Gold rate today : ಬಂಗಾರದ ದರದಲ್ಲಿ 310 ರೂ. ಇಳಿಕೆ, ಬೆಳ್ಳಿ 150 ರೂ. ಏರಿಕೆ Vistara News

ಚಿನ್ನದ ದರ

Gold rate today : ಬಂಗಾರದ ದರದಲ್ಲಿ 310 ರೂ. ಇಳಿಕೆ, ಬೆಳ್ಳಿ 150 ರೂ. ಏರಿಕೆ

Gold rate today ಬಂಗಾರದ ದರದಲ್ಲಿ ಶುಕ್ರವಾರ 310 ರೂ. ಇಳಿದಿದೆ. ಬೆಳ್ಳಿ ತುಟ್ಟಿಯಾಗಿದೆ. ವಿವರ ಇಲ್ಲಿದೆ.

VISTARANEWS.COM


on

gold weared women
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ 24 ಕ್ಯಾರಟ್‌ ಬಂಗಾರದ ದರದಲ್ಲಿ 310 ರೂ. ಇಳಿಕೆಯಾಗಿದೆ. ಪ್ರತಿ 10 ರಾಮ್‌ಗೆ ದರ 60,440 ರೂ.ಗೆ ತಗ್ಗಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್‌ ಚಿನ್ನದ ದರದಲ್ಲಿ 300 ರೂ. ಇಳಿದಿದ್ದು, 55,400 ರೂ.ಗೆ ಇಳಿಕೆಯಾಗಿದೆ. ಬೆಳ್ಳಿಯ ದರ ಪ್ರತಿ ಕೆ.ಜಿಗೆ 78,000 ರೂ.ಗೆ (Gold rate today ) ವೃದ್ಧಿಸಿದೆ.

ಮದುವೆಗಳು ಮತ್ತು ಹಬ್ಬಗಳಲ್ಲಿ ಚಿನ್ನದ ಖರೀದಿ ಹೆಚ್ಚು: ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು.ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಭಾರತದಲ್ಲಿ ಚಿನ್ನದ ಖರೀದಿ ಹೊಸತೇನಲ್ಲ, ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ಇದನ್ನೂ ಓದಿ: ವಿಸ್ತಾರ Money Guide : Invest in gold: ಬಂಗಾರದಲ್ಲಿ ಈಗ ಹೂಡಿಕೆ ಮಾಡಬಹುದೇ?

ವಧುವಿನ ಆಭರಣಕ್ಕಾಗಿ ಖರೀದಿಯ ಪ್ರಾಬಲ್ಯ: ಶತಶತಮಾನಗಳಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಎಲ್ಲಿಲ್ಲದ ಪ್ರಾಧಾನ್ಯತೆ ಇದೆ. ಅದಕ್ಕೆ ಧಾರ್ಮಿಕ ನಂಬಿಕೆಗಳೂ ಬೆಸೆದುಕೊಂಡಿದೆ. ಹೀಗಾಗಿ ವಧುವಿನ ಆಭರಣಗಳಿಗೆ ಚಿನ್ನದ ಒಡವೆಗಳನ್ನು ಖರೀದಿಸುವುದು ವಾಡಿಕೆ. ಮಾಂಗಲ್ಯ ಸೂತ್ರಕ್ಕೆ ಜನ ಬಂಗಾರವನ್ನು ಕೊಳ್ಳುತ್ತಾರೆ. ಅದೊಂದೇ ಅಲ್ಲದೆ, ವಧುವಿನ ಅಂದ ಚಂದ ಹೆಚ್ಚಿಸಲು, ಗಮನ ಸೆಳೆಯಲು ಆಭರಣಗಳನ್ನು ಧರಿಸುತ್ತಾರೆ. ದೇಶದಲ್ಲಿ ಪ್ರತಿ ವರ್ಷ 1.1 ಕೋಟಿಗೂ ಹೆಚ್ಚು ಮದುವೆ ಕಾರ್ಯಕ್ರಮಗಳು ನಡೆಯುತ್ತವೆ. ಈ ಟ್ರೆಂಡ್‌ ದೀರ್ಘಕಾಲೀನವಾಗಿ ಮುಂದುವರಿಯಲಿದೆ. ವಧುವಿಗೆ ನೀಡುವ ಆಭರಣಗಳು ಅವಳದ್ದೇ ಆಸ್ತಿಯಾಗಿ ಇರುವುದರಿಂದ ಹಾಗೂ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಮಹತ್ವದ್ದಾಗಿರುವುದರಿಂದ ಬಂಗಾರಕ್ಕೆ ಮದುವೆ ಸಂದರ್ಭ ಬೇಡಿಕೆ ಹೆಚ್ಚುತ್ತದೆ. ಕೃಷಿ ಕೂಡ ಚಿನ್ನಕ್ಕೆ ಬೇಡಿಕೆ ಸೃಷ್ಟಿಸಿದೆ. ಹೂಡಿಕೆಯ ಸಾಧನವಾಗಿಯೂ ಚಿನ್ನ ಬೇಡಿಕೆ ಉಳಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯವಸಾಯದ ಅಭಿವೃದ್ಧಿ, ಮಳೆ-ಬೆಳೆಯನ್ನು ಆಧರಿಸಿ ಚಿನ್ನಕ್ಕೆ ಬೇಡಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಮಳೆ-ಬೆಳೆ ಚೆನ್ನಾಗಿದ್ದಾಗ ಚಿನ್ನದ ಖರೀದಿ ಹೆಚ್ಚುತ್ತದೆ. ಕೃಷಿ ಕಡಿಮೆಯಾದಾಗ ಬಂಗಾರಕ್ಕೆ ಬೇಡಿಕೆ ಕಡಿಮೆಯಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Gold Rate Today: ಬಂಗಾರದ ದರ ಯಥಾಸ್ಥಿತಿ, 24 ಕ್ಯಾರಟ್‌ ಬೆಲೆ ಹೀಗಿದೆ

ರಾಜ್ಯದಲ್ಲಿ 22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಬಂಗಾರದ ಧಾರಣೆ (Gold Rate Today) ಭಾನುವಾರ ಯಾವುದೇ ಏರಿಳಿತ ಕಂಡಿಲ್ಲ.

VISTARANEWS.COM


on

gold rate
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಬಂಗಾರದ ಧಾರಣೆ (Gold Rate Today) ಭಾನುವಾರ ಯಾವುದೇ ಏರಿಳಿತ ಕಂಡಿಲ್ಲ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನವನ್ನು ₹5845ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹46,760 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರೆಟ್‌ ಚಿನ್ನವನ್ನು ₹58,450 ಮತ್ತು ₹5,84,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ ₹6,376 ಆಗಿದ್ದರೆ, ಎಂಟು ಗ್ರಾಂ ಬೆಲೆ ₹51,008 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹63,760 ಮತ್ತು ₹6,37,600 ವೆಚ್ಚವಾಗಲಿದೆ.

ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆ ₹79 ಇದೆ. ಎಂಟು ಗ್ರಾಂ ₹632 ಮತ್ತು 10 ಗ್ರಾಂ ₹790ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,900 ಮತ್ತು 1 ಕಿಲೋಗ್ರಾಂಗೆ ₹ 79,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
58,600 63,910
ಮುಂಬಯಿ58,450 63,760
ಬೆಂಗಳೂರು
58,450 63,760
ಚೆನ್ನೈ 59,150 64,530

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

5) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಕರ್ನಾಟಕ

Gold Rate Today: ಬಂಗಾರದ ಬೆಲೆಯಲ್ಲಿ ₹75 ಏರಿಕೆ, 24 ಕ್ಯಾರಟ್‌ ಬೆಲೆ ಎಷ್ಟು ಗೊತ್ತೆ?

ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶನಿವಾರ ಮತ್ತೆ ಗಮನಾರ್ಹ ಏರಿಕೆ ಕಂಡಿದೆ. 22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹75 ಮತ್ತು ₹81 ಹೆಚ್ಚಳವಾಗಿದೆ.

VISTARANEWS.COM


on

gold wearings
Koo

ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶನಿವಾರ ಮತ್ತೆ ಗಮನಾರ್ಹ ಏರಿಕೆ ಕಂಡಿದೆ. 22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹75 ಮತ್ತು ₹81 ಹೆಚ್ಚಳವಾಗಿದೆ.

ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನವನ್ನು ₹5845ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹46,760 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರೆಟ್‌ ಚಿನ್ನವನ್ನು ₹58,450 ಮತ್ತು ₹5,84,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ ₹6,376 ಆಗಿದ್ದರೆ, ಎಂಟು ಗ್ರಾಂ ಬೆಲೆ ₹51,008 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹63,760 ಮತ್ತು ₹6,37,600 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹79, ಎಂಟು ಗ್ರಾಂ ₹632 ಮತ್ತು 10 ಗ್ರಾಂ ₹790ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,900 ಮತ್ತು 1 ಕಿಲೋಗ್ರಾಂಗೆ ₹ 79,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
58,600 63,910
ಮುಂಬಯಿ58,450 63,760
ಬೆಂಗಳೂರು
58,450 63,760
ಚೆನ್ನೈ 59,150 64,530

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲಾ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

Continue Reading

ಕರ್ನಾಟಕ

Gold Rate Today: ಬೆಂಗಳೂರಿನಲ್ಲಿ ಬಂಗಾರದ ಬೆಲೆ ತುಸು ಏರಿಕೆ, ಇಲ್ಲಿದೆ ಮಾರುಕಟ್ಟೆ ದರ

ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶುಕ್ರವಾರ ತುಸು ಏರಿದೆ. 22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಗಳು ಕ್ರಮವಾಗಿ ₹20 ಹಾಗೂ ₹22 ಏರಿಕೆ ಆಗಿವೆ.

VISTARANEWS.COM


on

gold price
Koo

ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶುಕ್ರವಾರ ತುಸು ಏರಿದೆ. 22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಗಳು ಕ್ರಮವಾಗಿ ₹20 ಹಾಗೂ ₹22 ಏರಿಕೆ ಆಗಿವೆ.

ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನವನ್ನು ₹5,770ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹46,160 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರೆಟ್‌ ಚಿನ್ನವನ್ನು ₹57,700 ಮತ್ತು ₹5,77,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ ₹6,295 ಆಗಿದ್ದರೆ, ಎಂಟು ಗ್ರಾಂ ಬೆಲೆ ₹50,360 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹62,950 ಮತ್ತು ₹6,29,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹78, ಎಂಟು ಗ್ರಾಂ ₹624 ಮತ್ತು 10 ಗ್ರಾಂ ₹780ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,800 ಮತ್ತು 1 ಕಿಲೋಗ್ರಾಂಗೆ ₹ 78,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
57,850 63,100
ಮುಂಬಯಿ
57,700 62,950
ಬೆಂಗಳೂರು
57,700 62,950
ಚೆನ್ನೈ 58,500 63,820

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

5) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಕರ್ನಾಟಕ

Gold Rate Today: ಕುಸಿದ ಬಂಗಾರದ ಬೆಲೆ, ಗ್ರಾಂಗೆ ₹60 ಇಳಿಕೆ

ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಬುಧವಾರ ಇಳಿಕೆ ಕಂಡಿದೆ. 22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹60 ಮತ್ತು ₹65 ಕುಸಿತವಾಗಿದೆ.

VISTARANEWS.COM


on

gold wearings
Koo

ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಗುರುವಾರ ಇಳಿಕೆ ಕಂಡಿದೆ. 22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹60 ಮತ್ತು ₹65 ಕುಸಿತವಾಗಿದೆ.

ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನವನ್ನು ₹5750ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹46,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರೆಟ್‌ ಚಿನ್ನವನ್ನು ₹57,500 ಮತ್ತು ₹5,75,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ ₹6,273 ಆಗಿದ್ದರೆ, ಎಂಟು ಗ್ರಾಂ ಬೆಲೆ ₹50,184 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹62,730 ಮತ್ತು ₹6,27,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹78, ಎಂಟು ಗ್ರಾಂ ₹624 ಮತ್ತು 10 ಗ್ರಾಂ ₹780ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,800 ಮತ್ತು 1 ಕಿಲೋಗ್ರಾಂಗೆ ₹ 78,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
57,650 62,880
ಮುಂಬಯಿ57,500 62,730
ಬೆಂಗಳೂರು
57,500 62,730
ಚೆನ್ನೈ 58,650 63,980

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading
Advertisement
Ishwar Sahu
ದೇಶ18 mins ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ21 mins ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ50 mins ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ56 mins ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ1 hour ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ2 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ2 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

ead your daily horoscope predictions for december 4th 2023
ಪ್ರಮುಖ ಸುದ್ದಿ3 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Mizoram Election Result will be announced on December 4, 2023
ದೇಶ7 hours ago

Mizoram Election Result: ಇಂದು ಮಿಜೋರಾಂ ಎಲೆಕ್ಷನ್ ರಿಸಲ್ಟ್; ಮತ ಎಣಿಕೆ ಒಂದು ದಿನ ಮುಂದೂಡಿದ್ದೇಕೆ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ3 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ20 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌