Gold Price | ಬಂಗಾರದ ದರದಲ್ಲಿ 230 ರೂ. ಇಳಿಕೆ, ಬೆಳ್ಳಿ 1,000 ರೂ. ಅಗ್ಗ - Vistara News

ಚಿನ್ನದ ದರ

Gold Price | ಬಂಗಾರದ ದರದಲ್ಲಿ 230 ರೂ. ಇಳಿಕೆ, ಬೆಳ್ಳಿ 1,000 ರೂ. ಅಗ್ಗ

ಬಂಗಾರದ ದರದಲ್ಲಿ 230 ರೂ. ಇಳಿಕೆಯಾಗಿದ್ದು, 50,450 ರೂ.ಗೆ ತಗ್ಗಿದೆ. ಬೆಳ್ಳಿಯ ದರದಲ್ಲೂ 700 ರೂ. ಅಗ್ಗವಾಗಿದೆ. (Gold Price) ಹೀಗಾಗಿ ಖರೀದಿದಾರರು ಗಮನಿಸಬಹುದು.

VISTARANEWS.COM


on

gold bond
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬಂಗಾರದ ದರದಲ್ಲಿ ಶುಕ್ರವಾರ 230 ರೂ. ಇಳಿಕೆಯಾಗಿದೆ. ಬೆಳ್ಳಿಯ ದರದಲ್ಲಿ 1000 ರೂ. ತಗ್ಗಿದೆ. 24 ಕ್ಯಾರಟ್‌ನ 10 ಗ್ರಾಮ್‌ ಚಿನ್ನದ ದರ 50,450 ರೂ.ಗೆ ಇಳಿಕೆಯಾಗಿದೆ. (Gold Price) ಆಭರಣ ಚಿನ್ನ ಅಥವಾ 22 ಕ್ಯಾರಟ್‌ ಬಂಗಾರದ ದರ 46,250 ರೂ.ಗೆ ಇಳಿಕೆಯಾಗಿದೆ. 200 ರೂ. ಇಳಿದಿದೆ.

ಬೆಂಗಳೂರಿನಲ್ಲಿ ಬೆಳ್ಳಿಯ ದರದಲ್ಲಿ 700 ರೂ. ಕಡಿತವಾಗಿದ್ದು, 61,100 ರೂ.ಗೆ ತಗ್ಗಿದೆ. ಪ್ಲಾಟಿನಮ್‌ ದರ 10 ಗ್ರಾಮ್‌ಗೆ 22,560 ರೂ.ಗೆ ಏರಿದ್ದು, 520 ರೂ. ಹೆಚ್ಚಳವಾಗಿದೆ.

ಅಂತಾರಾಷ್ಟ್ರೀಯ ದರಗಳಿಗೆ ಅನುಗುಣವಾಗಿ ಚಿನ್ನದ ದರಗಳು ವ್ಯತ್ಯಾಸವಾಗುತ್ತದೆ. ಇತ್ತೀಚೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಸ್ವರ್ಣ ದರ ಇಳಿಕೆಯಾಗುತ್ತಿದೆ. ಹೀಗಿದ್ದರೂ, ಒಟ್ಟಾರೆಯಾಗಿ ಚಿನ್ನದ ದರ ಏರುಗತಿಯನ್ನೇ ಕಂಡಿರುವುದರಿಂದ ಈಗಲೂ ಉಳಿತಾಯ ಮತ್ತು ಹೂಡಿಕೆಯ ದೃಷ್ಟಿಯಿಂದ ಬಂಗಾರ ವಿಶ್ವಾಸಾರ್ಹವಾಗಿದೆ.

ಬಂಗಾರದಲ್ಲಿ ಹೂಡಿಕೆ ಸುಲಭ. ನೇರವಾಗಿ ಜ್ಯುವೆಲ್ಲರಿ ಮಳಿಗೆಗೆ ತೆರಳಿ ಆಭರಣಗಳನ್ನು ಖರೀದಿಸಬಹುದು. ಚಿನ್ನದ ಗಟ್ಟಿ ಅಥವಾ ನಾಣ್ಯಗಳನ್ನು ಕೊಳ್ಳಬಹುದು. ಅಥವಾ ಚಿನ್ನದ ಇಟಿಎಫ್‌ಗಳಲ್ಲಿ ಆನ್‌ಲೈನ್‌ ಮೂಲಕ ಸುರಕ್ಷಿತ ಹೂಡಿಕೆ ಮಾಡಬಹುದು. ಸಾವರಿನ್‌ ಗೋಲ್ಡ್‌ ಬಾಂಡ್‌ಗಳಲ್ಲಿ ಕೂಡ ಹೂಡಿಕೆ ಮಾಡಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌: ಮತ್ತೇ ಇಳಿಕೆ ಕಂಡ ಚಿನ್ನ! ಖರೀದಿಗೆ ಇದೇ ಬೆಸ್ಟ್‌ ಟೈಮ್‌

VISTARANEWS.COM


on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ಬೆಲೆ ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ನೆಮ್ಮದಿ ತಂದಿದೆ. ಬುಧವಾರದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆಯ ಮೇಲೆ 50 ರೂಪಾಯಿಗಳಷ್ಟು ಕುಸಿತ ಕಂಡುಬಂದಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು 100 ರೂಪಾಯಿಗಳಷ್ಟು ದರ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಸ್ಥಿರತೆಯ ನಡುವೆಯೂ ಭಾರತೀಯ ಮಾರುಕಟ್ಟೆಯಲ್ಲಿನ ಈ ಇಳಿಕೆಯು ಮದುವೆ ಹಾಗೂ ಶುಭ ಸಮಾರಂಭಗಳಿಗಾಗಿ ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

ದರ ವಿವರಗಳನ್ನು ಗಮನಿಸುವುದಾದರೆ, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ನ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 14,185 ರೂಪಾಯಿಗಳಾಗಿದ್ದು, 10 ಗ್ರಾಮ್‌ ಚಿನ್ನದ ದರ 1,41,850 ರೂಪಾಯಿಗಳಿಗೆ ತಲುಪಿದೆ. ಇನ್ನು ಹೂಡಿಕೆದಾರರ ನೆಚ್ಚಿನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 15,475 ರೂಪಾಯಿಯಂತೆ 10 ಗ್ರಾಮ್‌ಗೆ 1,54,750 ರೂಪಾಯಿ ದಾಖಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ದುಬೈ ಹಾಗೂ ಸೌದಿ ಅರೇಬಿಯಾದಂತಹ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ದರ ಸ್ವಲ್ಪ ಹೆಚ್ಚಿದ್ದರೂ, ದೇಶಿಯ ಮಾರುಕಟ್ಟೆಯ ಇಂದಿನ ಇಳಿಕೆ ಗ್ರಾಹಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದರೂ, ಬೆಳ್ಳಿಯ ದರವು ಮಾರುಕಟ್ಟೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರು ಮತ್ತು ಮುಂಬೈನಲ್ಲಿ ಒಂದು ಗ್ರಾಮ್ ಬೆಳ್ಳಿ ಬೆಲೆ 265 ರೂಪಾಯಿ (100 ಗ್ರಾಂಗೆ 26,500 ರೂ.) ಇದ್ದರೆ, ಚೆನ್ನೈ ಮತ್ತು ಕೇರಳದಂತಹ ಭಾಗಗಳಲ್ಲಿ ಬೆಲೆ 275 ರೂಪಾಯಿಯಂತೆ ಸ್ವಲ್ಪ ಮಟ್ಟಿನ ಏರಿಕೆ ದಾಖಲಿಸಿದೆ. ವಿವಿಧ ನಗರಗಳ ನಡುವೆ ಬೆಲೆಯಲ್ಲಿ ಅಲ್ಪ ವ್ಯತ್ಯಾಸಗಳಿದ್ದರೂ, ಒಟ್ಟಾರೆ ಲೋಹದ ಮಾರುಕಟ್ಟೆಯು ಪ್ರಸ್ತುತ ಖರೀದಿದಾರರಿಗೆ ಪೂರಕವಾಗಿದ್ದು, ಆಭರಣ ಮಳಿಗೆಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

Continue Reading

Latest

ಅಕ್ಷಯ ತೃತೀಯದಂದು ದಾಖಲೆ ಮಟ್ಟಕ್ಕೆ ಚಿನ್ನ ಖರೀದಿ! ಸೇಲ್‌ ಆದ ಬಂಗಾರ ಎಷ್ಟು ಕೆಜಿ ಗೊತ್ತಾ?

VISTARANEWS.COM


on

ಅಕ್ಷಯ ತೃತೀಯದ ಶುಭ ದಿನದಂದು ದೇಶಾದ್ಯಂತ ಚಿನ್ನ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ನಿನ್ನೆ ಭಾನುವಾರ ರಜೆ ಇದ್ದ ಕಾರಣ ಆಭರಣ ಮಳಿಗೆಗಳಲ್ಲಿ ಜನರ ನೂಕುನುಗ್ಗಲು ಉಂಟಾಗಿತ್ತು. ಕೇವಲ ಒಂದೇ ದಿನದಲ್ಲಿ ಸುಮಾರು 1.25 ಟನ್ ಚಿನ್ನ ಮತ್ತು ಅಂದಾಜು 10 ಟನ್ ಬೆಳ್ಳಿ ಮಾರಾಟವಾಗುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಯಾಗಿದೆ. ಹೂಡಿಕೆದಾರರು ಮತ್ತು ಆಭರಣ ಪ್ರಿಯರು ಚಿನ್ನಕ್ಕಿಂತ ಕಡಿಮೆ ದರವಿರುವ ಬೆಳ್ಳಿಯತ್ತಲೂ ಹೆಚ್ಚಿನ ಆಸಕ್ತಿ ತೋರಿದ್ದು ವಿಶೇಷ.

ಈ ಬಾರಿಯ ಹಬ್ಬಕ್ಕೆ ಮತ್ತೊಂದು ವಿಶೇಷ ಮೆರುಗು ತಂದುಕೊಟ್ಟ ವಿಷಯವೇನೆಂದರೆ ಆಭರಣ ಮಳಿಗೆಗಳಲ್ಲಿ ಕಂಡುಬಂದ ಕ್ರಿಕೆಟ್ ಮತ್ತು ಭಕ್ತಿಯ ಸಂಯೋಜನೆ. ಐಪಿಎಲ್ ಅಭಿಮಾನಿಗಳಿಗಾಗಿ ಮಾರುಕಟ್ಟೆಗೆ ಬಂದಿರುವ ‘RCB ಲೋಗೋ’ ಹೊಂದಿರುವ ಚಿನ್ನದ ನಾಣ್ಯಗಳಿಗೆ ಭರ್ಜರಿ ಡಿಮ್ಯಾಂಡ್ ಇತ್ತು. ಇದರ ಜೊತೆಗೆ ಬಸವ ಜಯಂತಿಯ ಹಿನ್ನೆಲೆಯಲ್ಲಿ ಬಸವಣ್ಣನವರ ಚಿತ್ರವಿರುವ ಚಿನ್ನದ ನಾಣ್ಯಗಳನ್ನು ಕೂಡ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ್ದಾರೆ. ಪ್ರಸ್ತುತ ಒಂದು ಗ್ರಾಂ ಚಿನ್ನದ ನಾಣ್ಯಕ್ಕೆ ಸುಮಾರು 15,500 ರೂ. ದರವಿದ್ದರೂ, ಗ್ರಾಹಕರು ಹೂಡಿಕೆಯ ದೃಷ್ಟಿಯಿಂದ ಖರೀದಿಗೆ ಹಿಂದೇಟು ಹಾಕಿಲ್ಲ. ಇವೆಲ್ಲವುಗಳ ನಡುವೆ ಅಕ್ಷಯ ತೃತೀಯದ ದಿನವೇ ಆಭರಣಗಳನ್ನು ಮನೆಗೆ ಕೊಂಡೊಯ್ಯಲು ಅನೇಕ ಗ್ರಾಹಕರು ಮೊದಲೇ ಮುಂಗಡವಾಗಿ ಬುಕ್ಕಿಂಗ್ ಕೂಡ ಮಾಡಿದ್ದರು.

Continue Reading

Latest

ಅಕ್ಷಯ ತೃತೀಯದ ದಿನ ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌

VISTARANEWS.COM


on

ಬೆಂಗಳೂರು: ಅಕ್ಷಯ ತೃತೀಯದ ಈ ವಿಶೇಷ ಸಂದರ್ಭದಲ್ಲಿ ಚಿನ್ನ ಖರೀದಿಸುವವರಿಗೆ ಮಾರುಕಟ್ಟೆ ಸಿಹಿ ಸುದ್ದಿ ನೀಡಿದೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹಾಗೂ ಮಧ್ಯಪ್ರಾಚ್ಯದ ಯುದ್ಧದ ಭೀತಿಯ ನಡುವೆಯೂ ಚಿನ್ನದ ಬೆಲೆ ಇಳಿಕೆ ಹಾದಿ ಹಿಡಿದಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಹಬ್ಬದ ದಿನದಂದು ಬಂಗಾರ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇರುವ ಕಾರಣ, ಬೆಲೆ ಇಳಿಕೆಯು ಜನ ಸಾಮಾನ್ಯರಿಗೆ ತುಸು ನಿರಾಳ ತಂದಿದೆ.

ಬೆಂಗಳೂರಿನ ಇಂದಿನ ಮಾರುಕಟ್ಟೆ ದರದಂತೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 490 ರೂ. ಇಳಿಕೆಯಾಗಿದ್ದು, 1,55,290 ರೂಪಾಯಿಗೆ ತಲುಪಿದೆ. ಇನ್ನು ಆಭರಣ ಚಿನ್ನ ಅಂದರೆ 22 ಕ್ಯಾರೆಟ್‌ನ 10 ಗ್ರಾಂ ಬೆಲೆಯು 450 ರೂ. ಕಡಿಮೆಯಾಗಿ 1,42,350 ರೂಪಾಯಿ ದಾಖಲಾಗಿದೆ. ಈ ಇಳಿಕೆಯು ಅಕ್ಷಯ ತೃತೀಯದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ್ದು, ಜ್ಯುವೆಲ್ಲರಿ ಶಾಪ್‌ಗಳಲ್ಲಿ ಇಂದು ಗ್ರಾಹಕರ ಸಂಖ್ಯೆ ಏರುವ ಸಾಧ್ಯತೆಯಿದೆ.

ಚಿನ್ನದ ಬೆಲೆ ಇಳಿಕೆಯಾಗಿದ್ದರೂ, ಬೆಳ್ಳಿಯ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಳ್ಳಿ ಬೆಲೆ ತಟಸ್ಥವಾಗಿದ್ದು, ಒಂದು ಕೆಜಿಗೆ 2,75,000 ರೂಪಾಯಿ ಹಾಗೂ ಒಂದು ಗ್ರಾಂಗೆ 275 ರೂಪಾಯಿ ನಿಗದಿಯಾಗಿದೆ. ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಡಾಲರ್ ಮೌಲ್ಯದ ಏರಿಳಿತದ ನಡುವೆಯೂ ಬಂಗಾರದ ದರ ಇಳಿಕೆಯಾಗಿರುವುದು ಈ ಬಾರಿ ಅಕ್ಷಯ ತೃತೀಯದ ವಿಶೇಷ ಆಕರ್ಷಣೆಯಾಗಿದೆ.

Continue Reading

ಚಿನ್ನದ ದರ

Gold Rate Today: ಮತ್ತೆ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಇಷ್ಟಿದೆ

Gold Rate Today: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಏರಿಕೆಯಾಗಿದ್ದು, ಭಾನುವಾರ ಮತ್ತು ಇಂದು (ಆಗಸ್ಟ್‌ 26) ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

VISTARANEWS.COM


on

Gold Rate Today

ಬೆಂಗಳೂರು: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಏರಿಕೆಯಾಗಿದ್ದು, ಭಾನುವಾರ ಮತ್ತು ಇಂದು (ಆಗಸ್ಟ್‌ 26) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,950 ಮತ್ತು ₹ 6,69,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,432 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 73,040 ಮತ್ತು ₹ 7,30,400 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,710₹ 7,319
ಮುಂಬೈ₹ ₹ 6,695 ₹ 7,304
ಬೆಂಗಳೂರು₹ 6,695₹ 7,304
ಚೆನ್ನೈ₹ 6,695 ₹ 7,304

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 84.40 ಹಾಗೂ 8 ಗ್ರಾಂಗೆ ₹ 675.20 ಇದೆ. 10 ಗ್ರಾಂ ₹ 844 ಹಾಗೂ 1 ಕಿಲೋಗ್ರಾಂ ₹ 84,400 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

Continue Reading
Advertisement
Rakshit Shetty Richard Anthony Produce By Hombale
ದೇಶ12 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ12 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ12 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest3 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌