ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಕಳೆದ ಕೆಲ ದಿನಗಳಲ್ಲಿ ಅಲ್ಪ ಇಳಿಕೆಯಾಗಿದೆ. ಗುರುವಾರ ಪ್ರತಿ 10 ಗ್ರಾಮ್ನ ದರ 56,780 ರೂ.ನಷ್ಟಿತ್ತು. (24 ಕ್ಯಾರಟ್) . 22 ಕ್ಯಾರಟ್ ಅಥವಾ ಆಭರಣ ಚಿನ್ನದ ದರ ೫೨,೦೫೦ ರೂ.ನಷ್ಟಿತ್ತು. (Gold rate )
ಬೆಳ್ಳಿಯ ದರದಲ್ಲಿ ೧,೩೦೦ ರೂ. ಇಳಿಕೆಯಾಗಿದ್ದು, ಪ್ರತಿ ಕೆಜಿಗೆ ೭೩,೫೦೦ ರೂ.ಗೆ ತಗ್ಗಿದೆ. ಪ್ಲಾಟಿನಮ್ ದರದಲ್ಲಿ 10 ರೂ. ಇಳಿಕೆಯಾಗಿದ್ದು, 27,190 ರೂ.ನಷ್ಟಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿಯ ವಿನಿಮಯ ದರವನ್ನು ಆಧರಿಸಿ ಸ್ಥಳೀಯ ದರಗಳಲ್ಲಿ ವ್ಯತ್ಯಾಸವಾಗುತ್ತದೆ.