ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರ ಶನಿವಾರ (ಜುಲೈ 29) ಯಥಾಸ್ಥಿತಿ (Gold Rate Today) ಇದೆ. 24 ಕ್ಯಾರಟ್‌ನ ಪ್ರತಿ 10 ಗ್ರಾಮ್ ಚಿನ್ನದ ದರ 60,110 ರೂ. ಇದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್ ಚಿನ್ನದ ದರದಲ್ಲಿ 350 ರೂ. ತಗ್ಗಿದ್ದು 55,100 ರೂ. ಇದೆ. ಶುಕ್ರವಾರವೂ ಇದೇ ದರ ಇತ್ತು. ಶನಿವಾರವೂ ಇದೇ ಮುಂದುವರಿದ ಕಾರಣ ಚಿನ್ನ ಖರೀದಿಸುವವರಿಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ ಎಂಬಂತಾಗಿದೆ.
5 ದಿನದಲ್ಲಿ ಬೆಂಗಳೂರಿನಲ್ಲಿ 24 ಕ್ಯಾರಟ್, 10 ಗ್ರಾಂ ಚಿನ್ನದ ದರ
2023 ಜುಲೈ 28: 60,110
2023 ಜುಲೈ 27 : 60,490
2023 ಜುಲೈ 26 : 60,160
2023 ಜುಲೈ 25 : 60,000
2023 ಜುಲೈ 24 : 60,160
ಬಂಗಾರದ ದರದ ಮೇಲೆ ಪ್ರಭಾವ ಬೀರುವ ಅಂಶಗಳು: ಪೂರೈಕೆ ಮತ್ತು ವಿತರಣೆ, ಜಾಗತಿಕ ಆರ್ಥಿಕ ಪರಿಸ್ಥಿತಿ, ರಾಜಕೀಯ ಅಸ್ಥಿರತೆ.
ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.
ಇದನ್ನೂ ಓದಿ: Gold rate : ಚಿನ್ನದ ಬೆಲೆ 10 ಗ್ರಾಮ್‌ಗೆ 60,000 ರೂ. ದರ ಇನ್ನೂ ಜಾಸ್ತಿ ಆಗುತ್ತಾ?
ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.
ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.