Site icon Vistara News

Gold rate today : ಬಂಗಾರದ ದರದಲ್ಲಿ 380 ರೂ. ಇಳಿಕೆ, ಬೆಳ್ಳಿ ದರ ಯಥಾಸ್ಥಿತಿ

gold wearing women

#image_title

ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಶುಕ್ರವಾರ 380 ರೂ. ಇಳಿಕೆಯಾಗಿದೆ. 24 ಕ್ಯಾರಟ್‌ನ ಪ್ರತಿ 10 ಗ್ರಾಮ್‌ ಚಿನ್ನದ ದರ 60,110 ರೂ.ಗೆ ಇಳಿಕೆಯಾಗಿದೆ. (Gold rate today) ಆಭರಣ ಚಿನ್ನ ಅಥವಾ 22 ಕ್ಯಾರಟ್‌ ಚಿನ್ನದ ದರದಲ್ಲಿ 350 ರೂ. ತಗ್ಗಿದ್ದು 55,100 ರೂ.ಗೆ ಇಳಿದಿದೆ.

ಕಳೆದ 5 ದಿನಗಳಲ್ಲಿ ಬೆಂಗಳೂರಿನಲ್ಲಿ 24 ಕ್ಯಾರಟ್‌, 10 ಗ್ರಾಮ್‌ ಬಂಗಾರದ ದರ:

2023 ಜುಲೈ 27 : 60,490

2023 ಜುಲೈ 26 : 60,160

2023 ಜುಲೈ 25 : 60,000

2023 ಜುಲೈ 24 : 60,160

2023 ಜುಲೈ 23 : 60,160

ಬಂಗಾರದ ದರದ ಮೇಲೆ ಪ್ರಭಾವ ಬೀರುವ ಅಂಶಗಳು: ಪೂರೈಕೆ ಮತ್ತು ವಿತರಣೆ, ಜಾಗತಿಕ ಆರ್ಥಿಕ ಪರಿಸ್ಥಿತಿ, ರಾಜಕೀಯ ಅಸ್ಥಿರತೆ.

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಮದುವೆಗಳು ಮತ್ತು ಹಬ್ಬಗಳಲ್ಲಿ ಚಿನ್ನದ ಖರೀದಿ ಹೆಚ್ಚು: ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು.ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಭಾರತದಲ್ಲಿ ಚಿನ್ನದ ಖರೀದಿ ಹೊಸತೇನಲ್ಲ, ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

Exit mobile version