Inflation : 20 ವರ್ಷಗಳಲ್ಲೇ ಗರಿಷ್ಠ ಎತ್ತರಕ್ಕೇರಿದ್ದ ಹೋಲ್‌ಸೇಲ್‌ ಹಣದುಬ್ಬರ ಮೈನಸ್‌ 0.92%ಕ್ಕೆ ಏಪ್ರಿಲ್‌ನಲ್ಲಿ ಇಳಿಕೆ Inflation Wholesale inflation which was the highest in 20 years decreased to minus 0.92% in April

ಪ್ರಮುಖ ಸುದ್ದಿ

Inflation : 20 ವರ್ಷಗಳಲ್ಲೇ ಗರಿಷ್ಠ ಎತ್ತರಕ್ಕೇರಿದ್ದ ಹೋಲ್‌ಸೇಲ್‌ ಹಣದುಬ್ಬರ ಮೈನಸ್‌ 0.92%ಕ್ಕೆ ಏಪ್ರಿಲ್‌ನಲ್ಲಿ ಇಳಿಕೆ

Inflation ಕಳೆದ ವರ್ಷ ಇದೇ ಅವಧಿಯಲ್ಲಿ 20 ವರ್ಷಗಳಲ್ಲೇ ಗರಿಷ್ಠ ಹಣದುಬ್ಬರ ದಾಖಲಾಗಿತ್ತು. ಇದೀಗ ಅದು ಮೈನಸ್‌ ಹಂತಕ್ಕೆ ಕುಸಿದಿದ್ದು, ರಿಟೇಲ್‌ ಹಣದುಬ್ಬರ ಕೂಡ ತಗ್ಗುವ ನಿರೀಕ್ಷೆ ಮೂಡಿಸಿದೆ.

VISTARANEWS.COM


on

Retail Inflation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಳೆದ ಏಪ್ರಿಲ್‌ನಲ್ಲಿ ಸಗಟು ಹಣದುಬ್ಬರ (wholesale price base inflation) ಮೈನಸ್‌ 0.92%ಕ್ಕೆ ಇಳಿಕೆಯಾಗಿದೆ. ಸುಮಾರು ಮೂರು ವರ್ಷಗಳ ಬಳಿಕ ಮೊದಲ ಬಾರಿಗೆ ಹೋಲ್‌ ಸೇಲ್‌ ಹಣದುಬ್ಬರ ತಗ್ಗಿದೆ. 2023ರ ಮಾರ್ಚ್‌ನಲ್ಲಿ ಸಗಟು ಹಣದುಬ್ಬರ 1.34% ಮತ್ತು ಕಳೆದ ವರ್ಷ ಏಪ್ರಿಲ್‌ನಲ್ಲಿ 15.38% ಇತ್ತು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.

2020ರ ಜುಲೈನಿಂದೀಚೆಗೆ ಸಗಟು ಹಣದುಬ್ಬರ ಋಣಾತ್ಮಕ ಮಟ್ಟಕ್ಕೆ ಇಳಿಕೆಯಾಗಿದೆ. ಕಳೆದ ವರ್ಷ ಮೇನಲ್ಲಿ 20 ವರ್ಷದಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದ್ದ ಸಗಟು ಹಣದುಬ್ಬರ (16.63%) ಇದೀಗ ಮೈನಸ್‌ 0.92%ಕ್ಕೆ ತಗ್ಗಿರುವುದು ಗಮನಾರ್ಹ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: Retail inflation : ಮಾರ್ಚ್‌ನಲ್ಲಿ ಚಿಲ್ಲರೆ ಹಣದುಬ್ಬರ 5.66%ಕ್ಕೆ ಇಳಿಕೆ

ಏಪ್ರಿಲ್‌ನಲ್ಲಿ ಆಹಾರ ವಸ್ತುಗಳ ಹಣದುಬ್ಬರ 3.54%ಕ್ಕೆ ಇಳಿಕೆಯಾಗಿದೆ. ಮಾರ್ಚ್‌ನಲ್ಲಿ ಇದು 5.48% ಇತ್ತು. ಲೋಹ, ಆಹಾರ ವಸ್ತುಗಳು, ಅದಿರು, ತೈಲ, ಜವಳಿ, ಆಹಾರೇತರ ವಸ್ತುಗಳು, ರಾಸಾಯನಿಕ, ರಬ್ಬರ್‌ ಮತ್ತು ಪ್ಲಾಸ್ಟಕ್‌ ಉತ್ಪನ್ನಗಳ ದರಗಳು ಇಳಿಕೆಯಾಗಿವೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ. ಶನಿವಾರ ತಡರಾತ್ರಿವೆರೆಗೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ಅವರ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ ಎನ್ನುವುದರ ಮಾಹಿತಿ ಇಲ್ಲಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಶನಿವಾರ ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆ. ಈ ಮಧ್ಯೆ ಎಚ್‌.ಡಿ.ರೇವಣ್ಣ ಅವರ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ ಎನ್ನುವ ಮಾಹಿತಿ ಇಲ್ಲಿದೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತ್ತು. ಶನಿವಾರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿತ್ತು. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ರೇವಣ್ಣ ಅರೆಸ್ಟ್ ಆದ ಬೆನ್ನಲ್ಲೆ ನಿರೀಕ್ಷಣಾ ಜಾಮೀನು ಅರ್ಜಿ ತನ್ನಿಂದ ತಾನೆ ವಜಾ ಆಗಿದೆ. ಹೀಗಾಗಿ ನಾಳೆ (ಜನವರಿ 6) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೆಗ್ಯುಲರ್ ಜಾಮೀನಿಗಾಗಿ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಸಂತ್ರಸ್ತೆ ಪತ್ತೆಯಾಗಿದ್ದು, ರೇವಣ್ಣ ಅವರಿಗೂ ಅಪಹರಣ ಕೇಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ವಾದ ಮಂಡಿಸುವ ಸಾಧ್ಯತೆ ಇದೆ.

ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಜಾಮೀನು ರದ್ದಾದರೆ?

ಇನ್ನು ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಜಾಮೀನು ರದ್ದಾದರೆ ರೇವಣ್ಣ ಅವರು ಹೈಕೋರ್ಟ್‌ನ ಕದ ತಟ್ಟಲಿದ್ದಾರೆ. ಹೈಕೋರ್ಟ್‌ನ ಜನಪ್ರತಿನಿಧಿಗಳ ಪೀಠದಲ್ಲಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಇದೆ. ಇದೆಲ್ಲವೂ ಅಪಹರಣಕ್ಕೊಳಗಾದ ಸಂತ್ರಸ್ತೆ ನೀಡುವ ಹೇಳಿಕೆಗಳ ಮೇಲೆ ನಿರ್ಧಾರವಾಗುತ್ತದೆ. ಒಂದು ವೇಳೆ ಸಂತ್ರಸ್ತೆ ರೇವಣ್ಣ ಪರ ಗುರುತರ ಆರೋಪಗಳನ್ನ ಮಾಡದಿದ್ದರೆ ಸುಲಭವಾಗಿ ಜಾಮೀನು ಸಿಗಬಹುದು. ಬದಲಾಗಿ ರೇವಣ್ಣ ವಿರುದ್ಧ ಸಂತ್ರಸ್ತೆ ಅಪಹರಣ, ಕಿರುಕುಳದ ಆರೋಪ ಮಾಡಿ ಅದು ಸಾಬೀತಾದರೆ ಜಾಮೀನು ಲಭಿಸುವುದು ಕಷ್ಟ ಎಂದು ಮೂಲಗಳು ತಿಳಿಸಿವೆ.

ವಿಚಾರಣೆ ವೇಳೆ ರೇವಣ್ಣ ಏನಂದ್ರು?

ಇನ್ನು ಶನಿವಾರ ತಡರಾತ್ರಿವರೆಗೂ ರೇವಣ್ಣ ಅವರ ವಿಚಾರಣೆ ನಡೆಸಲಾಯಿತು. ಎಸ್ಐಟಿ ಹಿರಿಯ ಅಧಿಕಾರಿಗಳು ಅಪಹರಣ ಪ್ರಕರಣದ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದರು. ಎಸ್ಐಟಿ ಎಡಿಜಿಪಿ ಬಿ.ಕೆ.ಸಿಂಗ್ ಹಾಗೂ ತಂಡ ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಆ ವೇಳೆ ತಮ್ಮ ಮೇಲಿನ ಆರೋಪಗಳನ್ನು ರೇವಣ್ಣ ನಿರಾಕರಿಸಿದ್ದಾರೆ.

ʼʼನಾವು ಆಕೆಯನ್ನ ಅಪಹರಣ ಮಾಡಿಲ್ಲ. ಚುನಾವಣೆ ಇರುವ ಇರುವ ಕಾರಣ ಆಕೆ ನಮ್ಮ ಮನೆಗೆ ಬಂದಿದ್ದರು. ಅವರು ಕೆಲವು ವರ್ಷಗಳಿಂದ ನಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಅದಷ್ಟೆ ಗೊತ್ತು‌. ಅದನ್ನ ಹೊರತುಪಡಿಸಿ ಆಕೆಯ ಬಗ್ಗೆಯಾಗಲಿ, ಅಪರಹರಣದ ಬಗ್ಗೆಯಾಗಲೀ ಯಾವುದೂ ಗೊತ್ತಿಲ್ಲʼʼ ಎಂದು ರೇವಣ್ಣ ತಿಳಿಸಿದ್ದಾರೆ. ಇಂದು ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ರೇವಣ್ಣ ಅವರನ್ನು ಹಾಜರು ಪಡಿಸಿ ಬಳಿಕ ಎಸ್‌ಐಟಿ ತಮ್ಮ ಕಷ್ಟಡಿಗೆ ಕೇಳಲಿದೆ.

ಇದನ್ನೂ ಓದಿ: HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Continue Reading

ಕರ್ನಾಟಕ

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿವರೆಗೂ ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ರೇವಣ್ಣ ಅವರು ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇಂದು (ಭಾನುವಾರ) ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿವರೆಗೂ ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ರೇವಣ್ಣ ಅವರು ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಆತಂಕದಲ್ಲಿ ರೇವಣ್ಣ

ಎಸ್‌ಐಟಿ ವಶದಲ್ಲಿರುವ ರೇವಣ್ಣ ಒತ್ತಡದಲ್ಲಿರುವಂತೆ ಕಂಡು ಬಂತು. ಮುಂದೇನಾಗುತ್ತೋ ಎನ್ನುವ ಆತಂಕದಲ್ಲಿ ಅವರು ತಡರಾತ್ರಿಯವರೆಗೂ ನಿದ್ದೆ ಮಾಡಲಿಲ್ಲ ಎಂದು ಮೂಲಗಳು ತಿಳಿಸಿವೆ. ಇಂದು (ಭಾನುವಾರ) ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ಈ ರೀತಿ ಹಾಜರುಪಡಿಸಿದಾಗ ನ್ಯಾಯಾಧೀಶರಿಗೆ ಪಿಸಿ ಕಸ್ಟಡಿಗೆ ನೀಡಲು ಅವಕಾಶವಿಲ್ಲ. ಹೀಗಾಗಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತ ರೆಗ್ಯುಲರ್ ಬೇಲ್‌ಗೆ ಅರ್ಜಿ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಬೇಲ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ಎಸ್‌ಐಟಿ ಪರ ವಕೀಲರೂ ಕಸ್ಟಡಿಗೆ ಕೇಳಲಿದ್ದಾರೆ ಎನ್ನಲಾಗಿದೆ.

ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ರೇವಣ್ಣ

ಶಿನಿವಾರ ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆದಿದ್ದಾರೆ. ಇನ್ನು, ಎಸ್‌ಐಟಿ ಸೆಲ್‌ನಲ್ಲಿ ಎಚ್‌.ಡಿ.ರೇವಣ್ಣ ಅವರು ಗಳಗಳನೆ ಅತ್ತಿದ್ದಾರೆ ಎನ್ನಲಾಗಿದೆ. ಮಗ ವಿದೇಶಕ್ಕೆ ಪರಾರಿಯಾಗಿದ್ದಾನೆ. ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ. ಈಗ ನಾನು ಸೆಲ್‌ನಲ್ಲಿ ಇರಬೇಕಾಯಿತಲ್ಲ ಎಂಬುದನ್ನು ನೆನೆದು ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

ಈ ಮಧ್ಯೆ ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ ಎನ್ನಲಾಗಿದೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ, ನಿಷ್ಪಕ್ಷಪಾತ ತನಿಖೆಯಾಗಲಿ

ಬಂಧಿತ ರೇವಣ್ಣ ಅವರ ಪುತ್ರ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಇವರು ಇನ್ನೂ ಎಸ್‌ಐಟಿಗೆ ಸಿಕ್ಕಿಲ್ಲ. ಪ್ರಜ್ವಲ್‌ ಅವರ ಸುಳಿವು ಪತ್ತೆ ಹಚ್ಚಲು ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್‌ ನೋಟಿಸ್ ಪಡೆಯಲು ಎಸ್‌ಐಟಿ ಪ್ರಯತ್ನಿಸುತ್ತಿದೆ.‌ ಪ್ರಭಾವಿಗಳೇ ಭಾಗಿಯಾಗಿರುವ ಆರೋಪವಿರುವ ಪ್ರಕರಣದ ಕುರಿತು ನಿಷ್ಪಕ್ಷಪಾತವಾದ ತನಿಖೆಯಾದರೆ ಮಾತ್ರ ಸಂತ್ರಸ್ತರಿಗೆ ಕನಿಷ್ಠ ನ್ಯಾಯ ಒದಗಿಸಲು ಸಾಧ್ಯವಾಗಲಿದೆ.

VISTARANEWS.COM


on

Vistara Editorial
Koo

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್‌.ಡಿ.ರೇವಣ್ಣ (HD Revanna) ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಲೇ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದರು. ಕರ್ನಾಟಕ ಸೇರಿ ದೇಶಾದ್ಯಂತ ಸುದ್ದಿಯಾಗಿರುವ ಪೆನ್‌ಡ್ರೈವ್‌ ಕೇಸ್‌ನಲ್ಲಿ (Pendrive Case) ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪುತ್ರ ಎಸ್‌ಐಟಿ ವಶಕ್ಕೆ ಸೇರಿದ್ದು, ಪ್ರಕರಣಕ್ಕೆ ಮಹತ್ವದ ತಿರುವೊಂದು ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ. ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲೇ ಅವರು ಸೆರೆಸಿಕ್ಕಿದ್ದಾರೆ. ಇಲ್ಲಿಗೆ ಪ್ರಕರಣ ಕುತೂಹಲಕಾರಿ ಘಟ್ಟ ಮುಟ್ಟಿದೆ.

ರೇವಣ್ಣ ಅವರ ಪುತ್ರ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಇವರು ಇನ್ನೂ ಎಸ್‌ಐಟಿಗೆ ಸಿಕ್ಕಿಲ್ಲ. ಪ್ರಜ್ವಲ್‌ ಅವರ ಸುಳಿವು ಪತ್ತೆ ಹಚ್ಚಲು ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್‌ ನೋಟೀಸ್‌ ಪಡೆಯಲು ಎಸ್‌ಐಟಿ ಪ್ರಯತ್ನಿಸುತ್ತಿದೆ. ಅವರು ಎಲ್ಲಿದ್ದಾರೆ ಎಂಬ ಸುಳಿವು ಸಿಕ್ಕಿದ್ದರೆ ಅವರ ಬಂಧನ ಪ್ರಕ್ರಿಯೆ ಸುಲಭವಾಗಲಿದೆ. “ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ರೇವಣ್ಣ ನಡೆದುಕೊಳ್ಳುತ್ತಾರೆ. ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ ಪ್ರಜ್ವಲ್‌ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಪ್ರಕರಣ ಗಂಭೀರ ಸ್ವರೂಪದ್ದಾಗಿರುವುದರಿಂದ, ಸಂತ್ರಸ್ತರು ತುಂಬಾ ಮಂದಿ ಇರುವುದರಿಂದ, ಎಸ್‌ಐಟಿ ಚುರುಕಾಗಿ ತನಿಖೆ ನಡೆಸುತ್ತಿದೆ. ಇನ್ನು, ಆಡಳಿತ ಪಕ್ಷ ಕಾಂಗ್ರೆಸ್‌ಗೆ ಜೆಡಿಎಸ್‌ ಅನ್ನು ಹಣಿಯಲು ಸಿಕ್ಕಿರುವ ಸುವರ್ಣಾವಕಾಶವೂ ಇದಾಗಿರುವುದರಿಂದ, ಗೃಹ ಇಲಾಖೆಯೂ ಬಹಳ ಚುರುಕಾಗಿಯೇ ಇದರಲ್ಲಿ ತೊಡಗಿಕೊಂಡಿದೆ. ಪೊಲೀಸರ ಚುರುಕುತನಕ್ಕೆ ಕಾನೂನು ಪ್ರಕಾರ ನಡೆದುಕೊಳ್ಳಬೇಕು ಎಂಬ ನ್ಯಾಯನಿಷ್ಪಕ್ಷಪಾತತೆ ಕಾರಣವೋ, ಅಥವಾ ಮೇಲಿನವರ ಒತ್ತಡವೋ ಎಂದು ಕೇಳಿದರೆ ಸರಿಯಾದ ಉತ್ತರ ಸಿಗಲಾರದು. ಪ್ರಭಾವಿಗಳು ಅಪರಾಧ ನಡೆಸಿದಾಗ ಅವರನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಇಷ್ಟೊಂದು ಚುರುಕಾಗಿ ಕಾರ್ಯಪ್ರವೃತ್ತರಾಗುವುದನ್ನು ಹಿಂದೆ ಎಂದೂ ಈ ರಾಜ್ಯ ಕಂಡಿರಲಿಲ್ಲ. ಅಷ್ಟರ ಮಟ್ಟಿಗೆ ಪೊಲೀಸ್‌ ಇಲಾಖೆಯನ್ನು ಚುರುಕಾಗಿಸಿದ ಈ ಪ್ರಕರಣ ವಿಶೇಷವೇ ಸರಿ.

ಕಾನೂನಿನ ಕೈಗಳಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ. ನ್ಯಾಯದ ಮುಂದೆ ಎಲ್ಲರೂ ಒಂದೇ. ಇವೆರಡೂ ಸುಂದರವಾದ ಹೇಳಿಕೆಗಳು. ಆದರೆ ವಾಸ್ತವದಲ್ಲಿ ಇವು ಎಷ್ಟು ಸತ್ಯವಾಗಿವೆ ಎಂಬುದನು ಪರಿಶೀಲಿಸಬೇಕು. ರೇವಣ್ಣ ಹಾಗೂ ಪ್ರಜ್ವಲ್‌ ಇಬ್ಬರೂ ಪ್ರಭಾವಿಗಳು. ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಪ್ರಮುಖ ನಾಯಕರು. ಸಂತ್ರಸ್ತೆ, ದೂರುದಾರರು ಗಟ್ಟಿಯಾಗಿ ನಿಂತು, ಪೊಲೀಸರು ಸಾಕ್ಷ್ಯಗಳನ್ನು ಕರಾರುವಕ್ಕಾಗಿ ಕಲೆಹಾಕಿ ಕೋರ್ಟ್‌ನಲ್ಲಿ ಮಂಡಿಸಿ, ವಿಚಾರಣೆ ಪಾರದರ್ಶಕವಾಗಿ ನಡೆದರೆ ಆರೋಪಿಗಳಿಗೆ ಶಿಕ್ಷೆಯಾಗಬಹುದು. ಇನ್ನು ಮುಂದಿನ ಕೆಲಸ ಪೊಲೀಸರಿಗೂ ಕೋರ್ಟಿಗೂ ಬಿಟ್ಟದ್ದು. ಈ ಹಿಂದಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಎಷ್ಟು ಸಾಬೀತಾಗಿದೆ, ಎಷ್ಟರಲ್ಲಿ ಶಿಕ್ಷೆಯಾಗಿದೆ ಎಂಬ ಅಂಕಿಅಂಶಗಳನ್ನು ತೆಗೆದು ನೋಡಿದರೆ ನಿರಾಶೆಯಾಗುತ್ತದೆ. ಈ ಪ್ರಕರಣವೂ ಆ ಸಾಲಿಗೆ ಸೇರದಿರಲಿ.

“ಅಪರಾಧ ನಡೆದಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿ” ಎಂದು ಜೆಡಿಎಸ್‌ ನಾಯಕ ಕುಮಾರಸ್ವಾಮಿ ಅವರೂ ಹೇಳಿದ್ದಾರೆ; ಬಿಜೆಪಿ ನಾಯಕರೂ ಹೇಳಿದ್ದಾರೆ. ಪ್ರಕರಣದ ಗಂಭೀರತೆ ಅವರನ್ನು ಅಲುಗಾಡಿಸಿರುವುದು ಅವರ ವರ್ತನೆಯಲ್ಲಿ ಗೋಚರಿಸುತ್ತಿದೆ. ಪ್ರಜ್ವಲ್‌ ಹಾಗೂ ರೇವಣ್ಣ ಅವರನ್ನು ಸಮರ್ಥಿಸಿಕೊಳ್ಳಲು ಯಾರೂ ಮುಂದಾಗಿಲ್ಲ, ಅದು ಸಾಧ್ಯವೂ ಇಲ್ಲ. ಆದರೆ ಈ ಚುನಾವಣೆಯ ಸಂದರ್ಭದಲ್ಲಿ ಉಂಟಾದ ಮೈತ್ರಿ ಏನಾಗಲಿದೆ? ಈ ಪ್ರಕರಣದಿಂದ ಜೆಡಿಎಸ್‌ಗಂತೂ ಲಾಭವಿಲ್ಲ. ಬಿಜೆಪಿಗೂ ಇದ್ದಂತಿಲ್ಲ. ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಇದೇ 7ರಂದು ನಡೆಯಲಿದೆ. ಈ ಘಟ್ಟದಲ್ಲೇ ಪ್ರಜ್ವಲ್-‌ ರೇವಣ್ಣ ಪ್ರಕರಣ ಸೃಷ್ಟಿಸಿರುವ ಕೋಲಾಹಲ, ಪಕ್ಷದ ಕಾರ್ಯಕರ್ತರನ್ನು ಹತಾಶೆಗೊಳಿಸಿಲ್ಲ ಅಥವಾ ಮತದಾರರನ್ನು ಜೆಡಿಎಸ್‌ನಿಂದ ವಿಮುಖಗೊಳಿಸಿಲ್ಲ ಎಂದು ಹೇಳುವುದು ಹೇಗೆ? ಇದು ರಾಜ್ಯದ ಚುನಾವಣೆ ಮೇಲೆ ಹೇಗೆ ಪ್ರಭಾವ ಬೀಳುವುದೋ, ಫಲಿತಾಂಶ ಬಂದ ನಂತರವೇ ತಿಳಿಯಬೇಕು. ಆಗ ಬಿಜೆಪಿ- ಜೆಡಿಎಸ್‌ ಮೈತ್ರಿಯ ಕತೆಯೂ ನಿರ್ಧಾರವಾಗಬಹುದು. ಕರ್ನಾಟಕದ ಏಕೈಕ ಪ್ರಬಲ ಪ್ರಾದೇಶಿಕ ಪಕ್ಷವೆನಿಸಿದ್ದ ಜೆಡಿಎಸ್‌ಗೆ ಇದರಿಂದ ಏನಾಗಲಿದೆ? ಅದು ಫೀನಿಕ್ಸ್‌ನಂತೆ ಧೂಳಿನಿಂದ ಮೇಲೆದ್ದು ಬರಲಿದೆಯೋ ಅಥವಾ ಸರ್ವನಾಶವಾಗಲಿದೆಯೋ? ಹೀಗೆ ಹಲವು ಪ್ರಶ್ನೆಗಳು ಮೂಡುತ್ತವೆ.

ಸದ್ಯಕ್ಕಂತೂ ಒಬ್ಬ ಆರೋಪಿಯ ಸೆರೆಯಾಗಿದೆ. ಇನ್ನೊಬ್ಬ ಆರೋಪಿಯ ಬಂಧನವಾಗಬೇಕಿದೆ. ನಿಷ್ಪಕ್ಷಪಾತವಾದ ತನಿಖೆ ನಡೆದು ಸತ್ಯ ಹೊರಬೀಳಲಿ. ನೂರಾರು ಸಂತ್ರಸ್ತೆಯರ ನಿಟ್ಟುಸಿರಿಗೆ ಕಾರಣವಾದವರು ಶಿಕ್ಷೆಗೆ ಒಳಗಾಗಲಿ. ಹಾಗೆಯೇ, ಮುಖ ಬ್ಲರ್‌ ಕೂಡ ಮಾಡದೆ ಸಂತ್ರಸ್ತ ಮಹಿಳೆಯರ ಸಾರ್ವಜನಿಕ ಅವಮಾನಕ್ಕೆ ಕಾರಣವಾದವರಿಗೆ ಕೂಡ ಶಿಕ್ಷೆಯಾಗಲಿ.

ಇದನ್ನೂ ಓದಿ: HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರವು ಮೇಷ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಮಿಥುನ ರಾಶಿಯವರು ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವುದು ಬೇಡ. ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭಫಲ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (05-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 17:41 ವಾರ: ಭಾನುವಾರ
ನಕ್ಷತ್ರ: ಉತ್ತರ ಭಾದ್ರಪದ 19:56 ಯೋಗ: ವೈಧೃತಿ 07:35
ಕರಣ: ಕೌಲವ 07:10 ಅಮೃತಕಾಲ: ಮಧ್ಯಾಹ್ನ 02:47 ರಿಂದ 04:15

ಸೂರ್ಯೋದಯ : 05:58   ಸೂರ್ಯಾಸ್ತ : 06:35

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೇನಿಸುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ:ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ ಇರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಧೈರ್ಯ ಕಾಡಬಹುದು. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವುದು ಬೇಡ. ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ:ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಕಾಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕವಿದೆ. ಹಣಕಾಸು ವಿಷಯದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಬುದ್ಧಿವಂತಿಕೆಯಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಕೋಪವು ಅಪಾಯ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
HD Revanna
ಕರ್ನಾಟಕ8 mins ago

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

Shreyas Talpade hints his heart attack side effect of Covid vaccine
ಬಾಲಿವುಡ್14 mins ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

IPL 2024 Points Table
ಕ್ರಿಕೆಟ್22 mins ago

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

Blood Pressure
ಆರೋಗ್ಯ24 mins ago

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Prajwal Revanna Case
ಕರ್ನಾಟಕ25 mins ago

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Tips To Prevent Curd
ಆಹಾರ/ಅಡುಗೆ36 mins ago

Tips To Prevent Curd: ಮೊಸರು ಹುಳಿಯಾಗದೇ ಇರಲು ಈ ಟಿಪ್ಸ್ ಪಾಲಿಸಿ

Terrorist attack
ದೇಶ55 mins ago

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

HD Revanna
ಕರ್ನಾಟಕ1 hour ago

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

Prawal Revanna Case
ಕರ್ನಾಟಕ2 hours ago

Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

Summer Health Tips
ಆರೋಗ್ಯ2 hours ago

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌