Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು? - Vistara News

ವಾಣಿಜ್ಯ

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Highest Paid CEO: 2024ರ ಹಣಕಾಸು ವರ್ಷದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಐಟಿ ಸಿಇಒ ವಿಪ್ರೊದ ಥಿಯೆರ್ರಿ ಡೆಲಾಪೋರ್ಟೆ ಅವರು ಏಪ್ರಿಲ್ 6ರಂದು ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ 32 ವರ್ಷಗಳ ಕಾಲ ಅನುಭವಿ ಶ್ರೀನಿವಾಸ್ ಪಾಲ್ಲಿಯಾ ಅವರನ್ನು
ನೇಮಿಸಲಾಗಿದೆ. ಬೃಹತ್‌ ಐಟಿ ಕಂಪನಿಗಳ ಸಿಇಒಗಳು ಹೆಚ್ಚು ಸಂಬಳ ಪಡೆಯುತ್ತಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

Highest Paid CEO
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಪ್ರೋದ (Wipro) ಮಾಜಿ ಸಿಇಒ (ex-ceo) ಮತ್ತು ಆಡಳಿತ ನಿರ್ದೇಶಕ ಥಿಯೆರ್ರಿ ಡೆಲಾಪೋರ್ಟೆ (Thierry Delaporte) ಅವರು 20 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 166 ಕೋಟಿ ರೂ. ಗಳಿಸಿ ಸತತ ಎರಡನೇ ವರ್ಷ ಐಟಿ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ (Highest Paid CEO) ಪಡೆಯುವ ಸಿಇಒ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಥಿಯೆರಿ ಡೆಲಾಪೋರ್ಟೆ ಅವರು ಏಪ್ರಿಲ್‌ 6ರಂದು ಕಂಪನಿಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಕಂಪನಿಯು 32 ವರ್ಷಗಳ ಕಾಲ ಅನುಭವ ಹೊಂದಿರುವ ಶ್ರೀನಿವಾಸ್ ಪಾಲ್ಲಿಯಾ ಅವರನ್ನು ನೇಮಕ ಮಾಡಿದೆ. ಯುಎಸ್ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಕಮಿಷನ್‌ಗೆ ವಿಪ್ರೊ ಸಲ್ಲಿಸಿರುವ 20 ಎಫ್ ಫೈಲಿಂಗ್‌ಗಳ ಪ್ರಕಾರ ಡೆಲಾಪೋರ್ಟೆ 3.9 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಸಂಬಳ ಮತ್ತು ಭತ್ಯೆ, 5 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಕಮಿಷನ್/ ವೇರಿಯಬಲ್ ಪೇ, ಸುಮಾರು 7 ಮಿಲಿಯನ್ ಡಾಲರ್ ಇತರ ಮತ್ತು 4 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ದೀರ್ಘಾವಧಿಯ ಪರಿಹಾರವನ್ನು ಗಳಿಸಿದ್ದಾರೆ.

ಶ್ರೀನಿವಾಸ್ ಪಲ್ಲಿಯಾ ಅವರು ಸುಮಾರು 50 ಕೋಟಿ ರೂಪಾಯಿಗಳ ವಾರ್ಷಿಕ ಸಂಭಾವನೆ ಪ್ಯಾಕೇಜ್‌ ಸ್ವೀಕರಿಸಿದ್ದಾರೆ. ಇದರಿಂದ ಅವರು ಆರ್ಥಿಕ ವರ್ಷ 2025ರಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಎರಡನೇ ಸಿಇಒ ಆಗಿದ್ದಾರೆ. ಕಂಪನಿಯ ಆದಾಯವು ಇಳಿಮುಖವಾಗುತ್ತಿರುವ ಹೊತ್ತಲ್ಲಿ ಹೊಸ ಸಿಇಒ ನೇಮಕ ವೇತನದ ನಡುವಿನ ಅಸಮಾನತೆಯನ್ನು ಹೆಚ್ಚಿಸಿದೆ. ಸಿಇಒ ವೇತನವು ಸತತ ಎರಡನೇ ವರ್ಷಕ್ಕೆ ಹೆಚ್ಚಾಗಿದೆ.

ಮತ್ತೊಂದೆಡೆ ವಿಪ್ರೋ ಕಾರ್ಯನಿರ್ವಾಹಕ ಅಧ್ಯಕ್ಷ ರಿಶಾದ್ ಪ್ರೇಮ್‌ಜಿ ಅವರು ಹೆಚ್ಚುತ್ತಿರುವ ಏಕೀಕೃತ ನಿವ್ವಳ ಲಾಭದ ಮೇಲೆ ಶೇ. 0.35ರಷ್ಟು ಕಮಿಷನ್‌ಗೆ ಅರ್ಹರಾಗಿದ್ದಾರೆ. ಕಂಪನಿಯ ಹಣಕಾಸಿನ ವರ್ಷದಲ್ಲಿ ನಷ್ಟವನ್ನು ಅನುಭವಿಸಿದ ಕಾರಣ ಅದನ್ನು ತಡೆಹಿಡಿಯಲಾಗಿದೆ.

ಕಂಪನಿಯ ಆದಾಯ ಇಳಿಕೆ

ಆರ್ಥಿಕ ವರ್ಷ 2024ರ ಪೂರ್ಣ ವರ್ಷದಲ್ಲಿ ವಿಪ್ರೋ ಆದಾಯವು ವರ್ಷಕ್ಕೆ 90,486 ಕೋಟಿಗಳಿಂದ 89,760 ಕೋಟಿಗೆ ಇಳಿದಿದೆ.

ಅತಿ ಹೆಚ್ಚು ವಾರ್ಷಿಕ ಸಂಭಾವನೆ

2023- 24ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರು ವಾರ್ಷಿಕ ಸಂಭಾವನೆ ಪ್ಯಾಕೇಜ್‌ನಲ್ಲಿ 56 ಕೋಟಿ ರೂ. ಆಗಿದೆ. ಎಚ್‌ಸಿಎಲ್‌ಟೆಕ್‌ನ ಸಿ ವಿಜಯಕುಮಾರ್, 28.4 ಕೋಟಿ ರೂ. ಗಳಿಸಿದ್ದಾರೆ. L&T ಮತ್ತು Mindtree ವಿಲೀನದ ಅನಂತರ ನವೆಂಬರ್ 2022 ರಲ್ಲಿ ಚುಕ್ಕಾಣಿ ಹಿಡಿದ ಅದರ ಸಿಇಒ ದೇಬಾಶಿಸ್ ಚಟರ್ಜಿ ಆರ್ಥಿಕ ವರ್ಷ 22-23ರಲ್ಲಿ 17.5 ಕೋಟಿ ರೂ. ಗಳಿಸಿದ್ದಾರೆ.

ಇದನ್ನೂ ಓದಿ: Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

ಟೆಕ್ ಮಹೀಂದ್ರಾದ ಮೋಹಿತ್ ಜೋಶಿ ಅವರು ವಾರ್ಷಿಕವಾಗಿ 6.5 ಕೋಟಿ ರೂಪಾಯಿಗಳ ವೇತನ ಪಡೆಯುತ್ತಾರೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಸಿಇಒ ಮತ್ತು ಎಂಡಿ ಕೆ. ಕೃತಿವಾಸನ್ ಅವರು 2024ರಲ್ಲಿ ವಾರ್ಷಿಕ ಪರಿಹಾರದಲ್ಲಿ 25.36 ಕೋಟಿ ರೂ. ಗಳನ್ನು ಪಡೆದರು.

2024ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ ಡೆಲಾಪೋರ್ಟೆ ಅವರಿಗೆ ನೀಡಿದ ಪರಿಹಾರವು 9,89,130 ಅನ್ವೆಸ್ಟೆಡ್ ಸ್ಟಾಕ್ ಆಯ್ಕೆ ಮತ್ತು 4.33 ಮಿಲಿಯನ್ ಡಾಲರ್ ಮೊತ್ತದ ನಗದು ಪರಿಹಾರವನ್ನು ಒಳಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗ್ಯಾರಂಟಿ ಉಚಿತ, ಬೆಲೆಯೇರಿಕೆ ಖಚಿತ; ಪೆಟ್ರೋಲ್‌ ಬೆಲೆ ಏರಿಕೆಯಿಂದ ರಾಜ್ಯ ಸರ್ಕಾರಕ್ಕೆ ಎಷ್ಟು ಆದಾಯ?

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಚುನಾವಣೆ ಮುಗಿದ ಕಾರಣ ಬೆಲೆಯೇರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 1 ಸಾವಿರ ಕೋಟಿ ರೂ. ಆದಾಯ ಲಭಿಸಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Siddaramaiah
Koo

ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಹೌದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ (Petrol Diesel Price) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 250 ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ ಎಂದು ತಿಳಿದುಬಂದಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಿಂದ ರಾಜ್ಯ ಸರ್ಕಾರಕ್ಕೆ ವ್ಯಾಟ್‌ ರೂಪದಲ್ಲಿ ವರ್ಷಕ್ಕೆ 250 ಕೋಟಿ ರೂ. ಹೆಚ್ಚುವರಿ ಆದಾಯ ಸಿಗಲಿದೆ. ರಾಜ್ಯ ಹಣಕಾಸು ಇಲಾಖೆಯ ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವ್ಯಾಟ್ ರೂಪದಲ್ಲಿ ವರ್ಷಕ್ಕೆ ರೂ. 9,500 ಕೋಟಿ ಆದಾಯವನ್ನು ಗಳಿಸುತ್ತದೆ. ಇದು ತಿಂಗಳಿಗೆ 800 ಕೋಟಿ ರೂ. ಆಗುತ್ತದೆ. ಇನ್ನು ಈಗ ಬೆಲೆಯೇರಿಕೆ ಮಾಡಿರುವುದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ವರ್ಷಕ್ಕೆ 9,750 ಕೋಟಿ ರೂ. ಸಿಗಲಿದೆ ಎಂದು ತಿಳಿದುಬಂದಿದೆ.

ಪ್ರಲ್ಹಾದ್‌ ಜೋಶಿ ಆಕ್ರೋಶ

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.

ಸೋಮವಾರದಿಂದ ಪ್ರತಿಭಟನೆ ಎಂದ ಬಿಜೆಪಿ

ರಾಜ್ಯ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಏರಿಕೆ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರದಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. “ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಹಾಗಾಗಿ, ಬೆಲೆಯೇರಿಕೆ ಮೂಲಕ ಜನರ ಮೇಲೆ ಸಿಟ್ಟು ತೀರಿಸಿಕೊಳ್ಳಲಾಗುತ್ತಿದೆ. ಮೊದಲು ವಿದ್ಯುತ್‌ ಬೆಲೆ ಏರಿಕೆ ಮಾಡಿತು. ಆಮೇಲೆ ಸ್ಟ್ಯಾಂಪ್‌ ಡ್ಯೂಟಿ ಏರಿಸಲಾಯಿತು. ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ರಾಜ್ಯದ ಜನರಿಗೆ ಬರೆ ಹಾಕುತ್ತಿದ್ದಾರೆ. ಬೆಲೆ ಏರಿಕೆ ಖಂಡಿಸಿ ಸೋಮವಾರ ಪ್ರತಿಭಟನೆ ಮಾಡುತ್ತೇವೆ” ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Continue Reading

ದೇಶ

Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

ಹರಿಯಾಣದ ಅಮೆಜಾನ್ ನ (Amazon India) ಗೋದಾಮುಗಳಲ್ಲಿ ಕೆಲಸ ಮಾಡುವವರಿಗೆ ಶಿಫ್ಟ್ ಸಮಯದಲ್ಲಿ ನೀರು ಕುಡಿಯುವುದಿಲ್ಲ, ವಾಶ್ ರೂಮ್ ಗೆ ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡಲು ಒತ್ತಾಯಿಸಲಾಗಿದೆ. ವಿಶ್ರಾಂತಿ ಕೊಠಡಿ ಇದ್ದರೂ ಹತ್ತು ನಿಮಿಷಕ್ಕಿಂತ ಹೆಚ್ಚು ಹೊತ್ತು ಕಳೆಯುವಂತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಈ ಸಂಗತಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

By

Amazon India
Koo

ಅಮೆಜಾನ್ ನ (Amazon India) ಗೋದಾಮುಗಳಲ್ಲಿ (warehouse) ಕೆಲಸ ಮಾಡುವವರು ನೀರು ಕುಡಿಯಬಾರದು, ವಾಶ್ ರೂಮ್ ಗೆ ಹೋಗಬಾರದು (no toilet, water breaks) ಎಂದು ಒತ್ತಾಯಿಸಿರುವುದು ಬೆಳಕಿಗೆ ಬಂದಿದೆ. ಹರಿಯಾಣದ (Haryana) ಮಾನೇಸರ್‌ನಲ್ಲಿರುವ (Manesar) ಅಮೆಜಾನ್‌ನ ಐದು ಗೋದಾಮುಗಳ ಕೆಲಸ ಮಾಡುವವರಿಗೆ ಈ ಕಠಿಣ ಪ್ರತಿಜ್ಞೆ ಮಾಡಲು ಒತ್ತಾಯಿಸಲಾಗಿದೆ.

ಆರು ಟ್ರಕ್‌ಗಳಿಂದ ಪ್ಯಾಕೇಜ್‌ಗಳನ್ನು ಇಳಿಸುವ ಕಾರ್ಯ ಪೂರ್ಣಗೊಳ್ಳುವವರೆಗೆ ನೀರು ಕುಡಿಯುವುದಿಲ್ಲ, ವಾಶ್ ರೂಮ್ ಗೆ ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ಒತ್ತಾಯಿಸಲಾಯಿತು.

ಶಿಫ್ಟ್ ಸಮಯದಲ್ಲಿ ಕಾರ್ಮಿಕರು ಸಮಯ ವ್ಯರ್ಥ ಮಾಡುತ್ತಿಲ್ಲವೇ ಎಂದು ಪರಿಶೀಲಿಸಲು ಹಿರಿಯರು ವಾಶ್‌ರೂಮ್‌ಗಳನ್ನು ಪರಿಶೀಲಿಸುತ್ತಾರೆ. ಹರಿಯಾಣದ ಮನೇಸರ್‌ನಲ್ಲಿರುವ ಅಮೆಜಾನ್ ಇಂಡಿಯಾದ ಐದು ಗೋದಾಮುಗಳಲ್ಲಿ ತಿಂಗಳಿಗೆ 10,088 ರೂ ಆದಾಯ ಪಡೆಯುವ 24 ವರ್ಷ ವಯಸ್ಸಿನವರು ವಾರದಲ್ಲಿ ಐದು ದಿನಗಳಲ್ಲಿ ದಿನಕ್ಕೆ ಹತ್ತು ಗಂಟೆ ಕೆಲಸ ಮಾಡುತ್ತಾರೆ.

ತಲಾ 30 ನಿಮಿಷಗಳ ಊಟ ಮತ್ತು ಚಹಾ ವಿರಾಮಗಳು ಸೇರಿ ಉಳಿದ ಯಾವುದೇ ವಿರಾಮವಿಲ್ಲದೆ ಕೆಲಸ ಮಾಡುತ್ತಿದ್ದರೂ ದಿನಕ್ಕೆ ನಾಲ್ಕು ಟ್ರಕ್‌ಗಳಿಗಿಂತ ಹೆಚ್ಚು ಇಳಿಸಲು ಸಾಧ್ಯವಿಲ್ಲ. ಎರಡು ದಿನಗಳ ಹಿಂದೆ, ಕಾರ್ಯಕ್ಷಮತೆಯನ್ನು ಸುಧಾರಿಸಲು ಮತ್ತು ಗುರಿಯನ್ನು ಸಾಧಿಸಲು ನಾವು ನೀರು ಮತ್ತು ವಾಶ್‌ರೂಮ್ ವಿರಾಮಗಳನ್ನು ತ್ಯಜಿಸುವುದಾಗಿ ಪ್ರತಿಜ್ಞೆ ಮಾಡಿಸಿದ್ದಾರೆ ಎಂದು ಕಾರ್ಮಿಕರು ದೂರಿದ್ದಾರೆ.


ಹರಿಯಾಣದ ಕೈಗಾರಿಕಾ ಕೇಂದ್ರವಾದ ಮನೇಸರ್‌ನಲ್ಲಿರುವ ಗೋದಾಮುಗಳಲ್ಲಿ ಕಾರ್ಮಿಕರಿಂದ ಆರೋಪ ಕೇಳಿ ಬಂದ ಬಳಿಕ ಅಮೆಜಾನ್ ಇಂಡಿಯಾದ ವಕ್ತಾರರು ಪರಿಶೀಲನೆ ನಡೆಸಿದರು.

ಕಾರ್ಮಿಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಮೆಜಾನ್ ಇಂಡಿಯಾದ ವಕ್ತಾರರು, ನಾವು ಈ ಬಗ್ಗೆ ತನಿಖೆ ನಡೆಸಿದ್ದೇವೆ. ಸ್ಪಷ್ಟವಾಗಿ ಹೇಳಬೇಕೆಂದರೆ ನಾವು ನಮ್ಮ ಉದ್ಯೋಗಿಗಳ ಮೇಲೆ ಈ ರೀತಿಯ ವಿನಂತಿಗಳನ್ನು ಎಂದಿಗೂ ಮಾಡುವುದಿಲ್ಲ. ಇಂತಹ ಘಟನೆ ಕಂಡುಬಂದರೆ ತಕ್ಷಣವೇ ಅದನ್ನು ನಿಲ್ಲಿಸುತ್ತೇವೆ. ತಂಡದ ಬೆಂಬಲ, ಆರೋಗ್ಯ ಮತ್ತು ಸುರಕ್ಷತೆಯ ಕುರಿತು ನಮ್ಮ ನಿರೀಕ್ಷೆಗಳು ಒಳಗೊಂಡಿರುತ್ತವೆ ಎಂದು ಹೇಳಿದ್ದಾರೆ.

ಕಂಪೆನಿಯು ತನ್ನ ಉದ್ಯೋಗಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಗಂಭೀರವಾಗಿ ಪರಿಗಣಿಸುತ್ತದೆ. ನಮ್ಮ ಎಲ್ಲಾ ಕಟ್ಟಡಗಳು ಶಾಖ ಸೂಚ್ಯಂಕ ಮಾನಿಟರಿಂಗ್ ಸಾಧನಗಳನ್ನು ಹೊಂದಿವೆ. ವಿಶೇಷವಾಗಿ ಬೇಸಿಗೆಯ ತಿಂಗಳುಗಳಲ್ಲಿ ತಾಪಮಾನದಲ್ಲಿನ ಬದಲಾವಣೆಗಳನ್ನು ನಾವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತೇವೆ. ರೆಸ್ಟ್ ರೂಂ ಅನ್ನು ಬಳಸಲು, ನೀರು ಪಡೆಯಲು ಅಥವಾ ಮ್ಯಾನೇಜರ್ ಅಥವಾ ಹೆಚ್ ಆರ್ ನೊಂದಿಗೆ ಮಾತನಾಡಲು ಉದ್ಯೋಗಿಗಳು ತಮ್ಮ ಪಾಳಿಗಳ ಉದ್ದಕ್ಕೂ ಅನೌಪಚಾರಿಕ ವಿರಾಮಗಳನ್ನು ತೆಗೆದುಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಅಮೆಜಾನ್ ವಿದೇಶದಲ್ಲಿ ಇಂತಹ ಆರೋಪಗಳನ್ನು ಎದುರಿಸಿದೆ. ಯುಎಸ್ ನಲ್ಲಿನ ಔದ್ಯೋಗಿಕ ಸುರಕ್ಷತೆ ಮತ್ತು ಆರೋಗ್ಯ ಆಡಳಿತವು 2022 ಮತ್ತು 2023 ರಲ್ಲಿ ಕಂಪೆನಿಯ ಅಸುರಕ್ಷಿತ ಕೆಲಸದ ಪರಿಸ್ಥಿತಿಗಳು ಮತ್ತು ಆರು ಗೋದಾಮುಗಳಲ್ಲಿ ಕಾರ್ಮಿಕರಿಗೆ ಆದ ಗಾಯಗಳ ಕುರಿತು ಸರಿಯಾದ ವರದಿ ಮಾಡಲು ವಿಫಲವಾಗಿದೆ ಎನ್ನುವ ದೂರು ಕೇಳಿ ಬಂದಿತ್ತು.

ಇದನ್ನೂ ಓದಿ: Windfall Tax: ಕಚ್ಚಾ ತೈಲದ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ 3,250 ರೂ.ಗೆ ಇಳಿಸಿದ ಸರ್ಕಾರ

ಟ್ರಕ್‌ಗಳು ಹೊರಗೆ ನಿಲ್ಲಿಸುವುದರಿಂದ ಹೆಚ್ಚು ಬಿಸಿಯಾಗಿರುತ್ತವೆ. ಕಾರ್ಮಿಕರು ಅದರಿಂದ ವಸ್ತುಗಳನ್ನು ಇಳಿಸುವಾಗ ಬಹು ಬೇಗನೆ ದಣಿಯುತ್ತಾರೆ. ಇದು ಮಹಿಳೆಯರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹರಿಯಾಣದ ಗೋದಾಮಿನಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಹೇಳಿದ್ದಾರೆ.

ಗೋದಾಮಿನಲ್ಲಿ ಕೆಲಸ ಮಾಡುವ ಮಹಿಳೆಯರು ಸಾಕಷ್ಟಿದ್ದಾರೆ. ಆದರೆ ಈ ಆವರಣದಲ್ಲಿ ವಿಶ್ರಾಂತಿ ಕೊಠಡಿ ಇಲ್ಲ. ನಾವು ಅಸ್ವಸ್ಥರಾಗಿದ್ದರೆ ವಾಶ್‌ರೂಮ್ ಅಥವಾ ಲಾಕರ್ ಕೋಣೆಗೆ ಹೋಗುವುದು ಒಂದೇ ಆಯ್ಕೆಯಾಗಿದೆ. ಹಾಸಿಗೆ ಇರುವ ಒಂದು ಕೋಣೆ ಇದೆ. ಆದರೆ ಇಲ್ಲಿ ಕಾರ್ಮಿಕರನ್ನು 10 ನಿಮಿಷಗಳ ಅನಂತರ ಹೊರಡಲು ಕೇಳಲಾಗುತ್ತದೆ. ನಾನು ದಿನಕ್ಕೆ ಒಂಬತ್ತು ಗಂಟೆಗಳ ಕಾಲ ನಿಲ್ಲುತ್ತೇನೆ ಮತ್ತು ಪ್ರತಿ ಗಂಟೆಗೆ 60 ಸಣ್ಣ ಉತ್ಪನ್ನ ಅಥವಾ 40 ಮಧ್ಯಮ ಗಾತ್ರದ ಉತ್ಪನ್ನಗಳನ್ನು ತೆಗೆದುಕೊಂಡು ಹೋಗಬೇಕು ಎಂದು ದೂರಿದ್ದಾರೆ.

Continue Reading

ಕರ್ನಾಟಕ

Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Petrol Diesel Price: ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಚುನಾವಣೆ ಮುಗಿದ ಕಾರಣ ಬೆಲೆಯೇರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Petrol Diesel Price
Koo

ಬೆಂಗಳೂರು: ರಾಜ್ಯದ ಜನರಿಗೆ ಐದು ಉಚಿತ ಗ್ಯಾರಂಟಿಗಳನ್ನು ನೀಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮದ್ಯದ ಬೆಲೆ ಹಾಗೂ ಆಸ್ತಿ ನೋಂದಣಿ ಶುಲ್ಕವನ್ನು ಹೆಚ್ಚಿಸಿ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾಗಿತ್ತು. ಈಗ ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಹೌದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ (Petrol Diesel Price) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.

Rs 8 to 10 price cut in Petrol and Diesel, PM Modi to announce on year end

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಮತ್ತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆತೀಕ್‌ ಅವರು ಸಿದ್ದರಾಮಯ್ಯ ಅವರ ಎದುರು ಕಡತ ಮುಂದಿರಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಅಂಕಿತ ಹಾಕಿದ್ದಾರೆ.

ಸಿದ್ದರಾಮಯ್ಯ ಅವರು ಸಹಿ ಹಾಕಿದ ಮರುದಿನವೇ ಅಂದರೆ, ಜೂನ್‌ 15ರಂದು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲಾಗಿದೆ. ಇದರಿಂದಾಗಿ ತಕ್ಷಣದಿಂದಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಆಗಿದೆ. ಮದ್ಯದ ಬೆಲೆಯೇರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರವು ಖಜಾನೆಗೆ ಹಣ ತುಂಬಿಸಿಕೊಳ್ಳುತ್ತಿದೆ. ಆಸ್ತಿ ನೋಂದಣಿ ಶುಲ್ಕವನ್ನೂ ಏರಿಕೆ ಮಾಡಿದೆ. ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ

ಇದನ್ನೂ ಓದಿ: Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Continue Reading

ವಾಣಿಜ್ಯ

Windfall Tax: ಕಚ್ಚಾ ತೈಲದ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ 3,250 ರೂ.ಗೆ ಇಳಿಸಿದ ಸರ್ಕಾರ

Windfall Tax: ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲ (Crude oil)ದ ಮೇಲಿನ ಅನಿರೀಕ್ಷಿತ ಲಾಭ ತೆರಿಗೆಯನ್ನು ಸರ್ಕಾರ ಶನಿವಾರದಿಂದ(ಜೂನ್‌ 15) ಜಾರಿಗೆ ಬರುವಂತೆ ಪ್ರತಿ ಟನ್‌ಗೆ 5,200 ರೂ.ಗಳಿಂದ 3,250 ರೂ.ಗೆ ಇಳಿಸಿದೆ. ಡೀಸೆಲ್, ಪೆಟ್ರೋಲ್ ಮತ್ತು ಜೆಟ್ ಇಂಧನ ಅಥವಾ ಎಟಿಎಫ್ ರಫ್ತಿನ ಮೇಲಿನ ಎಸ್ಎಇಡಿಯನ್ನು ‘ಶೂನ್ಯ’ದಲ್ಲಿ ಉಳಿಸಿಕೊಳ್ಳಲಾಗಿದೆ. ಹೊಸ ದರಗಳು ಜೂನ್ 15ರಿಂದ ಜಾರಿಗೆ ಬರಲಿವೆ ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.

VISTARANEWS.COM


on

Windfall Tax
Koo

ಮುಂಬೈ: ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲ (Crude oil)ದ ಮೇಲಿನ ಅನಿರೀಕ್ಷಿತ ಲಾಭ ತೆರಿಗೆ (Windfall Tax)ಯನ್ನು ಸರ್ಕಾರ ಶನಿವಾರದಿಂದ(ಜೂನ್‌ 15) ಜಾರಿಗೆ ಬರುವಂತೆ ಪ್ರತಿ ಟನ್‌ಗೆ 5,200 ರೂ.ಗಳಿಂದ 3,250 ರೂ.ಗೆ ಇಳಿಸಿದೆ.

ಈ ತೆರಿಗೆಯನ್ನು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (Special Additional Excise Duty-SAED) ರೂಪದಲ್ಲಿ ವಿಧಿಸಲಾಗುತ್ತದೆ. ಡೀಸೆಲ್, ಪೆಟ್ರೋಲ್ ಮತ್ತು ಜೆಟ್ ಇಂಧನ ಅಥವಾ ಎಟಿಎಫ್ ರಫ್ತಿನ ಮೇಲಿನ ಎಸ್ಎಇಡಿಯನ್ನು ‘ಶೂನ್ಯ’ದಲ್ಲಿ ಉಳಿಸಿಕೊಳ್ಳಲಾಗಿದೆ. ಹೊಸ ದರಗಳು ಜೂನ್ 15ರಿಂದ ಜಾರಿಗೆ ಬರಲಿವೆ ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.

ಭಾರತವು ಮೊದಲ ಬಾರಿಗೆ 2022ರ ಜುಲೈ 1ರಂದು ಅನಿರೀಕ್ಷಿತ ಲಾಭ ತೆರಿಗೆಯನ್ನು ವಿಧಿಸಿತು. ಈ ಮೂಲಕ ಇಂಧನ ಕಂಪನಿಗಳ ಸೂಪರ್‌ ನಾರ್ಮಲ್‌ ಲಾಭಗಳಿಗೆ ತೆರಿಗೆ ವಿಧಿಸುವ ಹಲವು ರಾಷ್ಟ್ರಗಳ ಸಾಲಿಗೆ ಸೇರಿಕೊಂಡಿತು. ಹಿಂದಿನ ಎರಡು ವಾರಗಳ ಸರಾಸರಿ ತೈಲ ಬೆಲೆಗಳ ಆಧಾರದ ಮೇಲೆ ತೆರಿಗೆ ದರಗಳನ್ನು ಪ್ರತಿ ಹದಿನೈದು ದಿನಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ.

ಜೂನ್ 1ರಂದು ಸರ್ಕಾರವು ಪೆಟ್ರೋಲಿಯಂ ಕಚ್ಚಾ ತೈಲದ ಮೇಲಿನ ಅನಿರೀಕ್ಷಿತ ಲಾಭ ತೆರಿಗೆಯನ್ನು ಪ್ರತಿ ಮೆಟ್ರಿಕ್ ಟನ್‌ಗೆ 5,700 ರೂ.ಗಳಿಂದ 5,200 ರೂ.ಗೆ ಇಳಿಸಿತ್ತು. ಮೇ 16ರಂದು ಪೆಟ್ರೋಲಿಯಂ ಮೇಲಿನ ತೆರಿಗೆಯನ್ನು ಪ್ರತಿ ಮೆಟ್ರಿಕ್ ಟನ್ ಗೆ 8,400 ರೂ.ಗಳಿಂದ 5,700 ರೂ.ಗೆ ಇಳಿಸಲಾಗಿತ್ತು.

ಇದನ್ನೂ ಓದಿ: Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

2022ರಲ್ಲಿ ಭಾರತವು ಕಚ್ಚಾ ತೈಲ ಉತ್ಪಾದನೆ ಮತ್ತು ಗ್ಯಾಸೋಲಿನ್, ಡೀಸೆಲ್ ಮತ್ತು ವಾಯುಯಾನ ಇಂಧನದ ರಫ್ತು ಗುರಿಯಾಗಿಸಿಕೊಂಡು ಈ ಹೊಸ ತೆರಿಗೆಯನ್ನು ಪರಿಚಯಿಸಿತು. ಈ ಉಪಕ್ರಮವು ಕಚ್ಚಾ ತೈಲ ಬೆಲೆಗಳ ಏರಿಕೆಯ ಅವಧಿಯಲ್ಲಿ ತೈಲ ಉತ್ಪಾದನಾ ಕಂಪನಿಗಳು ಗಳಿಸಿದ ಗಮನಾರ್ಹ ಲಾಭವನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಈ ಬೆಲೆ ಏರಿಕೆಗಳು ಸಾಮಾನ್ಯವಾಗಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಸೇರಿದಂತೆ ಭೌಗೋಳಿಕ ರಾಜಕೀಯ ಘಟನೆಗಳಿಂದ ಪ್ರಭಾವಿತವಾಗಿರುತ್ತವೆ.

Continue Reading
Advertisement
SCO vs AUS
ಕ್ರೀಡೆ21 mins ago

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

Darshan Arrested vinish write special message for darshan fathers day
ಸ್ಯಾಂಡಲ್ ವುಡ್36 mins ago

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

INDW vs SAW
ಕ್ರೀಡೆ55 mins ago

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

Kannada New Movie Maryade Prashne out now
ಸ್ಯಾಂಡಲ್ ವುಡ್56 mins ago

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Darshan Arrested
ಕರ್ನಾಟಕ1 hour ago

Darshan Arrested: ಕೊಲೆ ಬಳಿಕ ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ; ಇಂದು ಸ್ಥಳ ಮಹಜರು!

Kotee Movie Review dolly dhanjay News In Kannada
ಸ್ಯಾಂಡಲ್ ವುಡ್1 hour ago

Kotee Movie Review: ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾದಾಗ?!

Illegal beef trade
ದೇಶ1 hour ago

ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Actor Darshan ACP Chandan Kumar work salute by people
ಕ್ರೈಂ1 hour ago

Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

Euro 2024
ಕ್ರೀಡೆ1 hour ago

Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

Bihar Women
ದೇಶ2 hours ago

ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ20 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌