Defence industry | ಮೇಕ್‌ ಇನ್‌ ಇಂಡಿಯಾದಿಂದ ಸೇನೆಗೆ ಶಸ್ತ್ರಾಸ್ತ್ರಗಳ ಕೊರತೆ ಆಗಲಿದೆಯೇ?! - Vistara News

ಪ್ರಮುಖ ಸುದ್ದಿ

Defence industry | ಮೇಕ್‌ ಇನ್‌ ಇಂಡಿಯಾದಿಂದ ಸೇನೆಗೆ ಶಸ್ತ್ರಾಸ್ತ್ರಗಳ ಕೊರತೆ ಆಗಲಿದೆಯೇ?!

ಭಾರತ ಶಸ್ತ್ರಾಸ್ತ್ರಗಳ ಉತ್ಪಾದನೆ ಮತ್ತು ರಫ್ತಿನಲ್ಲಿ ಸ್ವಾವಲಂಬನೆ ಸಾಧಿಸಲು ಮುಂದಾಗಿರುವುದರಿಂದ ಶಸ್ತ್ರಾಸ್ತ್ರಗಳ ಕೊರತೆ ಆಗಲಿದೆ ಎಂದು ಕೆಲ ವರದಿಗಳು ತಿಳಿಸಿವೆ. (Defence industry) ಆದರೆ ವಾಸ್ತವ ಏನು? ಇಲ್ಲಿದೆ ವಿವರ.

VISTARANEWS.COM


on

Defence Exports At All-Time High Of Rs 15,920 Crore In FY23
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಶವ ಪ್ರಸಾದ್‌ ಬಿ. ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯ ಪರಿಣಾಮ ಭಾರತವು ಮುಂಬರುವ 2026 ಮತ್ತು 2030ರ ಅವಧಿಯಲ್ಲಿ ನಿರ್ಣಾಯಕ ಶಸ್ತ್ರಾಸ್ತ್ರಗಳಿಗೆ ಕೊರತೆ ಎದುರಿಸಲಿದೆ. ಹೆಲಿಕಾಪ್ಟರ್‌ಗಳು ಮತ್ತು ಯುದ್ಧ ವಿಮಾನಗಳಿಗೆ ತೀವ್ರ ಕೊರತೆ ಉಂಟಾಗಲಿದೆ. ವಾಯುಪಡೆ ಮತ್ತು ನೌಕಾಪಡೆಗೆ ಅಗತ್ಯವಿರುವ ಶಸ್ತ್ರಾಸ್ತ್ರಗಳ ಆಮದು ಕಷ್ಟವಾಗಬಹುದು. ಚೀನಾ ಮತ್ತು ಪಾಕಿಸ್ತಾನ ಮೂಲದ ಬೆದರಿಕೆಗಳನ್ನು ಎದುರಿಸುವ ನಿಟ್ಟಿನಲ್ಲಿ ಹೊಸ ಸವಾಲು ಎದುರಾಗಬಹುದು ಎಂದು ಬ್ಲೂಮ್‌ಬರ್ಗ್‌ ವರದಿ ಇದೀಗ ಚರ್ಚೆಗೀಡಾಗಿದೆ. (Defence industry) ಹಾಗಾದರೆ ವಾಸ್ತವವೇನು? ಇಲ್ಲಿದೆ ವಿವರ.

ಬ್ಲೂಮ್‌ ಬರ್ಗ್‌ ವರದಿಯ ಮುಖ್ಯಾಂಶಗಳು

  • ಪ್ರಧಾನಿ ನರೇಂದ್ರ ಮೋದಿಯವರು ರಕ್ಷಣಾ ವಲಯದ ಸಾಧನಗಳನ್ನು ಭಾರತದಲ್ಲಿ ಉತ್ಪಾದಿಸಲು ಉತ್ತೇಜಿಸುತ್ತಿದ್ದಾರೆ. ಆದರೆ ಇದರ ಪರಿಣಾಮ ಶಸ್ತ್ರಾಸ್ತ್ರಗಳ ಆಮದು ಕೊರತೆ ಆಗಲಿದ್ದು, ಗಡಿಯಲ್ಲಿ ಚೀನಾ, ಪಾಕಿಸ್ತಾನದ ಬೆದರಿಕೆಗಳನ್ನು ಎದುರಿಸಲು ಕಷ್ಟವಾಗಬಹುದು.
  • ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಗೆ ಕೆಲವು ಹಳೆ ಆಯುಧಗಳನ್ನು ಬದಲಿಸಲು ಹಾಗೂ ಹೊಸತನ್ನು ಖರೀದಿಸಲು ಕಷ್ಟವಾಗಬಹುದು. 2026ರ ವೇಳೆಗೆ ಹೆಲಿಕಾಪ್ಟರ್‌ ಹಾಗೂ 2030ರ ವೇಳೆಗೆ ನೂರಾರು ಯುದ್ಧ ವಿಮಾನಗಳ ಕೊರತೆ ಆಗಬಹುದು.
  • 2014ರಲ್ಲಿ ಮೋದಿಯವರು ಮೇಕ್‌ ಇನ್‌ ಇಂಡಿಯಾ ನೀತಿಯನ್ನು ಘೋಷಿಸಿದರು. ಮೊಬೈಲ್‌ನಿಂದ ಯುದ್ಧ ವಿಮಾನದ ತನಕ ಎಲ್ಲವನ್ನೂ ಇಲ್ಲಿಯೇ ಉತ್ಪಾದಿಸಿ ಆಮದು ವೆಚ್ಚ ಉಳಿಸಲು ಹಾಗೂ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಯತ್ನಿಸಿದರು. ಆದರೆ ಎಂಟು ವರ್ಷಗಳ ಬಳಿಕವೂ ಭಾರತ ಜಗತ್ತಿನ ಅತಿ ದೊಡ್ಡ ಮಿಲಿಟರಿ ಹಾರ್ಡ್‌ವೇರ್‌ ಆಮದುದಾರ ರಾಷ್ಟ್ರ.
  • ಸರ್ಕಾರ ಮಿಲಿಟರಿ ಖರೀದಿಯಲ್ಲಿ 30ರಿಂದ 60 ಪರ್ಸೆಂಟ್‌ ಸ್ವದೇಶಿ ನಿರ್ಮಿತ ಸಾಧನ ಕಡ್ಡಾಯವಾಗಿ ಇರಬೇಕು ಎಂದು ನಿಯಮ ರೂಪಿಸಿದೆ. ಈ ಹಿಂದೆ ಇಂಥ ನಿಯಮ ಇದ್ದಿರಲಿಲ್ಲ.
  • ಶಸ್ತ್ರಾಸ್ತ್ರಗಳ ಕೊರತೆಯಿಂದ ವಾಯುಪಡೆ ದುರ್ಬಲವಾದರೆ ಹಿಮಾಲಯದ ಗಡಿಯಲ್ಲಿ ಚೀನಾದ ಬೆದರಿಕೆ ಎದುರಿಸುವುದು ಕಷ್ಟಕರವಾಗಬಹುದು.
  • ದೇಶ ಇನ್ನೂ ಡೀಸೆಲ್ ಎಲೆಕ್ಟ್ರಿಕ್‌ ಸಬ್‌ಮೆರೀನ್ಸ್‌ ಮತ್ತು ಟ್ವಿನ್‌ ಎಂಜಿನ್‌ ಯುದ್ಧ ವಿಮಾನಗಳನ್ನು ತಯಾರಿಸಿಲ್ಲ.
  • ಯುದ್ಧ ವಿಮಾನಗಳನ್ನು ವಿದೇಶಿ ಉತ್ಪಾದಕರಿಂದ ಖರೀದಿಸುವ ಯೋಜನೆಗಳು ಮಂದಗತಿಯಲ್ಲಿವೆ. ಏಕೆಂದರೆ ಮೋದಿ ಸರ್ಕಾರ ಸ್ಥಳೀಯವಾಗಿ ನಿರ್ಮಿಸಿದ ಸಿಂಗಲ್‌ ಎಂಜಿನ್‌ ಯುದ್ಧ ವಿಮಾನಗಳನ್ನು ಕೊಳ್ಳಲು ಬಯಸಿದೆ. ಆದರೆ ಅವುಗಳಿಗೆ ಕೊರತೆ ಇದೆ. ಅವಳಿ ಎಂಜಿನ್‌ಗಳ ಯುದ್ಧ ವಿಮಾನ ಇನ್ನೂ ಉತ್ಪಾದನೆಯಾಗುತ್ತಿಲ್ಲ.

ಹಾಗಾದರೆ ವಾಸ್ತವವೇನು?

ಸಶಸ್ತ್ರ ಪಡೆಗಳಿಗೆ ಬೇಕಾಗುವ ಶಸ್ತ್ರಾಸ್ತ್ರಗಳನ್ನು ಭಾರತದಲ್ಲಿಯೇ ತಯಾರಿಸುವ ಹಾಗೂ ರಫ್ತನ್ನೂ ಮಾಡುವ ಮಹತ್ವದ ಬದಲಾವಣೆಗೆ ಕಳೆದ ಎಂಟು ವರ್ಷಗಳಲ್ಲಿ ಮುನ್ನುಡಿ ಬರೆಯಲಾಗಿದೆ. ಮೇಕ್‌ ಇನ್‌ ಇಂಡಿಯಾ ಅಡಿಯಲ್ಲಿ ವಿಶ್ವದರ್ಜೆಯ ಶಸ್ತ್ರಾಸ್ತ್ರಗಳನ್ನು ಕಡಿಮೆ ದರದಲ್ಲಿ ತಯಾರಿಸಿ ರಫ್ತು ಮಾಡುವ ದಿಸೆಯಲ್ಲಿ ಭಾರತ ಇದೀಗ ದಾಪುಗಾಲಿಡುತ್ತಿರುವುದು ಗಮನಾರ್ಹ.

ಈಗಾಗಲೇ ಬಾಹ್ಯಾಕಾಶ ಉದ್ದಿಮೆಯಲ್ಲಿ ಇಸ್ರೋ ಸಾರಥ್ಯದಲ್ಲಿ ಭಾರತ ಇಡೀ ಜಗತ್ತೇ ಬೆರಗಾಗುವಂತೆ ಬೆಳೆದಿದೆ. ವಿದೇಶಿ ಉಪಗ್ರಹಗಳನ್ನು ಭಾರತ ಯಶಸ್ವಿಯಾಗಿ ಕಕ್ಷೆಗೆ ಉಡಾಯಿಸುತ್ತಿದೆ. ಅದೂ ಕಡಿಮೆ ಖರ್ಚಿನಲ್ಲಿ. 2022ರ ಜೂನ್‌ ವೇಳೆಗೆ ಭಾರತ 36 ದೇಶಗಳ 346 ಉಪಗ್ರಹಗಳನ್ನು ( satellites) ಉಡಾವಣೆಗೊಳಿಸಿದೆ. 2017ರ ಫೆಬ್ರವರಿ 15 ಕ್ಕೆ 104 ಉಪಗ್ರಹಗಳನ್ನು ಒಂದೇ ಸಲ ಉಡಾವಣೆಗೊಳಿಸಿ ತನ್ನ ಸಾಮರ್ಥ್ಯವನ್ನು ಇಸ್ರೋ ಜಗತ್ತಿಗೆ ಸಾಬೀತುಪಡಿಸಿತ್ತು. ಈ ಮೂಲಕ ಭಾರತ ಆದಾಯವನ್ನೂ ಗಳಿಸುತ್ತಿದೆ. ಈಗ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲೂ ಸ್ವಾವಲಂಬಿಯಾಗುವ ದೃಷ್ಟಿಯಿಂದ ಮುನ್ನಡಿ ಇಟ್ಟಿದೆ.

ಈ ನಿಟ್ಟಿನಲ್ಲಿ ಭಾರತ ಆಟೊಮ್ಯಾಟಿಕ್‌ ರೂಟ್‌ನಲ್ಲಿ ರಕ್ಷಣಾ ಉತ್ಪಾದನೆಗೆ 74% ವಿದೇಶಿ ನೇರ ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡಿದೆ. ಕಳೆದ ವರ್ಷ 780 ಸಬ್‌ ಸಿಸ್ಟಮ್‌ಗಳ ಬಿಡಿ ಭಾಗಗಳ ಆಮದನ್ನು ನಿಷೇಧಿಸಿತ್ತು. ಈ ಮೂಲಕ ಸ್ವದೇಶಿ ಉತ್ಪಾದನೆಗೆ ವಿಫುಲ ಉತ್ತೇಜನ ನೀಡಿತ್ತು.

ಭಾರತಕ್ಕೆ ೧.೭೫ಲಕ್ಷ ಕೋಟಿ ರೂ. ಶಸ್ತ್ರಾಸ್ತ್ರ ಉತ್ಪಾದನೆಯ ಗುರಿ: ಒಂದು ಕಾಲದಲ್ಲಿ ಸಣ್ಣ ಪುಟ್ಟ ಆಯುಧ, ಮದ್ದುಗುಂಡುಗಳಿಗೂ ರಷ್ಯಾದ ಮೇಲೆ ಭಾರಿ ಅವಲಂಬಿಸಿದ್ದ ಭಾರತ ಈಗ ಸ್ವತಃ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವ ಮಟ್ಟಕ್ಕೆ ಬೆಳೆದಿದೆ. 2021-22ರಲ್ಲಿ ಭಾರತ 12,815 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡಿತ್ತು. 2022ರ ಏಪ್ರಿಲ್-ಜೂನ್‌ನಲ್ಲಿ 1,387 ಕೋಟಿ ರೂ. ರಫ್ತಾಗಿತ್ತು. ಈ ಅಂಕಿ ಅಂಶಗಳನ್ನು ರಕ್ಷಣಾ ಇಲಾಖೆಯ ಸಹಾಯಕ ಸಚಿವ ಅಜಯ್‌ ಭಟ್‌ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಭಾರತ 2025ರ ವೇಳೆಗೆ 1.75 ಲಕ್ಷ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳನ್ನು ಉತ್ಪಾದಿಸಲು ಹಾಗೂ 35,000 ಕೋಟಿ ರೂ. ರಫ್ತು ಮಾಡುವ ಗುರಿಯನ್ನೂ ಹೊಂದಿದೆ. ಮೊದಲ ಹಂತದಲ್ಲಿ ರಕ್ಷಣಾ ಪಡೆಗಳಲ್ಲಿ ಬಳಕೆಯಾಗುವ 2,851 ವಸ್ತುಗಳ ಸ್ವದೇಶಿ ಉತ್ಪಾದನೆಗೆ ಪಟ್ಟಿ ಸಿದ್ಧಪಡಿಸಿದೆ. ಈ ಪೈಕಿ 2,500 ವಸ್ತುಗಳು ಈಗಾಗಲೇ ಭಾರತದಲ್ಲಿ ತಯಾರಾಗುತ್ತಿವೆ.

ಭಾರತದ ಶಸ್ತ್ರಾಸ್ತ್ರಗಳ ರಫ್ತು ಮೌಲ್ಯ

2021-2212,815 ಕೋಟಿ ರೂ.
2020-218,434 ಕೋಟಿ ರೂ.
2019-209,115 ಕೋಟಿ ರೂ.
2015-162,059 ಕೋಟಿ ರೂ.

ಖಾಸಗಿ ಉದ್ದಿಮೆಗಳಿಗೆ ತೆರೆದ ಬಾಗಿಲು

ಇದುವರೆಗೂ ಭಾರತದಲ್ಲಿ ರಕ್ಷಣಾ ವಲಯದ ಉತ್ಪಾದನೆ ಸಾರ್ವಜನಿಕ ಉದ್ದಿಮೆಗಳನ್ನು ಅವಲಂಬಿಸಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ಖಾಸಗಿ ವಲಯಕ್ಕ ಬಾಗಿಲು ತೆರೆಯಲಾಗಿದೆ. ಇದರ ಪರಿಣಾಮ ಕಳೆದ ಐದು ವರ್ಷಗಳಲ್ಲಿ ಗಳಭಾರತದ ಶಸ್ತ್ರಾಸ್ತ್ರಗಳ ರಫ್ತು ಎಂಟು ಪಟ್ಟು ವೃದ್ಧಿಸಿದೆ. ಯುದ್ಧ ಟ್ಯಾಂಕರ್‌ಗಳು, ಹೆಲಿಕಾಪ್ಟರ್‌, ಲಘು ಯುದ್ಧ ವಿಮಾನಗಳ ತಯಾರಿಕೆಯಲ್ಲಿ ಸಾರ್ವಜನಿಕ ಉದ್ದಿಮೆಗಳೇ ಪ್ರಾಬಲ್ಯ ಹೊಂದಿದ್ದವು. ಆದರೆ 2021-22ರ ವೇಳೆಗೆ ಶಸ್ತ್ರಾಸ್ತ್ರಗಳ ರಫ್ತಿನಲ್ಲಿ ಖಾಸಗಿ ಉದ್ದಿಮೆಗಳ ಪಾಲು 70%ಕ್ಕೆ ಏರಿಕೆಯಾಗಿರುವುದು ಗಮನಾರ್ಹ.

ಗ್ಲೋಬಲ್‌ ಸಪ್ಲೈ ಚೈನ್‌ನಲ್ಲಿ ಭಾರತದ ಹೆಜ್ಜೆ ಗುರುತು: ಮೊಟ್ಟ ಮೊದಲ ಬಾರಿಗೆ ಭಾರತದ ರಕ್ಷಣಾ ಉದ್ದಿಮೆ ಗ್ಲೋಬಲ್‌ ಸಪ್ಲೈ ಚೈನ್‌ನಲ್ಲಿ ಗಮನಾರ್ಹವಾಗಿ ಕಾಣಿಸಿಕೊಂಡಿದೆ. ಅಂದರೆ ಶಸ್ತ್ರಾಸ್ತ್ರಗಳ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಜಗತ್ತಿನಾದ್ಯಂತ ಒರಿಜಿನಲ್‌ ಎಕ್ವಿಪ್‌ಮೆಂಟ್‌ ಉತ್ಪಾದಕರಿಗೆ ( Original Equipment Manufacturers) ಬಿಡಿ ಭಾಗಗಳನ್ನು ಒದಗಿಸುತ್ತಿದೆ. ಒಇಎಂ ಎಂದರೆ ಮತ್ತೊಂದು ಕಂಪನಿಯ ಉತ್ಪನ್ನಕ್ಕೆ ಬೇಕಾಗುವ ಮೂಲ ಸಿಸ್ಟಮ್‌ಗಳನ್ನು ಒದಗಿಸುವವರು. ಉತ್ಪಾದನೆ ಮಾತ್ರವಲ್ಲದೆ, ರಕ್ಷಣಾ ಸಂಶೋಧನೆಯಲ್ಲೂ ಭಾರತ ಮುಂದುವರಿಯುತ್ತಿದೆ. ಡಿಆರ್‌ಡಿಒ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಅಮೆರಿಕ, ಬ್ರಿಟನ್‌ ಮತ್ತು ಆಸ್ಟ್ರೇಲಿಯಾ ಕೂಡ ಡಿಆರ್‌ಡಿಒ ಪ್ರೋಗ್ರಾಮ್‌ಗಳಲ್ಲಿ ಆಸಕ್ತಿ ವಹಿಸಿವೆ.

ಭಾರತ ಇತ್ತೀಚೆಗೆ ಸ್ವದೇಶದಲ್ಲಿಯೇ ನಿರ್ಮಾಣವಾಗಿರುವ ಮೊಟ್ಟ ಮೊದಲ ಏರ್‌ ಕ್ರಾಫ್ಟ್‌ ಕ್ಯಾರಿಯರ್‌ ಯುದ್ಧ ನೌಕೆ ಐಎನ್‌ಎಸ್‌ ವಿಕ್ರಾಂತ್‌ ಅನ್ನು ನಿರ್ಮಿಸಿದೆ. 20,000 ಕೋಟಿ ರೂ. ವೆಚ್ಚದಲ್ಲಿ 45 ಸಾವಿರ ಟನ್‌ ತೂಕದ ಭವ್ಯ ಯುದ್ಧ ನೌಕೆಯನ್ನು ನಿರ್ಮಿಸಿರುವುದು ಸಾಧಾರಣ ಮಾತಲ್ಲ. ಇದರೊಂದಿಗೆ ಸ್ವದೇಶಿ, ದೈತ್ಯ ಮತ್ತು ಸಂಕೀರ್ಣವಾದ ಏರ್‌ ಕ್ರಾಫ್ಟ್‌ ಕ್ಯಾರಿಯರ್‌ ಸಮರ ನೌಕೆಗಳನ್ನು ತಯಾರಿಸುವ ಸಾಮರ್ಥ್ಯ ಇರುವ ಅಮೆರಿಕ, ಚೀನಾ, ರಷ್ಯಾ, ಫ್ರಾನ್ಸ್‌ ಮತ್ತು ಜಪಾನ್‌ ಸಾಲಿಗೆ ಭಾರತ ಕೂಡ ಸೇರಿದೆ.

ಉತ್ಪಾದನೆಯಲ್ಲಿ ಸ್ವಾವಲಂಬನೆ ಏಕೆ ಅಗತ್ಯ?

ಭಾರತ ಮೊದಲಿನಿಂದಲೂ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲಿ ಹಿಂದುಳಿದಿತ್ತು. ಸ್ವಾತಂತ್ರ್ಯಾನಂತರದ ದಶಕಗಳಲ್ಲಿ ಸರ್ಕಾರಗಳ ನೀತಿಗಳೂ ಅದಕ್ಕೆ ಪೂರಕವಾಗಿ ಇದ್ದಿರಲಿಲ್ಲ. ಅದಕ್ಕೆ ಮಹತ್ವ ನೀಡಿರಲಿಲ್ಲ. ಇದರ ಪರಿಣಾಮ ನಂತರದ ದಶಕಗಳಲ್ಲಿ ಚೀನಾ, ಪಾಕಿಸ್ತಾನ ಕಡೆಯಿಂದ ಗಡಿಯಲ್ಲಿ ಬೆದರಿಕೆಯನ್ನು ಹತ್ತಿಕ್ಕಲು ಬೇಕಾಗುವ ಶಸ್ತ್ರಾಸ್ತ್ರಗಳಿಗೆ ಆಮದನ್ನು ಅವಲಂಬಿಸುವಂತಾಯಿತು. ಈಗ ಜಗತ್ತಿನಲ್ಲಿ ಭಾರತ, ಸೌದಿ ಅರೇಬಿಯಾ, ಈಜಿಪ್ತ್‌, ಆಸ್ಟ್ರೇಲಿಯಾ ಮತ್ತು ಚೀನಾ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡುತ್ತಿವೆ. ಅಮೆರಿಕ, ರಷ್ಯಾ, ಫ್ರಾನ್ಸ್‌, ಚೀನಾ ಮತ್ತು ಜರ್ಮನಿ ಅತಿ ಹೆಚ್ಚು ರಫ್ತು ಮಾಡುತ್ತಿವೆ. ಹೀಗಾಗಿ ಭಾರತ ತನ್ನಲ್ಲಿಯೇ ಉತ್ಪಾದನೆಯನ್ನು ಹೆಚ್ಚಿಸಿ ಸ್ವಾವಲಂಬಿಯಾಗುವುದು ನಿರ್ಣಾಯಕ. 2021-22ರಲ್ಲಿ ಭಾರತ ಒಟ್ಟಾರೆ ರಕ್ಷಣಾ ವೆಚ್ಚವಾಗಿ 3.62 ಲಕ್ಷ ಕೋಟಿ ರೂ.ಗಳನ್ನು ಮುಡಿಪಾಗಿಟ್ಟಿತ್ತು. ಹೀಗಾಗಿ ದೇಶದಲ್ಲಿಯೇ ಉತ್ಪಾದನೆ-ರಫ್ತು ಚುರುಕಾದರೆ, ಆರ್ಥಿಕತೆ, ಉದ್ಯೋಗ ಸೃಷ್ಟಿಗೂ ಸಹಕಾರಿಯಾಗಲಿದೆ.

ಸವಾಲುಗಳೇನು?

ಭಾರತದ ಜಿಡಿಪಿ ಪ್ರತಿ ವರ್ಷ ಸುಧಾರಿಸುತ್ತಿರುವುದರಿಂದ ಹಣಕಾಸು ಮತ್ತು ಹೂಡಿಕೆ ದೃಷ್ಟಿಯಿಂದ ಸವಾಲುಗಳಾಗದು. ಆದರೆ ಸಂಶೋಧನೆ ಮತ್ತು ಅಭಿವೃದ್ಧಿ ಚುರುಕಾಗುವುದು ಮುಖ್ಯ ಎನ್ನುತ್ತಾರೆ ರಕ್ಷಣಾ ವಲಯದ ತಜ್ಞರು. ಇದರ ಅಭಾವದ ಪರಿಣಾಮ ಸೇನಾ ಪಡೆಗೆ ಅವಶ್ಯವರಿಉ ಉತ್ಪನ್ನಗಳ ತಯಾರಿಕೆಯ ಯೋಜನೆಗಳಲ್ಲಿ ವಿಳಂಬವಾಗುತ್ತಿರುವುದೂ ಹೌದು. ಆದರೆ ಈ ಸವಾಲುಗಳು ಆರಂಭಿಕ ಹಂತದಲ್ಲಿ ಸಾಮಾನ್ಯವಾದ್ದರಿಂದ ಸುಧಾರಣೆಗೆ ಅವಕಾಶ ಇದೆ.

ಭಾರತದ ವಿದೇಶಾಂಗ ನೀತಿ, ರಕ್ಷಣಾ ಕಾರ್ಯತಂತ್ರಗಳಲ್ಲಿ ಕಳೆದ ಕೆಲ ದಶಕಗಳಿಂದ ಗಮನಾರ್ಹ ಬದಲಾವಣೆಯಾಗಿದೆ. ಇಂಡೊ-ಪೆಸಿಫಿಕ್‌ ವಲಯದಲ್ಲಿ ಭದ್ರತೆ ಹೆಚ್ಚಿಸಲು ಆಸ್ಟ್ರೇಲಿಯಾ, ಭಾರತ, ಜಪಾನ್‌ ಮತ್ತು ಅಮೆರಿಕ ಕೈ ಜೋಡಿಸಿವೆ. ಭಾರತ ಜಾಗತಿಕ ಮಟ್ಟದಲ್ಲಿ ಯಾರೂ ಕಡೆಗಣಿಸಲಾಗದ ಪ್ರಬಲ ರಾಷ್ಟ್ರಗಳಲ್ಲಿ ಒಂದಾಗಿದೆ. ಹೀಗಾಗಿ ಶಸ್ತ್ರಾಸ್ತ್ರಗಳ ಉತ್ಪಾದನೆ ಮತ್ತು ರಫ್ತಿನ ಹೊಸ ನೀತಿಯ ಬದಲಾವಣೆಗಳ ಆರಂಭಿಕ ಸವಾಲುಗಳನ್ನು ಎದುರಿಸಲೂ ಸಶಕ್ತವಾಗಿದೆ ಎನ್ನುತ್ತಾರೆ ತಜ್ಞರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಶಿಕ್ಷಣ

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

2nd PUC Exam 2 Result: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು.

VISTARANEWS.COM


on

2nd PUC Exam 2 Result tomorrow
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ಅನ್ನು ನಡೆಸಿತ್ತು. ಇಂದು (ಮಂಗಳವಾರ – ಮೇ 21) ರಂದು ಫಲಿತಾಂಶವನ್ನು ಪ್ರಕಟ (2nd PUC Exam 2 Result) ಮಾಡುವುದಾಗಿ ಹೇಳಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
    ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
    ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ. ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಸಹ ಸ್ಪಷ್ಟನೆ ನೀಡಿದ್ದು, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದೆ.

ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ಗಾಗಿ (CET Result) ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಪಷ್ಟನೆ ನೀಡಿದೆ. ಈಗ ಮಂಗಳವಾರ ಪಿಯು ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶದ ದಿನಾಂಕವನ್ನು ಕೆಇಎ ಪ್ರಕಟಿಸಬೇಕಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಅಧಿಕಾರಿಗಳ ಎಡವಟ್ಟು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿದೆ.

ಇದನ್ನೂ ಓದಿ: Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು.

Continue Reading

ದೇಶ

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Sambit Patra: “ಪುರಿ ಜಗನ್ನಾಥನು ಕೂಡ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

VISTARANEWS.COM


on

Sambita Patra
Koo

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೋಟ್ಯಂತರ ಭಾರತೀಯರು ಇಷ್ಟಪಡುತ್ತಾರೆ. ಸೆಲೆಬ್ರಿಟಿಗಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರನ್ನು ಇಷ್ಟಪಡುತ್ತಾರೆ. ವಿದೇಶಗಳಲ್ಲೂ ಮೋದಿ ಅವರಿಗೆ ಅಭಿಮಾನಿಗಳಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಕೇಳುತ್ತಾರೆ. ಆದರೆ, ಬಿಜೆಪಿ ನಾಯಕ, ಒಡಿಶಾದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ಅವರು ಮೋದಿ ಅವರನ್ನು ಹೊಗಳುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಪುರಿ ಜಗನ್ನಾಥನು (Lord Jagannath) ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದಾರೆ. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಟುಕಿದ ನವೀನ್‌ ಪಟ್ನಾಯಕ್‌

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದಾರೆ. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

“ಜಗನ್ನಾಥನು ಸರ್ವಶ್ರೇಷ್ಠನಾಗಿದ್ದು, ಒಡಿಶಾದ ಅಸ್ಮಿತೆಯಾಗಿದ್ದಾನೆ. ಇಂತಹ ಜಗನ್ನಾಥನ ಬಗ್ಗೆ ಹೇಳಿಕೆ ಕೊಡುವುದು, ಮನುಷ್ಯರೊಬ್ಬರ ಭಕ್ತ ಎಂದು ಹೇಳುವುದು ಖಂಡನೀಯವಾಗಿದೆ. ಬಿಜೆಪಿ ನಾಯಕರೂ ಆದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯು ಹೀಗೆ ಹೇಳಿರುವುದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುವುದು, ಹೀನವಾದ ಹೇಳಿಕೆ ನೀಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಒಡಿಶಾದ ಜನರು ದೀರ್ಘ ಅವಧಿಗೆ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಹಾಗೂ ಎಂದಿಗೂ ಕ್ಷಮಿಸಲ್ಲ” ಎಂದು ನವೀನ್‌ ಪಟ್ನಾಯಕ್‌ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

ಭವಿಷ್ಯ

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರು ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಮೀನ ರಾಶಿಯವರು ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ತ್ರಯೋದಶಿ 17:39 ವಾರ:ಮಂಗಳವಾರ
ನಕ್ಷತ್ರ: ಚಿತ್ತಾ 05:45 ಯೋಗ: ವ್ಯತಿಪಾತ 12:34
ಕರಣ: ತೈತುಲ 17:39 ಅಮೃತ ಕಾಲ: ರಾತ್ರಿ 10:14 ರಿಂದ 11:58 ರವರಗೆ
ದಿನದ ವಿಶೇಷ: ವೇದವ್ಯಾಸ ಜಯಂತಿ, ಮುಳಬಾಗಿಲು ಆಂಜನೇಯ ರಥ

ಸೂರ್ಯೋದಯ : 05:53   ಸೂರ್ಯಾಸ್ತ : 06:40

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಧಾರ್ಮಿಕ ಸ್ಥಳಗಳ ಭೇಟಿ ಮಾಡಿ, ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ:ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜಿಸುವಿರಿ. ಹೂಡಿಕೆ ವ್ಯವಹಾರವು ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ .ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ .ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ ಬೇಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗವು ಸಾಧಾರಣವಾಗಿರಲಿದೆ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು:ಅನಿರೀಕ್ಷಿತ ಪ್ರಯಾಣ ಇರಲಿದೆ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ:ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

ಮಹಾರಾಷ್ಟ್ರದಲ್ಲಿ 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಇದರಿಂದಾಗಿ ಬಾಲಕಿಯು ಗರ್ಭ ಧರಿಸಿದ್ದು, ಗರ್ಭಪಾತ ಮಾಡಿಸಲು ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬಯಲಾಗಿದೆ.

VISTARANEWS.COM


on

Mobile
Koo

ಮುಂಬೈ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಭಾರತ ಸೇರಿ ಜಗತ್ತು ಏಳಿಗೆ ಹೊಂದಲು ಕಾರಣವಾಗಿದೆ. ಆದರೆ, ಇದೇ ತಂತ್ರಜ್ಞಾನವು ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಅದರಲ್ಲೂ, ಸಣ್ಣ ಮಕ್ಕಳಿಂದ ಹಿಡಿದು, ಹಿರಿಯರವರೆಗೆ ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳು (Smart Phones) ಅತ್ಯಾಚಾರ, ಲೈಂಗಿಕ ಕಿರುಕುಳ, ಕೊಲೆ, ಸುಲಿಗೆಗೆ ದಾರಿ ಮಾಡಿಕೊಡುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ (Maharashtra) 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.

ಹೌದು, ಬಾಲಕನು ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ ಪರಿಣಾಮ, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಮೂರು ತಿಂಗಳು ಗರ್ಭಿಣಿಯಾಗಿರುವ ಬಾಲಕಿಯನ್ನು ಪೋಷಕರು ಮುಂಬೈನಲ್ಲಿರುವ ವಾಶಿ ಜನರಲ್‌ ಹಾಸ್ಪಿಟಲ್‌ಗೆ ಕರೆದುಕೊಂಡು ಹೋಗಿ, ಗರ್ಭಪಾತ ಮಾಡಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಾದ ಬಳಿಕ ಪೊಲೀಸರು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

physical Abuse

“ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ವಿರುದ್ಧ ಪೋಕ್ಸೊ, ಐಪಿಸಿಯ ಸೆಕ್ಷನ್‌ 376 ಸೇರಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಾದ ಬಳಿಕ ಪ್ರಕರಣವನ್ನು ಖಂಡೇಶ್ವರ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಮಕ್ಕಳ ಕಲ್ಯಾಣ ಆಯೊಗವು ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. ಇಂತಹ ಪ್ರಕರಣಗಳು ಬೆಳಕಿಗೆ ಬರುವ ಕಾರಣದಿಂದಾಗಿಯೇ, ಮಕ್ಕಳಿಗೆ ಮೊಬೈಲ್‌ ಕೊಡಬಾರದು, ಕೊಟ್ಟರೂ ಅವರು ಏನು ಮಾಡುತ್ತಾರೆ ಎಂಬುದರ ಮೇಲೆ ಪೋಷಕರು ಗಮನ ಇಡಬೇಕು ಎಂದು ತಜ್ಞರು ಹೇಳುತ್ತಲೇ ಇರುತ್ತಾರೆ.

ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

Continue Reading
Advertisement
2nd PUC Exam 2 Result tomorrow
ಶಿಕ್ಷಣ31 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Karnataka Weather Forecast
ಮಳೆ60 mins ago

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Tea Tips
ಆರೋಗ್ಯ60 mins ago

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

Sambita Patra
ದೇಶ1 hour ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ2 hours ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ2 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ8 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20248 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ8 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌