Demat Accounts : ನಿಮ್ಮ ಡಿಮ್ಯಾಟ್‌ ಖಾತೆಗೆ ನಾಮಿನಿ ಮಾಡಿದ್ದೀರಾ, ಮಾರ್ಚ್‌ 31 ರ ಗಡುವು ತಪ್ಪಿದರೆ ಅಕೌಂಟ್‌ ಸ್ಥಗಿತ - Vistara News

ಪ್ರಮುಖ ಸುದ್ದಿ

Demat Accounts : ನಿಮ್ಮ ಡಿಮ್ಯಾಟ್‌ ಖಾತೆಗೆ ನಾಮಿನಿ ಮಾಡಿದ್ದೀರಾ, ಮಾರ್ಚ್‌ 31 ರ ಗಡುವು ತಪ್ಪಿದರೆ ಅಕೌಂಟ್‌ ಸ್ಥಗಿತ

ನಿಮ್ಮ ಡಿಮ್ಯಾಟ್‌ ಖಾತೆಗೆ ನಾಮಿನಿ ಯಾರು ಎಂಬುದನ್ನು ನಿರ್ದೇಶಿಸುವುದು ಮುಖ್ಯ. ಇದಕ್ಕಾಗಿ ಸೆಬಿ ಇದೇ ಮಾರ್ಚ್‌ 31ರ ಗಡುವನ್ನು (Demat Accounts) ನಿಗದಿಪಡಿಸಿದೆ. ವಿವರ ಇಲ್ಲಿದೆ.

VISTARANEWS.COM


on

stock trading
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನೀವು ನಿಮ್ಮ ಡಿಮ್ಯಾಟ್‌ ಖಾತೆಗೆ ನಾಮಿನಿ ಯಾರು ಎಂಬುದನ್ನು ಹೆಸರಿಸಿದ್ದೀರಾ? ಇಲ್ಲ ಎಂದಿದ್ದರೆ ಕೂಡಲೇ ಈ ಬಗ್ಗೆ ಗಮನಹರಿಸಿ. 2023ರ ಮಾರ್ಚ್‌ 31ರೊಳಗೆ ನೀವು ನಿಮ್ಮ ಡಿಮ್ಯಾಟ್‌ ಖಾತೆಗೆ ನಾಮಿನಿಯನ್ನು ನಿರ್ದೇಶಿಸದಿದ್ದರೆ, ಅಕೌಂಟ್‌ ಸ್ಥಗಿತವಾಗಲಿದೆ. ಮಾರುಕಟ್ಟೆ ನಿಯಂತ್ರಕ ಸೆಬಿಯು (sebi) ಈ ಹಿಂದೆ, 2022ರ ಮಾರ್ಚ್‌ಗೆ ಗಡುವನ್ನು ನಿಗದಿಪಡಿಸಿತ್ತು. ಅದನ್ನು ಮತ್ತೆ ಒಂದು ವರ್ಷ ವಿಸ್ತರಿಸಿತ್ತು. (Demat Accounts) ಹೀಗಿದ್ದರೂ, ನಾನಾ ವಲಯಗಳಿಂದ ಬೇಡಿಕೆಯನ್ನು ಪರಿಗಣಿಸಿ ಗಡುವನ್ನು ವಿಸ್ತರಿಸಲಾಯಿತು.

2021ರ ಜುಲೈನಲ್ಲಿ ಬಿಡುಗಡೆಗೊಳಿಸಿದ್ದ ಅಧಿಸೂಚನೆಗೆ ಮುನ್ನ ನಾಮಿನೇಶನ್‌ ಮಾಡಿರುವವರು ಮತ್ತೆ ನಾಮಿನೇಶನ್‌ ಮಾಡುವುದು ಅವರ ಆಯ್ಕೆಗೆ ಬಿಟ್ಟಿದೆ. ಆದರೆ ಹಾಲಿ ಹೂಡಿಕೆದಾರರು ಡಿಮ್ಯಾಟ್‌ ಖಾತೆಗೆ ನಾಮಿನೇಶನ್‌ ಅನ್ನು ಮಾಡಿಲ್ಲದಿದ್ದರೆ ಮಾರ್ಚ್‌ 31ರೊಳಗೆ ಮಾಡಬೇಕು.

ಟ್ರೇಡಿಂಗ್‌ ಮತ್ತು ಡಿಮ್ಯಾಟ್‌ ಖಾತೆಗೆ ನಾಮಿನೇಶನ್‌ ಮಾಡುವಾಗ ಸಾಕ್ಷಿಯ ಅಗತ್ಯ ಇರುವುದಿಲ್ಲ. ಇ-ಸೈನ್‌ ಬಳಸಿ ನಾಮಿನೇಶನ್‌ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕವೇ ಮಾಡಬಹುದು. ಆಫ್‌ಲೈನ್‌ನಲ್ಲೂ ಮಾಡಬಹುದು. ನಿಮ್ಮ ಡಿಮ್ಯಾಟ್‌ ಖಾತೆಯ ಪೂರೈಕೆದಾರ DP ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ನಾಮಿನೇಶನ್‌ ಮಾಡಬಹುದು. NSDL DP ವೆಬ್‌ಸೈಟ್‌ ಮೂಲಕವೂ ಬದಲಿಸಬಹುದು. ನಿಮ್ಮ ಡಿಮ್ಯಾಟ್‌ ಖಾತೆಗೆ ಮೂರು ನಾಮಿನಿಗಳನ್ನು ಹೆಸರಿಸಬಹುದು. ನಿಮ್ಮ ತಂದೆ, ತಾಯಿ, ಸಂಗಾತಿ, ಮಕ್ಕಳು ಅಥವಾ ಯಾರಾದರೂ ವ್ಯಕ್ತಿ ನಾಮಿನಿ ಆಗಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಆತುರದಲ್ಲಿ ಈ ರಾಶಿಯವರು ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರವು ಧನಸ್ಸು ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು. ಸಿಂಹ ರಾಶಿಯವರು ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ- ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 19:24 ವಾರ: ಶುಕ್ರವಾರ
ನಕ್ಷತ್ರ: ಅನುರಾಧ 10:09 ಯೋಗ: ಶಿವ 11:19
ಕರಣ: ಬಾಲವ 07:27 ಅಮೃತ ಕಾಲ: ಮಧ್ಯರಾತ್ರಿ 01:38ರಿಂದ 03:16ರವರೆಗೆ

ಸೂರ್ಯೋದಯ : 05:53   ಸೂರ್ಯಾಸ್ತ : 06:40

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ
7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಕುರಿತು ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ . ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು. ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ.ಸಂಗಾತಿಯೊಂದಿಗೆ ಹೂಡಿಕೆ ಕೂರಿತಾಗಿ ಚರ್ಚೆ.ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದೆ. ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ- ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸಮಯ, ವ್ಯರ್ಥ ಪ್ರಯತ್ನ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ನೋವಾಗಲಿದೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲವಿದು. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಇರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

PM Modi: ನಾವು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದೆವು. ಆದರೆ, ಪ್ರತಿಪಕ್ಷಗಳು ಪದೇಪದೆ ಹೇಳಿದವು. ಎನ್‌ಡಿಎ 400 ಸೀಟು ಗೆಲ್ಲುವುದೇ ಇಲ್ಲ ಎಂದು ಹೇಳಿದವು. ಆದರೆ, ಕೊನೆಗೆ ಏನಾಯಿತು? ಪ್ರತಿಪಕ್ಷಗಳೇ 400 ಸೀಟು ಗೆಲ್ಲಲ್ಲ ಗೆಲ್ಲಲ್ಲ ಎಂದು ಅಭಿಯಾನ ಮಾಡಿದವು. ಇದರಿಂದ ಯಾರಿಗೆ ಅನುಕೂಲವಾಯಿತು ಎಂಬುದು ಅವರಿಗೆ ಮೂರು ಹಂತದ ಮತದಾನ ಮುಗಿದ ಬಳಿಕ ಬೇರೆಯವರು ಹೇಳಿದರು ಎಂಬುದಾಗಿ ನರೇಂದ್ರ ಮೋದಿ ವ್ಯಂಗ್ಯ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಹುತೇಕ ಸಂದರ್ಭದಲ್ಲಿ ಗಂಭೀರವಾಗಿರುತ್ತಾರೆ. ಚುನಾವಣೆ ಭಾಷಣಗಳು, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವಾಗಂತಲೂ ತೀಕ್ಷ್ಣವಾಗಿ ಮಾತನಾಡುತ್ತಾರೆ. ಟೀಕೆ, ಆರೋಪ, ಆಕ್ರೋಶ ಹೊರಹಾಕುತ್ತಾರೆ. ಹಾಗೆಯೇ, ಪ್ರತಿಪಕ್ಷಗಳನ್ನು ಅವರು ವ್ಯಂಗ್ಯ ಮಾಡುತ್ತಾರೆ. ಹಾಸ್ಯ ಚಟಾಕಿ ಮೂಲಕವೂ ಟಾಂಗ್‌ ಕೊಡುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ 400 ಸೀಟು ಗೆಲ್ಲುತ್ತದೆ ಎಂಬುದನ್ನು ಪದೇಪದೆ ಹೇಳಿ ಪ್ರತಿಪಕ್ಷಗಳು ಕೂಡ ತಮ್ಮ ಪರವಾಗಿ ಪ್ರಚಾರಕ್ಕೆ ಹೇಗೆ ಬಳಸಿಕೊಂಡರು ಎಂಬುದನ್ನು ಖುದ್ದು ನರೇಂದ್ರ ಮೋದಿ ಅವರೇ ಹೇಳಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ಗೆ ಸಂದರ್ಶನ ನೀಡುವ ವೇಳೆ ಚಾರ್‌ ಸೌ ಪಾರ್‌ ಅಭಿಯಾನದ ಕುರಿತು ತಮಾಷೆಯಾಗಿ ಮಾತನಾಡಿದ್ದಾರೆ. “ನಾವು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದೆವು. ಆದರೆ, ಪ್ರತಿಪಕ್ಷಗಳು ಪದೇಪದೆ ಹೇಳಿದವು. ಎನ್‌ಡಿಎ 400 ಸೀಟು ಗೆಲ್ಲುವುದೇ ಇಲ್ಲ ಎಂದು ಹೇಳಿದವು. ಆದರೆ, ಕೊನೆಗೆ ಏನಾಯಿತು? ಪ್ರತಿಪಕ್ಷಗಳೇ 400 ಸೀಟು ಗೆಲ್ಲಲ್ಲ ಗೆಲ್ಲಲ್ಲ ಎಂದು ಅಭಿಯಾನ ಮಾಡಿದವು. ನಾನು ಅವರನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂಬುದು ಪ್ರತಿಪಕ್ಷಗಳ ನಾಯಕರಿಗೆ ಗೊತ್ತೇ ಆಗಲಿಲ್ಲ. 3 ಹಂತಗಳ ಮತದಾನ ಮುಗಿದ ಬಳಿಕ, ನೀವೇಕೆ 400 ಸೀಟು ಗೆಲ್ಲುತ್ತಾರೋ, ಇಲ್ಲವೋ ಎಂಬುದರ ಕುರಿತು ಚುನಾವಣೆ ಪ್ರಚಾರ ಮಾಡುತ್ತಿದ್ದೀರಿ ಎಂಬುದಾಗಿ ಬೇರೆ ಯಾರೋ ಪಕ್ಷಗಳಿಗೆ ಹೇಳಿದರು” ಎಂದು ನಗುತ್ತಲೇ ಪ್ರತಿಪಕ್ಷಗಳನ್ನು ಯಾಮಾರಿಸಿದ ರೀತಿಯನ್ನು ಮೋದಿ ವಿವರಿಸಿದರು.

ಪಾಕ್‌ನಲ್ಲಿ ಉಗ್ರರ ಹತ್ಯೆ ಹಿಂದೆ ಇರೋದು ಯಾರು?

ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿರುವುದರ ಹಿಂದೆ ಭಾರತದ ಕೈವಾಡ ಇದೆ ಎಂಬುದಾಗಿ ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ಪಾಕಿಸ್ತಾನದವರು ಇದರ ಕುರಿತು ಚಿಂತೆ ಮಾಡುತ್ತಾರೆ. ಆದರೆ, ಪಾಕಿಸ್ತಾನದಲ್ಲಿ ಉಗ್ರರು ಹತ್ಯೆಗೀಡಾದರೆ, ಭಾರತದಲ್ಲಿರುವ ಕೆಲವರ ಕಣ್ಣಿನಲ್ಲಿ ನೀರು ಏಕೆ ಬರುತ್ತದೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ” ಎಂದಷ್ಟೇ ಹೇಳಿದರು. ಸಂದರ್ಶನದ ವೇಳೆ ರಾಹುಲ್‌ ಗಾಂಧಿ, ಪ್ರತಿಪಕ್ಷಗಳು, ಅಭಿವೃದ್ಧಿ, ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ ಸೇರಿ ಹಲವು ವಿಷಯಗಳ ಕುರಿತು ಮೋದಿ ಮಾತನಾಡಿದರು.

ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿರು. “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟರು.

ಇದನ್ನೂ ಓದಿ: Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

ಮೂಲಸೌಕರ್ಯ ಸರಿಯಿಲ್ಲ ಎಂದು ಇತರ ನಗರಗಳು ಬೆಂಗಳೂರಿನ ಅವಕಾಶವನ್ನು ಕಸಿಯುತ್ತವೆ. ನಾಲ್ಕಾರು ಕಂಪನಿಗಳು ಬೆಂಗಳೂರಿನ ಮೂಲಸೌಕರ್ಯ ಕಳಪೆ ಎಂದು ಒಂದು ಮಾತು ಹೇಳಿದರೂ ಅದು ವಾಣಿಜ್ಯಾತ್ಮಕವಾಗಿ ಕಪ್ಪು ಚುಕ್ಕೆ. ಆದ್ದರಿಂದ, ಮುಂಗಾರಿಗೆ ಮುನ್ನವೇ ಈ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಿಕೊಂಡು ಸನ್ನದ್ಧರಾಗಬೇಕಿದೆ.

VISTARANEWS.COM


on

Rajakaluve
Koo

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಲು ಸೂಚಿಸಲಾಗಿದೆ. ಯಾವ ಪ್ರಬಲ ರಾಜಕಾರಣಿಯೇ ಇರಲಿ, ಬೇರೆ ಯಾರೇ ಇರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇಂದು ಮುಖ್ಯಮಂತ್ರಿಗಳು ನಗರದ ವಿವಿಧೆಡೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿ ಬಳಿಕ ಇದನ್ನು ಹೇಳಿದ್ದಾರೆ.

ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಲಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಲಾಗಿದೆ. ಇತ್ತೀಚೆಗೆ ಸುರಿದ ಮಳೆಗೆ ಯಲಹಂಕದಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ. ಮುಯಮಂತ್ರಿಗಳು ತಿಳಿಸುವ ಪ್ರಕಾರ, ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು. ಹಿಂದಿನ ಸರ್ಕಾರ 193 ಕಿಮೀ ತೆರವು ಮಾಡಿದೆ. ಸದ್ಯ ರಾಜಕಾಲುವೆ ತೆರವಿಗೆ 1800 ಕೋಟಿ ರೂ. ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12.15 ಕಿಮೀ ದೂರದ ಕಾಲುವೆ ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ.

ಜೂನ್‌ ಇನ್ನೇನು ಒಂದು ವಾರದಲ್ಲಿ ಬರಲಿದೆ. ಮುಂಗಾರು ಆರಂಭವಾಗಲಿದೆ. ಮಲೆನಾಡು ಹಾಗೂ ಬಯಲುಸೀಮೆಯ ಕೃಷಿಕ ಜನತೆಗೆ ಇರುವ ಮುಂಗಾರಿನ ಸಿದ್ಧತೆಯ ಜ್ಞಾನ ನಗರದ ಮಹಾಜನತೆಗೆ ಇಲ್ಲ. ಹೀಗಾಗಿ ಮುಂಗಾರಿನ ಆರಂಭದಲ್ಲಿ ಅಪ್ಪಳಿಸುವ ಮಳೆಗೆ, ಮಹಾನಗರ ಸಿದ್ಧವಾಗಿರುವುದಿಲ್ಲ. ಹೀಗಾಗಿಯೇ ರಾಜಕಾಲುವೆಗಳು ಕಸ ತುಂಬಿ ಕಟ್ಟಿಕೊಳ್ಳುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು ಹಳೆಯ ಹಾಗೂ ದುರ್ಬಲ ಮರಗಳು ಬೀಳುವುದು, ಶಿಥಿಲ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್‌ ಕಂಬಗಳು, ತೆರೆದ ಮ್ಯಾನ್‌ಹೋಲ್‌ಗಳು ಸಾವಿನರಮನೆಗಳಾಗುವುದನ್ನು ಕಾಣುತ್ತೇವೆ. ವಿಳಂಬವಾಗಿರುವ ರಾಜಕಾಲುವೆ ತೆರವು ಹಾಗೂ ಸ್ವಚ್ಛತೆ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿವೆ ಎಂಬ ಲೆಕ್ಕ ಇವೆ. ನಾಲ್ಕು ಮಳೆಗೆ ರಸ್ತೆಗುಂಡಿಗಳು ಮರಣಕೂಪಗಳಾಗುತ್ತವೆ. ಇವುಗಳನ್ನು ಮುಚ್ಚಿಸಬೇಕು.

ರಾಜಕಾಲುವೆಗಳ ನಿರ್ವಹಣೆಗೆ ಶಾಶ್ವತವಾದ ಒಂದು ವ್ಯವಸ್ಥೆಯನ್ನೇ ರೂಪಿಸಬೇಕಿದೆ. ರಾಜಕಾಲುವೆ ಹಾಗೂ ಒಳಚರಂಡಿ ವ್ಯವಸ್ಥೆಗಳು ಪ್ರತ್ಯೇಕವಾಗಿರಬೇಕು. ಆದರೆ ನಗರದ ಎಷ್ಟೋ ಕಡೆ ಅವು ಒಟ್ಟಾಗಿವೆ. ಇದು ತಪ್ಪಬೇಕು. ಇನ್ನು ರಾಜಕಾಲುವೆಯ ಒತ್ತುವರಿ ಪ್ರಭಾವಿಗಳಿಂದಲೇ ಆಗಿರುವುದು ಹೆಚ್ಚು. ಕಾನೂನಾತ್ಮಕ ಅಡ್ಡಿಆತಂಕಗಳನ್ನು ಸೃಷ್ಟಿಸುವವರೂ ಇವರೇ. ಇವರನ್ನು ಎದುರಿಸಲು ಸರ್ಕಾರ ಇನ್ನಷ್ಟು ಸನ್ನದ್ಧವಾಗಬೇಕು. ಮನೆಗಳಲ್ಲಿ ಮಳೆ ನೀರು ಕೊಯ್ಲಿಗೆ ವ್ಯವಸ್ಥೆಯಾದರೂ ಇರಬೇಕು. ಇಲ್ಲವಾದರೆ ರಾಜಕಾಲುವೆಗಳಿಗಾದರೂ ಅದು ಸೇರಬೇಕು. ಎರಡೂ ಇಲ್ಲದೆ ಹೋದರೆ ಕೃತಕ ಪ್ರವಾಹ ಸೃಷ್ಟಿಯಾಗುತ್ತದೆ. ಈ ಕೃತಕ ಪ್ರವಾಹಗಳಿಂದ ಜನಜೀವನ ಅಸ್ತವ್ಯಸ್ಥಗೊಂಡು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಲಯದಲ್ಲಿಯೂ ರಾಜಧಾನಿಗೆ ಕೆಟ್ಟ ಹೆಸರು ಬರುತ್ತದೆ. ಮೂಲಸೌಕರ್ಯ ಸರಿಯಿಲ್ಲ ಎಂದು ಇತರ ನಗರಗಳು ನಮ್ಮ ಅವಕಾಶವನ್ನು ಕಸಿಯುತ್ತವೆ. ನಾಲ್ಕಾರು ಕಂಪನಿಗಳು ಬೆಂಗಳೂರಿನ ಇನ್‌ಫ್ರಾಸ್ಟ್ರಕ್ಚರ್‌ ಕಳಪೆ ಎಂದು ಒಂದು ಮಾತು ಹೇಳಿದರೂ ಅದು ವಾಣಿಜ್ಯಾತ್ಮಕವಾಗಿ ಕಪ್ಪು ಚುಕ್ಕೆ. ಆದ್ದರಿಂದ, ಮುಂಗಾರಿಗೆ ಮುನ್ನವೇ ಈ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಿಕೊಂಡು ಸನ್ನದ್ಧರಾಗಬೇಕಿದೆ.

ಇದನ್ನೂ ಓದಿ: PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Continue Reading

ಪ್ರಮುಖ ಸುದ್ದಿ

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

IPL 2024: ಆರ್​ಸಿಬಿ ಅಭಿಮಾನಿಗಳ ತಮ್ಮ ವಿರುದ್ದ ಗೂಂಡಾಗಿರಿ ಮಾಡಿರುವ ಬಗ್ಗೆ ಸಿಎಸ್​​ಕೆ ಅಭಿಮಾನಿಗಳು ದೂರು ನೀಡಿದ್ದು. ಇದು ಒಂದು ಹಂತದಲ್ಲಿ ಎಕ್ಸ್ ನಲ್ಲಿ ಟ್ರೆಂಡಿಂಗ್ ಆಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಆರ್​ಸಿಬಿಯ ಅಭಿಮಾನಿಗಳ ದುರಂಹಕಾರವೇ ಪ್ಲೇಆಫ್​ನ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಆರ್​ಸಿಬಿ ಅಭಿಮಾನಿಗಳು ಆದಷ್ಟು ಮೌನವಾಗಿರಬೇಕು. ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಅನಗತ್ಯ ವೀಡಿಯೊ ಪೋಸ್ಟ್ ಮಾಡಬಾರದಾಗಿತ್ತು ಎಂದು ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ 17ನೇ (IPL 2024 ) ಆವೃತ್ತಿಯ ಲೀಗ್ ಹಂತದ ಕೊನೆಯಲ್ಲಿ ಸತತ ಆರು ಪಂದ್ಯಗಳನ್ನು ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಹಂತಕ್ಕೆ ಏರಿತ್ತು. ಎಲಿಮಿನೇಟರ್ ನಲ್ಲಿ ರಾಜಸ್ಥಾನ್​ ರಾಯಲ್ಸ್ ತಂಡವನ್ನು ಸೋಲಿಸಿ ಕ್ವಾಲಿಫೈಯರ್ 2 ಗೆ ಪ್ರವೇಶಿಸುವ ಭರವಸೆ ಹೊಂದಿತ್ತು. ಆದಾಗ್ಯೂ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹಣಾಹಣಿಯಲ್ಲಿ ಫಾಫ್​ ಡು ಪ್ಲೆಸಿಸ್ ಬಳಗವನ್ನು ಮಣಿಸಿತು. ನಾಲ್ಕು ವಿಕೆಟ್​ಗಳಿಂದ ಸೋತ ಆರ್​ಸಿಬಿ ನಿರಾಸೆಗೆ ಒಳಗಾಯಿತು. ಇದರೊಂದಿಗೆ ತಮ್ಮ ಮೊದಲ ಐಪಿಎಲ್ ಟ್ರೋಫಿಗಾಗಿ ಆರ್​ಸಿಬಿಯ ಕಾಯುವಿಕೆ ಮುಂದುವರಿಯಿತು. ಆದರೆ, ಆರ್​​ಸಿಬಿ ಈ ಸೋಲಿಗೆ ದುರಂಹಕಾರವೇ ಕಾರಣ ಎಂಬುದಾಗಿ ತಮಿಳುನಾಡು ಮೂಲದ ಮಾಜಿ ಆಟಗಾರ ಹೇಳಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲಲೇಬೇಕಾದ ಲೀಗ್​​ ಪಂದ್ಯದಲ್ಲಿ ಆರ್​ಸಿಬಿ ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿತು. ಹೀಗಾಗಿ ಪ್ಲೇಆಫ್ಗೆ ಅರ್ಹತೆ ಪಡೆಯಿತು. ಇದರೊಂದಿಗೆ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು ನಿರಾಶಾದಾಯಕವಾಗಿ ಋತುವನ್ನು ಕೊನೆಗೊಳಿಸಿತು. ಏತನ್ಮಧ್ಯೆ, ಪಂದ್ಯದ ನಂತರ, ಸಿಎಸ್​ಕೆ ಅಭಿಮಾನಿಗಳು ದೂರೊಂದನ್ನು ನೀಡಿದ್ದರು. ಆರ್​ಸಿಬಿ ಅಭಿಮಾನಿಗಳ ತಮ್ಮ ವಿರುದ್ದ ಗೂಂಡಾಗಿರಿ ಮಾಡಿರುವ ಬಗ್ಗೆ ದೂರು ನೀಡಿದ್ದು. ಇದು ಒಂದು ಹಂತದಲ್ಲಿ ಎಕ್ಸ್ ನಲ್ಲಿ ಟ್ರೆಂಡಿಂಗ್ ಆಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಆರ್​ಸಿಬಿಯ ಅಭಿಮಾನಿಗಳ ದುರಂಹಕಾರವೇ ಪ್ಲೇಆಫ್​ನ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಆರ್​ಸಿಬಿ ಅಭಿಮಾನಿಗಳು ಆದಷ್ಟು ಮೌನವಾಗಿರಬೇಕು. ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಅನಗತ್ಯ ವೀಡಿಯೊ ಪೋಸ್ಟ್ ಮಾಡಬಾರದಾಗಿತ್ತು ಎಂದು ಹೇಳಿದ್ದಾರೆ.

ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಫ್ರ್ಯಾಂಚೈಸಿಯ ಆಟಗಾರರು ಮತ್ತು ಅಭಿಮಾನಿಗಳ ಜಂಭ ಹೆಚ್ಚಾಗಿತ್ತು. ಅದುವೇ ಎಲಿಮಿನೇಟರ್ ನಲ್ಲಿ ಆರ್​ಆರ್​​ ವಿರುದ್ಧ ಸೋಲಿಗೆ ಕಾರಣ ಎಂದು 64 ವರ್ಷದ ಆಟಗಾರ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

“ಜೀವನದಲ್ಲಿ ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಾಗ ನಿಮ್ಮ ಬಾಯಿ ಮುಚ್ಚಿಕೊಂಡು ಮುಂದುವರಿಯಿರಿ. ನೀವು ಮಾಡುತ್ತಿರುವ ಯಾವುದೇ ಕೆಲಸದ ವೇಳೆ ಗದ್ದಲ ಮಾಡಿದಾಗ ಆ ಕೆಲಸವನ್ನು ಉತ್ತಮವಾಗಿ ಮಾಡಲು ಸಾಧ್ಯವಿಲ್ಲ. ಆರ್​​ಸಿಬಿ ಅಭಿಮಾನಿಗಳು ಅನಗತ್ಯ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದರು. ಅತಿಯಾಗಿ ತೋರಿಸುತ್ತಿದ್ದರು. ಅದಕ್ಕಾಗಿಯೇ ಅಶ್ವಿನ್ ಮುಂದಿನ ಪಂದ್ಯದಲ್ಲಿ ಆರ್​ಸಿಬಿಯ ಜಂಭ ಇಳಿಸಿದರು. ಅದಕ್ಕಾಗಿಯೇ ಕ್ರಿಕೆಟ್​​ನಲ್ಲಿ ನಿಮ್ಮ ಬಾಯಿ ಮುಚ್ಚಿ ಆಡಬೇಕು ಎಂದು ಹೇಳುವುದು ಎಂದು ಶ್ರೀಕಾಂತ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

ಟೀಕೆಗಳನ್ನು ಸ್ವೀಕರಿಸಿ: ಕ್ರಿಸ್ ಶ್ರೀಕಾಂತ್

ಆರ್​ಸಿಬಿ ಆಟಗಾರರು ಚಪ್ಪಾಳೆಗಳನ್ನು ಪಡೆದಂತೆ ಟೀಕೆಗಳನ್ನು ಸ್ವೀಕರಿಸುವಂತೆ ಶ್ರೀಕಾಂತ್ ಕೋರಿಕೊಂಡರು. ತಂಡವು ಸತತವಾಗಿ ಆರು ಗೆಲುವುಗಳನ್ನು ಅತಿಯಾಗಿ ಸಂಭ್ರಮಿಸಲು ಪ್ರಾರಂಭಿಸಿತು. ಅಗತ್ಯವಿಲ್ಲದ ಆಕ್ರಮಣಶೀಲತೆಯನ್ನು ತೋರಿಸಿತು ಎಂದು ಅವರು ಶ್ರೀಕಾಂತ್​ ಹೇಳಿದರು.

ನೀವು ಉತ್ತಮವಾಗಿ ಆಡಿದ್ದರೆ, ಅಭಿನಂದನೆಗಳು, ನೀವು ಕಳಪೆಯಾಗಿ ಆಡಿದ್ದರೆ ಟೀಕೆಗಳನ್ನು ಸ್ವೀಕರಿಸಿ. ನೀವು ಎಂದಿಗೂ ಬಾಯಿ ತೆರೆದು ಆಕ್ರಮಣಶೀಲತೆಯನ್ನು ತೋರಿಸಬಾರದು. ಸಿಎಸ್​​ಕೆ ಮತ್ತು ಮುಂಬೈ ಎರಡೂ ಪ್ರಶಸ್ತಿಗಳನ್ನು ಗೆದ್ದಿವೆ. ಆದರೆ ಎಂದಿಗೂ ಸದ್ದು ಮಾಡಿಲ್ಲ. ಆದರೆ ಆರ್​ಸಿಬಿ ಆರು ಪಂದ್ಯಗಳನ್ನು ಗೆದ್ದಿತು. ಅವರು ಅರ್ಹತೆ ಪಡೆದ ತಕ್ಷಣ ಅವರು ಔಟ್ ಆಗಿದ್ದಾರೆ “ಎಂದು ಅವರು ಹೇಳಿದರು.

Continue Reading
Advertisement
Dina Bhavishya
ಭವಿಷ್ಯ8 mins ago

Dina Bhavishya : ಆತುರದಲ್ಲಿ ಈ ರಾಶಿಯವರು ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ

Narendra Modi
ದೇಶ5 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ6 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ6 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ6 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ7 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ7 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ7 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ7 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌