Gold rate Good news for buyers gold rate is Rs 770 decreaseGold rate : ಖರೀದಿದಾರರಿಗೆ ಸಿಹಿ ಸುದ್ದಿ, ಬಂಗಾರದ ದರ 770 ರೂ. ಇಳಿಕೆ

ಚಿನ್ನದ ದರ

Gold rate : ಖರೀದಿದಾರರಿಗೆ ಸಿಹಿ ಸುದ್ದಿ, ಬಂಗಾರದ ದರ 770 ರೂ. ಇಳಿಕೆ

Gold rate : ಬಂಗಾರದ ದರದದಲ್ಲಿ 770 ರೂ. ಇಳಿದಿದ್ದು, ಖರೀದಿಗೆ ಸಕಾಲ ಸೃಷ್ಟಿಯಾಗಿದೆ. ವಿವರ ಇಲ್ಲಿದೆ.

VISTARANEWS.COM

on

women wearing gold
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಂಗಾರದ ದರದಲ್ಲಿ ಶನಿವಾರ 770 ರೂ. ಇಳಿಕೆಯಾಗಿದೆ. (Gold rate) ಬೆಂಗಳೂರಿನಲ್ಲಿ 24 ಕ್ಯಾರಟ್‌ನ ಪ್ರತಿ 10 ಗ್ರಾಮ್‌ ಚಿನ್ನದ ದರ 60,380 ರೂ.ಗೆ ತಗ್ಗಿದೆ. ಪ್ರತಿ 22 ಕ್ಯಾರಟ್‌ನ 10 ಗ್ರಾಮ್‌ ಚಿನ್ನದ ದರದಲ್ಲಿ 700 ರೂ. ತಗ್ಗಿದ್ದು, 55,350 ರೂ.ಗೆ ಇಳಿದಿದೆ. ಪ್ರತಿ ಕೆ.ಜಿ ಬೆಳ್ಳಿ ದರದಲ್ಲಿ 200 ರೂ. ಇಳಿದಿದ್ದು, 74,300 ರೂ.ಗೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಇಳಿಕೆ ಪರಿಣಾಮ ಬೀರಿದೆ.

ಪ್ರಮುಖ ನಗರಗಳಲ್ಲಿ 24 ಕ್ಯಾರಟ್‌ ಬಂಗಾರದ ದರ ಇಂತಿದೆ. (10 ಗ್ರಾಮ್‌ಗೆ):

ಬೆಂಗಳೂರು: 60,380 ರೂ. ಚೆನ್ನೈ: 60,870 ರೂ. ಕೋಲ್ಕತಾ: 60,330 ರೂ. ದಿಲ್ಲಿ: 60,480 ರೂ.

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಮದುವೆಗಳು ಮತ್ತು ಹಬ್ಬಗಳಲ್ಲಿ ಚಿನ್ನದ ಖರೀದಿ ಹೆಚ್ಚು: ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು.ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಭಾರತದಲ್ಲಿ ಚಿನ್ನದ ಖರೀದಿ ಹೊಸತೇನಲ್ಲ, ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ವಧುವಿನ ಆಭರಣಕ್ಕಾಗಿ ಖರೀದಿಯ ಪ್ರಾಬಲ್ಯ: ಶತಶತಮಾನಗಳಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಎಲ್ಲಿಲ್ಲದ ಪ್ರಾಧಾನ್ಯತೆ ಇದೆ. ಅದಕ್ಕೆ ಧಾರ್ಮಿಕ ನಂಬಿಕೆಗಳೂ ಬೆಸೆದುಕೊಂಡಿದೆ. ಹೀಗಾಗಿ ವಧುವಿನ ಆಭರಣಗಳಿಗೆ ಚಿನ್ನದ ಒಡವೆಗಳನ್ನು ಖರೀದಿಸುವುದು ವಾಡಿಕೆ. ಮಾಂಗಲ್ಯ ಸೂತ್ರಕ್ಕೆ ಜನ ಬಂಗಾರವನ್ನು ಕೊಳ್ಳುತ್ತಾರೆ. ಅದೊಂದೇ ಅಲ್ಲದೆ, ವಧುವಿನ ಅಂದ ಚಂದ ಹೆಚ್ಚಿಸಲು, ಗಮನ ಸೆಳೆಯಲು ಆಭರಣಗಳನ್ನು ಧರಿಸುತ್ತಾರೆ. ದೇಶದಲ್ಲಿ ಪ್ರತಿ ವರ್ಷ 1.1 ಕೋಟಿಗೂ ಹೆಚ್ಚು ಮದುವೆ ಕಾರ್ಯಕ್ರಮಗಳು ನಡೆಯುತ್ತವೆ. ಈ ಟ್ರೆಂಡ್‌ ದೀರ್ಘಕಾಲೀನವಾಗಿ ಮುಂದುವರಿಯಲಿದೆ. ವಧುವಿಗೆ ನೀಡುವ ಆಭರಣಗಳು ಅವಳದ್ದೇ ಆಸ್ತಿಯಾಗಿ ಇರುವುದರಿಂದ ಹಾಗೂ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಮಹತ್ವದ್ದಾಗಿರುವುದರಿಂದ ಬಂಗಾರಕ್ಕೆ ಮದುವೆ ಸಂದರ್ಭ ಬೇಡಿಕೆ ಹೆಚ್ಚುತ್ತದೆ. ಕೃಷಿ ಕೂಡ ಚಿನ್ನಕ್ಕೆ ಬೇಡಿಕೆ ಸೃಷ್ಟಿಸಿದೆ. ಹೂಡಿಕೆಯ ಸಾಧನವಾಗಿಯೂ ಚಿನ್ನ ಬೇಡಿಕೆ ಉಳಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯವಸಾಯದ ಅಭಿವೃದ್ಧಿ, ಮಳೆ-ಬೆಳೆಯನ್ನು ಆಧರಿಸಿ ಚಿನ್ನಕ್ಕೆ ಬೇಡಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಮಳೆ-ಬೆಳೆ ಚೆನ್ನಾಗಿದ್ದಾಗ ಚಿನ್ನದ ಖರೀದಿ ಹೆಚ್ಚುತ್ತದೆ. ಕೃಷಿ ಕಡಿಮೆಯಾದಾಗ ಬಂಗಾರಕ್ಕೆ ಬೇಡಿಕೆ ಕಡಿಮೆಯಾಗುತ್ತದೆ.

ಇದನ್ನೂ ಓದಿ: Gold rate : ಚಿನ್ನದ ದರದಲ್ಲಿ ಹಠಾತ್‌ ಏರಿಕೆ, ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ದರ ಎಷ್ಟು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಂಗಳೂರಿನಲ್ಲಿ ಇಂದು ಹೀಗಿದೆ ದರ

Gold Rate Today: ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದ್ದುದು ನಿನ್ನೆ ಸ್ವಲ್ಪ ಇಳಿಕೆ ಕಂಡಿತ್ತು. ಇಂದು ಮತ್ತೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ.

VISTARANEWS.COM

on

tamanna bhatia gold
Koo

ಬೆಂಗಳೂರು: ಶುಕ್ರವಾರ ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹50 ಮತ್ತು ₹54 ಏರಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದ್ದುದು ನಿನ್ನೆ ಸ್ವಲ್ಪ ಇಳಿಕೆ ಕಂಡಿತ್ತು. ಇಂದು ಮತ್ತೆ ಹೆಚ್ಚಳವಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,815ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,520 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,150 ಮತ್ತು ₹6,81,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,434 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,472 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,340 ಮತ್ತು ₹7,43,400 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,30074,490
ಮುಂಬಯಿ68,150 74,340
ಬೆಂಗಳೂರು68,150 74,340
ಚೆನ್ನೈ68,90075,160

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ₹74,130 ತಲುಪಿ ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನದ ಬೆಲೆ; ಇಂದಿನ ದರ ಹೀಗಿದೆ

Continue Reading

ಚಿನ್ನದ ದರ

Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

Gold Rate Today: ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,765ಕ್ಕೆ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,380 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,040 ಆಗಿದೆ.

VISTARANEWS.COM

on

gold rate today 18
Koo

ಬೆಂಗಳೂರು: ಗುರುವಾರ ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಮತ್ತು ₹33 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದೆ. ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹90 ಮತ್ತು ₹98 ಹೆಚ್ಚಳವಾಗಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,765ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,650 ಮತ್ತು ₹6,76,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,380 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,800 ಮತ್ತು ₹7,38,000 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,80073,950
ಮುಂಬಯಿ67,650 73,800
ಬೆಂಗಳೂರು67,650 73,800
ಚೆನ್ನೈ68,35074,560

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

gold purchase

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ₹74,130 ತಲುಪಿ ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನದ ಬೆಲೆ; ಇಂದಿನ ದರ ಹೀಗಿದೆ

Continue Reading

ಚಿನ್ನದ ದರ

Gold Rate Today: ₹74,130 ತಲುಪಿ ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನದ ಬೆಲೆ; ಇಂದಿನ ದರ ಹೀಗಿದೆ

ಶ್ರೀರಾಮ ನವಮಿಯ ದಿನವಾದ ಇಂದು ಚಿನ್ನದ ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗಿಲ್ಲ. ಆದರೆ ನಿನ್ನೆಯೇ ಬಂಗಾರದ ದರ (Gold Rate Today) ದಾಖಲೆ ಮಟ್ಟವನ್ನು ಮುಟ್ಟಿದೆ. ಇಂದಿನ ದರ ಗಮನಿಸಿ.

VISTARANEWS.COM

on

gold rate today 34
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕಳೆದ ಒಂದು ತಿಂಗಳಿನಿಂದ ಏರುತ್ತಲೇ ಇದೆ. ಬುಧವಾರ ಬಂಗಾರದ ದರದಲ್ಲಿ ನಿನ್ನೆಗಿಂತ ಯಾವುದೇ ವ್ಯತ್ಯಾಸ ಆಗಿಲ್ಲ. ಆದರೆ ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹90 ಮತ್ತು ₹98 ಹೆಚ್ಚಳವಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,795ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,360 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,950 ಮತ್ತು ₹6,79,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,413 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,304 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,130 ಮತ್ತು ₹7,41,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84.65, ಎಂಟು ಗ್ರಾಂ ₹677.20 ಮತ್ತು 10 ಗ್ರಾಂ ₹846.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,465 ಮತ್ತು 1 ಕಿಲೋಗ್ರಾಂಗೆ ₹84,650 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,10074,280
ಮುಂಬಯಿ67,95074,130
ಬೆಂಗಳೂರು67,95074,130
ಚೆನ್ನೈ68,70074,950

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಏರಿಕೆಯಲ್ಲಿ ದಾಖಲೆ ಬರೆಯುತ್ತಲೇ ಇದೆ ಚಿನ್ನದ ದರ! ಇಂದಿನ ಬೆಲೆ ₹74,130 !

Continue Reading

ಚಿನ್ನದ ದರ

Gold Rate Today: ಏರಿಕೆಯಲ್ಲಿ ದಾಖಲೆ ಬರೆಯುತ್ತಲೇ ಇದೆ ಚಿನ್ನದ ದರ! ಇಂದಿನ ಬೆಲೆ ₹74,130 !

Gold Rate Today: ಚಿನ್ನದ ಬೆಲೆ ಈ ತಿಂಗಳಲ್ಲಿ ತೀವ್ರವಾಗಿ ಏರಿದೆ. ಮಂಗಳವಾರ ಮತ್ತೆ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹90 ಮತ್ತು ₹98 ಹೆಚ್ಚಳವಾಗಿದೆ.

VISTARANEWS.COM

on

gold rate today tapasi
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕಳೆದ ಒಂದು ತಿಂಗಳಿನಿಂದ ಏರುತ್ತಲೇ ಇದೆ. ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹90 ಮತ್ತು ₹98 ಹೆಚ್ಚಳವಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,795ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,360 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,950 ಮತ್ತು ₹6,79,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,413 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,304 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,130 ಮತ್ತು ₹7,41,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84.65, ಎಂಟು ಗ್ರಾಂ ₹677.20 ಮತ್ತು 10 ಗ್ರಾಂ ₹846.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,465 ಮತ್ತು 1 ಕಿಲೋಗ್ರಾಂಗೆ ₹84,650 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,10074,280
ಮುಂಬಯಿ67,950 74,130
ಬೆಂಗಳೂರು67,950 74,130
ಚೆನ್ನೈ68,70074,950

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗಿಲ್ಲ ಬೆಲೆ ಏರಿಕೆ ಬಿಸಿ; ಇಂದಿನ ದರ ಇಷ್ಟು

Continue Reading
Advertisement
Karnataka Weather Forecast
ಮಳೆ18 mins ago

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Modi in Karnataka today Massive rally in Chikkaballapur and roadshow in Bengaluru
Lok Sabha Election 202448 mins ago

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Kids Sleep
ಲೈಫ್‌ಸ್ಟೈಲ್48 mins ago

Kids Sleep: ಪೋಷಕರೇ ಎಚ್ಚರ; ನಿಮ್ಮ ಮಕ್ಕಳ ನಿದ್ರೆ ಕಸಿದುಕೊಳ್ಳುವ ಈ ವಸ್ತುಗಳನ್ನು ಕೊಡಲೇಬೇಡಿ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

ಕರ್ನಾಟಕ7 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ7 hours ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ7 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ7 hours ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ8 hours ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ15 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌