LIC Stock 2.5 lakh crore rupees huge loss for LIC stock investors in a single year what is the reasonLIC Stock : ಎಲ್‌ಐಸಿ ಷೇರು ಹೂಡಿಕೆದಾರರಿಗೆ ಒಂದೇ ವರ್ಷದಲ್ಲಿ 2.5 ಲಕ್ಷ ಕೋಟಿ ರೂ. ಭಾರಿ ನಷ್ಟ

ವಾಣಿಜ್ಯ

LIC Stock : ಎಲ್‌ಐಸಿ ಷೇರು ಹೂಡಿಕೆದಾರರಿಗೆ ಒಂದೇ ವರ್ಷದಲ್ಲಿ 2.5 ಲಕ್ಷ ಕೋಟಿ ರೂ. ಭಾರಿ ನಷ್ಟ

LIC Stock ಎಲ್‌ಐಸಿಯ ಆರಂಭಿಕ ಷೇರು ಬಿಡುಗಡೆಯಲ್ಲಿ ಹೂಡಿಕೆ ಮಾಡಿದವರಿಗೆ ಭಾರಿ ನಿರಾಸೆಯಾಗಿದೆ. ಕಳೆದೊಂದು ವರ್ಷದಲ್ಲಿ ಹೂಡಿಕೆದಾರರಿಗೆ 2.5 ಲಕ್ಷ ಕೋಟಿ ರೂ. ನಷ್ಟವಾಗಿದೆ. ವಿವರ ಇಲ್ಲಿದೆ.

VISTARANEWS.COM


on

LIC Stock 2.5 lakh crore rupees huge loss for LIC stock investors in a single year what is the reason
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಕಳೆದ ವರ್ಷ ಸಂಚಲನ ಮೂಡಿಸಿದ್ದ ಎಲ್‌ಐಸಿಯ ಐಪಿಒದಲ್ಲಿ ಹೂಡಿಕೆ ಮಾಡಿದ್ದವರಿಗೆ ಕಳೆದೊಂದು ವರ್ಷದಲ್ಲಿ ಭಾರಿ ನಿರಾಸೆಯಾಗಿದೆ. (LIC Stock) ಹೂಡಿಕೆದಾರರಿಗೆ ಒಂದೇ ವರ್ಷದಲ್ಲಿ 2.5 ಲಕ್ಷ ಕೋಟಿ ರೂ. ನಷ್ಟದ ಆಘಾತ ಎದುರಿಸುವಂತಾಗಿದೆ. (Life Insurance Corporation India-LIC)

2022ರ ಮೇ 17ರಂದು ಎಲ್‌ಐಸಿ ಷೇರು ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ನೋಂದಣಿಯಾಗಿತ್ತು. ಐಪಿಒ ದರ ಪ್ರತಿ ಷೇರಿಗೆ 949 ರೂ. ಆಗಿತ್ತು. ಈ ಮಟ್ಟದಿಂದ ದರದಲ್ಲಿ 40% ಇಳಿಕೆಯಾಗಿದೆ. ಇದರ ಪರಿಣಾಮ ಎಲ್‌ಐಸಿಯ ಮಾರುಕಟ್ಟೆ ಮೌಲ್ಯದಲ್ಲಿ ಒಟ್ಟು 2.5 ಲಕ್ಷ ಕೋಟಿ ರೂ. ನಷ್ಟವಾಗಿದೆ.

ಸರ್ಕಾರ ಈಗಲೂ ಎಲ್‌ಐಸಿಯಲ್ಲಿ 96.5% ಷೇರು ಪಾಲನ್ನು ಹೊಂದಿದೆ. ಮ್ಯೂಚುವಲ್‌ ಫಂಡ್‌ಗಳು ಮತ್ತು ಎಫ್‌ಐಐಗಳು ಎಲ್‌ಐಸಿಯಲ್ಲಿ ಕಳೆದೊಂದು ವರ್ಷದಲ್ಲಿ ಹೂಡಿಕೆಯನ್ನು ತಗ್ಗಿಸಿವೆ. ಎಲ್‌ಐಸಿಯಲ್ಲಿ ರಿಟೇಲ್‌ ಹೂಡಿಕೆದಾರರ ಸಂಖ್ಯೆಯೂ ಇಳಿದಿದೆ.

ಇದನ್ನೂ ಓದಿ: Adani stocks : ಇತರ ಕಂಪನಿಗಳ ಷೇರುಗಳಲ್ಲಿ ತನ್ನ ಹೂಡಿಕೆಗೆ ಮಿತಿ ವಿಧಿಸಲು ಎಲ್‌ಐಸಿ ನಿರ್ಧಾರ

ಎಲ್‌ಐಸಿಯಲ್ಲಿ ಈಗ 33 ಲಕ್ಷ ರಿಟೇಲ್ ಹೂಡಿಕೆದಾರರು ಇದ್ದು,‌ ಕಳೆದ ಒಂದು ವರ್ಷದಲ್ಲಿ 6.87 ಲಕ್ಷ ಮಂದಿ ನಿರ್ಗಮಿಸಿದ್ದಾರೆ. ಇನ್ನೂ ಅನೇಕ ಹೂಡಿಕೆದಾರರು ಹೂಡಿಕೆಯಲ್ಲಿ ಸರಾಸರಿ ನಷ್ಟ ಕಡಿಮೆ ಮಾಡಲು ಯತ್ನಿಸುತ್ತಿದ್ದಾರೆ.

21,000 ಕೋಟಿ ರೂ. ಗಾತ್ರದ ಎಲ್‌ಐಸಿ ಐಪಿಒ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇದುವರೆಗಿನ ಅತಿ ದೊಡ್ಡ ಐಪಿಒ ಆಗಿದೆ. ಹೊಸ ಹೂಡಿಕೆದಾರರನ್ನು ಆರಂಭದಲ್ಲಿ ಆಕರ್ಷಿಸಿತ್ತು. ಆದರೆ ಕಳೆದೊಂದು ವರ್ಷದಲ್ಲಿ ಉಂಟಾಗಿರುವ ಷೇರು ದರ ಕುಸಿತದ ಪರಿಣಾಮ ಲಕ್ಷಾಂತರ ರಿಟೇಲ್‌ ಹೂಡಿಕೆದಾರರು ನಷ್ಟಕ್ಕೀಡಾಗಿದ್ದಾರೆ. ಈಗ ಎಲ್‌ಐಸಿ ಷೇರು ದರ 568 ರೂ.ಗಳಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಾಣಿಜ್ಯ

Exit Polls: ಚುನಾವಣೋತ್ತರ ಸಮೀಕ್ಷೆ ಪ್ರಕಟವಾದ ಬೆನ್ನಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಜಿಗಿತ ಸಾಧ್ಯತೆ

Exit Polls: ಲೋಕಸಭಾ ಚುನಾವಣೆಯ ಎಲ್ಲ ಹಂತಗಳ ಮತದಾನ ಮುಗಿದಿದ್ದು, ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಇದರಲ್ಲಿ ಎನ್‌ಡಿಎಗೆ ಬಹುಮತ ದೊರೆಯುವ ಸಾಧ್ಯತೆ ಇದೆ ಎನ್ನುವ ಅಂಶ ಕಂಡು ಬಂದಿದ್ದು, ಭಾರತೀಯ ಷೇರುಗಳು, ಬಾಂಡ್‌ಗಳು ಮತ್ತು ರೂಪಾಯಿ ಮೌಲ್ಯ ಸೋಮವಾರ ಏರಿಕೆಯಾಗಲಿದೆ ಎಂದು ಆರ್ಥಿಕ ತಜ್ಞರು ಊಹಿಸಿದ್ದಾರೆ.

VISTARANEWS.COM


on

Exit Polls
Koo

ಮುಂಬೈ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆ (Lok Sabha Election 2024)ಯ 7 ಹಂತಗಳ ಮತದಾನ ಪೂರ್ಣಗೊಂಡಿದೆ. ಶನಿವಾರ (ಜೂನ್‌ 1) ಚುನಾವಣೋತ್ತರ ಸಮೀಕ್ಷೆ (Exit Polls) ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಹುದ್ದೆಗೆ ಏರುವುದು ಬಹುತೇಕ ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಷೇರುಗಳು, ಬಾಂಡ್‌ಗಳು ಮತ್ತು ರೂಪಾಯಿ ಮೌಲ್ಯ ಸೋಮವಾರ ಏರಿಕೆಯಾಗಲಿದೆ ಎಂದು ಆರ್ಥಿಕ ತಜ್ಞರು ಊಹಿಸಿದ್ದಾರೆ.

ಸಂಸತ್ತಿನಲ್ಲಿ ಬಹುಮತಕ್ಕೆ ಅಗತ್ಯವಾದ 272 ಸೀಟನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಸುಲಭವಾಗಿ ಪಡೆದುಕೊಳ್ಳಲಿದೆ ಎಂದು ಬಹುತೇಕ ಎಲ್ಲ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಫಲಿತಾಂಶ ಮಂಗಳವಾರ (ಜೂನ್‌ 4) ಪ್ರಕಟವಾಗಲಿದೆ. ಕಡಿಮೆ ಮತದಾನದ ಪ್ರಮಾಣ ಮತ್ತು ಹಲವಾರು ರಾಜ್ಯಗಳಲ್ಲಿ ಬಿಗಿಯಾದ ಸ್ಪರ್ಧೆಗಳಿಂದಾಗಿ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ 400 ಸ್ಥಾನಗಳ ಗುರಿಯನ್ನು ತಲುಪಲು ಬಿಜೆಪಿ ವಿಫಲವಾಗಬಹುದು ಎಂಬ ಆತಂಕದಿಂದ ಇತ್ತೀಚಿನ ಷೇರು ಮಾರುಕಟ್ಟೆ ಚಂಚಲತೆಯಿಂದ ಕೂಡಿತ್ತು. ಇದುವ ಹೂಡಿಕೆದಾರರನ್ನು ಆತಂಕಕ್ಕೆ ತಳ್ಳಿತ್ತು. ಸದ್ಯ ಚುನಾವಣೋತ್ತರ ಸಮೀಕ್ಷೆಯಿಂದ ಷೇರು ಮಾರುಕಟ್ಟೆಯಲ್ಲಿ ಜಿಗಿತ ಕಂಡು ಬರುವ ಸಾಧ್ಯತೆ ಇದೆ.

“ಫಲಿತಾಂಶದ ಬಗ್ಗೆ ಕೆಲವು ಸಂದೇಹಗಳು ಇದ್ದವು. ಈ ಬಗ್ಗೆ ಕೆಲವರು ಆತಂಕಕ್ಕೊಳಗಾಗಿದ್ದರಿಂದ ಷೇರು ಮಾರುಕಟ್ಟೆಯಲ್ಲಿ ಚಂಚಲತೆ ಹೆಚ್ಚಾಗಿತ್ತು. ಚುನಾವಣೋತ್ತರ ಸಮೀಕ್ಷೆಯಿಂದ ಆತಂಕ ನಿವಾರಣೆಯಾಗಿದೆ. ಹೀಗಾಗಿ ಮಾರುಕಟ್ಟೆಗಳು ಸೋಮವಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಬಹುದುʼʼ ಎಂದು ಮುಂಬೈಯ ಡಿಎಸ್‌ಪಿ ಮ್ಯೂಚುವಲ್ ಫಂಡ್‌ನ ಈಕ್ವಿಟಿಗಳ ಮುಖ್ಯಸ್ಥ ವಿನೀತ್ ಸಾಂಬ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಂತಿಮ ಫಲಿತಾಂಶಗಳು ಚುನಾವಣೋತ್ತರ ಸಮೀಕ್ಷೆಗಳಿಗಿಂತ ಭಿನ್ನವಾಗಿದ್ದರೂ, ಎನ್‌ಡಿಎ ಒಕ್ಕೂಟಕ್ಕೆ ಗೆಲುವು ನಿಶ್ಚಿತ ಎನ್ನಲಾಗಿದೆ. ಭಾರತೀಯ ಷೇರುಗಳು ಮೇ ತಿಂಗಳಲ್ಲಿ ದಾಖಲೆಯ ಮಟ್ಟವನ್ನು ತಲುಪಿದರೆ, ಬಾಂಡ್ ಸುಮಾರು ಒಂದು ವರ್ಷದಲ್ಲಿ ಗರಿಷ್ಠ ಮಟ್ಟದ ಹತ್ತಿರದಲ್ಲಿದೆ. ಜೂನ್ 4ರ ಫಲಿತಾಂಶ ಚುನಾವಣೋತ್ತರ ಸಮೀಕ್ಷೆಯೊಂದಿಗೆ ಹೊಂದಿಕೆಯಾದರೆ ಎನ್ಎಸ್ಇ ನಿಫ್ಟಿ 50 ಸೂಚ್ಯಂಕವು ಹೊಸ ದಾಖಲೆಯನ್ನು ತಲುಪಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಚುನಾವಣಾ ಫಲಿತಾಂಶಕ್ಕೆ ಮುಂಚಿತವಾಗಿ ವಿದೇಶಿ ಹೂಡಿಕೆದಾರರು ಎಚ್ಚರಿಕೆಯಿಂದ ಹೆಜ್ಜೆ ಇಟ್ಟಿದ್ದರಿಂದ ಮುಖ್ಯ ಗೇಜ್ ಕಳೆದ ವಾರ ಸುಮಾರು ಶೇ. 2ರಷ್ಟು ಕುಸಿದು 22,531ಕ್ಕೆ ತಲುಪಿದೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

ಕೆಲವು ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ʼʼಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಜೂನ್‌ 4ರ ಬಳಿಕ ಭಾರತದ ಷೇರು ಮಾರುಕಟ್ಟೆಯನ್ನು ಹಿಡಿಯಲು ಆಗುವುದಿಲ್ಲʼʼ ಎಂದು ಹೇಳಿದ್ದರು. ʼʼಜೂನ್‌ 4ರ ಬಳಿಕ ಹೂಡಿಕೆದಾರರಿಗೆ ಭಾರಿ ಲಾಭವಾಗಲಿದೆʼʼ ಎಂದು ಗೃಹ ಸಚಿವ ಅಮಿತ್‌ ಶಾ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದರು. ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭಾರತದ ಷೇರುಪೇಟೆಯು ಮಹತ್ವದ ಸ್ಥಾನ ಪಡೆದಿದೆ. ಹಾಂಕಾಂಗ್‌, ಜಪಾನ್‌, ಚೀನಾ ಹಾಗೂ ಅಮೆರಿಕದ ನಂತರ ಭಾರತದ ಷೇರುಪೇಟೆಯು ಬೃಹತ್‌ ಷೇರು ಮಾರುಕಟ್ಟೆ ಎನಿಸಿದೆ. ಹೀಗಾಗಿ ಚುನಾವಣಾ ಫಲಿತಾಂಶದತ್ತ ಎಲ್ಲರ ಕಣ್ಣು ನೆಟ್ಟಿದೆ. 

Continue Reading

ವಾಣಿಜ್ಯ

GST Collection: ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ನಂ. 2; ಇಲ್ಲಿ ಸಂಗ್ರಹವಾಗಿದ್ದು ಎಷ್ಟು?

GST Collection: ಕಳೆದ ತಿಂಗಳ ಜಿಎಸ್‌ಟಿ ಸಂಗ್ರಹದ ಅಂಕಿ-ಅಂಶ ಬಿಡುಗಡೆಯಾಗಿದೆ. ಮೇಯಲ್ಲಿ ಬರೋಬ್ಬರಿ 1.73 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರವಾಗಿದ್ದು, ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ರೀಫಂಡ್ ಕಳೆದ ಬಳಿಕ ನಿವ್ವಳ ಜಿಎಸ್​ಟಿ ಸಂಗ್ರಹ ಮೇಯಲ್ಲಿ 1.44 ಲಕ್ಷ ಕೋಟಿ ರೂ. ಆಗಿದೆ ಎಂದು ವರದಿ ತಿಳಿಸಿದೆ. ಮಹಾರಾಷ್ಟ್ರವು 26,854 ಕೋಟಿ ರೂ. ಸಂಗ್ರಹಿಸುವ ಮೂಲಕ ಎಂದಿನಂತೆ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಇಲ್ಲಿ 11,889 ಕೋಟಿ ರೂ. ಸಂಗ್ರಹವಾಗಿದೆ.

VISTARANEWS.COM


on

GST Collection
Koo

ನವದೆಹಲಿ: ಕಳೆದ ತಿಂಗಳ ಜಿಎಸ್‌ಟಿ ಸಂಗ್ರಹದ ಅಂಕಿ-ಅಂಶ ಬಿಡುಗಡೆಯಾಗಿದೆ (GST Collection). ಮೇಯಲ್ಲಿ ಬರೋಬ್ಬರಿ 1.73 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರವಾಗಿದ್ದು, ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಕಳೆದ ವರ್ಷದಕ್ಕೆ ಹೋಲಿಸಿದರೆ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಶೇ. 10ರಷ್ಟು ಹೆಚ್ಚಳವಾಗಿದೆ. ರೀಫಂಡ್ ಕಳೆದ ಬಳಿಕ ನಿವ್ವಳ ಜಿಎಸ್​ಟಿ ಸಂಗ್ರಹ ಮೇಯಲ್ಲಿ 1.44 ಲಕ್ಷ ಕೋಟಿ ರೂ. ಆಗಿದೆ ಎಂದು ವರದಿ ತಿಳಿಸಿದೆ.

ಹಣಕಾಸು ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿ, ʼʼಮೇಯಲ್ಲಿ ಜಿಎಸ್‌ಟಿ ಆದಾಯ 1.73 ಲಕ್ಷ ಕೋಟಿ ರೂ. ಆಗಿದ್ದು, ಕಳೆದ ವರ್ಷದಕ್ಕೆ ಹೋಲಿಸಿದರೆ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಶೇ. 10ರಷ್ಟು ಹೆಚ್ಚಳ ದಾಖಲಿಸಿದೆ. ಜತೆಗೆ ದೇಶೀಯ ವಹಿವಾಟುಗಳಲ್ಲಿ ಬಲವಾದ ಹೆಚ್ಚಳ (ಶೇಕಡಾ 15.3ರಷ್ಟು ಏರಿಕೆ) ಮತ್ತು ಆಮದುಗಳಲ್ಲಿ ಇಳಿಕೆ (ಶೇಕಡಾ 4.3ರಷ್ಟು ಕಡಿಮೆ) ಕಂಡು ಬಂದಿದೆʼʼ ಎಂದು ತಿಳಿಸಿದೆ.

ರಾಜ್ಯವಾರು ಸಂಗ್ರಹ

ಮಹಾರಾಷ್ಟ್ರವು 26,854 ಕೋಟಿ ರೂ. ಸಂಗ್ರಹಿಸುವ ಮೂಲಕ ಎಂದಿನಂತೆ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಇಲ್ಲಿ 11,889 ಕೋಟಿ ರೂ. ಸಂಗ್ರಹವಾಗಿದೆ. ಗುಜರಾತ್‌ನಲ್ಲಿ 11,325 ಕೋಟಿ ರೂ. ಸಂಗ್ರಹವಾಗಿದ್ದು ಮೂರನೇ ಸ್ಥಾನದಲ್ಲಿದೆ.

ಜಿಎಸ್‌ಟಿ ಸಂಗ್ರಹದಲ್ಲಿ ಟಾಪ್‌ 10 ರಾಜ್ಯಗಳು

ರಾಜ್ಯ ಜಿಎಸ್‌ಟಿ ಸಂಗ್ರಹ (ಕೋಟಿ ರೂ.ಗಳಲ್ಲಿ)
ಮಹಾರಾಷ್ಟ್ರ26,854
ಕರ್ನಾಟಕ11,889
ಗುಜರಾತ್11,325
ತಮಿಳುನಾಡು9,768
ಹರಿಯಾಣ9,289
ಉತ್ತರಪ್ರದೇಶ9,091
ದೆಹಲಿ7,512
ಪಶ್ಚಿಮ ಬಂಗಾಳ5,377
ಒಡಿಶಾ5,027
ತೆಲಂಗಾಣ4,986

ವಿವಿಧ ತೆರಿಗೆಗಳ ಅಂಕಿ ಅಂಶ

  • ಕೇಂದ್ರ ಸರಕು ಮತ್ತು ಸೇವಾ ತೆರಿಗೆ (CGST): 32,409 ಕೋಟಿ ರೂ.
  • ರಾಜ್ಯ ಸರಕು ಮತ್ತು ಸೇವಾ ತೆರಿಗೆ (SGST): 40,265 ಕೋಟಿ ರೂ.
  • ಸಮಗ್ರ ಸರಕು ಮತ್ತು ಸೇವಾ ತೆರಿಗೆ (IGST): ಆಮದು ಸರಕುಗಳ ಮೇಲೆ ಸಂಗ್ರಹಿಸಿದ 39,879 ಕೋಟಿ ರೂ. ಸೇರಿದಂತೆ ಒಟ್ಟು 87,781 ಕೋಟಿ ರೂ.
  • ಸೆಸ್: ಆಮದು ಮಾಡಿದ ಸರಕುಗಳ ಮೇಲೆ ಸಂಗ್ರಹಿಸಿದ 1,076 ಕೋಟಿ ರೂ. ಸೇರಿದಂತೆ ಒಟ್ಟು 12,284 ಕೋಟಿ ರೂ.

ಏಪ್ರಿಲ್‌ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದ ಜಿಎಸ್‌ಟಿ ಸಂಗ್ರಹ

ಏಪ್ರಿಲ್‌ನ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ ನಿರ್ಮಿಸಿತ್ತು. 2024ರ ಏಪ್ರಿಲ್‌ನ ಒಟ್ಟು ಜಿಎಸ್‌ಟಿ ಸಂಗ್ರಹವು 2.10 ಲಕ್ಷ ಕೋಟಿ ರೂ.ಗೆ ತಲುಪಿತ್ತು. ಒಟ್ಟಾರೆಯಾಗಿ ಪರೋಕ್ಷ ತೆರಿಗೆ ಆದಾಯವು ಶೇ. 12.4ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು. ದೇಶೀಯ ವಹಿವಾಟು ಮತ್ತು ಆಮದುಗಳಲ್ಲಿನ ಹೆಚ್ಚಳ ಇದಕ್ಕೆ ಕಾರಣ.

ಟ್ಯಾಕ್ಸ್ ಕನೆಕ್ಟ್ ಅಡ್ವೈಸರಿ ಸರ್ವೀಸಸ್ ಎಲ್‌ಎಲ್‌ಪಿಯ ಪಾಲುದಾರ ವಿವೇಕ್ ಜಲನ್ ಈ ಬಗ್ಗೆ ಮಾತನಾಡಿ,  ʼʼ2017ರ ಜುಲೈಯಲ್ಲಿ ಈ ನಿಯಮ ಜಾರಿಗೆ ಬಂದಾಗಿನಿಂದ 2024ರ ಏಪ್ರಿಲ್‌ವರೆಗೆ ಜಿಎಸ್‌ಟಿ ಸಂಗ್ರಹವು ಸರಾಸರಿ ಮಾಸಿಕ ಆದಾಯವನ್ನು ಸುಮಾರು 0.9 ಲಕ್ಷ ಕೋಟಿ ರೂ.ಗೆ ಹೆಚ್ಚಿಸಿದೆʼʼ ಎಂದು ತಿಳಿಸಿದ್ದರು.

ಇದನ್ನೂ ಓದಿ: GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

Continue Reading

ಕರ್ನಾಟಕ

Gold Rate Today: ಬಂಗಾರ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

Gold Rate Today:ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,650 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,255 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,200 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,500 ಮತ್ತು ₹6,65,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,255 ಆಗಿದ್ದು, ಎಂಟು ಗ್ರಾಂ ಬೆಲೆ ₹58,040ಕ್ಕೆ ಇಳಿದಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,550 ಮತ್ತು ₹7,25,500 ವೆಚ್ಚವಾಗಲಿದೆ.

VISTARANEWS.COM


on

gold rate today
Koo

ಬೆಂಗಳೂರು: ಚಿನ್ನಾಭರಣ ಕೊಳ್ಳುವವರಿಗೆ ಗುಡ್‌ನ್ಯೂಸ್‌. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ಇಂದು ಯಥಾಸ್ಥಿತಿ ಕಾಪಾಡಿಕೊಂಡಿದೆ. ಶನಿವಾರ ಗ್ರಾಂಗೆ ಕ್ರಮವಾಗಿ 20 ಮತ್ತು 21 ರೂ. ಇಳಿಕೆಯಾಗಿತ್ತು. ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,650 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,255 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,200 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,500 ಮತ್ತು ₹6,65,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,255 ಆಗಿದ್ದು, ಎಂಟು ಗ್ರಾಂ ಬೆಲೆ ₹58,040ಕ್ಕೆ ಇಳಿದಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,550 ಮತ್ತು ₹7,25,500 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ₹ 66,650₹ 72,700
ಮುಂಬೈ₹ 66,500₹ 72,700
ಬೆಂಗಳೂರು₹ 66,500₹ 72,550
ಚೆನ್ನೈ₹ 67,100₹ 73,200

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ: ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ:Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ, ಸಿಕ್ಕಿಂನಲ್ಲಿ ಕ್ಲೀನ್‌ ಸ್ವೀಪ್‌ನತ್ತ SKM

Continue Reading

ಚಿನ್ನದ ದರ

Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

Gold Rate Today: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆಯಲ್ಲಿ ಇಂದು (ಶನಿವಾರ) ತುಸು ಇಳಿಕೆ ಕಂಡು ಬಂದಿದೆ. ಗ್ರಾಂಗೆ ಕ್ರಮವಾಗಿ 20 ಮತ್ತು 21 ರೂ. ಇಳಿಕೆಯಾಗಿದೆ. ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

Gold Rate Today
Koo

ಬೆಂಗಳೂರು: ಚಿನ್ನಾಭರಣ ಕೊಳ್ಳುವವರಿಗೆ ಗುಡ್‌ನ್ಯೂಸ್‌. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ಇಂದು (ಶನಿವಾರ) ತುಸು ಇಳಿಕೆ ಕಂಡು ಬಂದಿದೆ. ಗ್ರಾಂಗೆ ಕ್ರಮವಾಗಿ 20 ಮತ್ತು 21 ರೂ. ಇಳಿಕೆಯಾಗಿದೆ. ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,650 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,255 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,200 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,500 ಮತ್ತು ₹6,65,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,255 ಆಗಿದ್ದು, ಎಂಟು ಗ್ರಾಂ ಬೆಲೆ ₹58,040ಕ್ಕೆ ಇಳಿದಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,550 ಮತ್ತು ₹7,25,500 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ₹ 66,650₹ 72,700
ಮುಂಬೈ₹ 66,500₹ 72,700
ಬೆಂಗಳೂರು₹ 66,500₹ 72,550
ಚೆನ್ನೈ₹ 67,100₹ 73,200

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ: ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

Continue Reading
Advertisement
Arvind Kejriwal
ದೇಶ22 mins ago

Arvind Kejriwal: ಮಧ್ಯಂತರ ಜಾಮೀನು ಅವಧಿ ಮುಗಿದು ಜೈಲಿಗೆ ಮರಳಿದ ಅರವಿಂದ್‌ ಕೇಜ್ರಿವಾಲ್‌; ಜೂ. 5ರ ತನಕ ನ್ಯಾಯಾಂಗ ಬಂಧನ

Bangalore North Lok Sabha Constituency
ದೇಶ26 mins ago

Bangalore North Lok Sabha Constituency : ಕ್ಷೇತ್ರ ಬದಲಾಯಿಸಿದ ಶೋಭಾ ಕರಂದ್ಲಾಜೆಗೆ ಒಲಿಯವುದೇ ಬೆಂಗಳೂರು ಉತ್ತರ

Congress leader Celebration
ಕರ್ನಾಟಕ29 mins ago

Congress leader Celebration: ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ಕಾಂಗ್ರೆಸ್‌ ಮುಖಂಡ; ವಿಡಿಯೊ ವೈರಲ್‌

Karnataka Weather Forecast
ಮಳೆ1 hour ago

Karnataka Weather : ಕೋಲಾರದಲ್ಲಿ ಅಬ್ಬರಿಸಿದ ವರುಣ; ಒಳನಾಡಿನಲ್ಲಿ ತಾಪಮಾನ ಇಳಿಕೆ

Exit Polls
ವಾಣಿಜ್ಯ1 hour ago

Exit Polls: ಚುನಾವಣೋತ್ತರ ಸಮೀಕ್ಷೆ ಪ್ರಕಟವಾದ ಬೆನ್ನಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಜಿಗಿತ ಸಾಧ್ಯತೆ

Raichur Lok Sabha Constituency
ರಾಯಚೂರು1 hour ago

Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Accident Case
ಕ್ರೈಂ2 hours ago

Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Lok Sabha Election 2024
ಕರ್ನಾಟಕ2 hours ago

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Aam Panna Recipe
ಆಹಾರ/ಅಡುಗೆ2 hours ago

Aam Panna Recipe: ಆಮ್‌ ಪನ್ನಾ! ಮಾವಿನಕಾಯಿಯ ಅದ್ಭುತ ಪೇಯ ಇದು; ನೀವೂ ಮಾಡಿ ನೋಡಿ

Arvind Kejriwal
ದೇಶ2 hours ago

Arvind Kejriwal: ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌