ಬೆಂಗಳೂರು: ಬೆಂಗಳೂರು ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (BSRP) ರಾಜ್ಯ ಸರ್ಕಾರ ಮತ್ತು ರೈಲ್ವೆ ಮಂತ್ರಾಲಯವು ಒಟ್ಟು 15,767 ಕೋಟಿ ರೂ.ಗಳ ಅನುದಾನವನ್ನು ನೀಡುತ್ತಿದೆ. ಇದನ್ನು ಅನುಷ್ಠಾನಗೊಳಿಸಲು ( Karnataka budget 2023) ರಾಜ್ಯ ಸರ್ಕಾರ ಕೂಡ ಕೈಜೋಡಿಸುತ್ತಿದೆ.
ಕಾಮಗಾರಿಗಳು ಯೋಜನೆಯ ಪೂರ್ಣಗೊಳಿಸಲಾಗುವುದು. ಈ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ 1,350 ಕೋಟಿ ರೂ. ಗಳು ಹಾಗೂ ರಾಜ್ಯ ಸರ್ಕಾರದಿಂದ 1,000/ ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.…
ಮೆಟ್ರೊ ವಿಸ್ತರಣೆಗೆ ಆದ್ಯತೆ:
ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅವರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಸಮಗ್ರವಾಗಿ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿ.ಮೀಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ, 58.19 ಕಿ.ಮೀ.ಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ವೇಗದಲ್ಲಿ ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 40.15 ಕಿ.ಮೀ. ಉದ್ದದ ಮೆಟ್ರೋ ಮಾರ್ಗಗಳನ್ನು ಯೋಜಿಸಲಾಗಿದೆ.