ನವ ದೆಹಲಿ: ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುಣಮುಖರಾಗಿದ್ದು, (Nirmala Sitharaman) ಬುಧವಾರ ಬಿಡುಗಡೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
63 ವರ್ಷದ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಆಸ್ಪತ್ರೆಗೆ ನಿಯಮಿತ ಆರೋಗ್ಯ ತಪಾಸಣೆಗೆ ದಾಖಲಾಗಿದ್ದರು. ಸ್ವಲ್ಪ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು.
ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ ನಡೆಯಲಿದ್ದು, ಹಣಕಾಸು ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಈ ಅವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿರಲಿದೆ.