Money Plus : ದುಡ್ಡು ಬಿತ್ತಿ ದುಡ್ಡನ್ನು ಬೆಳೆಸುವುದು ಹೇಗೆ? - Vistara News

ವಾಣಿಜ್ಯ

Money Plus : ದುಡ್ಡು ಬಿತ್ತಿ ದುಡ್ಡನ್ನು ಬೆಳೆಸುವುದು ಹೇಗೆ?

ವಿಸ್ತಾರ ನ್ಯೂಸ್‌ನ ಎಕ್ಸಿಕ್ಯುಟಿವ್‌ ಎಡಿಟರ್‌ ಶರತ್‌ ಎಂ.ಎಸ್‌ ಅವರ (Money Plus ) ಬಹು ನಿರೀಕ್ಷಿತ ಎರಡನೇ ಪುಸ್ತಕ ದುಡ್ಡು ಬಿತ್ತಿ ದುಡ್ಡು ಬೆಳೆಯಿರಿ ಕೃತಿಯಲ್ಲೇನಿದೆ? ವರದಿ ಮತ್ತು ವಿಡಿಯೊ ವೀಕ್ಷಿಸಿ.

VISTARANEWS.COM


on

Money
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ದುಡ್ಡು ಬಿತ್ತಿ ದುಡ್ಡು ಬೆಳೆಯಿರಿ…ಇದು (Money Plus) ವಿಸ್ತಾರ ನ್ಯೂಸ್‌ನ ಎಕ್ಸಿಕ್ಯುಟಿವ್‌ ಎಡಿಟರ್‌ ಶರತ್‌ ಎಂ.ಎಸ್‌ ಅವರು ಮ್ಯೂಚುವಲ್‌ ಫಂಡ್‌ ಬಗ್ಗೆ ಬರೆದಿರುವ ಮೊದಲ ಪುಸ್ತಕ. ಹಾಗೂ ಹಣಕಾಸು ವಿಚಾರಕ್ಕೆ ಸಂಬಂಧಿಸಿ ಎರಡನೇ ಪುಸ್ತಕವಾಗಿದೆ.

ಕನ್ನಡದಲ್ಲಿ ಮ್ಯೂಚುವಲ್‌ ಫಂಡ್‌ ಬಗ್ಗೆ ತಿಳಿದುಕೊಳ್ಳಲು ಮೌಲಿಕವಾದ ಕೃತಿಗಳ ಕೊರತೆ ಇದೆ. ಹೀಗಾಗಿ ಮ್ಯೂಚುವಲ್‌ ಫಂಡ್‌ ಸಲುವಾಗಿ ಸಮಗ್ರವಾಗಿ ಕನ್ನಡಿಗರೇ, ಕನ್ನಡಿಗರಿಗಾಗಿ ಬರೆದಿರುವ ಪುಸ್ತಕ ಇದಾಗಿದೆ. ಇವತ್ತು ಮ್ಯೂಚುವಲ್‌ ಫಂಡ್‌ ಹಾಗೂ ಷೇರುಗಳ ಬಗ್ಗೆ ತಿಳಿದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂಬಷ್ಟರಮಟ್ಟಿಗೆ ಅನಿವಾರ್ಯವಾಗಿದೆ. ಏಕೆಂದರೆ ಸಾಂಪ್ರದಾಯಿಕ ಹೂಡಿಕೆಯ ಸಾಧನಗಳು ಈಗ ಹೂಡಿಕೆದಾರರಿಗೆ ಹಣದುಬ್ಬರದ ಎದುರು ನಿರೀಕ್ಷಿತ ಫಲ ನೀಡುತ್ತಿಲ್ಲ. ಇವತ್ತು ಬ್ಯಾಂಕಿನಲ್ಲಿ ಎಫ್‌ಡಿಯಲ್ಲಿ 7% ಬಡ್ಡಿ ಸಿಗುವುದಿದ್ದರೆ ಹಣದುಬ್ಬರದ ಪರಿಣಾಮ ವಾಸ್ತವವಾಗಿ ಏನೂ ಪ್ರತಿಫಲ ಸಿಗುವುದಿಲ್ಲ. ಆದರೆ ಈಕ್ವಿಟಿ ಮ್ಯೂಚುವಲ್‌ ಫಂಡ್‌ಗಳು 12-13% ಲಾಭಾಂಶ ನೀಡಿರುವ ಐತಿಹಾಸಿಕ ನಿದರ್ಶನಗಳು ಇವೆ.

ನೇರವಾಗಿ ಷೇರುಗಳಲ್ಲಿ ಹೂಡಿಕೆ ಮಾಡಲು ಸಾಧ್ಯವಾಗದಿದ್ದರೆ, ಮ್ಯೂಚುವಲ್‌ ಫಂಡ್‌ಗಳಲ್ಲಿ ಹೂಡಿಕೆ ಮಾಡುವ ಮೂಲಕ ಷೇರು ಮಾರುಕಟ್ಟೆಯನ್ನು ಪ್ರವೇಶಿಸಬಹುದು. ಬೆಲೆ ಏರಿಕೆಯನ್ನು ಮೀರಿ ನಮ್ಮ ಹಣ ಬೆಳೆಯುವಂತೆ ಮಾಡಬಹುದು. ಮಾತ್ರವಲ್ಲದೆ ಮ್ಯೂಚುವಲ್‌ ಫಂಡ್‌ಗಳಲ್ಲಿ ದುಡ್ಡು ಸೇಫಾ? ಹೇಗೆ ಹೂಡಿಕೆ ಮಾಡಬೇಕು ಇತ್ಯಾದಿ ಅಂಶಗಳನ್ನು 38 ಅಧ್ಯಾಯಗಳಲ್ಲಿ ಪುಸ್ತಕವನ್ನು ರಚಿಸಲಾಗಿದೆ.

ಈ ಪುಸ್ತಕದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಬಹುದಾದ ಉದಾಹರಣೆಗಳನ್ನು ವಿವರಿಸಲಾಗಿದೆ. ಮ್ಯೂಚುವಲ್‌ ಫಂಡ್‌ಗಳಲ್ಲಿ ರಿಸ್ಕ್‌ ಇದೆಯೇ? ಇದ್ದರೆ ಎಷ್ಟಿದೆ? ಇದರಲ್ಲಿ ಏನು ಮಾಡಬೇಕು-ಏನು ಮಾಡಬಾರದು ಎಂಬುದನ್ನು ವಿವರಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Bengaluru Airport : ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ 2 ದಶಲಕ್ಷ ಚದರ ಅಡಿ ಪ್ರದೇಶದ ಬಿಸಿನೆಸ್ ಪಾರ್ಕ್ ತೆರೆಯಲು ಮೊದಲ ಹೆಜ್ಜೆ ಇಟ್ಟಿದೆ.

VISTARANEWS.COM


on

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗ ಸಂಸ್ಥೆಯಾದ (Bengaluru Airport) ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

Construction of Business Park of Bangalore Airport City Limited a subsidiary of Bangalore International Airport Limited

ಈ ಬ್ಯುಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್‌ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, “ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್‌ ಕ್ಷೇತ್ರದಲ್ಲಿ ಶೇ. 36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (GCCs) ಬೆಂಗಳೂರು, ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹ ಕೊಡಲಿದೆ.

ಇದನ್ನೂ ಓದಿ: Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್ ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3D ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್‌ ಆವರಣದಲ್ಲಿರುವ ಹೋಟೆಲ್‌ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ & ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್‌ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿ ಯ ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ, ಬೃಹತ್‌ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು , ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ, ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

ಇನ್ನು, ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್‌ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ, ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. BIAL ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಕಳೆದ ವರ್ಷ 37.5 ದಶಲಕ್ಷ ರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030 ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವುಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌