ನವ ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಚೀನಾ ಮೂಲದ ಸ್ಮಾರ್ಟ್‌ಫೋನ್ ಉತ್ಪಾದಕ ವಿವೊ ಕಂಪನಿಯ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು ೪೪ ಸ್ಥಳಗಳಲ್ಲಿ ತನಿಖೆ ನಡೆಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ವಿವೊ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಆದಾಯ ತೆರಿಗೆ ಇಲಾಖೆಯು ಹಲವು ಚೀನಿ ಮೊಬೈಲ್ ಕಂಪನಿಗಳ ಮೇಲೆ ದಾಳಿ ನಡೆಸಿತ್ತು. ಚೀನಿ ಮೊಬೈಲ್ ಕಂಪನಿಗಳು ತಮ್ಮ ಆದಾಯದಲ್ಲಿ ಭಾರಿ ನಷ್ಟವನ್ನು ತೋರಿಸಿ, ತೆರಿಗೆ ವಂಚಿಸುತ್ತಿವೆ ಎಂಬ ಸುಳಿವಿನ ಮೇರೆಗೆ ಐಟಿ ಇಲಾಖೆ ದಾಳಿ ನಡೆಸಿತ್ತು.