gold rate slighltly decreased in bangalore todayGold price today : ಚಿನ್ನದ ದರದಲ್ಲಿ ಅಲ್ಪ ಇಳಿಕೆ, ಬೆಳ್ಳಿ 400 ರೂ. ಹೆಚ್ಚಳ

ಚಿನ್ನದ ದರ

Gold price today : ಚಿನ್ನದ ದರದಲ್ಲಿ ಅಲ್ಪ ಇಳಿಕೆ, ಬೆಳ್ಳಿ 400 ರೂ. ಹೆಚ್ಚಳ

Gold price today ಬೆಂಗಳೂರಿನಲ್ಲಿ ಮಂಗಳವಾರ ಬಂಗಾರದ ದರದಲ್ಲಿ ಅಲ್ಪ ಇಳಿಕೆ ಹಾಗೂ ಬೆಳ್ಳಿ ದರದಲ್ಲಿ 400 ರೂ. ಏರಿಕೆಯಾಗಿದೆ. ವಿವರ ಇಲ್ಲಿದೆ.

VISTARANEWS.COM


on

A woman wearing gold jewelry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಂಗಾರದ ದರದಲ್ಲಿ ಬುಧವಾರ 50 ರೂ. ಇಳಿಕೆಯಾಗಿದ್ದು, 24 ಕ್ಯಾರಟ್‌ ಚಿನ್ನದ ದರ ಬೆಂಗಳೂರಿನಲ್ಲಿ ಪ್ರತಿ 10 ಗ್ರಾಮ್‌ಗೆ 60,600 ರೂ.ಗೆ ತಗ್ಗಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್‌ ಬಂಗಾರದ ದರದಲ್ಲಿ ಕೂಡ 50 ರೂ. ಇಳಿದಿದ್ದು, 55,550 ರೂ. ತಗ್ಗಿದೆ. (Gold price today) ಬೆಳ್ಳಿತ ದರದಲ್ಲಿ 400 ರೂ. ಏರಿಕೆಯಾಗಿದ್ದು, ಪ್ರತಿ ಕೆ.ಜಿಗೆ 77,000 ರೂ.ಗೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ (Gold rate) ಸೋಮವಾರ ಯಥಾಸ್ಥಿತಿ ಇತ್ತು. ಹೀಗಿದ್ದರೂ ಕಳೆದ ಕೆಲ ದಿನಗಳಿಂದ ದರ ಇಳಿಕೆಯ ಟ್ರೆಂಡ್‌ನಲ್ಲಿದೆ. ಹೀಗಾಗಿ ಖರೀದಿಗೆ ಸಕಾಲ ಸೃಷ್ಟಿಯಾಗಿದೆ. ಅಮೆರಿಕದಲ್ಲಿ ಉಂಟಾಗಿರುವ ಸಾಲದ ಬಿಕ್ಕಟ್ಟಿನ ಪರಿಣಾಮ ಚಿನ್ನದ ದರದಲ್ಲಿ ಕೆಲ ದಿನಗಳಿಂದ ಇಳಿಕೆಯ ಟ್ರೆಂಡ್‌ ಅನ್ನು ಗಮನಿಸಬಹುದು. ಅಮೆರಿಕ ಒಂದು ವೇಳೆ ಬಡ್ಡಿ ದರ ಏರಿಕೆಯನ್ನು ತಡೆ ಹಿಡಿದರೆ ಬಂಗಾರದ ದರ ಇಳಿಕೆಯಾಗಲಿದೆ ಎನ್ನುತ್ತಾರೆ ತಜ್ಞರು.

ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿಯ ದರಗಳು ಇಂತಿವೆ:

ನಗರ22 ಕ್ಯಾರಟ್‌ ಚಿನ್ನದ ದರ (ರೂ.)24 ಕ್ಯಾರಟ್‌ ಚಿನ್ನದ ದರ
ಬೆಂಗಳೂರು55,55060,600
ದಿಲ್ಲಿ55,65060,750
ಮುಂಬಯಿ55,55060,600
ಕೋಲ್ಕೊತಾ55,55060,600
ಲಖನೌ55,65060,750
ಜೈಪುರ55,65060,750
ಪಟನಾ55,60060,650
ಭುವನೇಶ್ವರ55,55060,600
ಹೈದರಾಬಾದ್‌55,55060,600

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: Gold rate : ಅಮೆರಿಕದ ಸಾಲ ಬಿಕ್ಕಟ್ಟಿನ ಎಫೆಕ್ಟ್‌, ಮತ್ತಷ್ಟು ಇಳಿಯಲಿದೆಯಾ ಚಿನ್ನದ ದರ?

ಮದುವೆಗಳು ಮತ್ತು ಹಬ್ಬಗಳಲ್ಲಿ ಚಿನ್ನದ ಖರೀದಿ ಹೆಚ್ಚು: ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು.ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಭಾರತದಲ್ಲಿ ಚಿನ್ನದ ಖರೀದಿ ಹೊಸತೇನಲ್ಲ, ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ವಧುವಿನ ಆಭರಣಕ್ಕಾಗಿ ಖರೀದಿಯ ಪ್ರಾಬಲ್ಯ: ಶತಶತಮಾನಗಳಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಎಲ್ಲಿಲ್ಲದ ಪ್ರಾಧಾನ್ಯತೆ ಇದೆ. ಅದಕ್ಕೆ ಧಾರ್ಮಿಕ ನಂಬಿಕೆಗಳೂ ಬೆಸೆದುಕೊಂಡಿದೆ. ಹೀಗಾಗಿ ವಧುವಿನ ಆಭರಣಗಳಿಗೆ ಚಿನ್ನದ ಒಡವೆಗಳನ್ನು ಖರೀದಿಸುವುದು ವಾಡಿಕೆ. ಮಾಂಗಲ್ಯ ಸೂತ್ರಕ್ಕೆ ಜನ ಬಂಗಾರವನ್ನು ಕೊಳ್ಳುತ್ತಾರೆ. ಅದೊಂದೇ ಅಲ್ಲದೆ, ವಧುವಿನ ಅಂದ ಚಂದ ಹೆಚ್ಚಿಸಲು, ಗಮನ ಸೆಳೆಯಲು ಆಭರಣಗಳನ್ನು ಧರಿಸುತ್ತಾರೆ. ದೇಶದಲ್ಲಿ ಪ್ರತಿ ವರ್ಷ 1.1 ಕೋಟಿಗೂ ಹೆಚ್ಚು ಮದುವೆ ಕಾರ್ಯಕ್ರಮಗಳು ನಡೆಯುತ್ತವೆ. ಈ ಟ್ರೆಂಡ್‌ ದೀರ್ಘಕಾಲೀನವಾಗಿ ಮುಂದುವರಿಯಲಿದೆ. ವಧುವಿಗೆ ನೀಡುವ ಆಭರಣಗಳು ಅವಳದ್ದೇ ಆಸ್ತಿಯಾಗಿ ಇರುವುದರಿಂದ ಹಾಗೂ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಮಹತ್ವದ್ದಾಗಿರುವುದರಿಂದ ಬಂಗಾರಕ್ಕೆ ಮದುವೆ ಸಂದರ್ಭ ಬೇಡಿಕೆ ಹೆಚ್ಚುತ್ತದೆ. ಕೃಷಿ ಕೂಡ ಚಿನ್ನಕ್ಕೆ ಬೇಡಿಕೆ ಸೃಷ್ಟಿಸಿದೆ. ಹೂಡಿಕೆಯ ಸಾಧನವಾಗಿಯೂ ಚಿನ್ನ ಬೇಡಿಕೆ ಉಳಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯವಸಾಯದ ಅಭಿವೃದ್ಧಿ, ಮಳೆ-ಬೆಳೆಯನ್ನು ಆಧರಿಸಿ ಚಿನ್ನಕ್ಕೆ ಬೇಡಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಮಳೆ-ಬೆಳೆ ಚೆನ್ನಾಗಿದ್ದಾಗ ಚಿನ್ನದ ಖರೀದಿ ಹೆಚ್ಚುತ್ತದೆ. ಕೃಷಿ ಕಡಿಮೆಯಾದಾಗ ಬಂಗಾರಕ್ಕೆ ಬೇಡಿಕೆ ಕಡಿಮೆಯಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಚಿನ್ನದ ದರ

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Gold Rate Today: ಕಳೆದ ತಿಂಗಳು ಚಿನ್ನದ ದರಗಳು ಬೆಂಗಳೂರು ಸೇರಿದಂತೆ ಎಲ್ಲೆಡೆ ದಾಖಲೆ ಪ್ರಮಾಣದ ಏರಿಕೆ ಕಂಡಿದ್ದವು. ಕಳೆದ ವಾರ ದರ ತುಸು ಇಳಿದು, ಮತ್ತೆ ಏರಲು ಆರಂಭಿಸಿದೆ. ಇಂದಿನ ದರಗಳು ಹೀಗಿವೆ.

VISTARANEWS.COM


on

gold model
Koo

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಬುಧವಾರ ತುಸು ಏರಿಕೆ ಕಂಡುಬಂದಿದೆ. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹45 ಹಾಗೂ ₹49 ಏರಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಕಳೆದ ವಾರ ತುಸು ಇಳಿಕೆ ಕಂಡಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,660ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,280 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,600 ಮತ್ತು ₹6,66,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,265 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,120 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,650 ಮತ್ತು ₹7,26,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,75072,800
ಮುಂಬಯಿ66,600 72,650
ಬೆಂಗಳೂರು66,600 72,650
ಚೆನ್ನೈ67,30073,420

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಚಿನ್ನದ ದರ

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Gold Rate Today: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 22 ಕ್ಯಾರಟ್‌ ಚಿನ್ನ 10 ಗ್ರಾಂಗೆ ಇಂದು ರಾಜಧಾನಿಯಲ್ಲಿ ₹66,150ಗೆ ಲಭ್ಯವಿದೆ. ಕಳೆದೆರಡು ದಿನಗಳಿಂದ ಬೆಲೆ ಇಳಿಯುತ್ತಿದೆ.

VISTARANEWS.COM


on

gold rate today kajal
Koo

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಮಂಗಳವಾರ ಭಾರಿ ಪ್ರಮಾಣದ ಇಳಿಕೆ ಕಂಡುಬಂದಿದೆ. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹140 ಹಾಗೂ ₹153 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಎರಡು ದಿನಗಳಿಂದ ಸ್ವಲ್ಪ ಸ್ವಲ್ಪವಾಗಿ ಇಳಿಯಲು ಆರಂಭಿಸಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,615ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,150 ಮತ್ತು ₹6,61,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,216 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,728 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,160 ಮತ್ತು ₹7,21,600 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,30072,310
ಮುಂಬಯಿ66,150 72,160
ಬೆಂಗಳೂರು66,150 72,160
ಚೆನ್ನೈ67,10073,100

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading

ಚಿನ್ನದ ದರ

Gold Rate Today: 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ ₹550 ಇಳಿಕೆ; ಇಂದು ಹೀಗಿದೆ ಬೆಲೆ ಗಮನಿಸಿ

Gold Rate Today: ಕಳೆದ ತಿಂಗಳು ಚಿನ್ನದ ಬೆಲೆಯಲ್ಲಿ ಒಂದೇ ಸಮನೆ ಏರಿಕೆಯಾಗಿತ್ತು. ಈ ವಾರ ಸ್ವಲ್ಪ ಸ್ವಲ್ಪವೇ ಇಳಿಯಲಾರಂಭಿಸಿದೆ. ಇಂದಿನ ಬೆಲೆಗಳನ್ನು ಇಲ್ಲಿ ಗಮನಿಸಿ.

VISTARANEWS.COM


on

gold meena
Koo

ಬೆಂಗಳೂರು: ಶನಿವಾರ ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹50 ಹಾಗೂ ₹55 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಎರಡು ದಿನಗಳಿಂದ ಸ್ವಲ್ಪ ಸ್ವಲ್ಪವಾಗಿ ಇಳಿಯಲು ಆರಂಭಿಸಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,755ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,040 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,550 ಮತ್ತು ₹6,75,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,369 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,952 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,690 ಮತ್ತು ₹7,36,900 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,70073,840
ಮುಂಬಯಿ67,550 73,690
ಬೆಂಗಳೂರು67,550 73,690
ಚೆನ್ನೈ68,45074,670

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading

ಚಿನ್ನದ ದರ

Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Gold Rate Today: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಚಿನ್ನದ ಬೆಲೆಯು ಯಥಾಸ್ಥಿತಿ ಕಾಪಾಡಿಕೊಂಡಿದೆ. ಸತತ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರು ವೀಕೆಂಡ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಖರೀದಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಮದುವೆ ಸೀಸನ್‌ ಬೇರೆ ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ, ಈಗಲೇ ಖರೀದಿಸುವುದು ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸತತ ಏರಿಕೆಯ ಬಳಿಕ ಇಳಿಕೆ ಕಂಡಿದ್ದ ಚಿನ್ನದ ಬೆಲೆಯು ಭಾನುವಾರ (ಏಪ್ರಿಲ್‌ 21) ಬೆಂಗಳೂರಿನಲ್ಲಿ (Bengaluru) ಚಿನ್ನದ ಬೆಲೆಯಲ್ಲಿ (Gold Rate Today) ಯಾವುದೇ ವ್ಯತ್ಯಾಸವಾಗದ ಕಾರಣ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಗೆ ಮುಂದಾಗಿದ್ದಾರೆ. ನಗರದಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,805 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,424 ರೂ. ಇದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಎಂಟು ಗ್ರಾಂ ಚಿನ್ನವನ್ನು 6,805 ರೂ.ಗೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ 54,440 ರೂ. ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು 68,050 ರೂ. ಮತ್ತು 6,80,500 ರೂ. ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ 7,424 ರೂ. ಆಗಿದ್ದರೆ, ಎಂಟು ಗ್ರಾಂ ಬೆಲೆ 59,392 ರೂ. ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ 74,240 ರೂ. ಮತ್ತು 7,42,400 ರೂ. ವೆಚ್ಚವಾಗಲಿದೆ.

ಬೆಳ್ಳಿಯ ಬೆಲೆ ಹೀಗಿದೆ…

ಒಂದು ಗ್ರಾಂ ಬೆಳ್ಳಿಯ ಬೆಲೆ 85.75 ರೂ., ಎಂಟು ಗ್ರಾಂ 686 ರೂ. ಮತ್ತು 10 ಗ್ರಾಂ 857.50 ರೂ. ಇದೆ. 100 ಗ್ರಾಂಗೆ ಗ್ರಾಹಕರು 8,575 ರೂ. ಮತ್ತು 1 ಕಿಲೋಗ್ರಾಂಗೆ 85,750 ರೂ. ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,21074,390
ಮುಂಬಯಿ68,05074,240
ಬೆಂಗಳೂರು68,05074,240
ಚೆನ್ನೈ68,85075,110

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Gold price

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Lok Sabha Election 2024: ಗೀತಾ ಶಿವರಾಜ್‌ಕುಮಾರ್‌ ಬಳಿ ಇದೆ 11.54 ಕೆಜಿ ಚಿನ್ನ, 30 ಕೆಜಿ ಬೆಳ್ಳಿ; ಒಟ್ಟು ಆಸ್ತಿ ಎಷ್ಟು?

Continue Reading
Advertisement
Karnataka Weather
ಕರ್ನಾಟಕ11 mins ago

Karnataka Weather: ಇಂದು ಮೈಸೂರು, ಕೊಡಗು ಸೇರಿ ವಿವಿಧೆಡೆ ಮಳೆ; ಮುಂದಿನ 5 ದಿನ ತಾಪಮಾನದಲ್ಲಿ ಭಾರಿ ಏರಿಕೆ!

Modi
ಪ್ರಮುಖ ಸುದ್ದಿ40 mins ago

ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

Baking Soda
ಆರೋಗ್ಯ41 mins ago

Baking Soda: ಅಡುಗೆ ಸೋಡಾ ನಿಜಕ್ಕೂ ಆರೋಗ್ಯಕ್ಕೆ ಕೆಟ್ಟದ್ದಾ?

World Malaria Day
ಆರೋಗ್ಯ2 hours ago

World Malaria Day: ಭಾರತದಲ್ಲಿ ಮಲೇರಿಯಾಗೆ ಪ್ರತಿವರ್ಷ 20 ಸಾವಿರ ಬಲಿ; ಸೊಳ್ಳೆಗಳು ಭಾರಿ ಡೇಂಜರ್‌!

dina bhavishya read your daily horoscope predictions for April 25 2024
ಭವಿಷ್ಯ6 hours ago

Dina Bhavishya : ಇಂದು ಈ ನಾಲ್ಕು ರಾಶಿಯವರಿಗೆ 4 ಲಕ್ಕಿ ನಂಬರ್!

PM
ದೇಶ7 hours ago

ಪ್ರಧಾನಿ ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

Union Minister Pralhad Joshi Statement in Unakal
ಹುಬ್ಬಳ್ಳಿ7 hours ago

Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

DC vs GT
ಕ್ರೀಡೆ7 hours ago

DC vS GT: ಗುಜರಾತ್​ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು ; ಪ್ಲೇ ಆಫ್​ ರೇಸ್ ಜೀವಂತ

PUBG Love
ದೇಶ7 hours ago

PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Nada Gheethe
ಪ್ರಮುಖ ಸುದ್ದಿ8 hours ago

‌Nada Geethe: ನಾಡಗೀತೆ ವಿವಾದ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌