Explainer: ಭಾರತೀಯರ ಫೇವರಿಟ್‌ ಆಗುವತ್ತ ಯುಎಇ, ಏನಿದರ ವಿಶೇಷ? - Vistara News

EXPLAINER

Explainer: ಭಾರತೀಯರ ಫೇವರಿಟ್‌ ಆಗುವತ್ತ ಯುಎಇ, ಏನಿದರ ವಿಶೇಷ?

ಇತ್ತೀಚೆಗೆ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ಯುಎಇ) ದುಡಿಮೆ ಹಾಗೂ ಪ್ರವಾಸಕ್ಕೂ ಭಾರತೀಯರ ನೆಚ್ಚಿನ ತಾಣವಾಗುವತ್ತ ನಡೆಯುತ್ತಿದೆ. ಈ ಬೆಳವಣಿಗೆ ಹೇಗೆ ಸಾಧ್ಯವಾಯಿತು?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊದಲೊಂದು ಕಾಲವಿತ್ತು. ಕೇರಳದ ಹೆಚ್ಚಿನ ಯುವಜನತೆ ಉದ್ಯೋಗ ಅನ್ವೇಷಿಸಿ ಗಲ್ಫ್‌ ರಾಷ್ಟ್ರಗಳಿಗೆ, ಅದರಲ್ಲೂ ಮುಖ್ಯವಾಗಿ ಯುಎಇಗೆ ಧಾವಿಸುತ್ತಿದ್ದರು. ಈಗಲೂ ಕೇರಳದ ಉದ್ಯೋಗಾನ್ವೇಷಿಗಳಿಗೆ ಯುಎಇ ಫೇವರಿಟ್‌ ಸ್ಪಾಟ್.‌ ಆದರೆ ಭಾರತದಾದ್ಯಂತ ಯುಎಇ ಬಗ್ಗೆ ಹೆಚ್ಚಿನ ಆಸಕ್ತಿ ಮೂಡುತ್ತಿದೆ. ಅಮೆರಿಕ, ಕೆನಡಾಗಳಂತೆಯೇ ಭಾರತೀಯರ ಇನ್ನೊಂದು ವಲಸೆ ತಾಣವಾಗುವತ್ತ ಯುಎಇ ಹೆಜ್ಜೆ ಇಡುತ್ತಿದೆ.

ಗೋಲ್ಡನ್‌ ವೀಸಾ

ಕಳೆದ ಒಂದೆರಡು ವರ್ಷಗಳಿಂದ ಯುಎಇ ದೇಶ ಅನ್ಯ ದೇಶಗಳ ಪ್ರಮುಖ ಉದ್ಯಮಿಗಳಿಗೆ, ತಾರೆಯರಿಗೆ ಗೋಲ್ಡನ್‌ ವೀಸಾಗಳನ್ನು ಕೊಡುತ್ತಿದೆ. ಈಗ ಅದನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೂ ವಿಸ್ತರಿಸಿದೆ. ಹಿಂದಿ ನಟರಾದ ಶಾರುಕ್‌ ಖಾನ್‌, ಸಂಜಯ್‌ ದತ್‌, ಮಲಯಾಳಂ ನಟ ದುಲ್ಖರ್‌ ಸಲ್ಮಾನ್‌ ಮೊದಲಾದವರು ಈಗಾಗಲೇ ಗೋಲ್ಡನ್‌ ವೀಸಾ ಪಡೆದಿದ್ದಾರೆ. ಗೋಲ್ಡನ್‌ ವೀಸಾ ಪಡೆಯುತ್ತಿರುವವರಲ್ಲಿ ಭಾರತೀಯರೇ ಹೆಚ್ಚು. ಇದನ್ನು ಪಡೆದವರು ಯುಎಇಯಲ್ಲಿ ಶಾಶ್ವತ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು. ಉದ್ಯಮಗಳನ್ನು ಸ್ಥಾಪಿಸಬಹುದು. ತಮ್ಮ ಕುಟುಂಬದವರನ್ನೂ ಕರೆಸಿಕೊಳ್ಳಬಹುದು. ಈ ವೀಸಾದ ಅವಧಿ ಹತ್ತು ವರ್ಷ. ಪ್ರತಿ ವರ್ಷ ನವೀಕರಿಸಿಕೊಳ್ಳುವ ತಲೆಬಿಸಿ ಇಲ್ಲ. ಡಾಕ್ಟರ್‌ಗಳು, ಅಧ್ಯಯನಾಸಕ್ತರು, ವಿಜ್ಞಾನಿಗಳು, ಕಲಾವಿದರು ಕೂಡ ಈ ವೀಸಾಗೆ ಅಪ್ಲೈ ಮಾಡಬಹುದು.

ಭಾರತಕ್ಕೆ ಹತ್ತಿರ

ಯುರೋಪ್‌, ಅಮೆರಿಕಗಳಿಗೆ ಹೋಲಿಸಿದರೆ ಯುಎಇ ಭಾರತಕ್ಕೆ ಸನಿಹ. ಬಹುತೇಕ ಇಲ್ಲಿನ ಎಲ್ಲ ದೊಡ್ಡ ನಗರಗಳಿಂದಲೂ ನೇರ ವಿಮಾನಗಳಿವೆ. ಭಾರತದ ದೊಡ್ಡ ಉದ್ಯಮಿಗಳು ಯುಎಇ ಜೊತೆ ಉದ್ಯಮ ಸಹಭಾಗಿತ್ವ ಹೊಂದಿದ್ದಾರೆ. ಇಲ್ಲಿನ ಉದ್ಯಮಶೀಲತೆಯ ವಾತಾವರಣ ಚೆನ್ನಾಗಿದೆ. ಉದ್ಯಮಿಗಳಿಗೆ ಇಲ್ಲಿ ವೀಸಾ, ಪೌರತ್ವ ಸಿಗುವುದು ಬೇಗ.

ಭಾರತೀಯ ಸೆಲೆಬ್ರಿಟಿಗಳು

ಯುಎಇ ಮೊದಲು ಭಾರತೀಯ ದೊಡ್ಡ ಉದ್ಯಮಿಗಳಿಗೆ, ಸೆಲೆಬ್ರಟಿಗಳಿಗೆ ಬಲೆ ಹಾಕಿತು. ಅದು 2019ರಲ್ಲಿ ಗೋಲ್ಡನ್‌ ವೀಸಾ ಆರಂಭಿಸಿದಾಗ, ಮೊದಲ ವೀಸಾ ನೀಡಿದ್ದೇ ಲುಲು ಗ್ರೂಪ್‌ನ ಚೇರ್‌ಮನ್‌ ಯೂಸುಫಾಲಿ ಎಂಬ ಭಾರತೀಯರಿಗೆ. ಕೇರಳದ ಮೂಲದ ಯೂಸುಫಾಲಿ ಮಧ್ಯಪ್ರಾಚ್ಯದ ಅನೇಕ ದೇಶಗಳಲ್ಲಿ ರಿಟೇಲ್‌ ಮತ್ತು ಹೋಟೆಲ್‌ ಬ್ಯುಸಿನೆಸ್‌ ನಡೆಸುತ್ತಿದ್ದಾರೆ. ಹೀಗೆ ಗೋಲ್ಡನ್‌ ವೀಸಾ ಪಡೆದ ಸೆಲೆಬ್ರಿಟಿಗಳ ಮೂಲಕ ಯುಎಇಯ ಹೆಗ್ಗಳಿಕೆಯ ಪ್ರಚಾರ ನಡೆಯಿತು.

ಮೂಲಸೌಕರ್ಯ

ಯುಎಇಯ ಮೂಲಸೌಕರ್ಯ ತುಂಬಾ ಅದ್ಭುತವಾಗಿದೆ. ಆತಿಥ್ಯ ವಲಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಯಾವುದೇ ಆಡಳಿತಾತ್ಮಕ ಕಾರ್ಯಗಳು ವಿಳಂಬವಾಗದಂತೆ ನೋಡಿಕೊಳ್ಳಲಾಗುತ್ತದೆ. ಪರವಾನಗಿಗಳು ತಡವಾಗುವುದಿಲ್ಲ. ತಾವು ಕಟ್ಟುತ್ತಿರುವ ತೆರಿಗೆ ಪೋಲಾಗುತ್ತಿದೆ ಎಂದು ಚಿಂತಿಸುವ ಅವಕಾಶವೇ ಇಲ್ಲ.

ಎರಡನೇ, ಮೂರನೇ ಹಂತದ ಉದ್ಯೋಗಗಳು

ಯುಎಇಯಲ್ಲಿ ವಿವಿಧ ಅಕಾಡೆಮಿಕ್‌ ಅರ್ಹತೆ, ಔದ್ಯಮಿಕ- ಶೈಕ್ಷಣಿಕ ಅರ್ಹತೆಯುಳ್ಳವರಿಗೆ ತಕ್ಕಂಥ ಉದ್ಯೋಗಗಳು ಲಭ್ಯವಿವೆ. ಬಹುಕೋಟಿ ಉದ್ಯಮ ನಡೆಸುವ ವ್ಯಕ್ತಿ ಇಲ್ಲಿಗೆ ಹೋಗುವಂತೆ, ಎಸ್ಸೆಸ್ಸೆಲ್ಸಿ ವಿದ್ಯಾಭ್ಯಾಸ ಮಾಡಿದವನೂ ಇಲ್ಲಿಗೆ ಹೋಗಿ ಮಾಡಬಹುದಾದಂಥ ಕೆಲಸಗಳು ಸಾಕಷ್ಟಿವೆ. ಹೀಗೆ ಎಲ್ಲ ಬಗೆಯವರನ್ನು ಈ ದೇಶ ಸೆಳೆಯುತ್ತಿದೆ.

ಇದನ್ನೂ ಓದಿ: Explainer: ಅಮೆರಿಕದ ರೇʼಗನ್‌ʼಗಳ ಕತೆ ಇದು!

ಮಹತ್ವದ ಭಾಗೀದಾರ

2021ರಲ್ಲಿ ಒಂದು ಒಪ್ಪಂದವನ್ನು ಭಾರತ ಹಾಗೂ ಯುಎಇ ಮಾಡಿಕೊಂಡವು. ಸಮಗ್ರ ವಾಣಿಜ್ಯ ಸಹಭಾಗಿತ್ವ ಒಪ್ಪಂದ (ಸಿಇಪಿಎ) ಎಂಬ ಹೆಸರಿನ ಈ ಒಪ್ಪಂದದ ಪ್ರಕಾರ, ಮುಂದಿನ ಐದು ವರ್ಷಗಳಲ್ಲಿ ನಮ್ಮ ವ್ಯಾಪಾರ ವ್ಯವಹಾರದ ಮಟ್ಟ 100 ಶತಕೋಟಿ ಡಾಲರ್‌ ಮುಟ್ಟಬೇಕು. ಭಾರತದ ಪೆಟ್ರೋಲಿಯಂ ರಿಸರ್ವ್‌ನಲ್ಲಿ ಯುಎಇಯ ಪಾತ್ರ ಪ್ರಮುಖ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ವಲಯದಲ್ಲಿ ಭಾರತದ ಹೂಡಿಕೆ ಇಲ್ಲಿ ಸಾಕಷ್ಟಿದೆ. ಮಧ್ಯ ಪ್ರಾಚ್ಯಕ್ಕೆ ಭಾರತದ ಹೆಬ್ಬಾಗಿಲಿನಂತೆ ಯುಎಇ ಕಾರ್ಯ ನಿರ್ವಹಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading

EXPLAINER

ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಇವಿಎಂ ಪರಿಶೀಲನೆ ಅವಕಾಶ; ಏನಿದು ಸುಪ್ರೀಂ ಆದೇಶ?

ದೇಶದಲ್ಲಿ ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡಬೇಕು ಎಂಬ ಅರ್ಜಿಯನ್ನೂ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಆದರೆ, ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಗೊಂದಲ, ಅನುಮಾನ ಇದ್ದರೆ, ಆತನು ಮತಯಂತ್ರಗಳನ್ನು ಪರಿಶೀಲನೆ ಮಾಡಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್‌ ನೀಡಿದೆ. ಇದು ಮಹತ್ವದ ಆದೇಶ ಎನಿಸಿದೆ.

VISTARANEWS.COM


on

VVPAT Verification
Koo

ನವದೆಹಲಿ: ಚುನಾವಣೆ ಮತಯಂತ್ರಗಳ (EVM) ಬದಲು ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಯಾಗಬೇಕು, ಇವಿಎಂ ಹ್ಯಾಕ್‌ ಮಾಡಲಾಗುತ್ತಿದೆ, ಇವಿಎಂ-ವಿವಿಪ್ಯಾಟ್‌ ತಾಳೆಯಾಗಬೇಕು ಎಂದು ವಾದಿಸುತ್ತಿದ್ದವರಿಗೆ ಸುಪ್ರೀಂ ಕೋರ್ಟ್‌ ತೀರ್ಪು ಕಹಿಯಾಗಿದೆ. ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಗೆ ಬರಬೇಕು, ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ತಾಳೆ (EVM VVPAT Verification) ಹಾಕಬೇಕು ಎಂಬುದಾಗಿ ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ (Supreme Court) ಶುಕ್ರವಾರ (ಏಪ್ರಿಲ್‌ 26) ತಿರಸ್ಕರಿಸಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶವೊಂದನ್ನು ನೀಡಿದೆ. ಚುನಾವಣೆ ಫಲಿತಾಂಶದ ಬಳಿಕ ಗೊಂದಲ ಇದ್ದರೆ ಆ ಅಭ್ಯರ್ಥಿಗಳು ಮತಯಂತ್ರ ಪರಿಶೀಲನೆಯ ಸೌಲಭ್ಯ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಏನಿದು ಹೊಸ ತಂತ್ರಜ್ಞಾನ?

“ದೇಶದಲ್ಲಿ ಚುನಾವಣೆ ವೇಳೆ ಪ್ರತಿಯೊಂದು ಮತಯಂತ್ರಗಳಿಗೂ ಮೈಕ್ರೋ ಕಂಟ್ರೋಲರ್‌ ಪ್ರೋಗ್ರಾಮ್‌ಗಳನ್ನು ಅಳವಡಿಸಬೇಕು. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಮೈಕ್ರೋಕಂಟ್ರೋಲರ್‌ ಪ್ರೋಗ್ರಾಮ್‌ ಸೌಲಭ್ಯ ನೀಡಬೇಕು. ಅಂದರೆ, ಚುನಾವಣೆ ಫಲಿತಾಂಶದ ಬಳಿಕ ಯಾವುದೇ ಗೊಂದಲ ಇದ್ದರೆ, ಆ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಮತಯಂತ್ರಗಳನ್ನು ಎಂಜಿಯನಿಯರ್‌ಗಳ ತಂಡವು ಪರಿಶೀಲನೆ ಮಾಡಬೇಕು. ಚುನಾವಣೆ ಫಲಿತಾಂಶ ಪ್ರಕಟವಾದ ಏಳು ದಿನಗಳ ಒಳಗೆ ಈ ಕುರಿತು ಅಭ್ಯರ್ಥಿಯು ಮನವಿ ಮಾಡಿದರೆ ಮಾತ್ರ ಮತಯಂತ್ರಗಳ ಪರಿಶೀಲನೆ ಮಾಡಬಹುದು” ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಇದು ಮತಯಂತ್ರಗಳ ದಕ್ಷತೆ ಪ್ರಶ್ನಿಸುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಯಾವುದೇ ಗೊಂದಲ, ಅನುಮಾನ ಇದ್ದರೆ ಅಭ್ಯರ್ಥಿಯು ಇನ್ನುಮುಂದೆ ತಜ್ಞರ ನೆರವು ಪಡೆಯಬಹುದಾಗಿದೆ. ಇದಲ್ಲದೆ, ಸಿಂಬಲ್‌ ಲೋಡಿಂಗ್‌ ಪ್ರಕ್ರಿಯೆ ಮುಗಿದ ಬಳಿಕ ಸಿಂಬಲ್‌ ಲೋಡಿಂಗ್‌ ಯುನಿಟ್‌ಗಳನ್ನು (SLU) ಸೀಲ್‌ ಮಾಡಿ, 45 ದಿನ ಸಂಗ್ರಹಿಸಬೇಕು ಎಂಬುದು ಸುಪ್ರೀಂ ಕೋರ್ಟ್‌ನ ಮತ್ತೊಂದು ಆದೇಶವಾಗಿದೆ. ಇದರಿಂದ ಇವಿಎಂ ಡೇಟಾ ಚುನಾವಣೆ ಮುಗಿದ 45 ದಿನಗಳವರೆಗೆ ಸಂಗ್ರಹಿಸಿಡಲು ಸಾಧ್ಯವಾಗಲಿದೆ.

ಬ್ಯಾಲಟ್‌ ಪೇಪರ್‌ ಬೇಕಾಗಿಲ್ಲ

ಅರ್ಜಿದಾರರ ವಾದ-ಪ್ರತಿವಾದವನ್ನು ಆಲಿಸಿದ್ದ, ಚುನಾವಣೆ ಆಯೋಗದ ಮಾಹಿತಿಯನ್ನೂ ಪಡೆದಿದ್ದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರು, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದರು. “ನಾವು ತಾಂತ್ರಿಕ ವಿಭಾಗದ ಎಲ್ಲ ಮಾಹಿತಿಯನ್ನು ಗಮನಿಸಿದ್ದೇವೆ. ಹಾಗಾಗಿ, ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆಯೂ ಬೇಕಾಗಿಲ್ಲ ಹಾಗಾಗಿ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಏನಿದು ಪ್ರಕರಣ?

ಚುನಾವಣಾ ಮತಯಂತ್ರಗಳಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಯಂತ್ರಗಳ ಜತೆ ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡುವಂತೆ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಸಂಸ್ಥೆ ಸೇರಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಈಗ ಪ್ರತಿ ಕ್ಷೇತ್ರದಲ್ಲಿ ಐದು ಮತಯಂತ್ರಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲಾಗುತ್ತದೆ. ಶೇ.100ರಷ್ಟು ಇವಿಎಂಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲು ಆದೇಶ ನೀಡಬೇಕು ಎಂಬುದು ಅರ್ಜಿದಾರರ ವಾದವಾಗಿತ್ತು.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ತಾಳೆ ಹೇಗೆ ಮಾಡಲಾಗುತ್ತದೆ?

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣೆ ಆಯೋಗದ ವಾದ ಏನು?

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

Continue Reading
Advertisement
Swiggy fined
ಬೆಂಗಳೂರು4 hours ago

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Vistara Editorial
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕರ್ನಾಟಕ5 hours ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ5 hours ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ5 hours ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್5 hours ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ6 hours ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ6 hours ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ7 hours ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202412 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ16 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ23 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ3 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ3 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌