Oil price up: ಕಚ್ಚಾ ತೈಲ ದರ ಸ್ಫೋಟ, ಬ್ಯಾರೆಲ್‌ಗೆ 120 ಡಾಲರ್ ಗೆ ಜಿಗಿತ - Vistara News

ಪ್ರಮುಖ ಸುದ್ದಿ

Oil price up: ಕಚ್ಚಾ ತೈಲ ದರ ಸ್ಫೋಟ, ಬ್ಯಾರೆಲ್‌ಗೆ 120 ಡಾಲರ್ ಗೆ ಜಿಗಿತ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ ಗೆ 120 ಡಾಲರ್‌ ಗಳ ಗಡಿ ದಾಟಿದೆ. ಭಾರತದಂಥ ಪ್ರಮುಖ ಆಮದುದಾರ ರಾಷ್ಟ್ರಗಳಿಗೆ ಇದು ಸವಾಲಾಗಿ ಪರಿಣಮಿಸಿದೆ.

VISTARANEWS.COM


on

oil price
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 120 ಡಾಲರ್‌ಗಳ ಗಡಿಯನ್ನು ದಾಟಿದೆ. ಇದರಿಂದ ಭಾರತದಂಥ ಪ್ರಮುಖ ತೈಲ ಆಮದು ರಾಷ್ಟ್ರಕ್ಕೆ ಸವಾಲಾಗಿ ಪರಿಣಮಿಸಿದೆ.

ರಷ್ಯಾದಿಂದ 2022ರ ಅಂತ್ಯದ ವೇಳೆಗೆ ಕಚ್ಚಾ ತೈಲ ಆಮದನ್ನು ಶೇ.90ರಷ್ಟು ಸ್ಥಗಿತಗೊಳಿಸಲು ಐರೋಪ್ಯ ಒಕ್ಕೂಟ ಸಮ್ಮತಿಸಿದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ 120 ಡಾಲರ್‌ಗಳ ಗಡಿ ದಾಟಿತು. ಯುರೋಪ್‌ ರಷ್ಯಾದಿಂದ ತೈಲ ಆಮದು ಕಡಿತಗೊಳಿಸಿದರೆ ಅಥವಾ ಸ್ಥಗಿತಗೊಳಿಸಿದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ತೈಲಕ್ಕೆ ಯರೋಪಿನಿಂದ ಬೇಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಜುಲೈ ತಿಂಗಳಿನ ವಾಯಿದಾ ವಹಿವಾಟಿನಲ್ಲಿ ಕಚ್ಚಾ ತೈಲ ದರ ಬ್ಯಾರೆಲ್‌ಗೆ 122 ಡಾಲರ್‌ಗೆ ಜಿಗಿದಿದೆ. ಚೀನಾದಲ್ಲಿ ಕೋವಿಡ್‌ ಉಪಶಮನವಾಗಿದ್ದು, ದೊಡ್ಡ ನಗರಗಳಲ್ಲಿ ನಿರ್ಬಂಧಗಳು ತೆರವಾಗುತ್ತಿವೆ. ಆದ್ದರಿಂದ ತೈಲಕ್ಕೆ ಬೇಡಿಕೆ ಹೆಚ್ಚುವ ನಿರೀಕ್ಷೆ ಇದೆ. 2020ರ ಮಾರ್ಚ್‌ನಲ್ಲಿ 100 ಡಾಲರ್‌ಗೆ ತೈಲ ದರ ಏರಿತ್ತು.

ಕಚ್ಚಾ ತೈಲ ದರ ಜಿಗಿತ ಹೀಗೆ‌ (ಪ್ರತಿ ಬ್ಯಾರೆಲ್‌ಗೆ ಡಾಲರ್‌ಗಳಲ್ಲಿ ದರ)

2021 ಡಿಸೆಂಬರ್74
2022 ಜನವರಿ86
ಫೆಬ್ರವರಿ97
ಮಾರ್ಚ್‌117
ಏಪ್ರಿಲ್‌104
ಮೇ120

ಹೀಗಿದ್ದರೂ, ಈಗಾಗಲೇ ರಷ್ಯಾದಿಂದ ಯುರೋಪ್‌ಗೆ ತೈಲ ರಫ್ತು ಇಳಿಕೆಯಾಗಿದ್ದು, ಆಮದು ಕಡಿತದಿಂದ ಅಂಥ ದರ ಏರಿಕೆ ಆಗದು ಎಂಬ ವಾದವೂ ಇದೆ.

ಭಾರತಕ್ಕೆ ರಷ್ಯಾದಿಂದ ತೈಲ ಆಮದು ಹೆಚ್ಚಳ

ರಷ್ಯಾವು ಕಳೆದ ಫೆಬ್ರವರಿ 24ರಂದು ಉಕ್ರೇನ್‌ ವಿರುದ್ಧ ದಾಳಿ ನಡೆಸಿದ ಬಳಿಕ ಇಲ್ಲಿಯವರೆಗೆ ಭಾರತ 34 ದಶಲಕ್ಷ ಬ್ಯಾರೆಲ್‌ (3.4 ಕೋಟಿ ) ಕಚ್ಚಾ ತೈಲವನ್ನು ಆಮದು ಮಾಡಿದೆ ಎಂದು ರಿಫಿನಿಟಿವ್‌ ಎಕಾನ್‌ ಸಂಸ್ಥೆಯ ವರದಿ ತಿಳಿಸಿದೆ. 2021ರ ಇದೇ ಅವಧಿಗೆ ಹೋಲಿಸಿದರೆ ಮೂರು ಪಟ್ಟು ವೃದ್ಧಿಸಿದೆ.

ರಷ್ಯಾದಿಂದ ಸಿಪಿಸಿ ಬ್ಲೆಂಡ್‌ ಕಚ್ಚಾ ತೈಲವನ್ನು ಭಾರತವು ಆಮದು ಮಾಡಿಕೊಳ್ಳುತ್ತಿದೆ. ಬ್ಲ್ಯಾಕ್‌ಸೀ ಬಂದರು ಮೂಲಕ ಇದು ರಫ್ತಾಗುತ್ತಿದೆ. ಭಾರತವು ಏಷ್ಯಾದ ಮೂರನೇ ದೊಡ್ಡ ಆರ್ಥಿಕತೆ ಹಾಗೂ ವಿಶ್ವದ ಮೂರನೇ ದೊಡ್ಡ ತೈಲ ಆಮದುದಾರ ದೇಶವಾಗಿದೆ. ರಷ್ಯಾದ ಉರಲ್‌ ಮಾದರಿಯ ಕಚ್ಚಾ ತೈಲವನ್ನು ರಿಯಾಯಿತಿ ದರದಲ್ಲಿ ಪಡೆಯುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರೆಲ್‌ಗೆ 120 ರೂ.ಗಳ ಗಡಿ ದಾಟಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಕಚ್ಚಾ ತೈಲ ಆಮದು ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ:OIL PRICES RISE: ಬ್ರೆಂಟ್‌ ಕಚ್ಚಾ ತೈಲ ದರ ಬ್ಯಾರೆಲ್‌ಗೆ 113 ಡಾಲರ್‌ಗೆ ಜಿಗಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಭಾರತ ಹಿಂದು ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತ ಹಿಂದು ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ. ಭಾರತ ಬಹುತ್ವದ ದೇಶ, ಯಾವುದೇ ಒಂದು ಸೀಮಿತ ಧರ್ಮಕ್ಕೆ ಸೇರಿದ ರಾಷ್ಟ್ರವಾಗಲು ಸಾಧ್ಯವಿಲ್ಲ. ಹಲವು ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಮರ್ತ್ಯ ಸೇನ್ ಏನು ಹೇಳಿದ್ದರು?

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು, ಈ ಚುನಾವಣೆಯು ಭಾರತವು ಹಿಂದು ರಾಷ್ಟ್ರವಲ್ಲ, ಅದು ಜಾತ್ಯತೀತ ಹಾಗೂ ಸರ್ವಧರ್ಮಗಳ ರಾಷ್ಟ್ರವೆಂಬುದನ್ನು ಸಾಬೀತುಪಡಿಸಿದೆ. ಮುಂದೆಯೂ ಭಾರತವನ್ನು ಸಂಪೂರ್ಣವಾಗಿ ಹಿಂದುರಾಷ್ಟ್ರವನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಇಲ್ಲಿ ಹಿಂದು ಧರ್ಮ ಪ್ರಧಾನವಾಗಿ ಇರುತ್ತದೆ. ಆದರೆ, ಉಳಿದ ಧರ್ಮಗಳೂ ಜತೆಯಲ್ಲಿ ಅಸ್ತಿತ್ವದಲ್ಲಿರುತ್ತವೆ ಎಂದು ಹೇಳಿದ್ದರು.

ಇದನ್ನೂ ಓದಿ | CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

Valmiki Corporation Scam Zameer Ahmed appointed as Ballari district in-charge minister

ಬಳ್ಳಾರಿ: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ (Ex Minister Nagendra) ರಾಜೀನಾಮೆ (Resignation) ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ (Zameer Ahmed Khan) ಅವರನ್ನು ನೇಮಕ ಮಾಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಆರೋಪಗಳು ಕೇಳಿ ಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ನಾಗೇಂದ್ರ ಸ್ಥಾನಕ್ಕೆ ಈಗ ಜಮೀರ್ ಅಹ್ಮದ್‌ ನೇಮಕಗೊಂಡಿದ್ದಾರೆ. ಕಳೆದ ವಾರ ವಿಜಯನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಕೊಟ್ಟಿದ್ದರು. ಶುಕ್ರವಾರ ಅಧಿಕೃತವಾಗಿ ಸರ್ಕಾರವು ಜಮೀರ್ ಅಹ್ಮದ್‌ಗೆ ಬಳ್ಳಾರಿ ಉಸ್ತುವಾರಿಯನ್ನು ಕೊಟ್ಟಿದೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು.

Continue Reading

ಪ್ರಮುಖ ಸುದ್ದಿ

Petrol Price : ಮುಂಬೈನಲ್ಲಿ ಪೆಟ್ರೋಲ್​ ಬೆಲೆ ಇಳಿಸಿದ ಮಹಾರಾಷ್ಟ್ರ ಸರ್ಕಾರ

Petrol Price:ಮುಂಬೈ ಪ್ರದೇಶದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 24 ರಿಂದ 21 ಕ್ಕೆ ಇಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇಕಡಾ 26 ರಿಂದ 25 ಕ್ಕೆ ಇಳಿಸಲಾಗುವುದು ಎಂದಿದೆ. ಇದು ಮುಂಬೈ, ನವೀ ಮುಂಬೈ ಮತ್ತು ಥಾಣೆ ಸೇರಿದಂತೆ ಮುಂಬೈ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆಯಾಗಿದೆ ಹಾಗೂ ಡೀಸೆಲ್​ ಬೆಲೆ 2 ರೂಪಾಯಿ ಕಡಿಮೆಯಾಗಿದೆ.

VISTARANEWS.COM


on

petrol Price
Koo

ಬೆಂಗಳೂರು: ಕರ್ನಾಟಕದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾರಣ ಜನಾಕ್ರೋಶ ಉಂಟಾಗಿದೆ. ಪೆಟ್ರೋಲ್​ಗೆ 3 ರೂಪಾಯಿ ಹಾಗೂ ಡಿಸೆಲ್​ಗೆ 3.50 ರೂಪಾಯಿ ಏರಿಕೆಯಾಗಿರುವ ಕಾರಣ ಬೇರೆಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ವಿರೋಧ ಪಕ್ಷ ಬಿಜೆಪಿ ಇದರ ವಿರುದ್ದ ಆಂದೋಲನ ಶುರು ಮಾಡಿದೆ. ಈ ಎಲ್ಲ ಬೆಳವಣಿಗೆ ನಡುವೆ ನೆರೆಯ ಮಹಾರಾಷ್ಟ್ರ ಸರ್ಕಾರ ಮುಂಬಯಿ ನಗರದ ಪ್ರದೇಶಧಲ್ಲಿ ಪೆಟ್ರೋಲ್​ ಬೆಲೆಯನ್ನು (Petrol Price) ಇಳಿಕೆ ಮಾಡಿದೆ. ಆದಾಗ್ಯೂ ಆ ರಾಜ್ಯದಲ್ಲಿ ಇಂಧನ ಬೆಲೆ ಕರ್ನಾಟಕಕ್ಕಿಂತ ಹೆಚ್ಚಾಗಿದೆ.

ಮುಂಬೈ ಪ್ರದೇಶದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 24 ರಿಂದ 21 ಕ್ಕೆ ಇಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇಕಡಾ 26 ರಿಂದ 25 ಕ್ಕೆ ಇಳಿಸಲಾಗುವುದು ಎಂದಿದೆ. ಇದು ಮುಂಬೈ, ನವೀ ಮುಂಬೈ ಮತ್ತು ಥಾಣೆ ಸೇರಿದಂತೆ ಮುಂಬೈ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆಯಾಗಿದೆ ಹಾಗೂ ಡೀಸೆಲ್​ ಬೆಲೆ 2 ರೂಪಾಯಿ ಕಡಿಮೆಯಾಗಿದೆ.

ಮಹಾರಾಷ್ಟ್ರ ಬಜೆಟ್ ಮಂಡಿಸಿದ ಉಪಮುಖ್ಯಮಂತ್ರಿ ಅಜಿತ್ ಪವಾರ್, “ಮುಂಬೈ ಪ್ರದೇಶದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 24 ರಿಂದ 21 ಕ್ಕೆ ಇಳಿಸಲಾಗಿದೆ. ಮುಂಬೈ ವಲಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.26ರಿಂದ ಶೇ.25ಕ್ಕೆ ಇಳಿಸಲಾಗಿದ್ದು, ಇದರಿಂದ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 65 ಪೈಸೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಜೂನ್ 28 ರಂದು ಮುಂಬೈನಲ್ಲಿ ಪೆಟ್ರೋಲ್ 104.21 ರೂ.ಗೆ ತಲುಪಿದ್ದರೆ, ಡೀಸೆಲ್ ಬೆಲೆ ಲೀಟರ್​ಗೆ 92.15 ರೂಪಾಯಿ ಇದೆ. ಕರ್ನಾಟಕದಲ್ಲಿ 102. 86 ರೂಪಾಯಿ ಆದರೆ ಬೆಂಗಳೂರು 88. 94 ರೂಪಾಯಿ ನಡೆದಿದೆ.

ಮಹಾರಾಷ್ಟ್ರ ಬಜೆಟ್

2024-25ರ ರಾಜ್ಯ ಬಜೆಟ್​ನಲ್ಲಿ 21 ರಿಂದ 60 ವರ್ಷ ವಯಸ್ಸಿನ ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂ.ಗಳ ಭತ್ಯೆ ಒಳಗೊಂಡ ಆರ್ಥಿಕ ನೆರವು ಯೋಜನೆಯನ್ನು ಹಣಕಾಸು ಖಾತೆಯನ್ನು ಹೊಂದಿರುವ ಪವಾರ್ ಬಜೆಟ್​ನಲ್ಲಿ ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ಪವಾರ್ ಅವರು ‘ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆ’ ಎಂಬ ಯೋಜನೆಯನ್ನು ಜುಲೈನಿಂದ ಜಾರಿಗೆ ತರಲಾಗುವುದು ಎಂದು ಹೇಳಿದರು.

ಈ ಯೋಜನೆಗಾಗಿ ವಾರ್ಷಿಕ ಬಜೆಟ್ ನಲ್ಲಿ 46,000 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ಅವರು ಹೇಳಿದರು. ಮತ್ತೊಂದು ಕಲ್ಯಾಣ ಯೋಜನೆಯನ್ನು ಘೋಷಿಸಿದ ಹಣಕಾಸು ಸಚಿವರು, ಐದು ಸದಸ್ಯರ ಅರ್ಹ ಕುಟುಂಬಕ್ಕೆ ‘ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ’ ಅಡಿ ಪ್ರತಿ ವರ್ಷ ಮೂರು ಅಡುಗೆ ಅನಿಲ ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.

Continue Reading

ದೇಶ

Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Rahul Gandhi: ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಸಂಸತ್ತಿನಲ್ಲಿ ದೇಶದ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಮಾತನಾಡುವಾಗ ಸ್ಪೀಕರ್‌ ಓಂ ಬಿರ್ಲಾ ಅವರು ಏಕೆ ಮೈಕ್‌ಅನ್ನು ಆಫ್‌ ಮಾಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ವಿಡಿಯೊವನ್ನು ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಎನ್‌ಡಿಎ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸಂಸತ್ತಿನ ಮೊದಲ ವಿಶೇಷ ಅಧಿವೇಶನ ನಡೆಯುತ್ತಿದೆ. ಆಡಳಿತ ಪಕ್ಷಕ್ಕೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸವಾಲೊಡ್ಡುತ್ತಿದ್ದಾರೆ. ಇದರ ಬೆನ್ನಲ್ಲೇ, ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಅವರು ನೀಟ್‌ ಅಕ್ರಮದ ಕುರಿತು ಮಾತನಾಡುವಾಗ ಅವರ ಮೈಕ್‌ ಆಫ್‌ ಆಗಿದ್ದು, ಸ್ಪೀಕರ್‌ ಓಂ ಬಿರ್ಲಾ (Om Birla) ಅವರೇ ಮೈಕ್‌ ಆಫ್‌ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ರಾಹುಲ್‌ ಗಾಂಧಿ ಅವರು ಲೋಕಸಭೆಯಲ್ಲಿ ಮಾತನಾಡುವಾಗ ಸ್ಪೀಕರ್‌ ಸರ್‌, ನನಗೆ ಮೈಕ್‌ ಕೊಡಿ ಎಂದಿದ್ದಾರೆ. ಆಗ ಸ್ಪೀಕರ್‌, “ನನ್ನ ಬಳಿ ಯಾವುದೇ ಬಟನ್‌ ಇಲ್ಲ” ಎಂದಿದ್ದಾರೆ. ಇದಕ್ಕೂ ಮೊದಲು ರಾಹುಲ್‌ ಗಾಂಧಿ ಅವರು ಮಾತನಾಡಿದರು. “ದೇಶದ ವಿದ್ಯಾರ್ಥಿಗಳಿಗೆ ಸರ್ಕಾರ ಹಾಗೂ ಪ್ರತಿಪಕ್ಷಗಳ ಕಡೆಯಿಂದ ಜಂಟಿ ಸಂದೇಶ ನೀಡಲು ಬಯಸುತ್ತೇವೆ. ಹಾಗೆಯೇ, ವಿದ್ಯಾರ್ಥಿಗಳಿಗೆ ಗೌರವ ನೀಡುವ ದಿಸೆಯಲ್ಲಿ ಸಂಸತ್ತಿನಲ್ಲಿ ನಾವು ನೀಟ್‌ ಕುರಿತು ಗಂಭೀರವಾಗಿ ಚರ್ಚಿಸೋಣ” ಎಂದರು. ಇದೇ ವೇಳೆ ರಾಹುಲ್‌ ಗಾಂಧಿ ಅವರ ಮೈಕ್‌ ಆಫ್‌ ಆಗಿದ್ದು, ಪ್ರತಿಪಕ್ಷಗಳು ಗಲಾಟೆ ಮಾಡಿವೆ. ಆಗ ಸ್ಪೀಕರ್‌ ಅವರು ನನ್ನ ಬಳಿ ಬಟನ್‌ ಇಲ್ಲ ಎಂದಿದ್ದಾರೆ.

ಕಾಂಗ್ರೆಸ್‌ ಆಕ್ರೋಶ

“ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಸಂಸತ್ತಿನಲ್ಲಿ ದೇಶದ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಮಾತನಾಡುವಾಗ ಸ್ಪೀಕರ್‌ ಓಂ ಬಿರ್ಲಾ ಅವರು ಏಕೆ ಮೈಕ್‌ಅನ್ನು ಆಫ್‌ ಮಾಡಿದ್ದಾರೆ” ಎಂದು ಕೇರಳ ಕಾಂಗ್ರೆಸ್‌ ಘಟಕದ ಎಕ್ಸ್‌ ಖಾತೆಯಿಂದ ಪೋಸ್ಟ್‌ ಮಾಡಲಾಗಿದೆ. ಅಲ್ಲದೆ, ರಾಹುಲ್‌ ಗಾಂಧಿ ಅವರು ಮಾತನಾಡುವಾಗಲೇ ಮೈಕ್‌ ಆಫ್‌ ಆಗುವ ವಿಡಿಯೊವನ್ನು ಕೂಡ ಹಲವು ಕಾಂಗ್ರೆಸ್‌ ನಾಯಕರು ಹಂಚಿಕೊಂಡಿದ್ದಾರೆ. ಹಾಗೆಯೇ, ಸ್ಪೀಕರ್‌ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ನಾಯಕ ದೀಪೆಂದರ್‌ ಸಿಂಗ್‌ ಹೂಡಾ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಾವು ಕ್ಷಿಪ್ರವಾಗಿ ನೀಟ್‌ ವಿಷಯದ ಕುರಿತು ಚರ್ಚೆ ಮಾಡೋಣ ಎಂದು ಬೇಡಿಕೆ ಇಟ್ಟೆವು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡುತ್ತಿದ್ದರು. ಆಗ ಮೈಕ್‌ ಆಫ್‌ ಆಗಿದೆ. ಇದು ನಮ್ಮ ಆಕ್ರೋಶವನ್ನು ಕೆರಳಿಸಿತು” ಎಂದಿದ್ದಾರೆ. ಜುಲೈ 24 ರಂದು ಸಂಸತ್‌ ವಿಶೇಷ ಅಧಿವೇಶನ ಆರಂಭವಾಗಿದ್ದು, ಜುಲೈ 3ರವರೆಗೆ ನಡೆಯಲಿದೆ.

ಇದನ್ನೂ ಓದಿ: ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Continue Reading

ಕರ್ನಾಟಕ

POCSO Case: ಪೋಕ್ಸೊ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಚಾರ್ಜ್‌ಶೀಟ್‌; ಮುಂದೇನು?

POCSO Case: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

VISTARANEWS.COM


on

POCSO Case
Koo

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ (POCSO Case) ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಹೀಗಾಗಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿದೆ. ಈ ನಡುವೆ, ಯಡಿಯೂರಪ್ಪ ಅವರು ಈ ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಹೈಕೋರ್ಟ್‌ ಏನು ತೀರ್ಪು ನೀಡಲಿದೆ ಎಂಬುದರ ಕುರಿತು ಭಾರಿ ಕುತೂಹಲ ಮೂಡಿದೆ.

ಸಿಐಡಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್‌ ನಾಯಕ್‌ ಅವರು ನ್ಯಾಯಾಲಯಕ್ಕೆ ದೋಷಾರೋ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್‌ ಶೀಟ್ ಸಲ್ಲಿಕೆ‌ ವೇಳೆ ನ್ಯಾಯಾಲಯವು ಆರೋಪ ಪಟ್ಟಿ ಸ್ವೀಕರಿಸಲು ವ್ಯಾಪ್ತಿ ಹೊಂದಿರುವ ಕುರಿತು ತಿಳಿಸುವಂತೆ ಸೂಚಿಸಿತ್ತು. ಆಗ ಎಸ್‌ಪಿಪಿ ನಾಯಕ್‌ ಅವರು ʼಪೋಕ್ಸೊ ನ್ಯಾಯಾಲಯವು ಅಪರಾಧ ಕೇಂದ್ರಿತ ನ್ಯಾಯಾಲಯ ಎಂದು ಪರಿಗಣಿಸಲ್ಪಡುತ್ತದೆ. ಜನಪ್ರತಿನಿಧಿಗಳ ನ್ಯಾಯಾಲಯವು ಆರೋಪಿ ಕೇಂದ್ರಿತ ನ್ಯಾಯಾಲಯವಾಗುತ್ತದೆ. ಹೀಗಾಗಿ, ಆರೋಪಪಟ್ಟಿಯನ್ನು ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಸಲ್ಲಿಕೆ ಮಾಡುವ ಅಗತ್ಯವಿಲ್ಲ ಎಂದು ವಾದಿಸಿದ್ದರು. ಇದನ್ನು ಆಲಿಸಿದ ಪೀಠವು ಆರೋಪ ಪಟ್ಟಿ ಸ್ವೀಕರಿಸಿದ್ದು, ಅದನ್ನು ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮಂಡಿಸುವಂತೆ ಆದೇಶಿಸಿದೆ.

ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಯಡಿಯೂರಪ್ಪ ನಿರ್ದೇಶನದಂತೆ ಆರೋಪಿ ರುದ್ರೇಶ್‌ ಅವರಿಂದ 2 ಲಕ್ಷ ರೂ. ಪಡೆದು ಅದನ್ನು ಸಂತ್ರಸ್ತ ಮಹಿಳೆಗೆ ನೀಡಿ, ಆಕೆಯ ಫೋನ್‌ನಲ್ಲಿನ ಬಿಎಸ್‌ವೈಗೆ ಸಂಬಂಧಿಸಿದ ವಿಡಿಯೊವನ್ನು ಡಿಲೀಟ್‌ ಮಾಡಿಸಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಿಂದ ತೆಗೆಸಿದ ಆರೋಪ ಅರುಣ್ ಮತ್ತು ಮರಿಸ್ವಾಮಿ ಅವರ ಮೇಲಿದೆ.

ಇನ್ನು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

ಇದನ್ನೂ ಓದಿ | Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

Continue Reading
Advertisement
Bigg Boss OTT 3 Armaan Malik both Kritika Malik and Payal Malik in bigg bos house
ಬಾಲಿವುಡ್3 mins ago

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

CM Siddaramaiah
ಕರ್ನಾಟಕ10 mins ago

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

petrol Price
ಪ್ರಮುಖ ಸುದ್ದಿ19 mins ago

Petrol Price : ಮುಂಬೈನಲ್ಲಿ ಪೆಟ್ರೋಲ್​ ಬೆಲೆ ಇಳಿಸಿದ ಮಹಾರಾಷ್ಟ್ರ ಸರ್ಕಾರ

Rahul Gandhi
ದೇಶ26 mins ago

Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

POCSO Case
ಕರ್ನಾಟಕ45 mins ago

POCSO Case: ಪೋಕ್ಸೊ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಚಾರ್ಜ್‌ಶೀಟ್‌; ಮುಂದೇನು?

SHAFALI VERMA
ಕ್ರಿಕೆಟ್54 mins ago

SHAFALI VERMA: 40 ವರ್ಷದ ಟೆಸ್ಟ್​ ದಾಖಲೆ ಮುರಿದ ಭಾರತದ ಶಫಾಲಿ ವರ್ಮ

Rich Wedding
ಪ್ರಮುಖ ಸುದ್ದಿ1 hour ago

ಮದುವೆಗೆ ಹೋದವರಿಗೆ 66 ಸಾವಿರ ರೂ. ನಗದು, ಭರ್ಜರಿ ಗಿಫ್ಟ್‌ ಕೊಟ್ಟ ದಂಪತಿ; ಎಲ್ಲಿ ಅಂತೀರಾ…?‌

Actor Darshan A young woman came to Parappa Agrahara to see Darshan
ಕ್ರೈಂ1 hour ago

Actor Darshan: ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಆಗಮಿಸಿದ ಯುವತಿ; ಯಾರಾಕೆ?

Valmiki Corporation Scam Zameer Ahmed appointed as Ballari district in-charge minister
ಬಳ್ಳಾರಿ1 hour ago

Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

T20 World Cup Final
ಕ್ರೀಡೆ2 hours ago

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌