Palika Bazar: ಬೆಂಗಳೂರಿನಲ್ಲೂ ದೆಹಲಿಯಂತಹ ʼಪಾಲಿಕಾ ಬಜಾರ್ʼ; ಎಲ್ಲಿ ನಿರ್ಮಾಣ? ಯಾವಾಗ ಆರಂಭ? - Vistara News

ವಾಣಿಜ್ಯ

Palika Bazar: ಬೆಂಗಳೂರಿನಲ್ಲೂ ದೆಹಲಿಯಂತಹ ʼಪಾಲಿಕಾ ಬಜಾರ್ʼ; ಎಲ್ಲಿ ನಿರ್ಮಾಣ? ಯಾವಾಗ ಆರಂಭ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇರುವಂತ ಅಗ್ಗದ ಬಟ್ಟೆ, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹೆಸರುವಾಸಿಯಾಗಿರುವ ಪಾಲಿಕಾ ಬಜಾರ್ (Palika Bazar) ನಿರ್ಮಾಣವಾಗಲಿದೆ. ಆಗಸ್ಟ್ ತಿಂಗಳ ಅಂತ್ಯದ ವೇಳೆಗೆ ಇದು ಬೆಂಗಳೂರಿನ ವಿಜಯನಗರದಲ್ಲಿ ತೆರೆಯುವ ನಿರೀಕ್ಷೆ ಇದ್ದು, ಇದರ ಕಾರ್ಯಗಳು ಬಹುತೇಕ ಪೂರ್ಣಗೊಂಡಿದೆ.

VISTARANEWS.COM


on

Palika Bazar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಗೆ (Delhi) ಭೇಟಿ ಕೊಟ್ಟವರು ಅಲ್ಲಿರುವ ಅಗ್ಗದ ಬಟ್ಟೆ, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹೆಸರುವಾಸಿಯಾಗಿರುವ ಪಾಲಿಕಾ ಬಜಾರ್ (Palika Bazar) ಸಿಲಿಕಾನ್ ಸಿಟಿ ಬೆಂಗಳೂರಲ್ಲೂ (Silicon City bengaluru) ಇದ್ದಿದ್ದರೆ ಎಷ್ಟು ಚೆನ್ನಾಗಿ ಇರುತ್ತಿತ್ತು ಎಂದು ಯೋಚಿಸದೆ ಇರಲಾರರು. ಇನ್ನು ಈ ಬಗ್ಗೆ ಕನಸು ಕಾಣಬೇಕಿಲ್ಲ. ಯಾಕೆಂದರೆ ದೆಹಲಿಯಲ್ಲಿರುವಂತೆಯೇ ಬೆಂಗಳೂರು ತನ್ನದೇ ಆದ ಪಾಲಿಕಾ ಬಜಾರ್ ಅನ್ನು ಶೀಘ್ರದಲ್ಲೇ ಹೊಂದಲಿದೆ. ದೆಹಲಿಯಲ್ಲಿ ಇರುವಂತ ಪಾಲಿಕಾ ಬಜಾರ್ ಆಗಸ್ಟ್ ತಿಂಗಳಾಂತ್ಯದ ವೇಳೆ ಬೆಂಗಳೂರಿನಲ್ಲಿ ಉದ್ಘಾಟನೆಯಾಗಲಿದೆ.

ಎಲ್ಲಿ ಹೇಗೆ?

ದೆಹಲಿಯ ಪಾಲಿಕಾ ಬಜಾರ್ ಅಂಡರ್‌ ಗ್ರೌಂಡ್‌ ಶಾಪಿಂಗ್ ಕೇಂದ್ರವಾಗಿದೆ. ಪಶ್ಚಿಮ ಬೆಂಗಳೂರಿನ ವಿಜಯನಗರದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ. ಸಂಪೂರ್ಣ ಹವಾನಿಯಂತ್ರಿತ ಮಾರುಕಟ್ಟೆಯು ವಿಜಯನಗರ ಮೆಟ್ರೋ ನಿಲ್ದಾಣದ ಸಮೀಪದಲ್ಲಿದೆ ಮತ್ತು ಸ್ಥಳೀಯರಿಗೆ ಸುಲಭವಾಗಿ ಇಲ್ಲಿಗೆ ತಲುಪುವ ವ್ಯವಸ್ಥೆ ಇದೆ.


ಒಂದು ಕಾಲದಲ್ಲಿ ಆ ಸ್ಥಳದಲ್ಲಿ 150ಕ್ಕೂ ಹೆಚ್ಚು ಮಾರಾಟಗಾರರು ತಾಜಾ ತರಕಾರಿ, ಹೂವುಗಳಿಂದ ಹಿಡಿದು ದೈನಂದಿನ ಅಗತ್ಯ ವಸ್ತುಗಳವರೆಗೆ ಇಲ್ಲಿ ಎಲ್ಲವನ್ನೂ ಮಾರಾಟ ಮಾಡುತ್ತಿದ್ದರು. ಹೊಸದಾಗಿ ನಿರ್ಮಿಸುವ ಸಲುವಾಗಿ ಈ ರಸ್ತೆಯನ್ನು ಅಧಿಕಾರಿಗಳು 2017ರಲ್ಲಿ ತೆರವುಗೊಳಿಸಿದ್ದರು. ಇದೀಗ ಆಧುನಿಕ ಅಂಡರ್‌ ಗ್ರೌಂಡ್‌ ಮಾರುಕಟ್ಟೆಯ ಸ್ಥಳ ಅಲ್ಲಿ ತಲೆ ಎತ್ತಲಿದೆ. ಈ ವಿಸ್ತಾರವಾದ ಮಾರುಕಟ್ಟೆಯು ನೂರು ಮೀಟರ್ ಉದ್ದ ಮತ್ತು ಹನ್ನೊಂದು ಮೀಟರ್ ಅಗಲವನ್ನು ಹೊಂದಿದೆ. 3 ಮೀಟರ್ ಅಗಲದ ಪಾದಚಾರಿ ಕಾಲುದಾರಿಯ ಎರಡೂ ಬದಿಯಲ್ಲಿ 75ಕ್ಕೂ ಹೆಚ್ಚು ಅಂಗಡಿಗಳನ್ನು ಅಚ್ಚುಕಟ್ಟಾಗಿ ಹೊಂದಿಸಲಾಗಿದೆ.


ಪಾಲಿಕಾ ಬಜಾರ್‌ನಲ್ಲಿರುವ ಸೌಲಭ್ಯಗಳು ಏನೇನು?

ಈ ಮಾರುಕಟ್ಟೆಯು ಆಧುನಿಕ ಮತ್ತು ಆರಾಮದಾಯಕವಾಗಿದ್ದು, ದೆಹಲಿಯ ಶಾಪಿಂಗ್ ಸೆಂಟರ್‌ಗಳ ಶೈಲಿಯಲ್ಲಿದೆ. ಹವಾನಿಯಂತ್ರಣ, ಸ್ವಯಂ ಚಾಲಿತ ಸ್ಲೈಡಿಂಗ್ ಬಾಗಿಲುಗಳು, ಎಸ್ಕಲೇಟರ್‌ಗಳು ಮತ್ತು ಎಲಿವೇಟರ್‌ಗಳನ್ನು ಹೊಂದಿದೆ. ವಿಶೇಷವಾಗಿ ವಿನ್ಯಾಸಗೊಳಿಸಿರುವ ಈ ಯೋಜನೆಯನ್ನು ನಗರೋತ್ಥಾನ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಂದರ್ಶಕರ ಅನುಕೂಲಕ್ಕಾಗಿ ಎರಡು ಪ್ರವೇಶ ದ್ವಾರಗಳನ್ನು ಮತ್ತು ಪ್ರವಾಹವನ್ನು ತಪ್ಪಿಸಲು ನೀರಿನ ಪೈಪ್‌ಲೈನ್ ವ್ಯವಸ್ಥೆಯನ್ನು ಇರಿಸಲಾಗಿದೆ. ಮಳೆ ನೀರನ್ನು ನೇರವಾಗಿ ಚರಂಡಿಗಳಿಗೆ ಹರಿಸುವ ವ್ಯವಸ್ಥೆ ಇದೆ.

ಇದನ್ನೂ ಓದಿ: Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ವರ್ತಕರ ಆತಂಕ

ಸ್ಥಳೀಯ ಮಾರುಕಟ್ಟೆಯ ಮಾರಾಟಗಾರರು ಈಗಾಗಲೇ ಕಷ್ಟದಲ್ಲಿದ್ದಾರೆ. ಮುಂಬರುವ ಬಜಾರ್‌ಗಾಗಿ ಮಾರಾಟಗಾರರ ಆಯ್ಕೆ ಪ್ರಕ್ರಿಯೆಯ ಬಗ್ಗೆ ಇನ್ನೂ ಖಚಿತವಾಗಿಲ್ಲ. ಹೀಗಾಗಿ ಇದು ಸ್ಥಳೀಯ ವರ್ತಕರಲ್ಲಿ ಆತಂಕ ಹೆಚ್ಚಿಸಿದೆ ಎನ್ನುವ ಅಭಿಪ್ರಾಯವೂ ಕೇಳಿ ಬರುತ್ತಿದೆ.

ದೆಹಲಿ ಪಾಲಿಕೆ ಬಜಾರ್‌ ಹೇಗಿದೆ ಎಂಬ ವಿಡಿಯೊ ಈ ಸುದ್ದಿಯ ಜತೆಗಿದೆ. ಗಮನಿಸಿ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 12) ಮತ್ತೆ ಹೆಚ್ಚಾಗಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 12) ಮತ್ತೆ ಹೆಚ್ಚಾಗಿದೆ (Gold Rate Today). ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,760 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,700 ಮತ್ತು ₹ 6,47,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,464 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,580 ಮತ್ತು ₹ 7,05,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,485 ₹ 7,073
ಮುಂಬೈ₹ 6,470 ₹ 7,058
ಬೆಂಗಳೂರು₹ 6,470 ₹ 7,058
ಚೆನ್ನೈ₹ 6,470 ₹ 7,058

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 79 ಹಾಗೂ 8 ಗ್ರಾಂಗೆ ₹ 632 ಇದೆ. 10 ಗ್ರಾಂ ₹ 790 ಹಾಗೂ 1 ಕಿಲೋಗ್ರಾಂ ₹ 79,000 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

Continue Reading

ದೇಶ

Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

Hindenburg Report : ಹಿಂಡೆನ್​ಬರ್ಗ್​​ ರಿಸರ್ಚ್ ಶನಿವಾರ ರಾತ್ರಿ ಹೊಸ ವರದಿ ಬಿಡುಗಡೆ ಮಾಡಿದ್ದು, ಅದಾನಿ ಗ್ರೂಪ್ ವಿರುದ್ಧ ಕ್ರಮ ಕೈಗೊಳ್ಳಲು ಸೆಬಿ ಸಿದ್ಧರಿಲ್ಲ ಎಂದು ಶಂಕಿಸಿದೆ. “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕ ಸೆಬಿಯು ಅದರ ಅಧ್ಯಕ್ಷರ ವಿರುದ್ಧದ ಆರೋಪಗಳನ್ನು ನಿರ್ಲಕ್ಷಿಸುತ್ತಿದೆ ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.

VISTARANEWS.COM


on

Hindenburg Report
Koo

ನವದೆಹಲಿ: ಸೆಬಿ ಅಧ್ಯಕ್ಷೆ ಮಾಧಾಬಿ ಬುಚ್ ವಿರುದ್ಧ ಯುಎಸ್ ಶಾರ್ಟ್ ಸೆಲ್ಲರ್ ಹಿಂಡೆನ್​ಬರ್ಗ್​​ ರಿಸರ್ಚ್ ಮಾಡಿರುವ ಹೊಸ ವರದಿ (Hindenburg Report) ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಸೆಕ್ಯುರಿಟೀಸ್ ನಿಯಂತ್ರಕದ ಸಮಗ್ರತೆಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆರೋಪಗಳ ವಿರುದ್ಧ ಜಂಟಿ ಸಂಸದೀಯ ಸಮಿತಿ (JPC) ತನಿಖೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಏಕೆ ಹೆದರುತ್ತಾರೆ ಎಂಬುದನ್ನು ಈ ವರದಿ ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಹಿಂಡೆನ್​ಬರ್ಗ್​​ ರಿಸರ್ಚ್ ಶನಿವಾರ ರಾತ್ರಿ ಹೊಸ ವರದಿ ಬಿಡುಗಡೆ ಮಾಡಿದ್ದು, ಅದಾನಿ ಗ್ರೂಪ್ ವಿರುದ್ಧ ಕ್ರಮ ಕೈಗೊಳ್ಳಲು ಸೆಬಿ ಸಿದ್ಧರಿಲ್ಲ ಎಂದು ಶಂಕಿಸಿದೆ. “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕ ಸೆಬಿಯು ಅದರ ಅಧ್ಯಕ್ಷರ ವಿರುದ್ಧದ ಆರೋಪಗಳನ್ನು ನಿರ್ಲಕ್ಷಿಸುತ್ತಿದೆ ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.

ಸೆಬಿ ಅಧ್ಯಕ್ಷರು ಇನ್ನೂ ಏಕೆ ರಾಜೀನಾಮೆ ನೀಡಿಲ್ಲ ಎಂದು ದೇಶಾದ್ಯಂತದ ಹೂಡಿಕೆದಾರರು ತಿಳಿಯಲು ಬಯಸುತ್ತಾರೆ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ. “ದೇಶಾದ್ಯಂತದ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ ಯಾರು ಜವಾಬ್ದಾರರು. ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷರು ಅಥವಾ ಗೌತಮ್ ಅದಾನಿಯೇ? ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ ಎಂದು ರಾಹುಲ್​ ಹೇಳಿದ್ದಾರೆ.

“ಜೆಪಿಸಿ ತನಿಖೆಗೆ ಪ್ರಧಾನಿ ಮೋದಿ ಏಕೆ ಹೆದರುತ್ತಾರೆ ಎಂಬುದು ಸ್ಪಷ್ಟವಾಗಿದೆ. ಅದು ಸತ್ಯ ಬಹಿರಂಗಪಡಿಸಬಹುದು ಎಂಬುದು ಸ್ಪಷ್ಟವಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

ಬುಚ್ ಮತ್ತು ಅವರ ಪತಿ ಬರ್ಮುಡಾ ಮತ್ತು ಮಾರಿಷಸ್ ಮೂಲದ ವಿದೇಶಗಳ ನಿಧಿಗಳಲ್ಲಿ ರಹಸ್ಯವಾಗಿ ಹೂಡಿಕೆ ಮಾಡಿದ್ದಾರೆ ಎಂದು ಹಿಂಡೆನ್ಬರ್ಗ್ ರಿಸರ್ಚ್ ಆರೋಪಿಸಿದೆ. ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರು ರೌಂಡ್ ಟ್ರಿಪ್ಪಿಂಗ್ ಫಂಡ್​ಗಳ ಮೂಲಕ ಷೇರು ಬೆಲೆಗಳನ್ನು ಹೆಚ್ಚಿಸಲು ಬಳಸುತ್ತಿದ್ದರು ಎಂದು ವರದಿಯಲ್ಲಿದೆ.

ವರದಿಯನ್ನು ‘ಪಿತೂರಿ’ ಎಂದ ಬಿಜೆಪಿ

ಭಾರತದಲ್ಲಿ ಆರ್ಥಿಕ ಅಸ್ಥಿರತೆ ಮತ್ತು ಅವ್ಯವಸ್ಥೆಯನ್ನು ಸೃಷ್ಟಿಸಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪಿತೂರಿ ನಡೆಸುತ್ತಿವೆ ಎಂದು ಆಡಳಿತಾರೂಢ ಬಿಜೆಪಿ ಆರೋಪಿಸಿದೆ. ಸೆಬಿ ಅಧ್ಯಕ್ಷರ ವಿರುದ್ಧದ ಹಿಂಡೆನ್​ಬರ್ಗ್​​ ಅವರ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ಇದು ಹಣಕಾಸು ಕಾವಲುಗಾರನ ವಿಶ್ವಾಸಾರ್ಹತೆ ದುರ್ಬಲಗೊಳಿಸುವ ಪ್ರಯತ್ನ ಎಂದಿದೆ.

“ಕಳೆದ ವರ್ಷ ಅದಾನಿ ಗ್ರೂಪ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಹಿಂಡೆನ್​ಬರ್ಗ್​​. ಭಾರತೀಯ ತನಿಖಾ ಸಂಸ್ಥೆಗಳಿಂದ ವಿಚಾರಣೆ ಎದುರಿಸುತ್ತಿದೆ ಎಂದು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ತಿಳಿಸಿದ್ದಾರೆ.

“ವಿರೋಧ ಪಕ್ಷಗಳು ಅದರ ಆರೋಪವನ್ನು ಪ್ರತಿಧ್ವನಿಸುತ್ತಿವೆ. ಪಿತೂರಿ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಅವರು ಅವ್ಯವಸ್ಥೆ ಮತ್ತು ಅಸ್ಥಿರತೆ ಸೃಷ್ಟಿಸಲು ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

Hindenburg report : ಆರ್​ಇಐಟಿ ನಿಯಮಗಳು, 2014 ಅನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಸೆಬಿ, ಹೇಳಿದೆ. “ಅಸ್ತಿತ್ವದಲ್ಲಿರುವ ನಿಯಂತ್ರಣಕ್ಕೆ ಹೊಸ ನಿಯಂತ್ರಣ ಅಥವಾ ತಿದ್ದುಪಡಿ ಪರಿಚಯಿಸುವ ಎಲ್ಲಾ ಪ್ರಕರಣಗಳಂತೆ ಇಲ್ಲೂ ಸಮಾಲೋಚನೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸೆಬಿ ಹೇಳಿಕೆಯಲ್ಲಿ ತಿಳಿಸಿದೆ.

VISTARANEWS.COM


on

Hindenburg report
Koo

ಬೆಂಗಳೂರು: ಸೆಕ್ಯುರಿಟೀಸ್ ಆ್ಯಂಡ್​ ಎಕ್ಸ್​ಚೇಂಜ್​ ಬೋರ್ಡ್ ಆಫ್ ಇಂಡಿಯಾ (SEBI) ಅಧ್ಯಕ್ಷೆ ಅಧ್ಯಕ್ಷೆ ಮಾಧಾಬಿ ಬುಚ್ ಅವರ ಪತಿ ಧವಳ್ ಬುಚ್ ಕೆಲಸ ಮಾಡುತ್ತಿದ್ದ ಬಹುರಾಷ್ಟ್ರೀಯ ಕಂಪನಿಗೆ ನೆರವಾಗುವ ಉದ್ದೇಶದಿಂದ ರಿಯಲ್ ಎಸ್ಟೇಟ್ ಇನ್ವೆಸ್ಟ್​​ಮೆಂಟ್​ ಟ್ರಸ್ಟ್ (ಆರ್​ಇಐಟಿ) ನಿಯಮಗಳಲ್ಲಿ ಮಾರ್ಪಾಟು ಮಾಡಲಾಗಿದೆ ಎಂದು ಅಮೆರಿಕದ ಮೂಲಕ ಹಿಂಡೆನ್​ಬರ್ಗ್ ರಿಸರ್ಚ್ (Hindenburg Report) ಮಾಡಿರುವ ಆರೋಪಗಳನ್ನು ತಿರಸ್ಕರಿಸಿದೆ. ಸೆಬಿ ಭಾನುವಾರ ಈ ಕುರಿತು ವಿಸ್ತೃತ ಹೇಳಿಕೆ ನೀಡಿದೆ.

ಭಾರತದಲ್ಲಿ ಸೆಬಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದಕ್ಕೆ ಸಮಗ್ರ ಸಮಾಲೋಚನೆಯ ಬಳಿಕವೇ ಆರ್​ಇಐಟಿ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಹೀಗಾಗಿ ಹಿಂಡೆನ್​ಬರ್ಗ್​​ ಆರೋಪಗಳು “ಸೂಕ್ತವಲ್ಲ” ಎಂದು ಹೇಳಿದೆ.

ಮಾಧಾಬಿ ಬುಚ್ ಸೆಬಿಯಲ್ಲಿ ಪೂರ್ಣಾವಧಿ ಸದಸ್ಯರಾಗಿದ್ದ ಅವಧಿಯಲ್ಲಿ, ರಿಯಲ್ ಎಸ್ಟೇಟ್ ಅಥವಾ ಬಂಡವಾಳ ಮಾರುಕಟ್ಟೆಗಳಲ್ಲಿ ಅವರು ಅನುಭವ ಹೊಂದಿರದ ಅವರ ಪತಿ ಧವಳ್ ಬುಚ್ ಅವರನ್ನು ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಯಾದ ಬ್ಲ್ಯಾಕ್​ಸ್ಟೋನ್​ಗೆ ಹಿರಿಯ ಸಲಹೆಗಾರರಾಗಿ ನೇಮಿಸಲಾಗಿದೆ ಎಂದು ಅಮೆರಿಕದ ಕಿರು ಮಾರಾಟ ಸಂಸ್ಥೆ ಹಿಂಡೆನ್​ಬರ್ಗ್​​ ರಿಸರ್ಚ್ ಶನಿವಾರ ಆರೋಪಿಸಿತ್ತು. ಆದರೆ ಸೆಬಿ ತನ್ನ ಹೇಳಿಕೆಯಲ್ಲಿ ವರದಿಯ ಹೇಳಿಕೆಯನ್ನು ವಿರೋಧಿಸಿದ್ದು, ಧವಳ್​ ಬ್ಲ್ಯಾಕ್​ಸ್ಟೋನ್​ ರಿಯಲ್ ಎಸ್ಟೇಟ್​ನೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಹೇಳಿದೆ.

ಆರ್​ಇಐಟಿ ನಿಯಮಗಳು, 2014 ಅನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಸೆಬಿ, ಹೇಳಿದೆ. “ಅಸ್ತಿತ್ವದಲ್ಲಿರುವ ನಿಯಂತ್ರಣಕ್ಕೆ ಹೊಸ ನಿಯಂತ್ರಣ ಅಥವಾ ತಿದ್ದುಪಡಿ ಪರಿಚಯಿಸುವ ಎಲ್ಲಾ ಪ್ರಕರಣಗಳಂತೆ ಇಲ್ಲೂ ಸಮಾಲೋಚನೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸೆಬಿ ಹೇಳಿಕೆಯಲ್ಲಿ ತಿಳಿಸಿದೆ.

ಸಮಾಲೋಚನೆಯ ನಂತರವೇ, ಹೊಸ ನಿಯಂತ್ರಣ ಪರಿಚಯಿಸುವ ಅಥವಾ ಅಸ್ತಿತ್ವದಲ್ಲಿರುವ ನಿಯಂತ್ರಣದಲ್ಲಿ ಬದಲಾವಣೆ ಪರಿಚಯಿಸುವ ಪ್ರಸ್ತಾಪ ಸೆಬಿ ಮಂಡಳಿಯ ಪರಿಗಣನೆ ಮತ್ತು ಚರ್ಚೆಗಾಗಿ ಇಡಲಾಗುತ್ತದೆ ಎಂದು ಸೆಬಿ ಹೇಳಿದೆ.

ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಂಡಳಿಯ ಸಭೆಗಳ ಕಾರ್ಯಸೂಚಿಗಳು ಮತ್ತು ಚರ್ಚೆಗಳ ಫಲಿತಾಂಶಗಳನ್ನು ಸೆಬಿ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದೆ. ಆರ್​ಇಐಟಿಗಳಿಗೆ ಸಂಬಂಧಿಸಿದಂತೆ ಹೊರಡಿಸಲಾದ ನಿಯಮಗಳ ಬದಲಾವಣೆಗಳು ಅಥವಾ ಸುತ್ತೋಲೆಗಳು ಒಂದು ದೊಡ್ಡ ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಗೆ ಅನುಕೂಲಕರವಾಗಿವೆ ಎಂಬ ಹೇಳಿಕೆಗಳು ಸೂಕ್ತವಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: Paris Olympics 2024 : ಸಮಾರೋಪ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಐಫೆಲ್​ ಟವರ್​ ಏರಿ ಕುಳಿತ ಆಗಂತುಕ!

“ಆದ್ದರಿಂದ, ಆರ್​ಇಐಟಿಗಳು ಮತ್ತು [ಸಣ್ಣ ಮತ್ತು ಮಧ್ಯಮ] ಎಸ್ಎಂ ಆರ್​ಇಐಟಿಗಳನ್ನು ಸೆಬಿಯು ಇತರ ಆಸ್ತಿ ವರ್ಗಗಳಲ್ಲಿ ಉತ್ತೇಜಿಸುವುದು ಒಂದು ದೊಡ್ಡ ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಗೆ ಲಾಭ ಪಡೆಯಲು ಮಾತ್ರ ಎಂಬ ಹೇಳಿಕೆಯು ಸೂಕ್ತವಲ್ಲ” ಎಂದು ಹೇಳಿಕೆಯಲ್ಲಿ ಪ್ರತಿಪಾದಿಸಲಾಗಿದೆ.

ಹಿತಾಸಕ್ತಿ ಸಂಘರ್ಷಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಾಕಷ್ಟು ಆಂತರಿಕ ಕಾರ್ಯವಿಧಾನಗಳನ್ನು ಹೊಂದಿದೆ ಎಂದು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಒತ್ತಿಹೇಳಿದೆ.

Continue Reading

ಮನಿ-ಗೈಡ್

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Money Guide: ಭಾರತ ಕೃಷಿ ಪ್ರಧಾನ ದೇಶ. ಅದಾಗ್ಯೂ ಕೃಷಿಕರು ಅನೇಕ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಅನಿರೀಕ್ಷಿತ ಹವಾಮಾನ, ಗೊಬ್ಬರ, ಕೀಟ ನಾಶಕ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಡಿಮೆ ಬಂಡವಾಳ ಹೀಗೆ ನಾನಾ ರೀತಿಯ ಸವಾಲು ಎದುರಿಸುತ್ತಾರೆ. ಇದೇ ಕಾರಣಕ್ಕೆ ಕೃಷಿಕರಿಗೆ ನೆರವಾಗಲು ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಹಾಗಾದರೆ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಗಮನಿಸಬೇಕಾದ ಅಂಶಗಳು ಯಾವೆಲ್ಲ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶ. ಕೃಷಿಯೇ ಇಲ್ಲಿನ ಜೀವನಾಡಿ. ಇದು ದೇಶದ ಜಿಡಿಪಿಗೆ ಗಣನೀಯ ಪ್ರಮಾಣದಲ್ಲಿ ಕೊಡುಗೆ ನೀಡುವುದಷ್ಟೇ ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಗೂ ಕಾರಣವಾಗುತ್ತದೆ. ಅದಾಗ್ಯೂ ಕೃಷಿಕರು ಅನೇಕ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಅನಿರೀಕ್ಷಿತ ಹವಾಮಾನ, ಗೊಬ್ಬರ, ಕೀಟ ನಾಶಕ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಡಿಮೆ ಬಂಡವಾಳ ಹೀಗೆ ನಾನಾ ರೀತಿಯ ಸವಾಲು ಅವರ ಮುಂದಿರುತ್ತದೆ. ಇದೇ ಕಾರಣಕ್ಕೆ ಕೃಷಿಕರಿಗೆ ನೆರವಾಗಲು ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು (Agriculture Loan) ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಕೃಷಿ ಸಾಲ ಪಡೆದುಕೊಳ್ಳುವುದು ಹೇಗೆ? ಎಷ್ಟು ಬಡ್ಡಿ ವಿಧಿಸಲಾಗುತ್ತದೆ? ಅರ್ಹತೆಗಳೇನು? ಯಾವೆಲ್ಲ ದಾಖಲೆಗಳು ಅಗತ್ಯ? ಮುಂತಾದ ಪ್ರಶ್ನೆಗಳಿಗೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಬಡ್ಡಿದರ

ದೇಶದಲ್ಲಿನ ವಿವಿಧ ಹಣಕಾಸು ಸಂಸ್ಥೆಗಳು, ಬ್ಯಾಂಕ್‌ಗಳಿಗೆ ಹೊಂದಿಕೊಂಡು ಕೃಷಿ ಸಾಲಕ್ಕೆ ವಿಧಿಸುವ ಬಡ್ಡಿ ದರದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಮಾತ್ರವಲ್ಲ ಸಾಲ ಪಡೆದುಕೊಳ್ಳುವವರ ಪ್ರೊಫೈಲ್‌, ಅರ್ಹತೆ ಮತ್ತು ಉದ್ದೇಶಗಳು ಕೂಡ ಬಡ್ಡದರದ ಮೇಲೆ ಪರಿಣಾಮ ಬೀರುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (Reserve Bank of India) ಕೃಷಿ ಸಾಲಗಳ ಮೇಲೆ ವಿಧಿಸಬಹುದಾದ ಬಡ್ಡಿದರಗಳ ಬಗ್ಗೆ ಬ್ಯಾಂಕುಗಳಿಗೆ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ವಾಣಿಜ್ಯ ಸಾಲಗಳಿಗೆ ಹೋಲಿಸಿದರೆ ಈ ದರಗಳು ಸಾಮಾನ್ಯವಾಗಿ ಕಡಿಮೆಯಿರುತ್ತವೆ. ರೈತರಿಗೆ ಸುಲಭವಾಗಿ ಆರ್ಥಿಕ ಸಹಾಯ ಒದಗಿಸುವ ಗುರಿಯನ್ನು ಇದು ಹೊಂದಿದೆ. ಸಾಮಾನ್ಯವಾಗಿ ಮರುಪಾವತಿ ಅವಧಿಯನ್ನು ಅವಲಂಬಿಸಿ ವರ್ಷಕ್ಕೆ ಶೇ. 4ರಿಂದ ಶೇ. 14ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಕೆಲವೊಮ್ಮೆ ಸರ್ಕಾರ ಶೂನ್ಯ ಬಡ್ಡಿದರದಲ್ಲಿಯೂ ಕೃಷಿ ಸಾಲ ಒದಗಿಸುತ್ತದೆ.

ಅರ್ಹತೆ

ಕೃಷಿ ಸಾಲ ಹೊಂದಲು ಅಗತ್ಯವಾದ ಕೆಲವು ಸಾಮಾನ್ಯ ಅರ್ಹತೆಗಳು:

ಭೂ ಮಾಲೀಕತ್ವ: ಇದು ಮೊದಲ ಅರ್ಹತೆ. ರೈತರು ಕೃಷಿ ಭೂಮಿಯ ಸ್ಪಷ್ಟ ಮಾಲೀಕತ್ವವನ್ನು ಹೊಂದಿರಬೇಕು ಅಥವಾ ಸಾಲ ನೀಡುವ ಸಂಸ್ಥೆ ನಿರ್ದಿಷ್ಟಪಡಿಸಿದ ಕನಿಷ್ಠ ಅವಧಿಗೆ ಗುತ್ತಿಗೆ ಹಕ್ಕುಗಳನ್ನು ಹೊಂದಿರಬೇಕು. ಭೂಮಿಯನ್ನು ಹೆಚ್ಚಾಗಿ ಸಾಲದ ಆಧಾರವಾಗಿ ಬಳಸಲಾಗುತ್ತದೆ. ಭೂ ಮಾಲೀಕತ್ವ ಲಭ್ಯವಿಲ್ಲದ ಸಂದರ್ಭದಲ್ಲಿ, ಜಾಯಿಂಟ್‌ ಲಿಯಾಬಲಿಟಿ ಗ್ರೂಪ್‌ (Joint Liability Group) ಮತ್ತು ಸ್ವಸಹಾಯ ಗುಂಪುಗಳನ್ನು ರಚಿಸುವ ಮೂಲಕ ಗುಂಪು ಸಾಲ ನೀಡಲಾಗುತ್ತದೆ.
ವಯೋಮಿತಿ: ಸಾಮಾನ್ಯವಾಗಿ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ಸಾಲದ ಇತಿಹಾಸ: ಹಣಕಾಸು ಸಂಸ್ಥೆಗಳು ಸಾಮಾನ್ಯವಾಗಿ ಅರ್ಜಿದಾರರ ಕ್ರೆಡಿಟ್ ಇತಿಹಾಸ (Credit History)ವನ್ನು ಗಮನಿಸುತ್ತವೆ. ಉತ್ತಮ ಕ್ರೆಡಿಟ್ ಸ್ಕೋರ್ ಸಾಲ ಅನುಮೋದನೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.
ಕೃಷಿಯಲ್ಲಿ ಅನುಭವ: ಕೆಲವೊಂದು ಬ್ಯಾಂಕ್‌ಗಳು ಸಾಲ ಅನುಮೋದನೆಗೆ ಕೃಷಿಯಲ್ಲಿ ಕನಿಷ್ಠ ವರ್ಷಗಳ ಅನುಭವವನ್ನು ಹೊಂದಿರಬೇಕು ಎಂಬ ಷರತ್ತು ವಿಧಿಸುತ್ತವೆ. ಸಾಲದ ಪ್ರಕಾರ ಮತ್ತು ಸಂಸ್ಥೆಯನ್ನು ಅವಲಂಬಿಸಿ ಈ ಮಾನದಂಡವು ಬದಲಾಗುತ್ತದೆ.
ಮರುಪಾವತಿ ಸಾಮರ್ಥ್ಯ: ಉದ್ದೇಶಿತ ಕೃಷಿಯಿಂದ ಲಭಿಸಬಹುದಾದ ಆದಾಯ ಮತ್ತು ಸಾಲಗಾರನ ಇತರ ಆದಾಯದ ಮೂಲ ಲೆಕ್ಕ ಹಾಕಿ ಬ್ಯಾಂಕುಗಳು ಮರುಪಾವತಿ ಸಾಮರ್ಥ್ಯವನ್ನು ಪರಿಶೀಲಿಸುತ್ತವೆ.
ಆಧಾರ: ಸಾಮಾನ್ಯವಾಗಿ ಬ್ಯಾಂಕುಗಳು ನಿರ್ದಿಷ್ಟ ಮಿತಿ ಅಂದರೆ 1.6 ಲಕ್ಷ ರೂ.ವರೆಗಿನ ಸಾಲಗಳಿಗೆ ಭೂಮಿಯ ಆಧಾರ ಸಲ್ಲಿಸುವಂತೆ ಒತ್ತಾಯಿಸುವುದಿಲ್ಲ. ಆದಾಗ್ಯೂ, ಈ ಮೊತ್ತಕ್ಕಿಂತ ಹೆಚ್ಚಿನ ಸಾಲಗಳಿಗೆ ಕೃಷಿ ಭೂಮಿಯನ್ನು ಅಡಮಾನ ಇಡಲು ಕೇಳಲಾಗುತ್ತದೆ.
ದಾಖಲೆಗಳು: ಸಾಲದ ಅರ್ಜಿಯ ಜತೆಗೆ ಗುರುತಿನ ಪುರಾವೆ, ವಿಳಾಸ ಪುರಾವೆ, ಭೂ ಮಾಲೀಕತ್ವದ ದಾಖಲೆಗಳು, ಆದಾಯ ಪ್ರಮಾಣಪತ್ರಗಳು, ಬ್ಯಾಂಕ್ ಸ್ಟೇಟ್‌ಮೆಂಟ್‌ ಮತ್ತು ಉದ್ದೇಶಿತ ಕೃಷಿ ಚಟುವಟಿಕೆಗಳಂತಹ ಸಂಬಂಧಿತ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ನಿಮ್ಮ ಹಣಕಾಸಿನ ಆವಶ್ಯಕತೆಗಳನ್ನು ಗುರುತಿಸಿ: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಚಟುವಟಿಕೆಗಳಿಗೆ ಎಷ್ಟು ಹಣ ಬೇಕಾಗುತ್ತದೆ ಎನ್ನುವುದನ್ನು ಲೆಕ್ಕ ಹಾಕಿ. ಉಪಕರಣ, ಬಿತ್ತನೆ ಬೀಜ, ಗೊಬ್ಬರ, ಜಾನುವಾರುಗಳು ಅಥವಾ ಭೂಮಿಯನ್ನು ಖರೀದಿಸಲು ಅಗತ್ಯವಿರುವ ಮೊತ್ತವನ್ನು ಮತ್ತು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಇತರ ವೆಚ್ಚಗಳನ್ನು ನಿರ್ಣಯಿಸಿ. ನಿಮ್ಮ ಹಣಕಾಸಿನ ಅವಶ್ಯಕತೆಗಳ ಬಗ್ಗೆ ಸ್ಪಷ್ಟ ತಿಳುವಳಿಕೆಯನ್ನು ಹೊಂದಿರುವುದು ಸರಿಯಾದ ಸಾಲದ ಮೊತ್ತ ಆಯ್ಕೆ ಮಾಡಲು ನೆರವಾಗುತ್ತದೆ.

ವಿವಿಧ ಸಾಲ ಮತ್ತು ಸಂಸ್ಥೆಗಳ ಬಗ್ಗೆ ಮಾಹಿತಿ ಕಲೆ ಹಾಕಿ: ರೈತರಿಗೆ ಹಲವು ರೀತಿಯ ಸಾಲ ದೊರೆಯುತ್ತದೆ. ಪ್ರತಿಯೊಂದೂ ತನ್ನದೇ ಆದ ಅರ್ಹತಾ ಮಾನದಂಡಗಳು, ಬಡ್ಡಿದರಗಳು ಮತ್ತು ಪ್ರಯೋಜನಗಳನ್ನು ಹೊಂದಿದೆ. ಇವುಗಳ ಪೈಕಿ ನಿಮ್ಮ ಅಗತ್ಯಗಳಿಗೆ ಸೂಕ್ತವಾದ ಸಾಲದ ಯೋಜನೆಗಳನ್ನು ಆಯ್ಕೆ ಮಾಡಿ. ಭಾರತದ ಜನಪ್ರಿಯ ಸಾಲ ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ (KC), ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY), ಚಿನ್ನದ ಸಾಲ, ಸೌರ ಪಂಪ್ ಸಾಲಗಳು, ಡೈರಿ ಸಾಲಗಳು, ಎಸ್‌ಎಚ್‌ಜಿ ಸಾಲಗಳು ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೀಡುವ ವಿವಿಧ ಲೋನ್‌ಗಳು ಸೇರಿವೆ. ಹೆಚ್ಚುವರಿಯಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳನ್ನೂ ಸಾಲಕ್ಕಾಗಿ ಪರಿಗಣಿಸಿ.

ಬಡ್ಡದರ ಹೋಲಿಸಿ: ವಿವಿಧ ಬ್ಯಾಂಕು, ಹಣಕಾಸು ಸಂಸ್ಥೆಗಳಲ್ಲಿ ವಿಧಿಸಲಾಗುವ ಬಡ್ಡಿದರಗಳನ್ನು ಹೋಲಿಕೆ ಮಾಡಿ ನೋಡಿ. ಕಡಿಮೆ ಬಡ್ಡಿದರ ಇರುವ, ನಿಮ್ಮ ಅನುಕೂಲಕ್ಕೆ ತಕ್ಕಷ್ಟು ಕಾಲಾವಧಿ ನೀಡುವ ಸಾಲವನ್ನು ಆಯ್ಕೆ ಮಾಡಿ.

ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಿ: ಕೃಷಿಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಅಗತ್ಯವಾದ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಿ. ಇದರಿಂದ ಸಮಯ ವ್ಯರ್ಥವಾಗುವುದನ್ನು ತಡೆಯಬಹುದು. ಅಗತ್ಯ ದಾಖಲೆಗಳೆಂದರೆ ಮೊದಲೇ ಹೇಳಿದಂತೆ ಗುರುತಿನ ಚೀಟಿ (ಆಧಾರ್‌, ಪ್ಯಾನ್‌ ಕಾರ್ಡ್‌, ವೋಟರ್‌ ಐಡಿ ಇತ್ಯಾದಿ), ವಿಳಾಸದ ಪುರಾವೆ (ವಿದ್ಯುತ್‌ ಬಿಲ್‌, ರೇಷನ್‌ ಕಾರ್ಡ್‌, ಪಾಸ್‌ಪೋರ್ಟ್‌ ಇತ್ಯಾದಿ), ಭೂ ದಾಖಲೆಗಳು, ಆದಾಯದ ಪುರಾವೆ (ಬ್ಯಾಂಕ್‌ ಸ್ಟೇಟ್‌ಮೆಂಟ್‌, ಆದಾಯ ತೆರಿಗೆ ಸಲ್ಲಿಕ ಇತ್ಯಾದಿ), ಕೃಷಿ ಉತ್ಪನ್ನಗಳು, ಕೃಷಿ ಯೋಜನೆಗಳು ಇತ್ಯಾದಿ.

ಗಮನಿಸಿ; ನಿಮ್ಮ ಆದಾಯಕ್ಕೆ ಹೊಂದಿಕೆಯಾಗುವ ಸಾಲ ಮರುಪಾವತಿಯ ಅವಧಿಯನ್ನು ಆಯ್ಕೆ ಮಾಡಿಕೊಳ್ಳಿ. ನೀವು ಸಲ್ಲಿಸಿರುವ ಅರ್ಜಿ ಮತ್ತು ದಾಖಲೆಗಳನ್ನು ಪರಿಶೀಲಿಸಿ ಬ್ಯಾಂಕುಗಳು ಸಾಲ ಮಂಜೂರು ಮಾಡುತ್ತವೆ.

ಇದನ್ನೂ ಓದಿ: Money Guide: ಕಾರು ಚಲಾಯಿಸಿದಷ್ಟೇ ವಿಮೆ ಪ್ರೀಮಿಯಂ ಪಾವತಿಸಿ; ಏನಿದು ಹೊಸ ಯೋಜನೆ? ಅನುಕೂಲಗಳೇನು?

Continue Reading
Advertisement
Vinesh Phogat
ಪ್ರಮುಖ ಸುದ್ದಿ17 seconds ago

Vinesh Phogat : ವಿನೇಶ್​ ಫೋಗಟ್ ಎಫೆಕ್ಟ್​​; ತೂಕದ ನಿಯಮಗಳ ಬದಲಾವಣೆಗೆ ವಿಶ್ವ ಕುಸ್ತಿ ಒಕ್ಕೂಟ ನಿರ್ಧಾರ?

DK Shivakumar
ಕರ್ನಾಟಕ7 mins ago

DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Varamahalakshmi Festival 2024
Latest16 mins ago

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ

Meghana Gaonkar workout get slim
ಸ್ಯಾಂಡಲ್ ವುಡ್19 mins ago

Meghana Gaonkar:  ಸಣ್ಣಗಾದ ಮೇಘನಾ ಗಾಂವ್ಕರ್; ನಟಿಯ ವರ್ಕೌಟ್ ಫೋಟೊ ವೈರಲ್‌!

Road Accident
ಬೆಂಗಳೂರು29 mins ago

Road Accident : ಟಿಪ್ಪರ್ ಲಾರಿಗೆ ಸಿಲುಕಿ ಸವಾರ ದುರ್ಮರಣ; ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಂಭೀರ

Kolkata Doctor Murder Case
ದೇಶ40 mins ago

Kolkata Doctor Murder Case: ʼಬೇಕಿದ್ದರೆ ಗಲ್ಲಿಗೇರಿಸಿʼ.. ವಿಚಾರಣೆ ವೇಳೆ ವೈದ್ಯೆಯ ಹಂತಕನ ಉಡಾಫೆ ಉತ್ತರ

Bangladesh Unrest
ವಿದೇಶ42 mins ago

Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

paris Olympics 2024
ಪ್ರಮುಖ ಸುದ್ದಿ46 mins ago

Paris Olympics 2024 : ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ಎಫ್ಐಎಚ್ ರ್ಯಾಂಕಿಂಗ್​ನಲ್ಲಿ 2 ಸ್ಥಾನ ಏರಿಕೆ

techie missing in Bengaluru
ಬೆಂಗಳೂರು1 hour ago

Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

Independence day 2024
ದೇಶ2 hours ago

Independence Day 2024: ಮನೆಮನೆಯಲ್ಲೂ ಉಲ್ಲಾಸ, ಉತ್ಸಾಹ ತುಂಬುವ ಸ್ವಾತಂತ್ರ್ಯೋತ್ಸವದ ಹಿನ್ನೋಟ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌