Mukesh Ambani | ಇಂಗ್ಲೆಂಡ್‌ನ ಲಿವರ್‌ಪೂಲ್‌ ಫುಟ್ಬಾಲ್‌ ಕ್ಲಬ್‌ ಖರೀದಿಗೆ ಮುಕೇಶ್‌ ಅಂಬಾನಿ ಸಿದ್ಧತೆ - Vistara News

ಪ್ರಮುಖ ಸುದ್ದಿ

Mukesh Ambani | ಇಂಗ್ಲೆಂಡ್‌ನ ಲಿವರ್‌ಪೂಲ್‌ ಫುಟ್ಬಾಲ್‌ ಕ್ಲಬ್‌ ಖರೀದಿಗೆ ಮುಕೇಶ್‌ ಅಂಬಾನಿ ಸಿದ್ಧತೆ

ಮುಂಬಯಿ ಇಂಡಿಯನ್ಸ್‌ ಐಪಿಎಲ್‌ ತಂಡದ ಮಾಲೀಕರಾಗಿರುವ ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬನಿ ಇದೀಗ ಇಂಗ್ಲಿಷ್ ಫುಟ್ಬಾಲ್‌ ಕ್ಲಬ್‌ ಅನ್ನೂ ಖರೀದಿಸಲು ಮುಂದಾಗಿದ್ದಾರೆ.

VISTARANEWS.COM


on

ambani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಇಂಗ್ಲೆಂಡ್‌ನ ಪ್ರಸಿದ್ಧ‌ ವೃತ್ತಿಪರ ಲಿವರ್‌ಪೂಲ್‌ ಫುಟ್ಬಾಲ್‌ ಕ್ಲಬ್ ಅನ್ನು ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ ಖರೀದಿಸುವ ನಿರೀಕ್ಷೆ ಇದೆ. ‌( Mukesh Ambani) ಇದು 1892ರಲ್ಲಿ ಸ್ಥಾಪನೆಯಾಗಿರುವ 130 ವರ್ಷ ಹಳೆಯ ಫುಟ್ಬಾಲ್‌ ಕ್ಲಬ್‌ ಆಗಿದೆ. ದೇಶೀಯವಾಗಿ 19 ಲೀಗ್‌ ಟೈಟಲ್‌ಗಳನ್ನು ಈ ಕ್ಲಬ್‌ ಗೆದ್ದುಕೊಂಡಿದೆ. ಆರು ಐರೋಪ್ಯ ಕಪ್‌ ಹಾಗೂ ಮೂರು UEFA ಕಪ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀಗಿದ್ದರೂ ಲಿವರ್‌ಪೂಲ್‌ ಖರೀದಿಯ ರೇಸ್‌ನಲ್ಲಿ ಕೊಲ್ಲಿ ಮತ್ತು ಅಮೆರಿಕದ ಹೂಡಿಕೆದಾರರ ಕಡೆಯಿಂದಲೂ ಯತ್ನ ನಡೆಯುತ್ತಿದೆ. ಮುಕೇಶ್‌ ಅಂಬಾನಿಯವರು ಐಪಿಎಲ್‌ ಕ್ರಿಕೆಟ್‌ ತಂಡ ಮುಂಬಯಿ ಇಂಡಿಯನ್ಸ್‌ ಮಾಲೀಕರೂ ಆಗಿದ್ದಾರೆ. ಫೆನ್‌ವೇ ಸ್ಪೋರ್ಟ್ಸ್‌ ಗ್ರೂಪ್‌ ಈ ಕ್ಲಬ್‌ನ ಮಾಲಿಕತ್ವ ಹೊಂದಿದೆ.

ರಿಲಯನ್ಸ್‌ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ. ಭಾರತದಲ್ಲಿ ಫುಟ್ಬಾಲ್‌ ಜನಪ್ರಿಯ ಕ್ರೀಡೆಯಾಗಿದ್ದರೂ, ಕ್ರಿಕೆಟ್‌ ಬಗ್ಗೆ ಇರುವಷ್ಟು ಕ್ರೇಜ್‌, ಫುಟ್ಬಾಲ್‌ಗೆ ಇಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Raaj Kumar Anand: ಆಪ್‌ ಮಾಜಿ ಸಚಿವ ರಾಜ್‌ ಕುಮಾರ್‌ ಆನಂದ್‌ ಶಾಸಕ ಸ್ಥಾನದಿಂದಲೂ ಅನರ್ಹ; ಕಾರಣ ಇಲ್ಲಿದೆ

Raaj Kumar Anand: ರಾಜ್‌ ಕುಮಾರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಮ್‌ ಆದ್ಮಿ ಪಕ್ಷವನ್ನು ತೊರೆದು, ಅವರು ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆಯಾಗಿದ್ದರು. ಅಷ್ಟೇ ಅಲ್ಲ, ಬಿಎಸ್‌ಪಿ ಸೇರಿ, ನವದೆಹಲಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರ ಕುರಿತಂತೆ ಪ್ರತಿಕ್ರಿಯಿಸಬೇಕು ಎಂಬುದಾಗಿ ಸ್ಪೀಕರ್‌ ಅವರಿಗೆ ನೋಟಿಸ್‌ ನೀಡಿದ್ದರು. ಆದರೆ, ನೋಟಿಸ್‌ಗೆ ರಾಜ್‌ ಕುಮಾರ್‌ ಆನಂದ್‌ ಪ್ರತಿಕ್ರಿಯೆ ನೀಡಿರಲಿಲ್ಲ.

VISTARANEWS.COM


on

Raaj Kumar Anand
Koo

ನವದೆಹಲಿ: ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾದ ಬೆನ್ನಲ್ಲೇ ದೆಹಲಿ ವಿಧಾನಸಭೆ ಸದಸ್ಯತ್ವದಿಂದ ಶಾಸಕ ರಾಜ್‌ ಕುಮಾರ್‌ ಆನಂದ್‌ ಅವರನ್ನು ಅನರ್ಹಗೊಳಿಸಲಾಗಿದೆ. ಈ ಕುರಿತು ಸ್ಪೀಕರ್‌ ರಾಮ್‌ ನಿವಾಸ್‌ ಗೋಯಲ್‌ (Ram Niwas Goel) ಮಾಹಿತಿ ನೀಡಿದ್ದಾರೆ. ರಾಜ್‌ ಕುಮಾರ್‌ ಆನಂದ್‌ ಅವರು ಆಮ್‌ ಆದ್ಮಿ ಪಕ್ಷದ ನಾಯಕರಾಗಿದ್ದರು. ಅಲ್ಲದೆ, ಇವರು ದೆಹಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಈಗ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

“ರಾಜ್‌ ಕುಮಾರ್‌ ಆನಂದ್‌ ಅವರಿಗೆ ಜೂನ್‌ 10ರೊಳಗೆ ಪ್ರತಿಕ್ರಿಯೆ ನೀಡಬೇಕು ಎಂದು ನೋಟಿಸ್‌ ನೀಡಲಾಗಿತ್ತು ಆದರೆ, ಅವರು ನೋಟಿಸ್‌ಗೆ ಇದುವರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಜೂನ್‌ 11ರಂದು ಹಾಜರಾಗಬೇಕು ಎಂದು ಕೂಡ ಅದೇ ನೋಟಿಸ್‌ನಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೂ, ಅವರು ಹಾಜರಾಗಿಲ್ಲ. ಜೂನ್‌ 14ರವರೆಗೆ ಹಾಜರಾಗಲು ಕೂಡ ಸಮಯಾವಕಾಶ ನೀಡಲಾಗಿತ್ತು. ಹೀಗಿದ್ದರೂ ಅವರು ಹಾಜರಾಗಿಲ್ಲ. ಹಾಗಾಗಿ, ವಿಧಾನಸಭೆಯಿಂದ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ” ಎಂದು ಸ್ಪೀಕರ್‌ ತಿಳಿಸಿದ್ದಾರೆ.

ಯಾಕಾಗಿ ಅನರ್ಹ?

ರಾಜ್‌ ಕುಮಾರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಮ್‌ ಆದ್ಮಿ ಪಕ್ಷವನ್ನು ತೊರೆದು, ಅವರು ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆಯಾಗಿದ್ದರು. ಅಷ್ಟೇ ಅಲ್ಲ, ಬಿಎಸ್‌ಪಿ ಸೇರಿ, ನವದೆಹಲಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಹಾಗಾಗಿ, ಅವರಿಗೆ ಸ್ಪೀಕರ್‌ ರಾಮ್‌ ನಿವಾಸ್‌ ಗೋಯಲ್‌ ಅವರು ನೋಟಿಸ್‌ ಜಾರಿಗೊಳಿಸಿದ್ದರು. ರಾಜ್‌ ಕುಮಾರ್‌ ಆನಂದ್‌ ಅವರು 2020ರ ವಿಧಾನಸಭೆ ಚುನಾವಣೆಯಲ್ಲಿ ಆಪ್‌ನಿಂದ ಸ್ಪರ್ಧಿಸಿ, ಪಟೇಲ್‌ ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಇವರಿಗೆ ಸಚಿವ ಸ್ಥಾನವನ್ನೂ ನೀಡಲಾಗಿತ್ತು.

ಏಪ್ರಿಲ್‌ 10ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ

ಕಳೆದ ಏಪ್ರಿಲ್‌ 10ರಂದು ರಾಜ್‌ ಕುಮಾರ್‌ ಆನಂದ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಜತೆಗೆ ಆಮ್‌ ಆದ್ಮಿ ಪಕ್ಷವನ್ನೂ ತೊರೆದಿದ್ದರು. “ದೆಹಲಿಯ ಸಮಾಜ ಕಲ್ಯಾಣ ಖಾತೆ ಸಚಿವ ಸ್ಥಾನ ಹಾಗೂ ಆಮ್‌ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಮಾರ್ಚ್‌ 21ರಂದೇ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವಾಗಿದೆ. ಇದುವರೆಗೆ ಅವರು ರಾಜೀನಾಮೆ ನೀಡಿಲ್ಲ. ಆಮ್‌ ಆದ್ಮಿ ಪಕ್ಷವು ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಭ್ರಷ್ಟರ ಜತೆ ಕೆಲಸ ಮಾಡಲು ಇಷ್ಟಪಡುವುದಿಲ್ಲ. ಹಾಗಾಗಿ ಪಕ್ಷದಿಂದ ಹೊರಬಂದಿರುವೆ” ಎಂದು ರಾಜ್‌ ಕುಮಾರ್‌ ಆನಂದ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಆಮ್‌ ಆದ್ಮಿ ಪಕ್ಷದ ಕುರಿತು ರಾಜ್‌ ಕುಮಾರ್‌ ಆನಂದ್‌ ಅವರು ಹಲವು ಆರೋಪ ಮಾಡಿದರು. “ಆಪ್‌ನಲ್ಲಿ ದಲಿತ ಸಚಿವರು, ಶಾಸಕರು ಹಾಗೂ ಕೌನ್ಸಿಲರ್‌ಗಳಿಗೆ ಗೌರವ ಇಲ್ಲ. ಪಕ್ಷದಲ್ಲಿ ದಲಿತರಿಗೆ ಮೋಸ ಮಾಡಲಾಗುತ್ತಿದೆ. ಇಂತಹ ವಾತಾವರಣದಲ್ಲಿ ನನಗೆ ಕೆಲಸ ಮಾಡಲು ಆಗುವುದಿಲ್ಲ. ನಾನು ರಾಜೀನಾಮೆ ನೀಡಿರುವ ಸಂದರ್ಭದ ಕುರಿತು ಮಾತನಾಡಬೇಕಿಲ್ಲ. ಯಾವಾಗ ಹೈಕೋರ್ಟ್‌ ಜಾಮೀನು ಅರ್ಜಿ ತಿರಸ್ಕರಿಸಿತೋ, ದೊಡ್ಡ ಪ್ರಮಾದವೇ ನಡೆದಿದೆ ಎಂಬುದು ತಿಳಿಯಿತು. ಹಾಗಾಗಿ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ವಜಾ-ನ್ಯಾಯಾಂಗ ಬಂಧನ ವಿಸ್ತರಣೆ

Continue Reading

Latest

Sonakshi Sinha: ನಟಿ ಸೋನಾಕ್ಷಿ ಸಿನ್ಹಾ ಐಷಾರಾಮಿ ಅಪಾರ್ಟ್‌ಮೆಂಟ್ ಹೇಗಿದೆ? ವಿಡಿಯೊ ನೋಡಿ!

Sonakshi Sinha: ಸಿನಿಮಾ ನಟಿಯರು ಎಂದಾಕ್ಷಣ ಜನರಿಗೆ ಕುತೂಹಲವಿರುತ್ತದೆ. ಅವರು ಉಂಡಿದ್ದು, ತಿಂದಿದ್ದು, ಮುಖಕ್ಕೆ ಹಚ್ಚಿಕೊಳ್ಳುವ ಮೇಕಪ್ ತನಕನೂ ಕುತೂಹಲದಿಂದ ಗಮನಿಸುವ ಮಂದಿ ಇದ್ದಾರೆ. ಸಿನಿಮಾ ಮಂದಿ ಏನೇ ಮಾಡಿದರೂ ಸುದ್ದಿಯಾಗುತ್ತದೆ. ಇತ್ತೀಚೆಗೆ ಹೀರಾಮಂಡಿಯಲ್ಲಿ ಅಭಿನಯಿಸಿ ಎಲ್ಲರ ಗಮನಸೆಳೆದ ನಟಿ ಸೋನಾಕ್ಷಿ ಸಿನ್ಹಾ ಸುದ್ದಿಯಲ್ಲಿದ್ದಾರೆ. ಅವರು 7 ವರ್ಷಗಳಿಂದ ಸಂಬಂಧದಲ್ಲಿದ್ದ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಲಿದ್ದಾರೆ. ಇದರ ಮಧ್ಯೆ ಈಗ ಎಲ್ಲರ ಕುತೂಹಲ ಕೆರಳಿಸಿದ್ದು ಸೋನಾಕ್ಷಿ ಸಿನ್ಹಾ ಅವರ ಮನೆ!

VISTARANEWS.COM


on

Sonakshi Sinha
Koo

ಮುಂಬೈ : ಸಿನಿಮಾ ತಾರೆಯರು ಏನೇ ಮಾಡಿದರೂ ಅದು ಸುದ್ದಿಯಾಗುತ್ತದೆ. ಸಿನಿಮಾ ತಾರೆಯರು ಯಾವುದೇ ಸ್ಥಳಕ್ಕೆ ಹೋದರೂ, ಯಾರನ್ನೇ ಭೇಟಿ ಮಾಡಿದರೂ, ಮನೆ ಖರೀದಿಸಿದರೂ, ತಮ್ಮ ಸಂಗಾತಿ ಜೊತೆ ಸುತ್ತಾಡಿದರೂ, ಮದುವೆ ವಿಚಾರಕ್ಕೆ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಅಂದಹಾಗೇ ಇದೀಗ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಸುದ್ದಿಯಲ್ಲಿದ್ದಾರೆ.

ನಟಿ ನಟಿ ಸೋನಾಕ್ಷಿ ಸಿನ್ಹಾ ಅವರು ಬಾಲಿವುಡ್ ಖ್ಯಾತ ನಟಿಯರಲ್ಲಿ ಒಬ್ಬರು. ಇವರು ಬಾಲಿವುಡ್‌ನಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ನಟನೆಯ ಮೂಲಕ ಜನಪ್ರಿಯರಾದ ನಟಿ ಇದೀಗ ತಮ್ಮ ಮದುವೆ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ನಟಿ ಸೋನಾಕ್ಷಿ ಸಿನ್ಹಾ ಅವರು ಜೂನ್ 23, 2024ರಂದು ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿದೆ. ವರದಿ ಪ್ರಕಾರ ಅವರು 7 ವರ್ಷಗಳಿಂದ ಪ್ರೇಮ ಸಂಬಂಧದಲ್ಲಿದ್ದ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

Sonakshi Sinha

ಕಳೆದ ಒಂದು ವರ್ಷದಿಂದ ಇಬ್ಬರು ಜೊತೆಯಲ್ಲಿ ವಾಸಿಸುತ್ತಿದ್ದು, ನಟಿ ಸೋನಾಕ್ಷಿ ಸಿನ್ಹಾ ಅವರು ಮುಂಬೈನಲ್ಲಿ ದೊಡ್ಡದಾದ ಐಷಾರಾಮಿ ಮನೆಯನ್ನು ಖರೀದಿಸಿದ್ದಾರೆ. ಮಾರ್ಚ್ 2020ರಲ್ಲಿ ಮನೆಯನ್ನು ಖರೀದಿಸಿ ನಂತರ 2023ರಲ್ಲಿ ಆ ಮನೆಗೆ ತೆರಳಿ ತಮ್ಮ ಪ್ರೇಮಿ ಜೊತೆ ಅಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಖರೀದಿಸಿದ ಆ ಮನೆ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ನಟಿ ಸೋನಾಕ್ಷಿ ಸಿನ್ಹಾ ಅವರು ಖರೀದಿಸಿದ ಮುಂಬೈ ಮನೆ ಸಮುದ್ರಕ್ಕೆ ಮುಖ ಮಾಡಿದೆ. ಅದು 4,628 ಚದರ ಅಡಿಗಳಷ್ಟು ವಿಸ್ತಾರವಾಗಿದೆಯಂತೆ. ಮನೆಯು ಪ್ರೀಮಿಯಂ ರೆಸಿಡೆನ್ಸಿಯಲ್ ಟವರ್‌ನಲ್ಲಿ 16ನೇ ಮಹಡಿಯಲ್ಲಿದೆ.

Sonakshi Sinha

ವರದಿಗಳ ಪ್ರಕಾರ ಅವರ ಮುಂಬೈ ಮನೆ ಮಾರುಕಟ್ಟೆ ಮೌಲ್ಯ 14 ಕೋಟಿ ರೂಪಾಯಿ. ಅವರ ಮನೆ ಕಿತ್ತಳೆ ಮತ್ತು ನೀಲಿ ಬಣ್ಣವನ್ನು ಹೊಂದಿದ್ದು, ಟೆರಾಕೋಟಾ ಲುಕ್‌ ನೀಡುತ್ತದೆ. ಮಲಗುವ ಕೋಣೆ ಸ್ಲೈಡಿಂಗ್ ವಾಲ್ ಅನ್ನು ಹೊಂದಿದ್ದು, ಅದರ ಎಲ್ಲಾ ಬದಿಯಲ್ಲಿ ನೀಲಿ ಬಣ್ಣದ ಕಪಾಟುಗಳೊಂದಿಗೆ ಮರ್ಫಿ ಬೆಡ್ ಇದೆ. ಮನೆಯ ಬಾಲ್ಕನಿಯಿಂದ ಬಾಂದ್ರಾ-ವಲ್ಲಿ ಸಮುದ್ರದ ನೋಟವನ್ನು ಸುಲಭವಾಗಿ ಆನಂದಿಸಬಹುದು. ನಾಲ್ಕು ಬೆಡ್ ರೂಮ್‌ ಅಪಾರ್ಟ್‌ಮೆಂಟ್ ಅನ್ನು 1.5 ಬೆಡ್ ರೂಮ್ ಮನೆಯನ್ನಾಗಿ ಪರಿವರ್ತಿಸಲಾಗಿದೆಯಂತೆ. ಅವರ ಮನೆಯಲ್ಲಿ ಆರ್ಟ್ ಸ್ಟುಡಿಯೋ, ಯೋಗ ಮಾಡುವುದಕ್ಕೆ ಜಾಗ ಹಾಗೂ ಡ್ರೆಸ್ಸಿಂಗ್ ರೂಮ್‌ ಕೂಡ ಇದೆಯಂತೆ. ಇನ್ನು ಇವರ ರೂಂನಲ್ಲಿರುವ ವಾಕ್ ಇನ್ ವಾರ್ಡ್‌ರೋಬ್ ತುಂಬಾ ಚೆನ್ನಾಗಿದೆ.

ಇದನ್ನೂ ಓದಿ: flight problems: ವಿಮಾನದಲ್ಲಿ ಕೈಕೊಟ್ಟ ಎಸಿ; ಸೆಕೆ ತಾಳಲಾರದೆ ಬಟ್ಟೆ ಬಿಚ್ಚಿದ ಪ್ರಯಾಣಿಕರು!

ನಟಿ ಸೋನಾಕ್ಷಿ ಸಿನ್ಹಾ ಅವರು ಪ್ರಸ್ತುತ ಸಂಜಯ್ ಲೀಲಾ ಬನ್ಸಾಲಿ ಅವರ ಚೊಚ್ಚಲ ವೆಬ್ ಸರಣಿ ಹೀರಾಮಂಡಿ ಯಶಸ್ಸಿನಲ್ಲಿ ಮುಳುಗಿದ್ದಾರೆ. ಅಲ್ಲಿ ಅವರು ವೇಶ್ಯೆಯ ಪಾತ್ರವನ್ನು ನಿರ್ವಹಿಸಿದ್ದಾರೆ.

Continue Reading

ಕರ್ನಾಟಕ

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

BS Yediyurappa: ಬಿ.ಎಸ್.ಯಡಿಯೂರಪ್ಪ ಅವರು ಜೂನ್‌ 17ರಂದು ವಿಚಾರಣೆಗೆ ಹಾಜರಾಗಲಾಗುವುದು ಎಂದು ತಿಳಿಸಿದರೂ ಕೋರ್ಟ್‌ಗೆ ಹೋಗಿ ಅರೆಸ್ಟ್‌ ವಾರಂಟ್‌ ತರುವ ದರ್ದು ಏನಿತ್ತು ಎಂಬುದಾಗಿ ಸಿಐಡಿ ಪರ ವಾದ ಮಂಡಿಸಿದ ಎಜಿ ಶಶಿಕಿರಣ್‌ ಶೆಟ್ಟಿ ಅವರಿಗೆ ಕೋರ್ಟ್‌ ಚಾಟಿ ಬೀಸಿತು. ಹಾಗೆಯೇ, ಮಾಜಿ ಸಿಎಂಗೇ ಹೀಗಾದರೆ, ಸಾಮಾನ್ಯ ಜನರ ಗತಿ ಏನು ಎಂದು ಕೂಡ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಕಳವಳ ವ್ಯಕ್ತಪಡಿಸಿತು.

VISTARANEWS.COM


on

BS Yediyurappa
Koo

ಬೆಂಗಳೂರು: 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೊ ಕೇಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಕರ್ನಾಟಕ ಹೈಕೋರ್ಟ್‌ (Karnataka High Court) ಬಿಗ್‌ ರಿಲೀಫ್‌ ನೀಡಿದೆ. ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧಿಸಬಾರದು ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ. ಇದರ ಮಧ್ಯೆಯೇ, ವಿಚಾರಣೆ ವೇಳೆ ನ್ಯಾಯಾಲಯವು ಕರ್ನಾಟಕ ಸರ್ಕಾರಕ್ಕೆ ಚಾಟಿ ಬೀಸಿದೆ. “ಒಬ್ಬ ಮಾಜಿ ಮುಖ್ಯಮಂತ್ರಿಯನ್ನೇ ಈ ರೀತಿ ನಡೆಸಿಕೊಂಡರೆ, ಸಾಮಾನ್ಯ ಜನರ ಪಾಡೇನು” ಎಂದು ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

ಅಡ್ವೊಕೇಟ್‌ ಜನರಲ್‌ (AG) ಶಶಿಕಿರಣ್‌ ಶೆಟ್ಟಿ ಅವರು ಸಿಐಡಿ ಪರ ವಾದ ಮಂಡಿಸಿದರು. “ಜೂನ್‌ 11ರಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಜೂನ್‌ 12ರಂದು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ ನೀಡಿದ್ದಾರೆ. ಹೀಗಿದ್ದರೂ, ಯಡಿಯೂರಪ್ಪ ಅವರು ಸಂಜೆಗೆ ವಿಮಾನದ ಟಿಕೆಟ್‌ ಬುಕ್‌ ಮಾಡಿಕೊಂಡು ದೆಹಲಿಗೆ ತೆರಳಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದೇ ವೇಳೆ ನ್ಯಾಯಾಲಯವು, “ಬಿ.ಎಸ್.ಯಡಿಯೂರಪ್ಪ ಅವರು ಜೂನ್‌ 12ರ ಬದಲು, ಜೂನ್‌ 17ರಂದು ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಹೀಗಿದ್ದರೂ, ಕೋರ್ಟ್‌ಗೆ ಹೋಗಿ ಅರೆಸ್ಟ್‌ ವಾರೆಂಟ್‌ ತರುವ ಅವಶ್ಯಕತೆ ಏನಿತ್ತು? ಅವರು ಒಬ್ಬ ಮಾಜಿ ಮುಖ್ಯಮಂತ್ರಿ. ಅವರೇನೂ ದೇಶ ಬಿಟ್ಟು ಓಡಿ ಹೋಗುತ್ತಿದ್ದರೇ? ನಾಲ್ಕೈದು ದಿನ ತಡವಾಗಿ ವಿಚಾರಣೆಗೆ ಹಾಜರಾದರೆ ಆಕಾಶವೇ ಕಳಚಿ ಬೀಳುತ್ತಿತ್ತೇ? ಒಬ್ಬ ಮಾಜಿ ಮುಖ್ಯಮಂತ್ರಿಗೇ ಹೀಗಾದರೆ, ಸಾಮಾನ್ಯ ಜನರ ಗತಿ ಏನು” ಎಂದು ಚಾಟಿ ಬೀಸಿತು.

ಬಳಿಕ, ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧಿಸಬಾರದು ಎಂದು ನ್ಯಾ.ಕೃಷ್ಣ ದೀಕ್ಷಿತ್‌ ಅವರು ಆದೇಶ ಹೊರಡಿಸಿದರು. ಹಾಗೆಯೇ, ಜೂನ್‌ 17ರಂದು ತನಿಖಾಧಿಕಾರಿ ಎದುರು ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಎರಡು ವಾರ ಮುಂದೂಡಿದರು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: BS Yediyurappa: ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪಗೆ ಬಿಗ್‌ ರಿಲೀಫ್‌; ಬಂಧಿಸದಂತೆ ಕೋರ್ಟ್‌ ಆದೇಶ

Continue Reading

Latest

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Akira Nandan: ಪವನ್ ಕಲ್ಯಾಣ್ ಪುತ್ರ ಅಕಿರಾ ನಂದನ್ ಇಂಟರ್ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅಕಿರಾ ನಂದನ್ ಯಾರು ಎನ್ನುವುದರ ಕುರಿತು ಜನರು ಸಿಕ್ಕಾಪಟ್ಟೆ ಹುಡುಕುತ್ತಿದ್ದಾರೆ. ಪವನ್ ಕಲ್ಯಾಣ್ ಹಾಗೂ ರೇಣು ದೇಸಾಯಿ ಪುತ್ರನಾದ ಅಕಿರಾ ನಂದನ್‌ಗೆ ಕ್ರಿಕೆಟ್, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಪವನ್ ಕಲ್ಯಾಣ್ ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

VISTARANEWS.COM


on

Pawan Kalyan
Koo

ಹೈದರಾಬಾದ್ : ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ (Akira Nandan) ಅವರು ಸಿನಿಮಾ ರಂಗದಲ್ಲಿ ಹೆಸರು ಮಾಡಿ ನಂತರ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರು 2024ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ತಮ್ಮ ಆಡಳಿತವನ್ನು ಕೈಗೆ ತೆಗೆದುಕೊಂಡಿದ್ದಾರೆ. ಚುನಾವಣೆಯ ನಂತರ ಅವರು ತಮ್ಮ ಹಿರಿಯ ಪುತ್ರ ಅಕಿರಾ ನಂದನ್ ಜೊತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಇದೀಗ ಅಕಿರಾ ನಂದನ್ ಇಂಟರ್‌ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅವನು ಯಾರು ಎನ್ನುವುದರ ಬಗ್ಗೆ ಜನರು ಹುಡುಕಾಟ ಮಾಡುತ್ತಿದ್ದಾರೆ, ಹಾಗಾಗಿ ಅಕಿರಾ ನಂದನ್ ಬಗ್ಗೆ ಇಲ್ಲಿದೆ ಮಾಹಿತಿ.

ಅಕಿರಾ ನಂದನ್, ಪವನ್ ಕಲ್ಯಾಣ್ ಅವರ ಮೊದಲ ಪುತ್ರ. ಅಕಿರಾ ನಂದನ್ ಏಪ್ರಿಲ್ 8, 2004ರಲ್ಲಿ ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ದಂಪತಿಯ ಪುತ್ರನಾಗಿ ಜನಿಸಿದ್ದ. ಅವನಿಗೆ ಆಧ್ಯಾ ಕೊನಿಡೆಲಾ ಎಂಬ ತಂಗಿಯೂ ಇದ್ದಾಳೆ. ಇನ್ನು ಅಕಿರಾ ನಂದನ್ ಬಣ್ಣದ ಲೋಕದಲ್ಲೂ ಕಾಣಿಸಿಕೊಂಡಿದ್ದಾನೆ. ತನ್ನ ತಾಯಿ ನಿರ್ದೇಶನದ ‘ಇಷ್ಕ್ ವಾಲಾ ಲವ್’ (2014) ಚಿತ್ರದಲ್ಲಿ ನಟಿಸಿದ್ದ. ಆತ ನಟನೆಯಲ್ಲಿ ಮುಂದುವರಿಯುತ್ತಾನೆ ಎಂಬ ಊಹಾಪೋಹಗಳು ಕೇಳಿ ಬಂದ ಕಾರಣ ತಾಯಿ ರೇಣು ದೇಸಾಯಿ ತಮ್ಮ ಮಗನಿಗೆ ಈಗ ನಟನೆಯಲ್ಲಿ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

ಅಕಿರಾಗೆ ಕ್ರಿಕೆಟ್‌, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೆಯೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ಹಾಗಾಗಿ ಅಕಿರಾ ಮುಂದೆ ಯಾವುದರಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಾನೆ ಎಂಬುದನ್ನು ನೋಡಬೇಕಿದೆ.
ಅಕಿರಾ ನಂದನ್ ಆಗಾಗ ತಂದೆ ಪವನ್ ಕಲ್ಯಾಣ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವಿನ ನಂತರ ಅವರು ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಇತ್ತೀಚೆಗೆ ನವದೆಹಲಿಗೆ ತೆರಳಿದ್ದರು. ಅಂದ ಹಾಗೆ ಅಕಿರಾ ನಂದನ್‌ 6 ಅಡಿ 4 ಇಂಚು ಎತ್ತರ ಇದ್ದಾನೆ.

ಇದನ್ನೂ ಓದಿ: Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ಅಕಿರಾ ನಂದನ್ ತಾಯಿ ರೇಣು ದೇಸಾಯಿ ಇತ್ತೀಚೆಗೆ ತಮ್ಮ ಎರಡನೇ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದರು. ತಾವು ಎರಡನೇ ಮದುವೆಯಾಗುವ ಬಗ್ಗೆ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದರು. ಇಷ್ಟು ವರ್ಷಗಳ ಕಾಲ ಮಕ್ಕಳ ಆರೈಕೆಗಾಗಿ ಮದುವೆಯಾಗಿಲ್ಲ. ಈಗ ಮಕ್ಕಳು ಬೆಳೆದು ದೊಡ್ಡವರಾದ ಕಾರಣ ತಾನು ಎರಡನೇ ಮದುವೆ ಮಾಡಿಕೊಳ್ಳುವುದಾಗಿ ಬಹಿರಂಗಪಡಿಸಿದ್ದರು. ಇದಕ್ಕೆ ತಮ್ಮ ಮಕ್ಕಳ ಒಪ್ಪಿಗೆ ಕೂಡ ಇದೆ ಎಂಬುದಾಗಿ ತಿಳಿಸಿದ್ದರು.

Continue Reading
Advertisement
Bagalkot News
ಕರ್ನಾಟಕ3 mins ago

Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

Petrodollar Deal
ವಿದೇಶ15 mins ago

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Raaj Kumar Anand
ದೇಶ34 mins ago

Raaj Kumar Anand: ಆಪ್‌ ಮಾಜಿ ಸಚಿವ ರಾಜ್‌ ಕುಮಾರ್‌ ಆನಂದ್‌ ಶಾಸಕ ಸ್ಥಾನದಿಂದಲೂ ಅನರ್ಹ; ಕಾರಣ ಇಲ್ಲಿದೆ

Star Saree Fashion
ಫ್ಯಾಷನ್49 mins ago

Star Saree Fashion: ರೇಷ್ಮೆ ಸೀರೆಯಲ್ಲಿ ನಟಿ ಕೀರ್ತಿ ಸುರೇಶ್‌ರಂತೆ ಗ್ಲಾಮರಸ್‌ ಆಗಿ ಕಾಣಿಸಬೇಕೆ? 5 ಟಿಪ್ಸ್ ಫಾಲೋ ಮಾಡಿ!

Sonakshi Sinha
Latest52 mins ago

Sonakshi Sinha: ನಟಿ ಸೋನಾಕ್ಷಿ ಸಿನ್ಹಾ ಐಷಾರಾಮಿ ಅಪಾರ್ಟ್‌ಮೆಂಟ್ ಹೇಗಿದೆ? ವಿಡಿಯೊ ನೋಡಿ!

Karnataka Weather Forecast
ಮಳೆ57 mins ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Gangster Ravi Pujari
ಕರ್ನಾಟಕ1 hour ago

Gangster Ravi Pujari: ಭೂಗತ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

BS Yediyurappa
ಕರ್ನಾಟಕ1 hour ago

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

Allergic Asthma
ಆರೋಗ್ಯ1 hour ago

Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

Due to heavy rain water entered the houses of Tharkas Pet village of Chittapur taluk
ಮಳೆ2 hours ago

Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ57 mins ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌