ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ (Karnataka Budget 2023) ಅತ್ಯಾಧುನಿಕ ಸ್ಟಾರ್ಟಪ್ ಪಾರ್ಕ್ ಅನ್ನು ನಿರ್ಮಿಸಲಾಗುವುದು. ಇದಕ್ಕೆ 30 ಕೋಟಿ ರೂ. ವೆಚ್ಚವಾಗಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಮಹಿಳೆಯರು ಹಾಗೂ ಹಿಂದುಳಿದ ವರ್ಗದವರ ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ELEVATE ಉನ್ನತಿ 2022, ಅಮೃತ ಸ್ಟಾರ್ಟಪ್, ELEVATE ಕಲ್ಯಾಣ ಕರ್ನಾಟಕವನ್ನು ಆರಂಭಿಸಲಾಗಿದೆ. ಎಲಿವೇಟ್ ಯೋಜನೆಯಡಿಯಲ್ಲಿ ಈಗಾಗಲೇ 93 ಸ್ಟಾರ್ಟಪ್‌ಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ. ಕರ್ನಾಟಕ 40 ಯುನಿಕಾರ್ನ್‌ಗಳ ನೆಲೆಯಾಗಿದೆ. 2022-23ರಲ್ಲಿ 6 ಸ್ಟಾರ್ಟಪ್‌ಗಳಿಗೆ ಯುನಿಕಾರ್ನ್ ಪಟ್ಟ ಲಭಿಸಿದೆ.
ಐಟಿ ವಲಯದಲ್ಲಿ ಮುನ್ನಡೆಯನ್ನು ಕಾಯ್ದುಕೊಳ್ಳಲು ರಾಜ್ಯ ಸರ್ಕಾರವು ಕರ್ನಾಟಕ ಸ್ಟಾರ್ಟಪ್ ನೀತಿ 2022-27 , ಕರ್ನಾಟಕ ಡೇಟಾ ಸೆಂಟರ್ ನೀತಿ 2022-27, ಕರ್ನಾಟಕ ನಾವಿನ್ಯತಾ ನೀತಿಯನ್ನು ಜಾರಿಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ ಮತ್ತು ಎವಿಜಿಸಿ ನೀತಿಯನ್ನು ಪರಿಷ್ಕರಿಸಲಾಗುವುದು.
ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಯನ್ನು ಜನ ಸಾಮಾನ್ಯರಿಗೆ ಪರಿಚಯಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮೂಡಿಸಲು 6 ಪ್ರಾದೇಶಿಕ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು.