Site icon Vistara News

Gold Rate Today: ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ

gold rate today

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 9) ಚಿನ್ನದ ದರ ಕೊಂಚ ಹೆಚ್ಚಾಗಿದೆ.(Gold Rate Today). ಮಂಗಳವಾರದಿಂದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದರಿಂದ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿತ್ತು. ಆದರೆ ಇಂದು ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ 75ರೂ. ಮತ್ತು 24 ಕ್ಯಾರಟ್‌ ಚಿನ್ನಕ್ಕೆ 82ರೂ. ಹೆಚ್ಚಾಗಿದೆ

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,440₹ 7,024
ಮುಂಬೈ₹ 6,425₹ 7,009
ಬೆಂಗಳೂರು₹ 6,425₹ 7,009
ಚೆನ್ನೈ₹ 6,425₹ 7,009

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 80.75 ಹಾಗೂ 8 ಗ್ರಾಂಗೆ ₹ 646 ಇದೆ. 10 ಗ್ರಾಂ ₹ 807.50 ಹಾಗೂ 1 ಕಿಲೋಗ್ರಾಂ ₹ 80,750 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

Exit mobile version