Financial literacy | ಆರ್ಕಿಡ್ಸ್‌ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತೆಯ ಪಠ್ಯಕ್ರಮ - Vistara News

ವಾಣಿಜ್ಯ

Financial literacy | ಆರ್ಕಿಡ್ಸ್‌ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತೆಯ ಪಠ್ಯಕ್ರಮ

ಆರ್ಕಿಡ್ಸ್‌ ಅಂತಾರಾಷ್ಟ್ರೀಯ ಶಾಲೆಯು ತನ್ನ 60ಕ್ಕೂ ಹೆಚ್ಚು ಶಾಖೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತೆಯನ್ನು ಮೂಡಿಸಲು ಹೊಸ ಪಠ್ಯಕ್ರಮವನ್ನೇ (Financial literacy) ಅಳವಡಿಸಿದೆ.

VISTARANEWS.COM


on

kids
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರ್ಕಿಡ್ಸ್‌ ಅಂತಾರಾಷ್ಟ್ರೀಯ ಶಾಲೆಯು ತನ್ನ ವಿದ್ಯಾರ್ಥಿಗಳಿಗೆ ಆರ್ಥಿಕ ಸಾಕ್ಷರತೆಯ ಪಠ್ಯಕ್ರಮವನ್ನು ಅಳವಡಿಸಿದೆ. ವಿದ್ಯಾರ್ಥಿಗಳಿಗೆ ಹಣಕಾಸಿನ ಪ್ರಪಂಚ ( Financial literacy) ಮತ್ತು ಅದರ ಸೂಕ್ಷ್ಮ ವ್ಯತ್ಯಾಸಗಳನ್ನು ಪರಿಚಯಿಸಲು ಪಠ್ಯಕ್ರಮವನ್ನು ಪರಿಚಯಿಸಲಾಗಿದೆ.

ಈ ಪಠ್ಯಕ್ರಮವನ್ನು ದೇಶಾದ್ಯಂತ ಆರ್ಕಿಡ್ಸ್‌ನ 60ಕ್ಕೂ ಹೆಚ್ಚು ಶಾಖೆಗಳಲ್ಲಿ 1ರಿಂದ 10ನೇ ತರಗತಿಯವರೆಗೆ ಕಲಿಸಲಾಗುತ್ತದೆ.

ವಿದ್ಯಾರ್ಥಿಗಳಿಗೆ ಶಾಲಾ ಜೀವನದಲ್ಲಿಯೇ ಆರ್ಥಿಕ ನಿರ್ವಹಣೆಯ ನಾನಾ ಅಂಶಗಳನ್ನು ಕಲಿಸಬೇಕು. ಆರ್ಥಿಕ ಜಗತ್ತಿನಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪಠ್ಯಕ್ರಮಗಳು ಸಹಕಾರಿಯಾಗಿವೆ ಎಂದು ಆರ್ಕಿಡ್ಸ್‌ನ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ಶೈಕ್ಷಣಿಕ ಮುಖ್ಯಸ್ಥರಾದ ಶುಭಂ ಚೌಹಾಣ್‌ ತಿಳಿಸಿದ್ದಾರೆ.

ಪಠ್ಯಕ್ರಮದಲ್ಲಿ ವೈಯಕ್ತಿಕ ಹಣಕಾಸು, ಬ್ಯಾಂಕಿಂಗ್‌, ಉಳಿತಾಯ ಯೋಜನೆಗಳ ಆಯ್ಕೆ ಇತ್ಯಾದಿಗಳ ಬಗ್ಗೆ ಅರಿವು ಮೂಡಿಸಲಾಗುವುದು, ವಿದ್ಯಾರ್ಥಿಗಳನ್ನು ಬ್ಯಾಂಕಿಗೆ ಕರೆದುಕೊಂಡು ಹೋಗಿ ಅಲ್ಲಿ ಸಿಗುವ ಸೇವೆಗಳ ಬಗ್ಗೆ ತಿಳುವಳಿಕೆ ಮೂಡಿಸಲಾಗುವುದು ಎಂದು ವಿವರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮನಿ-ಗೈಡ್

Money Guide: ವೇತನದ ಜತೆಗೆ ಮಾಸಿಕವಾಗಿ 9,250 ರೂ. ಆದಾಯ ಬೇಕೆ? ಈ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಮಾಸಿಕ ಸಂಬಳವೊಂದನ್ನೇ ಆಶ್ರಯಿಸಿರುವ ಮಧ್ಯಮ ವರ್ಗದ ಜನರಿಗೆ ಅನಾರೋಗ್ಯ, ಅಪಘಾತದಂತಹ ಅನಿರೀಕ್ಷಿತ ಆಘಾತ ಮಾನಸಿಕ ಒತ್ತಡಕ್ಕೆ ಕಾರಣವಾಗಬಲ್ಲದು. ಹೀಗಾಗಿ ಇಂತಹ ಪರಿಸ್ಥಿತಿಯನ್ನು ಯಾವುದೇ ಗೊಂದಲಗಳಿಲ್ಲದೆ ದಾಟಬೇಕು ಎಂದಾದರೆ ಮಾಸಿಕ ವೇತನದ ಜತೆಗೆ ಇನ್ನೊಂದಷ್ಟು ಆದಾಯವೂ ಇರಬೇಕಾಗುತ್ತದೆ. ನೀವೂ ಇಂತಹ ಆದಾಯ ನಿರೀಕ್ಷಿಸುತ್ತಿದ್ದೀರಾ? ಹಾಗಾದರೆ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ ನಿಮ್ಮ ನೆರವಿಗೆ ಬರುತ್ತದೆ. ಏನಿದು ಯೋಜನೆ? ಯಾರೆಲ್ಲ ಅರ್ಹರು? ನಿಮ್ಮ ಎಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ದಿನ ಕಳೆದಂತೆ ಜೀವನ ವೆಚ್ಚವೂ ಅಧಿಕವಾಗುತ್ತಿದೆ. ಮಾಸಿಕ ಸಂಬಳವೊಂದನ್ನೇ ಆಶ್ರಯಿಸಿರುವ ಮಧ್ಯಮ ವರ್ಗದ ಜನರಿಗೆ ಅನಾರೋಗ್ಯ, ಅಪಘಾತದಂತಹ ಅನಿರೀಕ್ಷಿತ ಆಘಾತ ಮಾನಸಿಕ ಒತ್ತಡಕ್ಕೆ ಕಾರಣವಾಗಬಲ್ಲದು. ಹೀಗಾಗಿ ಇಂತಹ ಪರಿಸ್ಥಿತಿಯನ್ನು ಯಾವುದೇ ಗೊಂದಲಗಳಿಲ್ಲದೆ ದಾಟಬೇಕು ಎಂದಾದರೆ ಮಾಸಿಕ ವೇತನದ ಜತೆಗೆ ಇನ್ನೊಂದಷ್ಟು ಆದಾಯವೂ ಇರಬೇಕಾಗುತ್ತದೆ. ಇದಕ್ಕಾಗಿ ಎಲ್ಲರಿಗೂ ಪಾರ್ಟ್‌ ಟೈಂ ಜಾಬ್‌ ಮಾಡಲು ಸಾಧ್ಯವಿಲ್ಲ. ಇಂತಹವರಿಗಾಗಿ ನೆರವಾಗುವ ಯೋಜನೆಯೇ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (Post Office Monthly Income Scheme). ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಇದಕ್ಕೆ ಯಾರೆಲ್ಲ ಅರ್ಹರು? ನೀವು ಇದರಲ್ಲಿ ಖಾತೆ ತೆರೆಯಬೇಕಾದರೆ ಏನು ಮಾಡಬೇಕು? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Money Guide).

ಏನಿದು ಯೋಜನೆ?

ಇದರಲ್ಲಿ ಏಕಾಂಗಿಯಾಗಿ ಅಥವಾ ತಮ್ಮ ಸಂಗಾತಿಯೊಂದಿಗೆ ಜಂಟಿಯಾಗಿ ಖಾತೆಗಳನ್ನು ತೆರೆಯಬಹುದು. ವೈಯಕ್ತಿಕ ಖಾತೆಯಲ್ಲಿ ಗರಿಷ್ಠ 9 ಲಕ್ಷ ರೂ. ಮತ್ತು ಜಂಟಿ ಖಾತೆಯಲ್ಲಿ 15 ಲಕ್ಷ ರೂ.ವರೆಗೆ ಠೇವಣಿ ಇಡಬಹುದು. ಕನಿಷ್ಠ ಠೇವಣಿ ಅವಧಿ ಐದು ವರ್ಷ. ಈ ಠೇವಣಿಯ ಮೇಲೆ ಗಳಿಸಿದ ಬಡ್ಡಿಯು ಮಾಸಿಕ ಆದಾಯದ ರೂಪದಲ್ಲಿ ನಿಮಗೆ ಲಭಿಸುತ್ತದೆ. ಜಂಟಿ ಖಾತೆದಾರರು 15 ಲಕ್ಷ ರೂ.ಗಳನ್ನು ಠೇವಣಿ ಮಾಡುವ ಮೂಲಕ ಮಾಸಿಕ 9,250 ರೂ.ಗಳವರೆಗೆ ಗಳಿಸಬಹುದು. ಇನ್ನು 9 ಲಕ್ಷ ರೂ.ಗಳ ಠೇವಣಿ ಹೂಡುವವರು ಮಾಸಿಕ 5,500 ರೂ. ಪಡೆದುಕೊಳ್ಳಲಿದ್ದಾರೆ. ಸರ್ಕಾರಿ ಬೆಂಬಲಿತ ಯೋಜನೆ ಇದಾಗಿರುವುದರಿಂದ ಇದರಲ್ಲಿನ ಹೂಡಿಕೆ ಸುರಕ್ಷಿತ.

ಪಿಒಎಂಐಎಸ್‌ ವೈಶಿಷ್ಟ್ಯ

  • ಕನಿಷ್ಠ 1,000 ರೂ. ಹೂಡಿಕೆ ಮೂಲಕ ಖಾತೆ ತೆರೆಯಬಹುದು.
  • ಗರಿಷ್ಠ ಹೂಡಿಕೆ ಸಿಂಗಲ್‌ ಅಕೌಂಟ್‌ಗೆ 9 ಲಕ್ಷ ರೂ. ಮತ್ತು ಜಾಯಿಂಟ್‌ ಅಕೌಂಟ್‌ಗೆ 15 ಲಕ್ಷ ರೂ.
  • ಠೇವಣಿಯ ಅವಧಿ 5 ವರ್ಷ.
  • ಗರಿಷ್ಠ ಮೊತ್ತದ ಮಿತಿಗೆ ಒಳಪಟ್ಟು ಈ ಯೋಜನೆಯಡಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ವಹಿಸಬಹುದು.
  • ಒಂದು ವರ್ಷದ ನಂತರ ಖಾತೆಯನ್ನು ಅಕಾಲಿಕವಾಗಿ ಮುಚ್ಚಬಹುದು. 3 ವರ್ಷಗಳ ಅವಧಿ ಮುಗಿದ ನಂತರ ಖಾತೆಯನ್ನು ಮುಚ್ಚಿದರೆ ಠೇವಣಿಯ ಮೊತ್ತದಿಂದ ಶೇ. 1ರಷ್ಟು ಕಡಿತಗೊಳಿಸಲಾಗುತ್ತದೆ.
  • ಸದ್ಯ ಈ ಯೋಜನೆಯಲ್ಲಿ 7.4% ಬಡ್ಡಿ ರ ಲಭ್ಯ.

ಯಾರೆಲ್ಲ ತೆರೆಯಬಹುದು?

  • ವಯಸ್ಕರು (ಸಿಂಗಲ್‌ ಅಥವಾ ಜಾಯಿಂಟ್‌ ಅಕೌಂಟ್‌).
  • ಗರಿಷ್ಠ ಮೂರು ವ್ಯಕ್ತಿಗಳೊಂದಿಗೆ ಜಂಟಿಯಾಗಿ ಖಾತೆ ಹೊಂದಬಹುದು.
  • ಅಪ್ರಾಪ್ತ ವಯಸ್ಕ / ಮಾನಸಿಕ ಅಸ್ವಸ್ಥರ ಪರವಾಗಿ ಪೋಷಕರು ಖಾತೆ ತೆರೆಯಬಹುದು.
  • ಜಂಟಿ ಖಾತೆಯಲ್ಲಿನ ಎಲ್ಲರಿಗೂ ಹಣವನ್ನು ಸಮಾನವಾಗಿ ಹಂಚಲಾಗುತ್ತದೆ.

ಇದನ್ನು ಗಮನಿಸಿ

  • ಖಾತೆ ತೆರೆದ ದಿನಾಂಕದಿಂದ ಒಂದು ತಿಂಗಳು ಪೂರ್ಣಗೊಂಡ ನಂತರ ಮತ್ತು ಅವಧಿ ಮುಗಿಯುವ (Maturity) ತನಕ ಬಡ್ಡಿಯನ್ನು ಪಾವತಿಸಲಾಗುತ್ತದೆ.
  • ಠೇವಣಿ ಇಟ್ಟ 1 ವರ್ಷದೊಳಗೆ ಹಿಂಪಡೆಯಲು ಸಾಧ್ಯವಿಲ್ಲ.
  • ಸಂಬಂಧಪಟ್ಟ ಅಂಚೆ ಕಚೇರಿಯಲ್ಲಿ ಪಾಸ್‌ಬುಕ್‌ನೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಸಲ್ಲಿಸುವ ಮೂಲಕ ಖಾತೆ ತೆರೆದ ದಿನಾಂಕದಿಂದ 5 ವರ್ಷಗಳ ನಂತರ ಕ್ಲೋಸ್‌ ಮಾಡಬಹುದು.
  • ಒಂದು ವೇಳೆ ಖಾತೆದಾರನು ಅವಧಿ ಮುಕ್ತಾಯದ ಮುನ್ನವೇ ಮರಣ ಹೊಂದಿದರೆ, ಖಾತೆಯನ್ನು ಮುಚ್ಚಬಹುದು ಮತ್ತು ಮೊತ್ತವನ್ನು ನಾಮಿನಿಗೆ ಮರುಪಾವತಿಸಲಾಗುತ್ತದೆ.

ಯಾವೆಲ್ಲ ದಾಖಲೆಗಳು ಬೇಕು?

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಗೆ ನೋಂದಾಯಿಸಲು ವಿಳಾಸದ ಪುರಾವೆ, ಫೋಟೊ ಇರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್‌ ಗಾತ್ರದ ಫೋಟೊಗಳೊಂದಿಗೆ ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ.

ಇದನ್ನೂ ಓದಿ: EPF Death Claim: ಆಧಾರ್ ದೃಢೀಕರಣ ಇಲ್ಲದೇ ಇದ್ದರೂ ಇಪಿಎಫ್‌ಒ ಡೆತ್ ಕ್ಲೈಮ್ ಸಾಧ್ಯವೆ? ಇಲ್ಲಿದೆ ಮಾಹಿತಿ

Continue Reading

ದೇಶ

Aadhaar-PAN Link: ಇನ್ನೂ ಆಧಾರ್‌, ಪ್ಯಾನ್‌ ಲಿಂಕ್‌ ಆಗಿಲ್ಲವೆ? ಇಂದೇ ಕೊನೆಯ ದಿನ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Aadhaar-PAN Link: ನಿಮ್ಮ ಪ್ಯಾನ್‌ ನಂಬರ್‌ ಅನ್ನು ಆಧಾರ್‌ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈಗಲೇ ಮಾಡಿ. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Aadhaar-PAN Link
Koo

ಬೆಂಗಳೂರು: ನಿಮ್ಮ ಪ್ಯಾನ್‌ ನಂಬರ್‌ (Permanent Account Number) ಅನ್ನು ಆಧಾರ್‌ (Aadhaar)ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು (Aadhaar-PAN Link). ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ (Income tax) ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಹೀಗೆ ಲಿಂಕ್‌ ಮಾಡಿ

ಪ್ಯಾನ್‌ ಮತ್ತು ಆಧಾರ್‌ ಅನ್ನು ಹಲವು ವಿಧಗಳ ಮೂಲಕ ಲಿಂಕ್‌ ಮಾಡಬಹುದು. ಮೊದಲೇ ಹೇಳಿದಂತೆ ಇದಕ್ಕಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾರ್ಗಗಳನ್ನು ಬಳಸಬಹುದು.

ಇನ್‌ಕಂ ಟ್ಯಾಕ್ಸ್‌ ಡಿಪಾರ್ಟ್‌ಮೆಂಟ್‌ ಪೋರ್ಟಲ್‌ ಮೂಲಕ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳಲಿದ್ದು, ಅಲ್ಲಿ ಪ್ಯಾನ್‌, ಆಧಾರ್‌ ನಂಬರ್‌ ನಮೂದಿಸಿ. ಜತೆಗೆ ಇತರ ಅಗತ್ಯ ಮಾಹಿತಿಯನ್ನು ನೀಡಿ.

ಎಸ್‌ಎಂಎಸ್‌ ಮೂಲಕ

  • UIDPAN 10-ಅಂಕಿಗಳ ಪ್ಯಾನ್‌ ಕಾರ್ಡ್‌ ನಂಬರ್‌, 12-ಅಂಕಿಗಳ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಒಂದು ಸ್ಪೇಸ್‌ ಕೊಟ್ಟು 567678 ಅಥವಾ 56161ಗೆ ಎಸ್‌ಎಂಎಸ್‌ ಕಳುಹಿಸಿ.
  • ಬಳಿಕ ಪ್ಯಾನ್-ಆಧಾರ್ ಲಿಂಕ್ ಸ್ಥಿತಿಯನ್ನು ಎಸ್ಎಂಎಸ್ ನಿಮಗೆ ತಿಳಿಸಲಾಗುತ್ತದೆ. ಗಮನಿಸಿ ಜನ್ಮ ದಿನಾಂಕವು ಎರಡೂ ದಾಖಲೆಗಳಲ್ಲಿ ಹೊಂದಿಕೆಯಾದರೆ ಮಾತ್ರ ಆಧಾರ್ ಮತ್ತು ಪ್ಯಾನ್ ಅನ್ನು ಲಿಂಕ್ ಮಾಡಲಾಗುತ್ತದೆ.

ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ಯಾ ಎನ್ನುವುದನ್ನು ಪರಿಶೀಲಿಸುವ ವಿಧಾನ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar Status’ ಆಪ್ಶನ್‌ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್‌ ಮತ್ತು ಆಧಾರ್‌ ನಂಬರ್‌ ನಮೂದಿಸಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ‘View Link Aadhaar Status’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಆಗ ಒಂದು ವೇಳೆ ಲಿಂಕ್‌ ಆಗಿದ್ದರೆ ನಿಮ್ಮ ಪ್ಯಾನ್‌ (ಪ್ಯಾನ್‌ ನಂಬರ್‌) ಆಧಾರ್‌ ನಂಬರ್‌ (ಆಧಾರ್‌ ನಂಬರ್‌ನ ಅಂಕಿ)ನೊಂದಿಗೆ ಲಿಂಕ್‌ ಆಗಿದೆ ಎನ್ನುವ ಸಂದೇಶ ಮೂಡುತ್ತದೆ.

ಕಡ್ಡಾಯ ಯಾಕೆ?

ನಕಲಿ ಪ್ಯಾನ್‌ ಕಾರ್ಡ್‌ಗಳನ್ನು ತಡೆಗಟ್ಟಲು, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಜಾರಿಗೆ ತರುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಕೂಡಲೇ ಲಿಂಕ್‌ ಮಾಡಿ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Continue Reading

ದೇಶ

RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

RBI:ಆರ್‌ಬಿಐ ಒಟ್ಟು 822.1 ಟನ್ ಚಿನ್ನವನ್ನು ಹೊಂದಿದ್ದು, ಅದರಲ್ಲಿ 413.8 ಟನ್‌ಗಳಷ್ಟು ಚಿನ್ನವನ್ನು ವಿದೇಶದಲ್ಲಿ ಇರಿಸಲಾಗಿದೆ. ಆರ್‌ಬಿಐ ಕಳೆದ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸುತ್ತಿದ್ದು, ಕಳೆದ ಹಣಕಾಸು ವರ್ಷದಲ್ಲಿ 27.5 ಟನ್ ಚಿನ್ನವನ್ನು ಖರೀದಿಸಿತ್ತು. ಆ ಮೂಲಕ ಜಾಗತಿಕ ಮಟ್ಟದಲ್ಲಿ ಆರ್‌ಬಿಐ ಚಿನ್ನ ಸಂಗ್ರಹಣೆಯನ್ನು ಹೆಚ್ಚಿಸಿದೆ.

VISTARANEWS.COM


on

RBI
Koo

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌(RBI) ಇಂಗ್ಲೆಂಡ್‌ನಲ್ಲಿದ್ದ ತನ್ನ 100 ಟನ್‌ಗೂ ಅಧಿಕ ಚಿನ್ನವನ್ನು ದೇಶಿಯ ಖಜಾನೆ(vaults)ಗಳಿಗೆ ರವಾನಿಸಿದೆ. ಕಳೆದ 33ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಚಿನ್ನ ಭಾರತಕ್ಕೆ ಬರುತ್ತಿರುವುದು. ಮುಂದಿನ ದಿನಗಳಲ್ಲಿ ಇಷ್ಟೇ ಮೊತ್ತ ಚಿನ್ನವನ್ನು ಆರ್‌ಬಿಐ ಭಾರತಕ್ಕೆ ತರಲಿದೆ. ಇನ್ನು ಈ ಚಿನ್ನವನ್ನು ಕೆಲವೊಂದು ವ್ಯವಸ್ಥಾಪನಾ ಕಾರಣ ಮತ್ತು ವೈವಿಧ್ಯಮಯ ಸಂಗ್ರಹಣೆ ಉದ್ದೇಶದಿಂದ ದೇಶಿಯ ಖಜಾನೆಗಳಿಗೆ ತರಲಾಗುತ್ತಿದೆ.

ಮಾರ್ಚ್ 2023 ರ ಮಾಹಿತಿಯ ಪ್ರಕಾರ, ಆರ್‌ಬಿಐ ಒಟ್ಟು 822.1 ಟನ್ ಚಿನ್ನವನ್ನು ಹೊಂದಿದ್ದು, ಅದರಲ್ಲಿ 413.8 ಟನ್‌ಗಳಷ್ಟು ಚಿನ್ನವನ್ನು ವಿದೇಶದಲ್ಲಿ ಇರಿಸಲಾಗಿದೆ. ಆರ್‌ಬಿಐ ಕಳೆದ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸುತ್ತಿದ್ದು, ಕಳೆದ ಹಣಕಾಸು ವರ್ಷದಲ್ಲಿ 27.5 ಟನ್ ಚಿನ್ನವನ್ನು ಖರೀದಿಸಿತ್ತು. ಆ ಮೂಲಕ ಜಾಗತಿಕ ಮಟ್ಟದಲ್ಲಿ ಆರ್‌ಬಿಐ ಚಿನ್ನ ಸಂಗ್ರಹಣೆಯನ್ನು ಹೆಚ್ಚಿಸಿದೆ.

ಅನೇಕ ದೇಶಗಳ ಸೆಂಟ್ರಲ್ ಬ್ಯಾಂಕ್‌ಗಳು ತಮ್ಮ ಚಿನ್ನವನ್ನು ಬ್ಯಾಂಕ್ ಆಫ್ ಇಂಗ್ಲೆಂಡ್‌ನಲ್ಲಿ ಇರಿಸುತ್ತವೆ. ಇದರಲ್ಲಿ ಭಾರತವೂ ಒಂದು. ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಸಾಕಷ್ಟು ಚಿನ್ನವನ್ನು ಲಂಡನ್‌ನಲ್ಲಿ ಇರಿಸಲಾಗಿದೆ. ‘ಕೆಲವು ವರ್ಷಗಳ ಹಿಂದೆ ಆರ್‌ಬಿಐ ಚಿನ್ನ ಖರೀದಿಸಲು ಆರಂಭಿಸಿತು ಮತ್ತು ಅದನ್ನು ಎಲ್ಲಿ ಸಂಗ್ರಹಿಸಬೇಕು ಎಂದು ನಿರ್ಧರಿಸಿತು. ವಿದೇಶದಲ್ಲಿ ಚಿನ್ನದ ದಾಸ್ತಾನು ಹೆಚ್ಚುತ್ತಿರುವ ಕಾರಣ ಭಾರತಕ್ಕೆ ಸ್ವಲ್ಪ ಚಿನ್ನವನ್ನು ತರಲು ನಿರ್ಧರಿಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬದಲಾಗುತ್ತಿರುವ ರಾಜಕೀಯ ಸಂಗತಿಗಳು ಮತ್ತು ಕರೆನ್ಸಿ ಮೌಲ್ಯ ಏರಿಳಿತದ ಭೀತಿಯಿಂದಾಗಿ ಆರ್‌ಬಿಐ ಈ ಈ ಚಿನ್ನವನ್ನು ಭಾರತಕ್ಕೆ ತರಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಆರ್ಥಿಕ ತಜ್ಞರು ಹೇಳೋದೇನು?

ಇನ್ನು ಒಂದೇ ಬಾರಿ ಇಷ್ಟು ದೊಡ್ಡ ಮಟ್ಟದಲ್ಲಿ ಚಿನ್ನವನ್ನು ಭಾರತಕ್ಕೆ ತರುತ್ತಿರುವ ಬಗ್ಗೆ ಪ್ರಸಿದ್ದ ಆರ್ತಿಕ ತಜ್ಞ ಸಂಜೀವ್‌ ಸನ್ಯಾಲ್‌ ಟ್ವೀಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾರಿಗೂ ತಿಳಿಯದಂತೆ ಆರ್‌ಬಿಐ ತನ್ನ 100 ಟನ್ ಚಿನ್ನದ ನಿಕ್ಷೇಪಗಳನ್ನು ಯುಕೆಯಿಂದ ಭಾರತಕ್ಕೆ ಹಿಂತಿರುಗಿಸಿದೆ. ಹೆಚ್ಚಿನ ದೇಶಗಳು ತಮ್ಮ ಚಿನ್ನವನ್ನು ಬ್ಯಾಂಕ್ ಆಫ್ ಇಂಗ್ಲೆಂಡ್ ಅಥವಾ ಅಂತಹ ಕೆಲವು ಸ್ಥಳಗಳ ಖಜಾನೆಗಳಲ್ಲಿ ಇರಿಸುತ್ತವೆ. ಭಾರತವು ಈಗ ತನ್ನ ಹೆಚ್ಚಿನ ಚಿನ್ನವನ್ನು ತನ್ನದೇ ಆದ ಖಜಾನೆಗಳಲ್ಲಿ ಇಟ್ಟುಕೊಳ್ಳುತ್ತದೆ. 1991 ರಲ್ಲಿ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ನಾವು ರಾತ್ರೋರಾತ್ರಿ ಚಿನ್ನವನ್ನು ಸಾಗಿಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

1991ರಲ್ಲಿ ಏನಾಗಿತ್ತು?

1991 ರಲ್ಲಿ, ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಚಂದ್ರಶೇಖರ್ ನೇತೃತ್ವದ ಸರ್ಕಾರ ಹಣವನ್ನು ಸಂಗ್ರಹಿಸಲು ಚಿನ್ನವನ್ನು ಒತ್ತೆ ಇಟ್ಟಿತ್ತು. ಜುಲೈ 4 ಮತ್ತು 18 ರ ನಡುವೆ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಜಪಾನ್‌ನಲ್ಲಿ 46.91 ಟನ್ ಚಿನ್ನವನ್ನು ಒತ್ತೆ ಇಟ್ಟು, $400 ಮಿಲಿಯನ್ ಸಾಲ ಪಡೆದುಕೊಂಡಿತ್ತು. ಸುಮಾರು 15 ವರ್ಷಗಳ ಹಿಂದೆ, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ಅಡಿಯಲ್ಲಿ ಆರ್‌ಬಿಐ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) 200 ಟನ್ ಚಿನ್ನವನ್ನು ಖರೀದಿಸಿತು.

Continue Reading

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಗೆ ಮುನ್ನ ಬೆಲೆ ಗಮನಿಸಿ

Gold Rate Today: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಗುರುವಾರದ ದರವೇ ಇಂದೂ (ಶುಕ್ರವಾರ) ಮುಂದುವರಿದಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಗುರುವಾರದ ದರವೇ ಇಂದೂ (ಶುಕ್ರವಾರ) ಮುಂದುವರಿದಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,670 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,276 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,360 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,700 ಮತ್ತು ₹6,67,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,276 ಆಗಿದ್ದು, ಎಂಟು ಗ್ರಾಂ ಬೆಲೆ ₹58,208 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,760 ಮತ್ತು ₹7,27,600 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ66,85072,910
ಮುಂಬೈ66,70072,760
ಬೆಂಗಳೂರು66,70072,760
ಚೆನ್ನೈ67,30073,420

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹95.60, ಎಂಟು ಗ್ರಾಂ ₹764.80 ಮತ್ತು 10 ಗ್ರಾಂ ₹956ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,560 ಮತ್ತು 1 ಕಿಲೋಗ್ರಾಂಗೆ ₹95,600 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನೆಲ್ಲ ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಗಮನಿಸಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Continue Reading
Advertisement
Kanyakumari Tour
ಪ್ರವಾಸ36 mins ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ44 mins ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ45 mins ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ46 mins ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Exit Polls
Lok Sabha Election 202448 mins ago

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Heart Attack
ದೇಶ55 mins ago

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Prajwal revanna Case
ಚಿಕ್ಕಮಗಳೂರು1 hour ago

Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Modi Meditation
ಪ್ರಮುಖ ಸುದ್ದಿ2 hours ago

Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Virat Kohli
ಪ್ರಮುಖ ಸುದ್ದಿ2 hours ago

Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹಂತಕ ಗಿರೀಶ್‌ಗೆ ಜೂನ್ 16ರವರೆಗೆ‌ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌