My daughter made her husband the Prime Minister Sudha MurthySudha Murthy : ನನ್ನ ಮಗಳು ಗಂಡನನ್ನು ಪ್ರಧಾನಿ ಮಾಡಿದ್ದಾಳೆ: ಸುಧಾಮೂರ್ತಿ ಬಣ್ಣನೆ Vistara News

ಪ್ರಮುಖ ಸುದ್ದಿ

Sudha Murthy : ನನ್ನ ಮಗಳು ಗಂಡನನ್ನು ಪ್ರಧಾನಿ ಮಾಡಿದ್ದಾಳೆ: ಸುಧಾಮೂರ್ತಿ ಬಣ್ಣನೆ

Sudha Murthy ಇನ್ಫೋಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿಯವರು ಆಪ್ತರೊಡನೆ ಹರಟೆಯ ಸಂದರ್ಭ ಮಗಳು ಅಕ್ಷತಾ ಮೂರ್ತಿ ಹಾಗೂ ಅಳಿಯ, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಬಗ್ಗೆ ಸ್ವಾರಸ್ಯಕರವಾಗಿ ಮಾತನಾಡಿದ್ದಾರೆ.

VISTARANEWS.COM


on

My daughter made her husband the Prime Minister Sudha Murthy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಮ್ಮ ಅಳಿಯ ಪಂಜಾಬಿ. ಅವರ ಕುಟುಂಬದ ಪೂರ್ವಜರು 15೦ ವರ್ಷದಿಂದ ಇಂಗ್ಲೆಂಡ್‌ನಲ್ಲಿ ನೆಲೆಸಿದ್ದಾರೆ. ಅವನು ತುಂಬ ಧಾರ್ಮಿಕ ವ್ಯಕ್ತಿ. ಮದುವೆ ಆದ ಮೇಲೆ ಗುರುವಾರ ಉಪವಾಸ ಮಾಡುತ್ತಾನೆ. ರಾತ್ರಿ ಹೊತ್ತು ಮಾತ್ರ ಊಟ ಮಾಡುತ್ತಾನೆ. (Sudha Murthy) ಯಾಕೆಂದರೆ ಅದು ಹೆಂಡ್ತಿ ಮಹಿಮೆ. ಹೆಂಡತಿ ಗಂಡನನ್ನು ಹೇಗೆ ಬದಲಿಸಬಹುದು ನೋಡ್ರಿ. ಆದ್ರೆ ನಾನು ಮಾತ್ರ ನನ್ನ ಯಜಮಾನರನ್ನ ಚೇಂಜ್‌ ಮಾಡ್ಲಿಕ್ಕೆ ಸಾಧ್ಯವಾಗಲಿಲ್ಲ. ನಾನು ನನ್ನ ಗಂಡನನ್ನು ಬಿಸಿನೆಸ್‌ ಮ್ಯಾನ್‌ ಮಾಡಿದ್ದೇನೆ. ನನ್ನ ಮಗಳು ತನ್ನ ಗಂಡನನ್ನು (UK Prime Minister Rishi Sunak) ಪ್ರೈಮ್‌ ಮಿನಿಸ್ಟರ್‌ ಮಾಡಿದ್ದಾಳೆ.

ಹೀಗೆ ಲಘು ಹರಟೆಯಲ್ಲಿ ನಕ್ಕು ನಗಿಸುತ್ತಾ ವಿರಾಮದಲ್ಲಿ ಹೇಳಿದವರು ಇನ್ಫೋಸಿಸ್ ಫೌಂಡೇಷನ್‌ನ ಅಧ್ಯಕ್ಷೆ ಸುಧಾ ಮೂರ್ತಿ. ಇತ್ತೀಚೆಗೆ ಆಪ್ತರೊಡನೆ ಕುಶಲೋಪರಿ ವಿಚಾರಿಸುತ್ತಿದ್ದ ಸಂದರ್ಭ ಮಗಳು ಅಕ್ಷತಾ ಮೂರ್ತಿ (Akshata Murthy) ಅವರು ತಮ್ಮ ಪತಿ ಹಾಗೂ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಯೋಗಕ್ಷೇಮದ ಬಗ್ಗೆ ಪ್ರಸ್ತಾಪಿಸಿದರು. ರಿಷಿ ಸುನಕ್‌ ಅವರು 2009ರಲ್ಲಿ ಬೆಂಗಳೂರಿನಲ್ಲಿ ಅಕ್ಷತಾ ಮೂರ್ತಿ ಅವರನ್ನು ವಿವಾಹವಾಗಿದ್ದರು.

ಮಂತ್ರಾಲಯದ ಗುರು ರಾಘವೇಂದ್ರ ರಾಯರ ಭಕ್ತರಾಗಿರುವ ನಾರಾಯಣ ಮೂರ್ತಿ ದಂಪತಿ ಇನ್ಫೋಸಿಸ್‌ ಅನ್ನೂ ಗುರುವಾರ ಆರಂಭಿಸಿದ್ದರು. ಮೂರ್ತಿ ಕುಟುಂಬದಲ್ಲಿ ಗುರುವಾರಕ್ಕೆ ವಿಶೇಷ ಮಹತ್ವ ನೀಡುತ್ತಿದ್ದುದನ್ನು ಸುನಕ್‌ ಅವರೂ ಗಮನಿಸಿದ್ದರು. ಆಗ ರಾಘವೇಂದ್ರ ಸ್ವಾಮಿಗಳ ಆರಾಧಕರಾಗಿರುವುದನ್ನು ತಿಳಿದುಕೊಂಡಿದ್ದರು. ನನ್ನ ಅಳಿಯನ ಅಮ್ಮ ಪ್ರತಿ ಸೋಮವಾರ ಉಪವಾಸ ಮಾಡುತ್ತಾರೆ. ಆದರೆ ಅಳಿಯ ಗುರುವಾರ ಉಪವಾಸ ಮಾಡುತ್ತಾನೆ ಎಂದು ಸುಧಾಮೂರ್ತಿ ವಿವರಿಸಿದ್ದಾರೆ.

ಒಟ್ಟಾರೆಯಾಗಿ ಯಾವುದೇ ಕುಟುಂಬದಲ್ಲಿ ಹೆಣ್ಣು ಮಕ್ಕಳು ಪ್ರಭಾವಶಾಲಿಯಾಗಿರುತ್ತಾರೆ. ಪತಿಯ ಸಾಧನೆಯಲ್ಲಿ ಪತ್ನಿಯ ಪಾತ್ರ ಮತ್ತು ಪ್ರಭಾವ ದೊಡ್ಡದಿರುತ್ತದೆ ಎಂಬುದನ್ನು ಸುಧಾಮೂರ್ತಿ ಅವರು ಹೆಮ್ಮೆಯಿಂದ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

Mizoram Election Result: ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಲಿದೆ.

VISTARANEWS.COM


on

Mizoram Election Result
Koo

ಐಜ್ವಾಲ್:‌ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Elections 2023) ಪ್ರಕಟವಾಗಿದ್ದು, ರಾಜಕೀಯ ಪಕ್ಷಗಳು ಸೋಲು-ಗೆಲುವಿಗೆ ಕಾರಣಗಳನ್ನು ಹುಡುಕುವುದು, ಆತ್ಮಾವಲೋಕನ, ಸಂಭ್ರಮಾಚರಣೆಯಲ್ಲಿ ತೊಡಗಿವೆ. ಇದರ ಬೆನ್ನಲ್ಲೇ ಸೋಮವಾರ (ಡಿಸೆಂಬರ್‌ 4) ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶವೂ (Mizoram Election Result) ಪ್ರಕಟವಾಗಲಿದ್ದು, ಪ್ರಾದೇಶಿಕ ಪಕ್ಷಗಳ ಸಮರದಲ್ಲಿ ಯಾವ ಪಕ್ಷ ಗೆಲುವು ಸಾಧಿಸಲಿದೆ ಎಂಬ ಕುತೂಹಲ ಮೂಡಿದೆ.

ಈಶಾನ್ಯ ರಾಜ್ಯ ಮಿಜೋರಾಮ್‌ನಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF), ಪ್ರಮುಖ ವಿರೋಧ ಪಕ್ಷ ಝೋರಾಂ ಪೀಪಲ್ಸ್ ಮೂವ್ಮೆಂಟ್ (ZPM) ಮತ್ತು ಕಾಂಗ್ರೆಸ್ (Congress Party) ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಮತದಾರರು ಆಡಳಿತಾರೂಢ ಎಂಎನ್‌ಎಫ್‌ ಪರವಾಗಿ ತಮ್ಮ ಒಲವು ತೋರಿಸಿದ್ದಾರೆ ಎಂದು ಎಕ್ಸಿಟ್ ಪೋಲ್‌ಗಳು ಹೇಳುತ್ತಿವೆ. ಇಷ್ಟಾಗಿಯೂ ಕೆಲವು ಸಮೀಕ್ಷೆಗಳು ಅತಂತ್ರ ವಿಧಾನಸಭೆಯನ್ನು ಊಹಿಸಿವೆ. ಅಂತಿಮವಾಗಿ ಯಾರ ಪಾಲಿಗೆ ಜಯ ದಕ್ಕಲಿದೆ ಎಂಬುದು ಸೋಮವಾರ ಗೊತ್ತಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ.

ಮುಖ್ಯಮಂತ್ರಿ ಜೊರಾಮ್‌ಥಾಂಗ

40 ಸದಸ್ಯರ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಮತದಾನ ಶಾಂತಿಯುತವಾಗಿ ನಡೆದಿತ್ತು. ಶೇಕಡಾ 80 ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಈ ಬಾರಿ ಮಿಜೋರಾಂನಲ್ಲಿ ಶೇ.81.25ರಷ್ಟು ಮಹಿಳಾ ಮತದಾರರು ಹಾಗೂ ಶೇ.80.04ರಷ್ಟು ಪುರುಷ ಮತದಾರರು ಮತ ಚಲಾಯಿಸಿದ್ದಾರೆ. ರಾಜ್ಯದ ಒಟ್ಟು 8.52 ಲಕ್ಷ ಮತದಾರರಲ್ಲಿ ಶೇಕಡಾ 174 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ರಾಜ್ಯದ ಎಲ್ಲಾ 11 ಜಿಲ್ಲೆಗಳ ಪೈಕಿ, ಸೆರ್ಚಿಪ್ ಜಿಲ್ಲೆಯಲ್ಲಿ ಅತಿ ಹೆಚ್ಚು 84.78% ಮತದಾನ ದಾಖಲಾಗಿದ್ದು, ಮಾಮಿತ್ ಜಿಲ್ಲೆಯಲ್ಲಿ 84.65%, ಹನ್ಹಥಿಯಾಲ್ ಜಿಲ್ಲೆಯಲ್ಲಿ 84.19% ಮತ್ತು ಲುಂಗ್ಲೈ ಜಿಲ್ಲೆಯಲ್ಲಿ 83.68% ಮತದಾನವಾಗಿದೆ.

ಇದನ್ನೂ ಓದಿ: Assembly Elections 2023: ಬಿಜೆಪಿಗೆ ನಾಲ್ಕನೇ ಮೂರು ಬಹುಮತ, ಕಾಂಗ್ರೆಸ್‌ಗೆ ಒಂದೇ ಗ್ಯಾರಂಟಿ!

18 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದರು. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್), ಪ್ರಮುಖ ವಿರೋಧ ಪಕ್ಷ ಝೋರಾಂ ಪೀಪಲ್ಸ್ ಮೂವ್‌ಮೆಂಟ್ (ಝೆಡ್‌ಪಿಎಂ) ಮತ್ತು ಕಾಂಗ್ರೆಸ್ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಿದ್ದವು. ಇದಕ್ಕೆ ಹೋಲಿಸಿದರೆ, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಕ್ರಮವಾಗಿ 23 ಮತ್ತು 4 ಸ್ಥಾನಗಳಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಿವೆ. 2018 ರ ನವೆಂಬರ್​ನಲ್ಲಿ ನಡೆದ ಕೊನೆಯ ವಿಧಾನಸಭಾ ಚುನಾವಣೆಯಲ್ಲಿ ಎಂಎನ್ಎಫ್ 26 ಸ್ಥಾನಗಳನ್ನು, ಝೆಡ್‌ಪಿಎಂ 8 ಸ್ಥಾನಗಳನ್ನು, ಕಾಂಗ್ರೆಸ್ 5 ಮತ್ತು ಬಿಜೆಪಿ 1 ಸ್ಥಾನಗಳನ್ನು ಗೆದ್ದಿದೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Continue Reading

ದೇಶ

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

Vistara Editorial: ಬಿಜೆಪಿ ಈ ಫಲಿತಾಂಶವನ್ನು ಸಹಜವಾಗಿಯೇ ಹುಮ್ಮಸ್ಸಿನಿಂದ ಸ್ವೀಕರಿಸಿದೆ. ಅದು ಸಹಜ. ಇದು ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿಯೂ ಹೌದು. ದುರಾಡಳಿತ, ಕಳಪೆ ಆಡಳಿತವನ್ನು ಜನ ಸಹಿಸುವುದಿಲ್ಲ ಎಂಬ ಸಂದೇಶವನ್ನೂ ಈ ಫಲಿತಾಂಶ ರವಾನಿಸಿದೆ.

VISTARANEWS.COM


on

4 state election results shows us that, freebies are not the way for win elections
Koo

2024ರ ಲೋಕಸಭೆ ಚುನಾವಣೆಯ (Lok Sabha Election 2024) ಸೆಮಿಫೈನಲ್‌ ಎಂದೇ ವಿಶ್ಲೇಷಿಸಲಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ (Assembly Elections 2023) ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ (ಡಿಸೆಂಬರ್‌ 3) ಹೊರಬಿದ್ದಿದ್ದು, ಭಾರತೀಯ ಜನತಾ ಪಕ್ಷ ಮೂರು ರಾಜ್ಯಗಳಲ್ಲಿ ನಿಚ್ಚಳ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಕಾಂಗ್ರೆಸ್‌ ಒಂದು ರಾಜ್ಯವನ್ನು ಗೆದ್ದುಕೊಂಡಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗದ್ದುಗೆ ಏರಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಿದೆ. ಬಿಜೆಪಿ ಮಧ್ಯಪ್ರದೇಶವನ್ನು ಉಳಿಸಿಕೊಂಡು ರಾಜಸ್ಥಾನ ಮತ್ತು ಛತ್ತೀಸ್‌ ಗಢವನ್ನು ಕಾಂಗ್ರೆಸ್‌ ಕೈಯಿಂದ ಕಸಿದುಕೊಂಡಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌ ತೆಲಂಗಾಣದಲ್ಲಿ 10 ವರ್ಷಗಳ ಕೆ ಚಂದ್ರಶೇಖರ ರಾವ್‌ (ಭಾರತ ರಾಷ್ಟ್ರ ಸಮಿತಿ- ಬಿಆರ್‌ಎಸ್‌) ಪಾರುಪತ್ಯವನ್ನು ಕೊನೆಗಾಣಿಸಿದೆ. ಈ ಫಲಿತಾಂಶಗಳು ನೀಡುತ್ತಿರುವ ಸಂದೇಶವನ್ನು ನಾವು ವಿಶ್ಲೇಷಿಸಬಹುದಾಗಿದೆ(Vistara editorial).

ಮೂರು ರಾಜ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಉತ್ತರ ಭಾರತದಲ್ಲಿ ಬಿಜೆಪಿ ತನ್ನ ಪಾರಮ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದರೆ, ಕಾಂಗ್ರೆಸ್‌ ತೆಲಂಗಾಣದ ಗೆಲುವಿನ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಂಡಿದೆ. ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ ಗ್ಯಾರಂಟಿಗಳ ಪ್ರಭಾವದಿಂದ ಕಾಂಗ್ರೆಸ್‌ ದೊಡ್ಡ ಗೆಲುವನ್ನು ಸಾಧಿಸಿದ ಬಳಿಕ ಗೊಂದಲದಲ್ಲಿ ಮುಳುಗಿದ್ದ ಬಿಜೆಪಿಗೆ ಈ ಚುನಾವಣೆ ಫಲಿತಾಂಶ ಧೈರ್ಯವನ್ನು ತುಂಬಿದೆ. ಇದು ಬಿಜೆಪಿಯ 2024ರ ಲೋಕಸಭಾ ಚುನಾವಣಾ ಓಟಕ್ಕೆ ಎದುರಾಗಿದ್ದ ಆತಂಕವನ್ನು ದೂರ ಮಾಡಿದೆ. ಬಿಜೆಪಿ ಗೆದ್ದಿರುವ ಮೂರು ರಾಜ್ಯಗಳಲ್ಲೇ 65 ಸ್ಥಾನಗಳಿವೆ. ಇದು ಬಹುತೇಕ ಸಾರಾಸಗಟು ಬಿಜೆಪಿ ಪಕ್ಷಕ್ಕೆ ಬರುವ ಸಾಧ್ಯತೆಗಳು ಕಂಡುಬರುತ್ತಿವೆ.

ಇತ್ತೀಚೆಗೆ ಕಾಂಗ್ರೆಸ್ ನೀಡುತ್ತಿರುವ ಉಚಿತ ಗ್ಯಾರಂಟಿಗಳು ಹೆಚ್ಚು ಚರ್ಚಿತವಾಗಿವೆ. ಇವುಗಳಿಂದಾಗಿಯೇ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂಬುದರಲ್ಲಿ ಭಾಗಶಃ ಸತ್ಯವಿದೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದುದರ ಹಿಂದೆ ಬಿಜೆಪಿಯ ಕಳಪೆ ಆಡಳಿತದ ಬಗ್ಗೆ ಎದ್ದ ಆಕ್ರೋಶವೂ ಕಾರಣವಾಗಿತ್ತು. ಈಗಲೂ ಅದೇ ಸಂಭವಿಸಿದೆ. ಅಂದರೆ, ಗ್ಯಾರಂಟಿಗಳೇ ಎಲ್ಲವೂ ಅಲ್ಲ ಎಂಬುದನ್ನು ಇದು ಸಾರಿದೆ. ಬಿಜೆಪಿ ಕೂಡಾ ಕಾಂಗ್ರೆಸ್‌ನಂತೆಯೇ ಕೆಲವೊಂದು ಉಚಿತ ಯೋಜನೆಗಳನ್ನು ನೀಡಿದ್ದರೂ ಒಟ್ಟಾರೆ ಫಲಿತಾಂಶ ಗ್ಯಾರಂಟಿ ಯೋಜನೆಗಳ ಹಂಗನ್ನು ಮೀರಿ ನಿಂತಿದೆ. ಮತದಾರರು ಗ್ಯಾರಂಟಿಗಳ ಆಮಿಷವನ್ನು ಮೀರಿ ಮತ ಹಾಕಿದ್ದಾರೆ. ಅಂದರೆ ಉತ್ತಮ ಆಡಳಿತವನ್ನು ಅಪೇಕ್ಷಿಸಿದ್ದಾರೆ ಎಂಬುದು ನಿಶ್ಚಿತ. ಉಚಿತಗಳು ಎಕಾನಮಿಗೆ ಒಳ್ಳೆಯದಲ್ಲ ಎಂಬುದನ್ನು ತಜ್ಞರು ಹೇಳುತ್ತಾರೆ. ಮತದಾರರು ಅದನ್ನೇ ಇನ್ನೊಂದು ಬಗೆಯಲ್ಲಿ ಹೇಳಿದಂತಿದೆ. ಇಲ್ಲವಾದರೆ ಮೂರೂ ಕಡೆ ಕಾಂಗ್ರೆಸ್ ವಿಫಲವಾಗುತ್ತಿರಲಿಲ್ಲ. ತೆಲಂಗಾಣದಲ್ಲಿ ಗ್ಯಾರಂಟಿಗಳನ್ನು ಘೋಷಿಸಿಯೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ನಿಜ. ಆದರೆ ಹತ್ತು ವರ್ಷಗಳ ಬಿಆರ್‌ಎಸ್ ಆಡಳಿತ ಸಾಕಾಗಿ ಅಲ್ಲಿನ ಜನತೆ ಬದಲಾವಣೆ ಬಯಸಿದ್ದರು ಎಂಬುದೂ ಅಷ್ಟೇ ನಿಜ.

ಬಿಜೆಪಿ ಈ ಫಲಿತಾಂಶವನ್ನು ಸಹಜವಾಗಿಯೇ ಹುಮ್ಮಸ್ಸಿನಿಂದ ಸ್ವೀಕರಿಸಿದೆ. ಅದು ಸಹಜ. ಇದು ಲೋಕಸಭೆ ಚುನಾವಣೆಯ ಮುನ್ಸೂಚನೆಯೂ ಹೌದು. ಆದರೆ ದುರಾಡಳಿತ, ಕಳಪೆ ಆಡಳಿತವನ್ನು ಜನ ಸಹಿಸುವುದಿಲ್ಲ ಎಂಬ ಸಂದೇಶ ಸ್ಪಷ್ಟವಾಗಿದೆ. ಛತ್ತೀಸ್‌ಗಢದಲ್ಲಿ ಭೂಪೇಶ್ ಬಘೇಲ್ ಆಡಳಿತದಲ್ಲಿ ಹಗರಣಗಳ ಮೇಲೆ ಹಗರಣಗಳು ನಡೆದಿದ್ದವು. ಜನತೆ ಸರ್ಕಾರವನ್ನು ಬದಲಿಸಿದ್ದಾರೆ. ಇದು ಬಿಜೆಪಿಗೂ ಪಾಠ. ಮೂರೂ ರಾಜ್ಯಗಳಲ್ಲೂ ಬುಡಕಟ್ಟು ಸಮುದಾಯ ಬಿಜೆಪಿಯ ಕೈಹಿಡಿದಿದೆ. ಇದು ತನ್ನ ಆದ್ಯತೆ ಎಲ್ಲಿಗೆ ಇರಬೇಕೆಂದು ಬಿಜೆಪಿಗೆ ತೋರಿಕೊಟ್ಟಿದೆ. ಕೇಂದ್ರದ ಅಭಿವೃದ್ಧಿ ಯೋಜನೆಗಳು ಮತ ಬಿಜೆಪಿಗೆ ಸಹಾಯ ಮಾಡಿವೆ. ಮುಖ್ಯವಾಗಿ ಉತ್ತರ ಭಾರತದ ಮೂರು ರಾಜ್ಯಗಳಲ್ಲಿ ಜನಪರ ಯೋಜನೆಗಳು, ಕೇಂದ್ರ ರಾಜ್ಯ ಡಬಲ್ ಎಂಜಿನ್ ಸರ್ಕಾರದ ಎಫೆಕ್ಟ್, ಮೋದಿ ಹವಾ ಕೂಡ ಕೆಲಸ ಮಾಡಿದೆ.

ಗೆಲುವಿನ‌ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಹಾಗೂ ಅದರ ನೇತೃತ್ವದ ಇಂಡಿಯಾ ಬ್ಲಾಕ್‌ಗೆ ನಿರಾಸೆ ಆಗಿರುವುದು ಸಹಜ. ಇದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿ, ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಉಚಿತ ಯೋಜನೆಗಳಿಗಿಂತಲೂ ಖಚಿತ ಅಭಿವೃದ್ಧಿ ಯೋಜನೆಗಳತ್ತ ಹೆಚ್ಚಿನ ಹರಿಸಬೇಕು. ನಾಯಕತ್ವದ ವಿಚಾರದಲ್ಲಿ ಇನ್ನಷ್ಟು ಪ್ರಯೋಗ, ಗಟ್ಟಿತನ ಬೇಕಾದೀತು.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಭ್ರೂಣ ಹತ್ಯೆ ಜಾಲ ಆಘಾತಕಾರಿ

Continue Reading

ಪ್ರಮುಖ ಸುದ್ದಿ

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

ead your daily horoscope predictions for december 4th 2023
Koo

ಚಂದ್ರನು ಸೋಮವಾರ ಕನ್ಯಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ವೃಷಭ ರಾಶಿಯವರು ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಮಿಥುನ ರಾಶಿಯವರು ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಎದುರಾಗಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವವಿದ್ದು ನಿಧಾನವಾಗಿ ವಾಹನ ಚಾಲನೆ ಮಾಡಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (4-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 21:59 ವಾರ: ಸೋಮವಾರ
ನಕ್ಷತ್ರ: ಮಘಾ 24:34 ಯೋಗ: ವೈಧೃತಿ
ಕರಣ: ವಿಷ್ಟಿ (ಭದ್ರ) 08:41 ಅಮೃತಕಾಲ: ರಾತ್ರಿ 9:53 ರಿಂದ 11:41 ರವರೆಗೆ
ದಿನದ ವಿಶೇಷ: ಕಾರ್ತಿಕ ಸೋಮವಾರ, ನೌಕಾಪಡೆ ದಿನ, ಶಿಂಗ್ರಪಳ್ಳಿ ಜಾತ್ರೆ, ಪಂಜ ದೀಪೋತ್ಸವ
ಸೂರ್ಯೋದಯ : 06:27  ಸೂರ್ಯಾಸ್ತ : 05:52

ರಾಹುಕಾಲ : ಬೆಳಗ್ಗೆ 7:53 ರಿಂದ 9:19ರವರೆಗೆ
ಗುಳಿಕಕಾಲ: ಮಧ್ಯಾಹ್ನ 1:35ರಿಂದ 03:01ರವರೆಗೆ
ಯಮಗಂಡಕಾಲ: ಬೆಳಗ್ಗೆ 10:44 ರಿಂದ 12:10ರವರೆಗೆ

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠತೆ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ ಇದೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಎದುರಾಗಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ ಮಾಡುವಿರಿ. ಸಹದ್ಯೋಗಿಗಳ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕವಾಗಿ ಶ್ರಮವಾಗಲಿದೆ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕ ಕಲಹಗಳಿಗೆ ಧ್ವನಿಯಾಗುವುದು ಬೇಡ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಬೆಳೆಸುವಿರಿ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶವಿದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ . ಹರಟೆಯಿಂದ ಕಾಲಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ಸಕರಾತ್ಮಕವಾಗಿ ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ತಮ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗಿ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತರಾಗುವಿರಿ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ದೇಶ

Mizoram Election Result: ಇಂದು ಮಿಜೋರಾಂ ಎಲೆಕ್ಷನ್ ರಿಸಲ್ಟ್; ಮತ ಎಣಿಕೆ ಒಂದು ದಿನ ಮುಂದೂಡಿದ್ದೇಕೆ?

Mizoram Election Result: 40 ಸದಸ್ಯ ಬಲ ಮಿಜೋರಾಂ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆದಿದ್ದು, ಸೋಮವಾರ ರಿಸಲ್ಟ್ ಪ್ರಕಟವಾಗಲಿದೆ.

VISTARANEWS.COM


on

Mizoram Election Result will be announced on December 4, 2023
ಸಾಂದರ್ಭಿಕ ಚಿತ್ರ.
Koo

ನವೆಂಬರ್: ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ (Mizoram Election Result) ಡಿಸೆಂಬರ್ 4, ಸೋಮವಾರ ಪ್ರಕಟವಾಗಲಿದೆ. 40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆದಿತ್ತು. ವಾಸ್ತವದಲ್ಲಿ, ಛತ್ತೀಸ್‌ಗಢ, ತೆಲಂಗಾಣ, ರಾಜಸ್ಥಾನ ಮತ್ತು ಮಧ್ಯ ಪ್ರದೇಶಗಳ ರಾಜ್ಯಗಳ ಮತ ಎಣಿಕೆಯಂದೇ (Election Result 2023) ಮಿಜೋರಾಂ ಚುನಾವಣೆ ರಿಸಲ್ಟ್ ಕೂಡ ಪ್ರಕಟವಾಗಬೇಕಿತ್ತು. ಕ್ರೈಸ್ತರೇ ಹೆಚ್ಚಿರುವ ಮಿಜೋರಾಂನಲ್ಲಿ ಭಾನುವಾರ(ಡಿ.3) ಬದಲಿಗೆ ಸೋಮವಾರ ರಿಸಲ್ಟ್ ಪ್ರಕಟಿಸುವಂತೆ ವ್ಯಾಪಕ ಮನವಿಗಳು ಬಂದ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು (Election Commission) ಮತ ಎಣಿಕೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಿತ್ತು(Assembly Election 2023).

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಮಿಜೋರಾಂನಲ್ಲಿ ಮತ ಎಣಿಕೆಯ ದಿನದ ಬದಲಾವಣೆಗಾಗಿ ವಿವಿಧ ವಲಯಗಳಿಂದ ಸಾವಿರಾರು ವಿನಂತಿಗಳನ್ನು ಆಯೋಗವು ಸ್ವೀಕರಿಸಿತ್ತು. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕಾರ್ಯವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿತ್ತು. ಕ್ರೈಸ್ತರೇ ಹೆಚ್ಚಿರುವ ಮಿಜೋರಾಮ್‌ನಲ್ಲಿ ಭಾನುವಾರ ಅವರಿಗೆ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದ ದಿನವಾಗಿದೆ. ಮತ ಎಣಿಕೆಯು ಭಾನುವಾರಕ್ಕೆ ಘೋಷಣೆಯಾದ್ದರಿಂದ ಮುಂದೂಡುವಂತೆ ಮಿಜೋರಾಮ್ ಜನರು ಮನವಿ ಮಾಡಿಕೊಂಡಿದ್ದರು. ಜನರ ಮನವಿಗಳನ್ನು ಪರಿಗಣಿಸಿದ ಆಯೋಗವು ಮಿಜೋರಾಂನ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ಎಣಿಕೆಯ ದಿನಾಂಕವನ್ನು ಡಿಸೆಂಬರ್ 3ರಿಂದ ಡಿ. 4ಕ್ಕೆ ಪರಿಷ್ಕರಿಸಲು ನಿರ್ಧರಿಸಿದೆ ಕೇಂದ್ರ ಚುನಾವಣಾ ಆಯೋಗವು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು. ಮಿಜೋರಾಂ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆದಿತ್ತು.

ಇನ್ನುಳಿದಂತೆ, ಈ ಹಿಂದೆ ಘೋಷಣೆ ಮಾಡಿದಂತೆಯೇ ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯ ವಿಧಾಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಡಿಸೆಂಬರ್ 4, ಭಾನುವಾರವೇ ನಡೆದಿದೆ. ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಿದೆ.

Mizoram Exit Poll: ಎಂಎನ್‌ಎಫ್‌ ಕಡೆಗೆ ಒಲವು, ಆದರೂ ಅತಂತ್ರ ವಿಧಾನಸಭೆ ನಿರೀಕ್ಷೆ

ಈಶಾನ್ಯ ರಾಜ್ಯ ಮಿಜೋರಾಮ್‌ನಲ್ಲಿ (Mizoram Exit Poll) ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF), ಪ್ರಮುಖ ವಿರೋಧ ಪಕ್ಷ ಝೋರಾಂ ಪೀಪಲ್ಸ್ ಮೂವ್ಮೆಂಟ್ (ZPM) ಮತ್ತು ಕಾಂಗ್ರೆಸ್ (Congress Party) ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಮತದಾರರು ಆಡಳಿತಾರೂಢ ಎಂಎನ್‌ಪಿ ಪರವಾಗಿ ತಮ್ಮ ಒಲವು ತೋರಿಸಿದ್ದಾರೆ ಎಂದು ಎಕ್ಸಿಟ್ ಪೋಲ್‌ಗಳು ಹೇಳುತ್ತಿವೆ. ಇಷ್ಟಾಗಿಯೂ ಕೆಲವು ಸಮೀಕ್ಷೆಗಳು ಅತಂತ್ರ ವಿಧಾನಸಭೆಯನ್ನು ಊಹಿಸಿವೆ. ಅಂತಿಮವಾಗಿ ಯಾರ ಪಾಲಿಗೆ ಜಯ ದಕ್ಕಲಿದೆ ಎಂಬುದು ಡಿಸೆಂಬರ್ 4ರಂದು ಗೊತ್ತಾಗಲಿದೆ(Exit Polls Result 2023).

40 ಸದಸ್ಯರ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಮತದಾನ ಶಾಂತಿಯುತವಾಗಿ ನಡೆದಿತ್ತು. ಶೇಕಡಾ 80 ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಈ ಬಾರಿ ಮಿಜೋರಾಂನಲ್ಲಿ ಶೇ.81.25ರಷ್ಟು ಮಹಿಳಾ ಮತದಾರರು ಹಾಗೂ ಶೇ.80.04ರಷ್ಟು ಪುರುಷ ಮತದಾರರು ಮತ ಚಲಾಯಿಸಿದ್ದಾರೆ. ರಾಜ್ಯದ ಒಟ್ಟು 8.52 ಲಕ್ಷ ಮತದಾರರಲ್ಲಿ ಶೇಕಡಾ 174 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ರಾಜ್ಯದ ಎಲ್ಲಾ 11 ಜಿಲ್ಲೆಗಳ ಪೈಕಿ, ಸೆರ್ಚಿಪ್ ಜಿಲ್ಲೆಯಲ್ಲಿ ಅತಿ ಹೆಚ್ಚು 84.78% ಮತದಾನ ದಾಖಲಾಗಿದ್ದು, ಮಾಮಿತ್ ಜಿಲ್ಲೆಯಲ್ಲಿ 84.65%, ಹನ್ಹಥಿಯಾಲ್ ಜಿಲ್ಲೆಯಲ್ಲಿ 84.19% ಮತ್ತು ಲುಂಗ್ಲೈ ಜಿಲ್ಲೆಯಲ್ಲಿ 83.68% ಮತದಾನವಾಗಿದೆ.

18 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದರು. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್), ಪ್ರಮುಖ ವಿರೋಧ ಪಕ್ಷ ಝೋರಾಂ ಪೀಪಲ್ಸ್ ಮೂವ್ಮೆಂಟ್ (ಝಡ್ಪಿಎಂ) ಮತ್ತು ಕಾಂಗ್ರೆಸ್ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಿದ್ದವು. ಇದಕ್ಕೆ ಹೋಲಿಸಿದರೆ, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಕ್ರಮವಾಗಿ 23 ಮತ್ತು 4 ಸ್ಥಾನಗಳಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಿವೆ. 2018 ರ ನವೆಂಬರ್​ನಲ್ಲಿ ನಡೆದ ಕೊನೆಯ ವಿಧಾನಸಭಾ ಚುನಾವಣೆಯಲ್ಲಿ ಎಂಎನ್ಎಫ್ 26 ಸ್ಥಾನಗಳನ್ನು, ಜಡ್​ಪಿಎಂ 8 ಸ್ಥಾನಗಳನ್ನು, ಕಾಂಗ್ರೆಸ್ 5 ಮತ್ತು ಬಿಜೆಪಿ 1 ಸ್ಥಾನಗಳನ್ನು ಗೆದ್ದಿದೆ. 40 ಸದಸ್ಯರ ಮಿಜೋರಾಂ ವಿಧಾನಸಭೆಯ ಫಲಿತಾಂಶಗಳನ್ನು ಡಿಸೆಂಬರ್ 3 ರಂದು ಪ್ರಕಟವಾಗಲಿದೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Continue Reading
Advertisement
Mizoram Election Result
ದೇಶ18 mins ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ44 mins ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

ead your daily horoscope predictions for december 4th 2023
ಪ್ರಮುಖ ಸುದ್ದಿ2 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Mizoram Election Result will be announced on December 4, 2023
ದೇಶ6 hours ago

Mizoram Election Result: ಇಂದು ಮಿಜೋರಾಂ ಎಲೆಕ್ಷನ್ ರಿಸಲ್ಟ್; ಮತ ಎಣಿಕೆ ಒಂದು ದಿನ ಮುಂದೂಡಿದ್ದೇಕೆ?

Congress delegation met Telangana Governor and stake claim to form govt
ದೇಶ6 hours ago

ತೆಲಂಗಾಣ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಕಾಂಗ್ರೆಸ್

Crime news
ಕರ್ನಾಟಕ7 hours ago

ಧಾರವಾಡದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Top 10 news
ಟಾಪ್ 10 ನ್ಯೂಸ್7 hours ago

VISTARA TOP 10 NEWS : ಬಿಜೆಪಿಗೆ 4ನೇ ಮೂರು ಬಹುಮತ, ಸೈದ್ಧಾಂತಿಕ ಹೋರಾಟ ನಿರಂತರ ಎಂದ ರಾಹುಲ್​ ಮತ್ತಿತರ ದಿನದ ಪ್ರಮುಖ ಸುದ್ದಿಗಳು

with defeat of Rajasthan and Chhattisgarh Congress ruled states reduced to 3
ದೇಶ7 hours ago

ರಾಜಸ್ಥಾನ, ಛತ್ತೀಸ್‌ಗಢ ಸೋಲಿನೊಂದಿಗೆ 3 ರಾಜ್ಯಗಳಿಗೆ ಸೀಮಿತವಾದ ಕಾಂಗ್ರೆಸ್!

Bhavani Revanna
ಕರ್ನಾಟಕ8 hours ago

ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ2 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ19 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌