ನವ ದೆಹಲಿ: ಭಾರತದಿಂದ 2022-23ರಲ್ಲಿ ಒಟ್ಟು 72,900 ಕೋಟಿ ರೂ. ಮೌಲ್ಯದ (Mobile Export) ಮೊಬೈಲ್ ಹ್ಯಾಂಡ್‌ಸೆಟ್ ರಫ್ತಾಗುವ ನಿರೀಕ್ಷೆ ಇದೆ.
ಕಳೆದ 2021-22ರ ಸಾಲಿನಲ್ಲಿ 46,980 ಕೋಟಿ ರೂ. ಮೌಲ್ಯದ ಮೊಬೈಲ್ ಹ್ಯಾಂಡ್‌ಸೆಟ್ ರಫ್ತಾಗಿತ್ತು. ಉತ್ಪಾದಕರು ಮೊಬೈಲ್ ಉತ್ಪಾದನೆ ಮತ್ತು ರಫ್ತನ್ನು ವೃದ್ಧಿಸಿರುವುದು ಇದಕ್ಕೆ ಕಾರಣ.
ಆ್ಯಪಲ್‌ನ ಉತ್ಪಾದನೆಯಲ್ಲಿ ಉಂಟಾಗಿರುವ ಹೆಚ್ಚಳ, ಸ್ಯಾಮ್‌ಸಂಗ್ ಸೇರಿದಂತೆ ಇತರ ಕಂಪನಿಗಳೂ ಹ್ಯಾಂಡ್ ಸೆಟ್ ಉತ್ಪಾದನೆಯನ್ನು ಹೆಚ್ಚಿಸುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.
ರಾಜ್ಯಗಳಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ಹೆಚ್ಚಿಸಲು ಎಲ್ಲ ರಾಜ್ಯಗಳ ಐಟಿ ಸಚಿವರುಗಳ ಜತೆಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ನಿಯಮಿತವಾಗಿ ಸಭೆ ನಡೆಸುತ್ತಿದ್ದಾರೆ.