Banking service down : ಸರ್ವರ್‌ ಸಮಸ್ಯೆಯಿಂದ ನೆಟ್ ಬ್ಯಾಂಕಿಂಗ್‌ ಸೇವೆಗಳಿಗೆ ಅಡಚಣೆ, ಗ್ರಾಹಕರ ಪರದಾಟ - Vistara News

ವಾಣಿಜ್ಯ

Banking service down : ಸರ್ವರ್‌ ಸಮಸ್ಯೆಯಿಂದ ನೆಟ್ ಬ್ಯಾಂಕಿಂಗ್‌ ಸೇವೆಗಳಿಗೆ ಅಡಚಣೆ, ಗ್ರಾಹಕರ ಪರದಾಟ

ಎಸ್‌ಬಿಐ ಸೇರಿದಂತೆ ಕೆಲ ಬ್ಯಾಂಕ್‌ಗಳಲ್ಲಿ ತಾಂತ್ರಿಕ ಅಡಚಣೆಯ ಪರಿಣಾಮ ನೆಟ್‌ ಬ್ಯಾಂಕಿಂಗ್‌ ಸೇವೆ ಸಿಗದೆ (Banking service down) ಗ್ರಾಹಕರು ಪರದಾಡಿದರು. ವಿವರ ಇಲ್ಲಿದೆ.

VISTARANEWS.COM


on

Public sector bank A record Rs 1 lakh crore Profit for public sector banks why?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ಸೇರಿದಂತೆ ಕೆಲ ಬ್ಯಾಂಕ್‌ಗಳಲ್ಲಿ ಸೋಮವಾರ ಸರ್ವರ್‌ ಸಮಸ್ಯೆಯಿಂದ ಗ್ರಾಹಕರು ಯುಪಿಐ, ನೆಟ್‌ ಬ್ಯಾಂಕಿಂಗ್‌ ಸೇವೆ ಸಿಗದೆ ಪರದಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದರು. (Banking service down) ಸೋಮವಾರ ಬೆಳಗ್ಗೆಯಿಂದಲೇ ಎಸ್‌ಬಿಐ ಸರ್ವರ್‌ ಡೌನ್‌ ಆಗಿತ್ತು. ಬಳಕೆದಾರರು ಟ್ವಿಟರ್‌ ಮೂಲಕ ಅಸಮಾಧಾನವನ್ನು ವ್ಯಕ್ತಪಡಿಸಿದರು.

ದೇಶದ ಅತಿ ದೊಡ್ಡ ಬ್ಯಾಂಕ್‌ನಲ್ಲಿ ನೆಟ್‌ ಬ್ಯಾಂಕಿಂಗ್‌, ಯುಪಿಐ, ಯೂನೊ ಅಪ್ಲಿಕೇಶನ್‌ ಬೆಳಗ್ಗೆಯಿಂದಲೇ ಸಮಸ್ಯೆಯ ಪರಿಣಾಮ ಸಮರ್ಪಕವಾಗಿ ಕಾರ್ಯನಿರ್ವಹಿಸಲಿಲ್ಲ. ಕ್ರೆಡಿಟ್‌ ಕಾರ್ಡ್‌ ಪೇಮೆಂಟ್‌ಗಳು ಹಾಗೂ ಇತರ ಆನ್‌ಲೈನ್‌ ಸೇವೆಗಳಲ್ಲಿ ಅಡಚಣೆ ಕಂಡು ಬಂದಿತು. ಹಲವು ಕಡೆಗಳಲ್ಲಿ ಎಟಿಎಂಗಳಲ್ಲಿಯೂ ನಗದು ದೊರೆಯಲಿಲ್ಲ ಎಂದು ಗ್ರಾಹಕರು ದೂರಿದರು. ಕೋಟಕ್‌ ಮಹೀಂದ್ರಾ ಬ್ಯಾಂಕ್‌ನಲ್ಲೂ ಸರ್ವರ್‌ ಸಮಸ್ಯೆಯಿಂದ ಗ್ರಾಹಕರಿಗೆ ಸೇವೆಗಳಲ್ಲಿ ಅಡಚಣೆಯಲ್ಲಿ ಉಂಟಾಯಿತು.

ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲೂ ಗ್ರಾಹಕರು ಮಾರ್ಚ್‌ 3ರಂದು ಇಂಟರ್‌ನೆಟ್‌ ಬ್ಯಾಂಕಿಂಗ್‌ ಸೇವೆ ಸರಿಯಾಗಿ ಸಿಗುತ್ತಿಲ್ಲ ಎಂದು ಆರೋಪಿಸಿದ್ದರು. ಮುಂಬಯಿ, ದಿಲ್ಲಿ, ಬೆಂಗಳೂರು, ಚೆನ್ನೈ, ಹೈದರಾಬಾದ್‌, ಕೋಲ್ಕತಾ, ನಾಗ್ಪುರ, ಸೂರತ್‌, ಚಂಡೀಗಢ ಮತ್ತಿತರ ನಗರಗಳಲ್ಲಿ ತಾಂತ್ರಿಕ ಅಡಚಣೆ ಉಂಟಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Gold Rate Today:ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತ್ತು ಶನಿವಾರ ಚಿನ್ನದ ಬೆಲೆಗಳು ಯಥಾಸ್ಥಿತಿ ಕಾಯ್ದುಕೊಂಡಿದ್ದವು.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತ್ತು ಶನಿವಾರ ಚಿನ್ನದ ಬೆಲೆಗಳು ಯಥಾಸ್ಥಿತಿ ಕಾಯ್ದುಕೊಂಡಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,605ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,840 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,050 ಮತ್ತು ₹6,60,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,205 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,640 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,050 ಮತ್ತು ₹7,20,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ62,00072,200
ಮುಂಬಯಿ66,05072,200
ಬೆಂಗಳೂರು66,05072,050
ಚೆನ್ನೈ66,10072,110

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.
1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.
2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.
3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.
4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ:Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Continue Reading

ವಾಣಿಜ್ಯ

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

Rekha Jhunjhunwala: ದೇಶದ ಖ್ಯಾತ ಹೂಡಿಕೆದಾರ, ಉದ್ಯಮಿ ರಾಕೇಶ್‌ ಜುಂಜುನ್‌ವಾಲಾ ಅವರ ಪತ್ನಿ ರೇಖಾ ಜುಂಜುನ್‌ವಾಲಾ ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟೈಟಾನ್‌ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳನ್ನು ಬಹಿರಂಗಪಟಿಸಿದ ನಂತರ ಕಂಪನಿಯ ಷೇರು ಇಂದು (ಮೇ 6) ಶೇ. 5ಕ್ಕಿಂತ ಹೆಚ್ಚು ಕುಸಿದಿದೆ. ಇಂದಿನ ವಹಿವಾಟಿನಲ್ಲಿ ಟೈಟಾನ್‌ನ ಮಾರುಕಟ್ಟೆ ಮೌಲ್ಯ 3,13,868 ಕೋಟಿ ರೂ.ಗಳಿಂದ ಕೆಳಗಿಳಿದು 2,98,815 ಕೋಟಿ ರೂ.ಗೆ ತಲುಪಿದೆ. ಈ ಕಾರಣದಿಂದಾಗಿ ರೇಖಾ ಜುಂಜುನ್ವಾಲಾ ಅವರ ಹೂಡಿಕೆ ಮೌಲ್ಯವು 805 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ.

VISTARANEWS.COM


on

Rekha Jhunjhunwala
Koo

ಮುಂಬೈ: ದೇಶದ ಖ್ಯಾತ ಹೂಡಿಕೆದಾರ, ಉದ್ಯಮಿ ರಾಕೇಶ್‌ ಜುಂಜುನ್‌ವಾಲಾ (Rakesh Jhunjhunwala) ಅವರ ಪತ್ನಿ ರೇಖಾ ಜುಂಜುನ್‌ವಾಲಾ (Rekha Jhunjhunwala) ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟೈಟಾನ್‌ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳನ್ನು ಬಹಿರಂಗಪಟಿಸಿದ ನಂತರ ಕಂಪನಿಯ ಷೇರು ಇಂದು (ಮೇ 6) ಶೇ. 5ಕ್ಕಿಂತ ಹೆಚ್ಚು ಕುಸಿದಿದೆ. 

ರೇಖಾ ಜುಂಜುನ್ವಾಲಾ ಅವರು 2024ರ ಮಾರ್ಚ್ 31ರ ವೇಳೆಗೆ ಟಾಟಾ ಗ್ರೂಪ್ ಸಂಸ್ಥೆಯಲ್ಲಿ ಶೇಕಡಾ 5.35ರಷ್ಟು ಪಾಲನ್ನು ಹೊಂದಿದ್ದರು. ಅಂದರೆ ಇದರ ಮೌಲ್ಯ 16,792 ಕೋಟಿ ರೂ. ಇಂದಿನ ವಹಿವಾಟಿನಲ್ಲಿ ಟೈಟಾನ್‌ನ ಮಾರುಕಟ್ಟೆ ಮೌಲ್ಯ 3,13,868 ಕೋಟಿ ರೂ.ಗಳಿಂದ ಕೆಳಗಿಳಿದು 2,98,815 ಕೋಟಿ ರೂ.ಗೆ ತಲುಪಿದೆ. ಈ ಕಾರಣದಿಂದಾಗಿ ರೇಖಾ ಜುಂಜುನ್ವಾಲಾ ಅವರ ಹೂಡಿಕೆ ಮೌಲ್ಯವು 805 ಕೋಟಿ ರೂ.ಗಳಷ್ಟು ಕಡಿಮೆಯಾಗಿ 15,986 ಕೋಟಿ ರೂ.ಗೆ ತಲುಪಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಗಳಲ್ಲಿನ ಚಂಚಲತೆ ಮತ್ತು ಸ್ಪರ್ಧಾತ್ಮಕ ತೀವ್ರತೆಯು ಟೈಟಾನ್‌ನ ಲಾಭಾಂಶದ ಮೇಲೆ ಪರಿಣಾಮ ಬೀರುತ್ತದೆ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಯಾರು ಈ ರೇಖಾ ಜುಂಜುನ್‌ವಾಲಾ?

ರಾಕೇಶ್‌ ಜುಂಜುನ್‌ವಾಲಾ ಅವರು ದೇಶದ ಖ್ಯಾತ ಹೂಡಿಕೆದಾರರು. ಷೇರು ಮಾರುಕಟ್ಟೆಯ ಬಿಗ್‌ ಬುಲ್‌, ಭಾರತದ ವಾರೆನ್‌ ಬಫೆಟ್‌ ಎಂದೇ ಖ್ಯಾತಿಯಾಗಿದ್ದ ಅವರು 2022ರಲ್ಲಿ ನಿಧನರಾದರು. ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರ ಮಗನಾಗಿದ್ದ ಜುಂಜುನ್‌ವಾಲಾ ಅವರು ಕೇವಲ 5 ಸಾವಿರ ರೂ. ಹೂಡಿಕೆಯಿಂದ ಷೇರು ವ್ಯವಹಾರವನ್ನು ಆರಂಭಿಸಿ, ಅಂತಿಮವಾಗಿ ಷೇರು ಪೇಟೆಯ ಸರದಾರರಾಗಿ 5.8 ಶತಕೋಟಿ ಡಾಲರ್‌ (ಸುಮಾರು 45 ಸಾವಿರ ಕೋಟಿ ರೂ.) ಸಂಪತ್ತಿಗೆ ಒಡೆಯರಾಗಿದ್ದರು. ಸದ್ಯ, ರೇಖಾ ಜುಂಜುನ್‌ವಾಲಾ ಅವರ ಆಸ್ತಿ ಮೌಲ್ಯ 58 ಸಾವಿರ ಕೋಟಿ ರೂ. ಆಗಿದೆ ಎಂದು ತಿಳಿದುಬಂದಿದೆ.

2023ರ ಡಿಸೆಂಬರ್‌ ಕ್ವಾರ್ಟರ್‌ನಲ್ಲಿ ರೇಖಾ ಜುಂಜುನ್‌ವಾಲಾ 26 ಕಂಪನಿಗಳಲ್ಲಿ ಷೇರುಗಳನ್ನು ಹೊಂದಿದ್ದು, ಇದರ ಮೌಲ್ಯ 4.9 ಬಿಲಿಯನ್ ಡಾಲರ್‌ನಷ್ಟಿತ್ತು. ಆದ್ರೆ ಇದರಲ್ಲಿ 13 ಕಂಪನಿಗಳು ಮಾತ್ರ ರೇಖಾ ಜುಂಜುನ್‌ವಾಲಾ ಎಷ್ಟು ಷೇರುಗಳನ್ನು ಹೊಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಿವೆ. ಆದರೆ ಮಾರ್ಚ್‌ ಕ್ವಾರ್ಟರ್‌ನಲ್ಲಿ ಇದರಲ್ಲಿ ಐದು ಕಂಪನಿಗಳ ಸ್ಟಾಕ್‌ಗಳನ್ನು ರೇಖಾ ಮಾರಾಟ ಮಾಡಿದ್ದರು.

ಟಾಟಾ ಮೋಟಾರ್ಸ್, ಇಂಡಿಯನ್ ಹೋಟೆಲ್ಸ್, ಟೈಟಾನ್, ನಜಾರಾ ಟೆಕ್ ಮತ್ತು ಡೆಲ್ಟಾ ಕಾರ್ಪ್‌ನಂತಹ ದೊಡ್ಡ ಕಂಪನಿಗಳಲ್ಲಿ ರೇಖಾ ಅವರು ಷೇರುಗಳನ್ನು ಹೊಂದಿದ್ದಾರೆ. ಜತೆಗೆ ಮಾರ್ಚ್‌ ಕ್ವಾರ್ಟರ್‌ನಲ್ಲಿ ತಮ್ಮ ಪೋರ್ಟ್‌ಫೊಲಿಯೊಗೆ ಕೆಎಂ ಶುಗರ್‌ ಮಿಲ್ಸ್‌ ಲಿಮಿಟೆಡ್‌ ಸ್ಟಾಕ್‌ ಸೇರಿಸಿದ್ದರು. ಈ ಕಂಪನಿಯಲ್ಲಿ ರೇಖಾ ಸುಮಾರು 5 ಲಕ್ಷ ಷೇರುಗಳನ್ನು ಅಥವಾ ಶೇಕಡಾ 0.54ರಷ್ಟು ಮೌಲ್ಯವನ್ನು ಹೊಂದಿದ್ದಾರೆ. ಇವರು ಹೂಡಿಕೆ ಮಾಡುವ ಹೆಚ್ಚಿನ ಕಂಪನಿಗಳು ಮಲ್ಟಿಬ್ಯಾಗರ್ಸ್ ರಿಟರ್ನ್‌ ನೀಡುತ್ತವೆ.

ಇದನ್ನೂ ಓದಿ: ಸಮುದ್ರ ಕಾಣಲ್ಲ ಎಂದು 118 ಕೋಟಿ ರೂ.ಗೆ ಎದುರಿನ ಮನೆ ಖರೀದಿಸಿದ ರೇಖಾ ಜುಂಜುನ್‌ವಾಲಾ!

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Gold Rate Today: ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today)ಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,680 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,850 ಮತ್ತು ₹6,58,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,830 ಮತ್ತು ₹7,18,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ (Gold Market) ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸ್ಥಿರವಾಗಿದೆ. ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today)ಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,680 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,850 ಮತ್ತು ₹6,58,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,830 ಮತ್ತು ₹7,18,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.60, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹826ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,260 ಮತ್ತು 1 ಕಿಲೋಗ್ರಾಂಗೆ ₹82,600 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,00071,980
ಮುಂಬಯಿ65,85071,830
ಬೆಂಗಳೂರು65,85071,830
ಚೆನ್ನೈ66,00072,000

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?


ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ:Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಪ್ರಮುಖ ಸುದ್ದಿ

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Paytm: ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ಕಂಪನಿಯು ವರ್ಗಾಯಿಸಿದೆ.

VISTARANEWS.COM


on

Paytm
Koo

ನವದೆಹಲಿ: ಪೇಟಿಎಂನ (Paytm) ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿಯ ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ.

ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ವರ್ಗಾಯಿಸಲಾಗಿದೆ.

ಪಾವತಿ ಮತ್ತು ಸಾಲ ನೀಡುವ ವ್ಯವಹಾರಗಳ ಮೇಲ್ವಿಚಾರಣೆ ನಡೆಸುತ್ತಿದ್ದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ವೈಯಕ್ತಿಕ ಕಾರಣಗಳಿಂದಾಗಿ ವೃತ್ತಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಅವರು ಸಲಹಾ ಪಾತ್ರಕ್ಕೆ ಪರಿವರ್ತನೆಗೊಳ್ಳಲಿದ್ದು ವರ್ಷದ ಅಂತ್ಯದವರೆಗೆ ಪೇಟಿಎಂನ ಬೆಳವಣಿಗೆಯ ಉಪಕ್ರಮಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಕಂಪನಿಯ ನಿರ್ದೇಶಕರ ಮಂಡಳಿಯು ಮೇ 04, 2024 ರಂದು ನಡೆದ ಸಭೆಯಲ್ಲಿ ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಮೇ 04, 2024 ರ ಪತ್ರದ ಮೂಲಕ ಸಲ್ಲಿಸಿದ ರಾಜೀನಾಮೆಯನ್ನು ಪುರಸ್ಕರಿಸಿದೆ. ಮೇ 31, 2024 ರಂದು ವ್ಯವಹಾರದ ಸಮಯ ಮುಗಿಯುವುದರಿಂದ ಅವರನ್ನು ಕಂಪನಿಯ ಸೇವೆಗಳಿಂದ ಮುಕ್ತಗೊಳಿಸಲಾಗುವುದು ಎಂದು ಪೇಟಿಎಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪೇಟಿಎಂ ಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಈ ಕುರತು ಪ್ರತಿಕ್ರಿಯಿಸಿ, ಭವೇಶ್ ಅವರ ಕೊಡುಗೆಗಳಿಗಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪಾವತಿಗಳು ಮತ್ತು ಸಾಲ ನೀಡುವಿಕೆಯ ಮೇಲೆ ನಮ್ಮ ಗಮನವು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಮತ್ತು ನಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ನಮ್ಮ ಪ್ರತಿಯೊಂದು ವ್ಯವಹಾರಗಳಲ್ಲಿ ನಾವು ಹೊಂದಿರುವ ಅನುಭವಿ ನಾಯಕರೊಂದಿಗೆ ನಾನು ಕೆಲಸ ಮುಂದುವರಿಸಲಿದ್ದೇವೆ ಎಂದು ಹೇಳಿದರು.

Continue Reading
Advertisement
Job Alert
ಉದ್ಯೋಗ2 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

assault case in bengaluru
ಬೆಂಗಳೂರು1 hour ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ2 hours ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

pakistan team
ಕ್ರೀಡೆ2 hours ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ2 hours ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ2 hours ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ2 hours ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್2 hours ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sunita Williams
ವಿದೇಶ3 hours ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ22 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ23 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌