ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಗುರುವಾರ ೧70 ರೂ. ಇಳಿಕೆಯಾಗಿದೆ. ಪ್ರತಿ 10 ಗ್ರಾಮ್ಗೆ 56,010 ರೂ.ಗೆ (24 ಕ್ಯಾರಟ್) ಇಳಿಕೆಯಾಗಿದೆ. 22 ಕ್ಯಾರಟ್ ಅಥವಾ ಆಭರಣ ಚಿನ್ನದ ದರದಲ್ಲಿ 150 ರೂ. ಇಳಿಕೆಯಾಗಿದ್ದು, 51,350 ರೂ.ಗೆ (Gold rate ) ತಗ್ಗಿದೆ.
ಬೆಳ್ಳಿಯ ದರದಲ್ಲಿ 3೦೦ ರೂ. ಏರಿಕೆಯಾಗಿದ್ದು, ಪ್ರತಿ ಕೆಜಿಗೆ 74,000 ರೂ.ಗೆ ಏರಿಕೆಯಾಗಿದೆ. ಪ್ಲಾಟಿನಮ್ ದರದಲ್ಲಿ 10 ಗ್ರಾಮ್ಗೆ 390 ರೂ. ಇಳಿಕೆಯಾಗಿದ್ದು, 28,180 ರೂ.ಗೆ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿಯ ವಿನಿಮಯ ದರವನ್ನು ಆಧರಿಸಿ ಸ್ಥಳೀಯ ದರಗಳಲ್ಲಿ ವ್ಯತ್ಯಾಸವಾಗುತ್ತದೆ.