Dabur acquired Badshah | ಡಾಬರ್‌ ತೆಕ್ಕೆಗೆ ಬಾದ್‌ಶಾ ಮಸಾಲಾ ಕಂಪನಿ, 587 ಕೋಟಿ ರೂ.ಗಳ ಡೀಲ್ - Vistara News

ಪ್ರಮುಖ ಸುದ್ದಿ

Dabur acquired Badshah | ಡಾಬರ್‌ ತೆಕ್ಕೆಗೆ ಬಾದ್‌ಶಾ ಮಸಾಲಾ ಕಂಪನಿ, 587 ಕೋಟಿ ರೂ.ಗಳ ಡೀಲ್

ಎಫ್‌ಎಂಸಿಜಿ ವಲಯದ ದಿಗ್ಗಜ ಡಾಬರ್‌ ಇಂಡಿಯಾ, (Dabur acquired Badshah) ಬಾದ್‌ಶಾ ಮಸಾಲಾ ಕಂಪನಿಯನ್ನು 587 ಕೋಟಿ ರೂ.ಗೆ ಖರೀದಿಸಿದೆ.

VISTARANEWS.COM


on

dabur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಎಫ್‌ಎಂಸಿಜಿ ವಲಯದ ದಿಗ್ಗಜ ಕಂಪನಿ ಡಾಬರ್‌ ಇಂಡಿಯಾ ಲಿಮಿಟೆಡ್‌, (Dabur acquired Badshah) ಬಾದ್‌ಶಾ ಮಸಾಲಾ ಕಂಪನಿಯಲ್ಲಿನ 51% ಷೇರುಗಳನ್ನು ಖರೀದಿಸಿದೆ.

ಡಾಬರ್‌ ಇಂಡಿಯಾ ಲಿಮಿಟೆಡ್‌ 99,528 ಕೋಟಿ ರೂ. ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ. ಲಾರ್ಜ್‌ ಕ್ಯಾಪ್‌ ಕಂಪನಿಯ ಸಾಲಿಗೆ ಸೇರಿದೆ. 2023ರ ಜನವರಿ 2ರಂದು ಡೀಲ್‌ ಪೂರ್ಣವಾಗಿದೆ.

ಡಾಬರ್‌ ಇಂಡಿಯಾ ಷೇರು ದರ ಮಂಗಳವಾರ 562 ರೂ.ಗಳ ಮಟ್ಟದಲ್ಲಿ ಇತ್ತು. ಈ ಹಿಂದಿನ ದರಕ್ಕೆ ಹೋಲಿಸಿದರೆ ಏರಿಕೆಯಾಗಿದೆ.‌ ಡಾಬರ್‌ ಇಂಡಿಯಾ 139 ವರ್ಷ ಹಳೆಯ ಎಫ್‌ಎಂಸಿಜಿ ಕಂಪನಿಯಾಗಿದ್ದು, ಉದ್ಯಮಿ ಎಸ್‌ಕೆ ಬರ್ಮನ್‌ 1884ರಲ್ಲಿ ಸ್ಥಾಪಿಸಿದ್ದರು. ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಬಾದ್‌ಶಾ ಮಸಾಲಾ ಮುಂಬಯಿ ಮೂಲದ ಕಂಪನಿಯಾಗಿದ್ದು, 1958ರಲ್ಲಿ ಸ್ಥಾಪನೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Heart Attack: ವಿದ್ಯಾರ್ಥಿಗಳು, ಯುವತಿಯರು ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಯೋಧ ಬಲವೀರ್‌ ಸಿಂಗ್‌ ಛಬ್ರಾ ಅವರು ಉತ್ಸಾಹದಿಂದಲೇ ದೇಶಭಕ್ತಿ ಗೀತೆಗೆ ಪ್ರದರ್ಶನ ನೀಡುತ್ತಿದ್ದರು. ಇದೇ ವೇಳೆ ಅವರು ವೇದಿಕೆ ಮೇಲೆಯೇ ಕುಸಿದುಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Heart Attack
Koo

ಭೋಪಾಲ್:‌ ಮಧ್ಯಪ್ರದೇಶದಲ್ಲಿ (Madhya Pradesh) ನಿವೃತ್ತ ಯೋಧರೊಬ್ಬರು ವೇದಿಕೆ ಮೇಲೆ ತಿರಂಗಾ ಹಿಡಿದು ನೃತ್ಯ ಮಾಡುತ್ತಿರುವಾಗಲೇ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಇಂದೋರ್‌ನ ಫೂಟಿ ಖೋಟಿ ಪ್ರದೇಶದಲ್ಲಿ ನಡೆದ ಯೋಗ ಶಿಬಿರದಲ್ಲಿ ನಿವೃತ್ತ ಯೋಧ ದೇಶಭಕ್ತಿ ಗೀತೆಗೆ ನೃತ್ಯ ಮಾಡುತ್ತಿದ್ದರು. ಸೇನೆಯ ಸಮವಸ್ತ್ರ ಧರಿಸಿ, ಕೈಯಲ್ಲಿ ತಿರಂಗಾ ಹಿಡಿದು ಯೋಧ ವೇದಿಕೆ ಮೇಲೆ ಕುಣಿಯುತ್ತಿದ್ದರು. ಇದೇ ವೇಳೆ ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಈ ಮನಕಲಕುವ ವಿಡಿಯೊ ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಭಾರತೀಯ ಸೇನೆಯ ನಿವೃತ್ತ ಯೋಧ, 73 ವರ್ಷದ ಬಲವೀರ್‌ ಸಿಂಗ್‌ ಛಬ್ರಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯೋಗ ಶಿಬಿರದ ಹಿನ್ನೆಲೆಯಲ್ಲಿ ಬಲವೀರ್‌ ಸಿಂಗ್‌ ಛಬ್ರಾ ಅವರನ್ನು ಶುಕ್ರವಾರ (ಮೇ 31) ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳು, ಯುವತಿಯರು ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಲವೀರ್‌ ಸಿಂಗ್‌ ಛಬ್ರಾ ಅವರು ಉತ್ಸಾಹದಿಂದಲೇ ದೇಶಭಕ್ತಿ ಗೀತೆಗೆ ಪ್ರದರ್ಶನ ನೀಡುತ್ತಿದ್ದರು. ಇದೇ ವೇಳೆ ಅವರು ವೇದಿಕೆ ಮೇಲೆಯೇ ಕುಸಿದುಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಿದ್ದರೂ ಚಪ್ಪಾಳೆ ತಟ್ಟುತ್ತಿದ್ದ ಜನ

ಬಲವೀರ್‌ ಸಿಂಗ್‌ ಛಬ್ರಾ ಅವರು ವೇದಿಕೆ ಮೇಲೆ ಉತ್ಸಾಹದಿಂದಲೇ ದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಯೋಗ ಶಿಬಿರದಲ್ಲಿ ಪಾಲ್ಗೊಂಡವರು ಚಪ್ಪಾಳೆ ಮೂಲಕ ಹುರಿದುಂಬಿಸುತ್ತಿದ್ದರು. ಆದರೆ, ಅಸಹನೀಯ ನೋವಿನಿಂದ ನಿವೃತ್ತ ಯೋಧ ಕೆಳಗೆ ಬಿದ್ದರೂ ಜನ ಚಪ್ಪಾಳೆ ತಟ್ಟುತ್ತಲೇ ಇದ್ದರು. ನೃತ್ಯದ ಭಾಗವಾಗಿಯೇ ಬಲವೀರ್‌ ಸಿಂಗ್‌ ಛಬ್ರಾ ಅವರು ಕೆಳಗೆ ಬಿದ್ದಿದ್ದಾರೆ ಎಂಬುದಾಗಿ ತಪ್ಪು ತಿಳಿದ ಜನ ಚಪ್ಪಾಳೆ ತಟ್ಟುವುದನ್ನು ಮುಂದುವರಿಸಿದ್ದರು. ಇದಾದ ಕೆಲ ನಿಮಿಷಗಳ ಬಳಿಕವೇ ಅಲ್ಲಿದ್ದವರಿಗೆ ನಿವೃತ್ತ ಯೋಧ ನೋವು ಸಹಿಸದೆ ಕುಸಿದಿದ್ದಾರೆ ಎಂಬುದು ಗೊತ್ತಾಗಿದೆ.

“73ನೇ ವಯಸ್ಸಿನಲ್ಲೂ ಬಲವೀರ್‌ ಸಿಂಗ್‌ ಛಬ್ರಾ ಅವರು ನಮ್ಮ ಕರೆ ಓಗೊಟ್ಟು, ಉತ್ಸಾಹದಿಂದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ದೇಶಭಕ್ತಿ ಗೀತೆಗೆ ಅವರು ವೇದಿಕೆ ಮೇಲೆ ಹೆಜ್ಜೆ ಹಾಕುತ್ತಿದ್ದರು. ಇದೇ ವೇಳೆ ಅವರು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು” ಎಂದು ಶಿಬಿರದ ಆಯೋಜಕ ರಾಜ್‌ಕುಮಾರ್‌ ಜೈನ್‌ ಮಾಹಿತಿ ನೀಡಿದ್ದಾರೆ.‌

ನೇತೃದಾನ ಮಾಡಿ ಸಾರ್ಥಕತೆ ಮೆರೆದ ನಿವೃತ್ತ ಯೋಧ

ಬಲವೀರ್‌ ಸಿಂಗ್‌ ಛಬ್ರಾ ಅವರ ಪುತ್ರ ಜಗಜೀತ್‌ ಸಿಂಗ್ ಅವರು ತಂದೆಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದಾರೆ. “ಹಲವು ವರ್ಷಗಳಿಂದ ನನ್ನ ತಂದೆಯು ದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಸಾವಿನ ಬಳಿಕವೂ ಅವರು ನೇತ್ರದಾನ ಹಾಗೂ ಚರ್ಮದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

Continue Reading

ಚಿಕ್ಕಮಗಳೂರು

Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Prajwal Revanna Case: ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿ ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಭವಾನಿ ರೇವಣ್ಣ ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Prajwal revanna Case
Koo

ಚಿಕ್ಕಮಗಳೂರು: ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆದಿದ್ದು, ಆತನಿಂದ ಅಗತ್ಯ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು 6 ದಿನಗಳ ಕಾಲ ಎಸ್‌ಐಡಿ ಕಸ್ಟಡಿಗೆ ನೀಡಿದ ಬೆನ್ನಲ್ಲೇ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಚಾಲಕನನ್ನು ವಶಕ್ಕೆ ಪಡೆದು ಭವಾನಿ ರೇವಣ್ಣ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಅಜಿತ್ ವಶಕ್ಕೆ ಪಡೆದಿರುವ ಚಾಲಕ. ನಾಲ್ಕೈದು ದಿನದ ಹಿಂದೆ ಅತ್ತೆ ಮನೆಗೆ ಬಂದಿದ್ದ ಅಜಿತ್‌ನನ್ನು ಇಲ್ಲಿನ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆಯಲಾಗಿದೆ. ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಅವರ ಬಂಧನಕ್ಕಾಗಿ ಎಸ್‌ಐಟಿ ಮುಂದಾಗಿದೆ. ಹೀಗಾಗಿ ಭವಾನಿ ರೇವಣ್ಣ ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಹೋದವರು ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಜ್ಞಾತದಲ್ಲಿರುವ ಅವರಿಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಯಾವುದೇ ಕ್ಷಣದಲ್ಲಿ ಬಂಧನ!

Bhavani Revanna

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್​​ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೋಟಿಸ್​ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸದ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಏತನ್ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್​ಐಟಿ ಅಧಿಕಾರಿಗಳೂ ಭವಾನಿ ಅವರಿಗೆ ಎರಡನೇ ನೋಟಿಸ್​ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್​​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮೇ 29ರಂದು ಈ ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ, ಮೇ 31 ತಾಯಿ-ಮಗನಿಗೆ ಪ್ರಮುಖ ದಿನವಾಗಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಹಿಂದಿನ ವಿಚಾರಣೆ ವೇಳೆ ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಂದೇಶ ಚೌಟ, “ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು” ಎಂದರು.

ಎಸ್‌ಪಿಪಿ ವಾದವೇನಿತ್ತು?

ಮಗನ ರಕ್ಷಣೆಗಾಗಿ ಭವಾನಿ ರೇವಣ್ಣ ಒಳಸಂಚು ರೂಪಿಸಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣದ ಹಿಂದೆ ಇವರ ಕೈವಾಡವಿದೆ. ಸಂತ್ರಸ್ತ ಮಹಿಳೆಗೆ ಊಟ ನೀರು, ಸರಿಯಾಗಿ ಕೊಟ್ಟಿಲ್ಲ‌. ಆಕೆಗೆ ಬಟ್ಟೆ ಸೀರೆಯನ್ನು ಕೊಟ್ಟಿಲ್ಲ. ಆರೋಪಿ ಸತೀಶ್ ಬಾಬಣ್ಣ ಜತೆ ಭವಾನಿ ಮಾತನಾಡಿದ್ದಾರೆ. ಆರೋಪಿ ಸತೀಶ್ ಬಾಬಣ್ಣ ಕೇಳಿದಾಗ ಭವಾನಿಯವರು ಆಯ್ತು 150 ರೂಪಾಯಿ ಅಥವಾ 200 ರೂಪಾಯಿ ಸೀರೆ ಕೊಡ್ಸು ಎಂಬುದಾಗಿ ಸೂಚಿಸಿದ್ದಾರೆ” ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಕೊನೆಗೆ ನ್ಯಾಯಾಲಯವು ತೀರ್ಪನ್ನು ಮೇ 31ರವರೆಗೆ ಕಾಯ್ದಿರಿಸಿತ್ತು.

ಇದನ್ನೂ ಓದಿ: Prajwal Revanna : ನನ್ನ ತೇಜೋವಧೆಯಾಗಿದೆ; ಪ್ರತಿ ದೂರು ನೀಡಲು ಪ್ರಜ್ವಲ್ ರೇವಣ್ಣ ಸಿದ್ಧತೆ

ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್‌‘

ಪ್ರಜ್ವಲ್‌ ರೇವಣ್ಣ ಅವರು ಮೇ 31ರಂದು ಭಾರತಕ್ಕೆ ಆಗಮಿಸಲಿದ್ದು, ನಾಳೆ ಅಂದರೆ ಮೇ 30ರಂದೇ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ವಕೀಲ ಅರುಣ್‌ ಮನವಿ ಮಾಡಿದ್ದರು. ಆದರೆ, 39ರಂದೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿದೆ. ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಮೂರೂ ಪ್ರಕರಣಗಳಲ್ಲಿ ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ಬೇಕು. ಹಾಗಾಗಿ, ಮೇ 31ರಂದು ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿತು.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ಮುಂದೂಡಲಾಗಿದೆ.

Continue Reading

ಪ್ರಮುಖ ಸುದ್ದಿ

Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Modi Meditation: ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಗುರುವಾರದಿಂದ (ಮೇ 30) 45 ಗಂಟೆಗಳವರೆಗೆ ಧ್ಯಾನ ಆರಂಭಿಸಿದ್ದಾರೆ. ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ.

VISTARANEWS.COM


on

Modi Meditation
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) 45 ಗಂಟೆಗಳ ಧ್ಯಾನ ಆರಂಭಿಸಿದ್ದಾರೆ. ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಮೋದಿ ಧ್ಯಾನದಲ್ಲಿ (Modi Meditation) ತೊಡಗಿಕೊಂಡಿದ್ದಾರೆ. ಇದರ ಬೆನ್ನಲ್ಲೇ, “ಮೋದಿ ಅವರು ಮನೆಯಲ್ಲಿಯೇ ಧ್ಯಾನ ಮಾಡಬಹುದಿತ್ತು. ಕನ್ಯಾಕುಮಾರಿಯಲ್ಲಿ ಧ್ಯಾನದ ಹೆಸರಿನಲ್ಲಿ ಡ್ರಾಮಾ ಮಾಡುವ ಅವಶ್ಯಕತೆ ಇರಲಿಲ್ಲ” ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.

ಇಂಡಿಯಾ ಟಿವಿಗೆ ನೀಡಿದ ಸಂದರ್ಶನದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಧ್ಯಾನದ ಕುರಿತು ಮಾತನಾಡಿದರು. “ನರೇಂದ್ರ ಮೋದಿ ಅವರು ಮನೆಯಲ್ಲಿಯೇ 45 ಗಂಟೆ ಧ್ಯಾನ ಮಾಡಬಹುದಿತ್ತು. ಕನ್ಯಾಕುಮಾರಿಗೆ ಹೋಗುವ ಅನಿವಾರ್ಯತೆ ಏನಿತ್ತು? ನರೇಂದ್ರ ಮೋದಿ ಅವರ ಭದ್ರತೆಗೆ 10 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಷ್ಟೊಂದು ಡ್ರಾಮಾ ಏಕೆ ಬೇಕಿತ್ತು? ಅವರು ಮನೆಯಲ್ಲಿಯೇ ಪೂಜೆ, ಧ್ಯಾನ ಮಾಡಬಹುದಿತ್ತು” ಎಂಬುದಾಗಿ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಹಾರ ಸೇವಿಸಲ್ಲ ಮೋದಿ

ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ. ಜ್ಯೂಸ್‌, ಹಾಲಿನಲ್ಲಿಯೇ ಎರಡು ದಿನ ಕಳೆಯಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಜನವರಿಯಲ್ಲಿ ರಾಮಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿಯೂ ನರೇಂದ್ರ ಮೋದಿ ಅವರು 11 ದಿನಗಳ ಉಪವಾಸ ಕೈಗೊಂಡಿದ್ದರು. ಹಾಸಿಗೆಯ ಮೇಲೆ ಮಲಗುವುದನ್ನು ನಿಲ್ಲಿಸಿದ್ದರು. ನೆಲದ ಮೇಲೆ ಬಟ್ಟೆ ಹಾಸಿಕೊಂಡು ನಿದ್ದೆ ಮಾಡಿದ್ದರು. ಈ ಅವಧಿಯಲ್ಲಿ ಅವರು ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸಿದ್ದರು. ಹಣ್ಣುಗಳನ್ನು ಮಾತ್ರ ಸೇವಿಸಿದ್ದರು.

ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಮೋದಿ ಅವರು ಎರಡು ದಿನ ಧ್ಯಾನ ಮಾಡುವ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತಲೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Lok Sabha Election: ನಾಳೆ ಕೊನೆಯ ಹಂತದ ಮತದಾನ; ಮೋದಿ, ಕಂಗನಾ ಸೇರಿ ಹಲವರ ಭವಿಷ್ಯ ನಿರ್ಧಾರ

Continue Reading

ಪ್ರಮುಖ ಸುದ್ದಿ

Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

Virat kohli : ಐಪಿಎಲ್ 2024 ರ ಸಮಯದಲ್ಲಿ ಕೊಹ್ಲಿ ಬಗ್ಗೆ ಕಳಪೆ ಹೇಳಿಕೆಗಳೊಂದಿಗೆ ವಿವಾದವನ್ನು ಹುಟ್ಟುಹಾಕಿದ ನಂತರ, ಭಾರತದ ಮಾಜಿ ಬ್ಯಾಟರ್​ ಜೂನ್ 2 ರಿಂದ ಪ್ರಾರಂಭವಾಗುವ ಟಿ 20 ವಿಶ್ವಕಪ್ 2024ನಲ್ಲಿಯೂ ಕೊಹ್ಲಿಯನ್ನು ಕಡೆಗಣಿಸುವ ಹೇಳಿಕೆ ನೀಡಿದ್ದಾರೆ.

VISTARANEWS.COM


on

Virat Kohli
Koo

ನವದೆಹಲಿ: ಭಾರತದ ಮಾಜಿ ಬ್ಯಾಟರ್ ಮತ್ತು ಆರು ಬಾರಿ ಐಪಿಎಲ್ ವಿಜೇತ ಅಂಬಾಟಿ ರಾಯುಡು ಕಳೆದ ಕೆಲವು ವಾರಗಳಿಂದ ವಿರಾಟ್ ಕೊಹ್ಲಿ (Virat kohli) ಅವರ ಅಭಿಮಾನಿಗಳ ರೇಡಾರ್ನಲ್ಲಿದ್ದಾರೆ ಮತ್ತು ಟೀಮ್ ಇಂಡಿಯಾದ ಬ್ಯಾಟಿಂಗ್ ಮಾಂತ್ರಿಕನನ್ನು ಅನಗತ್ಯವಾಗಿ ಟೀಕಿಸಿದ್ದಕ್ಕಾಗಿ ಫಲ ಅನುಭವಿಸುತ್ತಿದ್ದಾರೆ. ಟೀಕೆಗಳ ಹೊರತಾಗಿಯೂ, ರಾಯುಡು ಮತ್ತೊಮ್ಮೆ ಕೊಹ್ಲಿ ಬಗ್ಗೆ ತಮ್ಮ ಉದಾಸೀನ ಭಾವ ವ್ಯಕ್ತಪಡಿಸಿದ್ದಾರೆ. ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup) ಭಾರತೀಯ ಕ್ರಿಕೆಟ್ ತಂಡದ ಪರ ಕೊಹ್ಲಿ ಅತಿ ಹೆಚ್ಚು ರನ್ ಗಳಿಸುವುದಿಲ್ಲ ಎಂದು ಹೇಳಿದ್ದಾರೆ.

ಐಪಿಎಲ್ 2024 ರ ಸಮಯದಲ್ಲಿ ಕೊಹ್ಲಿ ಬಗ್ಗೆ ಕಳಪೆ ಹೇಳಿಕೆಗಳೊಂದಿಗೆ ವಿವಾದವನ್ನು ಹುಟ್ಟುಹಾಕಿದ ನಂತರ, ಭಾರತದ ಮಾಜಿ ಬ್ಯಾಟರ್​ ಜೂನ್ 2 ರಿಂದ ಪ್ರಾರಂಭವಾಗುವ ಟಿ 20 ವಿಶ್ವಕಪ್ 2024ನಲ್ಲಿಯೂ ಕೊಹ್ಲಿಯನ್ನು ಕಡೆಗಣಿಸುವ ಹೇಳಿಕೆ ನೀಡಿದ್ದಾರೆ.

ಕೊಹ್ಲಿ ಅಲ್ಲ ಎಂದ ಅಂಬಾಟಿ

ಯುಎಸ್ಎ ಮತ್ತು ಕೆರಿಬಿಯನ್​ನಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಸೂರ್ಯಕುಮಾರ್​ ಭಾರತ ಪರ ಅತಿ ಹೆಚ್ಚು ರನ್​ ಗಳಿಸಲಿದ್ದಾರೆ ಎಂದು ಹೇಳಿದ್ದಾರೆ. ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರು 2024ರ ಟಿ 20 ವಿಶ್ವಕಪ್​​ನಲ್ಲಿ ಭಾರತದ ಪ್ರಭಾವಿ ಆಟಗಾರರು ಎಂದು ಹೇಳಿದ್ದಾರೆ. ಆದರೆ, ಕೊಹ್ಲಿ ಅಲ್ಲ ಎಂದಿದ್ದಾರೆ.

ರಾಯುಡು ತಮ್ಮ ಮಾಜಿ ಮುಂಬೈ ಇಂಡಿಯನ್ಸ್​ ಸಹ ಆಟಗಾರ ಮತ್ತು ಭಾರತ ತಂಡದ ನಾಯಕ ರೋಹಿತ್ ಅವರನ್ನು ತಮ್ಮ ಆದ್ಯತೆಯ ಆಯ್ಕೆ ಎಂದು ಹೆಸರಿಸಿದ್ದಾರೆ. ಈ ಮೆಗಾ ಈವೆಂಟ್​ನಲ್ಲಿ ರೋಹಿತ್ ಭಾರತದ ನಾಯಕನಾಗಿ ಮಿಂಚುತ್ತಾರೆ ಎಂದು ಅವರು ನಂಬಿದ್ದಾರೆ.

ಮುಂಬರುವ ಟಿ 20 ವಿಶ್ವಕಪ್ 2024 ರಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂದು ರಾಯುಡು ಹೆಸರಿಸಿದ್ದಾರೆ, ಪಂದ್ಯಾವಳಿಯ ಇತಿಹಾಸದಲ್ಲಿ ಭಾರತೀಯ ನಾಯಕ ಎಂದಿಗೂ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿಲ್ಲ.

ರಾಯುಡು ಅವರ ಆಯ್ಕೆಯು ಕೆಲವು ಅಭಿಮಾನಿಗಳನ್ನು ಕೆರಳಿಸಬಹುದು. ವಿಶೇಷವಾಗಿ ಕೊಹ್ಲಿಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಪ್ರತಿಕ್ರಿಯೆ ಪಡೆಯಲಿದ್ದಾರೆ. ಕೊಹ್ಲಿ ಐಪಿಎಲ್ 2024 ರಲ್ಲಿ ರೆಡ್-ಹಾಟ್ ಫಾರ್ಮ್​ನಲ್ಲಿದ್ದರು. ಅವರ 742 ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಆದರೆ ರೋಹಿತ್ ಆಡಿರಲಿಲ್ಲ.

ಟಿ 20 ವಿಶ್ವಕಪ್​ನಲ್ಲಿ ಕೊಹ್ಲಿಯ ಸಾಧನೆ


ಎಂಐ ಆರಂಭಿಕ ಆಟಗಾರ ರೋಹಿತ್​ ಐಪಿಎಲ್ 2024 ರಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ್ದರು. ಆದರೆ ಅವರು ಋತುವಿನಾದ್ಯಂತ ಸರಿಯಾಗಿ ಆಡಿಲ್ಲ ಮತ್ತೊಂದೆಡೆ, ಕೊಹ್ಲಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ, 27 ಪಂದ್ಯಗಳಲ್ಲಿ 1141 ರನ್, 81.50 ಪ್ರಭಾವಶಾಲಿ ಸರಾಸರಿ ಮತ್ತು 131.30 ಸ್ಟ್ರೈಕ್ ರೇಟ್ ಹೊಂದಿದ್ದರೆ.

ಇದನ್ನೂ ಓದಿ: T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಮಹೇಲ ಜಯವರ್ಧನೆ (1016) ಮತ್ತು ಕ್ರಿಸ್ ಗೇಲ್ (965) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದರೆ, ರೋಹಿತ್ 39 ಪಂದ್ಯಗಳಲ್ಲಿ 963 ರನ್ ಗಳಿಸಿ ಟಿ 20 ವಿಶ್ವಕಪ್ ನಲ್ಲಿ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ 296 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು.

ಭಾರತ ತಂಡ ಜೂನ್ 5ರಂದು ನ್ಯೂಯಾರ್ಕ್​ನಲ್ಲಿ ಐರ್ಲೆಂಡ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜೂನ್ 9ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಮೆನ್ ಇನ್ ಬ್ಲೂ ಈಗಾಗಲೇ ಯುಎಸ್ಎಯಲ್ಲಿ ತರಬೇತಿಯನ್ನು ಪ್ರಾರಂಭಿಸಿದೆ, ಮತ್ತು ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೆ ಮುಂಚಿತವಾಗಿ ಕೊಹ್ಲಿ ಶೀಘ್ರದಲ್ಲೇ ನ್ಯೂಯಾರ್ಕ್ನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

Continue Reading
Advertisement
Kanyakumari Tour
ಪ್ರವಾಸ34 mins ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ42 mins ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ43 mins ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ44 mins ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Exit Polls
Lok Sabha Election 202447 mins ago

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Heart Attack
ದೇಶ53 mins ago

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Prajwal revanna Case
ಚಿಕ್ಕಮಗಳೂರು1 hour ago

Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Modi Meditation
ಪ್ರಮುಖ ಸುದ್ದಿ2 hours ago

Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Virat Kohli
ಪ್ರಮುಖ ಸುದ್ದಿ2 hours ago

Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹಂತಕ ಗಿರೀಶ್‌ಗೆ ಜೂನ್ 16ರವರೆಗೆ‌ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌