FASTag KYC: ಗಮನಿಸಿ; ಫಾಸ್ಟ್‌ಟ್ಯಾಗ್ ಕೆವೈಸಿ ಅಪ್‌ಡೇಟ್‌ ಮಾಡಲು ಇಂದೇ ಕೊನೆ ದಿನ; ಇಲ್ಲಿದೆ ಸಂಪೂರ್ಣ ವಿವರ - Vistara News

ವಾಣಿಜ್ಯ

FASTag KYC: ಗಮನಿಸಿ; ಫಾಸ್ಟ್‌ಟ್ಯಾಗ್ ಕೆವೈಸಿ ಅಪ್‌ಡೇಟ್‌ ಮಾಡಲು ಇಂದೇ ಕೊನೆ ದಿನ; ಇಲ್ಲಿದೆ ಸಂಪೂರ್ಣ ವಿವರ

FASTag KYC: ಫಾಸ್ಟ್‌ಟ್ಯಾಗ್ ಕೆವೈಸಿ ಅಪ್‌ಡೇಟ್ ಮಾಡಬೇಕಾದ ದಿನಾಂಕ ಇಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅಪ್‌ಡೇಟ್‌ ಮಾಡುವುದು ಹೇಗೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

fasttag
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ವಾಹನ ಸವಾರರಿಗೆ ಅತಿ ಮುಖ್ಯ ಸೂಚನೆ ಇದು. ಫಾಸ್ಟ್‌ಟ್ಯಾಗ್‌ (FASTag) ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಮುಖ ಗಡುವು ಇಂದು (ಜನವರಿ 31) ಮುಕ್ತಾಯವಾಗಲಿದೆ. ಅಂದರೆ ಫಾಸ್ಟ್‌ಟ್ಯಾಗ್ ಕೆವೈಸಿ (FASTag KYC) ಅಪ್‌ಡೇಟ್ ಮಾಡಬೇಕಾದ ದಿನಾಂಕ ಇಂದಿಗೆ ಕೊನೆಗೊಳ್ಳಲಿದೆ.

ಜನವರಿ 31, 2024ರ ನಂತರ ಕೆವೈಸಿ ಅಪ್‌ಡೇಟ್‌ ಆಗದ ಫಾಸ್ಟ್‌ಟ್ಯಾಗ್‌ಗಳನ್ನು ಬ್ಯಾಂಕ್‌ಗಳು ನಿಷ್ಕ್ರಿಯಗೊಳಿಸಲಿವೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಿಳಿಸಿದೆ. ಬಹು ವಾಹನಗಳಿಗೆ ಒಂದೇ ಫಾಸ್ಟ್‌ಟ್ಯಾಗ್ ಅಥವಾ ಒಂದೇ ವಾಹನಕ್ಕೆ ಬಹು ಫಾಸ್ಟ್‌ಟ್ಯಾಗ್‌ ಬಳಸುವುದನ್ನು ತಡೆಯಲು ಅಪ್‌ಡೇಟ್‌ ಸಹಾಯ ಮಾಡುತ್ತದೆ.

ಫಾಸ್ಟ್‌ಟ್ಯಾಗ್‌ ಎಂದರೇನು?

ಟೋಲ್ ಪ್ಲಾಜಾಗಳಲ್ಲಿ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆ ತಡೆಗಟ್ಟಲು ಕೇಂದ್ರ ಸರ್ಕಾರ ಫಾಸ್ಟ್‌ಟ್ಯಾಗ್‌ ಸೌಲಭ್ಯ ಜಾರಿಗೆ ತಂದಿದೆ. ಇದು ಪ್ರಿಪೇಯ್ಡ್ ಸೌಲಭ್ಯವಾಗಿದ್ದು, ಈ ಟ್ಯಾಗ್‌ ಅನ್ನು ವಾಹನದ ಮುಂದಿನ ಗಾಜಿಗೆ ಅಂಟಿಸಲಾಗುತ್ತದೆ. ಇದರಿಂದ ಟೋಲ್ ಶುಲ್ಕವನ್ನು ನಗದು ರಹಿತವಾಗಿ ಹಾಗೂ ತ್ವರಿತವಾಗಿ ಪಾವತಿಸಬಹುದು. ಟೋಲ್‌ನಲ್ಲಿ ಹಣ ಪಾವತಿಸಲು ಹೆಚ್ಚು ಕಾಲ ನಿಲ್ಲಬೇಕೆಂದೇನಿಲ್ಲ. ಗಾಜಿಗೆ ಅಂಟಿಸಿರುವ ಟ್ಯಾಗ್‌ನಲ್ಲಿ ರೇಡಿಯೋ-ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್(ಆರ್‌ಎಫ್‍ಐಡಿ) ಇರುತ್ತದೆ. ಈ ಟ್ಯಾಗ್ ರೇಡಿಯೋ ಫ್ರೀಕ್ವೆನ್ಸಿ ಮೂಲಕ ಸ್ಕ್ಯಾನ್ ಆಗಿ ಪ್ರಿಪೇಯ್ಡ್ ಅಥವಾ ಉಳಿತಾಯ ಖಾತೆಯಿಂದ ಹಣ ಕಡಿತವಾಗುತ್ತದೆ. ಆದರೆ ಬ್ಯಾಂಕ್ ಖಾತೆಯಲ್ಲಿ ಮುಂಗಡ ಹಣ ಇರಬೇಕಾದುದು ಅಗತ್ಯ. ಟ್ಯಾಗ್‌ ರೀಡ್ ಆಗುವ ಮೂಲಕ ಟೋಲ್ ಶುಲ್ಕ ಸ್ವಯಂಚಾಲಿತವಾಗಿ ಕಡಿತವಾಗುತ್ತದೆ.

ಕೆವೈಸಿ ಅಪ್‌ಡೇಟ್ ಮಾಡುವುದು ಹೇಗೆ?

  • ಬ್ಯಾಂಕ್ ಲಿಂಕ್ ಮಾಡಲಾದ ಫಾಸ್ಟ್‌ಟ್ಯಾಗ್ ವೆಬ್‌ಸೈಟ್‌ಗೆ ಭೇಟಿ ನೀಡಿ
  • ಮೊಬೈಲ್‌ ನಂಬರ್‌ ಬಳಸಿ ಲಾಗಿನ್‌ ಆಗಿ ಮತ್ತು ಮೊಬೈಲ್‌ಗೆ ಬಂದ ಒಟಿಪಿಯನ್ನು ನಮೂದಿಸಿ.
  • ಹೋಮ್‌ಪೇಜ್‌ನಲ್ಲಿ ಕಂಡು ಬರುವ My Profile ಸೆಕ್ಷನ್‌ಗೆ ಹೋಗಿ KYC ಟ್ಯಾಬ್‌ ಮೇಲೆ ಕ್ಲಿಕ್‌ ಮಾಡಿ.
  • ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಗತ್ಯ ಮಾಹಿತಿಯನ್ನು ತುಂಬಿ Submit ಬಟನ್‌ ಕ್ಲಿಕ್‌ ಮಾಡಿ.
  • ಈಗ ನಿಮ್ಮ ಫಾಸ್ಟ್‌ಟ್ಯಾಗ್ ಖಾತೆಯ ಕೆವೈಸಿ ಪೂರ್ಣಗೊಳ್ಳುತ್ತದೆ.

ಫಾಸ್ಟ್‌ಟ್ಯಾಗ್ ಕೆವೈಸಿ ಅಪ್‌ಡೇಟ್‌ಗೆ ಅಗತ್ಯವಾದ ದಾಖಲೆಗಳು

ಫಾಸ್ಟ್‌ಟ್ಯಾಗ್ ಕೆವೈಸಿ ಪೂರ್ಣಗೊಳಿಸಲು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಚಾಲನಾ ಪರವಾನಗಿ, ಮತದಾರರ ಗುರುತಿನ ಚೀಟಿ, ವಾಹನ ನೋಂದಣಿ ಪ್ರಮಾಣಪತ್ರ (ಆರ್‌ಸಿ), ವಿಳಾಸ ಪುರಾವೆ, ಪಾಸ್‌ಪೋರ್ಟ್‌ ಅಳತೆಯ ಫೋಟೊದಂತಹ ಡಾಕ್ಯುಮೆಂಟ್‌ ಅತ್ಯಗತ್ಯ.

ಫಾಸ್ಟ್‌ಟ್ಯಾಗ್ ಸ್ಟೇಟಸ್‌ ಪರಿಶೀಲಿಸುವ ವಿಧಾನ

  • fastag.ihmcl.com ವೆಬ್‌ಸೈಟ್‌ಗೆ ಭೇಟಿ ನೀಡಿ.
  • ವೆಬ್ ಪುಟ ತೆರೆಯುತ್ತಿದ್ದಂತೆ ಬಲ ಮೇಲ್ಭಾಗದಲ್ಲಿರುವ ಲಾಗಿನ್ ಟ್ಯಾಬ್ ಅನ್ನು ಕ್ಲಿಕ್ ಮಾಡಿ.
  • ಲಾಗ್ ಇನ್ ಮಾಡಲು ಒಟಿಪಿಗಾಗಿ ನೋಂದಾಯಿತ ಮೊಬೈಲ್ ಸಂಖ್ಯೆ ಒದಗಿಸಿ.
  • ಲಾಗ್ ಇನ್ ಆದ ನಂತರ, ಡ್ಯಾಶ್‌ ಬೋರ್ಡ್‌ನಲ್ಲಿರುವ My Profile ಆಯ್ಕೆಯನ್ನು ಕ್ಲಿಕ್ ಮಾಡಿ.
  • ಈಗ ಫಾಸ್ಟ್‌ಟ್ಯಾಗ್‌ನ ಕೆವೈಸಿ ಸ್ಟೇಟಸ್‌ ಕಂಡು ಬರುತ್ತದೆ. ಜತೆಗೆ ನೋಂದಣಿ ಪ್ರಕ್ರಿಯೆಯ ಸಮಯದಲ್ಲಿ ಸಲ್ಲಿಸಿದ ಪ್ರೊಫೈಲ್ ವಿವರಗಳೂ ಮೂಡುತ್ತದೆ.
  • ನಿಮ್ಮ ಬ್ಯಾಂಕ್‌ನ ವೆಬ್‌ಸೈಟ್‌ನಲ್ಲಿಯೂ ಇದೇ ರೀತಿ ಪರಿಶೀಲಿಸಬಹುದು.

ಇದನ್ನೂ ಓದಿ: Money Guide: ಫಾಸ್ಟ್‌ಟ್ಯಾಗ್‌ ಇದ್ದರೂ ದಂಡ ಕಟ್ಟುತ್ತಿದ್ದೀರಾ?; ಪರಿಹಾರ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Selco India: ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ವಾರ್ಷಿಕ ಪ್ರಶಸ್ತಿಗೆ ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ ಭಾಜನರಾಗಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

VISTARANEWS.COM


on

Richard Hansen
Koo

ಬೆಂಗಳೂರು: ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು (Selco India) 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.

ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ತಿಳಿಸಿದ್ದಾರೆ.

ರಿಚರ್ಡ್ ಹ್ಯಾನ್ಸೆನ್ ಅವರು 1984ರಿಂದ ಮೊದಲ ಬಾರಿಗೆ ಉತ್ತರ ಅಮೇರಿಕಾದ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಮೈಕ್ರೋಫೈನಾನ್ಸ್ ಪರಿಹಾರಗಳೊಂದಿಗೆ ಪಿವಿ ತಂತ್ರಜ್ಞಾನವನ್ನು ಪರಿಚಯಿಸಲು ಲಾಭರಹಿತ ಕಾರ್ಯಕ್ರಮವನ್ನು ಮುನ್ನೆಡೆಸಿದರು. ನಂತರ ಅವರು 1989 ರಲ್ಲಿ ಇದೇ ಮಾದರಿಯನ್ನು ಹೊಂಡುರಾಸ್‌ನಲ್ಲಿ ಅಮೆರಿಕದ ಇಂಧನ ಇಲಾಖೆ ಜತೆಗೆ ಒಪ್ಪಂದ ಮಾಡಿಕೊಂಡು ಪುನರಾವರ್ತಿಸಿದರು. ಈ ಕಾರ್ಯವು ಜಾಗತಿಕವಾಗಿ ಗಮನಾರ್ಹ ಪುನರಾವರ್ತನೆಗೆ ಕಾರಣವಾಯಿತು.

ಇದನ್ನೂ ಓದಿ: Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

ಪ್ರಸ್ತುತ ಎನರ್ಜಿ ಅಕ್ಸೆಸ್‌ ಫೌಂಡೇಷನ್ (www.energyaccessfoundation.org) ನ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ರಿಚರ್ಡ್ ಹ್ಯಾನ್ಸೆನ್, ಜಾಗತಿಕವಾಗಿ ಸುಸ್ಥಿರ ಶಕ್ತಿಯೆಡೆಗಿನ ಪರಿವರ್ತನೆಗೆ ಸಹಾಯ ಮಾಡುವ ಉದ್ದೇಶದಿಂದ 1993 ರಲ್ಲಿ ರಿಚರ್ಡ್ ಸೋಲುಜ್ ಇಂಕ್ (Soluz Inc.,) ಎಂಬ ಸಾಮಾಜಿಕ ಉದ್ಯಮವನ್ನು ಸ್ಥಾಪಿಸಿದರು. ಇದು ಪಿವಿ ಉತ್ಪನ್ನಗಳು ಮತ್ತು ಸಂಬಂಧಿತ ಮೈಕ್ರೋಫೈನಾನ್ಸ್ ಪರಿಹಾರಗಳನ್ನು ಪೂರೈಸುವ ಒಂದು ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ.

ರಿಚರ್ಡ್ ಹ್ಯಾನ್ಸೆನ್, ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ ನ್ಯಾಷನಲ್ ಡೆವಲಪ್ಮೆಂಟ್ (ಯುಎಸ್‌ಎಐಡಿ), ವಿಶ್ವ ಬ್ಯಾಂಕ್ ಮತ್ತು ಇಂಟರ್-ಅಮೆರಿಕನ್ ಅಭಿವೃದ್ಧಿ ಬ್ಯಾಂಕ್ ಸೇರಿದಂತೆ ಬಾಂಗ್ಲಾದೇಶ, ಬೊಲಿವಿಯಾ, ಡೊಮಿನಿಕನ್ ರಿಪಬ್ಲಿಕ್, ಇಥಿಯೋಪಿಯಾ, ಹೈಟಿ, ಭಾರತ, ನೇಪಾಳ, ನಿಕರಾಗುವಾ, ಫಿಲಿಪೈನ್ಸ್ ದೇಶಗಳು ಮತ್ತು ಪ್ರಮುಖ ಸಂಸ್ಥೆಗಳಿಗೆ ಸಲಹಾ ಸೇವೆಗಳನ್ನು ಒದಗಿಸಿದ್ದಾರೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ಸೂರ್ಯಮಿತ್ರ ಪ್ರಶಸ್ತಿ

ಪ್ರತಿಷ್ಠಿತ ರಾಮೋನ್‌ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರಾಗಿರುವ ಡಾ. ಎಚ್. ಹರೀಶ್ ಹಂದೆ ಅವರು ಸ್ಥಾಪಿಸಿ ಮುನ್ನಡೆಸುತ್ತಿರುವ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು 2012ರಿಂದ ಕೊಡಮಾಡುತ್ತಾ ಬಂದಿದೆ. ಈ ಪ್ರಶಸ್ತಿಯನ್ನು, ಸುಸ್ಥಿರ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುವ ಹರಿಕಾರರು ಮತ್ತು ಗ್ರಾಮೀಣ ಜನತೆಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದ ಅಸಾಧಾರಣ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ.

ಸೆಲ್ಕೋ ಇಂಡಿಯಾ ಸಂಸ್ಥೆ

1995ರಲ್ಲಿ ಸ್ಥಾಪಿತವಾದ ಸೆಲ್ಕೋ ಇಂಡಿಯಾ ಸಂಸ್ಥೆಯು, ಮಾನ್ಯತೆ ಪಡೆದ ಸಾಮಾಜಿಕ ಉದ್ಯಮವಾಗಿದ್ದು, ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನವೀಕರಿಸಬಹುದಾದ ಇಂಧನ ಆಧಾರಿತ ಪರಿಹಾರಗಳನ್ನು ಒದಗಿಸುವ ಮೂಲಕ ಬಡತನ ನಿರ್ಮೂಲನೆಯಲ್ಲಿ ವಿಶಿಷ್ಟ ಮಾದರಿಯ ಕೆಲಸ ಮಾಡುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸೆಲ್ಕೋ ಇಂಡಿಯಾ, ದೇಶಾದ್ಯಂತ ಏಳು ರಾಜ್ಯಗಳಲ್ಲಿ ಸೌರ ಇಂಧನದ ಮೂಲಕ ಶಿಕ್ಷಣ, ಆರೋಗ್ಯ ರಕ್ಷಣೆ, ಜೀವನೋಪಾಯ ಮತ್ತು ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

ಈ ವಲಯಗಳ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಹಣಕಾಸು, ಕೌಶಲ್ಯಾಭಿವೃದ್ಧಿ, ಪೂರೈಕೆ ಸರಪಳಿ ಮತ್ತು ನೀತಿ-ನಿರೂಪಗಳ ಚೌಕಟ್ಟನ್ನು ಬಲಪಡಿಸುವ ಕೆಲಸಗಳ ಮೂಲಕ ಎಲ್ಲರೂ ಬಳಸಲು ಸಾಧ್ಯವಾಗುವಂತೆ ವಿಕೇಂದ್ರೀಕೃತ ಇಂಧನ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಭಾರತವು ಹೊಂದಿರುವ, ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪುವ ಬದ್ಧತೆಯ ಸಂದರ್ಭದಲ್ಲಿ ಸೆಲ್ಕೋದ ಈ ಕಾರ್ಯವು ಹೆಚ್ಚು ಪ್ರಸ್ತುತವಾಗಿದೆ. ಸೆಲ್ಕೋದ ಈ ಎಲ್ಲ ಸಮಾಜಮುಖಿ ಕೆಲಸಗಳಿಗಾಗಿ ಆಶ್ಡೆನ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಮನಿ-ಗೈಡ್

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌: ಈ ಅಮ್ಮಂದಿರ ದಿನ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆ

Money Guide: ಈ ಅಮ್ಮಂದಿರ ದಿನ ನಿಮ್ಮ ತಾಯಿಗೆ ಉಡುಗೊರೆ ಕೊಡಬೇಕೆಂಬ ಯೋಜನೆಯಲ್ಲಿದ್ದೀರಾ? ಹಾಗಾದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರದಲ್ಲಿ ಹೂಡಿಕೆ ಮಾಡುವುದು ಅತ್ಯುತ್ತಮ ಮಾರ್ಗ. ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದ ವಿಶೇಷ ಉಳಿತಾಯ ಯೋಜನೆಯೇ ಈ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ. ಈ ಯೋಜನೆಯ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ನಾಳೆ (ಮೇ 12) ವಿಶ್ವ ಅಮ್ಮಂದಿರ ದಿನ (Mother’s Day 2024). ಜೀವನಪೂರ್ತಿ ನಮಗಾಗಿ ನಿಸ್ವಾರ್ಥವಾಗಿ ಮಿಡಿಯುವ ಜೀವಕ್ಕೆ ಚಿಕ್ಕದೊಂದು ಧನ್ಯವಾದ ಹೇಳುವ ದಿನ ಇದು. ಅಮ್ಮಂದಿರ ಋಣವನ್ನು ತೀರಿಸಲು ಸಾಧ್ಯವಿಲ್ಲವಾದರೂ ಒಂದು ಚಿಕ್ಕ ಉಡುಗೊರೆ ಕೊಡುವ ಮೂಲಕ ಅವರ ಮೊಗದಲ್ಲಿ ನಗು ಅರಳಿಸಬಹುದು. ಈ ಅಮ್ಮಂದಿರ ದಿನದಲ್ಲಿ ನಿಮ್ಮ ಅಮ್ಮನಿಗೆ ನೀಡಬಹುದಾದ ಅತ್ಯುತ್ತಮ ಉಡುಗೊರೆಯ ಪೈಕಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ (Mahila Samman Saving Certificate Scheme)ವೂ ಒಂದು. ಏನಿದು ಯೋಜನೆ? ಈ ಯೋಜನೆ ಮಹಿಳೆಯರಿಗೆ ಹೇಗೆ ಪ್ರಯೋಜಕಾರಿ? ಮುಂತಾದ ನಿಮ್ಮ ಸಂದೇಹಕ್ಕೆ ಇಲ್ಲಿದೆ ಉತ್ತರ (Money Guide).

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಎಂದರೇನು?

ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದ ವಿಶೇಷ ಉಳಿತಾಯ ಯೋಜನೆಯೇ ಈ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ. ಈ ವಿಶೇಷ ಉಳಿತಾಯ ಯೋಜನೆ ಮಹಿಳೆಯರನ್ನು ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಗುರಿಯನ್ನು ಹೊಂದಿದ್ದು, ಅವರ ಭವಿಷ್ಯಕ್ಕಾಗಿ ಉಳಿತಾಯವನ್ನು ಮಾಡಲು ಪ್ರೋತ್ಸಾಹಿಸುತ್ತದೆ.

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಯೋಜನೆಯನ್ನು ಕೇಂದ್ರ ಬಜೆಟ್ ತನ್ನ 2023ರ ಬಜೆಟ್‌ನಲ್ಲಿ ಘೋಷಿಸಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರವು ಮಾರ್ಚ್ 2025ರವರೆಗೆ ಲಭ್ಯವಿದೆ. ಇದು 2 ವರ್ಷಗಳ ಅವಧಿಗೆ ಮಹಿಳೆಯರು ಅಥವಾ ಹುಡುಗಿಯರ ಹೆಸರಿನಲ್ಲಿ 2 ಲಕ್ಷ ರೂ.ವರೆಗೆ ಠೇವಣಿ ಇಡುವ ಸೌಲಭ್ಯವನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಕೇವಲ ಮಹಿಳೆಯರು ಹಾಗೂ ಯುವತಿಯರು ಮಾತ್ರ ಹೂಡಿಕೆ ಮಾಡಬಹುದಾಗಿದೆ. ಮಹಿಳೆಯರು ಸ್ವತಃ ತಾವೇ ಹಾಗೂ ಅಪ್ರಾಪ್ತ ಬಾಲಕಿಯರ ಪರವಾಗಿ ಅವರ ಪೋಷಕರು ಈ ಖಾತೆಯನ್ನು ನಿರ್ವಹಿಸಬಹುದಾಗಿದೆ. ಹೀಗಾಗಿ ಈ ಬಾರಿ ನೀವು ತಾಯಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಉತ್ತೇಜನ ನೀಡಿ.

ಅರ್ಹತೆ

  • ಯಾವುದೇ ಭಾರತೀಯ ಮಹಿಳೆ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಇದಕ್ಕೆ ವಯಸ್ಸಿನ ನಿರ್ಬಂಧವಿಲ್ಲ.
  • ಅಪ್ರಾಪ್ತ ವಯಸ್ಸಿನ ಬಾಲಕಿಯ ಸ್ವಾಭಾವಿಕ ಅಥವಾ ಕಾನೂನುಬದ್ಧ ಪೋಷಕರು ಖಾತೆ ತೆರೆಯಬಹುದು.
  • ಗಮನಿಸಿ ವೈಯಕ್ತಿಕ ಖಾತೆಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.
  • ಹೂಡಿಕೆಯ ಕನಿಷ್ಠ ಮೊತ್ತ 1,000 ರೂ. ಮತ್ತು ಗರಿಷ್ಠ ಮೊತ್ತ 2,00,000.

ಬಡ್ಡಿ ದರ

ಈ ಖಾತೆಯನ್ನು ಹೊಂದಿರುವವರಿಗೆ ವಾರ್ಷಿಕ 7.5 ಪ್ರತಿಶತ ನಿಶ್ಚಿತ ಬಡ್ಡಿ ದರವನ್ನು ನೀಡಲಾಗುತ್ತದೆ. ಬ್ಯಾಂಕ್‌ನ ಸ್ಥಿರ ಠೇವಣಿ ಹಾಗೂ ಇತರ ಸಣ್ಣ ಉಳಿತಾಯ ಯೋಜನೆಗಳಿಗೆ ಹೋಲಿಕೆ ಮಾಡಿದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರದ ಅಡಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಬಡ್ಡಿದರ ಸಿಗಲಿದೆ.

ಅವಧಿ

ಈ ಯೋಜನೆಯ ಮೆಚ್ಯೂರಿಟಿ ಅವಧಿ 2 ವರ್ಷ. ಈ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಖಾತೆದಾರರಿಗೆ ಮೆಚ್ಯೂರಿಟಿ ಮೊತ್ತ ಪಾವತಿಯಾಗುತ್ತದೆ. ಒಂದು ವೇಳೆ ಅವಧಿ ಮೀರುವ ಮುನ್ನ ಹಿಂಪಡೆಯಬೇಕೆಂದರೆ ಖಾತೆಯಲ್ಲಿರುವ ಒಟ್ಟು ಮೊತ್ತದ ಶೇ. 40ರಷ್ಟು ಹಿಂಪಡೆಯಬಹುದು. ಆದರೆ ಖಾತೆಯನ್ನು ತೆರೆದು ಒಂದು ವರ್ಷ ಆಗಿರಬೇಕು. ಜತೆಗೆ ಆಯ್ದ ಸಂದರ್ಭಗಳಲ್ಲಿ ಖಾತೆಗಳನ್ನು ಅಕಾಲಿಕವಾಗಿ ಬಂದ್ ಮಾಡಬಹುದು.

ಖಾತೆ ತೆರೆಯುವುದು ಹೇಗೆ?

ಈ ಖಾತೆಯನ್ನು ಅಂಚೆ ಕಚೇರಿ ಅಥವಾ ಆಯ್ದ ಬ್ಯಾಂಕ್‌ಗಳಲ್ಲಿ ತೆರೆಯಬಹುದು. ನಿರ್ದಿಷ್ಟ ಅರ್ಜಿಯನ್ನು ಭರ್ತಿ ಮಾಡಿ, ಕೆವೈಸಿ ದಾಖಲೆಗಳನ್ನು ಒದಗಿಸಿ ಆರಂಭಿಕ ಠೇವಣಿ ಮೊತ್ತವನ್ನು ಇಡುವ ಮೂಲಕ ಖಾತೆಯನ್ನು ತೆರೆಯಬಹುದಾಗಿದೆ. ಇದಕ್ಕಾಗಿ ನೀವು ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್ ನೀಡಬೇಕಾಗುತ್ತದೆ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading

ಕರ್ನಾಟಕ

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹87.10, ಎಂಟು ಗ್ರಾಂ ₹696.80 ಮತ್ತು 10 ಗ್ರಾಂ ₹871ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,710 ಮತ್ತು 1 ಕಿಲೋಗ್ರಾಂಗೆ ₹87,100 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ. ನಿನ್ನೆಗೆ ಹೋಲಿಸಿದರೆ ಈ ದರ ಕೊಂಚ ಏರಿಕೆ ಕಂಡಿದೆ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading

ತಂತ್ರಜ್ಞಾನ

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Reliance Jio: ರಿಲಯನ್ಸ್ ಜಿಯೋದಿಂದ ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂ. ಆಗಲಿದ್ದು, ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಲಭ್ಯವಿದೆ. ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ ಡೇಟಾ ಸಹ ದೊರೆಯುತ್ತಿದೆ.

VISTARANEWS.COM


on

888 rupees postpaid plan with 15 OTT applications for JioFiber AirFiber customers
Koo

ನವದೆಹಲಿ: ಜಿಯೋಫೈಬರ್ (Jio Fiber) ಹಾಗೂ ಜಿಯೋ ಏರ್ ಫೈಬರ್ (Jio Air Fiber) ಗ್ರಾಹಕರಿಗಾಗಿ ರಿಲಯನ್ಸ್ ಜಿಯೋದಿಂದ (Reliance Jio) ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂಪಾಯಿ ಆಗಲಿದೆ.

ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ (Unlimited) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್‌ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಬಹುದಾಗಿದೆ.

ಇದನ್ನೂ ಓದಿ: Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

ಈ ಹೊಸ ಯೋಜನೆಯ ಅಡಿಯಲ್ಲಿ ಗ್ರಾಹಕರು 30 ಎಂಬಿಪಿಎಸ್ (Mbps) ವೇಗವನ್ನು ಪಡೆಯಲಿದ್ದು, ಇದರ ಜತೆಗೆ ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್, ಜಿಯೋಸಿನಿಮಾ ಪ್ರೀಮಿಯಂ ರೀತಿಯ ಹದಿನೈದಕ್ಕೂ ಹೆಚ್ಚು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳು ದೊರೆಯುತ್ತವೆ. ಈ ಅಪ್ಲಿಕೇಷನ್‌ನ ಸಬ್‌ಸ್ಕ್ರಿಪ್ಷನ್ ದೊರೆಯುವುದು ಯೋಜನೆಯ ಜತೆಗೆ ಮಾತ್ರ. ಈ ಯೋಜನೆಯನ್ನು ಹೊಸ ಚಂದಾದಾರಷ್ಟೇ ಅಲ್ಲ, 10 ಅಥವಾ 30 ಎಂಬಿಪಿಎಸ್ ಯೋಜನೆಯನ್ನು ಈಗಾಗಲೇ ಬಳಸುತ್ತಿರುವ ಜಿಯೋದ ಈಗಿನ ಬಳಕೆದಾರರು ಸಹ ಪಡೆಯಬಹುದಾಗಿದೆ.

ಇನ್ನು ಈ 888 ರೂಪಾಯಿಯ ಪೋಸ್ಟ್‌ಪೇಯ್ಡ್ ಯೋಜನೆಯು ಪ್ರತಿಯೊಬ್ಬರಿಗೂ ದೊರೆಯಲಿದ್ದು, ಸದ್ಯಕ್ಕೆ ಪ್ರಿಪೇಯ್ಡ್ ಯೋಜನೆ ಹೊಂದಿರುವ ಗ್ರಾಹಕರು ಈ ಹೊಸ ಪೋಸ್ಟ್ ಪೇಯ್ಡ್ ಯೋಜನೆಗೆ ಅಪ್‌ಗ್ರೇಡ್ ಮಾಡಬಹುದು.

ಇದನ್ನೂ ಓದಿ: T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

ಇನ್ನೊಂದು ವಿಶೇಷತೆಯೆಂದರೆ ಇತ್ತೀಚೆಗೆ ಘೋಷಣೆಯಾದ ಜಿಯೋ ಐಪಿಎಲ್ ಧನ್ ಧನಾ ಧನ್ ಆಫರ್ ಕೂಡ ಈ ಯೋಜನೆಗೆ ಅನ್ವಯಿಸುತ್ತದೆ. ಜಿಯೋಫೈಬರ್ ಅಥವಾ ಏರ್ ಫೈಬರ್‌ನ ಅರ್ಹ ಗ್ರಾಹಕರು ತಮ್ಮ ಜಿಯೋ ಹೋಮ್ ಬ್ರಾಡ್ ಬ್ಯಾಂಡ್ ಸಂಪರ್ಕದಲ್ಲಿ 50 ದಿನ ರಿಯಾಯಿತಿ ಕ್ರೆಡಿಟ್ ವೋಚರ್ ಸಹ ಪಡೆಯಬಹುದು. ಈ ಪ್ಲಾನ್ ಮೇ 31, 2024ರ ವರೆಗೆ ಲಭ್ಯವಿರುತ್ತದೆ, ಜಿಯೋ ಡಿಡಿಡಿ (Jio Dhan Dhana Dhan) ಕೊಡುಗೆಯನ್ನು ವಿಶೇಷವಾಗಿ ಟಿ20 ಋತುವಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement
Viral News
ವೈರಲ್ ನ್ಯೂಸ್25 mins ago

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Yogi Adityanath
ದೇಶ45 mins ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Dolly Dhananjay Koti Movie Kannada First song will out
ಸ್ಯಾಂಡಲ್ ವುಡ್48 mins ago

Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

esim cyber safety column
ಅಂಕಣ1 hour ago

ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

Nijjar Killing Case
ವಿದೇಶ1 hour ago

Nijjar Killing Case: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ; ನಾಲ್ಕನೇ ಆರೋಪಿ ಅರೆಸ್ಟ್‌

HD Revanna
ಪ್ರಮುಖ ಸುದ್ದಿ1 hour ago

HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

Maggi Tragedy
ದೇಶ2 hours ago

Maggi Tragedy: ಮ್ಯಾಗಿ ತಿಂದ ಬಳಿಕ 10 ವರ್ಷದ ಬಾಲಕ ಸಾವು, ಒಂದೇ ಕುಟುಂಬದ ಐವರು ಅಸ್ವಸ್ಥ

Viral News
ವೈರಲ್ ನ್ಯೂಸ್2 hours ago

Viral News: ಲಾರಿಗೆ ಡಿಕ್ಕಿ ಹೊಡೆಯಿತು ಕಂತೆ ಕಂತೆ ನಗದು ಸಾಗಿಸುತ್ತಿದ್ದ ವ್ಯಾನ್‌; ನೋಟಿನ ರಾಶಿ ಹೇಗಿದೆ ನೋಡಿ

Morning Tips
ಲೈಫ್‌ಸ್ಟೈಲ್3 hours ago

Morning Tips: ಬೆಳಗ್ಗೆ 7 ಗಂಟೆಯೊಳಗೆ ನೀವು ಈ 7 ಕೆಲಸಗಳನ್ನು ಮಾಡುತ್ತೀರಾ?

Karnataka Weather Forecast
ಮಳೆ4 hours ago

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು19 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌