಟ್ಟು ಸಾಲದಲ್ಲಿ 30% ಕ್ರೆಡಿಟ್ ಕಾರ್ಡ್ ಸಾಲಗಳಾಗಿವೆ. ಕ್ರೆಡಿಟ್ ಕಾರ್ಡ್ ಬಾಕಿ ಮೊತ್ತ ಎರಡು ಲಕ್ಷ ಕೋಟಿ ರೂ.ಗೆ ಏರಿಕೆ ಆಗಿರುವುದಕ್ಕೆ ಕಳವಳ ವ್ಯಕ್ತಪಡಿಸಬೇಕಿಲ್ಲ ಎಂದು ಆರ್‌ಬಿಐ ತಿಳಿಸಿದೆ.
ಆರ್‌ಬಿಐ ಪ್ರಕಾರ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ 2023ರ ಏಪ್ರಿಲ್‌ನಲ್ಲಿ 2,00,258 ಕೋಟಿ ರೂ.ಗೆ ವೃದ್ಧಿಸಿದೆ. 2022ರ ಏಪ್ರಿಲ್‌ಗೆ ಹೋಲಿಸಿದರೆ 7% ಏರಿಕೆಯಾಗಿದೆ. ಹಾಗಂತ ಇದು ಸಾಲ ತೀರಿಸಲು ಸಾಧ್ಯವಾಗದೆ ಉಂಟಾಗಿರುವ ಪರಿಣಾಮವಲ್ಲ, ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಿರುವುದು ಹಾಗೂ ಹಣದುಬ್ಬರ ಕಾರಣ ಎಂದು ವರದಿಯಾಗಿದೆ. ಕಳೆದೊಂದು ವರ್ಷದಿಂದ ಗ್ರಾಹಕರು ಕ್ರೆಡಿಟ್ ಕಾರ್ಡ್ ಮೂಲಕ ಹೆಚ್ಚಿನ ಖರ್ಚು ವೆಚ್ಚಗಳನ್ನು ಮಾಡುತ್ತಿದ್ದಾರೆ ಎಂದು ಎಕ್ಸಿಸ್ ಬ್ಯಾಂಕ್‌ನ ಅಧ್ಯಕ್ಷ ಸಂಜೀವ್ ಮೋಘೆ ತಿಳಿಸಿದ್ದಾರೆ.
ಕ್ರೆಡಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ 8 ಸಾಮಾನ್ಯ ಶುಲ್ಕಗಳು:
ಕ್ರೆಡಿಟ್ ಕಾರ್ಡ್‌ಗಳು ಹಲವು ಶುಲ್ಕಗಳನ್ನು ಹೊಂದಿರುತ್ತವೆ. ಇವುಗಳ ಬಗ್ಗೆ ತಿಳಿದಿದ್ದರೆ ದೂರವಿಟ್ಟು ಖರ್ಚುವೆಚ್ಚ ನಿಯಂತ್ರಿಸಬಹುದು. 8 ಸಾಮಾನ್ಯ ಕ್ರೆಡಿಟ್ ಕಾರ್ಡ್ ಶುಲ್ಕಗಳು ಇಂತಿವೆ: ವಾರ್ಷಿಕ ಶುಲ್ಕ, ಬಡ್ಡಿ ದರ, ವಿಳಂಬ ಶುಲ್ಕ, ವಿದೇಶಿ ವರ್ಗಾವಣೆ ಶುಲ್ಕ, ಬ್ಯಾಲೆನ್ಸ್ ಟ್ರಾನ್ಸ್‌ಫರ್ ಶುಲ್ಕ, ಕ್ಯಾಶ್ ಅಡ್ವಾನ್ಸ್ ಫೀ, ಓವರ್ ದಿ ಲಿಮಿಟ್ ಫೀ, ರಿಟರ್ನ್ಡ್ ಪೇಮೆಂಟ್ ಫೀ.
ಕ್ರೆಡಿಟ್ ಕಾರ್ಡ್‌ದಾರರು ಪ್ರತಿ ವರ್ಷ ವಾರ್ಷಿಕ ಶುಲ್ಕಗಳನ್ನು ನೀಡಬೇಕಾಗುತ್ತದೆ. ಇದು ಕ್ರೆಡಿಟ್‌ಕಾರ್ಡಿನ ಫೀಚರ್‌ಗಳನ್ನು ಅವಲಂಬಿಸಿರುತ್ತದೆ. ಕಾರ್ಡ್ ಖರೀದಿ ದರದ 2%ರಿಂದ 5% ತನಕ ಇರುತ್ತದೆ. ಕ್ರೆಡಿಟ್‌ಕಾರ್ಡ್‌ಗಳು ಬಳಕೆದಾರರಿಗೆ ಎಟಿಎಂಗಳಿಂದ ನಗದು ಹಿಂತೆಗೆದುಕೊಳ್ಳಲು ಅವಕಾಶ ನೀಡುತ್ತದೆ. ಆದರೆ ಇದಕ್ಕೆ ಶುಲ್ಕ ವಿಧಿಸುತ್ತವೆ. ನೀವು ಕ್ರೆಡಿಟ್‌ಕಾರ್ಡ್‌ಗೆ ವಾರ್ಷಿಕ ಶುಲ್ಕ ನೀಡಲು ಬಯಸದಿದ್ದರೆ ಸರಳವಾಗಿ no-annual fee card ಆಯ್ಕೆ ಮಾಡಬಹುದು.
ನೀವು ಪ್ರತಿ ಬಿಲ್ಲಿಂಗ್ ಸೈಕಲ್‌ನಲ್ಲಿ (billing cycle) ಬಿಲ್ ಕುರಿತ ಹಣ ಪಾವತಿಸದಿದ್ದರೆ ಕ್ರೆಡಿಟ್ ಕಾರ್ಡ್ ಬಡ್ಡಿ ದರ ವಿಧಿಸುತ್ತವೆ. ಬಡ್ಡಿ ದರ ದೂರವಿಡಲು ಪ್ರತಿ ತಿಂಗಳು ಸಕಾಲಕ್ಕೆ ಪಾವತಿಸಿ.
2,000 ರೂ. ನೋಟು ಹಿಂತೆಗೆತದಿಂದ ಎಕಾನಮಿಗೆ ತೊಂದರೆ ಇಲ್ಲ:
ಚಲಾವಣೆಯಿಂದ 2000 ರೂ. ನೋಟನ್ನು ವಿತ್‌ಡ್ರಾವಲ್ ಮಾಡಿರುವುದರಿಂದ ಆರ್ಥಿಕತೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ತಿಳಿಸಿದ್ದಾರೆ. ನಾನೊಂದು ವಿಷಯವನ್ನು ಸ್ಪಷ್ಟವಾಗಿ ಹೇಳುತ್ತೇನೆ. 2000 ರೂ. ನೋಟನ್ನು ಹಿಂತೆಗೆದುಕೊಂಡಿರುವುದರಿಂದ ಎಕಾನಮಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ದಾಸ್ ಹೇಳಿದ್ದಾರೆ.
EXCLUSIVE | VIDEO: "One thing I can clearly tell you is that the Rs 2,000 currency note that we are withdrawing right now will not have any negative impact on the economy," says RBI Governor Shaktikanta Das. pic.twitter.com/SBR6pZhsP7
— Press Trust of India (@PTI_News) June 26, 2023
ಕರ್ನಾಟಕ
BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್: ಎಚ್.ಡಿ. ಕುಮಾರಸ್ವಾಮಿ ಕಿಡಿ
BJP JDS alliance : ಕೋಮುವಾದಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ. ಅಲ್ಲದೆ, ಜಾತ್ಯತೀತತೆಯನ್ನು ನಾಶ ಮಾಡಿದ್ದೇ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಎಲ್ಲೆಲ್ಲಿ ಸೆಕ್ಯುಲರಿಸಂ ಇತ್ತೋ ಅದನ್ನು ಕಾಂಗ್ರೆಸ್‌ನವರೇ ನಾಶ ಮಾಡಿದರು. ಅಧಿಕಾರಕ್ಕಾಗಿ ಏನನ್ನೆಲ್ಲ ಮಾಡಿದರು? ಫಾರೂಕ್ ಅಬ್ದುಲ್ಲ (Farooq Abdullah) ಅವರನ್ನು ಯಾವ ಸಿದ್ಧಾಂತ ಉಳಿಸುವುದಕ್ಕೆ ಅವರು ಸೋಲಿಸಿದರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (Former Prime Minister HD DeveGowda) ಇದನ್ನೆಲ್ಲ ನೋಡಿ, ನೋವು ಅನುಭವಿಸಿದ್ದಾರೆ. ಒಂದು ಸಮಾಜಕ್ಕೆ ಸಹಾಯ ಮಾಡಬೇಕು ಅಂತ ದೇವೇಗೌಡರು ಮಾಡಿದ ಹಾಗೆ ಯಾರೂ ಮಾಡಿಲ್ಲ. ಈಗಾಗಲೇ ಇಬ್ರಾಹಿಂ ಅವರಿಗೆ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ಮುಸ್ಲಿಮರಿಗೆ ನಾನು ಗೌರವ ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಈ ಮೂಲಕ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS alliance) ಬಗ್ಗೆ ಪ್ರಸ್ತಾಪ ಮಾಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಾಢ್ಯವಾಗಿದ್ದರೆ, ನನಗೆ ವೋಟ್ ಹಾಕುತ್ತಿರಲಿಲ್ಲ. ನಾನು ಯಾರಿಗೂ ಅಗೌರವಯುತವಾಗಿ ನಡೆದುಕೊಂಡಿಲ್ಲ. ಇಬ್ರಾಹಿಂ ಜೊತೆ ಹಲವು ವಿಷಯ ಚರ್ಚೆ ಮಾಡಿದ್ದೇನೆ. ಇವತ್ತು ದೇಶಕ್ಕೆ ಅವಶ್ಯಕತೆ ಇರುವ ಬಗ್ಗೆ ಲೆಕ್ಕ ಹಾಕಿದ್ದೇವೆ. ಹಾಗಾಗಿ ಈ ಮೈತ್ರಿಯನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಸಿಎಂ ಮಾಡಿ ಎಂದು ನಾವು ಕೇಳಿದ್ದೆವಾ?
ಈಗ ಬಿಜೆಪಿ ಬಿ ಟೀಂ ಅನ್ನೋದನ್ನು ದೇವೇಗೌಡರು ಪ್ರೂವ್ ಮಾಡಿದ್ದರು ಅಂತಿದ್ದಾರಲ್ಲ ಅವತ್ತು ದೇವೇಗೌಡರು ನಮ್ಮ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಬೇಡ ಅಂದಿದ್ದರು. ಆಗ ನಾವು ಅಧಿಕಾರಕ್ಕಾಗಿ ಕಾಂಗ್ರೆಸ್ ಜತೆ ಸೇರಿರಲಿಲ್ಲ. ಆದರೆ, ನನ್ನನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಮುಂದೆ ಬಂದಿದ್ದು ಯಾರು? ಅಂದು ನನಗೆ ಬಿಜೆಪಿಯಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ, ನಡ್ಡಾ ಅವರಿಂದ ಫೋನ್ ಬಂದಿತ್ತು. ಆಗ ನಾನು ಬಿಜೆಪಿ ಜತೆ ಸೇರಿದ್ದರೆ 5 ವರ್ಷದ ಆಡಳಿತ ನಮ್ಮದಾಗಿರುತ್ತಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಹಾಸನದಲ್ಲಿ ರಾಹುಲ್ ಗಾಂಧಿ ಕರೆದುಕೊಂಡು ಬಂದು ಭಾಷಣ ಮಾಡಿಸಿದ್ದರು. ಸಿದ್ದರಾಮಯ್ಯ ಅವರು ಜಾತ್ಯತೀತತೆಯನ್ನು ಉಳಿಸುತ್ತೇನೆ ಎಂದು ಹೇಳುತ್ತಾರೆ. ಆದರೆ, ಅಂದು ನನ್ನ ಸರ್ಕಾರವನ್ನು ಬೀಳಿಸುವಾಗ 5 ಶಾಸಕರನ್ನು ಕರೆತಂದರೆ, ಅತ್ತ ಕಡೆಯಿಂದ ಮತ್ತೆ ಐವರನ್ನು ಕಳುಹಿಸಿಕೊಡುತ್ತೇನೆ ಎಂದು ಹೇಳಿದ್ದವರು ಯಾರು? ಜಾತ್ಯತೀತೆ ಉಳಿಸುವ ಕಾಂಗ್ರೆಸ್ ಸರ್ಕಾರವನ್ನು ಇದೀಗ ನೋಡುತ್ತಿದ್ದೀರಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಕಾವೇರಿ ತಟದಲ್ಲಿ ರೈತರ ಉಳಿವಿಗೆ ದೇವೇಗೌಡರೇ ಕಾರಣ
ನೀರಾವರಿ ಸಮಸ್ಯೆ ಬಗೆಹರಿಸಲು ದೇವೇಗೌಡರು ಹಳ್ಳಿ ಹಳ್ಳಿ ಸುತ್ತಿದ್ದಾರೆ. ನೀರಾವರಿಗೆ ದೇವೇಗೌಡರು ಮಾಡಿರುವುದನ್ನು ಯಾರೊಬ್ಬರೂ ಮಾಡಿಲ್ಲ. ಚರ್ಚೆ ಮಾಡುವ ಸಂಘಟನೆಗಳಿಗೆ ಒಂದು ಮಾತು ಹೇಳುತ್ತೇನೆ. ಕಾವೇರಿ ತಟದಲ್ಲಿ ರೈತರು ಉಳಿದಿರುವುದಕ್ಕೆ ದೇವೇಗೌಡರೇ ಕಾರಣ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪ್ರಿಯಾಂಕ್ ಖರ್ಗೆ ಮಾತಿಗೆ ತಿರುಗೇಟು
ನಮ್ಮ ಪಕ್ಷ ಉಳಿಸಿಕೊಳ್ಳಲು ಕಾಲು ಹಿಡಿದುಕೊಂಡರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಜನತಾದಳಕ್ಕೆ ಇನ್ನು ಆ ದುರ್ಗತಿ ಬಂದಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಯಾಕೆ ಕಾವೇರಿ ಬಗ್ಗೆ ಧ್ವನಿ ಎತ್ತಲಿಲ್ಲ? ಕಾವೇರಿ ವಿಚಾರವಾಗಿ ಯಾಕೆ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ? ಕೆಆರ್‌ಎಸ್ ನೀರಿನ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಈ ಸರ್ಕಾರ ಇಷ್ಟು ಕೇವಲವಾಗಿ ನಡೆದುಕೊಳ್ಳುತ್ತಿದೆ. ವಿಷಯವನ್ನು ಡೈವರ್ಟ್ ಮಾಡುತ್ತಿದೆ. ಪಕ್ಷದ ಬಗ್ಗೆ ಹೆಸರು ಕೆಡಿಸಲು ಹೊರಟಿದ್ದಾರೆ. ನನಗೇನೂ ಶಾಕ್ ಕೊಡುವ ವಿಷಯವಲ್ಲ ಇದು. ಈಗಾಗಲೇ ನನಗೆ ಸಾಕಷ್ಟು ಶಾಕ್ ಕೊಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಮೈನಾರಿಟಿಗೆ ತೊಂದರೆ ಮಾಡಲ್ಲ: ಎಚ್.ಡಿ. ದೇವೇಗೌಡ
ನಾನು ಇವತ್ತು ನೀರಾವರಿ ಮಂತ್ರಿಗಳ ಯಾವ ಮಾತಿಗೂ ಗಮನ ಕೊಡಲ್ಲ. ಬಾಂಗ್ಲಾದೇಶದ ನೀರಿನ ಸಮಸ್ಯೆ ಬಗೆಹರಿಸಿದ್ದೆ. ನಮ್ಮ ಮುಂದೆ ಇರೋದು ಮೈನಾರಿಟಿ ಮಾತು ಅಷ್ಟೇ. ನಾವು ಮೈನಾರಿಟಿ ಎಲ್ಲೇ ಇದ್ದರೂ ತೊಂದರೆ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು. ಆಗ ಮಧ್ಯ ಪ್ರವೇಶಿಸಿದ ಎಚ್.ಡಿ. ಕುಮಾರಸ್ವಾಮಿ, ಮೈನಾರಿಟಿ ಮಾತ್ರ ಅಲ್ಲ ಇಡೀ ಕರ್ನಾಟಕದ ರಕ್ಷಣೆ ನಮ್ಮ ಗುರಿಯಾಗಿದೆ. ನಾಟ್ ಓನ್ಲಿ ಮೈನಾರಿಟಿ ಬ್ರದರ್, ಎಂಟೈರ್ ಕರ್ನಾಟಕ ರಕ್ಷಣೆ ಮಾಡುತ್ತೇವೆ ಎಂದು ಗುಡುಗಿದರು.
ಇದನ್ನೂ ಓದಿ: BJP JDS alliance : ವಿಜಯದಶಮಿ ನಂತರ ಜೆಡಿಎಸ್ ಸೀಟು ಹಂಚಿಕೆ ಅಂತಿಮ ಮಾತುಕತೆ!
ಕಾವೇರಿ ನೀರಿನ ವಿಷಯದಲ್ಲಿ ಈಗ ಬಂದಿರುವ ಆದೇಶವು ನನ್ನ ರಾಜ್ಯದ ಜನತೆಯ ಮರಣ ಶಾಸನವಾಗಿದೆ ಎಂದು ಎಚ್.ಡಿ. ದೇವೇಗೌಡ ಬೇಸರವನ್ನು ಹೊರಹಾಕಿದರು.
Live News
ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ
ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಸಾಧನೆ ಮಾಡುವ ಅವಕಾಶವಿದೆ.
ರಾಜ್ಕೋಟ್: ಇಲ್ಲಿನ ಎಸ್ಸಿ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಭಾರತ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ (ind vs Aus) ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಐದು ಬದಲಾವಣೆಗಳನ್ನು ಮಾಡಿವೆ.
A look at our Playing XI for the final ODI 👌👌
— BCCI (@BCCI) September 27, 2023
Follow the Match ▶️ https://t.co/H0AW9UXI5Y#INDvAUS | @IDFCFIRSTBank pic.twitter.com/KpYibJpfSo
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಪುನರಾಗಮನ ಮಾಡಿದರೆ, ತನ್ವೀರ್ ಸಂಗಾ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ರೋಹಿತ್ ಶರ್ಮಾ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದಂತೆ ಭಾರತದಲ್ಲೂ ಬದಲಾವಣೆಗಳು ಸಾಕಷ್ಟಾಗಿವೆ. ನಾಯಕ ಮತ್ತು ವಿರಾಟ್ ಕೊಹ್ಲಿ ಮರಳಿದ್ದಾರೆ ಆದರೆ ಶುಭ್ಮನ್ ಗಿಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಭಾರತವು ವಾಷಿಂಗ್ಟನ್ ಸುಂದರ್ ಅವರಿಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿದೆ. ರಾಜ್ಯದ ನಾಲ್ವರು ಸ್ಥಳೀಯ ಆಟಗಾರರಾದ ಧರ್ಮೇಂದ್ರ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹರ್ವಿಕ್ ದೇಸಾಯಿ ಪಂದ್ಯದುದ್ದಕ್ಕೂ ಡ್ರಿಂಕ್ಸ್ ಮತ್ತು ಫೀಲ್ಡಿಂಗ್ಗಾಗಿ ತಂಡದ ಜತೆಗೆ ಇರಲಿದ್ದಾರೆ.
ಕ್ರೈಂ
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ. ಆಕೆ ಮನೆ ಮನೆಗೆ ತೆರಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಸಹಾಯ ಮಾಡದಿರುವುದು ಕೂಡ ಅಮಾನವೀಯ ಎನಿಸಿದೆ.
ಭೋಪಾಲ್: ದೇಶದಲ್ಲಿ ಬಾಲಕಿಯರು ಸೇರಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು, ಅತ್ಯಾಚಾರ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಎಷ್ಟೇ ಕಠಿಣ ಕ್ರಮ ಜಾರಿಗೆ ತಂದರೂ ಕ್ರೂರ ಜನ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ.
ಉಜ್ಜಯಿನಿಯ ಬದ್ನಗರದ ಬಳಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದಾದ ಬಳಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಅರೆಬೆತ್ತಲೆಯಾಗಿ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದಾಳೆ. ನನಗೆ ಸಹಾಯ ಮಾಡಿ ಎಂದು ಮನೆ ಮನೆಗೆ ತೆರಳಿ ಅಂಗಲಾಚಿದರೂ ಯಾರೋಬ್ಬರು ಕೂಡ ಬಾಲಕಿಗೆ ಸಹಾಯ ಮಾಡಿಲ್ಲ. ಬಾಲಕಿಯ ದುಸ್ಥಿತಿಯನ್ನು ನೋಡಿಕೊಂಡು ಸುಮ್ಮನಿದ್ದರೇ ಹೊರತು, ಏನಾಯ್ತಮ್ಮ ಎಂದು ಕೇಳಿಲ್ಲ, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡಿಲ್ಲ. ಇಂತಹ ಭೀಕರ ದೃಶ್ಯಗಳಿರುವ ವಿಡಿಯೊ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಆಸ್ಪತ್ರೆಗೆ ಸಾಗಿಸಿದ ಸಂತ
ಗೋಳಾಡುತ್ತ ಗೋಳಾಡುತ್ತ ಬಾಲಕಿಯು ಆಶ್ರಮವೊಂದನ್ನು ಪ್ರವೇಶಿಸಿದ್ದಾಳೆ. ಅಲ್ಲಿರುವ ಸಂತರೊಬ್ಬರು ಬಾಲಕಿಗೆ ಟವೆಲ್ ಹೊದಿಸಿ, ಆಕೆಯನ್ನು ಉಜ್ಜಯಿನಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ನಿಜ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಗೊತ್ತಾಗಿದೆ. ರಕ್ತಸ್ರಾವ, ಮೈತುಂಬ ಗಾಯಗಳಾದ ಕಾರಣ ಬಾಲಕಿಯನ್ನು ಇಂದೋರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ದೂರು ನೀಡಲು ಹೋದ ದಲಿತ ಮಹಿಳೆ ಮೇಲೆಯೇ ಅತ್ಯಾಚಾರ ಎಸಗಿದ ಪಿಎಸ್‌ಐ; ಇದೆಂಥಾ ಅನಾಚಾರ!
ಬಾಲಕಿ ಮೇಲೆ ಯಾರು ಅತ್ಯಾಚಾರ ಎಸಗಿದ್ದಾರೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಬಾಲಕಿಯಂತೂ ಪೊಲೀಸರ ಒಂದು ಪ್ರಶ್ನೆಗೂ ಉತ್ತರಿಸಲು ಆಗದಷ್ಟು ಕುಗ್ಗಿಹೋಗಿದ್ದಾಳೆ. ಅಪರಿಚಿತರ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಹಾಗೆಯೇ, ಆರೋಪಿಗಳ ಕುರಿತು ಸುಳಿವು ಸಿಕ್ಕರೆ ಮಾಹಿತಿ ಕೊಡಿ ಎಂಬುದಾಗಿಯೂ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ
CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ
CM Siddaramaiah: ಮತ್ತೆ 18 ದಿನ 3000 ಕ್ಯುಸೆಕ್ ನೀರು ಬಿಡಬೇಕು ಎಂಬ ಆದೇಶವನ್ನು ಪ್ರಶ್ನೆ ಮಾಡಲಾಗುವುದು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.
ಚಾಮರಾಜನಗರ (ಹನೂರು): ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery water regulation Committee) ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು (3000 Cusec water) ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ (Male mahadeshwara betta) ಬಳಿ ಮಾಧ್ಯಮದವರಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯು ಮಂಗಳವಾರ ನೀಡಿದ ಆದೇಶದಲ್ಲಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನವೂ 3000 ಕ್ಯೂಸೆಕ್ ನೀರು ಬಿಡಲು ಆದೇಶ ನೀಡಿತ್ತು. ಇದನ್ನು ಪ್ರಾಧಿಕಾರದ ಮುಂದೆ ಪ್ರಶ್ನಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.
ಸಿಎಂ ಮತ್ತು ಡಿಸಿಎಂ ಇಬ್ಬರೂ ನಮ್ಮಲ್ಲಿ ನೀರು ಇಲ್ಲ ಎಂದು ಹೇಳುತ್ತಲೇ ಪ್ರಾಧಿಕಾರ ಹೇಳಿದಷ್ಟು ನೀರು ಬಿಡುಗಡೆ ಮಾಡಿದ್ದೇ ಸಮಿತಿಗೆ ಸರಾಗ ಆದೇಶ ನೀಡಲು ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಸೆ. 29ರಂದು ಇದರ ವಿರುದ್ಧ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥನೆ
ಮಳೆ ಕೈಕೊಟ್ಟು 195 ತಾಲ್ಲೂಕು ಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.
ಬಂದ್‌ನಿಂದ ಯಾರಿಗೂ ತೊಂದರೆಯಾಗಬಾರದು
ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.
ಇದನ್ನೂ ಓದಿ: CM Siddaramaiah: ಕೃಷಿಗೆ ಸಾಲ ಮಾಡಿ ಮದುವೆ ಛಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ
-
ದೇಶ14 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ22 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್21 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ21 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್