Gold rate today : ಬಂಗಾರದ ದರದಲ್ಲಿ 330 ರೂ. ಏರಿಕೆ, ಬೆಳ್ಳಿ ದರ ಯಥಾಸ್ಥಿತಿ - Vistara News

ಚಿನ್ನದ ದರ

Gold rate today : ಬಂಗಾರದ ದರದಲ್ಲಿ 330 ರೂ. ಏರಿಕೆ, ಬೆಳ್ಳಿ ದರ ಯಥಾಸ್ಥಿತಿ

Gold rate today : ಬಂಗಾರದ ದರದಲ್ಲಿ ಗುರುವಾರ 330 ರೂ. ಹೆಚ್ಚಳವಾಗಿದೆ. ಬೆಳ್ಳಿ ದರ ಯಥಾಸ್ಥಿತಿಯಲ್ಲಿ ಇತ್ತು. ವಿವರ ಇಲ್ಲಿದೆ.

VISTARANEWS.COM


on

Gold ornaments
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಬಂಗಾರದ ದರದಲ್ಲಿ 330 ರೂ. ಏರಿಕೆಯಾಗಿದೆ. (Gold rate today) 24 ಕ್ಯಾರಟ್‌ನ 10 ಗ್ರಾಮ್‌ ಚಿನ್ನದ ದರ 60,160 ರೂ.ನಷ್ಟಿತ್ತು. ಆಭರಣ ಚಿನ್ನ ಅಥವಾ 22 ಕ್ಯಾರಟ್‌ ಚಿನ್ನದ ದರದಲ್ಲಿ 300 ರೂ. ವೃದ್ಧಿಸಿದ್ದು, 55,450 ರೂ.ನಷ್ಟಿತ್ತು. ಪ್ರತಿ ಕೆಜಿ ಬೆಳ್ಳಿಯ ದರ 76,500 ರೂ.

ಅಮೆರಿಕದಲ್ಲಿ ಫೆಡರಲ್‌ ರಿಸರ್ವ್‌ (US Fed rate hike) ಬುಧವಾರ ತನ್ನ ಹಣಕಾಸು ನೀತಿಯಲ್ಲಿ ಬಡ್ಡಿ ದರವನ್ನು 0.25% ಏರಿಸಿದೆ. ಇದರ ಹೊರತಾಗಿಯೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ 0.30% ಏರಿಕೆ ದಾಖಲಾಯಿತು. ಪ್ರತಿ ಔನ್ಸ್‌ ಚಿನ್ನದ ದರ 1977 ಡಾಲರ್‌ (1.62 ಲಕ್ಷ ರೂ.) ಇತ್ತು.

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

A woman wearing gold jewelry

ಮದುವೆಗಳು ಮತ್ತು ಹಬ್ಬಗಳಲ್ಲಿ ಚಿನ್ನದ ಖರೀದಿ ಹೆಚ್ಚು: ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು.ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಭಾರತದಲ್ಲಿ ಚಿನ್ನದ ಖರೀದಿ ಹೊಸತೇನಲ್ಲ, ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಗೆ ಮುನ್ನ ಬೆಲೆ ಗಮನಿಸಿ

Gold Rate Today: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಗುರುವಾರದ ದರವೇ ಇಂದೂ (ಶುಕ್ರವಾರ) ಮುಂದುವರಿದಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಗುರುವಾರದ ದರವೇ ಇಂದೂ (ಶುಕ್ರವಾರ) ಮುಂದುವರಿದಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,670 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,276 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,360 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,700 ಮತ್ತು ₹6,67,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,276 ಆಗಿದ್ದು, ಎಂಟು ಗ್ರಾಂ ಬೆಲೆ ₹58,208 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,760 ಮತ್ತು ₹7,27,600 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ66,85072,910
ಮುಂಬೈ66,70072,760
ಬೆಂಗಳೂರು66,70072,760
ಚೆನ್ನೈ67,30073,420

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹95.60, ಎಂಟು ಗ್ರಾಂ ₹764.80 ಮತ್ತು 10 ಗ್ರಾಂ ₹956ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,560 ಮತ್ತು 1 ಕಿಲೋಗ್ರಾಂಗೆ ₹95,600 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನೆಲ್ಲ ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಗಮನಿಸಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Continue Reading

ಚಿನ್ನದ ದರ

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Gold Rate Today: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ತುಸು ಇಳಿಕೆ ಕಂಡಿದೆ. ಇಂದು (ಗುರುವಾರ) 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹ 16 ಮತ್ತು ₹ 18 ಇಳಿಕೆಯಾಗಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

Gold Rate Today
Koo

ಬೆಂಗಳೂರು: ಚಿನ್ನ ಕೊಳ್ಳುವವರಿಗೆ ಇಂದು ತುಸು ಸಮಾಧಾನದ ಸುದ್ದಿ ಹೊರ ಬಿದ್ದಿದೆ. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ತುಸು ಇಳಿಕೆ ಕಂಡಿದೆ. ಇಂದು (ಗುರುವಾರ) 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹ 16 ಮತ್ತು ₹ 18 ಇಳಿಕೆಯಾಗಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,670 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,276 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,360 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,700 ಮತ್ತು ₹6,67,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,276 ಆಗಿದ್ದು, ಎಂಟು ಗ್ರಾಂ ಬೆಲೆ ₹58,208 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,760 ಮತ್ತು ₹7,27,600 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ66,85072,910
ಮುಂಬೈ66,70072,760
ಬೆಂಗಳೂರು66,70072,760
ಚೆನ್ನೈ67,30073,420

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹97.50, ಎಂಟು ಗ್ರಾಂ ₹780 ಮತ್ತು 10 ಗ್ರಾಂ ₹975ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,750 ಮತ್ತು 1 ಕಿಲೋಗ್ರಾಂಗೆ ₹97,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

Continue Reading

ಚಿನ್ನದ ದರ

Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

Gold Rate Today: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆಯಲ್ಲಿ ತುಸು ಏರಿಕೆಯಾಗಿದೆ. ಇಂದು (ಬುಧವಾರ) 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹ 1 ಹೆಚ್ಚಾಗಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ತುಸು ಏರಿಕೆಯಾಗಿದೆ. ಇಂದು (ಬುಧವಾರ) 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹ 1 ಹೆಚ್ಚಾಗಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,686 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,294 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,488 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,860 ಮತ್ತು ₹6,68,600 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,294 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,352 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,940 ಮತ್ತು ₹7,29,400 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ67,01073,090
ಮುಂಬೈ66,86072,940
ಬೆಂಗಳೂರು66,86072,940
ಚೆನ್ನೈ67,41073,540

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹95.25, ಎಂಟು ಗ್ರಾಂ ₹762 ಮತ್ತು 10 ಗ್ರಾಂ ₹952.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,525 ಮತ್ತು 1 ಕಿಲೋಗ್ರಾಂಗೆ ₹95,250 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌

ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ

ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ

ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌. 

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ಇಂದಿನ ಧಾರಣೆ ಹೀಗಿದೆ

Gold Rate Today: ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 24 ಕ್ಯಾರಟ್‌ ಬೆಲೆ ಎಷ್ಟಿದೆ ನೋಡಿ.

VISTARANEWS.COM


on

gold rate today bipasha
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಶುಕ್ರವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸ್ವಲ್ಪ ಮಟ್ಟಿಗೆ ಏರಿದೆ. ಇಂದು (ಸೋಮವಾರ) 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹200 ಹಾಗೂ ₹220 ಏರಿಕೆಯಾಗಿವೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,930 ಮತ್ತು ₹7,29,300 ವೆಚ್ಚವಾಗಲಿದೆ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,850 72,930
ಬೆಂಗಳೂರು66,850 72,930
ಚೆನ್ನೈ67,40073,530

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹92, ಎಂಟು ಗ್ರಾಂ ₹736 ಮತ್ತು 10 ಗ್ರಾಂ ₹920ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,200 ಮತ್ತು 1 ಕಿಲೋಗ್ರಾಂಗೆ ₹92,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Continue Reading
Advertisement
bhavani revanna case
ಪ್ರಮುಖ ಸುದ್ದಿ18 mins ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು18 mins ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ38 mins ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

driving licence
ಪ್ರಮುಖ ಸುದ್ದಿ44 mins ago

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Cardamom Benefits
ಆರೋಗ್ಯ1 hour ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ2 hours ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ3 hours ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ3 hours ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ8 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌