Site icon Vistara News

Gold rate : ಬಂಗಾರದ ದರದದಲ್ಲಿ 330 ರೂ. ಇಳಿಕೆ, ಬೆಳ್ಳಿ 600 ರೂ. ಅಗ್ಗ

gold

gold

ಬೆಂಗಳೂರು: ಏರುಗತಿಯಲ್ಲಿರುವ ಬಂಗಾರದ ದರದಲ್ಲಿ ಸೋಮವಾರ 330 ರೂ. ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ ಚಿನ್ನದ ದರದಲ್ಲಿ 330 ರೂ. ತಗ್ಗಿದ್ದು, 59,720 ರೂ.ಗೆ (Gold rate) ತಗ್ಗಿದೆ. 22 ಕ್ಯಾರಟ್‌ ಬಂಗಾರದ ದರದಲ್ಲಿ 300 ರೂ. ತಗ್ಗಿದ್ದು, 54,750 ರೂ.ಗೆ ಇಳಿದಿದೆ. ಬೆಳ್ಳಿಯ ದರದಲ್ಲಿ ಪ್ರತಿ ಕೆ.ಜಿಗೆ 600 ರೂ. ಇಳಿಕೆಯಾಗಿದ್ದು, 77,100 ರೂ.ನಷ್ಟಿತ್ತು.

ಬಂಗಾರದ ದರ 2023ರಲ್ಲಿ ನಾಗಾಲೋಟದಲ್ಲಿದ್ದು, 2023-24ರಲ್ಲಿ ದರ 68,000 ರೂ.ಗೆ ಜಿಗಿಯುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಹಣದುಬ್ಬರದ ಪರಿಣಾಮ ಬಂಗಾರದ ಮೇಲಿನ ಹೂಡಿಕೆಗೆ 10-15% ಆದಾಯ ಸಿಗುವ ಸಾಧ್ಯತೆ ಇದೆ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಉಪಾಧ್ಯಕ್ಷ ಜತೀನ್‌ ತ್ರಿವೇದಿ (Gold Price Outlook) ತಿಳಿಸಿದ್ದಾರೆ.

ಬಂಗಾರದ ದರದ ಏರುಗತಿ

#imagegold rate

ಒಂದು ವೇಳೆ ಬಂಗಾರದ ದರ 15-20% ಪ್ರಮಾಣದಲ್ಲಿ ಏರಿಕೆಯಾದರೆ 64,500 ರೂ. ಮತ್ತು 66,800 ರೂ. ಶ್ರೇಣಿಯಲ್ಲಿ ಏರಿಕೆಯಾಗಲಿದೆ. 2024ರಲ್ಲಿ 68,000 ರೂ. ತನಕ ಹಚ್ಚಳವಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1869 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 68,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.‌

Exit mobile version