Mukesh Ambani | ರಿಲಯನ್ಸ್‌ನಲ್ಲಿ ಮುಕೇಶ್‌ ಅಂಬಾನಿ ಸಾರಥ್ಯಕ್ಕೆ 20 ವರ್ಷ, ಕಂಪನಿಯ ಲಾಭವೂ 20 ಪಟ್ಟು ಹೆಚ್ಚಳ - Vistara News

ಪ್ರಮುಖ ಸುದ್ದಿ

Mukesh Ambani | ರಿಲಯನ್ಸ್‌ನಲ್ಲಿ ಮುಕೇಶ್‌ ಅಂಬಾನಿ ಸಾರಥ್ಯಕ್ಕೆ 20 ವರ್ಷ, ಕಂಪನಿಯ ಲಾಭವೂ 20 ಪಟ್ಟು ಹೆಚ್ಚಳ

ರಿಲಯನ್ಸ್‌ ಇಂಡಸ್ಟ್ರೀಸ್‌ನ ಅಧ್ಯಕ್ಷರಾಗಿ ಮುಕೇಶ್‌ ಅಂಬಾನಿ ಅವರು ಅಧಿಕಾರ ವಹಿಸಿ 20 ವರ್ಷ ಪೂರ್ಣವಾಗಿವೆ. ಈ ಎರಡು ದಶಕಗಳಲ್ಲಿ ರಿಲಯನ್ಸ್‌ ಸಾಮ್ರಾಜ್ಯ ನಾನಾ ಕ್ಷೇತ್ರಗಳಲ್ಲಿ ಅನೂಹ್ಯವಾಗಿ (Mukesh Ambani) ಬೆಳೆದಿದೆ.

VISTARANEWS.COM


on

mukesh ambani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಮುಕೇಶ್ ಅಂಬಾನಿ ಅವರು ರಿಲಯನ್ಸ್‌ ಇಂಡಸ್ಟ್ರೀಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ 20 ವರ್ಷಗಳು ಭರ್ತಿಯಾಗಿವೆ. ಅವರ ನಾಯಕತ್ವದಲ್ಲಿ ಕಂಪನಿಯು ಕಳೆದ ಎರಡು ದಶಕಗಳಲ್ಲಿ ಆದಾಯ, ಲಾಭ ಮತ್ತು ಮಾರುಕಟ್ಟೆ ಬಂಡವಾಳ ಮೌಲ್ಯದಲ್ಲಿ ಸ್ಥಿರವಾದ ಎರಡಂಕಿಯ ಬೆಳವಣಿಗೆ ದರವನ್ನು ಸಾಧಿಸಿದೆ. ಈ ಅವಧಿಯಲ್ಲಿ ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯ 42 ಪಟ್ಟು ಮತ್ತು ಲಾಭದ (Mukesh Ambani) ಪ್ರಮಾಣವು ಸುಮಾರು 20 ಪಟ್ಟು ಹೆಚ್ಚಾಗಿದೆ.

ಮುಕೇಶ್ ಅಂಬಾನಿ ಅವರ ನಾಯಕತ್ವದಲ್ಲಿ ಕಳೆದ 20 ವರ್ಷಗಳಲ್ಲಿ ಕಂಪನಿಯಲ್ಲಿ ಹೂಡಿಕೆದಾರರಿಗೆ ಸಾಕಷ್ಟು ಲಾಭ ಲಭಿಸಿದೆ. ವಾರ್ಷಿಕ 87 ಸಾವಿರ ಕೋಟಿ ರೂಪಾಯಿಯಂತೆ ಹೂಡಿಕೆದಾರರ ಖಜಾನೆಗೆ 17.4 ಲಕ್ಷ ಕೋಟಿ ರೂಪಾಯಿ ಹರಿದಿದೆ. ಈ ಮಧ್ಯೆ, ರಿಲಯನ್ಸ್ ಪ್ರಪಂಚದಾದ್ಯಂತದ ದೊಡ್ಡ ಕಂಪನಿಗಳಿಂದ ಹೂಡಿಕೆಯನ್ನು ಪಡೆದಿದೆ. ಫೇಸ್‌ಬುಕ್, ಗೂಗಲ್ ಮತ್ತು ಬ್ರಿಟಿಷ್ ಪೆಟ್ರೋಲಿಯಂನಂಥ ಬೃಹತ್ ಕಂಪನಿಗಳು ರಿಲಯನ್ಸ್‌ ಜತೆ ಪಾಲುದಾರಿಕೆಗೆ ಮುಂದಾದವು.

ರಿಲಯನ್ಸ್‌ ಇಂಡಸ್ಟ್ರೀಸ್ ತೈಲದಿಂದ ಪ್ರಾರಂಭಿಸಿ, ಟೆಲಿಕಾಂ ಮತ್ತು ರೀಟೇಲ್ ತನಕ ನಾನಾ ವಲಯಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದೆ. ಅಂದ ಹಾಗೆ ಡೇಟಾವನ್ನು ‘ಹೊಸ ತೈಲ’ ಎಂದು ಕರೆದ ಮೊದಲ ವ್ಯಕ್ತಿ ಮುಕೇಶ್ ಅಂಬಾನಿ. ಮತ್ತು ಡೇಟಾವು ದೇಶದ ಸಾಮಾನ್ಯ ಮನುಷ್ಯರ ದೈನಂದಿನ ಜೀವನವನ್ನು ಎಷ್ಟು ಬದಲಾಯಿಸಿದೆ ಎಂದು ಹೇಳಬೇಕಾಗಿಲ್ಲ.

ರಿಲಯನ್ಸ್ ಜಿಯೋವನ್ನು ದೇಶದಲ್ಲಿ ಮಾತ್ರವಲ್ಲದೆ ವಿಶ್ವದ ಅತಿದೊಡ್ಡ ಟೆಲಿಕಾಂ ಕಂಪನಿಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ ಅಂಬಾನಿ. ಜಿಯೋ ಬಂದ ನಂತರ ಡಿಜಿಟಲ್ ಲೋಕದಲ್ಲಿ ದೇಶ ಮಾಡಿದ ಕ್ರಾಂತಿಗೆ ಇಡೀ ಜಗತ್ತೇ ಬೆರಗಾಗಿದೆ. ಗರಿಷ್ಠ ಸಂಖ್ಯೆಯ ಡಿಜಿಟಲ್ ವಹಿವಾಟಿನ ದಾಖಲೆ ಇಂದು ಭಾರತದ ಹೆಸರಿನಲ್ಲಿದೆ. ಈಗಂತೂ ಡಿಜಿಟಲ್ ಪಾವತಿ ಸೌಲಭ್ಯ ಸಾರ್ವತ್ರಿಕವಾಗಿದೆ. ಪ್ರತಿ ಜಿಬಿಗೆ 250 ರೂಪಾಯಿ ಇದ್ದ ಡೇಟಾ ಜಿಯೋ ಬಂದ ನಂತರ ಸುಮಾರು 10 ರೂಪಾಯಿಗೆ ಇಳಿದಿದೆ.

ರೀಟೇಲ್ ವಲಯದಲ್ಲೂ ರಿಲಯನ್ಸ್ ವಿಶ್ವದ ಪ್ರಮುಖ ಕಂಪನಿಗಳಿಗೆ ಪೈಪೋಟಿ ನೀಡುತ್ತಿದೆ. ಆನ್‌ಲೈನ್ ಅಥವಾ ಆಫ್‌ಲೈನ್, ರೀಟೇಲ್ ಅಥವಾ ಸಗಟು ಹೀಗೆ ಮುಕೇಶ್ ಅಂಬಾನಿ ನಾಯಕತ್ವದಲ್ಲಿ ರಿಲಯನ್ಸ್ ಎಲ್ಲದರಲ್ಲೂ ತನ್ನ ಹಿಡಿತ ಸಾಧಿಸಿದೆ. ಅಮೆಜಾನ್, ಫ್ಲಿಪ್‌ಕಾರ್ಟ್, ವಾಲ್‌ಮಾರ್ಟ್‌ನಂತಹ ಕಂಪನಿಗಳು ರಿಲಯನ್ಸ್ ಅನ್ನು ಪ್ರತಿಸ್ಪರ್ಧಿ ಎಂದು ಪರಿಗಣಿಸುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

VISTARANEWS.COM


on

wayanad landslide cm siddaramaiah pinarayi vijayan
Koo

ಬೆಂಗಳೂರು: ವಯನಾಡ್‌ ಭೂಕುಸಿತ (Wayanad landslide, Kerala landslide) ಸಂತ್ರಸ್ತರಿಗೆ 100 ಮನೆ ನಿರ್ಮಾಣ ಮಾಡಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ (Pinarayi Vijayan) ಅವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಹೇಳಿಕೆ ನೀಡಿದ್ದಾರೆ.

“ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ” ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿತ್ತು. ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್‌ಗಳನ್ನು ಏರ್ಪಡಿಸಲಾಗಿತ್ತು. ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿದ್ದವು.

ವಯನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ, ಭೂಕುಸಿತ ಅಥವಾ ಇತರೇ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಿನ್ನೆ ಮುಖ್ಯಮಂತ್ರಿಗಳು ಕೊಡಗಿನಲ್ಲಿ ಭೂಕುಸಿತ ಸಂಭವಿಸಿದ ಜಾಗಕ್ಕೆ ಭೇಟಿ ನೀಡಿದ್ದರು.

“ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದು ಭೇಟಿಯ ಬಳಿಕ ಹೇಳಿದ್ದರು. “ಜಿಲ್ಲೆಯಲ್ಲಿ 20 ಕಡೆ ಭೂ ಕುಸಿತ ಆಗಿದೆ, ಬಹುತೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ. 16 ಜಾನುವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ” ಎಂದು ಸಿಎಂ ಹೇಳಿದ್ದಾರೆ.

“28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2,708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ. 344 ಕಿಮೀ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ.‌ ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತದ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ. ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುತ್ತೇನೆ. ಭೂ‌ಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್‌ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು” ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ಭೂಕುಸಿತದ ಹಾಟ್‌ಸ್ಪಾಟ್‌ಗಳಲ್ಲಿ ಕಾಮಗಾರಿಗೆ ಅನುಮತಿ ನೀಡಿದ್ದೇಕೆ? ಹಸಿರು ನ್ಯಾಯ ಮಂಡಳಿ ಪ್ರಶ್ನೆ

Continue Reading

ಪ್ರಮುಖ ಸುದ್ದಿ

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Paris Olympics:ಭಾಕರ್​ ಬಳಿಕ ಒಲಿಂಪಿಕ್ಸ್​ನಲ್ಲಿ ಕುಸ್ತಿಪಟು ಸುಶೀಲ್​ ಕುಮಾರ್​(2008 ಕಂಚು, 2012 ಬೆಳ್ಳಿ) ಮತ್ತು ಪಿ.ವಿ. ಸಿಂಧು(2016 ಬೆಳ್ಳಿ, 2021 ಕಂಚು) ಅವಳಿ ಪದಕ ಗೆದ್ದ ಇಬ್ಬರು ಭಾರತೀಯ ಕ್ರೀಡಾಪಟುಗಳು.

VISTARANEWS.COM


on

Paris Olympics
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿದ್ದ ಮನು ಭಾಕರ್​ಗೆ(manu bhaker) ನಿರಾಸೆಯಾಗಿದೆ. ಇಂದು(ಶನಿವಾರ) ನಡೆದ 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಅವರು ಐತಿಹಾಸಿಕ ಪದಕ ಗೆಲ್ಲುವ ಅವಕಾಶವೊಂದನ್ನು ಕಳೆದುಕೊಂಡರು. ಪದಕ ಗೆಲ್ಲುತ್ತಿದ್ದರೆ ವೈಯಕ್ತಿಕವಾಗಿ ಒಂದೇ ಆವೃತ್ತಿಯಲ್ಲಿ ಹಾಗೂ ಒಟ್ಟಾರೆಯಾಗಿ 3 ಒಲಿಂಪಿಕ್ಸ್​ ಪದಕ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಐತಿಹಾಸಿಕ ದಾಖಲೆ ಬರೆಯಬಹುದಿತ್ತು.

ಫೈನಲ್​ ಹಂತದ ಮೊದಲ ಸುತ್ತಿನಲ್ಲಿ 6 ಅಂಕ ಗಳಿಸಿ 4ನೇ ಸ್ಥಾನಿಯಾದ ಭಾಕರ್​ ಆ ಬಳಿಕದ ಸುತ್ತಿನಲ್ಲಿ ಪ್ರಗತಿ ಸಾಧಿಸಿ 2ನೇ ಸ್ಥಾನದೊಂದಿಗೆ ಈ ಸುತ್ತು ಮುಗಿಸಿದರು. 2ನೇ ಸುತ್ತಿನಲ್ಲಿ ಒಮ್ಮೆ 6ನೇ ಸ್ಥಾನಕ್ಕೆ ಕುಸಿದರೂ ಕೂಡ ತಕ್ಷಣ ಎಚ್ಚೆತ್ತುಕೊಂಡು ಮತ್ತೆ ಯಶಸ್ಸು ಸಾಧಿಸಿದರು. ಆದರೆ ಅಂತಿಮ ಹಂತದಲ್ಲಿ 28 ಅಂಕ ಪಡೆದು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟರು. ಕೊರಿಯಾದ ಯಾಂಗ್ ಜಿನ್ ಚಿನ್ನದ ಪದಕ ಗೆದ್ದರು. ಆತಿಥೇಯ ದೇಶದ ಕ್ಯಾಮಿಲ್ಲೆ ಬೆಳ್ಳಿ, ಹಂಗೇರಿಯ ಕಂಚು ಗೆದ್ದರು.

22 ವರ್ಷದ ಮನು ಭಾಕರ್ ಇದಕ್ಕೂ ಮುನ್ನ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. ಶುಕ್ರವಾರ ನಡೆದಿದ್ದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾಕರ್​ ಒಟ್ಟು 590 ಅಂಕ ಗಳಿಸುವ ಮೂಲಕ 2ನೇ ಸ್ಥಾನಿಯಾಗಿ ಫೈನಲ್​ ಪ್ರವೇಶಿಸಿದ್ದರು. ಪ್ರಿಸಿಷನ್​ ಸುತ್ತಿನಲ್ಲಿ 294 ಅಂಕ(97,98,99) ಗಳಿಸಿದರೆ ರ್ಯಾಪಿಡ್​ ಸುತ್ತಿನಲ್ಲಿ 296 ಅಂಕ(100,98,98) ಕಲೆಹಾಕಿದ್ದರು.

ಭಾಕರ್​ ಬಳಿಕ ಒಲಿಂಪಿಕ್ಸ್​ನಲ್ಲಿ ಕುಸ್ತಿಪಟು ಸುಶೀಲ್​ ಕುಮಾರ್​(2008 ಕಂಚು, 2012 ಬೆಳ್ಳಿ) ಮತ್ತು ಪಿ.ವಿ. ಸಿಂಧು(2016 ಬೆಳ್ಳಿ, 2021 ಕಂಚು) ಅವಳಿ ಪದಕ ಗೆದ್ದ ಇಬ್ಬರು ಭಾರತೀಯ ಕ್ರೀಡಾಪಟುಗಳು.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಯಾವ ಸ್ಪರ್ಧಿಗಳು ಕಣಕ್ಕೆ ಇಳಿಯಲಿದ್ದಾರೆ? ಎಲ್ಲ ಮಾಹಿತಿ ಇಲ್ಲಿದೆ

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಅಂದಿನ ಸೋಲಿನಿಂದ ಮನನೊಂದು ಶೂಟಿಂಗ್​ಗೆ ವಿದಾಯ ಹೇಳಲು ಬಯಸಿದ್ದ ಮನು ತಂದೆಯ ಆತ್ಮವಿಶ್ವಾಸದ ಮಾತಿನಂತೆ ಶೂಟಿಂಗ್​ನಲ್ಲಿ ಮುಂದುವರಿದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ 2 ಪದಕ ಗೆದ್ದು ಭಾರತೀಯ ಒಲಿಂಪಿಕ್ಸ್​ ಕ್ರೀಡಾ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

HD Kumaraswamy: ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲ್

HD Kumaraswamy: ಮೈತ್ರಿ ಪಕ್ಷಗಳ ನಡುವೆ ಬಿರುಕು ಮೂಡಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ನ್ನು ಹೆದರಿಸಲು ಬಿಜೆಪಿ ಜತೆ ಹೋಗಿದ್ದಾರೆ ಅಂತ ಡಿಕೆಶಿ ಹೇಳಿದ್ದಾರೆ. ಬಿಜೆಪಿ ಜತೆ ಹೋಗಿದ್ದೇ ನಿಮ್ಮನ್ನು ಇಳಿಸುವುದಕ್ಕೆ. ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಒಟ್ಟಾಗಿ ಹೋಗ್ತಾರೆ ಎಂದು ಅವರು ದೃಢವಾಗಿ ಹೇಳಿದ್ದಾರೆ.

VISTARANEWS.COM


on

hd kumaraswamy muda
Koo

ಬೆಂಗಳೂರು: ಕಾಂಗ್ರೆಸ್‌ (Congress) ಅಲ್ಪಾಯುಷಿ ಸರಕಾರ. ಸಾಧ್ಯವಾದರೆ ಇನ್ನೂ ಹತ್ತು ತಿಂಗಳು ಸರಕಾರ ನಡೆಸಿ ನೋಡೋಣ ಎಂದು ಕೇಂದ್ರ ಸಚಿವ, ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಸವಾಲು ಹಾಕಿದ್ದಾರೆ. ʼಮೈಸೂರು ಚಲೋʼ (Mysore Chalo) ಬಿಜೆಪಿ- ಜೆಡಿಎಸ್ ಪಾದಯಾತ್ರೆಗೂ (HD Kumaraswamy) ಮೊದಲು ಅವರು ಮಾತನಾಡಿದರು.

ನನ್ನ ವಿರುದ್ಧ ಕಾಂಗ್ರೆಸ್ ಅಧ್ಯಕ್ಷರ ಆರೋಪಕ್ಕೆ ಬಿಡದಿ ಹಾಗೂ ರಾಮನಗರದಲ್ಲಿ ಮಾತನಾಡ್ತೀನಿ. ನನಗೆ ರಾಜಕೀಯ ಜನ್ಮ ಕೊಟ್ಟ ಸ್ಥಳದಲ್ಲಿ ಮಾತನಾಡ್ತೀನಿ. ನಾನು ರಾಜ್ಯದ ನಾಯಕರ ದಾಖಲೆ ಹೈಕಮಾಂಡ್‌ಗೆ ಕೊಟ್ಟಿದ್ದೇನೆ ಎಂದು ಆರೋಪ ಮಾಡಿದ್ದಾರೆ. ದೊಡ್ಡ ಹಾಲಹಳ್ಳಿಯಲ್ಲಿ ಬ್ಲಾಕ್ ಆಂಡ್ ವೈಟ್ ಟಿವಿ ಹಾಗೂ ವಿಡಿಯೋ ಪ್ಲೇಯರ್‌ನಲ್ಲಿ ಅದೇನೋ ಹಾಕಿ ಹಣ ಸಂಪಾದನೆ ಮಾಡಿದ ಇವರಿಗೆ ನಾಚಿಕೆ ಆಗಬೇಕು ಎಂದು ಎಚ್‌ಡಿಕೆ ಟೀಕಿಸಿದ್ದಾರೆ.

ಹಿಂದುಳಿದ ವರ್ಗಗಳ ನಾಯಕರು ನಮ್ಮನ್ನ ಪ್ರಶ್ನೆ ಮಾಡಿದ್ದಾರೆ. ಎರಡೆರಡು ಬಾರಿ ಸಿಎಂ ಆಗಿದ್ದರಿಂದ ಸಹಿಸಲು ಆಗ್ತಿಲ್ಲ ಅಂತ ಆರೋಪ‌ ಮಾಡಿದ್ದಾರೆ. ಪರಮೇಶ್ವರ್ ಅವರೇ, ಇಂದು ಯಾದಗಿರಿಯ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು‌‌ ನಿಮ್ಮ ಸಮುದಾಯದವರೇ ಅಲ್ವಾ? ಸಿದ್ದರಾಮಯ್ಯ 2013ರಿಂದ 2017ರವರೆಗೂ ಇದ್ದಾಗ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಮಾಡಿಕೊಂಡ್ರಲ್ಲ, ಅವರು ಯಾವ ಸಮುದಾಯ ಸಿದ್ದರಾಮಯ್ಯ ಅವರೇ? ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಹಿಂದುಳಿದ ವರ್ಗಗಳ ನಾಯಕರು ಇದನ್ನ ಗಮನಿಸಲಿ. ಮುಡಾ ಜಮೀನು ರಿಜಿಸ್ಟ್ರಾರ್ ಮಾಡಿಸಿಕೊಂಡಿದ್ದು ತಪ್ಪು ಅಲ್ಲವೇ. 2010ಕ್ಕೆ ಸಹೋದರಿಗೆ ದಾನ‌ ಮಾಡ್ತಾರೆ. ಇದರಲ್ಲಿ ನಿಮ್ಮ ಪಾತ್ರ ಇಲ್ವಾ? ಕುಮಾರಸ್ವಾಮಿ ಬಣ್ಣ ಬದಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ನನ್ನದು ಒರಿಜಿನಲ್ ಬಣ್ಣ, ಬದಲಾಗಲು ಸಾಧ್ಯವಿಲ್ಲ. 2006ರಲ್ಲಿ ಸರ್ಕಾರ ಮುಂದುವರಿದಿದ್ರೆ ಕಾಂಗ್ರೆಸ್ ಅಂದೇ ನಿರ್ನಾಮ ಆಗುತ್ತಿತ್ತು ಎಂದಿದ್ದಾರೆ.

2018ರಲ್ಲಿ ನಾನು ಅರ್ಜಿ ಇಟ್ಕೊಂಡು ಬಂದಿರಲಿಲ್ಲ. ಗುಲಾಂ ನಬಿ ಆಜಾದ್ ಅವರು ದೇವೇಗೌಡರ ಮನೆಗೆ ಓಡಿ ಬಂದರು. ನಾವು ಮಲ್ಲಿಕಾರ್ಜುನ ಖರ್ಗೆಯವರನ್ನ ಮಾಡಿ ಎಂದು ಹೇಳಿದೆವು. ನೀವು ನೀವೇ ‌ಆಗಿ ಎಂದು ಹೇಳಿದಿರಿ. ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ. ಕಾಂಗ್ರೆಸ್ ಅಲ್ಪಾಯಿಷಿ ಸರ್ಕಾರ. ಸಿದ್ದರಾಮಯ್ಯ ಮುಡಾ ದಾಖಲೆ ಕೊಟ್ಟಿದ್ದೇ ಡಿಕೆ ಶಿವಕುಮಾರ್. ಇನ್ನೂ ಯಾಕೆ ನಾಟಕ ಮಾಡ್ತೀರಿ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದರು.

ಮೈತ್ರಿ ಪಕ್ಷಗಳ ನಡುವೆ ಬಿರುಕು ಮೂಡಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ನ್ನು ಹೆದರಿಸಲು ಬಿಜೆಪಿ ಜತೆ ಹೋಗಿದ್ದಾರೆ ಅಂತ ಡಿಕೆಶಿ ಹೇಳಿದ್ದಾರೆ. ಬಿಜೆಪಿ ಜತೆ ಹೋಗಿದ್ದೇ ನಿಮ್ಮನ್ನು ಇಳಿಸುವುದಕ್ಕೆ. ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಒಟ್ಟಾಗಿ ಹೋಗ್ತಾರೆ ಎಂದು ಅವರು ದೃಢವಾಗಿ ಹೇಳಿದ್ದಾರೆ.

ವೇದಿಕೆಯಲ್ಲೇ ಉತ್ತರಿಸುತ್ತೇವೆ: ನಿಖಿಲ್‌

ನೈಸ್‌ನಲ್ಲಿ ಕುಮಾರಸ್ವಾಮಿ ಆಸ್ತಿ ಇದೆ ಎಂದು ಆರೋಪಿಸಿದ್ದಾರೆ. ಅವರು ವೇದಿಕೆಯಲ್ಲಿ ಆರೋಪ‌ ಮಾಡಿದ್ದಾರೆ, ವೇದಿಕೆಯಲ್ಲೇ ಉತ್ತರವನ್ನು‌ ಕೊಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ವಾಲ್ಮೀಕಿ ಹಾಗೂ ಮುಡಾ ವಿಚಾರದಲ್ಲಿ ಸರ್ಕಾರ ಪಲಾಯನವಾದ ಮಾಡುತ್ತಿದೆ. ಸಿಎಂ ಅವರೇ 81 ಕೋಟಿ ಹಗರಣ ಆಗಿದೆ ಅಂತ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ವಿರೋಧ ಪಕ್ಷ ಪ್ರಶ್ನೆ ಕೇಳುತ್ತೆ, ಅದು ಸಹಜ. ಆದರೆ ಸರ್ಕಾರ ಅವರ ಕೈಯಲ್ಲಿದೆ. ತನಿಖೆ ಮಾಡಲಿ. ಅದರ ಬದಲು ವಿಚಾರ ಡೈವರ್ಟ್ ಮಾಡಲು ಕಾರ್ಯಕ್ರಮ ಹಾಕಿಕೊಂಡಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: BJP-JDS Padayatra: ಪಾದಯಾತ್ರೆಗೆ ಹೈಕೋರ್ಟ್‌ನಿಂದಲೇ ಅನುಮತಿ ಪಡೆದ ಬಿಜೆಪಿ

Continue Reading

ಪ್ರಮುಖ ಸುದ್ದಿ

BJP-JDS Padayatra: ಅಸಮಾಧಾನಗೊಂಡ ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಜನಾಂದೋಲನಕ್ಕೆ ಬೆಂಬಲ?

BJP-JDS Padayatra: ಬಿಜೆಪಿ- ಜೆಡಿಎಸ್‌ ವಿರುದ್ಧ ಕಾಂಗ್ರೆಸ್ ಜನಾಂದೋಲನ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಶಾಸಕ ಸೋಮಶೇಖರ್‌ ಕಾಣಿಸಿಕೊಳ್ಳುತ್ತಾರಾ ಎಂಬ ಅನುಮಾನ ಮೂಡಿದೆ. ಕಾಂಗ್ರೆಸ್ ಹಾಕಿರುವ ಬ್ಯಾನರ್‌ಗಳು ಈ ಕುತೂಹಲ ಮೂಡಿಸಿವೆ.

VISTARANEWS.COM


on

BJP-JDS Padayatra ST Somashekhar
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಿಜೆಪಿ- ಜೆಡಿಎಸ್ ಪಾದಯಾತ್ರೆಯಲ್ಲಿ (BJP-JDS Padayatra) ಎಲ್ಲೂ ಕಾಣಿಸಿಕೊಳ್ಳದ ಬಿಜೆಪಿ ರೆಬೆಲ್‌ ಶಾಸಕ ಎಸ್‌.ಟಿ ಸೋಮಶೇಖರ್‌ (ST Somashekhar), ಪಾದಯಾತ್ರೆಯ ವಿರುದ್ಧ ಕಾಂಗ್ರೆಸ್‌ (Congress) ಹಾಕಿರುವ ಬ್ಯಾನರ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಬಿಜೆಪಿ- ಜೆಡಿಎಸ್‌ ವಿರುದ್ಧ ಕಾಂಗ್ರೆಸ್ ಜನಾಂದೋಲನ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಶಾಸಕ ಸೋಮಶೇಖರ್‌ ಕಾಣಿಸಿಕೊಳ್ಳುತ್ತಾರಾ ಎಂಬ ಅನುಮಾನ ಮೂಡಿದೆ. ಕಾಂಗ್ರೆಸ್ ಹಾಕಿರುವ ಬ್ಯಾನರ್‌ಗಳು ಈ ಕುತೂಹಲ ಮೂಡಿಸಿವೆ. ಬಿಡದಿಯಿಂದ ರಾಮನಗರದವರೆಗೂ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಫ್ಲೆಕ್ಸ್‌ ಹಾಗೂ ಬ್ಯಾನರ್‌ಗಳನ್ನು ಹಾಕಿದ್ದು, ಅವುಗಳಲ್ಲಿ ಎಸ್.ಟಿ ಸೋಮಶೇಖರ್ ಭಾವಚಿತ್ರವಿದೆ.

ಬಿಜೆಪಿ ವಿರುದ್ಧ ರೆಬೆಲ್ ಆಗಿರುವ ಎಸ್. ಟಿ ಸೋಮಶೇಖರ್, ಡಿಕೆ ಶಿವಕುಮಾರ್‌ (DK Shivakumar) ಮತ್ತಿತರ ಕಾಂಗ್ರೆಸ್‌ ನಾಯಕರ ಜೊತೆಗೆ ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಡಿಕೆಶಿ ಏರ್ಪಡಿಸಿದ್ದ ಔತಣಕೂಟದಲ್ಲೂ ಅವರು ಕಾಣಿಸಿಕೊಂಡಿದ್ದರು. ಬಿಜೆಪಿಯಿಂದಲೂ ಅವರು ಸಾಕಷ್ಟು ಅಂತರ ಕಾಪಾಡಿಕೊಂಡಿದ್ದಾರೆ. ಬಿಜೆಪಿಯ ಹಲವು ಕಾರ್ಯಕರ್ತರು ಇತ್ತೀಚೆಗೆ ಸೋಮಶೇಖರ್‌ ವಿರುದ್ಧ ಪ್ರತಿಭಟನೆಯನ್ನೂ ಮಾಡಿದ್ದರು.

ಬಿಜೆಪಿಗೆ ತಲೆನೋವಾದ ನಾಯಕರು

ಪಾದಯಾತ್ರೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹಾಗೂ ಕೇಂದ್ರ ಎನ್‌ಡಿಎ ಸಚಿವರು ಭಾಗವಹಿಸಿದ್ದಾರೆ. ಬಿಎಸ್. ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ವಿಜಯೇಂದ್ರ, ಆರ್.ಅಶೋಕ್, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ. ಆದರೆ ಕೆಲವು ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ.

ಮೊನ್ನೆಯಷ್ಟೇ ರಮೇಶ್ ಜಾರಕಿಹೊಳಿ, ಬಸವನಗೌಡ ಪಾಟೀಲ್‌ ಯತ್ನಾಳ್, ಪ್ರತಾಪ್ ಸಿಂಹ ಹಾಗೂ ಕುಮಾರ್ ಬಂಗಾರಪ್ಪ ಸೇರಿ ಸಭೆ ನಡೆಸಿದ್ದರು. ಮೂವರ ಸಭೆ ಬಳಿಕ ಅಲರ್ಟ್ ಆಗಿದ್ದ ಬಿಜೆಪಿ ಹೈಕಮಾಂಡ್, ಅಸಮಾಧಾನ ಬದಿಗಿಟ್ಟು ಪಾದಯಾತ್ರೆಗೆ ಬರುವಂತೆ ಈ ನಾಯಕರಿಗೆ ಸಲಹೆ ನೀಡಿತ್ತು. ಹೈಕಮಾಂಡ್ ಸಲಹೆ ಮೇರೆಗೆ ಪಾದಯಾತ್ರೆಯಲ್ಲಿ ಇವರು ಭಾಗವಹಿಸುತ್ತಾರಾ ಇಲ್ಲವಾ ಎಂಬ ಕುತೂಹಲ ಮೂಡಿದೆ.

ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್‌ ಕೂಡ ಪಕ್ಷದ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಇವರಿಬ್ಬರೂ ಕಾಂಗ್ರೆಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವುದು ಕಂಡುಬಂದಿದೆ. ಕಾಂಗ್ರೆಸ್ ಫ್ಲೆಕ್ಸ್‌ಗಳಲ್ಲಿ ಎಸ್.ಟಿ ಸೋಮಶೇಖರ್ ಫೋಟೋ ರಾರಾಜಿಸುತ್ತಿದೆ. ಹೀಗಾಗಿ ಎಸ್‌ಟಿಎಸ್‌ ನಡೆ ಭಾರಿ ಚರ್ಚೆಗೆ ಕಾರಣವಾಗಿದೆ.

ಹೈಕೋರ್ಟ್‌ನಿಂದಲೇ ಅನುಮತಿ

“ಭ್ರಷ್ಟ ಕಾಂಗ್ರೆಸ್ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ನೇರವಾಗಿ ಹೈಕೋರ್ಟ್‌ನಿಂದ (High court) ಅನುಮತಿ ಪಡೆಯಲಾಗಿದೆ. ಸರ್ಕಾರದಿಂದ ಅನುಮತಿ ದೊರೆಯುವುದು ವಿಳಂಬವಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹೋಗಿದ್ದ ಬಿಜೆಪಿ (BJP) ಮುಖಂಡರು, ಪಾದಯಾತ್ರೆಗೆ ಅನುಮತಿ ಪಡೆದುಕೊಂಡಿದ್ದಾರೆ.

ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ ಇಲ್ಲ ಎಂದು ಮೊನ್ನೆ ಗೃಹ ಸಚಿವ ಪರಮೇಶ್ವರ (G Parameshwara) ಹೇಳಿದ ಬೆನ್ನಲ್ಲೇ ಸರ್ಕಾರದಿಂದ ಸಮಸ್ಯೆ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿ ಉಚ್ಚ ನ್ಯಾಯಾಲಯಕ್ಕೆ ತೆರಳಿತ್ತು. ಶಾಸಕ ಪಿ. ರಾಜೀವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದನ್ ಗೌಡರ್, ಅನುಮತಿ ನೀಡಿದ್ದು, ಪಾದಯಾತ್ರೆ ಸಾಗುವ ಜಾಗದಲ್ಲಿ ಭದ್ರತೆ ನೀಡುವಂತೆ ಡಿಸಿ, ಎಸ್ಪಿಗೆ ಸೂಚನೆ ನೀಡಿದ್ದಾರೆ.

ಮೈಸೂರು: ಮುಡಾ ಹಗರಣ ವಿರುದ್ದ ಇಂದಿನಿಂದ ನಡೆಯಲಿರುವ ಮೈಸೂರು ಚಲೋ ಪಾದಯಾತ್ರೆ ಪ್ರಾರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ದೇವಿ ಚಾಮುಂಡೇಶ್ವರಿ ಮೊರೆಹೋದರು. ಮೈಸೂರಿನ‌ ಚಾಮುಂಡಿ ಬೆಟ್ಟಕ್ಕೆ ಬಿ.ವೈ ವಿಜಯೇಂದ್ರ ಭೇಟಿ ನೀಡಿ ನಾಡದೇವತೆ ಚಾಮುಂಡಿ ತಾಯಿ ದರ್ಶನ ಪಡೆದರು. ಪಾದಯಾತ್ರೆ ಯಶಸ್ಸಿಗೆ ಚಾಮುಂಡೇಶ್ವರಿ ಬಳಿ ಪ್ರಾರ್ಥನೆ ಮಾಡಿ, ದಂಪತಿ ಸಮೇತ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರಗೆ ಮಾಜಿ ಶಾಸಕ ನಾಗೇಂದ್ರ ಸೇರಿ ಮುಖಂಡರು ಸಾಥ್ ನೀಡಿದರು.

ಇದನ್ನೂ ಓದಿ: BJP-JDS Padayatra: ಪಾದಯಾತ್ರೆಗೆ ಹೈಕೋರ್ಟ್‌ನಿಂದಲೇ ಅನುಮತಿ ಪಡೆದ ಬಿಜೆಪಿ

Continue Reading
Advertisement
ಮಾಲಿವುಡ್6 mins ago

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

M R Mamata
ಶ್ರದ್ಧಾಂಜಲಿ7 mins ago

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್ ಮಮತಾ ನಿಧನ

wayanad landslide cm siddaramaiah pinarayi vijayan
ಕರ್ನಾಟಕ23 mins ago

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Paris Olympics
ಪ್ರಮುಖ ಸುದ್ದಿ23 mins ago

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Self Harming
ಚಿಕ್ಕೋಡಿ40 mins ago

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

BJP-JDS Padayatra
ಕರ್ನಾಟಕ41 mins ago

BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

Narco-Terrorism
ದೇಶ43 mins ago

Narco-Terrorism: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರು ಸರ್ಕಾರಿ ಅಧಿಕಾರಿಗಳ ಅಮಾನತು

Ismail Haniyeh
ವಿದೇಶ1 hour ago

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

hd kumaraswamy muda
ಪ್ರಮುಖ ಸುದ್ದಿ1 hour ago

HD Kumaraswamy: ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌