GST for hostel rent : ದುಬಾರಿಯಾಗಲಿದೆ ಹಾಸ್ಟೆಲ್‌, ಪಿಜಿ ಬಾಡಿಗೆ Vistara News

ವಾಣಿಜ್ಯ

GST for hostel rent : ದುಬಾರಿಯಾಗಲಿದೆ ಹಾಸ್ಟೆಲ್‌, ಪಿಜಿ ಬಾಡಿಗೆ

GST for hostel rent ವಿದ್ಯಾರ್ಥಿಗಳಿಗೆ ಮುಂಬರುವ ದಿನಗಳಲ್ಲಿ ಹಾಸ್ಟೆಲ್‌, ಪಿಜಿ ಬಾಡಿಗೆ ದುಬಾರಿಯಾಗಲಿದೆ. ಕಾರಣವೇನು? ಇಲ್ಲಿದೆ ವಿವರ.

VISTARANEWS.COM


on

hostel room
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ವಿದ್ಯಾರ್ಥಿಗಳಿಗೆ ಹಾಸ್ಟೆಲ್‌, ಪಿಜಿ ಬಾಡಿಗೆ ಮತ್ತಷ್ಟು ದುಬಾರಿಯಾಗಲಿದೆ. (GST for hostel rent) ಏಕೆಂದರೆ ಹಾಸ್ಟೆಲ್‌, ಪಿಜಿ ಬಾಡಿಗೆ ಮೇಲೆ 12% ಜಿಎಸ್‌ಟಿ ಅನ್ವಯವಾಗುತ್ತದೆ ಎಂದು ಅಥಾರಿಟಿ ಆಫ್‌ ಅಡ್ವಾನ್ಸ್‌ ರೂಲಿಂಗ್‌ ( Authority of Advance Ruling ) ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆದೇಶಿಸಿದೆ.

ಅಥಾರಿಟಿ ಆಫ್‌ ಅಡ್ವಾನ್ಸ್‌ ರೂಲಿಂಗ್‌ನ (AAR) ಬೆಂಗಳೂರು ಪೀಠವು, ಹಾಸ್ಟೆಲ್‌ ಮತ್ತು ಪಿಜಿಗಳು ವಸತಿ ಘಟಕಗಳಲ್ಲ, ಆದ್ದರಿಂದ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗದು (Goods and Services Tax-GST) ಎಂದು ತಿಳಿಸಿದೆ. 2022ರ ಜುಲೈ 17ರ ತನಕ ದಿನಕ್ಕೆ 1000 ರೂ. ಬಾಡಿಗೆ ಇರುವ ಹಾಸ್ಟೆಲ್‌, ಕ್ಲಬ್‌, ಪಿಜಿಗಳಿಗೆ ಜಿಎಸ್‌ಟಿ ಅನ್ವಯವಾಗುತ್ತಿತ್ತು.

ವಸತಿ ಘಟಕಗಳು ಎಂದರೆ ಶಾಶ್ವತವಾಗಿ ನೆಲೆಸಲು ಇರುವಂಥವುಗಳು. ಅವುಗಳಲ್ಲಿ ಗೆಸ್ಟ್‌ ಹೌಸ್‌, ಲಾಡ್ಜ್‌ ಇತ್ಯಾದಿಗಳು ಇರುವುದಿಲ್ಲ ಎಂದು ಎಎಆರ್‌ ತಿಳಿಸಿದೆ. ಎಎಆರ್‌ನ ಲಖನೌ ಪೀಠವು ಪ್ರಕರಣವೊಂದರಲ್ಲಿ, ದಿನಕ್ಕೆ 1000 ರೂ.ಗಿಂತ ಕಡಿಮೆ ಬಾಡಿಗೆಯ ಹಾಸ್ಟೆಲ್‌ ಬಾಡಿಗೆ ಮೇಲೆ ಕೂಡ ಜಿಎಸ್‌ ಟಿ ಅನ್ವಯವಾಗುತ್ತದೆ ಎಂದು ತಿಳಿಸಿದೆ. ಆದ್ದರಿಂದ 2022ರ ಜುಲೈ 18 ರಿಂದ ಈ ಬದಲಾವಣೆ ಜಾರಿಯಾಗಿದೆ. ಹೀಗಾಗಿ ಹಾಸ್ಟೆಲ್‌, ಪಿಜಿ ಖರ್ಚು ವೆಚ್ಚ ದುಬಾರಿಯಾಗುವ ನಿರೀಕ್ಷೆ ಇದೆ.

ಎಎಂಆರ್‌ಜಿ & ಅಸೋಸಿಯೇಟ್ಸ್‌ನ ಹಿರಿಯ ಪಾಲುದಾರ ರಜತ್‌ ಮೋಹನ್‌, ವಿದ್ಯಾರ್ಥಿಗಳ ಹಾಸ್ಟೆಲ್‌, ಪಿಜಿ ಬಾಡಿಗೆ ಮೇಲೆ 12% ಜಿಎಸ್‌ಟಿ ಎಂದರೆ ಭಾರತೀಯ ಕುಟುಂಬಗಳಿಗೆ ದುಬಾರಿಯಾದೀತು ಎಂದು ಹೇಳಿದ್ದಾರೆ. ಶಿಕ್ಷಣ ವ್ಯವಸ್ಥೆಗೆ ಪೂರಕವಾಗಿರುವ ಹಾಸ್ಟೆಲ್‌, ಪಿಜಿಗಳ ವೆಚ್ಚದ ಮೇಲೆ ಜಿಎಸ್‌ಟಿ ಹೊರೆ ಇಳಿಸಲು ಜಿಎಸ್‌ಟಿ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳುವುದು ಉತ್ತಮ ಎನ್ನುತ್ತಾರೆ ತಜ್ಞರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

Raja Marga Column : ಅಮ್ಮೆಂಬಳ ಸುಬ್ಬ ರಾವ್‌ ಪೈ ಅವರು ಕೆನರಾ ಬ್ಯಾಂಕ್‌ ಮತ್ತು ಕೆನರಾ ವಿದ್ಯಾ ಸಂಸ್ಥೆಗಳ ಸ್ಥಾಪಕರು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ, ಅವರು ಅದನ್ನು ಹೇಗೆ ಕಟ್ಟಿದರು ಅನ್ನುವುದು ತುಂಬಾ ಇಂಟ್ರೆಸ್ಟಿಂಗ್‌.

VISTARANEWS.COM


on

Canara Bank Ammembala Subbarao Pai
Koo
RAJAMARGA

ಅಮ್ಮೆಂಬಳ ಸುಬ್ಬರಾವ್ ಪೈ (Ammembala Subbarao Pai) ಅವರು ಬ್ಯಾಂಕಿಂಗ್ ವ್ಯವಸ್ಥೆಗೆ (Banking System) ಭಾರೀ ಸ್ಫೂರ್ತಿಯನ್ನು ನೀಡಿದ ಕೆನರಾ ಬ್ಯಾಂಕನ್ನು (Canara Bank) ದೇಶಕ್ಕೆ ಕೊಡುಗೆಯಾಗಿ ನೀಡಿದವರು. ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ಇಂದು ಭಾರೀ ಕೀರ್ತಿಯನ್ನು ಪಡೆದಿರುವ ಮಂಗಳೂರಿನ ಕೆನರಾ ವಿದ್ಯಾಸಂಸ್ಥೆಗಳನ್ನು (Canara Education Institutes) ಸಮರ್ಪಣೆ ಮಾಡಿದವರು (Raja Marga Column).

ಅಮ್ಮೆಂಬಳ ಸುಬ್ಬರಾವ್ ಪೈ ಅವರು 1852ರ ಇಸವಿಯ ನವೆಂಬರ್ 19ರಂದು ಮಂಗಳೂರಿನ ಹತ್ತಿರ ಇರುವ ಮೂಲ್ಕಿಯಲ್ಲಿ ಜನಿಸಿದರು. ಅವರ ತಂದೆ ಉಪೇಂದ್ರ ಪೈ ಅವರು ಮುನ್ಸಿಫರ ಕೋರ್ಟನಲ್ಲಿ ಜನಪ್ರಿಯ ವಕೀಲರಾಗಿದ್ದರು.

ಮಂಗಳೂರಿನ ಕನ್ನಡ ಶಾಲೆಯಲ್ಲಿ ಓದಿ ಎಫ್.ಎ ಪರೀಕ್ಷೆ ಮುಗಿಸಿದ ನಂತರ ಸುಬ್ಬರಾವ್ ಪೈ ಅವರು ಮದ್ರಾಸಿಗೆ ತೆರಳಿ ಪದವಿ ಮತ್ತು ಕಾನೂನು ಪದವಿಗಳನ್ನು ಪಡೆದರು. ಅಲ್ಲಿ ಅವರಿಗೆ ದೊರೆತ ಜಸ್ಟೀಸ್ ಹಾಲೋವೇ ಎಂಬ ಶಿಕ್ಷಕರ ವ್ಯಕ್ತಿತ್ವವು ಅವರ ಮೇಲೆ ಭಾರೀ ಪ್ರಭಾವ ಬೀರಿತು. ‘ಸ್ವಂತಕ್ಕಿಂತ ಸಮಾಜಕ್ಕೆ ಹೆಚ್ಚು’ ಎಂಬ ಕಲ್ಪನೆ ಕೊಟ್ಟದ್ದೇ ಅವರು.

1876ರಲ್ಲಿ ತಮ್ಮ ತಂದೆಯವರು ನಿಧನ ಆದ ಕಾರಣದಿಂದ ಮಂಗಳೂರಿಗೆ ಹಿಂದಿರುಗಿದ ಸುಬ್ಬರಾವ್ ಪೈಯವರು ಉತ್ತಮವಾಗಿ ವಕೀಲಿ ವೃತ್ತಿ ನಡೆಸುತ್ತಿದ್ದರು. ತಮಗೆ ದುಡ್ಡು ಬಾರದಿದ್ದರೂ ಚಿಂತೆಯಿಲ್ಲ ಎಂಬ ಧೋರಣೆ ಅವರದ್ದು. ಅದಕ್ಕಾಗಿ ಆದಷ್ಟೂ ಕೋರ್ಟಿನ ಹೊರಗೇ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಅವರ ಪ್ರಯತ್ನ ಜಾರಿಯಲ್ಲಿ ಇತ್ತು. ಅವರಿಗೆ ದುಡ್ಡು ಆದ್ಯತೆ ಆಗಿರಲಿಲ್ಲ.

ಕೆನರಾ ವಿದ್ಯಾಸಂಸ್ಥೆಗಳ ಸ್ಥಾಪನೆ

1891ರ ಹೊತ್ತಿಗೆ ಶಿಕ್ಷಕರಾಗಿದ್ದ ಅವರ ಕೆಲವು ಸ್ನೇಹಿತರು ಮಂಗಳೂರಿನಲ್ಲಿ ಉತ್ತಮ ಶಾಲೆಗಳ ಕೊರತೆಯನ್ನು ಪ್ರಸ್ತಾಪಿಸಿದರು. ಆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅವರು ತುಂಬಾ ಕಾಳಜಿಯನ್ನು ವಹಿಸಿ ಕೆನರಾ ವಿದ್ಯಾ ಸಂಸ್ಥೆಗಳನ್ನು ಪ್ರಾರಂಭಿಸಿದರು. ಮಂಗಳೂರಿನ ಕೇಂದ್ರ ಭಾಗದಲ್ಲಿ ಅವರ ತಂದೆ ಉಪೇಂದ್ರ ಪೈ ಅವರು ಉಚಿತವಾಗಿ ಕೊಟ್ಟ 22 ಎಕರೆ ಜಾಗದಲ್ಲಿ ಇಂದು ಕೆನರಾ ವಿದ್ಯಾಸಂಸ್ಥೆಗಳು ತಲೆ ಎತ್ತಿ ನಿಂತಿರುವುದನ್ನು ನೋಡುವುದೇ ಚಂದ. ಆ ವಿದ್ಯಾಸಂಸ್ಥೆಯಲ್ಲಿ ಇಂದು ಸಾವಿರಾರು ವಿದ್ಯಾರ್ಥಿಗಳು ಕ್ವಾಲಿಟಿ ಶಿಕ್ಷಣ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಯಾವಾಗಲೂ ಹೇಳುತ್ತಿದ್ದ ಮುಖ್ಯವಾದ ಮಾತು – ನಿಮ್ಮ ಗುರಿಗಳ ಮೇಲೆ ಫೋಕಸ್ ಮಾಡಿ. ಆಗ ಲಾಭವು ನಿಮ್ಮನ್ನು ಅನುಸರಿಸಿಕೊಂಡು ಬರುತ್ತದೆ.

ಅದಾದ ನಂತರ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ 1894ರಲ್ಲಿ ಕೆನರಾ ಹೆಣ್ಣು ಮಕ್ಕಳ ಹೈಸ್ಕೂಲನ್ನು ಕೂಡ ಅವರು ತೆರೆದರು. ಅಂದಿನ ದಿನಗಳಲ್ಲಿ ಹೆಣ್ಣುಮಕ್ಕಳ ಶಿಕ್ಷಣದ ಬಗೆಗೆ ಸಮಾಜದಲ್ಲಿ ಪ್ರೋತ್ಸಾಹದ ವಾತಾವರಣ ಇರಲಿಲ್ಲ. ಆದ್ದರಿಂದ ಕೆನರಾ ವಿದ್ಯಾಸಂಸ್ಥೆಯ ಸ್ಥಾಪನೆಯು ಕ್ರಾಂತಿಕಾರಕ ಹೆಜ್ಜೆಯೇ ಆಗಿತ್ತು.

ಮುಂದೆ ಕೆನರಾ ವಿದ್ಯಾಸಂಸ್ಥೆಗಳು ಭಾರೀ ದೊಡ್ಡ ಹೆಮ್ಮರ ಆಗಿ ಬೆಳೆದು ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡುತ್ತಾ ಮುಂದೆ ಸಾಗಿವೆ. ಶತಮಾನೋತ್ಸವ ಕಂಡಿವೆ.

ಹೆಣ್ಣುಮಕ್ಕಳ ವಿದ್ಯಾಭ್ಯಾಸದ ವಿಷಯದಲ್ಲಿ ಅಂದಿನ ದಿನಗಳಲ್ಲಿ ನಿರುತ್ಸಾಹದ ವಾತಾವರಣವನ್ನು ಕಂಡಾಗ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಕಂಡುಹಿಡಿದ ಪರಿಹಾರವು ಅದ್ಭುತವಾಗಿಯೇ ಇತ್ತು. ಅದು ಉಳಿತಾಯ ಪ್ರಜ್ಞೆ.

ಹಿಡಿಯಕ್ಕಿಯಿಂದ ಆರಂಭ ಆಯಿತು ಕೆನರಾ ಬ್ಯಾಂಕ್!

ತಮ್ಮ ಹೆಣ್ಣು ಮಕ್ಕಳಿಗೆ ಓದು ಬರಹ ಬೇಕು ಎಂದು ಆಸೆ ಪಡುವ ತಾಯಿಯರು ಪ್ರತೀದಿನ ‘ಹಿಡಿ ಅಕ್ಕಿ ಉಳಿಸಿ’ ಎಂಬ ಅಭಿಯಾನದ ಮೂಲಕ ಅಮ್ಮೆಂಬಳ ಪೈಯವರು ಜನರಲ್ಲಿ ಜಾಗೃತಿಯನ್ನು ಮೂಡಿಸಿದರು. ಇದೇ ಉಳಿತಾಯದ ಶ್ರೇಷ್ಠ ಚಿಂತನೆಯು ಮುಂದೆ ಯಶಸ್ವಿಯಾಗಿ ಅವರಿಂದ ಹುಟ್ಟಿದ್ದು ‘ಹಿಂದೂ ಪರ್ಮನೆಂಟ್ ಫಂಡ್ʼ ಎಂಬ ಹಣಕಾಸು ಸಂಸ್ಥೆ. ಇದೇ ಮುಂದೆ ಕೆನರಾ ಬ್ಯಾಂಕ್ ಆಯಿತು.

‘ಉತ್ತಮ ಬ್ಯಾಂಕ್ ಎನ್ನುವುದು ಸಮಾಜದ ಆರ್ಥಿಕ ಶಕ್ತಿಯ ಕೇಂದ್ರ ಮಾತ್ರವಲ್ಲ, ಅದು ಸಾಮಾನ್ಯ ಜನರ ಆರ್ಥಿಕ ಸ್ಥಿತಿಗತಿಗಳನ್ನು ಉತ್ತಮಪಡಿಸುವ ಜವಾಬ್ಧಾರಿಯನ್ನು ತನ್ನ ಮೇಲಿರಿಸಿಕೊಂಡಿದೆ’ ಎಂಬುದು ಅಮ್ಮೆಂಬಳ ಸುಬ್ಬರಾವ್ ಪೈ ಅವರು ಬಲವಾಗಿ ನಂಬಿದ ಧ್ಯೇಯ ಆಗಿತ್ತು. ಲಾಭದ ಗಳಿಕೆಗಿಂತ ಜನಸಾಮಾನ್ಯರ ಆರ್ಥಿಕ ಸಬಲೀಕರಣವು ಅವರ ಉದ್ದೇಶವಾಗಿತ್ತು.

ಬ್ರಿಟಿಷ್ ಬ್ಯಾಂಕುಗಳ ತಾರತಮ್ಯದ ವಿರುದ್ಧ ಸಿಡಿದು ನಿಂತ ಕೆನರಾ ಬ್ಯಾಂಕ್

1906ರಲ್ಲಿ ಕೆನರಾ ಬ್ಯಾಂಕ್ ಸ್ಥಾಪನೆಯು ಆಗಿನ ಕಾಲದಲ್ಲಿ ಭಾರೀ ಸಂಚಲನವನ್ನು ಮೂಡಿಸಿದ್ದು ಹೇಗೆ?

ಅದು ಶತಮಾನದ ಆರಂಭದ ದಶಕ. ಭಾರತದಲ್ಲಿ ಆಗ ಬ್ರಿಟನ್‌ ರಾಣಿಯ ಆಡಳಿತ. ಮಂಗಳೂರಿನಲ್ಲಿ ಆಗ ಇದ್ದದ್ದು ಬ್ರಿಟಿಷರಿಗೆ ಸೇರಿದ ಮದ್ರಾಸ್‌ ಬ್ಯಾಂಕಿನ ಶಾಖೆಯೊಂದೇ! ಸಂಪೂರ್ಣವಾಗಿ ಬ್ರಿಟಿಷ್‌ ಅಧಿಕಾರಿಗಳೇ ತುಂಬಿದ್ದ ಈ ಬ್ಯಾಂಕ್‌ನಲ್ಲಿ ಭಾರತೀಯರು ಕಾರಕೂನರ ಮತ್ತು ಜವಾನನ ಕೆಲಸಕ್ಕೆ ಮಾತ್ರ ನೇಮಕ ಆಗುತ್ತಿದ್ದರು. ಆ ಬ್ಯಾಂಕ್‌ ಕೇವಲ ಶ್ರೀಮಂತರತ್ತ ಮಾತ್ರ ಮುಖವನ್ನು ಮಾಡಿತ್ತು. ಆದರೆ ಅದು ವಿಧಿಸುತ್ತಿದ್ದ ಬಡ್ಡಿ ಮಾತ್ರ ವಿಪರೀತ ಪ್ರಮಾಣದ್ದಾಗಿತ್ತು. ಬಡವರು ಬ್ಯಾಂಕಿನ ಒಳಗೆ ಬರಲು ಸಾಧ್ಯವೇ ಇರಲಿಲ್ಲ!

Ammembala Subbarao pai Canara Bank

ಜನ ಸಾಮಾನ್ಯರು ತಮ್ಮ ಕಠಿಣ ದುಡಿಮೆಯ ಹಣವನ್ನು ಸುರಕ್ಷಿತವಾಗಿಡಲು ಪಡುತ್ತಿದ್ದ ಕಷ್ಟಗಳು, ಸಂಕಷ್ಟದ ವೇಳೆ ಸಾಲಕ್ಕಾಗಿ ಅಲೆದಾಡುತ್ತಿದ್ದ ಕಷ್ಟವನ್ನು ನೋಡಿ ಸುಬ್ಬರಾವ್ ಪೈ ಅವರು ಭಾರೀ ಚಿಂತನೆಗೆ ತೊಡಗಿದರು. ಬಡವರ ಕಷ್ಟಗಳಿಗೆ ಅವರ ಮನಸ್ಸು ಕರಗಿತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಣದಿಂದಲೇ ನಿಧಿ ಸ್ಥಾಪಿಸಿ, ಉಳಿತಾಯದ ಅವಕಾಶ ಮತ್ತು ಸಾಲವನ್ನು ನೀಡುವುದು ಅವರ ಉದೇಶ ಆಗಿತ್ತು.

ವಿಶೇಷವಾಗಿ ಶಿಕ್ಷಣದ ಸಾಲ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಕೆನರಾ ಬ್ಯಾಂಕಿನ ಆದ್ಯತೆ ಆಗುವಂತೆ ಅವರು ಮಾಡಿದರು. ಹೆಣ್ಣುಮಕ್ಕಳ ಶೈಕ್ಷಣಿಕ ಸಾಲವನ್ನು ಆದ್ಯತೆಯ ಸಾಲವಾಗಿ ಅವರು ಘೋಷಣೆ ಮಾಡಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ‘ಆದ್ಯತೆಯ ಸಾಲ’ ನೀಡಿದ ದೇಶದ ಮೊದಲ ಬ್ಯಾಂಕು ಎಂಬ ಕೀರ್ತಿಯು ಕೂಡ ಕೆನರಾ ಬ್ಯಾಂಕಿಗೆ ದೊರೆಯಿತು! ಇದೆಲ್ಲವೂ ಅಮ್ಮೆಂಬಳ ಸುಬ್ಬರಾವ್ ಪೈ ಅವರ ದೂರದೃಷ್ಟಿಯ ಸಂಕೇತವೇ ಆಗಿದೆ.

ಕೆನರಾ ಬ್ಯಾಂಕಿನ ನಿಧಿಯನ್ನು ಸಂಗ್ರಹಿಸಲು ಸುಬ್ಬರಾವ್ ಪೈ ಅವರು ಹಾಕಿದ ಶ್ರಮವು ಅಷ್ಟಿಷ್ಟಲ್ಲ. ಅವರು ಎತ್ತಿನ ಗಾಡಿಯಲ್ಲಿ ಊರೂರು ಸುತ್ತಿ ತಲಾ 50 ರೂ. ಬೆಲೆಯ ಎರಡು ಸಾವಿರ ಷೇರು ಪತ್ರಗಳನ್ನು ಮಾರಿ ನಿಧಿಯನ್ನು ಸಂಗ್ರಹಿಸಿದರು! ಹೀಗೆ ಸುಬ್ಬರಾವ್ ಪೈಯವರ ಘನ ಅಧ್ಯಕ್ಷತೆಯಲ್ಲಿ 1906ರಲ್ಲಿ ಆರಂಭ ಆದ ಬ್ಯಾಂಕು ಇಂದು ದೇಶ, ವಿದೇಶಗಳಲ್ಲಿ ಅವರು ಮಾಡಿರುವ ಶ್ರೇಷ್ಠವಾದ ಕಾಯಕವನ್ನು ಸಾರುತ್ತಿದೆ. ಆ ಬ್ಯಾಂಕ್ ಸ್ಥಾಪನೆಯಿಂದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಹೆಸರು ಶಾಶ್ವತ ಸ್ಥಾನ ಪಡೆಯಿತು. ಇಂದು ಕೆನರಾ ಬ್ಯಾಂಕ್ ಭಾರತದ ಅತೀ ಶ್ರೇಷ್ಠವಾದ ಬ್ಯಾಂಕುಗಳ ಸಾಲಿನಲ್ಲಿ ಸ್ಥಾನ ಪಡೆದಿದೆ.

ಅಮ್ಮೆಂಬಳ ಪೈ ಅವರು 1909ರ ಜುಲೈ 25ರಂದು ಕೇವಲ ತಮ್ಮ 57ನೆಯ ವಯಸ್ಸಿನಲ್ಲಿ ನಿಧನರಾದರು. ಆದರೆ ಅವರು ಸ್ಥಾಪನೆ ಮಾಡಿದ ಸಂಸ್ಥೆಗಳು ಮತ್ತು ಶಾಲೆಗಳು ಮುಖ್ಯವಾದ ಸಾಮಾಜಿಕ ಕೊಡುಗೆಯಾಗಿ ಉಳಿದವು. ಹಗಲಿರುಳು ಬಡಜನತೆಗಾಗಿ ಮಾಡಿದ ಕಾರ್ಯಗಳು ಅವರನ್ನು ಚಿರಂಜೀವಿ ಆಗಿ ಮಾಡಿದವು.

ಇದನ್ನೂ ಓದಿ: Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

ಮೌಢ್ಯಗಳ ವಿರುದ್ಧ ಹೋರಾಟ

ಅಮ್ಮೆಂಬಳ ಸುಬ್ಬರಾವ್ ಪೈ ಅವರು ಆಗಿನ ಕಾಲಕ್ಕೆ ತುಂಬಾ ಅಡ್ವಾನ್ಸ್ ಆಗಿದ್ದರು. ತನ್ನದೇ ಸಮಾಜದ ಒಬ್ಬ ಮಹಿಳೆಯು ಅಂತರ್ಜಾತೀಯ ಮದುವೆಯ ಕಾರಣಕ್ಕೆ ಸಾಮಾಜಿಕವಾದ ಬಹಿಷ್ಕಾರಕ್ಕೆ ಒಳಗಾದಾಗ ತುಂಬಾ ನೊಂದರು. ಮುಂದೆ ಅದೇ ಮಹಿಳೆ ನಿಧನರಾದಾಗ ಅವರ ಕೊನೆಯ ಇಚ್ಛೆಯಂತೆ ಪೈಯವರೇ ಮುಂದೆ ನಿಂತು ತನ್ನ ಗೆಳೆಯರ ಸಹಕಾರ ಪಡೆದು ಹಿಂದೂ ಸಂಪ್ರದಾಯದ ಪ್ರಕಾರ ಅವರ ಅಂತಿಮ ವಿಧಿಗಳನ್ನು ಪೂರ್ತಿ ಮಾಡಿದರು. ಈ ಕಾರಣಕ್ಕೆ ಅವರು ಒಂದು ಪ್ರಬಲ ವರ್ಗದ ಜನರ ತೀವ್ರ ಪ್ರತಿರೋಧ ಎದುರಿಸಬೇಕಾಯಿತು. ಆದರೆ ಪೈಯವರು ಅವುಗಳಿಗೆ ಕ್ಯಾರೇ ಅನ್ನಲಿಲ್ಲ!

ಮಂಗಳೂರಿನಲ್ಲಿ ತನ್ನದೇ ಗೆಳೆಯರ ಬಳಗ ಕಟ್ಟಿಕೊಂಡು ಅಮ್ಮೆಂಬಳ ಪೈಯವರು ಮೌಢ್ಯಗಳ ವಿರುದ್ಧ ಭಾರೀ ಹೋರಾಟಗಳನ್ನು ನಡೆಸಿದರು. ಅವರೇ ಸ್ಥಾಪನೆ ಮಾಡಿದ ಕೆನರಾ ಬ್ಯಾಂಕಿನ ಉದ್ದೇಶಗಳಲ್ಲಿ ಮೌಢ್ಯಗಳ ವಿರುದ್ಧ ಹೋರಾಟ ಕೂಡ ಒಂದಾಗಿದೆ. ಶಿಕ್ಷಣ ಸಾಲಕ್ಕಾಗಿ ಬ್ಯಾಂಕ್ ಒಳಗೆ ಕಾಲಿಟ್ಟ ಯಾವುದೇ ಹುಡುಗಿಗೆ ಒಂದು ಕ್ಷಣ ಕೂಡ ಕಾಯಿಸದೆ ಸಾಲ ಕೊಡಬೇಕು ಎನ್ನುವುದು ಅವರು ಬ್ಯಾಂಕ್ ಅಧಿಕಾರಿಗಳಿಗೆ ಕೊಟ್ಟ ನಿರ್ದೇಶನ ಆಗಿತ್ತು. ಅದನ್ನು ಬ್ಯಾಂಕ್ ಇಂದು ಕೂಡ ಪಾಲಿಸುತ್ತಿದೆ.

ಅವರು ಸ್ಥಾಪನೆ ಮಾಡಿದ ಕೆನರಾ ಬ್ಯಾಂಕ್ ಮತ್ತು ಕೆನರಾ ವಿದ್ಯಾಸಂಸ್ಥೆಗಳು ಇರುವ ತನಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಹೆಸರು ಶಾಶ್ವತ ಆಗಿರುವುದು ಖಂಡಿತ.

Continue Reading

ದೇಶ

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸೋಮವಾರ ಷೇರು ಮಾರುಕಟ್ಟೆಯಲ್ಲಿ ಹೊಸ ಲವಲವಿಕೆ ಕಾಣಿಸಿದೆ. ಬಿಜೆಪಿ ಗೆಲುವಿಗೂ, ಷೇರು ಮಾರುಕಟ್ಟೆಗೆ ಏನು ಸಂಬಂಧ ಎಂಬುದಕ್ಕೆ ಉತ್ತರ ಇಲ್ಲಿದೆ.

VISTARANEWS.COM


on

Narendra Modi And Share Market
Koo

ಮುಂಬೈ: ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ (Assembly Election Results 2023) ಬೆನ್ನಲ್ಲೇ ದೇಶದ ಷೇರುಪೇಟೆಯಲ್ಲಿ (Stock Market) ಹೊಸ ಉತ್ಸಾಹ ಮೂಡಿದೆ. ಸೋಮವಾರ ನಿಫ್ಟಿ, ಸೆನ್ಸೆಕ್ಸ್‌ ದಾಖಲೆಯ ಏರಿಕೆ ಕಂಡಿದ್ದು, ಚುನಾವಣೆ ಫಲಿತಾಂಶವೇ ಇದಕ್ಕೆ ಕಾರಣ ಎಂದು ಷೇರುಪೇಟೆ ತಜ್ಞರು ತಿಳಿಸಿದ್ದಾರೆ. ಮತ್ತೊಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯವೂ ಸುಧಾರಿಸಿಕೊಂಡಿದೆ.

ಷೇರು ಮಾರುಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಭಾರಿ ಲವಲವಿಕೆ ಕಂಡುಬಂದಿದೆ. ಬಿಎಸ್‌ಇ ಸೆನ್ಸೆಕ್ಸ್‌ 877.43 ಪಾಯಿಂಟ್‌ಗಳ ಏರಿಕೆಯೊಂದಿಗೆ (ಶೇ.1.3%) 68,358.52 ಅಂಕಗಳೊಂದಿಗೆ ಸಾರ್ವಕಾಲಿಕ ಸಾಧನೆ ಮಾಡಿತು. ಇನ್ನು ನಿಫ್ಟಿಯೂ 284.80 ಅಂಕಗಳ ಏರಿಕೆಯೊಂದಿಗೆ (ಶೇ.1.41) 20,552.70 ಅಂಕಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ಗರಿಷ್ಠ ಪಾಯಿಂಟ್‌ಗಳ ದಾಖಲೆ ಬರೆಯಿತು.

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಡಾಲರ್‌ ಎದುರು ರೂಪಾಯಿ ಮೌಲ್ಯವು 6 ಪೈಸೆ ಸುಧಾರಣೆಯಾಗಿದೆ. ಇನ್ನು ಷೇರು ಮಾರುಕಟ್ಟೆಯಲ್ಲ ವಹಿವಾಟು ಆರಂಭವಾದ ಕೆಲವೇ ನಿಮಿಷಗಳಲ್ಲಿ ಹಲವು ಕಂಪನಿಗಳ ಮಾರುಕಟ್ಟೆ ಬಂಡವಾಳವು 4.09 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಬೆಳಗ್ಗೆಯ ಟ್ರೇಡಿಂಗ್‌ನಲ್ಲಿ ಅದಾನಿ ಗ್ರೂಪ್‌ ಕಂಪನಿಗಳು ಹೆಚ್ಚು ಲಾಭ ಗಳಿಸಿವೆ. ಹಾಗೆಯೇ, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ಎನ್‌ಟಿಪಿಸಿ ಹಾಗೂ ಲಾರ್ಸೆನ್‌ & ಟರ್ಬೊ ಕೂಡ ಹೆಚ್ಚಿನ ಲಾಭ ಗಳಿಸಿದವು.

ಷೇರು ಪೇಟೆಗೂ, ಚುನಾವಣೆಗೂ ಏನು ಸಂಬಂಧ?

ಚುನಾವಣೆ ಫಲಿತಾಂಶಕ್ಕೂ, ಷೇರುಪೇಟೆ ವಹಿವಾಟಿಗೂ ಸಂಬಂಧವಿದೆ ಎಂದು ಹೂಡಿಕೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಷೇರುಪೇಟೆಯು ಸ್ಥಿರ ಹಾಗೂ ಸುಧಾರಣೆ ಪರವಾಗಿರುವ ರಾಜಕಾರಣವನ್ನು ಬಯಸುತ್ತದೆ. ಮಾರುಕಟ್ಟೆ ದೃಷ್ಟಿಯಿಂದ ಚುನಾವಣೆ ಫಲಿತಾಂಶವು ನಿರೀಕ್ಷೆಗಿಂತ ಹೆಚ್ಚಾಗಿದೆ. ಬಿಜೆಪಿ ಗೆಲುವು ಸಾಧಿಸಿದ ಕಾರಣ ಷೇರು ಮಾರುಕಟ್ಟೆಯಲ್ಲಿ 500 ಪಾಯಿಂಟ್‌ಗಳ ಏರಿಕೆಯಾಗಿದೆ. ಇದೇ ಬೆಳವಣಿಗೆ ಮುಂದುವರಿಯಲಿದೆ” ಎಂದು ಹೂಡಿಕೆ ತಜ್ಞ ವಿ.ಕೆ. ವಿಜಯ್‌ಕುಮಾರ್‌ ಅವರು ಪಿಟಿಐಗೆ ತಿಳಿಸಿದ್ದಾರೆ.

Rajastan BJP Win

ಇದನ್ನೂ ಓದಿ: PM Narendra Modi: 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ

ಮಧ್ಯಪ್ರದೇಶದಲ್ಲಿ ಒಟ್ಟು 230 ಕ್ಷೇತ್ರಗಳ ಪೈಕಿ ಬಿಜೆಪಿ 163, ಕಾಂಗ್ರೆಸ್‌ 66 ಹಾಗೂ ಒಬ್ಬ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ 199 ಕ್ಷೇತ್ರಗಳ ಪೈಕಿ ಬಿಜೆಪಿ 115, ಕಾಂಗ್ರೆಸ್‌ 69 ಹಾಗೂ 18 ಕ್ಷೇತ್ರಗಳು ಇತರೆ ಪಕ್ಷಗಳ ಪಾಲಾಗಿವೆ. ಛತ್ತೀಸ್‌ಗಢದಲ್ಲಿರುವ ಒಟ್ಟು 90 ಕ್ಷೇತ್ರಗಳ ಪೈಕಿ ಬಿಜೆಪಿ 54, ಕಾಂಗ್ರೆಸ್‌ 35 ಹಾಗೂ ಒಬ್ಬ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಮೂರೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

Gold Rate Today: ಬೆಂಗಳೂರಿನಲ್ಲಿ ಸೋಮವಾರ ಚಿನ್ನದ ಬೆಲೆ ದಿಢೀರನೆ ಜಾಸ್ತಿಯಾಗಿದೆ. ಹಾಗಾಗಿ, ಇಂದು ಚಿನ್ನ ಖರೀದಿಸುವವರಿಗೆ ಬೆಲೆಯು ತುಸು ಹೆಚ್ಚೇ ಹೊರೆಯಾಗಲಿದೆ.

VISTARANEWS.COM


on

Ashika Ranganath
Koo

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಡಿಸೆಂಬರ್‌ 4) (Gold Rate Today) ಚಿನ್ನದ ಬೆಲೆ ಏಕಾಏಕಿ ಜಾಸ್ತಿಯಾಗಿದೆ. ನಗರದಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 44 ರೂ. ಏರಿಕೆಯಾಗಿದೆ. ಇಂದರೊಂದಿಗೆ 22 ಕ್ಯಾರಟ್‌ನ ಒಂದು ಗ್ರಾಂಗೆ 5,885 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 6,420 ರೂ. ಆಗಿದೆ.

ಭಾನುವಾರ (ಡಿಸೆಂಬರ್‌ 3) ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. 22 ಕ್ಯಾರಟ್‌ನ ಚಿನ್ನವು ಗ್ರಾಂಗೆ 5,845 ರೂ. ಹಾಗೂ 24 ಕ್ಯಾರಟ್‌ನ ಚಿನ್ನದ ಬೆಲೆ ಒಂದು ಗ್ರಾಂಗೆ 6,380 ರೂ. ಇತ್ತು. ಶನಿವಾರ (ಡಿಸೆಂಬರ್‌ 2) ಹಾಗೂ ಶುಕ್ರವಾರ (ಡಿಸೆಂಬರ್‌ 1) ಕೂಡ ಬೆಲೆ ಏರಿಕೆಯಾಗಿತ್ತು. ಕೆಲ ದಿನಗಳಿಂದ ಚಿನ್ನದ ಬೆಲೆಯು ಸತತವಾಗಿ ಏರಿಕೆಯಾಗುತ್ತಿರುವ ಕಾರಣ ಖರೀದಿದಾರರ ಜೇಬಿಗೆ ಕತ್ತರಿ ಬೀಳುತ್ತಿದೆ.

gold rate

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲಾ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

ಇದನ್ನೂ ಓದಿ: Namma Metro : ಮೆಟ್ರೋದಲ್ಲಿ ಮಿಸ್‌ ಆದ ಚಿನ್ನದುಂಗುರ ಮರಳಿಸಿದ ಗೋಲ್ಡನ್‌ ಗರ್ಲ್ಸ್‌ !‌

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮನಿ-ಗೈಡ್

Money Guide: ಆಧಾರ್‌ ಅಪ್‌ಡೇಟ್‌ನಿಂದ ಎಫ್‌ಡಿ ಹೂಡಿಕೆವರೆಗೆ; ತಿಂಗಳಾಂತ್ಯಕ್ಕೆ ಮುಗಿಸಲೇಬೇಕಾದ ಕೆಲಸಗಳಿವು

Money Guide: ವರ್ಷದ ಕೊನೆಗೆ ಬಂದು ನಿಂತಿದ್ದೇವೆ. ಡಿಸೆಂಬರ್‌ 31ರೊಳಗೆ ಕೆಲವೊಂದು ಕರ್ತವ್ಯಗಳನ್ನು ಮಾಡಿ ಮುಗಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಆ ಕುರಿತಾದ ವಿವರ ಇಲ್ಲಿದೆ.

VISTARANEWS.COM


on

december
Koo

ಬೆಂಗಳೂರು: ವರ್ಷಾಂತ್ಯದ ಡಿಸೆಂಬರ್‌ ಮಾಸಕ್ಕೆ ಕಾಲಿಟ್ಟಿದ್ದೇವೆ. ಕೇಂದ್ರ ಸರ್ಕಾರ ಸೂಚಿಸಿದ ಒಂದಷ್ಟು ಕೆಲಸಗಳನ್ನು ಈ ತಿಂಗಳಾಂತ್ಯಕ್ಕೆ ಮಾಡಿ ಮುಗಿಸಲೇಬೇಕಾದ ಅನಿವಾರ್ಯತೆ ಇದೆ. ಇಲ್ಲದಿದ್ದರೆ ದಂಡ ಬೀಳಲಿದೆ. ಆಧಾರ್‌ ಕಾರ್ಡ್‌ ಅಪ್‌ಡೇಟ್‌ನಿಂದ ಹಿಡಿದು ಬ್ಯಾಂಕ್‌ ಲಾಕರ್‌ ಒಪ್ಪಂದ ನವೀಕರಣದವರೆಗೆ ಹಲವು ವಿಚಾರಗಳಿಗೆ ಕೇಂದ್ರ ಡಿಸೆಂಬರ್‌ 31ರ ವರೆಗೆ ಗಡುವು ನೀಡಿದೆ. ಅವಧಿ ಮೀರಿದರೆ ನಿಮ್ಮ ಜೇಬಿಗೆ ಕತ್ತರಿ ಬೀಳುವ ಜತೆಗೆ ಬಳಿಕ ಅದಕ್ಕಾಗಿ ಓಡಾಡುವ ಸಂಧಿಗ್ಥತೆಯೂ ಎದುರಾಗಬಹುದು. ಹೀಗಾಗಿ ಯಾವೆಲ್ಲ ಕರ್ತವ್ಯಗಳನ್ನು ಶೀಘ್ರ ಮುಗಿಸಬೇಕು ಎನ್ನುವುದನ್ನು ಮನಿಗೈಡ್‌ (Money Guide) ವಿವರಿಸಲಿದೆ.

ಆಧಾರ್‌ ಕಾರ್ಡ್‌ ನವೀಕರಣ

ಪ್ರಸ್ತುತ ಆಧಾರ್‌ ಕಾರ್ಡ್‌ ಪ್ರಮುಖ ದಾಖಲೆಯಾಗಿ ಬದಲಾಗಿದೆ. ಸರ್ಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆಯುವುದರಿಂದ ಹಿಡಿದು ಉದ್ಯೋಗಕ್ಕೆ ಅರ್ಜಿ ಸಲ್ಲಿಸುವವರೆಗೆ ಆಧಾರ್‌ ಕಾರ್ಡ್‌ ಬೇಕೇ ಬೇಕು. ಈ ಹಿಂದೆ ಸರ್ಕಾರ ಆಧಾರ್‌ ಕಾರ್ಡ್‌ ಮಾಡಿಸಿ 10 ವರ್ಷ ಪೂರೈಸಿದವರು ನವೀಕರಣ ಮಾಡಿಸಬೇಕು ಎಂದು ಸೂಚಿಸಿತ್ತು. ಯೂನಿಕ್‌ ಐಡೆಂಟಿಫಿಕೇಷನ್‌ ಅಥಾರಟಿ ಆಫ್‌ ಇಂಡಿಯಾ (Unique Identification Authority of India-UIDAI) ಉಚಿತವಾಗಿ ಆಧಾರ್‌ ಕಾರ್ಡ್‌ ನವೀಕರಿಸುವ ದಿನಾಂಕವನ್ನು 2023ರ ಡಿಸೆಂಬರ್‌ 31ರ ವರೆಗೂ ವಿಸ್ತರಿಸಿದೆ. ಈ ಅವಧಿಯಲ್ಲಿ ವಿಳಾಸ, ಫೋನ್ ಸಂಖ್ಯೆ, ಇಮೇಲ್ ವಿವರಗಳನ್ನು ಉಚಿತವಾಗಿ ನವೀಕರಿಸಬಹುದು ಎಂದು ಸೂಚಿಸಿತ್ತು. 2023ರ ಡಿಸೆಂಬರ್ 31ರ ನಂತರ ನೀವು ನವೀಕರಣಕ್ಕಾಗಿ ಶುಲ್ಕ ಪಾವತಿಸಬೇಕಾಗುತ್ತದೆ.

ಬ್ಯಾಂಕ್‌ ಲಾಕರ್‌ ಒಪ್ಪಂದದ ನವೀಕರಣ

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಈಗಿನ ಸೇಫ್‌ ಡಿಪಾಸಿಟ್‌ ಲಾಕರ್‌ಗಳ ಒಪ್ಪಂದಗಳನ್ನು ನವೀಕರಿಸಿಕೊಳ್ಳಲು ಬ್ಯಾಂಕ್‌ಗಳಿಗೆ (Bank locker agreement) ನೀಡಿದ್ದ ಗಡುವನ್ನು 2023ರ ಡಿಸೆಂಬರ್‌ 31ರ ತನಕ ವಿಸ್ತರಿಸಿತ್ತು. ಆರ್‌ಬಿಐ ಈ ಹಿಂದೆ 2021ರ ಆಗಸ್ಟ್‌ 18ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ, 2023ರ ಜನವರಿ 1ರೊಳಗೆ ಈಗಿನ ಸೇಫ್‌ ಡಿಪಾಸಿಟ್‌ ಲಾಕರ್‌ಗಳ ಒಪ್ಪಂದಗಳನ್ನು ನವೀಕರಿಸಬೇಕು ಎಂದು ಬ್ಯಾಂಕ್‌ಗಳಿಗೆ ಸೂಚಿಸಿತ್ತು. ಬಳಿಕ ಡಿಸೆಂಬರ್‌ 31ರ ತನಕ ನವೀಕರಿಸಿಕೊಳ್ಳಲು ಕಾಲಾವಕಾಶ ವಿಸ್ತರಿಸಿತ್ತು. ಹೊಸ ಲಾಕರ್ ಒಪ್ಪಂದಗಳು ಕೆಲವು ಪ್ರಮುಖ ಬದಲಾವಣೆಗಳನ್ನು ಹೊಂದಿದೆ. ಉದಾಹರಣೆಗೆ ಲಾಕರ್‌ ನಷ್ಟ ಅಥವಾ ಹಾನಿಯ ಸಂದರ್ಭದಲ್ಲಿ ಬ್ಯಾಂಕ್‌ಗಳು ಪಾವತಿಸಬೇಕಾದ ಪರಿಹಾರದ ಮೊತ್ತ ಹೆಚ್ಚಳ ಇತ್ಯಾದಿ.

ಡಿಮ್ಯಾಟ್ ಖಾತೆಗಳಿಗೆ ನಾಮನಿರ್ದೇಶನ ಸಲ್ಲಿಕೆ

ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್‌ ಬೋರ್ಡ್ ಆಫ್ ಇಂಡಿಯಾ (SEBI) ಡಿಮ್ಯಾಟ್ ಖಾತೆಗಳಿಗೆ ನಾಮನಿರ್ದೇಶನ ಅರ್ಜಿಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 31, 2023ರ ವರೆಗೆ ವಿಸ್ತರಿಸಿದೆ. ನಾಮನಿರ್ದೇಶನ ಅರ್ಜಿಯು ಮರಣದ ನಂತರ ಡಿಮ್ಯಾಟ್ ಸೆಕ್ಯುರಿಟಿಗಳನ್ನು ಯಾರು ಪಡೆಯಬೇಕು ಎಂಬುದನ್ನು ನಿರ್ಧರಿಸಲು ನೆರವಾಗುತ್ತದೆ.

ಇದನ್ನೂ ಓದಿ: Money Guide: 1.5 ಲಕ್ಷ ರೂ. ಹೂಡಿಕೆ ಮಾಡಿ 2.27 ಕೋಟಿ ರೂ. ಗಳಿಸಿ! ಯಾವುದು ಈ ಸ್ಕೀಂ?

ವಿಶೇಷ ಸ್ಥಿರ ಠೇವಣಿ(ಫಿಕ್ಸ್‌ಡ್‌ ಡೆಪಾಸಿಟ್‌)ಗಳಲ್ಲಿ ಹೂಡಿಕೆ

ಕೆಲವು ಬ್ಯಾಂಕ್‌ಗಳು 2023ರ ಡಿಸೆಂಬರ್‌ವರೆಗೆ ಹೆಚ್ಚಿನ ಬಡ್ಡಿದರಗಳೊಂದಿಗೆ ವಿಶೇಷ ಸ್ಥಿರ ಠೇವಣಿಗಳನ್ನು ನೀಡುತ್ತಿವೆ. ಅದಾಗ್ಯೂ ಈ ಠೇವಣಿಗಳಲ್ಲಿ ಹೂಡಿಕೆ ಮಾಡಲು ಗಡುವು ಇದೆ. ಉದಾಹರಣೆಗೆ ಇಂಡಿಯನ್ ಬ್ಯಾಂಕ್‌ನ ʼಇಂಡ್ ಸೂಪರ್ 400ʼ ಮತ್ತು ʼಇಂಡ್ ಸುಪ್ರೀಂ 300 ಡೇಸ್ʼ ಸ್ಥಿರ ಠೇವಣಿಗಳಲ್ಲಿ ಹೂಡಿಕೆ ಮಾಡಲು ಕೊನೆಯ ದಿನಾಂಕ ಡಿಸೆಂಬರ್ 31, 2023. ಜತೆಗೆ ಎಸ್‌ಬಿಐಯ ಅಮೃತ್ ಕಲಾಶ್ ಯೋಜನೆ ಕೂಡ ಡಿಸೆಂಬರ್ ಕೊನೆಯ ದಿನಕ್ಕೆ ಕೊನೆಯಾಗಲಿದೆ. ಈ ವರ್ಷದ ಫೆಬ್ರವರಿಯಲ್ಲಿ ಎಸ್‌ಬಿಐ ಪರಿಚಯಿಸಿದ್ದ ಅಮೃತ್‌ ಕಲಾಶ್‌ ಯೋಜನೆ ಆಗಸ್ಟ್‌ನಲ್ಲಿ ಮುಕ್ತಾಯವಾಗಲಿದೆ ಎಂದು ಈ ಹಿಂದೆ ಘೋಷಿಸಲಾಗಿತ್ತು. ಬಳಿಕ ದಿನಾಂಕವನ್ನು ಬ್ಯಾಂಕ್‌ ವಿಸ್ತರಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading
Advertisement
lokayukta raid in channakeshava
ಕರ್ನಾಟಕ5 mins ago

Lokayukta Raid: ರಾಜ್ಯದೆಲ್ಲೆಡೆ ಲೋಕಾಯುಕ್ತ ದಾಳಿ, ಅಧಿಕಾರಿಗಳಿಗೆ ಶಾಕ್‌, ಬೆಸ್ಕಾಂ ಇಇ ಮನೆಯಲ್ಲಿ ಕೋಟಿ ಕೋಟಿ ಪತ್ತೆ

David Warner
ಕ್ರಿಕೆಟ್14 mins ago

David Warner: ಮೋಸಗಾರನಿಗೆ ವಿದಾಯ ಪಂದ್ಯದ ಅಗತ್ಯವಿಲ್ಲ; ಮಿಚೆಲ್​ ಜಾನ್ಸನ್

sadghuru with students
ಅಂಕಣ58 mins ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ1 hour ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ2 hours ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ2 hours ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ2 hours ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌