ಬೆಂಗಳೂರು: ಚಿನ್ನದ ದರದಲ್ಲಿ ಮಂಗಳವಾರ ಬೆಂಗಳೂರಿನಲ್ಲಿ 160 ರೂ. ಏರಿಕೆಯಾಗಿದೆ. ಪ್ರತಿ 10 ಗ್ರಾಮ್ಗೆ 54,160 ರೂ.ಗೆ (24 ಕ್ಯಾರಟ್) ವೃದ್ಧಿಸಿದೆ. 22 ಕ್ಯಾರಟ್ ಅಥವಾ ಆಭರಣ ಚಿನ್ನದ ದರದಲ್ಲಿ 150 ರೂ. ಏರಿದ್ದು,49,500 ರೂ.ಗೆ (Gold price ) ಹೆಚ್ಚಳವಾಗಿದೆ.
ಬೆಳ್ಳಿಯ ದರದಲ್ಲಿ 900 ರೂ. ಏರಿಕೆಯಾಗಿದ್ದು, ಪ್ರತಿ ಕೆಜಿಗೆ ೭೨,೫೦೦ ರೂ.ಗೆ ಏರಿಕೆಯಾಗಿದೆ. ಪ್ಲಾಟಿನಮ್ ದರದಲ್ಲಿ 10 ಗ್ರಾಮ್ಗೆ ೫೩೦ ರೂ. ಏರಿಕೆಯಾಗಿದ್ದು, ೨೬,೧೮೦ ರೂ.ಗೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿಯ ವಿನಿಮಯ ದರವನ್ನು ಆಧರಿಸಿ ಸ್ಥಳೀಯ ದರಗಳಲ್ಲಿ ವ್ಯತ್ಯಾಸವಾಗುತ್ತದೆ.