ಶಿಮ್ಲಾ: ಹಿಮಾಚಲಪ್ರದೇಶದಲ್ಲಿ ಖಾದ್ಯ ತೈಲ ಉತ್ಪಾದಕ ಅದಾನಿ ವಿಲ್ಮರ್ ಗ್ರೂಪ್‌ನ (Adani Group) ಕಚೇರಿಗೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆಯ ತಂಡ ದಾಳಿ ನಡೆಸಿದೆ. ಜಿಎಸ್‌ಟಿಯನ್ನು ಕಂಪನಿ ಸರಿಯಾಗಿ ಪಾವತಿಸಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ವಿಲ್ಮರ್ ಗ್ರೂಪ್ ಮಾಡಿರುವ ಜಿಎಸ್‌ಟಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಕ್ಲೇಮ್‌ಗಳ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಕಳೆದ 5 ವರ್ಷಗಳಿಂದ ಕಂಪನಿಯು ಜಿಎಸ್‌ಟಿ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲಾತಿಗಳನ್ನು ಪರೀಕ್ಷಿಸಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಅದಾನಿ ವಿಲ್ಮರ್ ಗ್ರೂಪ್ 211 ಕೋಟಿ ರೂ. ನಿವ್ವಳ ಲಾಭವನ್ನು ಗಳಿಸಿತ್ತು. ಆದಾಯವು ೧೫,೫೧೫ ಕೋಟಿ ರೂ.ಗೆ ವೃದ್ಧಿಸಿತ್ತು.