Gold Rate Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಸ್ವರ್ಣ ಪ್ರಿಯರಿಗೆ ಶುಭ ಸುದ್ದಿ - Vistara News

ವಾಣಿಜ್ಯ

Gold Rate Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಸ್ವರ್ಣ ಪ್ರಿಯರಿಗೆ ಶುಭ ಸುದ್ದಿ

Gold Rate Today:ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,240 ಇದೆ.

VISTARANEWS.COM


on

gold rate today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ (Gold Rate Today). ಚಿನ್ನದ ಬೆಲೆ ಇಳಿಮುಖವಾಗಿ ಗ್ರಾಹಕರು ಕೊಂಚ ನಿರಾಳವಾಗಿದ್ದಾರೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38ಗಳಷ್ಟು ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,240 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,800 ಮತ್ತು ₹ 6,78,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,176 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,970 ಮತ್ತು ₹ 73,970 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,830₹ 7,457
ಮುಂಬೈ₹ 6,780₹ 7,397
ಬೆಂಗಳೂರು₹ 6,780₹ 7,397
ಚೆನ್ನೈ₹ 6,835₹ 7,457

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿತೈ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.65 ಹಾಗೂ 8 ಗ್ರಾಂಗೆ ₹ 733.20 ಇದೆ. 10 ಗ್ರಾಂಗೆ ₹ 916.50 ಹಾಗೂ 1 ಕಿಲೋಗ್ರಾಂಗೆ ₹ 91,650 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ.

ಇದನ್ನೂ ಓದಿ:Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತರಿಗೆ ರಿಲೀಫ್?

Union Budget 2024: ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 23ರಂದು ದಿನಗಳಲ್ಲಿ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇನ್ನು, ಬಜೆಟ್‌ನಲ್ಲಿ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ. ಬಜೆಟ್‌ನಲ್ಲಿ ತೆರಿಗೆ ಕುರಿತ ನಿರೀಕ್ಷೆಗಳ ಮಾಹಿತಿ ಇಲ್ಲಿದೆ.

VISTARANEWS.COM


on

Union Budget 2024
Koo

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು 2024-2025ನೇ ಸಾಲಿನ ಬಜೆಟ್‌ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಂದು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡನೆ (Union Budget 2024) ಮಾಡಲಿದ್ದು, ಶ್ರೀಮಂತರಿಂದ ಹಿಡಿದು ಬಡವರವರೆಗೆ ಎಲ್ಲ ವರ್ಗದವರ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ, ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ (Income Tax) ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ. ಬಜೆಟ್‌ನಲ್ಲಿ ತೆರಿಗೆ ವಿಚಾರಕ್ಕೆ ಸಂಬಂಧಿಸಿದ ನಿರೀಕ್ಷೆಗಳು ಏನು ಎಂಬುದರ ಮಾಹಿತಿ ಇಲ್ಲಿದೆ.

ಸೆಕ್ಷನ್‌ 80 ಸಿ ಅಡಿಯಲ್ಲಿ ವಿನಾಯಿತಿ ಮೊತ್ತ ಹೆಚ್ಚಳ

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್‌ 80 ಸಿ ಅಡಿಯಲ್ಲಿ ಸಂಬಳದಾರರು ಹೂಡಿಕೆ ಹಾಗೂ ವೆಚ್ಚಗಳ ಮೇಲೆ ವಾರ್ಷಿಕವಾಗಿ 1.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಪಡೆಯುತ್ತಾರೆ. ಗೃಹ ಸಾಲದ ಅಸಲು, ಬಡ್ಡಿ, ಆರೋಗ್ಯ ವಿಮೆಯ ಪ್ರೀಮಿಯಂ ಮೊತ್ತ, ಪಿಪಿಎಫ್‌ ಹೂಡಿಕೆ ಸೇರಿ ಹಲವು ರೀತಿಯ ಹೂಡಿಕೆಗಳು ಹಾಗೂ ವೆಚ್ಚಗಳ ಮೂಲಕ 1.5 ಲಕ್ಷರೂ.ಗೆ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ. ಈ ಮೊತ್ತವನ್ನು ಕೇಂದ್ರ ಸರ್ಕಾರವು 1.5 ಲಕ್ಷ ರೂ.ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದರಿಂದ ಮಧ್ಯಮ ವರ್ಗದವರಿಗೆ ಭಾರಿ ಅನುಕೂಲವಾಗಲಿದೆ.

ಹೊಸ ತೆರಿಗೆಯ ಸ್ಲ್ಯಾ ಬ್‌ ಹೀಗಿದೆ

ಆದಾಯವಿಧಿಸುವ ತೆರಿಗೆ
0-3 ಲಕ್ಷ ರೂ.ತೆರಿಗೆ ಇರಲ್ಲ
3-6 ಲಕ್ಷ ರೂ.5%
6-9 ಲಕ್ಷ ರೂ.10%
9-12 ಲಕ್ಷ ರೂ.15%
12-15 ಲಕ್ಷ ರೂ.20%
15 ಲಕ್ಷ ರೂ.ಗಿಂತ ಹೆಚ್ಚು30%

ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಹೆಚ್ಚಳ

ಸಂಬಳ ಪಡೆಯುವ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು 70 ಸಾವಿರ ರೂ. ಅಥವಾ ಒಂದು ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ, ಹೊಸ ಹಾಗೂ ಹಳೆಯ ತೆರಿಗೆ ಪದ್ಧತಿಯಲ್ಲೂ 50 ಸಾವಿರ ರೂ. ಸ್ಟಾಂಡರ್ಡ್‌ ಡಿಡಕ್ಷನ್‌ ಇದೆ. ಇದನ್ನು, 1 ಲಕ್ಷ ರೂ.ಗೆ ಏರಿಕೆ ಮಾಡಿದರೆ, ಸಂಬಳದಾರರು ಹೆಚ್ಚಿನ ತೆರಿಗೆ ಹಣವನ್ನು ಉಳಿತಾಯ ಮಾಡಬಹುದಾಗಿದೆ. ಹಣದುಬ್ಬರ ಏರಿಕೆ ಸೇರಿ ಹಲವು ಕಾರಣಗಳಿಂದಾಗಿ ಸ್ಟಾಂಡರ್ಡ್‌ ಡಿಡಕ್ಷನ್‌ ಅಥವಾ ತೆರಿಗೆ ವಿನಾಯಿತಿ ಮೊತ್ತವನ್ನು ಏರಿಕೆ ಮಾಡಬೇಕು ಎಂಬುದು ಬೇಡಿಕೆಯಾಗಿದೆ. ಹಾಗಾಗಿ, ಮೊತ್ತವನ್ನು ಏರಿಕೆ ಮಾಡಲು ನಿರ್ಮಲಾ ಸೀತಾರಾಮನ್‌ ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಟಾಂಡರ್ಡ್‌ ಡಿಡಕ್ಷನ್‌ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ.

ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಸಾಧ್ಯತೆ

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದ್ದು, ಈ ಮೊತ್ತವನ್ನು 5 ಲಕ್ಷ ರೂ.ಗೆ ಏರಿಕೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಇವುಗಳ ಜತೆಗೆ ನೌಕರರ ಮನೆ ಬಾಡಿಗೆ ಭತ್ಯೆ (HRA) ಹಾಗೂ 80 ಟಿಟಿಎ ಅಡಿಯಲ್ಲಿ ಮೊತ್ತವನ್ನು 10 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಏರಿಕೆ ಮಾಡುವುದು ಸೇರಿ ಹಲವು ನಿರೀಕ್ಷೆಗಳಿವೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

Continue Reading

ವಾಣಿಜ್ಯ

Reliance Industries: ರಿಲಯನ್ಸ್ ಇಂಡಸ್ಟ್ರೀಸ್‌ ಮೊದಲ ತ್ರೈಮಾಸಿಕ ಫಲಿತಾಂಶ ಪ್ರಕಟ; 17,448 ಕೋಟಿ ರೂ. ಲಾಭ

Reliance Industries: ರಿಲಯನ್ಸ್ ಇಂಡಸ್ಟ್ರೀಸ್‌ನಿಂದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್‌ನಿಂದ ಜೂನ್ ತಿಂಗಳ ವರೆಗಿನ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ.ಕಾರ್ಯಾಚರಣೆಯಿಂದ 2.36 ಲಕ್ಷ ಕೋಟಿ ರೂಪಾಯಿ ಬಂದಿದ್ದು, ಒಂದು ವರ್ಷದ ಹಿಂದಿನ ಇದೇ ಅವಧಿಯಲ್ಲಿ ಕಾರ್ಯಾಚರಣೆಯಿಂದ 2.10 ಲಕ್ಷ ಕೋಟಿ ಆದಾಯ ಬಂದಿತ್ತು. ಎಲ್ಲ ಸೆಗ್ಮೆಂಟ್ ಗಳಿಂದಲೂ ಉತ್ತಮವಾದ ಕೊಡುಗೆ ಬಂದಿದ್ದರಿಂದ ಒಂದು ವರ್ಷದ ಹಿಂದಿನ ಇದೇ ಅವಧಿಗೆ ಹೋಲಿಸಿದರೆ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 11.5 ರಷ್ಟು ಆದಾಯದಲ್ಲಿ ಏರಿಕೆ ಆಗಿ, 2.58 ಲಕ್ಷ ಕೋಟಿ ರೂಪಾಯಿ ಬಂದಿದೆ. ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಸಮೂಹವು 17,448 ಕೋಟಿ ರೂಪಾಯಿ ಲಾಭವನ್ನು ಘೋಷಣೆ ಮಾಡಿದೆ.

VISTARANEWS.COM


on

Reliance Industries Announces First Quarter Results 17448 crore rs profit declaration
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್‌ನಿಂದ (Reliance Industries) 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್‌ನಿಂದ ಜೂನ್ ತಿಂಗಳ ವರೆಗಿನ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕಾರ್ಯಾಚರಣೆಯಿಂದ 2.36 ಲಕ್ಷ ಕೋಟಿ ರೂಪಾಯಿ ಬಂದಿದ್ದು, ಒಂದು ವರ್ಷದ ಹಿಂದಿನ ಇದೇ ಅವಧಿಯಲ್ಲಿ ಕಾರ್ಯಾಚರಣೆಯಿಂದ 2.10 ಲಕ್ಷ ಕೋಟಿ ಆದಾಯ ಬಂದಿತ್ತು. ಎಲ್ಲ ಸೆಗ್ಮೆಂಟ್‌ಗಳಿಂದಲೂ ಉತ್ತಮವಾದ ಕೊಡುಗೆ ಬಂದಿದ್ದರಿಂದ ಒಂದು ವರ್ಷದ ಹಿಂದಿನ ಇದೇ ಅವಧಿಗೆ ಹೋಲಿಸಿದರೆ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 11.5 ರಷ್ಟು ಆದಾಯದಲ್ಲಿ ಏರಿಕೆ ಆಗಿ, 2.58 ಲಕ್ಷ ಕೋಟಿ ರೂಪಾಯಿ ಬಂದಿದೆ. ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಸಮೂಹವು 17,448 ಕೋಟಿ ರೂಪಾಯಿ ಲಾಭವನ್ನು ಘೋಷಣೆ ಮಾಡಿದೆ.

ತೈಲ ಹಾಗೂ ಅನಿಲ ಸೆಗ್ಮೆಂಟ್ ಆದಾಯವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ತ್ರೈಮಾಸಿಕದಲ್ಲಿ ಶೇ 33.4ರಷ್ಟು ಹೆಚ್ಚಾಗಿ 6,179 ಕೋಟಿ ರೂಪಾಯಿ ಬಂದಿದೆ. KG D6 ಹಾಗೂ CBM ಕ್ಷೇತ್ರದಲ್ಲಿ ಕಡಿಮೆ ಮೊತ್ತಕ್ಕೆ ಭಾಗಶಃ ಸರಿದೂಗಿದ್ದರಿಂದ ಮತ್ತು ಹೆಚ್ಚಿನ ವಾಲ್ಯೂಮ್‌ನಿಂದ ಇದು ಸಾಧ್ಯವಾಗಿದೆ. ಇದೇ ಸೆಗ್ಮೆಂಟ್ ತ್ರೈಮಾಸಿಕ ಇಬಿಐಟಿಡಿಎ 5,210 ಕೋಟಿ ರೂಪಾಯಿ ಆಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 29.8ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

ತೈಲದಿಂದ ರಾಸಾಯನಿಕ ತನಕದ ಸೆಗ್ಮೆಂಟ್ ಆದಾಯವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 18.1ರಷ್ಟು ಹೆಚ್ಚಳವಾಗಿ, 1,57,133 ರೂಪಾಯಿ ಬಂದಿದೆ. ಇನ್ನು ಇದೇ ಸೆಗ್ಮೆಂಟ್ ಇಬಿಐಟಿಡಿಎ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 14.3ರಷ್ಟು ಇಳಿಕೆಯಾಗಿ, 13,093 ಕೋಟಿ ಬಂದಿದೆ.

ರಿಲಯನ್ಸ್ ರೀಟೇಲ್

ರಿಲಯನ್ಸ್ ರೀಟೇಲ್ ಸಗಟು ಆದಾಯವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 8.1ರಷ್ಟು ಏರಿಕೆಯಾಗಿ, 75,615 ಕೋಟಿ ರೂಪಾಯಿ ಆಗಿದೆ. ಈ ತ್ರೈಮಾಸಿಕದ ಇಬಿಐಟಿಡಿಎ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 10.5ರಷ್ಟು ಹೆಚ್ಚಳವಾಗಿ, 5,664 ಕೋಟಿ ರೂಪಾಯಿ ಮುಟ್ಟಿದೆ. ರಿಲಯನ್ಸ್ ರೀಟೇಲ್ ತನ್ನ ಮಳಿಗೆಗಳ ಸಂಖ್ಯೆಯನ್ನು 331ರಷ್ಟು ಹೆಚ್ಚಿಸಿ, 18,918 ತಲುಪಿದೆ. ಈಗ ಒಟ್ಟಾರೆ 8.13 ಕೋಟಿ ಚದರಡಿ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತದೆ. ನೋಂದಾಯಿತ ಗ್ರಾಹಕರ ಸಂಖ್ಯೆಯು 31.6 ಕೋಟಿ ಆಗಿದ್ದು, ಒಟ್ಟಾರೆ ವಹಿವಾಟುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಶೇ 6.4ರಷ್ಟು ಹೆಚ್ಚಳವಾಗಿ, 33.4 ಕೋಟಿ ದಾಖಲಾಗಿದೆ.

ರಿಲಯನ್ಸ್ ಜಿಯೋ

ರಿಲಯನ್ಸ್ ಜಿಯೋ ಕಳೆದ ತ್ರೈಮಾಸಿಕದಲ್ಲಿ 5,337 ಕೋಟಿ ರೂಪಾಯಿಯ ನಿವ್ವಳ ಲಾಭ ಘೋಷಿಸಿದ್ದ ಕಂಪನಿಯು ಈ ತ್ರೈಮಾಸಿಕದಲ್ಲಿ 5,445 ಕೋಟಿ ರೂಪಾಯಿ ನಿವ್ವಳ ಲಾಭವನ್ನು ಗಳಿಸಿದೆ. ರಿಲಯನ್ಸ್ ಜಿಯೋ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಮತ್ತೆ ಮುಂದುವರಿದಿದೆ. ಜೂನ್‌ಗೆ ಕೊನೆಯಾದ ತ್ರೈಮಾಸಿಕದಲ್ಲಿ 90 ಲಕ್ಷ ಬಳಕೆದಾರರು ಸೇರ್ಪಡೆಯಾಗಿದ್ದಾರೆ. ಅಂದ ಹಾಗೆ ವರ್ಷದ ಹಿಂದಿನ ಇದೇ ಹಣಕಾಸು ತ್ರೈಮಾಸಿಕದಲ್ಲಿ ಜಿಯೋ 4,863 ಕೋಟಿ ರೂಪಾಯಿ ಲಾಭ ಗಳಿಸಿತ್ತು.

ಕಾರ್ಯಾಚರಣೆ ಮೂಲಕ ಬರುವಂಥ ಆದಾಯವು 26,478 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಕಳೆದ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ಮೂಲಕವಾಗಿ 25,959 ಕೋಟಿ ರೂಪಾಯಿ ಆದಾಯ ಬಂದಿತ್ತು. ವರ್ಷದ ಹಿಂದಿನ ಇದೇ ಅವಧಿಯಲ್ಲಿ 24,042 ಕೋಟಿ ರೂಪಾಯಿ ಕಾರ್ಯಾಚರಣೆ ಮೂಲಕ ಆದಾಯ ಪಡೆದದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

ಇನ್ನು ತಿಂಗಳಿಗೆ ಪ್ರತಿ ಬಳಕೆದಾರರಿಂದ ಬರುವಂಥ ಸರಾಸರಿ ಆದಾಯದಲ್ಲಿ, ಅಂದರೆ ಇದನ್ನು ಎಆರ್‌ಪಿಯು (ಆವರೇಜ್ ರೆವಿನ್ಯೂ ಪರ್ ಯೂಸರ್) ಎನ್ನಲಾಗುತ್ತದೆ. ಇದರಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಆದಾಯ ಹಾಗೂ ಇಬಿಐಟಿಡಿಎ ಬೆಳವಣಿಗೆಗೆ ಇದು ಕೊಡುಗೆ ನೀಡಿದೆ. ಚೀನಾದ ಹೊರಗೆ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ 5ಜಿ ಟೆಲಿಕಾಂ ಆಪರೇಟರ್ ಎಂಬ ಹೆಮ್ಮೆ ಈಗ ಜಿಯೋದ ಪಾಲಾಗಿದೆ. ಹದಿಮೂರು ಕೋಟಿ ಚಂದಾದಾರರಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಟೆಲಿಕಾಂ ಘಟಕವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ 2025ನೇ ಇಸವಿಯಲ್ಲಿ ಅತಿದೊಡ್ಡ ಐಪಿಒಗೆ (ಇನಿಷಿಯಲ್ ಪಬ್ಲಿಕ್ ಆಫರ್) ಮುಂದಾಗಬಹುದು. 9.3 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಸಂಭಾವ್ಯ ಮೌಲ್ಯಮಾಪನದೊಂದಿಗೆ ಇದು ಆಗಬಹುದು ಎಂದು ಜೆಫರೀಸ್ ಟಿಪ್ಪಣಿ ಹೇಳಿದೆ.

ಜಿಯೋ ‘$112 ಶತಕೋಟಿ ಮೌಲ್ಯದಲ್ಲಿ ಲಿಸ್ಟಿಂಗ್ ಮಾಡಬಹುದು’ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರು ಬೆಲೆಗೆ ‘ಶೇ 7ರಿಂದ 15ರಷ್ಟು ಮೇಲಕ್ಕೆ’ ಸೇರಿಸಬಹುದು ಎಂದು ಜೆಫ್ರೀಸ್ ಜುಲೈ 11 ರಂದು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಮುಕೇಶ್ ಅಂಬಾನಿ ಕಂಪನಿಯ ತ್ರೈಮಾಸಿಕ ಫಲಿತಾಂಶದ ಬಗ್ಗೆ ಮಾತನಾಡಿ, ದುರ್ಬಲ ಒ2ಸಿ ಆಪರೇಟಿಂಗ್ ಪರಿಸರವನ್ನು ಸರಿದೂಗಿಸುವಲ್ಲಿ ಗ್ರಾಹಕ ಮತ್ತು ಅಪ್‌ಸ್ಟ್ರೀಮ್ ವ್ಯವಹಾರಗಳ ಬಲವಾದ ಕೊಡುಗೆಯೊಂದಿಗೆ ತ್ರೈಮಾಸಿಕದಲ್ಲಿ ಏಕೀಕೃತ ಇಬಿಐಟಿಡಿಎ ಸುಧಾರಿಸಿದೆ. ಈ ತ್ರೈಮಾಸಿಕದಲ್ಲಿ ರಿಲಯನ್ಸ್‌ನ ಗಟ್ಟಿತನವನ್ನು ಅದರ ಕಾರ್ಯಾಚರಣೆ ಮತ್ತು ಹಣಕಾಸಿನ ಕಾರ್ಯಕ್ಷಮತೆಯು ಅದರ ವೈವಿಧ್ಯಮಯ ವ್ಯವಹಾರಗಳ ಪೋರ್ಟ್‌ಫೋಲಿಯೊದ ಬಲವನ್ನು ಒತ್ತಿಹೇಳುತ್ತದೆ.

ಮುಖ್ಯವಾಗಿ, ಈ ವ್ಯವಹಾರಗಳು ಭಾರತದ ಬೆಳವಣಿಗೆಗೆ ಗಣನೀಯವಾಗಿ ಕೊಡುಗೆ ನೀಡುತ್ತಿವೆ, ಸರಕು ಮತ್ತು ಸೇವೆಗಳ ಡಿಜಿಟಲ್ ಮತ್ತು ಭೌತಿಕ ವಿತರಣೆಗೆ ಪ್ರಮುಖ ಶಕ್ತಿ ಮತ್ತು ಅದ್ಭುತವಾದ ಚಾನಲ್‌ಗಳನ್ನು ಒದಗಿಸುತ್ತವೆ ಎಂದಿದ್ದಾರೆ.

ರಿಲಯನ್ಸ್ ಜಿಯೋದ ಅಧ್ಯಕ್ಷ ಆಕಾಶ್ ಅಂಬಾನಿ ಮಾತನಾಡಿ, ಅತ್ಯುತ್ತಮ ಗುಣಮಟ್ಟದ, ಕೈಗೆಟುಕುವ ಇಂಟರ್ನೆಟ್ ಎಂಬುದು ಡಿಜಿಟಲ್ ಇಂಡಿಯಾದ ಬೆನ್ನೆಲುಬು. ಇದಕ್ಕೆ ಕೊಡುಗೆ ನೀಡುವ ಹೆಮ್ಮೆಯು ಜಿಯೋಗೆ ಇದೆ. ನಮ್ಮ ಹೊಸ ಪ್ರೀಪೇಯ್ಡ್ ಪ್ಲಾನ್‌ಗಳು 5ಜಿ ಹಾಗೂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕಡೆಗಿನ ಕ್ಷೇತ್ರದ ಆವಿಷ್ಕಾರವನ್ನು ಗಟ್ಟಿಗೊಳಿಸುತ್ತದೆ ಮತ್ತು ಸುಸ್ಥಿರ ಬೆಳವಣಿಗೆ ಕಡೆಗೆ ಸಾಗಲು ನೆರವಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಮಾರುಕಟ್ಟೆ ವ್ಯವಹಾರ ಶುಕ್ರವಾರದಂದು ಕೊನೆಗೊಂಡ ವೇಳೆಗೆ ಪ್ರತಿ ಷೇರಿಗೆ 3,116.95 ರೂಪಾಯಿಯಂತೆ ಮುಕ್ತಾಯ ಕಂಡಿವೆ. ಷೇರಿನ ಮೌಲ್ಯ ಶೇ 1.78ರಷ್ಟು ಇಳಿಕೆ ಕಂಡಿದೆ.

Continue Reading

ದೇಶ

Reliance Jio: ರಿಲಯನ್ಸ್ ಜಿಯೋಗೆ ಮೂರೇ ತಿಂಗಳಲ್ಲಿ ಎಷ್ಟು ಲಾಭ ನೋಡಿ; 5,445 ಕೋಟಿ ರೂ!

Reliance Jio: ರಿಲಯನ್ಸ್ ಜಿಯೋದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್‌ನಿಂದ ಜೂನ್ ತಿಂಗಳ ವರೆಗಿನ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕಳೆದ ತ್ರೈಮಾಸಿಕದಲ್ಲಿ 5,337 ಕೋಟಿ ರೂಪಾಯಿಯ ನಿವ್ವಳ ಲಾಭ ಘೋಷಿಸಿದ್ದ ಕಂಪನಿಯು ಈ ತ್ರೈಮಾಸಿಕದಲ್ಲಿ 5,445 ಕೋಟಿ ರೂಪಾಯಿ ನಿವ್ವಳ ಲಾಭವನ್ನು ಗಳಿಸಿದೆ. ರಿಲಯನ್ಸ್ ಜಿಯೋ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಮತ್ತೆ ಮುಂದುವರಿದಿದೆ. ಜೂನ್‌ಗೆ ಕೊನೆಯಾದ ತ್ರೈಮಾಸಿಕದಲ್ಲಿ 90 ಲಕ್ಷ ಬಳಕೆದಾರರು ಸೇರ್ಪಡೆಯಾಗಿದ್ದಾರೆ.

VISTARANEWS.COM


on

Reliance Jio first quarter profit at Rs 5445 crore
Koo

ಮುಂಬೈ: ರಿಲಯನ್ಸ್ ಜಿಯೋದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್‌ನಿಂದ ಜೂನ್ ತಿಂಗಳವರೆಗಿನ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕಳೆದ ತ್ರೈಮಾಸಿಕದಲ್ಲಿ 5,337 ಕೋಟಿ ರೂಪಾಯಿಯ ನಿವ್ವಳ ಲಾಭ ಘೋಷಿಸಿದ್ದ ಕಂಪನಿಯು ಈ ತ್ರೈಮಾಸಿಕದಲ್ಲಿ 5,445 ಕೋಟಿ ರೂಪಾಯಿ ನಿವ್ವಳ ಲಾಭವನ್ನು (Reliance Jio) ಗಳಿಸಿದೆ.

ರಿಲಯನ್ಸ್ ಜಿಯೋ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಮತ್ತೆ ಮುಂದುವರಿದಿದೆ. ಜೂನ್‌ಗೆ ಕೊನೆಯಾದ ತ್ರೈಮಾಸಿಕದಲ್ಲಿ 90 ಲಕ್ಷ ಬಳಕೆದಾರರು ಸೇರ್ಪಡೆಯಾಗಿದ್ದಾರೆ. ಅಂದ ಹಾಗೆ ವರ್ಷದ ಹಿಂದಿನ ಇದೇ ಹಣಕಾಸು ತ್ರೈಮಾಸಿಕದಲ್ಲಿ ಜಿಯೋ 4,863 ಕೋಟಿ ರೂಪಾಯಿ ಲಾಭ ಗಳಿಸಿತ್ತು.

ಕಾರ್ಯಾಚರಣೆ ಮೂಲಕ ಬರುವಂತ ಆದಾಯವು 26,478 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಕಳೆದ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ಮೂಲಕವಾಗಿ 25,959 ಕೋಟಿ ರೂಪಾಯಿ ಆದಾಯ ಬಂದಿತ್ತು. ವರ್ಷದ ಹಿಂದಿನ ಇದೇ ಅವಧಿಯಲ್ಲಿ 24,042 ಕೋಟಿ ರೂಪಾಯಿ ಕಾರ್ಯಾಚರಣೆ ಮೂಲಕ ಆದಾಯ ಪಡೆದದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

ಇನ್ನು ತಿಂಗಳಿಗೆ ಪ್ರತಿ ಬಳಕೆದಾರರಿಂದ ಬರುವಂತ ಸರಾಸರಿ ಆದಾಯದಲ್ಲಿ, ಅಂದರೆ ಇದನ್ನು ಎಆರ್ ಪಿಯು (ಆವರೇಜ್ ರೆವಿನ್ಯೂ ಪರ್ ಯೂಸರ್) ಎನ್ನಲಾಗುತ್ತದೆ. ಇದರಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಆದಾಯ ಹಾಗೂ ಇಬಿಐಟಿಡಿಎ ಬೆಳವಣಿಗೆಗೆ ಇದು ಕೊಡುಗೆ ನೀಡಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಟೆಲಿಕಾಂ ಘಟಕವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ 2025ನೇ ಇಸವಿಯಲ್ಲಿ ಅತಿದೊಡ್ಡ ಐಪಿಒಗೆ (ಇನಿಷಿಯಲ್ ಪಬ್ಲಿಕ್ ಆಫರ್) ಮುಂದಾಗಬಹುದು. 9.3 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಸಂಭಾವ್ಯ ಮೌಲ್ಯಮಾಪನದೊಂದಿಗೆ ಇದು ಆಗಬಹುದು ಎಂದು ಜೆಫರೀಸ್ ಟಿಪ್ಪಣಿ ಹೇಳಿದೆ.

ಜಿಯೋ ‘$112 ಶತಕೋಟಿ ಮೌಲ್ಯದಲ್ಲಿ ಲಿಸ್ಟಿಂಗ್ ಮಾಡಬಹುದು’ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರು ಬೆಲೆಗೆ ‘ಶೇ 7ರಿಂದ 15ರಷ್ಟು ಮೇಲಕ್ಕೆ’ ಸೇರಿಸಬಹುದು ಎಂದು ಜೆಫ್ರೀಸ್ ಜುಲೈ 11 ರಂದು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಮಾರುಕಟ್ಟೆ ವ್ಯವಹಾರ ಶುಕ್ರವಾರದಂದು ಕೊನೆಗೊಂಡ ವೇಳೆಗೆ ಪ್ರತಿ ಷೇರಿಗೆ 3,116.95 ರೂಪಾಯಿಯಂತೆ ಮುಕ್ತಾಯ ಕಂಡಿವೆ. ಷೇರಿನ ಮೌಲ್ಯ ಶೇ 1.78 ರಷ್ಟು ಇಳಿಕೆ ಕಂಡಿದೆ.

Continue Reading

ಪ್ರಮುಖ ಸುದ್ದಿ

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Microsoft Windows Outage: ಬೆಂಗಳೂರಿನಿಂದ ನಾನಾ ಪ್ರದೇಶಗಳಿಗೆ ಹೊರಟಿದ್ದ ವಿಮಾನಗಳಿಗೆ ಪ್ರಯಾಣಿಕರಿಗೆ ಬೋರ್ಡಿಂಗ್ ಆಗಲು ಸಾಧ್ಯವಾಗಲಿಲ್ಲ. ನಿಲ್ದಾಣದ ಅಲ್ಲಲ್ಲಿ ಪ್ರಯಾಣಿಕರು ಆತಂಕದಲ್ಲಿ ಕಂಡು ಬಂದರು. ವಿಳಂಬ ಮತ್ತು ಇತರ ಸಮಸ್ಯೆ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ (ಎಂಒಸಿಎ) ಮೂಲಗಳುತಿಳಿಸಿವೆ. ಅಲ್ಲದೆ, ಸಮಸ್ಯೆ ಪರಿಹರಿಸಲು ಸಮನ್ವಯ ಸಾಧಿಸಲಾಗುತ್ತದೆ ಎಂದೂ ತಿಳಿಸಿದರು.

VISTARANEWS.COM


on

Microsoft Windows Outage
Koo

ನವದೆಹಲಿ: ಜಾಗತಿಕವಾಗಿ ಮೈಕ್ರೋಸಾಫ್ಟ್ ಕಾರ್ಯನಿರ್ವಹಣೆ ಸ್ಥಗಿತಗೊಂಡ (Microsoft Windows Outage) ಕಾರಣ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL) ಸೇರಿದಂತೆ ಭಾರತದ ಎಲ್ಲ ವಿಮಾನ ನಿಲ್ದಾಣಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಮಾಹಿತಿ ದೊರಕದೆ ಪ್ರಯಾಣಿಕರು ಸಮಸ್ಯೆ ಎದುರಿಸಿದ್ದು ಎಲ್ಲಡೆ ಅಲ್ಲೋಲಕಲ್ಲೋಲ ಉಂಟಾಗಿದೆ. ಇಂಡಿಗೊ, ಅಕಾಸಾ ಏರ್, ಸ್ಪೈಸ್ ಜೆಟ್, ಏರ್ ಇಂಡಿಯಾ, ವಿಸ್ತಾರಾ ಮತ್ತು ಇತರ ವಿಮಾನಯಾನ ಸಂಸ್ಥೆಗಳ ಚೆಕ್-ಇನ್ ವ್ಯವಸ್ಥೆಗಳಿಗೆ ಸಮಸ್ಯೆಯಾಗಿವೆ. ಹೀಗಾಗಿ ದೇಶಾದ್ಯಂತ ಹಲವಾರು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗೆ ಅಡಚಣೆ ಉಂಟಾಯಿತು. ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ವಿಮಾನಗಳನ್ನು ರದ್ದುಪಡಿಸಲಾಯಿತು.

ಬೆಂಗಳೂರಿನಿಂದ ನಾನಾ ಪ್ರದೇಶಗಳಿಗೆ ಹೊರಟಿದ್ದ ವಿಮಾನಗಳಿಗೆ ಪ್ರಯಾಣಿಕರಿಗೆ ಬೋರ್ಡಿಂಗ್ ಆಗಲು ಸಾಧ್ಯವಾಗಲಿಲ್ಲ. ನಿಲ್ದಾಣದ ಅಲ್ಲಲ್ಲಿ ಪ್ರಯಾಣಿಕರು ಆತಂಕದಲ್ಲಿ ಕಂಡು ಬಂದರು. ವಿಳಂಬ ಮತ್ತು ಇತರ ಸಮಸ್ಯೆ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ (ಎಂಒಸಿಎ) ಮೂಲಗಳುತಿಳಿಸಿವೆ. ಅಲ್ಲದೆ, ಸಮಸ್ಯೆ ಪರಿಹರಿಸಲು ಸಮನ್ವಯ ಸಾಧಿಸಲಾಗುತ್ತದೆ ಎಂದೂ ತಿಳಿಸಿದರು.

ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿದ್ದರು. ಬೋರ್ಡಿಂಗ್ ಪಾಸ್​ ಪಡೆಯಲು ಸಾಧ್ಯವಾಗದೇ ಮುಂದಕ್ಕೆ ಸಾಗಲಾಗದೆ ತೊಂದರೆಗೆ ಒಳಪಟ್ಟರು. ಸ್ಥಳೀಯವಾಗಿ ಇದ್ದ ಸಿಬ್ಬಂದಿಗಳು ಕೂಡ ಅದಕ್ಕೊಂದು ಪರಿಹಾರ ಸೂಚಿಸಲು ಸಾಧ್ಯವಾಗಲಿಲ್ಲ. ದೂರದ ಊರಿಗೆ ಪ್ರಯಾಣಕ್ಕೆ ಹೊರಟ ಜನರು ಆತಂಕ್ಕೆ ಒಳಗಾದರು.

ಮೈಕ್ರೋಸಾಫ್ಟ್ ವಕ್ತಾರರೊಬ್ಬರು ಮಾಹಿತಿ ನೀಡಿ, ಥರ್ಡ್​ ಪಾರ್ಟಿ ಸಾಫ್ಟ್​ವೇರ್ ಅಪ್​ಡೇಟ್​ನಿಂದಾಗಿ ವಿಂಡೋಸ್ ಸಾಧನಗಳ ಮೇಲೆ ಪರಿಣಾಮ ಬೀರಿದೆ. ನಾವು ಶೀಘ್ರದಲ್ಲೇ ಪರಿಹಾರವನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.

ಟರ್ಮಿನಲ್​ನಲ್ಲಿ ಸಿಕ್ಕಿ ಹಾಕಿಕೊಂಡ ಪ್ರಯಾಣಿಕರು

ತಾಂತ್ರಿಕ ದೋಷದ ಕಾರಣ ವಿಮಾನ ನಿಲ್ದಾಣದ ಒಳಗಿನ ದೃಶ್ಯಗಳು ಸಮಸ್ಯಾತ್ಮಕವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಜನರು ತಮ್ಮ ಕಷ್ಟಗಳನ್ನು ವಿವರಿಸಿದ್ದರು. ಪ್ರಯಾಣಿಕರು ಟರ್ಮಿನಲ್​ನಲ್ಲಿ ಸಿಲುಕಿಕೊಂಡಿರುವ ವಿಡಿಯೊಗಳಿಗೆ.

ಮೈಕ್ರೋಸಾಫ್ಟ್ ಸಮಸ್ಯೆಯು ಬ್ಯಾಂಕುಗಳು ಹಣ ವರ್ಗಾವಣೆಗೂ ಬಾಧಿಸಿದೆ. ವಿಶ್ವಾದ್ಯಂತ ಮೈಕ್ರೋಸಾಫ್ಟ್ ಬಳಕೆದಾರು ನಾನಾ ರೀತಿಯ ಸಮಸ್ಯೆಗೆ ಒಳಗಾಗಿದ್ದಾಎತ. ಮೈಕ್ರೋಸಾಫ್ಟ್ 365 ಅಪ್ಲಿಕೇಶ ನ್​​ಗಳು ಮತ್ತು ಸೇವೆಗಳಿಗೆ ತೊಂದರೆಯಾಗಿದೆ. ಸಮಸ್ಯೆಗೆ ನಿಖರ ಕಾರಣ, ಸ್ವರೂಪ ಅಸ್ಪಷ್ಟ. ಮೈಕ್ರೋಸಾಫ್ಟ್ ತನ್ನ ಎಕ್ಸ್ ಪೋಸ್ಟ್​​ನಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಸೂಚಿಸಿದ್ದರೂಹೇಳಿದಂತೆ ಆಗಿಲ್ಲ.

ಡೌನ್​ಡಿಟೆಕ್ಟರ್​ ವೀಸಾ, ಎಡಿಟಿ ಸೆಕ್ಯುರಿಟಿ, ಅಮೆಜಾನ್ ಮತ್ತು ಅಮೆರಿಕನ್ ಏರ್​ಲೈನ್ಸ್​ ಮತ್ತು ಡೆಲ್ಟಾದಂತಹ ವಿಮಾನಯಾನ ಸಂಸ್ಥೆಗಳಿಗೆ ಹೆಚ್ಚಿನ ತೊಂದರೆ ಆಗಿವೆ.

ವಿಮಾನ ನಿಲ್ದಾಣಗಳಲ್ಲಿ ಅಧ್ವಾನ

ಐಟಿ ಸಮಸ್ಯೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಕೆಲವು ಸೇವೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿದೆ ಎಂದು ದೆಹಲಿ ವಿಮಾನ ನಿಲ್ದಾಣವು ಸೋಶಿಯಲ್ ಮೀಡಿಯಾ ಪೋಸ್ಟ್​​ನಲ್ಲಿ ತಿಳಿಸಿದೆ. ನಮ್ಮ ಪ್ರಯಾಣಿಕರ ತೊಂದರೆ ಕಡಿಮೆ ಮಾಡಲು ನಾವು ಎಲ್ಲಾ ಪಾಲುದಾರರೊಂದಿಗೆ ಸತತವಾಗಿ ಕೆಲಸ ಮಾಡುತ್ತಿದ್ದೇವೆ. ವಿಮಾನ ಮಾಹಿತಿಗಾಗಿ ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆ ಅಥವಾ ಸಹಾಯ ಕೇಂದ್ರಕ್ಕೆ ಸಂಪರ್ಕಿಸಲು ತಿಳಿಸಲಾಗಿದೆ ಹೇಳಿದೆ.

ವಿಮಾನಯಾನ ಸಂಸ್ಥೆ ಇಂಡಿಗೊ ಎಕ್ಸ್ ಪೋಸ್ಟ್​ ಮಾಡಿ ” ಮೈಕ್ರೋಸಾಫ್ಟ್ ಸ್ಥಗಿತದಿಂದ ನಮ್ಮ ವ್ಯವಸ್ಥೆಗಳಿಗೆ ತೊಂದರೆ ಆಗಿವೆ. ಇದು ಇತರ ಕಂಪನಿಗಳ ಮೇಲೂ ಪರಿಣಾಮ ಬೀರುತ್ತಿದೆ. ಬುಕಿಂಗ್, ಚೆಕ್-ಇನ್, ನಿಮ್ಮ ಬೋರ್ಡಿಂಗ್ ಪಾಸ್ ಮತ್ತು ​ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ಸ್ಪೈಸ್ ಜೆಟ್ ಸಂಸ್ಥೆ, ನಾವು ಪ್ರಸ್ತುತ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ತಂಡವು ಕೆಲಸ ಮಾಡುತ್ತಿದೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಸಮಸ್ಯೆ ಪರಿಹರಿಸಿದ ನಂತರ ವಿಷಯ ತಿಳಿಸುತ್ತೇವೆ ಎಂದು ಹೇಳಿದೆ.

ಏರ್​ ಇಂಡಿಯಾ ಪ್ರತಿಕ್ರಿಯಿಸಿ, ಪ್ರಸ್ತುತ ಮೈಕ್ರೋಸಾಫ್ಟ್ ಸ್ಥಗಿತದಿಂದಾಗಿ ನಮ್ಮ ಡಿಜಿಟಲ್ ವ್ಯವಸ್ಥೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿವೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಸಂದರ್ಭಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಿ ಎಂದಿದೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ಏರ್ ಇಂಡಿಯಾ ಎಕ್ಸ್​​ಪ್ರೆಸ್​ “ಡಿಜಿಟಲ್ ಸಮಸ್ಯೆಗಳು ಜಾಗತಿಕವಾಗಿ ಅನೇಕ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿವೆ. ದಯವಿಟ್ಟು ನಿಮ್ಮ ಪ್ರಯಾಣವನ್ನು ಯೋಜಿಸಿ ಎಂದಿದೆ.

ಆಕಾಸಾ ಏರ್​​, ನಮ್ಮ ಸೇವಾ ಪೂರೈಕೆದಾರರೊಂದಿಗಿನ ಮೂಲಸೌಕರ್ಯ ಸಮಸ್ಯೆಗಳಿಂದಾಗಿ, ಬುಕಿಂಗ್, ಚೆಕ್-ಇನ್ ಮತ್ತು ಬುಕಿಂಗ್ ಸೇವೆಗಳನ್ನು ನಿರ್ವಹಿಸುವುದು ಸೇರಿದಂತೆ ನಮ್ಮ ಕೆಲವು ಆನ್ಲೈನ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.

ವಿಸ್ತಾರಾ ಏರ್​ಲೈನ್ಸ್ “ನಮ್ಮ ಸೇವಾ ಪೂರೈಕೆದಾರರು ಎದುರಿಸಿದ ಜಾಗತಿಕ ಸ್ಥಗಿತದಿಂದಾಗಿ ನಮ್ಮ ಕಾರ್ಯಾಚರಣೆಗಳಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಸಾಧ್ಯವಾದಷ್ಟು ಬೇಗ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ಹೇಳದೆ.

Continue Reading
Advertisement
Ravindra Jadeja
ಕ್ರಿಕೆಟ್13 mins ago

Ravindra Jadeja: ಟೀಮ್​ ಇಂಡಿಯಾ ಪರ ಜಡೇಜಾ ಇನ್ನು ಏಕದಿನ ಆಡುವುದು ಅನುಮಾನ; ಕಾರಣವೇನು?

Bangladesh protests
ವಿದೇಶ15 mins ago

Bangladesh Protests: ಬಾಂಗ್ಲಾದಲ್ಲಿ ನಿಲ್ಲದ ಹಿಂಸಾಚಾರ; 1000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್‌; ಸಾವಿನ ಸಂಖ್ಯೆ 115ಕ್ಕೆ ಏರಿಕೆ

Star suvarna Ravi Shankar entered television suvarna grahamanthri
ಕಿರುತೆರೆ25 mins ago

Star Suvarna: `ಸುವರ್ಣ ಗೃಹಮಂತ್ರಿ’ಯ ಸಾರಥಿಯಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ ನಟ ರವಿಶಂಕರ್

Paris Olympics 2024
ಕ್ರೀಡೆ33 mins ago

Paris Olympics 2024 : ಒಲಿಂಪಿಕ್ಸ್​ಗೆ ತೆರಳಿರುವ ಭಾರತದ ಹಿರಿಯ ಮತ್ತು ಕಿರಿಯ ಸ್ಪರ್ಧಿಗಳು ಯಾರು ಗೊತ್ತೇ? ಇಲ್ಲಿದೆ ಅವರ ವಿವರ

Union Budget 2024
ದೇಶ47 mins ago

Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತರಿಗೆ ರಿಲೀಫ್?

Kanguva Movie Suriya to have 3 different looks in Siva
ಕಾಲಿವುಡ್53 mins ago

Kanguva Movie: ʻಕಂಗುವʼ ಚಿತ್ರದಲ್ಲಿ ಮೂರು ಅವತಾರಗಳಲ್ಲಿ ಮಿಂಚಲಿದ್ದಾರಂತೆ ಸೂರ್ಯ

Building Collapsed
ದೇಶ59 mins ago

Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ

Opposition Party leader R Ashok pressmeet about Valmiki Development Corporation scam
ಕರ್ನಾಟಕ1 hour ago

R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

King Cobra Rescue
ವೈರಲ್ ನ್ಯೂಸ್1 hour ago

King Cobra Rescue: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ

ಕ್ರೀಡೆ1 hour ago

Mohammed Shami: ಪಾಕ್​ ಮಾಜಿ ನಾಯಕ ಇಂಜಮಾಮ್ ಬೆಂಡೆತ್ತಿದ ಮೊಹಮ್ಮದ್​ ಶಮಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌